Author: AIN Author

ಬೆಂಗಳೂರು : ಜನವರಿ 2ರಿಂದ ಮದ್ಯದ ದರ ಹೆಚ್ಚಳ ಆಗುತ್ತೆ ಅಂದುಕೊಂಡಿದ್ದ ಎಣ್ಣೆ ಪ್ರಿಯರಿಗೆ ಸಿದ್ದರಾಮಯ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಈಗಾಗಲೇ ಎಣ್ಣೆ ದರ ಹೆಚ್ಚಳ ಆಗಿರೋದ್ರಿಂದ ಸರ್ಕಾರದ ವಿರುದ್ಧ ಮದ್ಯ ಪ್ರಿಯರು ಕೆಂಡಕಾರುತ್ತಿದ್ದರು. ಜನವರಿ 2ರಿಂದ ಮದ್ಯದ ದರ ಹೆಚ್ಚಳ ಆಗೋ ಸುದ್ದಿ ಕೇಳಿ ಬೇಸರ ವ್ಯಕ್ತಪಡಿಸಿದ್ರು. ಆದ್ರೀಗ, ಎಣ್ಣೆ ಪ್ರಿಯರಿಗೆ ಅಬಕಾರಿ ಇಲಾಖೆ ಸಿಹಿ ಸುದ್ದಿ ನೀಡಿದ್ದು, ಸದ್ಯ ಮದ್ಯದ ದರದಲ್ಲಿ ಯಾವುದೇ ದರ ಏರಿಕೆ ಆಗಿಲ್ಲ ಎಂದು ಸ್ಪಷ್ಟನೆ ನೀಡಿದೆ. https://ainlivenews.com/color-caste-religion-is-very-dangerous-for-criminals-cm-thunders-against-kamal/ ಇತ್ತೀಚಿನ ದಿನಗಳಲ್ಲಿ ಮದ್ಯ ದರ ಹೆಚ್ಚಳ ಆಗಿದ್ದು ಗ್ರಾಹಕರು ಮದ್ಯ ಕೊಂಡುಕೊಳ್ಳುವಲ್ಲಿ ಹಿಂದೇಟು ಹಾಕಿದ್ರು. ಮತ್ತೆ ದರ ಹೆಚ್ಚಳ ಆಗೋ ವಿಷಯ ತಿಳಿದು ಮದ್ಯ ಮಾರಾಟಗಾರರು ಶಾಕ್ ಆಗಿದ್ರು. ಈಗಗಾಲೇ ದರ ಹೆಚ್ಚಾಳದಿಂದ ಮದ್ಯ ಕೊಂಡುಕೊಳ್ಳುವವರ ಸಂಖ್ಯೆ ಕಡಿಮೆ ಆಗಿದೆ. ಮತ್ತೆ ದರ ಹೆಚ್ಚಳವಾದ್ರೆ ಮಾರಾಟಕ್ಕೆ ಒಡೆತ ಬೀಳೋದು ಗ್ಯಾರಂಟಿ ಅಂದಿದ್ರು. ಸದ್ಯ ಇದಕ್ಕೆಲ್ಲ ಅಬಕಾರಿ ಇಲಾಖೆ ಬ್ರೇಕ್ ಹಾಕಿದ್ದು, ಎಣ್ಣೆ ಪ್ರಿಯರು…

Read More

ಬೆಂಗಳೂರು: ನಾಲ್ಕು ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ   ಬಿಜೆಪಿ ಪಕ್ಷಕ್ಕೆ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನೆ ಅವರಿಗೆ ಭಯ ಹುಟ್ಟಿಸುತ್ತಿದೆ. ಇದಕ್ಕಾಗಿ ಹುಬ್ಬಳ್ಳಿಯ ಕ್ರಿಮಿನಲ್ ಆರೋಪಿಯೊಬ್ಬನ ಬಂಧನದ ಎಳೆ ಹಿಡಿದುಕೊಂಡು ನೇತಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಅವರು ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, “ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎನ್ನುವುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ. https://ainlivenews.com/countrys-number-one-terrorist-b-k-hariprasad-sadananda-gowda/ “ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ? ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದು ವಿರೋಧಿಯೇ? ಬಿಜೆಪಿ ಬಿಟ್ಟು ಬಿಡಿ, ಅದರ ಪರಿವಾರದ ನಾಯಕರು ಕೂಡಾ ಹಿಂದೂ ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದೂ ವಿರೋಧಿ ಎಂದು ಕೂಗಾಡಲಿಲ್ಲವಲ್ಲ? ಈಗ ಯಾಕೆ ಈ ಕೂಗಾಟ” ಎಂದು ಪ್ರಶ್ನಿಸಿದ್ದಾರೆ. “ರಾಜ್ಯದ ಬಿಜೆಪಿಯ…

Read More

ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ಆಹ್ವಾನವನ್ನು ಸಿಪಿಐ(ಎಂ) ತಿರಸ್ಕರಿಸಿದ್ದು, ಕಮ್ಯುನಿಸ್ಟರಿಗೆ ಕೇವಲ ‘ಕೊಲೆಗಾರ ಬೇಕು’ ಶ್ರೀ ರಾಮ ಬೇಕಾಗಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಮ ಜನ್ಮಭೂಮಿಯ ಉದ್ಘಾಟನೆಗೆ ನೀಡಿದ ಆಮಂತ್ರಣವನ್ನು ಸಾರಾಸಗಟಾಗಿ ತಿರಸ್ಕರಿಸಿದ ಕಮ್ಮುನಿಸ್ಟ್ ಪಕ್ಷವು, ಸುಮಾರು ನಾಲ್ಕು ಕೋಟಿಗೂ ಹೆಚ್ಚು ಜನರನ್ನು ದಾರುಣವಾಗಿ ಕೊಂದ ನಿರಂಕುಶ ಪ್ರಭುತ್ವವಾದಿ ಮಾವೋ ಝಡೊನ್ಗ್ ಅವರ ಜಯಂತಿ ನೆನಪಿನಾರ್ಥವಾಗಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದೆ. ಕಮ್ಯುನಿಷ್ಟರಿಗೆ ಶ್ರೀ ರಾಮ ದೇವರು ಬೇಕಿಲ್ಲ, ಆದರೆ ಒಬ್ಬ ಕೊಲೆಪಾತಕ ಬೇಕು’ ಎಂದಿದ್ದಾರೆ. ಅವರು ಸಿಪಿಐ(ಎಂ)ನ ಪೋಸ್ಟ್ ಅನ್ನು ಸಹ ಹಂಚಿಕೊಂಡಿದ್ದಾರೆ. ಕಳೆದ ತಿಂಗಳ ಕೊನೆಯಲ್ಲಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಬಹು ನಿರೀಕ್ಷಿತ ಶ್ರೀರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದ್ದರು. ‘ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಸೀತಾರಾಮ್ ಯೆಚೂರಿ ಅವರಿಗೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಬರುವಂತೆ…

Read More

ಬೆಂಗಳೂರು : ಮಹಿಳೆಯ ಚೈನ್​ ಕಸಿದು ಆಟೋದಲ್ಲಿ ಪರಾರಿಯಾಗುತ್ತಿದ್ದ ಇಬ್ಬರು ಖತರ್ನಾಕ್​ ಚೋರರನ್ನು ಮಾಗಡಿ ರಸ್ತೆ ಸಂಚಾರಿ ಪೊಲೀಸರು ಹಿಡಿದು ಜೈಲಿಗಟ್ಟಿರುವ ಘಟನೆ ನಡೆದಿದೆ. ಸೆಂಥಿಲ್ ಹಾಗು ವಿಜಯ್​ ಬಂಧಿತ ಆರೋಪಿಗಳು, ಮಾಗಡಿ ರಸ್ತೆಯ ದಿನತಂತಿ ಜಂಕ್ಷನ್​ ಬಳಿ ಮಹಿಳೆಯೊಬ್ಬರು ತಮ್ಮ ಕೊರಳಿನಲ್ಲಿದ್ದ ಚೈನ್​ ಕಳ್ಳತನ ಮಾಡಿ ಆರೋಪಿಗಳು ಪರಾರಿಯಾಗುತ್ತಿದ್ದಾರೆ ಎಂದು ಮಾಗಡಿ ರಸ್ತೆ ಸಂಚಾರಿ ಪೊಲೀಸರಿಗೆ ತಿಳಿಸಿದ್ದಾರೆ. ಕೂಡಲೇ ಕಾರ್ಯಪ್ರೌವೃತ್ತರಾದ ಸಂಚಾರಿ ಪೊಲೀಸರು ಚೈನ್ ಕದ್ದು ಆಟೋದಲ್ಲಿ ಪರಾರಿಯಾಗುತ್ತಿದ್ದ ಕಳ್ಳರನ್ನು ಚೇಸ್​ ಮಾಡಿ ಹಿಡಿದು ಬಂಧಿತರಿಂದ ಚಿನ್ನದ ಸರ ಮತ್ತು ಹಣವನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಮಾಗಡಿ ರಸ್ತೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ. ಸಂಚಾರಿ ಪೊಲೀಸರು ಆರೋಪಿಗಳನ್ನು ಹಿಡಿದು ವಿಚಾರಣೆ ನಡೆಸಿದ ಸಂಪೂರ್ಣ ದೃಶ್ಯಗಳು ಸಂಚಾರಿ ಪೊಲೀಸರು ಧರಿಸಿದ್ದ ಬಾಡಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಪ್ರಕರಣದಕ್ಕೆ ಸಂಬಂದಿಸಿ ಸಿಬ್ಬಂದಿಗಳ ಸಾಹಸಕ್ಕೆ ಬೆಂಗಳೂರು ನಗರ ಪೊಲೀಸ್​ ಕಮಿಷನರ್​ ಬಿ.ದಯಾನಂದ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು…

Read More

ಬೆಂಗಳೂರು : ರಾಮ ಭಕ್ತರರಿಗೆ ಭಯವನ್ನ ಹುಟ್ಟಿಹಾಕುವ ನಂಬರ್ ಒನ್ ಭಯೋತ್ಪಾದಕ ಬಿ.ಕೆ ಹರಿಪ್ರಸಾದ್ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಡಿ.ವಿ. ಸದಾನಂದ ಗೌಡ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರು ಅವರು, ರಾಮ ಭಕ್ತರಿಗಲ್ಲ ರಕ್ಷಣೆ, ಮೊದಲು ಹರಿಪ್ರಸಾದ್​ಗೆ ರಕ್ಷಣೆ ಕೊಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ರಾಮ ಭಕ್ತರು ಬಿ.ಕೆ. ಹರಿಪ್ರಸಾದ್ ಅವರನ್ನ ಎಲ್ಲಿ ಪುಡಿಪುಡಿ ಮಾಡ್ತಾರೋ ಗೊತ್ತಿಲ್ಲ. ಅವರಿಗೆ ಮೊದಲು ರಕ್ಷಣೆ ಕೊಡಬೇಕು. ಹರಿಪ್ರಸಾದ್​ರನ್ನ ಮೊದಲು ಅರೆಸ್ಟ್ ಮಾಡಬೇಕು. ರಾಮ ಭಕ್ತರರಿಗೆ ಭಯವನ್ನ ಹುಟ್ಟಿಹಾಕುವ ನಂಬರ್ ಒನ್ ಭಯೋತ್ಪಾದಕ ಹರಿಪ್ರಸಾದ್. ಹೀಗಾಗಿ, ಅವರನ್ನ ಮೊದಲು ಬಂಧಿಸಿ ಎಂದು ಆಗ್ರಹಿಸಿದ್ದಾರೆ. ಒಬ್ಬ ಜನಪ್ರತಿನಿಧಿಯಾಗಿ ಅವರು ಜನರಲ್ಲಿ ಭಯ ಮೂಡಿಸುತ್ತಿದ್ದಾರೆ. ಇವರು ಟೆರರಿಸ್ಟ್ ಮಾದರಿಯಲ್ಲಿ ಕಾಣುತ್ತಾರೆ. ಜನರಲ್ಲಿ ಭಾವನೆ ವ್ಯಕ್ತಪಡಿಸಿ ಪ್ರಚೋದನೆ ನೀಡ್ತಾ ಇದ್ದಾರೆ. ಹರಿಪ್ರಸಾದ್ ಮಾತಿನ ಮೂಲಕವಾದರೂ ಪ್ರಚೋದನೆ ಪಡೆದು ರೈಲಿಗೆ ಬೆಂಕಿ ಹಾಕೋಣ ಅಂತ ಕೆಲವರು ಯೋಚಿಸಬಹುದು ಎಂದು ಸದಾನಂದಗೌಡ ಹರಿಹಾಯ್ದಿದ್ದಾರೆ.

Read More

ಧಾರವಾಡ: ಕೋವಿಡ್ ಸಂದರ್ಭದಲ್ಲಿ ಹಿಂದಿನ ಸರ್ಕಾರದಿಂದ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕೊಟ್ಟ ಒಂದೇ ಒಂದು ಹೇಳಿಕೆಯನ್ನು ಬಂಡವಾಳ ಮಾಡಿಕೊಂಡ ಕಾಂಗ್ರೆಸ್ ಇದೀಗ ಪ್ರತಿಭಟನೆಗಿಳಿದಿದೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ ಸುಮಾರು 40 ಸಾವಿರ ಕೋಟಿ ಅವ್ಯವಹಾರ ಆಗಿದೆ. ಇದನ್ನು ಕೂಡಲೇ ತನಿಖೆಗೆ ಒಳಪಡಿಸಬೇಕು. ಕೋವಿಡ್ ಸಂದರ್ಭದಲ್ಲಿ ಅವ್ಯವಹಾರ ಆಗಿದೆ ಎಂದು ಅದೇ ಪಕ್ಷದ ಶಾಸಕರು ಆರೋಪ ಮಾಡುತ್ತಿದ್ದಾರೆ. https://ainlivenews.com/do-you-know-the-benefits-of-eating-cashews-every-day-2/ ರಾಜ್ಯ ಸರ್ಕಾರ ಈ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಬಿಜೆಪಿ ಸರ್ಕಾರ ಕೋವಿಡ್ ಸಂದರ್ಭದಲ್ಲಿ ಹೆಣದ ಮೇಲೆ ಹಣ ಮಾಡುವ ಕೆಲಸ ಮಾಡಿದೆ. ಇದನ್ನು ಸ್ವ ಪಕ್ಷದವರೇ ಬೆಳಕಿಗೆ ತರುತ್ತಿದ್ದು, ಕೂಡಲೇ ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.

Read More

ಬೆಂಗಳೂರು: ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಸ್ಟಂಟ್ ಮಾಡುತ್ತಿದೆ. ಬಾಕಿ ಪ್ರಕರಣಗಳ ವಿಲೇವಾರಿಗೆ ಸರ್ಕಾರ ಮುಂದಾಗಿರುವುದಾಗಿ ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಯಾರು ರಾಜ್ಯಕ್ಕೆ ಅಗೌರವ ನೀಡಿದ್ದಾರೆ. ಯಾರು ಕಾನೂನು ಉಲ್ಲಂಘಿಸಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು. https://ainlivenews.com/controversial-statement-about-rammandir-issue-kotra-bk-hariprasad/ ನಾವು ಬಿಜೆಪಿಯವರಂತೆ ಅಧಿಕಾರ ದುರ್ಬಳಕೆ ಮಾಡಿಕೊಂಡು, ಅನ್ಯ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿಲ್ಲ.ಬಿಜೆಪಿ ಸರ್ಕಾರ ಇದ್ದಾಗ ಹುಬ್ಬಳ್ಳಿ, ಬೆಂಗಳೂರಿನಲ್ಲಿ ಎಷ್ಟು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿದೆ ಎಂಬುದನ್ನು ನೋಡಿ. ನಾವು ಇದುವರೆಗೂ ಆ ರೀತಿ ಮಾಡಿಲ್ಲ. ಮುಂದೆಯೂ ಮಾಡಲ್ಲ ಎಂದು ಹೇಳಿದರು. ಪೊಲೀಸ್ ಠಾಣೆ ಮುತ್ತಿಗೆ ಹಾಕಲು ವಿರೋಧ ಪಕ್ಷದ ನಾಯಕರು ಹುಬ್ಬಳ್ಳಿಗೆ ತೆರಳಿದ ಬಗ್ಗೆ ಮಾತನಾಡಿದ ಅವರು, ಹೋಗಿ ಕಟ್ಟಿ ಹಾಕಿಕೊಳ್ಳಲಿ. ಅವರ ಸರ್ಕಾರದಲ್ಲಿ ಏನೆಲ್ಲಾ ಮಾಡಿದ್ದರು…

Read More

ಬೆಂಗಳೂರು: ಅಯೋಧ್ಯೆಗೆ (Ayodhya Ram Mandir) ಹೋಗುವವರಿಗೆ ಸರ್ಕಾರವೇ ರಕ್ಷಣೆ ನೀಡಬೇಕು. ಏಕೆಂದರೆ, ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರು ಆಗಬಹುದು ಎಂದು ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್‌ (B.K.Hariprasad) ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮ ಅಲ್ಲ. ಇದೊಂದು ರಾಜಕೀಯ ಕಾರ್ಯಕ್ರಮ ಆಗ್ತಿದೆ. ಧಾರ್ಮಿಕ ಕಾರ್ಯಕ್ರಮ ಆಗಿದ್ರೆ ನಾವೆಲ್ಲರೂ ಹೋಗುತ್ತಿದ್ದೆವು. ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ಧಾರ್ಮಿಕ ಮುಖಂಡರು ಭಾಗಿ ಆಗಬೇಕಿತ್ತು. ಶಂಕರಾಚಾರ್ಯರು ಮೂಲ ಗುರುಗಳು. ಅದೇ ರೀತಿ ಧರ್ಮ ಗುರುಗಳು ನಡೆಸಿಕೊಟ್ಟಿದ್ದರೆ ಅದು ಧಾರ್ಮಿಕ ಕಾರ್ಯಕ್ರಮ ಆಗುತ್ತಿತ್ತು ಎಂದು ಹೇಳಿದ್ದಾರೆ.

Read More

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹ ಹಿನ್ನೆಲೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದಲ್ಲಿ ದಂಪತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇದರಲ್ಲಿ ಪತ್ನಿ ಶಾರದಾ (40) ಸ್ಥಳದಲ್ಲೇ ಸಾವನ್ನಪ್ಪಿದರೆ, ಪತಿ ಶಂಕರಯ್ಯಗೆ ತೀವ್ರ ಸುಟ್ಟಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಮೊದಲ ಪತ್ನಿ ಗಿರಿಜಮ್ಮ ಬೆಂಕಿಯಿಂದ ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದ್ದಾರೆ. ಈ ಕುರಿತು ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://ainlivenews.com/do-you-know-the-benefits-of-eating-cashews-every-day-2/ ಇನ್ನು ಕೌಟುಂಬಿಕ ಕಲಹ ಹಿನ್ನೆಲೆ ತಡರಾತ್ರಿ ಕುಡಿದ ಮತ್ತಿನಲ್ಲಿದ್ದ ಪತಿ ಶಂಕರಯ್ಯ, ಎರಡನೇ ಪತ್ನಿ ಶಾರದಾ ಮೇಲೆ ಪೆಟ್ರೋಲ್ ಸುರಿದಿದ್ದಾನೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪತ್ನಿ ಶಾರದಾ ತಾನೆ ಬೆಂಕಿ ಕಡ್ಡಿ ಗೀಚಿಕೊಂಡಿದ್ದಾಳೆ. ಈ ವೇಳೆ ಪತಿಗೂ ಬೆಂಕಿ ತಗುಲಿದ್ದು, ಶಾರದಾ ಸ್ಥಳದಲ್ಲೇ ಮೃತರಾಗಿದ್ದಾರೆ. ಇನ್ನು ಈ ಶಂಕರಯ್ಯ ಅಕ್ಕ-ತಂಗಿಯರನ್ನೇ ಮದುವೆ ಮಾಡಿಕೊಂಡಿದ್ದ. ಹೊಟೇಲ್ ಜೊತೆ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದ ಇತನ ಕುಟುಂಬದಲ್ಲಿ ಕಲಹ ಉಂಟಾಗಿ ಈ ದುರ್ಘಟನೆ ನಡೆದಿದೆ.  

Read More

ಬೆಂಗಳೂರು: ಇವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಎಲ್ಲಾ ರೀತಿಯ ನಾಗರಿಕ ಸೌಲಭ್ಯ ಬೇಕು.ಆದರೆ ನೀಯತ್ತಾಗಿ ಆಸ್ತಿ ತೆರಿಗೆ ಪಾವತಿಸಿ ಎಂದ್ರೆ ಅದೇಕೆ ಮೈಗಳ್ಳತನನೋ ಗೊತ್ತಿಲ್ಲ.ಆದ್ರೆ ನೆನಪಿರ್ಲಿ,ಕಳೆದ ಬಾರಿಯಂತೆ ತೆರಿಗೆ ಪಾವತಿಸದೆ ಸಬೂಬ್ ಹೇಳಿಕೊಂಡು ಇರೊಕ್ಕೆ ಸಾಧ್ಯನೇ ಇಲ್ಲ. ಅದಕ್ಕೂ ಅಸ್ತ್ರವೊಂದನ್ನು ಪ್ರಯೋಗಿಸ್ಲಿಕ್ಕೆ ಬಿಬಿಎಂಪಿ ಸಿದ್ದತೆ ಮಾಡ್ಕೊಂಡಿದೆ.ಅಂದ್ಹಾಗೆ ಬಿಬಿಎಂಪಿಗೆ ತೆರಿಗೆ ಬಾಕಿ ಉಳಿಸಿಕೊಂಡಿರೋರು ಎಷ್ಟ್ ಜನ ಗೊತ್ತಾ..? ಬರೋಬ್ಬರಿ 6 ಲಕ್ಷ ಎಂದ್ರೆ ನಂಬ್ತಿರಾ.. ನಂಬ್ಲೇಬೇಕು..ಏಕಂದ್ರೆ ಇಂತದ್ದೊಂದು ಅಧೀಕೃತ ಮಾಹಿತಿ ಕೊಟ್ಟಿರೋದು ವಿಶೇಷ ಆಯುಕ್ತ ಮನೀಷ್ ಮೌದ್ಗಿಲ್. ಬೆಂಗಳೂರು ಅಭಿವೃದ್ದಿಯಾಗೋದೆ ಜನರು ಕಟ್ಟುವ ತೆರಿಗೆಯಿಂದ. ಆದ್ರೆ ತೆರಿಗೆದಾರರೇ ಸಮರ್ಪಕವಾಗಿ ತೆರಿಗೆ ಕಟ್ಟುತ್ತಿಲ್ಲ. ಇದು ಪಾಲಿಕೆಗೆ ತಲೆನೋವಾಗಿದೆ. ಪ್ರತಿ ವರ್ಷ ತೆರಿಗೆ ಕಟ್ಟಿ ಮಾದರಿಯಾಗಬೇಕಾದ ಪ್ರಮುಖ ವ್ಯಕ್ತಿಗಳೇ ಬಿಬಿಎಂಪಿಗೆ ಆಸ್ತಿ ತೆರಿಗೆ ಕಟ್ಟುತ್ತಿಲ್ವಾಂತೆ. ಹೌದು.. ನಾಗರಿಕ ಸೌಲಭ್ಯ ಬಳಸಿಕೊಂಡಿಯೂ 6 ಲಕ್ಷ ಮಂದಿ ಬಿಬಿಎಂಪಿಗೆ ಆಸ್ತಿ ತೆರಿಗೆಯನ್ನೇ ಪಾವತಿಸಿಲ್ಲ ಎನ್ನೋ ಸ್ಪೋಟಕ ಮಾಹಿತಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮನೀಷ್ ಮೌದ್ಗಿಲ್ ಕಚೇರಿ…

Read More