Author: AIN Author

ಬೆಂಗಳೂರು: ನನಗೆ ಗಂಡ ಬೇಡ ಮಗು ಬೇಡ ಅಂತಾ ಎಳೆ ಕಂದಮ್ಮನನ್ನ ಬಿಟ್ಟು ಓಡಿ ಹೋಗಿದ್ದಳು, ಆದ್ರೆ ಈಗ ಮೂರುವರೆ ವರ್ಷದ ಮಗಳನ್ನ ಹೆಂಡ್ತಿಯೇ ಕಿಡ್ನ್ಯಾಪ್ ಮಾಡಿಸಿದ್ದಾಳೆ ಅಂತಾ ಹಳೆ ಗಂಡ ಗೋಳಾಡ್ತಿದ್ದು, ಮಗಳನ್ನ ತೋರಿಸುವಂತೆ ಕಣ್ಣೀರಿಡ್ತಿದ್ದಾನೆ.‌ ಮಗಳು ಇಲ್ಲದೆ ಅನ್ನ ನೀರು ಬಿಟ್ಟು ಪರಿತಪಿಸ್ತಿರೊ ಅಪ್ಪನ ಕಣ್ಣೀರಿನ ಕಥೆಯಿದೆ. ಈ ಅಪ್ಪ ಮಗಳ ರೀಲ್ಸ್ ಒಮ್ಮೆ ನೋಡಿದ್ರೆ ಯಂತವರಿಗೂ ಖುಷಿಯಾಗುತ್ತೆ, ಮುದ್ದಾಳ ಮಗಳ ಜೊತೆ ಹಳೆ ಕಹಿ ನೆನೆಪು ಮರೆತು ಖುಷಿ ಪಡ್ತಿದ್ದ ಆ ತಂದೆಗೆ ಈಗ ಮತ್ತೆ ಮಗಳಿಲ್ಲದ ಸಂಕಷ್ಟ ತಂದೊಡ್ಡಿದ್ದಾರೆ. ಬನಶಂಕರಿಯ ಶಫಿ ಉಲ್ಲಾ ತನ್ನ ಮೂರುವರೆ ವರ್ಷದ ಮುದ್ದಾದ ಮಗಳು ಶಹಜಾದಿ ಅಮೈರಾಳ ಜೊತೆ ಲೋಕವನ್ನೇ ಮರೆತು ಖುಷಿಯಾಗಿದ್ದ. ಇದೀಗ ಏಕಾಏಕಿ ಮುದ್ದು ಮಗಳ ಕಿಡ್ನ್ಯಾಪ್ ಆಗಿದ್ದು ಮಗಳನ್ನ ಹುಡುಕಿಕೊಡುವಂತೆ ಶಫಿ ಅಲೆದಾಟ ನಡೆಸ್ತಿದ್ದಾರೆ. https://ainlivenews.com/moderate-rain-in-different-districts-of-the-state-cloudy-weather-in-bangalore/ 2015 ರಲ್ಲಿ ಶಫಿಉಲ್ಲಾ ಆಯಿಷಾ ಸಿದ್ದಿಕಿ ಅನ್ನೋರನ್ನ ಮದುವೆಯಾಗಿದ್ದ. ಹಾಲುಕುಡಿಯುವ ಮಗುವನ್ನ ಟ್ಯಾನರಿ ರಸ್ತೆಯ ಪರಿಚಿತರೊಬ್ಬರ ಮನೆಯಲ್ಲಿ ಬಿಟ್ಟು…

Read More

ಬೆಂಗಳೂರು : ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿ ಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. https://ainlivenews.com/hubli-inspector-will-not-be-suspended-for-any-reason-home-minister-parameshwar/ 2017 ರಲ್ಲಿ ದಾಖಲಾಗಿದ್ದ ಪ್ರಕರಣದ ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ನ್ಯಾಯಾಲಯದ ಸಮನ್ಸ್ ಜಾರಿ ಆಗಿದೆ ಅಷ್ಟೆ. 2017 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020 ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023 ರ ಸೆಪ್ಟೆಂಬರ್ 7 ರಂದು ಸರ್ಕಾರ ಅನುಮತಿ ನೀಡಿತ್ತು. 2023 ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಈ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದು ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ. ಇದಿಷ್ಟೂ ಕೂಡ ಯಾವುದೇ ಒಂದು ಪ್ರಕರಣದಲ್ಲಿ…

Read More

ತಿರುವನಂತಪುರಂ: ಪ್ರತಿಪಕ್ಷಗಳ INDIA ಒಕ್ಕೂಟವು ನಮ್ಮ ನಂಬಿಕೆಗಳಿಗೆ ಧಕ್ಕೆ ತರುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆರೋಪಿಸಿದರು. ಕೇರಳದಲ್ಲಿ (Kerala) ನಡೆದ ಕಾರ್ಯಕ್ರಮ ವೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂಡಿಯಾ (INDIA Alliance) ಮೈತ್ರಿ ಕೂಟವು ನಮ್ಮ ನಂಬಿಕೆಯನ್ನು ಘಾಸಿಗೊಳಿಸುತ್ತಲೇ ಇರುತ್ತದೆ. ಅವರು ನಮ್ಮ ದೇವಸ್ಥಾನಗಳು ಮತ್ತು ಹಬ್ಬಗಳನ್ನು ಲೂಟಿಗೆ ದಾರಿಮಾಡಿಕೊಂಡಿದ್ದಾರೆ. ‘ತ್ರಿಶೂರ್ ಪೂರಂ’ನಲ್ಲಿ ನಡೆಯುತ್ತಿರುವ ರಾಜಕೀಯ ದುರದೃಷ್ಟಕರ. ಶಬರಿಮಲೆಯಲ್ಲಿ (Sabarimala) ನಡೆದಿರುವ ದುರಾಡಳಿತದಿಂದ ಭಕ್ತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇದು ಇಲ್ಲಿಯ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಎಂದು ಉಲ್ಲೇಖಿಸಿದ್ದಾರೆ.             ಇಂದು ದೇಶದಲ್ಲಿ ದೊಡ್ಡ ದೊಡ್ಡ ರಸ್ತೆಗಳು ನಿರ್ಮಾಣವಾಗುತ್ತಿವೆ. ಆಧುನಿಕ ರೂಪದಲ್ಲಿ ವಿಮಾನ ನಿಲ್ದಾಣಗಳು ನಿರ್ಮಾಣವಾಗುತ್ತಿವೆ. https://ainlivenews.com/bharjari-samag-release-of-nuru-rupee-mix-bheema/ ಆದರೆ ಮೋದಿಯವರನ್ನು ವಿರೋಧಿಸುತ್ತೇವೆ ಎಂಬ ಕಾರಣಕ್ಕೆ ಇಂಡಿಯಾ ಮೈತ್ರಿಕೂಟ ಸರ್ಕಾರ ಇಲ್ಲಿ ಯಾವುದೇ ಕೆಲಸ ನಡೆಯಲು ಬಿಡುತ್ತಿಲ್ಲ. ಲೂಟಿಗೆ ಕೇರಳದಲ್ಲಿ ಸಂಪೂರ್ಣ ಸ್ವಾತಂತ್ರ್ಯ ಬೇಕು. ಕೇಂದ್ರ ಸರ್ಕಾರದಿಂದ ಬಡವರಿಗೆ ಮತ್ತು ಮೂಲಸೌಕರ್ಯಕ್ಕೆ ಸಿಗುತ್ತಿರುವ ಹಣದ ಬಗ್ಗೆ ಯಾರೂ ಪ್ರಶ್ನಿಸುವುದು ಅವರಿಗೆ…

Read More

ಬೆಂಗಳೂರು: ಹುಬ್ಬಳ್ಳಿ ಕರಸೇವಕರ ಬಿಡುಗಡೆಗೆ ಆಗ್ರಹಿಸಿ ಬಿಜೆಪಿಯಿಂದ (BJP) ನಿತ್ಯ ಪ್ರತಿಭಟನೆ (Protest) ನಡೆಸಲು ಮುಂದಾಗಿದ್ದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಧರಣಿ ಕುಳಿತ  ಮತ್ತೊಬ್ಬ ಶಾಸಕ ಸಿ.ಟಿ.ರವಿ ಇಂದು ಬೆಳಗ್ಗೆ  ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ಅವರು ಕೂಡ ಇದೇ ರೀತಿ ಪ್ರತಿಭಟನೆ ಮಾಡಿದ್ದರು. ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಧರಣಿ ಕುಳಿತ ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ (Sunil Kumar) ಅವರನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದರು. ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಅರೆಸ್ಟ್ ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂಬ ವಿಭಿನ್ನ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಅವರು, ನಾನೂ ಕರಸೇವಕ. ನನ್ನನ್ನೂ ಬಂಧಿಸಿ ಎಂಬ ಪ್ಲೇ ಕಾರ್ಡ್‌ ಹಿಡಿದು ಏಕಾಂಗಿ ಪ್ರತಿಭಟನೆ ನಡೆಸುವ ಮೂಲಕ ಚಾಲನೆ ನೀಡಿದರು. ಹಾಗೆ ಅದೇ ರೀತಿ ಈಗ ಸಿ.ಟಿ.ರವಿ ಅವರು…

Read More

ಬೆಂಗಳೂರು: ಹುಬ್ಬಳ್ಳಿ (Hubballi) ಇನ್ಸ್‌ಪೆಕ್ಟರ್‌ನನ್ನು (Inspector) ಯಾವುದೇ ಕಾರಣಕ್ಕೂ ಅಮಾನತು ಮಾಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ಬಿಜೆಪಿಗೆ (BJP) ತಿರುಗೇಟು ನೀಡಿದ್ದಾರೆ. ಜನವರಿ 9ರ ಒಳಗೆ ಶ್ರೀಕಾಂತ್ ಪೂಜಾರಿ ಬಿಡುಗಡೆ ಮಾಡಬೇಕು, ಹುಬ್ಬಳ್ಳಿ ಇನ್ಸ್‌ಪೆಕ್ಟರ್‌ನನ್ನು ಅಮಾನತು ಮಾಡಬೇಕು ಎಂಬ ಬಿಜೆಪಿ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹುಬ್ಬಳ್ಳಿ ಇನ್ಸ್‌ಪೆಕ್ಟರ್‌ನನ್ನು ಅಮಾನತು ಮಾಡಲ್ಲ. ಇನ್ಸ್‌ಪೆಕ್ಟರ್‌ನನ್ನು ಯಾಕೆ ಅಮಾನತು ಮಾಡಬೇಕು? ಅವನೇನು ತಪ್ಪು ಮಾಡಿದ್ದಾನೆ ಎಂದು ಪ್ರಶ್ನಿಸಿದರು. https://ainlivenews.com/legal-action-if-a-criminal-impersonates-a-rama-bhakta-dinesh-gundurao/ ಬಿಜೆಪಿ ಅವರು ಪ್ರತಿಭಟನೆ ಮಾಡಲಿ. ಕಾನೂನು ಈ ದೇಶದಲ್ಲಿ ಇರಬಾರದು ಎಂದು ಬಿಜೆಪಿಗೆ ಇದ್ದರೆ ಪ್ರತಿಭಟನೆ ಮಾಡಲಿ. ರಾಜ್ಯದಲ್ಲಿ ಕಾನೂನು ಕಾಪಾಡೋದು ನಮ್ಮ ಕರ್ತವ್ಯ. ಕಾನೂನಿನ ಪ್ರಕಾರ ಹುಬ್ಬಳ್ಳಿ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಅವರ ಬಂಧನ ಟೈಂನಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಆಗುತ್ತಿದೆ ಅನ್ನೋದು ಬಿಟ್ಟರೆ ಪೊಲೀಸರು ಕಾನೂನು ವಿರುದ್ಧ ಏನು ಕೆಲಸ ಮಾಡಿಲ್ಲ. ಬಿಜೆಪಿ ಅವರು ಅನಾವಶ್ಯಕವಾಗಿ ಇದನ್ನು ದೊಡ್ಡ ರಾಜಕೀಯ ಕಾರಣಕ್ಕೆ ಹೋರಾಟ ಮಾಡುತ್ತಿದ್ದಾರೆ.…

Read More

‘ಕಾಟೇರ’ ಸಿನಿಮಾ ಮೊದಲ ದಿನ 19.79 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಶನಿವಾರ (ಡಿ.30) 17.35 ಕೋಟಿ ರೂಪಾಯಿ ಬಾಚಿಕೊಂಡಿತು. ಭಾನುವಾರ (ಡಿ.31) ಬರೋಬ್ಬರಿ 20.94 ಕೋಟಿ ರೂಪಾಯಿ ಆದಾಯ ಹರಿದುಬಂತು. ಸೋಮವಾರ (ಜ.1) 18.26 ಕೋಟಿ ರೂಪಾಯಿ ಮತ್ತು ಮಂಗಳವಾರ (ಜ.2) 9.24 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತು. ಬುಧವಾರ 9.78 ಕೋಟಿ ರೂಪಾಯಿ ಗಳಿಕೆ ಆಗಿದೆ. ಒಟ್ಟು ಕಲೆಕ್ಷನ್​ 95.36 ಕೋಟಿ ರೂ. ಆಗಿದ್ದು, ಶೀಘ್ರದಲ್ಲೇ 100 ಕೋಟಿ ರೂಪಾಯಿ ಗಡಿ ಮುಟ್ಟಲಿದೆ. ‘ಕಾಟೇರ’ ಅಪ್ಪಟ ಕನ್ನಡದ ಸಿನಿಮಾ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಇದು ಬಿಡುಗಡೆ ಆಗಿಲ್ಲ. 6 ದಿನಕ್ಕೆ ಕೇವಲ ಕರ್ನಾಟದಲ್ಲೇ ಈ ಪರಿ ಕಲೆಕ್ಷನ್​ ಮಾಡಿದ ಕಾರಣಕ್ಕಾಗಿ ದರ್ಶನ್​ ಅವರು ದಾಖಲೆ ಬರೆದಿದ್ದಾರೆ. ಮುಂದಿನ ದಿನಗಳಲ್ಲಿ ಈ ಚಿತ್ರ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬದನ್ನು ಕಾದುನೋಡಬೇಕು. ಬುಧವಾರ (ಜ.3) ಬೆಂಗಳೂರಿನಲ್ಲಿ ಅನೇಕ ಸೆಲೆಬ್ರಿಟಿಗಳು ಈ ಸಿನಿಮಾ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕ್​ಲೈನ್…

Read More

ಬೆಂಗಳೂರು: ಹಿಂದು ಕರಸೇವಕ ಶ್ರೀಕಾಂತ್​ ಪೂಜಾರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಪ್ರಹ್ಲಾದ್ ಜೋಷಿ ಬದಲು ಟಿಕೇಟ್ ನೀಡುವಂತೆ ಬಿಜೆಪಿಗೆ ರಾಜ್ಯ ಕಾಂಗ್ರೆಸ್​ ಸವಾಲೆಸೆದಿದೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್​ ನಲ್ಲಿ ಬರೆದುಕೊಂಡಿದ್ದು, ‘ಶ್ರೀಕಾಂತ ಮೇಲೆ ಬಿಜೆಪಿಗೆ ಕಾಳಜಿ, ಪ್ರೀತಿ ಇದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರಕ್ಕೆ ಪ್ರಹ್ಲಾದ್​ ಜೋಶಿ ಬದಲು ಶ್ರೀಕಾಂತ್ ಪೂಜಾರಿಗೆ ಟಿಕೆಟ್ ನೀಡಲಿ. ಹೊಸ ಪ್ರತಿಭೆಯನ್ನು ಪರಿಚಯಿಸಲಿ’ ಎಂದು ಹೇಳಿದೆ. ‘ಕಳ್ಳಭಟ್ಟಿ, ಮಟ್ಕಾ ದಂಧೆಕೋರ ಶ್ರೀಕಾಂತ ಪೂಜಾರಿ 16 ಪ್ರಕರಣದಲ್ಲಿ ಭಾಗಿಯಾಗುವ ಮೂಲಕ ಬಿಜೆಪಿ ಅಭ್ಯರ್ಥಿಯಾಗುವ ಮಾನದಂಡಗಳನ್ನು ಪೂರೈಸಿ ಅರ್ಹತೆ ಪಡೆದಿದ್ದಾನೆ’ ಎಂದು ಕಾಂಗ್ರೆಸ್ ಬರೆದುಕೊಂಡಿದೆ. ‘ಕ್ರಿಮಿನಲ್‌ಗಳಿಗೆ, ಕಳ್ಳರಿಗೆ, ಅತ್ಯಾಚಾರಿಗಳಿಗೆ, ರೌಡಿಗಳಿಗೆ ಬಿಜೆಪಿಯಲ್ಲಿ ಮನ್ನಣೆ ಎನ್ನುವುದು ಚಿತ್ತಾಪುರ ಕ್ಷೇತ್ರದಲ್ಲಿ ತೋರಿಸಿಕೊಟ್ಟಿದೆ. ಮೋದಿ ರೌಡಿ ಶೀಟರ್‌ಗೆ ಕೈ ಮುಗಿದು ನಿಲ್ಲುವ ಮೂಲಕ ಸಮಾಜಘಾತುಕ ಶಕ್ತಿಗಳೇ ಬಿಜೆಪಿಯ ಶಕ್ತಿ ಎಂಬುದು ನಿರೂಪಿತವಾಗಿದೆ’ ಎಂದು ಕಾಂಗ್ರೆಸ್ ಹೇಳಿದೆ.

Read More

ಬೆಂಗಳೂರು: ಕ್ರಿಮಿನಲ್ ವ್ಯಕ್ತಿ ‘ರಾಮಭಕ್ತ’ನ ಸೋಗು ಹಾಕಿಕೊಂಡರೆ ಕಾನೂನು ಕ್ರಮ  ತೆಗೆದುಕೊಳ್ಳಬಾರದೇ? ಎಂದು ಸಚಿವ ಗುಂಡೂರಾವ್ ಬಿಜೆಪಿಯವರಿಗೆ ಪ್ರಶ್ನೆ ಮಾಡಿದ್ಧಾರೆ. https://ainlivenews.com/we-are-not-afraid-of-the-big-threats-of-the-police-and-the-state-government-b-y-vijayendra/ ಈ ಕುರಿತು ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟ್ಕಾ, ಜೂಜಾಟ ಮುಂತಾದ 16 ಸಮಾಜಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಶ್ರೀಕಾಂತ್ ಪೂಜಾರಿ ಎಂಬಾತನ ಬಂಧನವನ್ನು ಬಿಜೆಪಿಯು ರಾಮಭಕ್ತ, ಕರಸೇವಕ ಎಂದು ಬಿಜೆಪಿ ಬಿಂಬಿಸುತ್ತಿದ್ದು, ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಇನ್ನೂ ಶ್ರೀಕಾಂತ್ ಪೂಜಾರಿ ವಿರುದ್ಧ 1992ರಿಂದ 2014ರವರೆಗೆ ಹುಬ್ಬಳ್ಳಿಯ ವಿವಿಧ ಠಾಣೆಗಳಲ್ಲಿ ಸುಮಾರು 16 ಕ್ರಿಮಿನಲ್ ಪ್ರಕರಣ ದಾಖಲಾಗಿವೆ‌. ಇಂತಹ ಕ್ರಿಮಿನಲ್ ಹಿನ್ನೆಲೆಯಿರುವ ವ್ಯಕ್ತಿ ರಾಮಭಕ್ತ ಎಂಬ ಸೋಗು ಹಾಕಿಕೊಂಡರೆ ಕಾನೂನು ಕ್ರಮ ತೆಗೆದುಕೊಳ್ಳಬಾರದೆ?” ಎಂದು ಕೇಳಿದ್ದಾರೆ.

Read More

ಬೆಂಗಳೂರು: ಗೋಧ್ರಾ  ಮಾದರಿ ಮತ್ತೊಂದು ದುರಂತ ಸಂಭವಿಸಬಹುದು ಎಂಬ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ (B.K.Hariprasad) ಹೇಳಿಕೆಯನ್ನ ಸಂಸದ ಡಿ.ಕೆ.ಸುರೇಶ್ (D.K.Suresh) ಸಮರ್ಥಿಸಿಕೊಂಡಿದ್ದಾರೆ. https://ainlivenews.com/appointment-of-chief-spokesperson-and-co-convener-for-bjp/ ನಗರದಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತು ಅಯೋಧ್ಯೆ ವಿವಾದಾತ್ಮಕ ಕ್ಷೇತ್ರ. ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಆಗಿದೆ. ರಾಮಮಂದಿರಕ್ಕೂ ರಕ್ಷಣೆ ಬೇಕು, ಭಕ್ತರಿಗೂ ರಕ್ಷಣೆ ಕೊಡಬೇಕು. ಏನೇ ಇದ್ರೂ ರಕ್ಷಣೆ ಕೊಡುವುದು ಸರ್ಕಾರದ ಕರ್ತವ್ಯ. ಆ ದೃಷ್ಟಿಯಿಂದ ಹರಿಪ್ರಸಾದ್ ಅವರು ಹೇಳಿದ್ದಾರೆ ಎಂದು ತಿಳಿಸಿದರು. ಕರಸೇವಕರ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ ವಿಚಾರ ಕುರಿತು ಮಾತನಾಡಿ, ಯಾರನ್ನೂ ಉದ್ದೇಶಪೂರ್ವಕವಾಗಿ ಬಂಧನ ಮಾಡಿಲ್ಲ. ಸರ್ಕಾರ ಕೆಲ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದೆ. ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಕೆಲ ದುರ್ಘಟನೆ ನಡೆಯಬಹುದು ಎಂಬ ಗುಮಾನಿ ಮೇಲೆ ಬಂಧನ ಮಾಡಲಾಗಿದೆ. ಇದು ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಮಾಡಿರುವ ಕ್ರಮ. ಇದರಲ್ಲಿ ರಾಜಕೀಯ ಇಲ್ಲ ಎಂದರು.

Read More

ಚಾಮರಾಜನಗರ: ಹುಬ್ಬಳ್ಳಿಯಲ್ಲಿ ಬಂಧನಕ್ಕೊಳಗಾದ ಶ್ರೀಕಾಂತ್ ಪೂಜಾರಿಯವರ ಬಿಡುಗಡೆಗೆ ಆಗ್ರಹಿಸಿ ಮತ್ತು ರಾಜ್ಯಾದ್ಯಂತ ರಾಮಭಕ್ತರ ಮೇಲೆ ಪೊಲೀಸ್ ಇಲಾಖೆಯಿಂದ ಆಗುತ್ತಿರುವ ದೌರ್ಜನ್ಯವನ್ನು ತಕ್ಷಣವೇ ನಿಲ್ಲಿಸಬೇಕೆಂದು  ಬಿಜೆಪಿಗರು ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದ್ರು. ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಸಮಾವೇಶಗೊಂ, ಡ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರವು ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಸ ವ್ಯಕ್ತಪಡಿಸಿದರು. ಅಯೋದ್ಯ  ಗಲಾಟೆ ನಡೆದು 31 ವರ್ಷದ ಬಳಿಕ ರಾಮನ ಭಕ್ತರ ಮೇಲೆ ಕೇಸು ದಾಖಲಿಸಿ ಬಂಧಿಸಲಾಗುತ್ತಿದೆ.ಕೂಡಲೆ ಶ್ರೀಕಾಂತ್ ಪೂಜಾರಿಯನ್ನು ಬಿಡುಗಡೆಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Read More