Author: AIN Author

ಅಮರಾವತಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ (Ayodhya Ram Mandir) ಉದ್ಘಾಟನಾ ಕಾರ್ಯಕ್ರಮಗಳು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿದೆ. ಇತ್ತ ಅಯೋಧ್ಯೆಗೆ ರಾಮಭಕ್ತರು ತಮ್ಮ ಕೈಲಾದಷ್ಟು ಕೊಡುಗೆಗಳನ್ನು ನೀಡುತ್ತಿದ್ದಾರೆ. ಅಂತೆಯೇ ತಿರುಪತಿಯಿಂದಲೂ ಇದೀಗ ಅಯೋಧ್ಯೆಗೆ ಲಡ್ಡು ಪೂರೈಕೆಯಾಗಲಿದೆ. ಈ ಸಬಂಧ ತಿರುಪತಿ (Tirupati) ತಿರುಮಲ ದೇವಸ್ಥಾನಂ (TTD) ಅಧಿಕೃತವಾಗಿ ತಿಳಿಸಿದೆ. ದೇಗುಲದ ವತಿಯಿಂದ ಅಯೋಧ್ಯೆಗೆ 1 ಲಕ್ಷ ಲಡ್ಡು ಪೂರೈಕೆ ಮಾಡಲಾಗುವುದು ಎಂದು ಹೇಳಿದೆ. ಉದ್ಘಾಟನೆಯ ದಿನ ರಾಮಭಕ್ತರಿಗೆ ಈ ಲಡ್ಡು (Laddu) ವಿತರಿಸಲಾಗುವುದು. ಪ್ರತಿ ಲಡ್ಡುವಿನ ತೂಕ 25 ಗ್ರಾಂ ಇರುತ್ತದೆ ಎಂದು ಟಿಟಿಡಿಯ ಅಧಿಕಾರಿಗಳು ವಿವರಿಸಿದ್ದಾರೆ ಅಯೋಧ್ಯೆಗೆ ಲಡ್ಡು ಪೂರೈಕೆ ಮಾಡುವ ಕುರಿತು ಟಿಟಿಡಿ ಒಪ್ಪಿಗೆ ನೀಡಿದೆ. ಹೀಗಾಗಿ ಶ್ರೀರಾಮ ಪ್ರಾಣ ಪತಿಷ್ಠಾಪನೆಯ ದಿನದಂದು ಭಕ್ತರಿಗೆ ವಿತರಣೆ ಮಾಡಲು ಅಯೋಧ್ಯೆಗೆ ಲಡ್ಡು ಪೂರೈಕೆ ಮಾಡುತ್ತೇವೆ ಎಂದು ಟಿಟಿಡಿ ಆಡಳಿತ ಕಾರ್ಯನಿರ್ವಾಹಕ ಎ ವಿ ಧರ್ಮ ರೆಡ್ಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಅಯೋಧ್ಯೆ : ಅಯೋಧ್ಯೆಯಲ್ಲಿ (Ayodhya) ರಾಮಮಂದಿರ (Ram Mandir) ಉದ್ಘಾಟನೆ ಕಾಲ ಸನ್ನಿಹಿತವಾಗಿದೆ. ದೇಶದೆಲ್ಲೆಡೆ ಶ್ರೀರಾಮನ ಸ್ಮರಣೆ, ಭಜನೆ ಕೇಳಿಬರುತ್ತಿದೆ. ಹಿಂದೂಗಳ ಮನೆ ಮನದಲ್ಲಿ ಸಂಭ್ರಮ ತುಂಬಿದೆ. ಇದೇ ಜನವರಿ 22 ರಂದು ರಾಮಮಂದಿರ ಉದ್ಘಾಟನೆಯಾಗಲಿದೆ. ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ (ಬಾಲರಾಮ) ಪ್ರಾಣ ಪ್ರತಿಷ್ಠೆ ಕೂಡ ಜರುಗಲಿದೆ. ಈ ದಿನಕ್ಕಾಗಿ ಕೋಟ್ಯಂತರ ರಾಮಭಕ್ತರು ಕಾತರದಿಂದ ಕಾಯುತ್ತಿದ್ದಾರೆ. ಜ.22 ರ ಪ್ರಮುಖ ಧಾರ್ಮಿಕ ಆಚರಣೆ ಪ್ರಾಣ ಪ್ರತಿಷ್ಠೆ (Pran Pratistha). ಎಷ್ಟೋ ಜನಕ್ಕೆ ಪ್ರಾಣ ಪ್ರತಿಷ್ಠೆ ಬಗ್ಗೆ ಗೊತ್ತಿರುವುದಿಲ್ಲ. ಪ್ರಾಣ ಪ್ರತಿಷ್ಠೆ ಎಂದರೇನು? ಇದರಲ್ಲಿನ ಆಚರಣೆಗಳು ಹೇಗಿರುತ್ತವೆ? ಎಂಬ ಪ್ರಶ್ನೆಗಳಿಗೆ ವಿವರ ಇಲ್ಲಿದೆ. ಏನಿದು ಪ್ರಾಣ ಪ್ರತಿಷ್ಠೆ? ಪ್ರಾಣ ಪ್ರತಿಷ್ಠೆ ಎನ್ನುವುದು ಹಿಂದೂ ಮತ್ತು ಜೈನ ಧರ್ಮದ ಪ್ರಮುಖ ಆಚರಣೆಯಾಗಿದೆ. ವಿಗ್ರಹವು ಕೇವಲ ದೇವರ ರೂಪವನ್ನು ಚಿತ್ರಿಸುವ ಒಂದು ಕಲಾಕೃತಿಯಷ್ಟೆ. ಪ್ರಾಣ ಪ್ರತಿಷ್ಠೆಯ ನಂತರವೇ ವಿಗ್ರಹವು ದೈವಿಕವಾಗುತ್ತದೆ. ಅದಕ್ಕಾಗಿ ವಿಗ್ರಹವನ್ನು ಪವಿತ್ರಗೊಳಿಸಿ ದೇವಾಲಯದ ಗರ್ಭಗುಡಿಯಲ್ಲಿ ಸ್ಥಾಪಿಸಲಾಗುತ್ತದೆ. ಪ್ರಾಣ ಎಂದರೆ ‘ಜೀವಶಕ್ತಿ, ಉಸಿರು, ಚೈತನ್ಯ’…

Read More

ಬೆಂಗಳೂರು:  ನೀವು  ನೌಕರಿ Job  ಹುಡುಕತಾ ಇದ್ದಿರಾ. SSLC / PUC ಯಾವುದೇ ಪದವಿ ಆಗಿದ್ರೆ ಕೂಡಲೆ ಇಲ್ಲಿ ಭೇಟಿ ಕೊಡಿ.  ಇಲ್ಲಿ ವಾಕ್ ಇನ್ ಸಂದರ್ಶನವಿದ್ದು, ಪುರುಷರು ಮತ್ತು ಮಹಿಳೆಯರಿಗೆ ನೇಮಕಾತಿ ಆರಂಭವಾಗಿದೆ.  ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಮ್ಯಾನೇಜರ್, ಸಹಾಯಕ ಮ್ಯಾನೇಜರ್, ಎಚ್.ಆರ್ ಮ್ಯಾನೇಜರ್, ಮೇಲ್ವಿಚಾರಕ, ಕ್ಯಾಷಿಯರ್, ಸೇಲ್ಸ್ ಎಕ್ಚಿಕ್ಯೂಟಿವ್, ಬಿಲ್ಲಿಂಗ್ ಎಕ್ಸಿಕ್ಯೂಟಿವ್, ಸೆಕ್ಯೂರಿಟಿ. ಸೇರಿದಂತೆ ಅನೇಕ ಹುದ್ದೇಗಳಿಗೆ ಇಲ್ಲಿ ಅವಕಾಶವಿದೆ. SSLC /PUC ಯಾವುದೇ ಪದವಿ ಮಾಡಿದ್ರು ಇಲ್ಲಿ ಕೆಲಸವಿದ್ದು.  ಜೊತೆಗೆ ವಸತಿ + ಸ್ಥಿರ ಮತ್ತು ಆಕರ್ಷಕ ಸಂಬಳ + PF + ಪ್ರೋತ್ಸಾಹ ಧನ ಕೊಡಲಾಗುತ್ತದೆ. Job alert ದಿನಾಂಕ- 6-1-2024 ರಂದು  ಮಧ್ಯಾಹ್ನ 12 ಗಂಟೆಯಿಂದ 2 ಗಂಟೆವರೆಗೆ ಸಂದರ್ಶನವಿದ್ದು,  ನೌಕರಿ ಹುಡುಕುತ್ತಿರುವವರು ಸಂದರ್ಶನಕ್ಕೆ ಹಾಜರಾಗಬಹುದು. ಸಂದರ್ಶನ ನಡೆಯುವ ಸ್ಥಳ: #41 ಡಿ.ವಿ.ಜಿ  ರಸ್ತೆ ಬಸವನಗುಡಿ,  ಬೆಂಗಳೂರು- 04  ಹೆಚ್ಚಿನ ಮಾಹಿತಿಗಾಗಿ ಇಲ್ಲಿರುವ  ನಂಬರಿಗೆ  ಸಂಪರ್ಕಿಸಬಹುದಾಗಿದೆ. 9740626853 ಜೊತೆಗೆ ನಿಮ್ಮ ರೆಸ್ಯೂಮ್ ನ್ನು ಮೇಲ್ ಮಾಡಬಹುದು..  ಇಮೇಲ್  – [email protected]

Read More

ಹೊಸ ವರ್ಷದ ಆರಂಭದಿಂದಲೂ ಚಿನ್ನದ ದರ ಏರಿಕೆಯಾಗುವ ಮೂಲಕ ಆಭರಣ ಪ್ರಿಯರಲ್ಲಿ ಬೇಸರಕ್ಕೆ ಕಾರಣವಾಗಿತ್ತು, ಆದರೆ ನಿನ್ನೆಯಿಂದ ಚಿನ್ನದ ದರದಲ್ಲಿ ಇಳಿಕೆಯಾಗುತ್ತಿದೆ. ಇಂದು 1 ಗ್ರಾಂ ಚಿನ್ನದ ಬೆಲೆ 5,810 ರೂ. ಆಗಿದೆ. ನಿನ್ನೆ 5,850 ರೂ. ಇದ್ದು ಇಂದು 40 ರೂ ಕಡಿಮೆಯಾಗಿದೆ. 8 ಗ್ರಾಂ ಚಿನ್ನ ಖರೀದಿಸುವುದಾದರೆ ಇಂದು 46,480 ರೂ. ನೀಡಬೇಕು. ನಿನ್ನೆ 46,800 ರೂ ಇದ್ದು ಈ ದರಕ್ಕೆ ಹೋಲಿಸಿದೆ ಇವತ್ತು 320 ರೂ ಇಳಿಕೆಯಾಗಿದೆ. ಇಂದಿನ 10 ಗ್ರಾಂ ಚಿನ್ನದ ಬೆಲೆ 58,100 ಆಗಿದ್ದರೆ, ನಿನ್ನೆ 58,500 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 400 ರೂ. ಕಡಿಮೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 5,81,000 ರೂ. ಇದೆ. ನಿನ್ನೆ 5,85,000 ರೂ. ಇದ್ದು ಈ ದರಕ್ಕೆ ಹೋಲಿಸಿದರೆ ಇಂದು 4,000 ರೂ ಕಡಿಮೆಯಾಗಿದೆ. 1 ಗ್ರಾಂ 24 ಕ್ಯಾರೆಟ್‌ ಚಿನ್ನಕ್ಕೆ ಇಂದು 6,338 ರೂ ಆಗಿದೆ. ನಿನ್ನೆ 6,382 ರೂ. ಇದ್ದು, ಈ…

Read More

ದಾವಣಗೆರೆ:- ಭಾರತ ಹಿಂದು ರಾಷ್ಟ್ರಾಆಗೇ ಆಗತ್ತೆ, ತಾಕತ್ ಇದ್ರೆ ಯತೀಂದ್ರನೂ ತಡೀಲಿ, ಮುಖ್ಯಮಂತ್ರಿನೂ ತಡೀಲಿ, ಕಾಂಗ್ರೆಸ್ ನವರು ತಡೀಲಿ ನೋಡೋಣ ಎಂದು ಕಾಂಗ್ರೆಸ್ ಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸವಾಲ್ ಹಾಕಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಯತೀಂದ್ರ ಹೇಗಂದ್ರೆ ಮರಿ ಸಿದ್ದರಾಮಯ್ಯ ಇದ್ದಂತೆ. ಇದೇ ಮಾತನ್ನ ಮುಸ್ಲಿಂ ರಾಷ್ಟ್ರ ಪಾಕಿಸ್ತಾನ್ ದಲ್ಲಿ ಹೇಳಿದ್ದರೆ ಅಲ್ಲೆ ಗುಂಡು ಹೊಡೆಯುತ್ತಿದ್ದರು. ಪಾಕಿಸ್ತಾನದಲ್ಲಿ ಗಲಭೆ, ಕೊಲೆ ಗಳು ನಡೆಯುತ್ತವೆ ಎಂದು ಒಪ್ಪಿಕೊಂಡಂತಾಯ್ತು. ಮುಸ್ಲಿಂ ಓಟ್ ಗಾಗಿ ಹಿಂದುಗಳನ್ನ ಅವಹೇಳನ ಮಾಡುವುದನ್ನ ಇವರು ಬಿಡಬೇಕು. ಅಪ್ಘಾನಿಸ್ತಾನ್, ಪಾಕಿಸ್ತಾನ್ ಹುಟ್ಟವ ಮುನ್ನವೇ ಭಾರತ ಹಿಂದು ರಾಷ್ಟ್ರ. ಇಲ್ಲಿ ಜಾತ್ಯಾತೀಯತೆ, ಸಮಾನತೆ, ಏಕತೆ ಇದೆ. ಅದರಿಂದಲೇ ನೀವು ಮಾತನಾಡುವ ಸ್ವಾತಂತ್ರ್ಯ ಸಿಕ್ಕಿದೆ. ಯತೀಂದ್ರ ಬೆಳಕಿಗೆ ಬಂದಿದ್ದು ಸಿದ್ದರಾಮಯ್ಯನಿಂದ. ಯತೀಂದ್ರ ಎಲ್ಲ ಅಧಿಕಾರಿಗಳನ್ನ ಹೇಗ ಬೇಕೋ ಹಾಕೆ ಟ್ರಾನ್ಸ ಪರ್ ಮಾಡಿಸಿಕೊಂಡಿದ್ದಾರೆ. ಇನ್ನು ನಿಮಗೆ ಹಿಂದು, ಹಿಂದುತ್ವದ ಬಗ್ಗೆ ಜ್ಞಾನವಿಲ್ಲ. ಅದರ ಬಗ್ಗೆ ಮಾತನಾಡುವ ನೈತಿಕತೆ ಇತನಿಗೆ ಇಲ್ಲ…

Read More

ಚಾಮರಾಜನಗರ:- ಗುಂಡ್ಲುಪೇಟೆಯಿಂದ ಕೇರಳಕ್ಕೆ ತರಕಾರಿ ಹೊತ್ತು ಸಾಗುತ್ತಿದ್ದ ಕೆ ಎಲ್ 85 – ಬಿ 2213 ನೋಂದಣಿಯ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡಿದಿರುವ ಘಟನೆ ಜರುಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಿಂದ ಕೇರಳಕ್ಕೆ ತರಕಾರಿ ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿದ ಹಿನ್ನೆಲೆ ಗುಂಡ್ಲುಪೇಟೆ ಕೇರಳ ರಸ್ತೆ ನಡುವೆ ಪಲ್ಟಿಯಾಗಿದ್ದು , ಪಿಕಪ್ ವಾಹನದಲ್ಲಿದ್ದ ತರಕಾರಿಗಳೆಲ್ಲ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿವೆ. ವಿಚಾರ ತಿಳಿಯುತ್ತಿದ್ದಂತೆ ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ವಾಹನವನ್ನ ತೆರವುಗೊಳಿಸಿ ಸಂಚಾರಕ್ಕೆ ಅನುವುಮಾಡಿಕೊಟ್ಟಿದ್ದಾರೆ.

Read More

ಕಂಪ್ಲಿ:- ತಾಲೂಕು ಚಿಕ್ಕಜಾಹೀನೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಲಿಂಗತ್ವದ ತರಬೇತಿಯನ್ನು ರೀಡ್ಸ್ ಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ತರಬೇತಿಯಲ್ಲಿ ಒಟ್ಟು –44 ವಿದ್ಯಾರ್ಥಿಗಳು ಮತ್ತು ರೀಡ್ಸ್ ಸಂಸ್ಥೆಯ ಯೋಜನಾ ವ್ಯವಸ್ಥಾಪಕರು ಸಂಪನ್ಮೂಲ ವ್ಯಕ್ತಿಯಾಗಿ ಪ್ರವೀಣ ರವರು ನಡೆಸಿಕೊಟ್ಟರು, ತಾಲೂಕು ಸಂಯೋಜಕರು ನಾಗರಾಜ್ ರವರು ನಿರೂಪಣೆ ಮಾಡಿದರು. ಶಾಲೆಯ ಮುಕ್ಯೋಪಾಧ್ಯಾಯರು ಭಾಗವಹಿಸಿದ್ದರು. ನಾವು ಚಿಕ್ಕ ವಯಸ್ಸಿನಿಂದಲೇ ಹೆಣ್ಣು ಮತ್ತು ಗಂಡು ಎಂಬ ಭೇದಭಾವ ಬಿತ್ತುತ್ತಾ ಸಮಾಜದಲ್ಲಿ ಲಿಂಗ ಅಸಮಾನತೆಗೆ ಕಾರಣೀಭೂತರಾಗಿದ್ದೇವೆ. ಆಧುನಿಕ ಯುಗದಲ್ಲೂ ಮೌಡ್ಯತೆಯನ್ನು ಮೆರೆಯುತ್ತಿದ್ದೇವೆ. ಮಹಿಳೆಯರ ಭಾಗವಹಿಸುವಿಕೆ ಇಲ್ಲದೆ ಯಾವುದೇ ಕ್ಷೇತ್ರದಲ್ಲೂ ಸುಸ್ಥಿರ ಅಭಿವೃದ್ಧಿಯನ್ನು ನಿರೀಕ್ಷೆ ಮಾಡಲು ಸಾದ್ಯವಿಲ್ಲ. ಸಮಾಜದಲ್ಲಿರುವ ಲಿಂಗ ತಾರತಮ್ಯ ಮತ್ತು ಅಸಮಾನತೆಯನ್ನು ಹೋಗಲಾಡಿಸಲು ಇಂತಹ ತರಬೇತಿ ಕಾರ್ಯಕ್ರಮಗಳು ತುಂಬಾ ಸಹಕಾರಿಯಾಗಿದೆ ಎಂದರು. ನೂರಾರು ವರ್ಷಗಳಿಂದ ಬಂದಿರುವ ಅವೈಜ್ಞಾನಿಕ ರೂಢಿಬದ್ದ ಸಂಪ್ರದಾಯಗಳನ್ನು ಬದಲಾವಣೆ ತರುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳು ಕಾರ್ಯಪ್ರವೃತ್ತರಾಗಬೇಕು. ತಾಯಿಯ ಗರ್ಭದಲ್ಲಿರುವ ಮಗುವಿನ ಆರೋಗ್ಯ ಮತ್ತು ಆರೈಕೆಯಿಂದ ಹಿಡಿದು ವೃದ್ಯಾಪ್ಯದವರೆಗೂ ಮತ್ತು ಆ ನಂತರವೂ ಕೂಡ ಗ್ರಾಮ…

Read More

ಚಾಮರಾಜನಗರ:- ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಮಹಿಳಾ ಸಿಬ್ಬಂದಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹಿನ್ನೆಲೆ, ನ್ಯಾಯಾಂಗ ಬಂಧನದಲ್ಲಿರುವ ಪ್ರಾಧಿಕಾರದ ಮಹಾದೇವಸ್ವಾಮಿ ಅಲಿಯಾಸ್ ಚಿಕ್ಕಿನಉಂಡೆ ಎಂಬುವರನ್ನು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಮಹದೇವಸ್ವಾಮಿ ಆಲಿಯಾಸ್ ಚಿಕ್ಕಿನಉಂಡೆ ಮಹಿಳಾ ನೌಕರರೊಂದಿಗೆ ಬಹಳ ಅಸಭ್ಯವಾಗಿ ವರ್ತಿಸುತ್ತಾರೆ ಎಂದು ಮಹಿಳಾ ಸಿಬ್ಬಂದಿ ದೂರು ನೀಡಿದ್ದರು. ದೂರಿನ ಅನ್ವಯ ಮಹದೇವಸ್ವಾಮಿ ಮೇಲೆ ಐಪಿಸಿ 354 ಎ ಸಿ 504, 506 509 ಕಾನೂನಿನಡಿ ಪ್ರಕರಣ ದಾಖಲಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈ ಮೇಲಿನ ಎಲ್ಲಾ ಕಾರಣಗಳ ಹಿನ್ನೆಲೆ ಅವಿಧೇಯತೆ, ದುರ್ನಡತೆ, ಅಸಮರ್ಥತೆ ಕರ್ತವ್ಯದಲ್ಲಿ ನಿರ್ಲಕ್ಷತೆ ಶ್ರೀ ಕ್ಷೇತ್ರದ ಪವಿತ್ರತೆಗೆ ದಕ್ಕೆ ಉಂಟು ಮಾಡಿರುವ ಮಹದೇವಸ್ವಾಮಿ ರವರನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯದತ್ತಿಗಳ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Read More

ಗದಗ:- ಥರ್ಡ್ ಐ ಕ್ಯಾಮರಾದಿಂದ ತಪ್ಪಿಸಿಕೊಳ್ಳುವ ಬೈಕ್ ಸವಾರರಿಗೆ ಪೊಲೀಸ್ ಇಲಾಖೆ ಬಿಸಿ ಮುಟ್ಟಿಸಿದ್ದು, ಸುಮಾರು 300 ಕ್ಕೂ ಹೆಚ್ಚು ಬೈಕ್ ಗಳನ್ನ ಸೀಜ್ ಮಾಡಿದ್ದಾರೆ. ಗದಗನಲ್ಲಿ ಕಳ್ಳದಾರಿ ಹಿಡಿದಿದ್ದ ಬೈಕ್ ಸವಾರರಿಗೆ ಸ್ಪೆಷಲ್ ಡ್ರೈವ್ ಮೂಲಕ ಚಾಟಿ ಬೀಸಲಾಗಿದ್ದು, ಸಿಪಿಐ, ಪಿಎಸ್ಐ ಗಳ ನೇತೃತ್ವದ 6 ತಂಡಗಳ ಮೂಲಕ ಸ್ಪೆಷಲ್ ಡ್ರೈವ್ ನಡೆದಿದೆ. ಗದಗ ನಗರದ 6 ಪ್ರಮುಖ ಸರ್ಕಲ್ ಗಳಲ್ಲಿ ಢಿಫೆಕ್ಟಿವ್ ನಂಬರ್ ಪ್ಲೇಟ್ ಬೈಕ್ ಗಳಿಗೆ ದಂಡ ವಿಧಿಸಲಾಗಿದೆ. ಕ್ಯಾಮರಾ ಕಣ್ಣಿನಿಂದ ತಪ್ಪಿಸಿಕೊಳ್ಳಲು ನಂಬರ್ ಫ್ಲೇಟ್ ಗೆ ಸ್ಟಿಕರ್ ಅಂಟಿಸಿರೋ ಬೈಕ್ ಸವಾರರಿಂದ ದಂಡ ವಸೂಲಿ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದೇ, ನಂಬರ್ ಪ್ಲೇಟ್ ಡಿಫೆಕ್ಟಿವ್ ಮಾಡಿ ಓಡಾಡುತ್ತಿದ್ದ ಬೈಕ್ ಸವಾರರ ವಿರುದ್ಧ ಕೇಸ್ ಹಾಕಲಾಗಿದೆ. ನಂಬರ್ ಪ್ಲೇಟ್ ಹೈಡ್ ಮಾಡಿ, ಫೇಕ್ ಮಾಡಿ ಓಡಾಡೋವ್ರ ಮೇಲೆ ಕ್ರಿಮಿನಲ್ ಕೇಸ್ ಗೆ ಪೊಲೀಸ್ ಇಲಾಖೆ ಮುಂದಾಗಿದೆ. ಒಂದೊಂದು ಪಾಯಿಂಟ್ನಲ್ಲಿ ಸುಮಾರು 50 ರಿಂದ 100 ಬೈಕ್ ಗಳ…

Read More

ಹುಬ್ಬಳ್ಳಿ: ನಿಂತಿದ್ದ ಎರಡು ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜ.6ರ ಶನಿವಾರ ಬೆಳಗಿನ ಜಾವ ಸಂಭವಿಸಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆಳ್ಳಿಗಟ್ಟಿ ಕ್ರಾಸ್ ನ ಬಳಿ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಹಾಸನ ಮೂಲದ ಮೂವರು ಹಾಗೂ ಬೆಂಗಳೂರಿನ ಒಬ್ಬರು ಮೃತ ಪಟ್ಟಿದ್ದು, ಇಬ್ಬರಿಗೆ ಗಾಯಗಳಾಗಿವೆ. ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಎರಡು ಕಾರುಗಳು ನಿಂತಿದ್ದಾಗ ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಶವಗಳನ್ನು ಹೊರ ತೆಗೆಯದ ಸ್ಥಿತಿಯಲ್ಲಿದೆ. ಹೆದ್ದಾರಿ ಪೆಟ್ರೋಲಿಂಗ್ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಇಬ್ಬರನ್ನು ಕಿಮ್ಸ್ ಆಸ್ಪತ್ರೆಗೆ ಸೇರಿಸಿದ್ದಾರೆ.

Read More