Author: AIN Author

ಬೆಂಗಳೂರು:- ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಅಂತ್ಯ ಖಚಿತ ಎಂದು JDS ಹೇಳಿದೆ. ಈ ಸಂಬಂಧ X ಮಾಡಿರುವ ಜೆಡಿಎಸ್, ಮಾನ್ಯ ಮಾಜಿ ಪ್ರಧಾನಿಗಳು ಹೇಳಿದ್ದರಲ್ಲಿ ಲವಲೇಶವೂ ಉತ್ಪ್ರೇಕ್ಷೆ ಇಲ್ಲ. ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಇಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ, ಹೌದು. ದೇಶವನ್ನು ಜಾತಿ,ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಿಸಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೇಪುಟದಲ್ಲಿ ಏದುಸಿರು ಬಿಡುತ್ತಿದೆ. ಶಾಪ ಹಾಕುವುದನ್ನು ಗೌಡರೆಂದೂ ಮಾಡಿಲ್ಲ, ಮಾಡುವುದೂ ಇಲ್ಲ. ಅವರ ಹಸ್ತ ಅಭಯ ಹಸ್ತ.ಅದು ಆಶೀರ್ವಾದ,ಅನುಗ್ರಹದ ದ್ಯೋತಕ.ಗುರುಸ್ವಾಮಿ ಎಂಬ ಅನಾಮಧೇಯ ವ್ಯಕ್ತಿ ಎದುರು ಸೋತ ನಿಮ್ಮನ್ನು ಅನುಗ್ರಹದಲ್ಲಿಯೇ ಅವರು ಅನುಗ್ರಹಿಸಿದ್ದು ಮರೆತಿರಾ? ಅಂದು ಆ ಕೈ ನಿಮ್ಮ ಕೈ ಹಿಡಿಯದಿದ್ದರೆ ನೀವಿಷ್ಟು ಎತ್ತರಕ್ಕೇರಲು ಸಾಧ್ಯವಿತ್ತೆ @siddaramaiah ನವರೇ? ಎಂದು ಪ್ರಶ್ನಿಸಿದರು. ಜಾತ್ಯತೀತತೆ ನೀವಷ್ಟೇ ಹೇಳಬೇಕು ಸಿದ್ದರಾಮಯ್ಯನವರೇ? ಸಿಎಂ ಸಚಿವಾಲಯದ ಕೊಳಕು ಕೊಡವಿದರೆ ನಿಮ್ಮ ಢೋಂಗಿ ಜಾತ್ಯತೀತತೆಯ ಅಸಲಿ ಮುಖ ಕಳಚಿ ಬೀಳುತ್ತದೆ. ಅಭಿಪ್ರಾಯ, ಭಿನ್ನಾಭಿಪ್ರಾಯ, ಪ್ರಾಮಾಣಿಕತೆ, ಜಾತ್ಯತೀತತೆ.. ಈ ಪದಗಳೆಲ್ಲ ನಿಮಗೆ ಆಗಿ…

Read More

ಹಲವಾರು ಬಾರಿ ಮರು ಚಿತ್ರೀಕರಣ, ಮತ್ತೆ ಮತ್ತೆ ತಿದ್ದುಪಡಿಗಳು, ಹಲವಾರು ಬದಲಾವಣೆಗಳೊಂದಿಗೆ ಕ್ರೇಜ್ ಹುಟ್ಟುಹಾಕುತ್ತಿರುವ ಸುಧೀರ್ ಅತ್ತಾವರ ನಿರ್ದೇಶನದ ಕೊರಗಜ್ಜ ಸಿನಿಮಾದ ಸಂಗೀತವನ್ನೇ ಸಂಪೂರ್ಣವಾಗಿ ಬದಲಾಯಿಸಿ, ದಕ್ಷಿಣ ಭಾರತದ ಪ್ರಖ್ಯಾತ ಸಂಗೀತ ನಿರ್ದೇಶಕ “ಗೋಪಿ ಸುಂದರ್” ಈಗ ಸಿನಿಮಾಗೆ ಬ್ಯಾಗ್ರೌಂಡ್ ಸ್ಕೋರ್ ಜೊತೆ ಎಲ್ಲಾ ಹಾಡುಗಳನ್ನು ಮತ್ತೆ ಹೊಸದಾಗಿ ಕಂಪೋಜ್ ಮಾಡುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ತ್ರಿವಿಕ್ರಮ ಸಪಲ್ಯ ರವರು ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ನ ಅಡಿ ನಿರ್ಮಿಸುತ್ತಿರುವ ಪ್ಯಾನ್ ಇಂಡಿಯಾ ಚಿತ್ರ “ಕೊರಗಜ್ಜ” ಚಿತ್ರಕ್ಕೆ RRR, ಪುಷ್ಪ ಮೊದಲಾದ ಹಿಟ್ ಸಿನಿಮಾಗಳ ತಂತ್ರಜ್ಞರ ದಂಡು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಂಡಿದೆ. ಸುಮಾರು ಎಂಟು ನೂರು ವರ್ಷಗಳ ಹಿಂದಿನ ಕಥೆಯುಳ್ಳ ಈ ಸಿನಿಮಾದಲ್ಲಿ ಹಾಲಿವುಡ್- ಬಾಲಿವುಡ್ ಕಲಾವಿದರಾದ ಕಬೀರ್ ಬೇಡಿ, ಸಂದೀಪ್ ಸೋಪರ್ಕರ್, ಗಣೇಶ್ ಆಚಾರ್ಯ ಜೊತೆ ಶ್ರುತಿ, ಭವ್ಯ ಮೊದಲಾದವರು ಅಭಿನಯಿಸುತ್ತಿದ್ದಾರೆ. ಋತಿಕ ಎನ್ನುವ ಹೊಸ ಮುಖ ಕೊರಗಜ್ಜನ ತಾಯಿ ಕೊರೊಪೊಳು ಪಾತ್ರದ ಮುಖಾಂತರ ಕನ್ನಡ ಚಿತ್ರರಂಗಕ್ಕೆ…

Read More

ಆನೇಕಲ್:- ಅಪರಾಧ ಮಾಸಾಚರಣೆ ಹಿನ್ನೆಲೆ ವಾಕಾಥಾನ್ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದ್ದು, ಮಾದಕ ವಸ್ತುಗಳು ನಮಗೆ ಬೇಡ ಜಾಗೃತಿ ಅಭಿಯಾನ ಜರುಗಿದೆ. ಜಾಗೃತಿ ಅಭಿಯಾನದಲ್ಲಿ ನಟಿ ಸಪ್ತಮಿ ಗೌಡ ಹೆಜ್ಜೆ ಹಾಕಿದ್ದಾರೆ. ಈ ವೇಳೆ ಜುಂಬಾ ಡ್ಯಾನ್ಸ್ ಮೂಲಕ ವಿಧ್ಯಾರ್ಥಿಗಳು ಕುಣಿದು ಕುಪ್ಪಳಿಸಿದ್ದಾರೆ. ವಿವಿಧ ಪ್ರತಿಷ್ಠಿತ ಕಾಲೇಜಿನ ನೂರಾರು ಮಂದಿ ವಿಧ್ಯಾರ್ಥಿಗಳು ಭಾಗಿಯಾಗಿದರು. ಕಲಾವಿದೆ ಐಶ್ವರ್ಯ ಸೇರಿದಂತೆ ಸಿನಿತಾರೆಯರ ಬಾಗಿಯಾಗಿದರು. ಬೆಂಗಳೂರು ಜಿಲ್ಲಾ ಪೊಲೀಸ್ ವತಿಯಿಂದ ಅಪರಾಧ ಮಾಸಾಚರಣೆ ಆಯೋಜನೆ ಮಾಡಲಾಗಿತ್ತು. ಆನೇಕಲ್ ಪಟ್ಟಣದ ಅಲಯನ್ಸ್ ಕಾಲೇಜಿನಲ್ಲಿ ಜಾಗೃತಿ ಅಭಿಯಾನ ಜರುಗಿದ್ದು, ಜಾಗೃತಿ ಅಭಿಯಾನಕ್ಕೆ ಕೇಂದ್ರ ವಲಯ ಐಜಿ ರವಿಕಾಂತೇಗೌಡ ಹಾಗೂ ನಟಿ ಸಪ್ತಮಿಗೌಡ ಚಾಲನೆ ನೀಡಿದ್ದಾರೆ. 5k ಹಾಗೂ 3K ವಾಕಾಥಾನ್ ನಲ್ಲಿ ವಿಧ್ಯಾರ್ಥಿಗಳು ಹಾಗೂ ಪೊಲೀಸರು ಹೆಜ್ಜೆ ಹಾಕಿದ್ದು, 5k ಹಾಗೂ 3K ವಾಕಾಥಾನ್ ನಲ್ಲಿ ಗೆದ್ದವರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆ. ಮಾದಕ ವಸ್ತು ಜಾಗೃತಿ ಅಭಿಯಾನದಲ್ಲಿ ವಿಂಟೇಜ್ ಕಾರ್ ಗಳ ಶೋ ನಡೆದಿದ್ದು, ವಿಂಟೇಜ್ ಕಾರ್ ಗಳನ್ನ ನೋಡಿ…

Read More

ನವದೆಹಲಿ:- ಬೀಚಲ್ಲಿ ಫೋಟೋಶೂಟ್‌ಗೆ ಟೈಮಿದೆ, ಮಣಿಪುರಕ್ಕಿಲ್ಲ ಎಂದು ಪ್ರಧಾನಿ ಮೋದಿ ಗೆ ಖರ್ಗೆ ಪ್ರಶ್ನೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ದೇವಸ್ಥಾನ ನಿರ್ಮಾಣವಾಗುತ್ತಿರುವ ಸ್ಥಳಗಳಲ್ಲಿ ಮತ್ತು ಬೀಚ್‌ಗಳಲ್ಲಿ ಫೋಟೋಶೂಟ್‌ ಮಾಡಿಸಲು ಪ್ರಧಾನಿ ನರೇಂದ್ರ ಮೋದಿಗೆ ಸಮಯವಿದೆ. ಆದರೆ ಹಿಂಸಾಚಾರದಿಂದ ಬಳಲುತ್ತಿರುವ ಮಣಿಪುರಕ್ಕೆ ಭೇಟಿ ನೀಡಲು ಸಮಯವಿಲ್ಲ ಎಂದರು. ಪ್ರಧಾನಿ ಮೋದಿಗೆ ಸಮುದ್ರದಲ್ಲಿ ಈಜಾಡುತ್ತಿರುವ ಫೋಟೋಶೂಟ್‌ಗೆ ಸಮಯವಿದೆ. ಕೇರಳ ಸೇರಿದಂತೆ ದೇವಸ್ಥಾನ ನಿರ್ಮಾಣವಾಗುತ್ತಿರುವ ಎಲ್ಲ ಕಡೆ ಅವರ ಫೋಟೋಗಳನ್ನು ನೋಡಬಹುದು. ಆದರೆ ಮಣಿಪುರದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿವೆ. ಅಲ್ಲಿ ಜನ ಸಾಯುತ್ತಿದ್ದಾರೆ. ಆ ಮಹಾಪುರುಷ ಅಲ್ಲಿಗೆ ಏಕೆ ಹೋಗಲ್ಲ? ಅದು ದೇಶದ ಭಾಗವಲ್ಲವೇ?’ ಎಂದು ಕಿಡಿಕಾರಿದ್ದಾರೆ.

Read More

ಚಾಮರಾಜನಗರ:- ಪಕ್ಷದ ಬೆಳವಣಿಗೆಯಲ್ಲಿ ವಿ ಸೋಮಣ್ಣ ಕೊಡುಗೆ ಅಪಾರ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಪಕ್ಷದಲ್ಲಿ ಸಂಪೂರ್ಣವಾಗಿ ಎಲ್ಲವೂ ಸರಿ ಹೋಗಿದೆ ಎಂದು ಹೇಳಿಲ್ಲ ಹೇಳುವುದು ಇಲ್ಲ. ಸಾಕಷ್ಟು ಬದಲಾವಣೆ ಆಗಲಿದೆ ಎಂದು ವಿ.ಸೋಮಣ್ಣ ಪರ ಬಿ.ವೈ.ವಿಜಯೇಂದ್ರ ಸಾಫ್ಟ್ ಕಾರ್ನರ್ ತೋರಿದ್ದಾರೆ. ಸೋಮಣ್ಣ ಹಿರಿಯರಿದ್ದಾರೆ ಪಕ್ಷದ ಬೆಳವಣಿಗೆಗೆ ಅವರ ಕೊಡುಗೆ ಕೂಡ ಸಾಕಷ್ಟಿದೆ. 45 ವರ್ಷಗಳ ಸುದೀರ್ಘ ಅನುಭವ ಇರುವಂತ ರಾಜಕಾರಣಿ ಅವ್ರು. ಎರಡು ಕಡೆ ಸ್ಪರ್ಧಿಸಿ ಗೆಲವು ಸಾಧಿಸುತ್ತೇನೆಂಬ ವಿಶ್ವಾಸ ಇದ್ದಂತವರಿಗೆ ಎರಡುಕಡೆ ಸೋಲಾದ್ರೆ ನೋವಾಗುವುದು ಸಾಮಾನ್ಯ. ಸೋಲಿಗೆ ಬೇರೆ ಕಾರಣ ಇರಬಹುದು ಇಬ್ಬರು ಕುಳಿತು ಮಾತನಾಡುತ್ತೇವೆ ಎಂದು ಚಾಮರಾಜನಗರದಲ್ಲಿ ಬಿ.ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.

Read More

ಹುಬ್ಬಳ್ಳಿ: ನಗರದಾದ್ಯಂತ ಶನಿವಾರ ಸಂಜೆ ಸುಮಾರು 30 ನಿಮಿಷಗಳ ಕಾಲ ಅಕಾಲಿಕ ಮಳೆ ಸುರಿಯಿತು. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಬಿಸಿಲಿನ ಬೇಗೆಯಿಂದ ಬಳಲುತ್ತಿದ್ದ ಜನತೆಗೆ, ಮಳೆ ತುಸು ತಂಪನೆರೆಯಿತು. ಮಾರುಕಟ್ಟೆಗೆ ಬಂದವರು ಏಕಾಏಕಿ ಸುರಿದ ಮಳೆಯಿಂದ ಪರದಾಡಿದರು. ಬೈಕ್‌ ಸವಾರರು ನೆನೆಯುತ್ತಲೇ ಸಂಚರಿಸಿದ ದೃಶ್ಯ ಕಂಡು ಬಂದಿತು. ರಸ್ತೆ ಕಾಮಗಾರಿ ನಡೆಯುತ್ತಿರುವ ಅಶೋಕನಗರ, ದೇಶಪಾಂಡೆನಗರ, ದೇವಾಂಗಪೇಟೆ, ಚನ್ನಪೇಟೆ, ಆನಂದನಗರ ರಸ್ತೆಯ ಅಲ್ಲಲ್ಲಿ ನೀರು ನಿಂತಿತ್ತು. ಕಾಮಗಾರಿಯಿಂದಾಗಿ ನಿಂತ ಕೊಳಚೆ ನೀರಿನಿಂದ ಸವಾರರು ಹಾಗೂ ಪಾದಚಾರಿಗಳು ತೊಂದರೆ ಅನುಭವಿಸಿದರು.

Read More

ಚಳಿಗಾಲದಲ್ಲಿ ನಿಮಗೆ ಆಗಾಗ್ಗೆ ತಲೆನೋವು ಏಕೆ ಬರುತ್ತದೆ? ಈ ಸಮಸ್ಯೆಯಿಂದ ಹೊರಬರುವ ಮಾರ್ಗಗಳ ಬಗ್ಗೆಯೂ ಕಲಿಯೋಣ. ಸೂರ್ಯನ ಬೆಳಕಿಗೆ ಕಡಿಮೆ ಒಡ್ಡಿಕೊಳ್ಳುವುದು ತಲೆನೋವಿಗೆ ಕಾರಣವಾಗಬಹುದು ಎಂದು ತಜ್ಞರು ಹೇಳುತ್ತಾರೆ. ಹವಾಮಾನವು ತಂಪಾಗಿರುವುದರಿಂದ ನಮ್ಮಲ್ಲಿ ಹೆಚ್ಚಿನವರು ಹೊರಗೆ ಬರುವುದಿಲ್ಲ. ಅಲ್ಲದೆ, ಚಳಿಗಾಲದಲ್ಲಿ ಸೂರ್ಯನ ಬೆಳಕು ಕಡಿಮೆ ಇರುತ್ತದೆ. ದೇಹಕ್ಕೆ ಅಷ್ಟೊಂದು ಸೂರ್ಯನ ಬೆಳಕು ಸಿಗುವುದಿಲ್ಲ. ಇದು ದೇಹದಲ್ಲಿ ಸಿರೊಟೋನಿನ್ ಮಟ್ಟವನ್ನು ಕಡಿಮೆ ಮಾಡುತ್ತದೆ. ದೇಹದಲ್ಲಿ ವಿಟಮಿನ್ ಡಿ ಮಟ್ಟವೂ ಕಡಿಮೆಯಾಗುತ್ತದೆ. ಇದು ತಲೆನೋವಿಗೆ ಕಾರಣವಾಗುತ್ತದೆ. ಈ ಸಮಸ್ಯೆಯನ್ನು ತೊಡೆದುಹಾಕಲು, ನೀವು ವಿಟಮಿನ್ ಡಿ ಸಮೃದ್ಧವಾಗಿರುವ ಆಹಾರವನ್ನು ತಿನ್ನಬೇಕು. ತಾಪಮಾನದಲ್ಲಿನ ತೀವ್ರ ಬದಲಾವಣೆಗಳು ತಲೆನೋವಿಗೆ ಕಾರಣವಾಗಬಹುದು. ಆದ್ದರಿಂದ ಚಳಿಗಾಲದಲ್ಲಿ, ತಾಪಮಾನಕ್ಕೆ ಅನುಗುಣವಾಗಿ ಬಟ್ಟೆಗಳನ್ನು ಧರಿಸಬೇಕು. ನಮ್ಮ ದೇಹವನ್ನು ಹವಾಮಾನಕ್ಕೆ ಹೊಂದಿಕೊಳ್ಳುವುದನ್ನು ನಾವು ಅಭ್ಯಾಸ ಮಾಡಿಕೊಳ್ಳಬೇಕು. ಚಳಿಗಾಲದಲ್ಲಿ, ಅನೇಕ ಜನರು ಕಡಿಮೆ ನೀರನ್ನು ಕುಡಿಯುತ್ತಾರೆ. ದೇಹದಲ್ಲಿ ನೀರಿನ ಮಟ್ಟ ಕಡಿಮೆಯಾಗುವುದರಿಂದ ದೇಹವು ನಿರ್ಜಲೀಕರಣಗೊಳ್ಳುತ್ತದೆ. ಇದು ತಲೆನೋವಿಗೆ ಕಾರಣವಾಗುತ್ತದೆ. ಆದ್ದರಿಂದ ಪ್ರತಿದಿನ ಬೆಚ್ಚಗಿನ ನೀರನ್ನು ಕುಡಿಯಿರಿ. ಸೂಪ್…

Read More

ಹುಬ್ಬಳ್ಳಿ: ‘ಇಲ್ಲಿನ ಅಶೋಕನಗರ ರೈಲ್ವೆ ಸೇತುವೆಯಿಂದ ಶಕ್ತಿ ಕಾಲೊನಿವರೆಗಿನ 2.4 ಕಿ.ಮೀ. ಉದ್ದದ ರಸ್ತೆ ಕಾಮಗಾರಿಯನ್ನು ಮಾರ್ಚ್ 31ರ ಒಳಗೆ ಪೂರ್ಣಗೊಳಿಸಬೇಕು’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಸೂಚಿಸಿದರು. ವಿಶ್ವೇಶ್ವರ ನಗರದ ಉದ್ಯಾನದಲ್ಲಿನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ‘ಅನುದಾನಕ್ಕೆ ಯಾವುದೇ ಸಮಸ್ಯೆ ಇಲ್ಲ. ರಸ್ತೆಯು ಗುಣಮಟ್ಟದಿಂದ ಕೂಡಿರಬೇಕು’ ಎಂದರು. ಹು–ಧಾ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಮಾತನಾಡಿ, ‘ಶೀಘ್ರದಲ್ಲಿ ಕಾಮಗಾರಿ ಶುರುವಾಗಲಿದೆ’ ಎಂದು ಹೇಳಿದರು. ಪಾಲಿಕೆ ಸದಸ್ಯ ಸಂತೋಷ ಚೌಹಾಣ್, ಬೀರಪ್ಪ ಖಂಡೇಕರ, ಸಿದ್ದು ಮೊಗಲಿಶೆಟ್ಟರ್, ಪಾಲಿಕೆ ನೋಡಲ್ ಅಧಿಕಾರಿ ತುಬಾಕಿ ಬೇವೂರು, ಬಿಜೆಪಿ ವಕ್ತಾರ ರವಿ ನಾಯಕ, ಲೋಕೋಪಯೋಗಿ ಇಲಾಖೆ, ಎಲ್‌ ಆ್ಯಂಡ್‌ ಟಿ, ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಹುಬ್ಬಳ್ಳಿ: ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮಕ್ಕೆ ಆರೋಗ್ಯ ಉಪಕೇಂದ್ರಕ್ಕೆ ಅನುದಾನ ಮಂಜೂರು ಮಾಡುವಂತೆ ಆಗ್ರಹ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮನವಿ ಸಲ್ಲಿಸಲಾಯಿತು ಈಗಾಗಲೇ ಸಂಬಂಧಪಟ್ಟ ಆರೋಗ್ಯ ಇಲಾಖೆಯವರಿಗೆ ಮನವಿ ಸಲ್ಲಿಸಿದ್ದು ಮನವಿಗೆ ಸರಿಯಾಗಿ ಸ್ಪಂದನೆ ಸಿಕ್ಕಿಲ್ಲ ಕಳೆದ ತಿಂಗಳ ಹಿಂದೆ ಇಲಾಖೆಯ ಪರವಾಗಿ ಇಂಜಿನಿಯರ್ ಗ್ರಾಮಕ್ಕೆ ಭೇಟಿ ನೀಡಿ ಅಳತೆ ಮಾಡಿಕೊಂಡು ಹೋಗಿ ಒಂದು ತಿಂಗಳದಲ್ಲಿ ಕೆಲಸ ಪ್ರಾರಂಭಿಸುವದಾಗಿ ಹೇಳಿದ್ದರು ಆದರೆ ಇಲ್ಲಿಯವರೆಗೂ ಯಾವುದೇ ಕಾಮಗಾರಿಯೂ ಆಗಿಲ್ಲ ಅನುದಾನ ಬಿಡುಗಡೆಯು ಮಾಡಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿ ಶೀಘ್ರ ಕಾಮಗಾರಿಯನ್ನು ಆರಂಭಿಸಬೇಕೆಂದು ರತ್ನ ಭಾರತ ರೈತ ಸಮಾಜದ ವತಿಯಿಂದ ಮನವಿ ಮಾಡಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು ಆದಷ್ಟು ಬೇಗನೆ ಈ ಕಾಮಗಾರಿ ಆರಂಭಿಸುವಂತೆ ಆದೇಶಿಸುತ್ತೇನೆ ನಮ್ಮ ಯೋಗಪ್ಪನವರ ಇವರು ಒಳ್ಳೆ ಕಾರ್ಯಕ್ಕೆ ಕೈಹಾಕಿದ್ದಾರೆ ಅವರ ಕೈ ಬಲ ಪಡಿಸುತ್ತೇನೆ ಎಂದು ಭರವಸೆ ನೀಡಿದರು ಈ ಸಂದರ್ಭದಲ್ಲಿ ರತ್ನ ಭಾರತ ರಾಷ್ಟ್ರೀಯ…

Read More

ಹುಬ್ಬಳ್ಳಿ: 1992ರ ಅಯೋಧ್ಯೆ ರಾಮಮಂದಿರ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ ಜನವರಿ 3ರಂದು ನಗರದ ಶಹರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸೇರಿದಂತೆ 43 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರು ಜನವರಿ 5ರಂದು ದೂರು ನೀಡಿದ್ದು ದೂರಿನಲ್ಲಿ ಪ್ರತಿಭಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ಘೋಷಣೆ ಕೂಗಿದ್ದಲ್ಲದೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪ್ರತಿಭಟನೆ ಪ್ರಕರಣದಲ್ಲಿ ಆರ್ ಅಶೋಕ್ ಎ1 ಆರೋಪಿಯಾಗಿದ್ದು ಶಾಸಕರಾದ ಅರವಿಂದ ಬೆಲ್ಲ, ಮಹೇಶ್ ಟೆಂಗಿನಕಾಯಿ ಕ್ರಮವಾಗಿ ಎ2, ಎ3 ಆರೋಪಿಯಾಗಿದ್ದಾರೆ. ಇನ್ನುಳಿದಂತೆ ಎಂ.ಆರ್‌. ಪಾಟೀಲ, ವಿಧಾನಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ್‌, ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ್‌, ಶಿವು ಮೆಣಸಿನಕಾಯಿ, ರೂಪಾ ಶೆಟ್ಟಿ, ಉಮೇಶಗೌಡ ಕೌಜಲಗಿ, ತಿಪ್ಪಣ್ಣ ಮಜ್ಜಗಿ ಸೇರಿದಂತೆ ಬಿಜೆಪಿಯ ಇತರ ಮುಖಂಡರ ಹಾಗೂ ಕಾರ್ಯಕರ್ತರ…

Read More