Author: AIN Author

ಬೆಂಗಳೂರು: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ನಾಯಕತ್ವದಲ್ಲಿ ಕರ್ನಾಟಕದ ಕಾಂಗ್ರೆಸ್‌ ಅಂತ್ಯ ಕಾಣುತ್ತದೆ ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಭವಿಷ್ಯ ನುಡಿದಿದ್ದಾರೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 60 ವರ್ಷ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ನನಗೆ ಇವರು ಹೇಳ್ತಾರೆ. ಇವತ್ತು ಹೇಳ್ತೀನಿ ಕರ್ನಾಟಕದಲ್ಲಿ ಇವರು ಅಂತ್ಯ ಕಾಣ್ತಾರೆ. ನಾವು ಸೋಲಿಸಿಯೇ ಸೋಲಿಸ್ತೀವಿ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ಕರ್ನಾಟಕದ ಕಾಂಗ್ರೆಸ್ ಅಂತ್ಯ ಕಾಣುತ್ತೆ ಎಂದರು ಅಲ್ಲಿ ಮೋದಿ ಅವರು ಶ್ರೀರಾಮ ಅಂತಾರೆ. ಉಪವಾಸ, ನದಿ ಸ್ನಾನ ಇವೆಲ್ಲ ಮಾಡ್ತಾರೆ. ಇಲ್ಲಿ ಇವರಿಗೆ ಸಿದ್ದರಾಮ ಮಾತ್ರ. ಸಿದ್ದರಾಮ ಹೆಸರಿನಲ್ಲಿ NDA ಸೋಲಿಸಿ 20 ಸೀಟು ಗೆಲ್ತೀವಿ ಅನ್ನೋ ಹಿನ್ನೆಲೆಯಲ್ಲಿ ಇವೆಲ್ಲ ಸೃಷ್ಟಿ ಮಾಡ್ತಿದ್ದಾರೆ. 20 ಸೀಟು ಗೆಲ್ಲೋದು ಕನಸು ಮಾಡ್ತಿದ್ದಾರೆ. ಅದೆಲ್ಲ ಕನಸು ಮಾತ್ರ. ಈ‌ ಬಾರಿ ಮೋದಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ಎಲ್ಲರ ನಿರೀಕ್ಷೆ ಮೀರಿ‌ ಜನ ಮೈತ್ರಿಗೆ ತೀರ್ಪು ಕೊಡ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಆಗಿರೋ‌ ಬಗ್ಗೆ ಯಾವುದೇ…

Read More

ನವದೆಹಲಿ: ಹರಿಯಾಣ (Haryana) ಮತ್ತು ಪಂಜಾಬ್‍ನಲ್ಲಿ (Punjab) ಮಾಜಿ ಶಾಸಕ ಹಾಗೂ ಹಾಲಿ ಶಾಸಕರ ಮನೆ ಮೇಲೆ ಇಡಿ (Enforcement Directorate) ಅಧಿಕಾರಿಗಳು ನಡೆಸಿದ ದಾಳಿಯ ವೇಳೆ 5 ಕೋಟಿ ರೂ. ಹಣ, ವಿದೇಶಿ ನಿರ್ಮಿತ ಅಕ್ರಮ ಶಸ್ತ್ರಾಸ್ತ್ರ, 300 ಕಾಟ್ರಿಡ್ಜ್‌ಗಳನ್ನು, 100 ಮದ್ಯದ ಬಾಟಲಿಗಳು ಸೇರಿದಂತೆ 4 ರಿಂದ 5 ಕೆಜಿ ತೂಕದ ಮೂರು ಚಿನ್ನದ ಬಿಸ್ಕೆಟ್‍ಗಳು ಪತ್ತೆಯಾಗಿವೆ. ಅಕ್ರಮ ಗಣಿಗಾರಿಕೆ ಆರೋಪದ ಪ್ರಕರಣದಲ್ಲಿ ಭಾರತೀಯ ರಾಷ್ಟ್ರೀಯ ಲೋಕದಳದ (ಐಎನ್‍ಎಲ್‍ಡಿ) ಮಾಜಿ ಶಾಸಕ ದಿಲ್‍ಬಾಗ್ ಸಿಂಗ್, ಕಾಂಗ್ರೆಸ್ ಶಾಸಕ (Congress MLA) ಸುರೇಂದರ್ ಪನ್ವಾರ್ (Surender Panwar) ಮತ್ತು ಅವರ ಆಪ್ತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ತನಿಖಾ ಸಂಸ್ಥೆ ಶೋಧ ನಡೆಸುತ್ತಿದೆ. https://ainlivenews.com/1603-vacancies-in-indian-oil-company-today-is-the-last-day-apply-soon/ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‍ಜಿಟಿ) ಗಣಿಗಾರಿಕೆಯನ್ನು ನಿಷೇಧಿಸಿದ ನಂತರ ಯಮುನಾನಗರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬಂಡೆಗಳು, ಜಲ್ಲಿ ಮತ್ತು ಮರಳು ಅಕ್ರಮ ಗಣಿಗಾರಿಕೆಯ ಕುರಿತು ತನಿಖೆ ನಡೆಸಲು ಹರಿಯಾಣ ಪೊಲೀಸರು ಅನೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು. ಬಳಿಕ ತನಿಖಾ ಸಂಸ್ಥೆಯು…

Read More

ಬೆಂಗಳೂರು: ಕರಸೇವಕರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ.ಇದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇವತ್ತು ಅಯೋಧ್ಯೆ ಉದ್ಘಾಟನೆ ಬಗ್ಗೆ ದೇಶದಲ್ಲಿ ಚರ್ಚೆ ಆಗ್ತಿದೆ. ನಮ್ಮ ರಾಜ್ಯದಲ್ಲಿ ಹಲವು ಸಮಸ್ಯೆ ಎದುರಿಸುತ್ತಿದ್ದೇವೆ. ರೈತರು ಆತ್ಮಹತ್ಯೆ ಮಾಡಿಕೊಳ್ತಿದ್ದಾರೆ. ಸರ್ಕಾರಕ್ಕೆ ಇದ್ಯಾವುದರ ಕಾಳಜಿ ಇಲ್ಲ. ಇಂತಹ ವಿಷಯ ಮುನ್ನಲೆಗೆ ತಂದು ವಿಷಯ ಡೈವರ್ಟ್ ಮಾಡ್ತಿದ್ದಾರೆ. https://ainlivenews.com/karasevaka-srikanth-pujari-arrested-watch-hdks-first-reaction/ ಪ್ರತಾಪ್ ಸಿಂಹ ಸಹೋದರನ ಮೇಲೆ ಕೇಸ್ ಹಾಕಿ ಜೈಲಿಗೆ ಹಾಕಿದ್ದಾರೆ. ಇದರ ಸತ್ಯಾಸತ್ಯತೆ ಏನಿದೆ. ಕಾಂಗ್ರೆಸ್ ಅವರು ವಿರೋಧಿಗಳ ಧ್ವನಿ ಅಡಗಿಸೋಕೆ ಅಧಿಕಾರ ದುರ್ಬಳಕೆ ಮಾಡಿಕೊಳ್ತಿದ್ದಾರೆ. ಕರಸೇವಕರ ಮೇಲೆ ದೌರ್ಜನ್ಯ. ಇದು ನಾಚಿಕೆಗೇಡು ಎಂದು ವಾಗ್ದಾಳಿ ನಡೆಸಿದರು ಅಧಿಕಾರ ದುರುಪಯೋಗ, ಸುಳ್ಳು ಕೇಸ್ ಮೂಲಕ ಕರಸೇವಕರ ಬಂಧನ ವಿಚಾರವಾಗಿ ಸಿಎಂ, ಗೃಹ ಸಚಿವರು ಅದನ್ನ ಸಮರ್ಥನೆ ಮಾಡಿಕೊಳ್ತಿದ್ದಾರೆ. ಹರಿಪ್ರಸಾದ್ ಗೋಧ್ರಾ ರೀತಿ ಆಗುತ್ತೆ ಅಂತಾ ಹೇಳಿದ್ದಾರೆ. ಪರ-ವಿರೋಧ ಎರಡು ಕಡೆ ನಡೆಯುತ್ತಿದೆ. ರಾಜ್ಯ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಳ್ತಿದೆ. ಬಿಜೆಪಿ…

Read More

ಬೆಂಗಳೂರು: ನೈಸ್ ಯೋಜನೆಯಿಂದ ತುಂಬಾ ದಿನಗಳಿಂದ ಬಡವರಿಗೆ ಅನ್ಯಾಯವಾಗಿದೆ. ಅದನ್ನು ಸರಿಪಡಿಸಿ ಬಡವರ ಜಮೀನು ಉಳಿಸಿಕೊಟ್ಟರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಭಾರಿಯಾಗಿರುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್​.​ಡಿ ದೇವೇಗೌಡ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,“ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ನೇಮಕ‌ ಮಾಡಿ, ಪ್ರಾಜೆಕ್ಟ್‌ಅನ್ನು ಸರ್ಕಾರ ತೆಗೆದುಕೊಳ್ಳಬೇಕು. ಅಕ್ರಮಗಳನ್ನು ಸರಿಪಡಿಸಬೇಕು” ಎಂದು ಆಗ್ರಹಿಸಿದರು. https://ainlivenews.com/electricity-rate-hike-shock-again-for-the-people-of-the-state/ ರಾಜ್ಯಸರ್ಕಾರ ಈವರೆಗೆ ಯಾವುದೇ ಅಂತಿಮ ನಿರ್ಣಯ ತೆಗೆದುಕೊಂಡಿಲ್ಲ, ವಿಳಂಬವಾಗಿದೆ. ನೈಸ್ ಅಕ್ರಮದ ವಿರುದ್ದ ನಮ್ಮ ಪಕ್ಷ ಧ್ವನಿ ಎತ್ತಿದೆ. ವಿಧಾನಸಭೆಯಲ್ಲೂ ಸುದೀರ್ಘವಾಗಿ ಚರ್ಚೆಯಾಗಿದೆ. ಸೋನಿಯಾ ಗಾಂಧಿಯವರ ಜೊತೆ ಕೂಡ ಚರ್ಚೆ ಮಾಡಲಾಗಿತ್ತು. ಅವರು ಮಸ್ಟ್ ಟೇಕ್ ಆಕ್ಷನ್ ಅಂತಾ ಹೇಳಿದ್ದರು” ಎಂದು ದೇವೇಗೌಡ ನೆನಪಿಸಿದರು. “ನೈಸ್ ರಸ್ತೆಗೆ ಒಳಪಡದೆ ಇರುವ ಭೂಮಿ ಎಷ್ಟಿದೆ ಅಂತಾ ಅಂದಾಜು ಮಾಡಿದಾಗ ವ್ಯಾಲ್ಯೂ ಜಾಸ್ತಿಯಾಗುತ್ತದೆ. ಸಿಎಂ ಸಿದ್ದರಾಮಯ್ಯ ಯಾವಾಗಲೂ ಬಡವರ ಪರ ಎಂದು ಹೇಳುತ್ತಾರೆ. ಯೋಜನೆ ಬಗ್ಗೆ ಬಿಎಸ್ ಯಡಿಯೂರಪ್ಪ ಅವರ ಆಡಳಿತ ಅವಧಿಯಲ್ಲಿ ಅಫಿಡವಿಟ್ ಹಾಕಿದ್ದಾರೆ. ಅದರಲ್ಲಿ, ಹೆಚ್ಚುವರಿ ಜಮೀನು…

Read More

ನವದೆಹಲಿ: 15 ಮಂದಿ ಭಾರತೀಯರಿದ್ದ ಸರಕು ಹಡಗನ್ನು (Cargo Ship) ಸೊಮಾಲಿಯಾ ಬಳಿ ಅಪಹರಣ ಮಾಡಲಾಗಿದ್ದು, ಭಾರತೀಯ ನೌಕಾಪಡೆ (Indian Navy) ತೀವ್ರ ನಿಗಾ ಇರಿಸಿದೆ. ಸೋಮಾಲಿಯಾ ಕರಾವಳಿಯ ಬಳಿ ಗುರುವಾರ ಸಂಜೆ ‘MV LILA NORFOLK’ ಎಂಬ ಸರಕು ಸಾಗಣೆ ಹಡಗನ್ನು ಅಪಹರಿಸಲಾಗಿದ್ದು, ಭಾರತೀಯ ನೌಕಾಪಡೆಯು ಅದರತ್ತ ಯುದ್ಧನೌಕೆಯನ್ನು ಕಳುಹಿಸಿ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.  https://ainlivenews.com/1603-vacancies-in-indian-oil-company-today-is-the-last-day-apply-soon/ ಅಪಹರಿಸಿದ ಹಡಗಿನಲ್ಲಿ 15 ಭಾರತೀಯರಿದ್ದಾರೆ. ಸಿಬ್ಬಂದಿಯೊಂದಿಗೆ ಸಂವಹನವನ್ನು ಸ್ಥಾಪಿಸಲಾಗಿದೆ. ಸೇನಾ ಅಧಿಕಾರಿಗಳ ಪ್ರಕಾರ, ಸೊಮಾಲಿಯಾ ಕರಾವಳಿಯಲ್ಲಿ ಹಡಗನ್ನು ಅಪಹರಿಸಿರುವ ಬಗ್ಗೆ ಗುರುವಾರ ಸಂಜೆ ಮಾಹಿತಿ ಲಭಿಸಿದೆ. ಅಲ್ಲದೇ ಭಾರತೀಯ ನೌಕಾಪಡೆಯ ವಿಮಾನವು ಹಡಗಿನ ಮೇಲೆ ನಿಗಾ ಇರಿಸಿದೆ. ಭಾರತೀಯ ನೌಕಾಪಡೆಯ ಯುದ್ಧನೌಕೆ INS ಚೆನ್ನೈ ಪರಿಸ್ಥಿತಿಯನ್ನು ನಿಭಾಯಿಸಲು ಅಪಹರಣಕ್ಕೊಳಗಾದ ಹಡಗಿನ ಕಡೆಗೆ ಚಲಿಸುತ್ತಿದೆ. 

Read More

ಬೆಂಗಳೂರು:‌ ಹಾಡಹಗಲೇ ಗೃಹಿಣಿಯೋರ್ವಳನ್ನ ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಸಿಲಿಕಾನ್ ವ್ಯಾಲಿ ಖ್ಯಾತಿಯ ಎಲೆಕ್ಟ್ರಾನಿಕ್ ಸಿಟಿಯ ಮಗ್ಗಲಿನಲ್ಲಿಯೇ ನಡೆದಿದೆ. ಇದು ಐಟಿಬಿಟಿ (ITBT) ಸಿಟಿಯ ಜನರನ್ನ ಬೆಚ್ಚಿ ಬೀಳಿಸಿದೆ. https://ainlivenews.com/of-course-ive-seen-kateras-movie-im-currently-shooting-actor-sudeep/ ಮೃತ ಮಹಿಳೆಯನ್ನು ನೀಲಂ(30) ಎಂದು ಗುರುತಿಸಲಾಗಿದೆ. ಮೂಲತಃ ಉತ್ತರ ಪ್ರದೇಶದವರಾಗಿರುವ ಈಕೆ ತನ್ನ ಕುಟುಂಬದ ಜೊತೆ ಕಳೆದ ಕೆಲ ವರ್ಷಗಳ ಹಿಂದೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಬೆಟ್ಟದಾಸನಪುರದ ಸಾಯಿ ಶಕ್ತಿ ಬಡಾವಣೆಯ ಗಂಗಾ ಬ್ಲಾಕ್ ನ ಬಾಡಿಗೆ ಮನೆಯಲ್ಲಿ ವಾಸವಿದ್ರು. ಪತಿ ಹಾರ್ಡ್ ವೇರ್ ಶಾಪ್ ಜೊತೆಗೆ ಪೈಂಟಿಂಗ್ ಕಾಂಟ್ರಾಕ್ಟ್ ಕೆಲಸ ಮಾಡಿಕೊಂಡಿದ್ದ. ಎಂದಿನಂತೆ ಮಕ್ಕಳು ಶಾಲೆಗೆ ಹೋಗಿದ್ರೆ, ಪತಿ ಕೆಲಸಕ್ಕೆ ಹೋಗಿದ್ದ ಎನ್ನಲಾಗಿದೆ. ಮನೆಯಲ್ಲಿ ಮಹಿಳೆ ನೀಲಂ ಮಾತ್ರ ಒಬ್ಬಂಟಿಯಾಗಿದ್ದಾಗ ಯಾರೋ ಅಪರಿಚಿತರು ಮನೆಗೆ ನುಗ್ಗಿ ಮಹಿಳೆಯ ಹತ್ಯೆ ಮಾಡಿದ್ದಾರೆ. ಆದರೆ ದುಷ್ಕರ್ಮಿಗಳು ಯಾವುದೇ ಒಡವೆ, ಹಣವನ್ನು ಕದ್ದಿಲ್ಲ. ಹೀಗಾಗಿ ಈ ಕೊಲೆಯ ಹಿಂದೆ ಅನುಮಾನಗಳು ಹುಟ್ಟಿಕೊಂಡಿವೆ.

Read More

ಬೆಂಗಳೂರು:  ಚಾಮರಾಜನಗರ ಸಹಕಾರಿ ಬ್ಯಾಂಕ್ (District Co Operative Bank) ಚುನಾವಣೆಯನ್ನು ಎಂಟು ವಾರಗಳಲ್ಲಿ ನಡೆಸಲು ಹೈಕೋರ್ಟ್ ಸೂಚನೆ ನೀಡಿದೆ. ಈ ಮೂಲಕ ಲೋಕಸಭಾ ಚುನಾವಣೆಗೂ ಮುನ್ನ ಜಿ.ಟಿ ದೇವೆಗೌಡ (G.T Devegowda) ಹಾಗೂ ಸಿಎಂ ಸಿದ್ದರಾಮಯ್ಯ (Siddaramaiah) ನಡುವೆ ಮೆಗಾ ಫೈಟ್‍ಗೆ ಮೈಸೂರಿನಲ್ಲಿ (Mysuru) ಅಖಾಡ ಫಿಕ್ಸ್ ಆಗಿದೆ. https://ainlivenews.com/karasevaka-srikanth-pujari-arrested-watch-hdks-first-reaction/ ನ್ಯಾಯಾಲಯದ ಆದೇಶದಿಂದ, ಸಹಕಾರಿ ಬ್ಯಾಂಕ್ ಚುನಾವಣೆ ಹೆಸರಿನಲ್ಲಿ ಇಬ್ಬರ ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟಕ್ಕೆ ತೆರೆ ಬೀಳುವ ಸಮಯ ಬಂದಿದೆ. ಸಹಕಾರ ಕ್ಷೇತ್ರದಲ್ಲಿ ಜಿಟಿಡಿ ಕುಟುಂಬದ ಹಿಡಿತ ತಪ್ಪಿಸಲು ತೆರೆಮರೆಯಲ್ಲೇ ಸಿಎಂ ಪ್ರಯತ್ನ ನಡೆಸುತ್ತಿದ್ದರು. ಅಲ್ಲದೇ ಸಿದ್ದರಾಮಯ್ಯ ತಮ್ಮ ಹಿಡಿತ ಬಿಗಿ ಮಾಡಿಕೊಳ್ಳಲು ಹಲವು ಕಾರ್ಯತಂತ್ರ ಮಾಡಿದ್ದರು ಎಂಬ ಮಾತುಗಳು ಕೇಳಿಬಂದಿದ್ದವು. ಇದೀಗ ನ್ಯಾಯಾಲಯದ ಆದೇಶದಿಂದ ಲೋಕಸಭಾ ಚುನಾವಣೆಗೂ ಮುನ್ನ ಇಬ್ಬರ ನಡುವಿನ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗಿದೆ ಕಳೆದ ನವೆಂಬರ್‍ನಲ್ಲಿ ಚುನಾವಣೆ ನಡೆಸಲು ಮೈಸೂರು ಜಿಲ್ಲಾಧಿಕಾರಿಗಳಿಂದ ಆದೇಶವಾಗಿತ್ತು, ಆದರೆ ಮತದಾರರ ಪಟ್ಟಿ ಪರಿಷ್ಕರಣೆ ಕಾರಣ ಹೇಳಿ ಚುನಾವಣೆಯನ್ನು…

Read More

ಬೆಂಗಳೂರು: ಕರಸೇವಕರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ. ಇದು ನಾಚಿಕೆಗೇಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ವಾಗ್ದಾಳಿ ನಡೆಸಿದರು.‌ https://ainlivenews.com/dcm-launched-the-program-of-government-came-to-the-door-let-the-service-be-cooperative/ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇವತ್ತು ಅಯೋಧ್ಯೆ (Ayodhya) ಉದ್ಘಾಟನೆ ಬಗ್ಗೆ ದೇಶದಲ್ಲಿ ಚರ್ಚೆ ಆಗ್ತಿದೆ. ನಮ್ಮ ರಾಜ್ಯದಲ್ಲಿ ಹಲವು ಸಮಸ್ಯೆ ಎದುರಿಸುತ್ತಿದ್ದೇವೆ. ರೈತರು ಆತ್ಮಹತ್ಯೆ ಮಾಡಿಕೊಳ್ತಿದ್ದಾರೆ. ಸರ್ಕಾರಕ್ಕೆ ಇದ್ಯಾವುದರ ಕಾಳಜಿ ಇಲ್ಲ. ಇಂತಹ ವಿಷಯ ಮುನ್ನಲೆಗೆ ತಂದು ವಿಷಯ ಡೈವರ್ಟ್ ಮಾಡ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀಕಾಂತ್ ಪೂಜಾರಿ ಪ್ರಕರಣ ದೊಡ್ಡದು ಮಾಡಿದ್ದಾರೆ. ಎಲ್ಲಾ ಕೇಸ್ ಖುಲಾಸೆ ಆಗಿದೆ. ಮಾಧ್ಯಮಗಳೇ ಇದನ್ನ ತೋರಿಸಿವೆ ಎಂದು ತಿಳಿಸಿದರು ಕರಸೇವಕರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡ್ತಿದೆ. ಈದ್ಗಾ ಮೈದಾನದಲ್ಲಿ ಗಲಾಟೆ ಆಗಿದ್ದಾಗ ದೇವೇಗೌಡರು ಹೇಗೆ ನಿಭಾಯಿಸಿದರು ಅಂತಾ ಗೊತ್ತಿದೆ. ಈ ಸರ್ಕಾರ ವಿರೋಧಿಗಳ ಮೇಲೆ ದಬ್ಬಾಳಿಕೆ ಮಾಡೋ ಕೆಲಸ ಮಾಡ್ತಿದೆ ಎಂದು ಟೀಕಿಸಿದರು. ಪ್ರತಾಪ್ ಸಿಂಹ ಸಹೋದರನ ಮೇಲೆ ಕೇಸ್ ಹಾಕಿ ಜೈಲಿಗೆ ಹಾಕಿದ್ದಾರೆ. ಇದರ ಸತ್ಯಾಸತ್ಯತೆ ಏನಿದೆ. ಕಾಂಗ್ರೆಸ್ ಅವರು…

Read More

ಬೆಂಗಳೂರು: ಕಾಟೇರ ಸಿನಿಮಾ ಬಿಡುಗಡೆಯಾದ ಕೇವಲ ಏಳೇ ದಿನಕ್ಕೆ ದಾಖಲೆಯ ಗಳಿಕೆ ಕಂಡು, ಇಡೀ ಸ್ಯಾಂಡಲ್‌ವುಡ್‌ ಸಿನಿಮಾ ಇಂಡಸ್ಟ್ರಿಯ ತಾಕತ್ತು ಪ್ರದರ್ಶಿಸಿದೆ. ಬಿಡುಗಡೆಗೂ ಮುನ್ನ ದೊಡ್ಡ ಮಟ್ಟದ ಹೈಪ್‌ ಕ್ರಿಯೆಟ್‌ ಮಾಡಿದ್ದ ಕಾಟೇರ, ರಿಲೀಸ್‌ ಬಳಿಕ ಅದನ್ನು ಇನ್ನಷ್ಟು ಎತ್ತರಕ್ಕೆ ಏರಿಸಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಇಡೀ ಸ್ಯಾಂಡಲ್‌ವುಡ್‌ಗೆ ಕಾಟೇರ ಸಿನಿಮಾ ವೀಕ್ಷಣೆಗೆ ಆಮಂತ್ರಣ ನೀಡಿದ್ದರು ರಾಕ್‌ಲೈನ್‌ ವೆಂಕಟೇಶ್‌. ಹಿರಿ ಕಿರಿ ಕಲಾವಿದರೂ ಆಗಮಿಸಿ ದರ್ಶನ್‌ ಸಿನಿಮಾ ಕಣ್ತುಂಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆಮಂತ್ರಣದ ಮೇರೆಗೆ ಬಹುತೇಕ ಎಲ್ಲ ಸೆಲೆಬ್ರಿಟಿಗಳು ಆಗಮಿಸಿ ಕಾಟೇರನನ್ನು ಕಣ್ತುಂಬಿಕೊಂಡಿದ್ದರು. ಅದೇ ರೀತಿ ಕಾಟೇರ ಸಿನಿಮಾ ವೀಕ್ಷಣೆಗೆ ಕಿಚ್ಚ ಸುದೀಪ್‌ ಅವರಿಗೂ ಇನ್ವಿಟೇಷನ್‌ ಹೋಗಿದೆ ಎಂದು ಸ್ವತಃ ನಿರ್ದೇಶಕ ತರುಣ್‌ ಸುಧೀರ್‌ ಹೇಳಿದ್ದಾರೆ. ಕಿಚ್ಚ ಸುದೀಪ್‌ ಸದ್ಯ ಮ್ಯಾಕ್ಸ್‌ ಸಿನಿಮಾದ ಕ್ಲೈಮ್ಯಾಕ್ಸ್‌ ಶೂಟಿಂಗ್‌ನಲ್ಲಿ ಬಿಜಿಯಾಗಿದ್ದಾರೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಆ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಸುದೀಪ್‌ ಭಾಗವಹಿಸಿದ್ದಾರೆ. ಅವರಿಗೂ ರಾಕ್‌ಲೈನ್‌ ವೆಂಕಟೇಶ್‌ ಅವರ ಕಡೆಯಿಂದ ಆಮಂತ್ರಣ ತಲುಪಿದೆ. ಕಾಟೇರ ಚಿತ್ರಕ್ಕೆ…

Read More

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ನಿವಾಸದಲ್ಲಿ ತಡರಾತ್ರಿ ಸಭೆ ಮಹತ್ವದ ಸಭೆ ನಡೆದಿದ್ದು ರಾಜ್ಯ ಕಾಂಗ್ರೆಸ್‌ನಲ್ಲಿ (Congress) ಮತ್ತೆ ಮುನ್ನಲೆಗೆ ಬರುತ್ತಾ ಹೆಚ್ಚುವರಿ ಡಿಸಿಎಂ (DCM) ಕೂಗು ಎಂಬ ಪ್ರಶ್ನೆ ಬಂದಿದೆ. ಸತೀಶ್ ಜಾರಕಿಹೊಳಿ, ಜಿ.ಪರಮೇಶ್ವರ್, ಹೆಚ್.ಸಿ ಮಹದೇವಪ್ಪ, ಕೆ.ಎನ್. ರಾಜಣ್ಣ, ದಿನೇಶ್ ಗುಂಡೂರಾವ್, ಕೆ.ಹೆಚ್. ಮುನಿಯಪ್ಪ ಅವರು ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಹೊತ್ತು ಚರ್ಚೆ ನಡೆಸಿದ್ದಾರೆ. https://ainlivenews.com/caught-a-cockroach-while-dining-in-a-prestigious-hotel/ ಈ ಆರು ಸಚಿವರ ಸಭೆಯಲ್ಲಿ ಎರಡು ಪ್ರಮುಖ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಚಿವರ ಲೋಕಸಭೆ (Lok Sabha Election) ಸ್ಪರ್ಧೆಮಾಡಿದರೆ ಗೆಲುವು ಅನಿವಾರ್ಯ. ಗೆಲುವು ಅನಿವಾರ್ಯವಾಗಬೇಕಾದರೆ ಸಮುದಾಯಗಳ ವಿಶ್ವಾಸಕ್ಕೆ ಡಿಸಿಎಂ ದಾಳ ಉರುಳಿಸುವ ಬಗ್ಗೆ ಸಭೆಯಲ್ಲಿ ಕೆಲ ಚರ್ಚೆ ನಡೆದಿದೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ದಲಿತ ಡಿಸಿಎಂ ಮಾಡಿದರೆ ಉತ್ತಮ. ಲೋಕಸಭೆಗೆ ಸಚಿವರು ಸ್ಪರ್ಧಿಸುವುದು ಅನಿವಾರ್ಯವೇ?  ಲೋಕಸಭೆ ಸ್ಪರ್ಧೆ ಹಾಗೂ ಹೆಚ್ಚುವರಿ ಜಾತಿವಾರು ಕನಿಷ್ಠ 4 ಡಿಸಿಎಂ ಹುದ್ದೆ ಬೇಡಿಕೆ ಬಗ್ಗೆಯೂ ನಾಯಕರು…

Read More