ಬೆಂಗಳೂರು:- ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. https://ainlivenews.com/todays-indo-pak-war-indian-fans-turn-to-god/ ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಹಿನ್ನೆಲೆ ಪವರ್ ಕಟ್ ಇರಲಿದೆ. ಅದರಂತೆ ಬ್ಯಾಡರಹಳ್ಳಿ, ಬಿಇಎಲ್ ಲೇಔಟ್ 2ನೇ ಹಂತ, ಗಿಡ್ಡದಕೋನೇನಹಳ್ಳಿ, ಮುದ್ದಿನಪಾಳ್ಯ, ಬಿಡಿಎ 8 ಮತ್ತು 9ನೇ ಬ್ಲಾಕ್, ರೈಲ್ವೆ ಲೇ ಔಟ್, ಉಪಕಾರ್ ಲೇಔಟ್, ಬಾಲಾಜಿ ಲೇ ಔಟ್, ಭವಾನಿ ಲೇಔಟ್, ಗೊಲ್ಲರಹಟ್ಟಿ, ರತ್ನನಗರ, ಮಾರ್ಡನ್ ಲೇಔಟ್, ಡಿ ಗ್ರೂಪ್ ಲೇಔಟ್, ಹೇರೋಹಳ್ಳಿ, ತುಂಗಾನಗರ, ಕೇಪೇಗೌಡ ನಗರ, ಪೋಲಿಸ್ ಕ್ವಾಟ್ರಸ್, ಬೈರವೇಶ್ವರನಗರ ಇಂಡಸ್ಟ್ರೀಯಲ್ ಎಸ್ಟೇಟ್. ಹೊಸಹಳ್ಳಿ, ಚಿಕ್ಕ ಗೊಲ್ಲರಹಟ್ಟಿ, ಕಲ್ಲಹಳ್ಳಿ, ಹೊಸಹಳ್ಳಿ, ಬಿಎಂಟಿಸಿ ಡಿಪೋ, ಅನಿಕೇತನನಗರ, ಪಂಚಮುಖಿ ಲೇಔಟ್, ನಡೇಕೇರಪ್ಪ ಇಂಡಸ್ಟ್ರೀಯಲ್ ಎಸ್ಟೇಟ್, ಮಹದೇಶ್ವರನಗರ, ಮಾರುತಿ ನಗರ, ನಾಗರಹೊಳೆ ನಗರ, ಮುನೇಶ್ವರ ನಗರ, ಸಂಜೀವ್ ನಗರ, ಅನ್ನಪೂರ್ಣೇಶ್ವರಿ ನಗರ, ಸುಂಕದಕಟ್ಟೆ ಇಂಡಸ್ಟ್ರೀಯಲ್ ಏರಿಯಾ, ಚಂದನ ಬಡಾವಣೆ, ಕೆಬ್ಬಹಳ್ಳ, ರಾಜೀವ್ ಗಾಂಧಿನಗರ, ಚನ್ನಪ್ಪ ಲೇಔಟ್, ಶ್ವೀನಿವಾಸನಗರ, ಪೈಪ್ ಲೈನ್ ರೋಡ್. ಮುತ್ತುರಾಯ ಬಡಾವಣೆ,…
Author: AIN Author
ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿ ಆಗಲಿದ್ದು, ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾದು ಕುಳಿತಿದ್ದಾರೆ. https://ainlivenews.com/heart-attack-young-man-dies-in-parked-car/ ಇನ್ನೂ ಇಂದು ಹೈವೋಲ್ಟೇಜ್ ಪಂದ್ಯ ಇರುವ ಹಿನ್ನೆಲೆ, ಇಂಡಿಯನ್ ಕ್ರಿಕೆಟ್ ಫ್ಯಾನ್ಸ್, ದೇವರ ಮೊರೆ ಹೋಗಿದ್ದಾರೆ. ನಗರದ ವಿವಿಧ ದೇವಾಲಯಗಳಲ್ಲಿ ಪೂಜೆ ಸಲ್ಲಿಸುತ್ತಿದ್ದು, ಭಾರತ ಗೆಲುವಿಗಾಗಿ ವಿಶೇಷ ಹರಕೆಯ ಪೂಜೆ ಸಲ್ಲಿಕೆ ಮಾಡಿದ್ದಾರೆ. ಮೈಸೂರು ರಸ್ತೆಯ ಗಾಳಿ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಕೆ ಮಾಡಲಾಗಿದ್ದು, ವಂದೇ ಮಾತರಂ ಸಂಘಟನೆಯಿಂದ ಪೂಜೆ ಸಲ್ಲಿಕೆ ಮಾಡಲಾಗಿದೆ. 101ತೆಂಗಿನಕಾಯಿ ಹೊಡೆಯುವ ಮೂಲಕ ಗೆಲುವಿಗಾಗಿ ದೇವರಲ್ಲಿ ಪಾರ್ಥನೆ ಮಾಡಿದ್ದಾರೆ. ಇದೇ ವೇಳೆ ಕ್ರಿಕೆಟ್ ಪ್ರೇಮಿ ಶಿವಕುಮಾರ್ ನಾಯ್ಕ್ ಹೇಳಿಕೆ ನೀಡಿದ್ದು, ಪ್ರತಿ ಮ್ಯಾಚ್ ವೇಳೆಯಲ್ಲೂ ವಿಶೇಷ ಪೂಜೆ ಸಲ್ಲಿಸುತ್ತೇವೆ. ಭಾರತ ತಂಡಕ್ಕೆ ಯಾವುದೇ ದೃಷ್ಟಿ ಬಿದ್ದಿದ್ರು ಹೋಗಬೇಕು ಅಂತ ಪೂಜೆ ಸಲ್ಲಿಸುತ್ತೇವೆ. ಪಾಕಿಸ್ತಾನ ನಮ್ಮ ಬದ್ದವೈರಿ ತಂಡ. ಪಾಕಿಸ್ತಾನವನ್ನ ಭಾರತ ತಂಡ ಸೋಲಿಸಬೇಕು ಅಂತ ಪೂಜೆ ಸಲ್ಲಿಸುತ್ತಿದ್ದೇವೆ. 101 ತೆಂಗಿನಕಾಯಿ, ನಿಂಬೆಹಣ್ಣು ಹೊಡೆಯುವ ಮೂಲಕ…
ಬೆಂಗಳೂರು:- ನಗರದ ಬ್ರೂಕ್ ಫೀಲ್ಡ್ ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ಕಾರಿನಲ್ಲಿ ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಘಟನೆ ಜರುಗಿದೆ. https://ainlivenews.com/wpl-2025-up-warriors-beat-delhi-capitals-by-33-runs/ ತನ್ನ ಗ್ರ‍್ಯಾಂಡ್ ಐಟೆನ್ ಕಾರಿನಲ್ಲಿ ಮೃತಪಟ್ಟಿದ್ದು, ಮೃತದೇಹ ನೋಡಿದ ಅಪರಿಚಿತ ವ್ಯಕ್ತಿ ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಫೆ.20ರಂದು ಈ ಅವಘಡ ಸಂಭವಿಸಿದ್ದು, ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಡಬ್ಲುಪಿಎಲ್ನ 8ನೇ ಪಂದ್ಯವನ್ನು 33 ರನ್ ಗಳ ಅಂತರದಿಂದ ಗೆದ್ದುಕೊಂಡಿತು. https://ainlivenews.com/bbmps-our-road-2025-program-concludes-successfully/ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಯುಪಿ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 177 ರನ್ ಕಲೆ ಹಾಕಿತು. ಈ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ 19.3 ಓವರ್‌ಗಳಲ್ಲಿ 144 ರನ್‌ಗಳಿಗೆ ಸರ್ವಪತನ ಕಂಡಿತು. ಈ ಗೆಲುವಿನೊಂದಿಗೆ ಯುಪಿ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಬಡ್ತಿ ಪಡೆದಿದೆ. ಡೆಲ್ಲಿ ಮೂರನೇ ಸ್ಥಾನದಲ್ಲಿದೆ. ಯುಪಿ ವಾರಿಯರ್ಸ್ ಪರ ಅಬ್ಬರದ ಬ್ಯಾಟಿಂಗ್ ನಡೆಸಿದ ಚಿನ್ಲೆ ಹೆನ್ರಿ ಅಬ್ಬರಿಸಿದರು. ಇವರು ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ವೇಗವಾಗಿ ಅರ್ಧಶತಕ ಬಾರಿಸಿದ ಹಿರಿಮೆಯನ್ನು ತಮ್ಮದಾಗಿಸಿಕೊಂಡರು. ಇವರು 23 ಎಸೆತಗಳಲ್ಲಿ 2 ಬೌಂಡರಿ, 8 ಸಿಕ್ಸರ್ ಸಹಾಯದಿಂದ 62 ರನ್ ಬಾರಿಸಿ ಔಟ್ ಆದರು. ಇವರು ತಮ್ಮ ಅರ್ಧಶತಕವನ್ನು 18ನೇ ಎಸೆತದಲ್ಲಿ ಪುರ್ಣಗೊಳಿಸಿದರು. ಈ ಮೂಲಕ ಮಹಿಳಾ ಲೀಗ್‌ನಲ್ಲಿಇತಿಹಾಸವನ್ನು ಬರೆದರು.…
ಬೆಂಗಳೂರು: ಫೆ. 22: ಬಿಬಿಎಂಪಿಯು ಹಮ್ಮಿಕೊಂಡಿದ್ದ ಮೂರು ದಿನಗಳ “ನಮ್ಮ ರಸ್ತೆ-2025” ಕಾರ್ಯಗಾರ, ಪ್ರದರ್ಶನ ಹಾಗೂ ಸಮಾವೇಶ ಕಾರ್ಯಕ್ರಮವು ಇಂದು ಯಶಸ್ವಿಯಾಗಿ ಮುಕ್ತಾಯಗೊಂಡಿತು. https://ainlivenews.com/outrage-of-kannada-activists-who-smeared-black-ink-on-a-bus-in-maharashtra/ ನಮ್ಮ ರಸ್ತೆ-2025 ಫೆ. 20, 21 ಹಾಗೂ 22 ರಂದು ನಡೆದ ಕಾರ್ಯಕ್ರಮದಲ್ಲಿ ಹಲವಾರು ವಿಷಯಗಳ ಕುರಿತು ಕಾರ್ಯಗಾರಗಳು, ಸಮಾವೇಶಗಳು ನಡೆಯಿತು. ಬಿಬಿಎಂಪಿಯೊಂದಿಗೆ ಡಬ್ಲ್ಯೂ.ಆರ್.ಐ ಇಂಡಿಯಾ ಜ್ಞಾನ ಪಾಲುದಾರರಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ 5,000ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದು, ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಆಯೋಜಿಸಿದ್ದ ಪ್ರದರ್ಶನವನ್ನು ಸಾರ್ವಜನಿಕರು ವೀಕ್ಷಿಸಿದರು. ಸುಸ್ಥಿರ ನಗರ ಸಾರಿಗೆ ಪರಿಹಾರಗಳನ್ನು ಚರ್ಚಿಸಲು ಸರ್ಕಾರ ಮತ್ತು ನಾಗರಿಕ ಸಮಾಜ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ಮತ್ತು ವೈವಿಧ್ಯಮಯ ನಾಗರಿಕರು ಮತ್ತು ಪಾಲುದಾರರಲ್ಲಿ ಕಾರ್ಯಕ್ರಮಲ್ಲಿ ಪಾಲ್ಗೊಂಡಿದ್ದರು. ಮೊದಲನೇ ದಿನ: ಸನ್ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ ಶಿವಕುಮಾರ್ ರವರು ನಮ್ಮ ರಸ್ತೆ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡುವ ಜೊತೆಗೆ, ನಗರದಲ್ಲಿ ಯಾವುದೇ ಕಾಮಗಾರಿ ಕೈಗೆತ್ತಿಕೊಂಡರೂ ಒಂದೇ ಮಾದರಿಯ ವಿನ್ಯಾಸ…
ಬೆಂಗಳೂರು:- ಬೆಂಗಳೂರಿನ ಸುಬ್ರಮಣ್ಯಪುರದಲ್ಲಿ ಯುವತಿ ಪ್ರೀತಿ ನಿರಾಕರಿಸಿದ್ದಕ್ಕಾಗಿ ಆಕೆಯ ಕಾರು ಹಾಗೂ ಬೈಕ್‌ಗಳಿಗೆ ಬೆಂಕಿ ಹಚ್ಚಿರುವ ಘಟನೆ ಜರುಗಿದೆ. https://ainlivenews.com/countdown-to-india-pak-high-voltage-match-expectations-rise-on-rohit-virat/ ಆರೋಪಿಯನ್ನು ರಾಹುಲ್ ಎಂದು ಗುರುತಿಸಲಾಗಿದೆ. ಸ್ನೇಹಿತರ ಜೊತೆ ಬಂದು ಬೆಂಕಿ ಹಚ್ಚಿ, ಹಲ್ಲೆ ಎಸಗಿದ್ದಾರೆ. ಯುವತಿ ತನ್ನ ಪ್ರೀತಿಯನ್ನು ಪದೇ ಪದೇ ನಿರಾಕರಿಸುತ್ತಿದ್ದರಿಂದ ರೊಚ್ಚಿಗೆದ್ದ ರಾಹುಲ್ ಹಾಗೂ ಗ್ಯಾಂಗ್ ಕೃತ್ಯ ಎಸಗಿದ್ದಾರೆ. ಮೂರು ನಾಲ್ಕು ಬೈಕ್‌ಗಳಲ್ಲಿ ಗ್ಯಾಂಗ್ ಸಮೇತ ಬಂದು, ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯ ಮುಂದಿದ್ದ ಮನೆಯ ಮುಂದಿನ ಬೈಕ್ ಹಾಗೂ ಎರಡು ಕಾರುಗಳಿಗೆ ಬೆಂಕಿ ಇಟ್ಟಿದ್ದಾರೆ. ಬಳಿಕ ಅಲ್ಲಿಂದ ಸುಬ್ರಮಣ್ಯಪುರ ಶ್ರೀನಿಧಿ ಅಪಾರ್ಟ್ಮೆಂಟ್ ಬಳಿ ತೆರಳಿದ್ದಾರೆ. ಈ ವೇಳೆ ಅಪಾರ್ಟ್ಮೆಂಟ್ ಬಳಿಯಿದ್ದ ಸೆಕ್ಯುರಿಟಿ ಗಾರ್ಡ್ ತಡೆಯಲು ಬಂದಾಗ ಆತನ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಬಳಿಕ ಅಲ್ಲಿದ್ದ ಕಾರುಗಳಿಗೆ ಕೂಡ ಬೆಂಕಿ ಇಟ್ಟಿದ್ದಾರೆ.
ಭಾರತ ಹಾಗೂ ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ದುಬೈನ ಮೈದಾನ ಸಿದ್ಧವಾಗಿದೆ. ಚಾಂಪಿಯನ್ಸ್ ಟ್ರೋಫಿಯ “ಎ” ಗುಂಪಿನ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಭಾರತ ಈ ಪಂದ್ಯದಲ್ಲಿ ಗೆಲುವು ಸಾಧಿಸಿ ನಾಕೌಟ್ ಹಂತಕ್ಕೆ ಪ್ರವೇಶಿಸುವ ಕನಸು ಕಾಣುತ್ತಿದೆ. ಇನ್ನು ಪಾಕಿಸ್ತಾನಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. https://ainlivenews.com/ladies-this-seat-is-now-reserved-for-men-only-good-news-from-ksrtc-for-male-passengers/ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಏಕದಿನ ಕ್ರಿಕೆಟ್ನಲ್ಲಿ ಇದುವರೆಗೆ 135 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡ ಗೆದ್ದಿರುವುದಕ್ಕಿಂತ ಹೆಚ್ಚಿನ ಪಂದ್ಯಗಳನ್ನು ಪಾಕಿಸ್ತಾನ್ ತಂಡವೇ ಗೆದ್ದಿದೆ. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲೂ ಭಾರತದ ವಿರುದ್ಧ ಪಾಕ್ ಪಡೆ ಹೆಚ್ಚಿನ ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಅಂದರೆ 135 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಕೇವಲ 57 ಮ್ಯಾಚ್ಗಳಲ್ಲಿ ಮಾತ್ರ ಗೆದ್ದರೆ, ಅತ್ತ ಪಾಕಿಸ್ತಾನ್ 73 ಪಂದ್ಯಗಳಲ್ಲಿ ಭಾರತ ತಂಡಕ್ಕೆ ಸೋಲುಣಿಸಿದೆ. ಇನ್ನು ಐದು ಪಂದ್ಯಗಳು ಫಲಿತಾಂಶರಹಿತವಾಗಿತ್ತು. ಇನ್ನು ಭಾರತ ಮತ್ತು ಪಾಕಿಸ್ತಾನ್ ನಡುವಣ ಕೊನೆಯ ಐದು ಏಕದಿನ ಪಂದ್ಯಗಳ ಫಲಿತಾಂಶವನ್ನು ಮಾತ್ರ…
ಬೆಂಗಳೂರು:- ಪುರುಷ ಪ್ರಯಾಣಿಕರಿಗೆ KSRTC ಗುಡ್ ನ್ಯೂಸ್ ಕೊಟ್ಟಿದೆ. https://ainlivenews.com/father-died-after-daughters-marriage-a-heartbreaking-incident-in-telangana/ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಶಕ್ತಿ ಯೋಜನೆ ಜಾರಿಗೆ ಬಂದ ಮೇಲೆ ಕೆ.ಎಸ್.ಆರ್.ಟಿ.ಸಿ ಬಸ್ ಗಳಲ್ಲಿ ಮಹಿಳೆಯರು ಹೆಚ್ಚು ಓಡಾಡುವುದಕ್ಕೆ ಶುರು ಮಾಡಿದ್ದು, ಪುರುಷರಿಗೆ ಬಸ್ ಗಳಲ್ಲಿ ಸೀಟಗಳು ಸಿಗುತ್ತಿರಲಿಲ್ಲ. ಈ ಕಾರಣದಿಂದ ಮೈಸೂರಿನ ವಿಷ್ಣುವರ್ಧನ್ ಎಂಬುವವರು ಎರಡು ಮೂರು ಬಾರಿ ದೂರು ನೀಡಿದ್ದರು. ಕೆ.ಎಸ್.ಆರ್.ಟಿ.ಸಿ ಸಂಸ್ಥೆಯ ಬಸ್‌ಗಳಲ್ಲಿ ಬಹುತೇಕ ಮಹಿಳೆಯರೇ ಕುಳಿತುಕೊಂಡಿರುತ್ತಾರೆ. ನಮಗೆ ಸೀಟು ಸಿಗುತ್ತಿಲ್ಲ, ಹೀಗಾಗಿ ನಮಗೂ ಕುಳಿತುಕೊಳ್ಳಲು ಸೀಟು ಕೊಡಿ ಎಂದು ದೂರಿನಲ್ಲಿ ಮನವಿ ಮಾಡಿದ್ದರು. ವಿಷ್ಣುವರ್ಧನ್ ಅವರ ಈ ದೂರಿನ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಮೈಸೂರು ಘಟಕದಿಂದ ಕಾರ್ಯಾಚರಣೆಗೊಳ್ಳುವ ಎಲ್ಲಾ ಬಸ್‌ಗಳಲ್ಲಿಯೂ ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಅಂತ ಆಯಾ ಘಟಕಗಳ ನಿಯಂತ್ರಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು:- ನಗರದಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಕಾಂಗ್ರೆಸ್ ಮುಖಂಡನ ಬರ್ಬರ ಕೊಲೆ ನಡೆದಿರುವ ಘಟನೆ ಅಶೋಕನಗರದ ಗರುಡಾ ಮಾಲ್ ಬಳಿ ಜರುಗಿದೆ. https://ainlivenews.com/resignation-in-the-mouth-of-the-home-minister-what-is-the-secret/ ಹೈದರ್ ಅಲಿ ಶನಿವಾರ ರಾತ್ರಿ ಲೈವ್ ಬ್ಯಾಂಡ್ ಕಾರ್ಯಕವೊಂದನ್ನು ಮುಗಿಸಿಕೊಂಡು ಸ್ನೇಹಿತನ ಜೊತೆಗೆ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡ ಹೈದರ್ ಅಲಿಯ ಮೇಲೆ ಹಲ್ಲೆ ಮಾಡಿ, ಪರಾರಿಯಾಗಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿ ಅಶೋಕ ನಗರ ಠಾಣೆ ಪೊಲೀಸರು ಗಾಯದ ಮಡುವಲ್ಲಿ ಬಿದ್ದ ಹೈದರ್ ಅಲಿಯನ್ನು ಕೂಡಲೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಅಷ್ಟರಲ್ಲಾಗಲೇ ಹೈದರ್ ಅಲಿ ಮೃತಪಟ್ಟಿದ್ದನು. ವಿಚಾರ ತಿಳಿದು ಹೈದರ್ ಅಲಿಯ ಬೆಂಬಲಿಗರು ಬೌರಿಂಗ್ ಆಸ್ಪತ್ರೆ ಬಳಿ ಜಮಾಯಿಸಿ ಲಾಂಗು, ಮಚ್ಚು ಹಿಡಿದು ಝಳಪಿಸಿದರು. ಬೌರಿಂಗ್ ಆಸ್ಪತ್ರೆ ಗೇಟ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿದ್ದ ಅಶೋಕನಗರ ಠಾಣೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.
ಮಂಗಳೂರು:- ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಬಿದ್ದಿದ್ದಾರೆ. https://ainlivenews.com/heart-attack-engineering-student-dies-of-heart-attack/ ಬಂಟರ ಸಂಘದ ವತಿಯಿಂದ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕ್ರೀಡಾಕೂಟದಲ್ಲಿ ಶಾಸಕ ಅಶೋಕ್ ಕುಮಾರ್ ಅವರು ಭಾಗಿಯಾಗಿದ್ದರು. ಆಟವಾಡುತ್ತಿದ್ದಾಗ ಕ್ರೀಸ್ ಮುಟ್ಟಲು ಓಡುತ್ತಿದ್ದ ವೇಳೆ ಜಾರಿ ಬಿದ್ದಿದ್ದಾರೆ. ಈ ವೇಳೆ ಸಹ ಆಟಗಾರರು ಎತ್ತಿದ್ದಾರೆ.