Author: AIN Author

ಉಡುಪಿ: ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಉಡುಪಿಯ ಹಿರಿಯ ಬಿಜೆಪಿ ಮುಖಂಡರೂ ಆಗಿರುವ ಶಾರದಾ ಇಂಟರ್ನ್ಯಾಷನಲ್ ಹೋಟೆಲ್ ಮಾಲಿಕ ಸುಧಾಕರ ಶೆಟ್ಟಿ ನಿಧನ ಹೊಂದಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಮಾತ್ರವಲ್ಲದೆ ಹೊಟೇಲ್ ಉದ್ಯಮದಲ್ಲಿ ಹೆಚ್ಚು ಹೆಸರುವಾಸಿ ಯಾಗಿದ್ದರು. ಇವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. https://ainlivenews.com/13-lakhs-to-be-paid-if-childless-women-are-made-pregnant-fraud-in-the-name-of-pregnant-job-service/ ಮೂರು ಬಾರಿ ಉಡುಪಿ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸುಧಾಕರ ಶೆಟ್ಟಿ, ಎರಡು ಬಾರಿ ಬಿಜೆಪಿ ಹಾಗೂ ಒಂದು ಬಾರಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಆದರೆ ಮೂರು ಚುನಾವಣೆ ಯಲ್ಲೂ ಇವರು ಸೋಲು ಅನುಭವಿಸಿದ್ದರು. 2009 ರಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು.

Read More

ಅಯೋಧ್ಯೆ: ಇದೇ ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ನೇರವೇರಲಿದೆ. ಅಂದು ಶ್ರೀರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮವೂ ನೆರವೇರಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಣ್ಯರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ದೇಶ-ವಿದೇಶಗಳಿಂದ ವಿಶೇಷ ಕೊಡುಗೆಗಳನ್ನು ಶ್ರೀರಾಮನ ಭಕ್ತರು ಅಯೋಧ್ಯೆಗೆ ಕಳುಹಿಸುತ್ತಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಹಾಗೆಯೇ ದೇಶಾದ್ಯಂತ ರಾಮನ ಭಕ್ತರು ಅಕ್ಕಿ, ತರಕಾರಿ ಹಾಗೂ ಇತರ ಆಹಾರ ಪದಾರ್ಥಗಳನ್ನು ಅಯೋಧ್ಯೆಗೆ ಕಳುಹಿಸುತ್ತಿರುವುದು ಗಮನಸೆಳೆದಿದೆ. ರಾಮಲಲ್ಲಾ ಪ್ರಾಣಪ್ರತಿಷ್ಠಾ ಸಮಾರಂಭಕ್ಕೆ ಲಕ್ಷಾಂತರ ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹಾಗಾಗಿ ಅಕ್ಕಿ, ವಿವಿಧ ಬಗೆಯ ತರಕಾರಿಗಳು ಹಾಗೂ ಇತರ ಆಹಾರ ಪದಾರ್ಥಗಳನ್ನು ಅಯೋಧ್ಯೆಗೆ ಕಳುಹಿಸುತ್ತಿದ್ದಾರೆ.  https://ainlivenews.com/a-500-year-old-inscription-was-discovered-in-which-kannada-kings-ruled-tamil-nadu/ ದೇಶದ ವಿವಿಧೆಡೆಯಿಂದ ಅಕ್ಕಿ, ಸಾಂಬಾರ್ ಪದಾರ್ಥ ಹಾಗೂ ಇತರ ಆಹಾರ ಪದಾರ್ಥಗಳು ಸೇರಿದಂತೆ ಸುಮಾರು 300 ಟನ್ ಅಗತ್ಯ ವಸ್ತುಗಳನ್ನು ಅಯೋಧ್ಯೆಗೆ ರವಾನಿಸಲಾಗುತ್ತಿದೆ. ಎಲ್ಲಾ ಆಹಾರ ಪದಾರ್ಥಗಳನ್ನು ಅಯೋಧ್ಯೆಯ ಕಾರ್ಯಶಾಲೆಯಲ್ಲಿ ಸಂಗ್ರಹಿಸಲಾಗುತ್ತಿದೆ. ನಂತರದಲ್ಲಿ ಪ್ರಸಾದ ವಿನಿಯೋಗ, ಮುಂತಾದ ಕೆಲಸಗಳಿಗೆ ಬಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಎಲ್ಲಿಂದ ಏನೇನು…

Read More

ಬೆಂಗಳೂರು : ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ರಾಜಕಾರಣವನ್ನು ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು  ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಸಭೆ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. https://ainlivenews.com/k-set-exam-on-january-13-notice-to-download-to-get-admit-card/ ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧಸಿ, ಹಿಂದಿನ ಪ್ರಕರಣಕ್ಕೆ ಈಗ ಜೀವನೀಡಿರುವ ಬಗ್ಗೆ ಬಿಜೆಪಿಯವರು ಇಂದು ಪ್ರತಿಭಟನೆ ಹಮ್ಮಿಕೊಂಡಿರುವ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿ, ತಪ್ಪು ಮಾಡಿದವರನ್ನು ರಕ್ಷಿಸಿ ಶಿಕ್ಷೆ ನೀಡಬಾರದೆಂದು ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರಶ್ನೆಯನ್ನು ಮಾಧ್ಯಮದವರು ಬಿಜೆಪಿಯವರಿಗೆ ಕೇಳಬೇಕು. ಅಪರಾಧ ಮಾಡಿರುವವರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗುತ್ತಿದೆ. ನಿರಪರಾಧಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸುವುದಿಲ್ಲ. ಟೀಕೆಗಳಿಗೆ , ಅನುಮಾನಗಳಿಗೆ ನಾನು ಉತ್ತರ ನೀಡುವುದಿಲ್ಲ ಎಂದರು.

Read More

ಬೆಂಗಳೂರು:  ಸಿಲಿಕಾನ್‌ ಸಿಟಿಯ  (Bengaluru) ಪ್ರತಿಷ್ಠಿತ ಮಾಲ್‌ಗಳಲ್ಲಿ ಒಂದಾದ  ಮಾಲ್ ಆಫ್ ಏಷ್ಯಾ ಗೆ ಸರತಿ ಸಾಲಿನಲ್ಲಿ ನೋಟೀಸ್ ಜಾರಿಯಾಗಿದ್ದು  ಬಿಬಿಎಂಪಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಕಮರ್ಷಿಯಲ್ ಟ್ಯಾಕ್ಸ್ ಇಲಾಖೆಯಿಂದ ನಿಯಮಗಳ ಉಲ್ಲಂಘನೆ ಆರೋಪದ ಮೇಲೆ‌ ನೊಟೀಸ್ ಜಾರಿಯಾಗಿದೆ. ಈಗಾಗಲೇ  ಮಾಲ್ ಆಫ್ ಏಷ್ಯಾ ಬಳಿ ಸೆಕ್ಷನ್ 144 (Section 144) ಜಾರಿಗೊಳಿಸಲಾಗಿದೆ. ಮಾಲ್ ಆಫ್ ಏಷ್ಯಾ ಮೇಲೆ ಕರವೇ (Karnataka Rakshana Vedike) ಕಾರ್ಯಕರ್ತರ ಮುತ್ತಿಗೆ ಹಿನ್ನೆಲೆ ಭಾನುವಾರದಿಂದ 15 ದಿನಗಳವರೆಗೆ ಮಾಲ್ ಅನ್ನು ಮುಚ್ಚಲಾಗಿದೆ ಈಗ ಮತ್ತೆ ನೋಟಿಸ್‌ ಕೂಡ ಜಾರಿಯಾಗಿದೆ. https://ainlivenews.com/k-set-exam-on-january-13-notice-to-download-to-get-admit-card/ ಹೆದ್ದಾರಿ ನಿಯಮಗಳನ್ನ ಗಾಳಿಗೆ ತೂರಿ ಕನ್ಸಟ್ರಕ್ಷನ್ ಮಾಡಿರೋ ಮಾಲ್‌ಆಫ್ ಏಷ್ಯಾ ಹಾಗೆ  ಬಿಬಿಎಂಪಿ ಸ್ಕೆಚ್ ನ್ನ ಬದಲಾಯಿಸಿ ಕಾಮಗಾರಿ, ಪಾರ್ಕಿಂಗ್ ಏರಿಯಾ ಅಂತ ಪ್ಲಾನ್ ನಲ್ಲಿ ತೋರಿಸಿದ್ದ ಮಾಲ್ ಬಳಿಕ‌ ಪಾರ್ಕಿಂಗ್ ಏರಿಯಾನ‌ ಪಾರ್ಟಿ ಏರಿಯಾ ಅಂತ ಮಾರ್ಪಾಡು ಮತ್ತೊಂದೆಡೆ ಪಲೂಷನ್ ಕಂಟ್ರೋಲ್ ಬೋರ್ಡ್ ನಿಂದಲೂ ನೋಟೀಸ್ ಜಾರಿಯಾಗಿದ್ದು  90. ಡೆಸಿಬಲ್ ಸೌಂಡ್ ಹೊರ…

Read More

‘ಸಹರ’ ಸಿನಿಮಾ ಮೂಲಕ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿರುವ ಮಂಜೇಶ್ ಭಾಗವತ್ ಹೊಸ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಸದ್ದಿಲ್ಲದೇ ಎರಡನೇ ಚಿತ್ರ ಶೂಟಿಂಗ್ ಮುಗಿಸಿರುವ ಅವರೀಗ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಮಂಜೇಶ್ ಎರಡನೇ ಹೆಜ್ಜೆಗೆ ಕನಸೊಂದು ಶುರುವಾಗಿದೆ ಎಂಬ ಟೈಟಲ್ ಇಡಲಾಗಿದೆ. ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಹೊಸಬರ ಕನಸಿಗೆ ಜೊತೆಯಾಗಿದ್ದಾರೆ. ಕನಸೊಂದು ಶುರುವಾಗಿದೆ ಶೀರ್ಷಿಕೆ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಾಶಯ ಕೋರಿದ್ದಾರೆ. ಕನಸೊಂದು ಶುರುವಾಗಿದೆ ಸಿನಿಮಾ ಮೂಲಕ ಸಂತೋಷ್ ಬಿಲ್ವಾ ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದ್ದು, ಅವರಿಗೆ ಜೋಡಿಯಾಗಿ ಸಾತ್ವಿಕಾ ಕಾಣಿಸಿಕೊಂಡಿದ್ದಾರೆ. ಥ್ರಿಲ್ಲರ್ ಮಂಜು, ಕುರಿ ಸುನಿಲ್ ತಾರಾಬಳಗದಲ್ಲಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಕನಸೊಂದು ಶುರುವಾಗಿದೆ ಚಿತ್ರವನ್ನು ಬೆಂಗಳೂರು, ಕುಂದಾ ಪುರ, ಕುಣಿಗಲ್ ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಈಗಾಗಲೇ ಚಿತ್ರದ ಶೂಟಿಂಗ್ ಮುಕ್ತಾಯ ಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. KKR ಮೀಡಿಯಾ ಬ್ಯಾನರ್ ನಡಿ ಲಕ್ಷ್ಮೀ ಕಾಂತ್ ರೆಡ್ಡಿ ಎಸ್ ಕನಸೊಂದು…

Read More

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ   ಹೈಕಮಾಂಡ್‌ ಆದೇಶದ ಮೇರೆಗೆ ದಿಢೀರ್‌ ದೆಹಲಿಗೆಗೆ ತೆರಳಿದ ಸಿಎಂ ಸಿದ್ದರಾಮಯ್ಯ . https://ainlivenews.com/k-set-exam-on-january-13-notice-to-download-to-get-admit-card/ ಸಿಎಂ ಸಿದ್ದರಾಮಯ್ಯ ಅವರು ಕೆಮಪೇಗೌಡ ಏರ್ಪೋರ್ಟ್‌ ನಿಂದ ಬೆಳಗ್ಗೆ ದೆಹಲಿಗೆ ತೆರಳಿದ್ದು   ಮುಂಬರುವ ಲೋಕಸಭೆ ಚುನಾವಣೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರು ಪ್ರಮುಖ ಸಭೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದಾರೆ.

Read More

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ (LokSabha Election) ತಯಾರಿ ಆರಂಭಿಸಿರುವ ಬಿಜೆಪಿ ತೀಸ್ರಿ ಬಾರ್ ಮೋದಿ ಸರ್ಕಾರ್, ಅಬ್ ಕಿ ಬಾರ್ ಚಾರ್‌ ಸೌ ಪಾರ್ (ಮೂರನೇ ಬಾರಿ ಮೋದಿ ಸರ್ಕಾರ, ಈ ಬಾರಿ ಬಿಜೆಪಿ ದಾಟಲಿದೆ 400 ಸ್ಥಾನ) ಎಂಬ ಹೊಸ ಘೋಷ ವಾಕ್ಯವನ್ನು ಬಳಸಲು ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ. ಈ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ನೇತೃತ್ವದಲ್ಲಿ ಎರಡು ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದ ಬಳಿಕ ಈ ಘೋಷಣೆಗಳನ್ನು ಅಂತಿಮಗೊಳಿಸಲಾಯಿತು. ಸಭೆಯಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಉಪಸ್ಥಿತರಿದ್ದರು. https://ainlivenews.com/oyo-room-booking-record-on-new-years-day/ ಶೀಘ್ರದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಹಂತಗಳಲ್ಲಿ ಬಿಜೆಪಿ ಸಂಚಾಲಕರು ಮತ್ತು ಸಹ ಸಂಚಾಲಕರನ್ನು ನೇಮಕ ಮಾಡಲು ನಿರ್ಧರಿಸಿದೆ ಹಾಗೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ…

Read More

ಬೆಂಗಳೂರು: ಜನವರಿ 13ರಂದು ನಡೆಯುವ ಕೆ-ಸೆಟ್ (KSET) ಪರೀಕ್ಷೆಗೆ (Exam) ಹಾಜರಾಗುವ ಅಭ್ಯರ್ಥಿಗಳು http://kea.kar.nic.in ಜಾಲತಾಣದಲ್ಲಿ ಪ್ರವೇಶ ಪತ್ರವನ್ನು (Admission Letter) ಡೌನ್ಲೋಡ್ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ (S Ramya) ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಮುನ್ನ ಪ್ರವೇಶಪತ್ರ ಮತ್ತು ಸರ್ಕಾರದಿಂದ ಮಾನ್ಯವಾಗಿರುವ ನಿಗದಿತ ಬಗೆಯ ಗುರುತಿನ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ. ಜೊತೆಗೆ ಪ್ರವೇಶಪತ್ರದಲ್ಲಿ ನಮೂದಿಸಿರುವ ಪರೀಕ್ಷಾ ಕೇಂದ್ರದಲ್ಲಷ್ಟೇ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು. ಅಲ್ಲದೇ ಇತ್ತೀಚಿನ ಎರಡು ಭಾವಚಿತ್ರಗಳನ್ನು ತರಬೇಕು ಎಂದು ತಿಳಿಸಿದ್ದಾರೆ. ಪರೀಕ್ಷೆಯು ಜನವರಿ 13ರ ಬೆಳಗ್ಗೆ 10ರಿಂದ 11 ಮತ್ತು ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ನಡೆಯಲಿದೆ. ಇದರ ನಡುವೆ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಹೋಗಲು ಅವಕಾಶ ಕೊಡಲಾಗುವುದಿಲ್ಲ. ಓಎಂಆರ್ ಶೀಟ್ ಮೇಲೆ ಅಭ್ಯರ್ಥಿಗಳೇನಾದರೂ ತಮ್ಮ ನೋಂದಣಿ ಸಂಖ್ಯೆ, ವಿಷಯದ ಕೋಡ್ ಮತ್ತು ಪರೀಕ್ಷಾ ಕೇಂದ್ರದ ಕೋಡ್ ಅನ್ನು…

Read More

ಬೆಂಗಳೂರು: ತಾಯಿಯಿಂದಲೇ ದುಡ್ಡು ಕೊಟ್ಟು ಮೂರು ವರ್ಷದ ಮಗಳು ಕಿಡ್ನಾಪ್ ಮಾಡಿರುವ ಘಟನೆ ಬನಶಂಕರಿಯಲ್ಲಿ ನಡೆದಿದೆ. ವಾಸಿಂ ಎಂಬ ವ್ಯಕ್ತಿ ಮುಖಾಂತರ ತಾಯಿಯೇ ಕಿಡ್ನಾಪ್ ಮಾಡಿಸಿರೋ ಆರೋಪ ಸೋಫಾ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ವಾಸಿಂ ಮುಖಾಂತರ ಕಿಡ್ನಾಪ್ ಮಾಡಿಸಿದ ತಾಯಿ ಅಯೇಶಾ 1 ಲಕ್ಷ ನೀಡಿ ಕಿಡ್ನಾಪ್ ಮಾಡಿಸಿರುವ ಆರೋಪ ಕೇಳಿಬಂದಿದ್ದು  ಡಿಸೆಂಬರ್‌ 28ನೇ  ತಾರೀಖು ಮಗುವಿನ ಕಿಡ್ನಾಪ್ ಮಾಡಿದ ಕೆಲಸಗಾರ ವಾಸಿಂ ಮೂರು ವರ್ಷದ ಮಗಳ‌ ಕಣ್ಮರೆಯಿಂದ ತಂದೆ ಕಂಗಾಲು https://ainlivenews.com/a-student-committed-suicide-by-shooting-himself-in-the-chest-with-a-double-barrel-gun/ ಪುಟ್ಟ ಮಗಳನ್ನು ತಂದೆಯೊಂದಿಗೆ ಬಿಟ್ಟು ಹೋಗಿದ್ದ ತಾಯಿ ಆದರೆ ಈಕೆ ಬೇರೆಯವನೊಂದಿಗೆ ಮದುವೆಯಾಗಿದ್ದ ತಾಯಿ  ಆದ್ರೀಗ  ಅಪ್ಪನ ಬಳಿ ಇದ್ದ ಮೂರು ವರ್ಷದ ಕಂದಮ್ಮ ಕಣ್ಮರೆ ಇದಕ್ಕೆ ತೈಿಯೇ ಕಾರಣವೆಂದು ಆರೋಪ ಂಆಡುತ್ತಿರುವ ತಂದೆ. ಕಳೆದ 28 ನೇ ತಾರೀಕಿನ ಮಧ್ಯಾಹ್ನ ಮಗು ನಾಪತ್ತೆಯಾಗಿದ್ದು  ವಾಸಿಂ ಎಂಬುವವನಿಂದ ಮಗು ಕಳ್ಳತನ ಆರೋಪ ಕೇಳಿಬಂದಿದ್ದು  ಫರ್ನೀಚರ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ವಾಸಿಂ ಚಾಕೊಲೇಟ್ ಕೊಡಿಸೋ ನೆಪದಲ್ಲಿ ಮಗು ಕರೆದುಕೊಂಡು…

Read More

ಚಾಮರಾಜನಗರ: ರಾಮನನ್ನು ಬಿಜೆಪಿಯವರು (BJP) ದೊಡ್ಡ ಅಸ್ತ್ರ ಮಾಡಿಕೊಂಡು ಜನರ ಭಾವನೆ ಕೆರಳಿಸುತ್ತಿದ್ದಾರೆ ಎಂದು ರೇಷ್ಮೆ ಹಾಗೂ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ (K. Venkatesh) ಆರೋಪಿಸಿದರು. ಚಾಮರಾಜನಗರ (Chamarajanagar) ಜಿಲ್ಲೆಯ ಮಹದೇಶ್ವರ ಬೆಟ್ಟದಲ್ಲಿ ಮಾತನಾಡಿದ ಅವರು, ರಾಮನ ಮೇಲೆ ನಮ್ಮ ಅಭ್ಯಂತರವಿಲ್ಲ. ನಮ್ಮ ಅಭ್ಯಂತರ ಇರೋದು ಬಿಜೆಪಿ ನಡವಳಿಕೆ ಮೇಲೆ. ರಾಮಮಂದಿರ ನಿರ್ಮಾಣದ ಬಗ್ಗೆ ನಮ್ಮ ತಕರಾರಿಲ್ಲ, ಆದರೆ ರಾಮ ನಮ್ಮವನೇ ಅಂತಾ ಬಿಜೆಪಿಯವರು ಹೇಳುವ ವಿಚಾರದಲ್ಲಿ ನಮ್ಮ ತಕರಾರಿದೆ, ಆಕ್ರೋಶ ಇದೆ ಎಂದರು. ಎಲ್ಲರಿಗೂ ಬೇಕಾದವನು ರಾಮ, ಹನುಮಂತ, ಸೀತೆಯನ್ನು ಎಲ್ಲರೂ ಪೂಜೆ ಮಾಡ್ತಾರೆ. https://ainlivenews.com/oyo-room-booking-record-on-new-years-day/ ಅದರೆ ಬಿಜೆಪಿಯವರು ರಾಮ ತಮಗೆ ಸೇರಿದವನೆಂದು ಪ್ರತಿಬಿಂಬಿಸುತ್ತಿದ್ದಾರೆ. ಇದು ಸರಿಯಾದ ವರ್ತನೆಯಲ್ಲ. ಆ ದೃಷ್ಟಿಯಿಂದ ಸಿದ್ದರಾಮಯ್ಯ ನಮ್ಮ ನಾಯಕರು. ಆದ್ದರಿಂದ ರಾಮ ನಮ್ಮಲ್ಲಿ ಇದ್ದಾರೆಂದು ಮಾಜಿ ಸಚಿವ ಆಂಜನೇಯ ಹೇಳಿದ್ದಾರಷ್ಟೇ. ರಾಮನನ್ನು ತುಚ್ಛೀಕರಿಸುವ ರೀತಿ ಅವರು ಹೇಳಿಲ್ಲ ಎಂದು ಅವರು ಮಾಜಿ ಸಚಿವ ಆಂಜನೇಯ ಹೇಳಿಕೆ ಸಮರ್ಥಿಸಿಕೊಂಡರು.

Read More