Author: AIN Author

ಮೈಸೂರು:- ಬಿಕೆ ಹರಿಪ್ರಸಾದ್ ರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿ.ಕೆ.ಹರಿಪ್ರಸಾದ್ ಬಂಧಿಸಿ ಮಂಪರು ಪರೀಕ್ಷೆ ಮಾಡಬೇಕು. ಮುಖ್ಯಮಂತ್ರಿಗಳು ತಕ್ಷಣ ಈ ನಿರ್ಧಾರವನ್ನು ಕೈಗೊಳ್ಳಬೇಕು ಎಂದರು. ಈ ಸರ್ಕಾರ​ ಬಂದ್ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಚಿವರು, ಶಾಸಕರು ಸಮಾಜ ಒಡೆಯುವ ಕೆಲಸ ಮಾಡುತ್ತಿವೆ. ಆಡಳಿತ ಪಕ್ಷದಿಂದ ರಾಜ್ಯದಲ್ಲಿ ಅಶಾಂತಿ ಉಂಟಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ. ಡಿ.ಜೆ. ಹಳ್ಳಿ, ಕೆ.ಜೆ.ಹಳ್ಳಿ ಗಲಭೆ ಕೇಸ್​ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಹಿಂದೂ ಕಾರ್ಯಕರ್ತರನ್ನು ಬೆದರಿಸುವ ಕೆಲಸವಾಗುತ್ತಿದೆ. ಮತ್ತೊಂದೆಡೆ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ. ಹಿಂದೂ ಕಾರ್ಯಕರ್ತರನ್ನು ಅರೆಸ್ಟ್ ಮಾಡುವುದು. ಠಾಣೆಗೆ ಬೆಂಕಿ ಹಚ್ಚಿದವರನ್ನ ಅಮಾಯಕರು ಅನ್ನೋದು ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ. ಇದನ್ನ ನಾವು ಖಂಡಿಸುತ್ತೇವೆ ಎಂದು ಕಿಡಿಕಾರಿದ್ದಾರೆ. ಕೆಜೆ ಹಳ್ಳಿ, ಡಿಜೆ ಹಳ್ಳಿ ಆರೋಪಿಗಳ ರಕ್ಷಣೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್​ ಹೇಳಿಕೆ ವಿಚಾರವಾಗಿ ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಇದು ತುಷ್ಟೀಕರಣ…

Read More

ಬಳ್ಳಾರಿ: ಯುವಜನರ ಮತ್ತು ಕ್ರೀಡಾಪಟುಗಳ ಬೆಳವಣಿಗೆಗೆ ಎಲ್ಲಾ ರೀತಿಯ ಬೆಂಬಲ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಯುವಜನ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಹೇಳಿದರು. ಎಂದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ನಲ್ಲಚೆರುವು ಪ್ರದೇಶದ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನೇತೃತ್ವದ ಸರ್ಕಾರವು, ಯುವಜನರಿಗೆ ಮತ್ತು ಕ್ರೀಡಾಪಟುಗಳ ಪ್ರತಿಭೆಯನ್ನು ಗುರುತಿಸುವ ಕೆಲಸ ಮಾಡುತ್ತಿದೆ. ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರತಿಯೊಂದು ಇಲಾಖೆಗಳಲ್ಲಿ ಶೇ.02 ರಷ್ಟು ಉದ್ಯೋಗ ಮೀಸಲಾತಿ ಕಲ್ಪಿಸಲು ನಿರ್ಧಾರ ಕೈಗೊಳ್ಳುತ್ತಿದೆ ಎಂದರು. ಜಿಲ್ಲೆಯಲ್ಲಿ ಮಾದರಿ ಕ್ರೀಡಾ ವಸತಿ ನಿಲಯ ನಿರ್ಮಾಣ: ರಾಜ್ಯದಲ್ಲಿಯೇ ಅತ್ಯಂತ ಮಾದರಿಯಾದ ಕ್ರೀಡಾ ವಸತಿ ನಿಲಯವನ್ನು ಬಳ್ಳಾರಿಯಲ್ಲಿ ನಿರ್ಮಿಸಲಾಗುವುದು. ಈ ಮೂಲಕ…

Read More

ಬೆಂಗಳೂರು:- ಕರವೇ ನಾರಾಯಣ ಸೇರಿ ಬಂಧನಕ್ಕೊಳಗಾಗಿದ್ದ 29 ಕರವೇ ಕಾರ್ಯಕರ್ತರನ್ನು ರಿಲೀಸ್ ಮಾಡಲಾಗಿದೆ. ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ ನ್ಯಾಯಾಧೀಶ ಬಿರಾದಾರ್ ದೇವೇಂದ್ರಪ್ಪ ಅವರಿದ್ದ ಪೀಠ, ನಾರಾಯಣಗೌಡ ಮತ್ತು ಇತರೆ 29 ಕಾರ್ಯಕರ್ತರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ನಾಮಫಲಕ ಧ್ವಂಸ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಕರವೇ ಬೆಂಗಳೂರು ನಗರದ ಯುವ ಘಟಕದ ಅಧ್ಯಕ್ಷ ಕಾರ್ತಿಕ್ ಗೌಡ, ಕಾರ್ಯಕರ್ತರಾದ ಶರತ್, ಲೋಕೇಶ್ ಗೌಡ, ಹೇಮಂತ್ ಅವರಿಗೆ ಇತ್ತೀಚೆಗೆ ಜಾಮೀನು ಮಂಜೂರಾಗಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಬಿಡುಗಡೆಗೊಂಡ ಕಾರ್ಯಕರ್ತರನ್ನು ಹಾರ ಹಾಕಿ ಪಟಾಕಿ ಸಿಡಿಸಿ ಕರವೇ ಕಾರ್ಯಕರ್ತರು ಬರಮಾಡಿಕೊಂಡರು.

Read More

ಬೆಂಗಳೂರು:- ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಪರಾಧ ಪ್ರಕರಣ ಕಡಿಮೆ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತಮ್ಮನ್ನು ಭೇಟಿಯಾದ ಬೆಂಗಳೂರು ನಗರದ ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ʼನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಕಡಿಮೆ ಆಗಿದೆ. ಸಂಪೂರ್ಣವಾಗಿ ಅಪರಾಧ ನಿರ್ಮೂಲನೆ ಮಾಡಲಾಗದಿದ್ದರೂ, ಕಡಿಮೆಗೊಳಿಸಲು ಸಾಧ್ಯವಿದೆ. ತಡೆಯಲು ಸಾಧ್ಯವಿರುವ ಅಪರಾಧಗಳನ್ನು ತಡೆಗಟ್ಟಲು ಪೊಲೀಸರು ಹೆಚ್ಚಿನ ಆದ್ಯತೆ ನೀಡಬೇಕುʼ ಎಂದು ತಿಳಿಸಿದರು. ನಗರದಲ್ಲಿ ಡ್ರಗ್ಸ್‌ ಹಾವಳಿ ತಡೆಗಟ್ಟುವಂತೆ ಸೂಚನೆ ನೀಡಿದ ಮುಖ್ಯಮಂತ್ರಿಗಳು, ಸಮಾಜದ ಒಳಿತಿಗಾಗಿ ಡ್ರಗ್ಸ್‌ ಮಾಫಿಯಾವನ್ನು ಮಟ್ಟಹಾಕುವ ಬಗ್ಗೆ ಎಲ್ಲ ಹಂತದ ಪೊಲೀಸ್‌ ಅಧಿಕಾರಿಗಳು ತೀರ್ಮಾನ ಕೈಗೊಂಡು ಅನುಷ್ಠಾನಗೊಳಿಸಬೇಕು. ವಿವಿಧ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಒಂಟಿಯಾಗಿ ಜೀವನ ಮಾಡುವವರನ್ನು ಗುರುತಿಸಿ, ಅವರ ರಕ್ಷಣೆಗೆ ಆದ್ಯತೆ ನೀಡಬೇಕು ಹಾಗೂ ಪೊಲೀಸ್‌ ಬೀಟ್‌ ವ್ಯವಸ್ಥೆ ಬಲಪಡಿಸಬೇಕು ಎಂದು ಸೂಚಿಸಿದರು.

Read More

ಬೆಂಗಳೂರು:- ಜಾಮೀನು ಪಡೆದ್ರೂ ಕರವೇ ಅಧ್ಯಕ್ಷ ನಾರಾಯಣಗೌಡಗೆ ಸಂಕಷ್ಟ ಮಾತ್ರ ತಪ್ಪಿಲ್ಲ. ಹೀಗಾಗಿ ಮತ್ತೆ ವಶಕ್ಕೆ ಪಡೆಯಲು ಪೊಲೀಸ್​ ಚಿಂತನೆ ನಡೆಸಿದ್ದಾರೆ. ಆಂಗ್ಲ ನಾಮಫಲಕ ವಿರುದ್ಧ ಹೋರಾಟ ಮಾಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡಗೆ ಜಾಮೀನು ಮಂಜೂರು ಮಾಡಲಾಗಿದೆ. ಇನ್ನೂ ಬಿಡುಗಡೆ ಬೆನ್ನಲ್ಲೇ ಹಳೇ ಪ್ರಕರಣಗಳ ಸಂಬಂಧ ವಾರಂಟ್ ಮೇಲೆ ಮತ್ತೆ ಕಸ್ಟಡಿಗೆ ಪಡೆಯಲು ಕುಮಾರಸ್ವಾಮಿಲೇಔಟ್‌, ಹಲಸೂರು ಗೇಟ್ ಠಾಣೆ ಪೊಲೀಸರಿಂದ ಸಿದ್ಧತೆ ಮಾಡಲಾಗುತ್ತಿದೆ. ಹಿರಿಯ ಅಧಿಕಾರಿಗಳ ಸೂಚನೆಯಂತೆ ನಾರಾಯಣಗೌಡ ವಿರುದ್ಧದ ಹಳೇ ಕೇಸ್​ಗಳನ್ನು ಪೊಲೀಸರು ಕೆದಕುತ್ತಿದ್ದಾರೆ. ಬೆಂಗಳೂರಿನ ಎಲ್ಲಾ ಠಾಣೆಗಳ ಕೇಸ್ ರೀಓಪನ್ ಮಾಡಿ ನಾರಾಯಣಗೌಡನನ್ನು ವಶಕ್ಕೆ ಪಡೆಯಲು ಪೊಲೀಸರು ಚಿಂತನೆ ನಡೆಸುತ್ತಿದ್ದಾರೆ. 2017ರಲ್ಲಿ ಎನ್​ಡಿಎಂಎ ಆಯಕ್ಟ್​ನಡಿ ಹಲಸೂರು ಗೇಟ್ ಠಾಣೆಯಲ್ಲಿ ಒಂದು ಪ್ರಕರಣ, ಕುಮಾರಸ್ವಾಮಿ ಲೇಔಟ್‌ ಠಾಣೆಯಲ್ಲಿ ಮತ್ತೊಂದು ಕೇಸ್‌ ದಾಖಲಾಗಿದ್ದವು. ಈ ಕೇಸ್ ಸಂಬಂಧ ನಾರಾಯಣಗೌಡ ವಿರುದ್ಧ NBW ಜಾರಿ ಮಾಡಲಾಗಿತ್ತು. ಇವೆರಡು ಕೇಸ್‌ಗಳ ಸಂಬಂಧ ವಾರಂಟ್ ಮೇಲೆ ಕಸ್ಟಡಿಗೆ ಪಡೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

Read More

ಬೆಂಗಳೂರು:- ತಮ್ಮ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಳೆದ ಸಾಕಷ್ಟು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದ ಅತಿಥಿ ಉಪನ್ಯಾಸಕರ ನಿಯೋಗವು ಇಂದು CM ಸಿದ್ದರಾಮಯ್ಯ ರನ್ನು ಭೇಟಿ ಮಾಡಿದೆ. ಇದೇ ವೇಳೆ ಮುಷ್ಕರ ಹಿಂಪಡೆಯಲು ಅತಿಥಿ ಉಪನ್ಯಾಸಕರಿಗೆ ಸಿದ್ದರಾಮಯ್ಯ ಮನವಿ ಮಾಡಿದ್ದು, ಜೊತೆಗೆ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ ನೀಡಿದ್ದಾರೆ. 2023 ಡಿಸೆಂಬರ್ 29 ರಂದು ಅತಿಥಿ ಉಪನ್ಯಾಸಕರ ವೇತನವನ್ನು 5 ಸಾವಿರ ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿತ್ತು. ಆ ಬಗ್ಗೆ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ‘ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ ಸೇರಿದಂತೆ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದ್ದರು. ಅಷ್ಟಕ್ಕೆ ಸುಮ್ಮನಾಗದ ಉಪನ್ಯಾಸಕರು, ಪುನಃ ಹೋರಾಟ ಆರಂಭಿಸಿದ್ದರು, ಇದೀಗ ಸಿಎಂ, 5 ಸಾವಿರದಿಂದ 8 ಸಾವಿರಕ್ಕೆ ಗೌರವಧನ ಹೆಚ್ಚಿಸಿದ್ದಾರೆ. ಇನ್ನು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿದ್ದೇವೆ. ಕೆಲವು ಬೇಡಿಕೆಗಳನ್ನು ನಮ್ಮ ಮುಂದೆ ಇಟ್ಟಿದ್ದರು. ಸೇವೆ ಖಾಯಂ ಅವರ…

Read More

ಹುಬ್ಬಳ್ಳಿ: ಕೊವಿಡ್​ ಬಗ್ಗೆ ರಾಜ್ಯದ ಜನರು ಆತಂಕ ಪಡುವ ಅಗತ್ಯ ಇಲ್ಲಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ‘ಬೇರೆ ರಾಜ್ಯಕ್ಕೆ ಹೋಲಿಸಿದ್ರೆ ಕರ್ನಾಟಕದಲ್ಲಿ ಟೆಸ್ಟಿಂಗ್​ ಹೆಚ್ಚಿಸಿದ್ದೇವೆ. ಸಹಜವಾಗಿ ಕೊರೊನಾ ಕೇಸ್​ ಸ್ವಲ್ಪ ಜಾಸ್ತಿ ಆಗಿದೆ. ರಾಜ್ಯದಲ್ಲಿ ಸುಮಾರು 7 ಸಾವಿರ ಕೊವಿಡ್​ ಟೆಸ್ಟ್​ ಮಾಡುತ್ತಿದ್ದೇವೆ. ಬೇರೆ ಬೇರೆ ಆರೋಗ್ಯ ಸಮಸ್ಯೆ ಇದ್ದವರು ಎಚ್ಚರದಿಂದ ಇರಬೇಕು ಎಂದರು.

Read More

ಬೆಂಗಳೂರು:- ಕರ್ನಾಟಕದಲ್ಲಿ ಇಂದು 297 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ 171 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಕೊವಿಡ್​ ಪಾಸಿಟಿವಿಟಿ ರೇಟ್​ ಶೇಕಡಾ 4.3 ರಷ್ಟಿದೆ. ಇನ್ನುರಾಜ್ಯದಲ್ಲಿ ಕೊವಿಡ್​ ಆಯಕ್ಟಿವ್ ಕೇಸ್​ಗಳ ಸಂಖ್ಯೆ 1,136 ಇದೆ. ಬೆಂಗಳೂರಿನಲ್ಲಿ 171 ಜನರಿಗೆ ಕೊರೊನಾ ದೃಢವಾಗಿದ್ದರೆ, ಇನ್ನುಳಿದಂತೆ ಬಾಗಲಕೋಟೆ 5, ಬಳ್ಳಾರಿ 6, ಬೆಂಗಳೂರು ಗ್ರಾಮಾಂತರ 12, ಚಾಮರಾಜನಗರ 2, ಚಿಕ್ಕಬಳ್ಳಾಪುರ 5, ಚಿತ್ರದುರ್ಗ 5, ದಕ್ಷಿಣ ಕನ್ನಡ 6, ದಾವಣಗೆರೆ 1, ಧಾರವಾಡ 8, ಗದಗ 2, ಹಾವೇರಿ 4, ಕಲಬುರಗಿ 5, ಕೊಡಗು 1, ಕೋಲಾರ 3, ಕೊಪ್ಪಳ 8, ಮಂಡ್ಯ 6, ಮೈಸೂರು 26, ರಾಯಚೂರು 2, ರಾಮನಗರ 6, ಶಿವಮೊಗ್ಗ 4 , ತುಮಕೂರು 4, ವಿಜಯನಗರ 4, ವಿಜಯಪುರದಲ್ಲಿ 1 ಕೇಸ್ ಕಂಡುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Read More

ರಾಯಬಾಗ: ಇಲ್ಲಿಯ ಪುಟಾಣಿ ಮಕ್ಕಳು ಪ್ರತಿದಿನ ಶಾಲೆಗೆ ಹೋಗಬೇಕಾದರೆ ದಾರಿಯನ್ನು ಹುಡುಕಿಕೊಂಡು ದಾರಿ ಯಾವುದಯ್ಯ ಎನ್ನುವಂತಾಗಿದೆ. ಪದೇ ಪದೇ ಈ ರಸ್ತೆ ತಡೆ ಆಗುತ್ತಿರುವುದರಿಂದ ಪ್ರತಿನಿತ್ಯ ಮಕ್ಕಳು ಕಲ್ಲು ಮುಳ್ಳುಗಳನ್ನು ದಾಟಿಕೊಂಡು ಶಾಲೆಗೆ ಹೋಗವ ಚಿಂತಾಜನಕ ಸ್ಥಿತಿ ನಿರ್ಮಾಣವಾಗಿದೆ. ಹೌದು…. ರಾಯಬಾಗ ತಾಲೂಕಿನ ಕಂಚಕರವಾಡಿಯ ಕಳ್ಳಿತೋಟ, ಸುಲ್ತಾಪೂರ ತೋಟದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಹೋಗಬೇಕಾದರೆ ಕಾಲುವೆಯ ಮಾರ್ಗವಾಗಿ ಶಾಲೆಯನ್ನು ತಲುಪಲು 18 ಅಡಿಯ ರ‌ಸ್ತೆ ಇದ್ದರೂ ಕೂಡ ಅಕ್ಕಪಕ್ಕದ ಜಮೀನಿನವರು ಒತ್ತುವರಿ ಮಾಡಿಕೊಂಡು ಶಾಲೆಗೆ ಬರುವ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ದಾರಿ ಬಿಡದೆ, ದಾರಿಯಲ್ಲಿ ಮುಳ್ಳನಿಟ್ಟ ರಸ್ತೆ ತಡೆ ಮಾಡುತ್ತಿದ್ದಾರೆ ಎಂದು ಈ ಶಾಲೆಗೆ ಭೂದಾನ ಮಾಡಿದ ಶಿವರಾಯಿಯವರ ಆರೋಪವಾಗಿದೆ. ಈ ಸಮಸ್ಯೆ ಕುರಿತು ಎಷ್ಟೇ ಬಾರಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ರಾಯಬಾಗ ಗ್ರಾಮೀಣ ಭಾಗದ ಪಿಡಿಓ ಅವರಿಗೆ ಮನವಿ ಸಲ್ಲಿಸಿದರು ಕೂಡ ಯಾವುದೇ ಪ್ರಯೋಜನವಾಗಿಲ್ಲ. ಆಡಳಿತದಲ್ಲಿರುವ ಅಧಿಕಾರಿ ಮಹಾಶಯರು ನಿದ್ದೆಗೆ ಜಾರಿದ್ದಾರೆ? ಎನ್ನುವುದು ಸಾರ್ವಜನಿಕರ ಗಂಭೀರ ಆರೋಪವಾಗಿದೆ. ಇನ್ನಾದರೂ…

Read More

ಬೆಂಗಳೂರು: ಬೆಂಗಳೂರಿನ ಕೂಡ್ಲು ಬಳಿ ಅಕ್ಟೋಬರ್ ತಿಂಗಳಲ್ಲಿ ಚಿರತೆ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು,ಬಳಿಕ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುವ ವೇಳೆ ಗುಂಡು ಚಿರತೆಗೆ ತಗುಲಿ‌ ಮತಪಟ್ಟಿತ್ತು. ಇದಾದ ಬಳಿಕ ಈಗ ಆನೇಕಲ್ ತಾಲ್ಲೂಕಿನಲ್ಲಿ ಪದೇ ಪದೇ ಕಾಣಿಸಿಕೊಂಡು ಆತಂಕ‌ ಸೃಷ್ಟಿ ಮಾಡುತ್ತಿದ್ದು,ಕಳೆದ ಒಂದು ವಾರದಿಂದ ಆನೇಕಲ್ ತಾಲ್ಲೂಕಿನಲ್ಲಿ ರಾತ್ರಿ ಸಮಯದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದು,ಕಳೆದ ವಾರ ಗಟ್ಟಹಳ್ಳಿ ಗ್ರಾಮದಲ್ಲಿ ಮನೆಯ ಕಾಂಪೌಂಡ್ ಬಳಿ ಇದ್ದ ಕೋಳಿಗಳನ್ನು ತಿಂದು ಹಾಕಿತ್ತು, ಗ್ರಾಮದ ಪಕ್ಕದಲ್ಲಿನ‌ ನೀಲಗಿರಿ ತೋಪಿನಲ್ಲಿ ಬೋನ್ ಇಡಲಾಗಿದೆ,ಆದ್ರೆ ಅದಾದ ಬಳಿಕ ಪಕ್ಕದ ಗ್ರಾಮ ಮದ್ದೂರಮ್ಮ ದೇವಾಲಯದ ಬಳಿ ಕಾಣಿಸಿ ಕೊಂಡು ಎರಡು ದಿನದ ಹಿಂದೆ ಮತ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಪಸಂದ್ರ ಬಳಿ ಚಿರತೆ ಹೋಗುತ್ತಿದ್ದ ವೇಳೆ ಸ್ಥಳೀಯರ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು ನಿನ್ನೆ ರಾತ್ರಿ ಚಂದಾಪುರ ಸಮೀಪದ ಹೀಲಲಗೆ ಬಳಿ ಸರ್ಕಾರಿ ಶಾಲೆಯ ಹಿಂಬಾಗದ ಗಜೇಂದ್ರ ಎಂಬುವವರ ಮನೆಯ ಪಕ್ಕದಲ್ಲೇ ಹೋಗಿದೆ. ಇಂದು ಬೆಳಿಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ…

Read More