Author: AIN Author

ಹೈದರಾಬಾದ್‌: ಹಾಸ್ಟೆಲ್‌ಗೆ (Hostel) ಹೋಗುವುದನ್ನು ತಪ್ಪಿಸಿಕೊಳ್ಳುವುದಕ್ಕಾಗಿ 12 ವರ್ಷದ ಬಾಲಕಿಯೊಬ್ಬಳು ಉಚಿತ ಬಸ್ ಸೇವೆ ಬಳಸಿಕೊಂಡು 33 ಗಂಟೆಗಳ ಕಾಲ ಪ್ರಯಾಣ ಮಾಡಿದ ಘಟನೆ ತೆಲಂಗಾಣದಲ್ಲಿ (Telangana) ನಡೆದಿದೆ. https://ainlivenews.com/the-center-has-declared-a-canadian-born-criminal-as-a-terrorist/ ಬಾಲಕಿ ತಪ್ಪಿಸಿಕೊಂಡಿರುವುದಾಗಿ ನೀಡಲಾದ ದೂರನ್ನು ಆಧರಿಸಿ ತನಿಖೆ ಆರಂಭಿಸಿದ್ದ ಪೊಲೀಸರು (Police) ಬಾಲಕಿಯನ್ನು ಹೈದರಾಬಾದ್‌ನ (Hyderabad) ಜ್ಯೂಬಿಲಿ ಬಸ್ ನಿಲ್ದಾಣದಲ್ಲಿ ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಿದ್ದಾರೆ.  ಅಷ್ಟಕ್ಕೂ ನಡೆದಿದ್ದೇನು? ವಿದ್ಯಾರಣ್ಯಪುರಿಯ ನಿವಾಸಿಯಾದ ಬಾಲಕಿ ಖಾಸಗಿ ಶಾಲೆಯೊಂದರ ಹಾಸ್ಟೆಲ್ ನಲ್ಲಿದ್ದುಕೊಂಡು 8ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಕ್ರಿಸ್ಮಸ್ ರಜೆಗಾಗಿ ಪೆದ್ದಪಳ್ಳಿಯಲ್ಲಿರುವ ತಾತನ ಮನೆಗೆ ತೆರಳಿದ್ದಳು. ರಜೆ ಮುಗಿದ ಬಳಿಕ ತಾತನ ಮನೆಯಿಂದ ಹೊರಟ ಬಾಲಕಿ ಹಾಸ್ಟೆಲ್‌ಗೆ ಹೋಗಲು ಇಷ್ಟವಿಲ್ಲದೇ ಒಂದಾದ ಮೇಲೋಂದು ಬಸ್ ಬದಲಾಯಿಸುತ್ತಾ ಸುಮಾರು 33 ಗಂಟೆ ಪ್ರಯಾಣ ಮಾಡಿದ್ದಾಳೆ. ಬಸ್ ಹತ್ತಿಸಿದ ಬಳಿಕ ಬಾಲಕಿ ಊರು ತಲುಪಿಲ್ಲ, ಹಾಸ್ಟೆಲ್‌ಗೂ ಸೇರಿಲ್ಲ ಎಂಬುದನ್ನ ತಿಳದು ಆತಂಕಗೊಂಡ ಆಕೆಯ ತಾತ ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಸತತ ಕಾರ್ಯಾಚರಣೆ ನಡೆಸಿದ ಪೊಲೀಸರು ಬಾಲಕಿಯನ್ನು ಪತ್ತೆ…

Read More

ಉಗುರಿನ ಸೌಂದರ್ಯವನ್ನು ಕಾಪಾಡಿಕೊಳ್ಳುವುದು ಹೆಣ್ಮಕ್ಕಳಿಗೆ ಸುಲಭವಾಗಿ ಉಳಿದಿಲ್ಲ. ಪ್ರತಿನಿತ್ಯವೂ ತಮ್ಮದೇ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಸಂದರ್ಭ ಉಗುರಿಗೆ ಘಾಸಿಯಾಗುವ ಸಾಧ್ಯತೆಗಳಿರುತ್ತವೆ. ಜತೆಗೆ ಮನೆಯ ಕೆಲಸಗಳನ್ನು ಮಾಡುವ ಸಂದರ್ಭದಲ್ಲಿ ತೊಂದರೆಯಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿಯೂ ಉಗುರಿನತ್ತ ಹೆಚ್ಚಿನ ಆಸಕ್ತಿ ವಹಿಸಿ ಅದನ್ನು ಕಾಪಾಡಿಕೊಳ್ಳುವುದು ಸುಲಭದ ಕೆಲಸವೇನಲ್ಲ. ಹಾಗೆನೋಡಿದರೆ ಪ್ರತಿಯೊಬ್ಬ ಮಹಿಳೆ ತನ್ನ ದೇಹವನ್ನು ಸುಂದರವಾಗಿಟ್ಟುಕೊಳ್ಳಬೇಕೆಂಬ ಹಂಬಲ ಹೊಂದಿರುತ್ತಾಳೆ. ಕೇವಲ ಹಂಬಲದಿಂದಷ್ಟೆ ಸೌಂದರ್ಯ ಕಾಪಾಡಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಶರೀರದ ಪ್ರತಿಯೊಂದು ಅಂಗಗಳ ಬಗ್ಗೆಯೂ ಕಾಳಜಿವಹಿಸುವುದು ಅಗತ್ಯ. ಹೆಚ್ಚಿನ ಮಹಿಳೆಯರು ತಮ್ಮ ಉಗುರಿನತ್ತ ಹೆಚ್ಚಿನ ಕಾಳಜಿ ವಹಿಸುತ್ತಾರೆ. ತಾವು ಸುಂದರವಾಗಿದ್ದು ಉಗುರು ಕೆಟ್ಟದಾಗಿದ್ದರೆ ಜನ ನಗುತ್ತಾರೆ. ಅಥವಾ ಉಗುರಿನತ್ತ ದೃಷ್ಠಿ ಹರಿಸಿ ಮೂತಿ ತಿರುಗಿಸುತ್ತಾರೆ. ಹೀಗಿರುವಾಗ ಉಗುರನ್ನು ಹೇಗೆ ಕಾಪಾಡಿಕೊಳ್ಳಬೇಕು ಮತ್ತು ಹೇಗಿಟ್ಟುಕೊಂಡರೆ ಆಕರ್ಷಕವಾಗಿ ಕಾಣಬಹುದು ಎಂಬುದರ ಬಗ್ಗೆಯೂ ಚಿಂತೆ ಮಾಡುತ್ತಿರುತ್ತಾರೆ. ಸಾಮಾನ್ಯವಾಗಿ ವಿವಿಧ ಕೆಲಸಗಳನ್ನು ಅದರಲ್ಲೂ ಮನೆಕೆಲಸ ಮಾಡುವ, ಕಠಿಣ ಶ್ರಮದ ಕೆಲಸ ನಿರ್ವಹಿಸುವವರಿಗೆ ಉಗುರಿನ ಸೌಂದರ್ಯ ಕಾಪಾಡಿಕೊಳ್ಳುವುದು ಕಷ್ಟದ ಕೆಲಸವೇ. ಏಕೆಂದರೆ ಈ ವೇಳೆ ಉಗುರು…

Read More

ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್‌ಮನ್‌ ಡೇವಿಡ್ ವಾರ್ನರ್ ಅವರು ಸೋಮವಾರ (ಜನವರಿ 1) ತಮ್ಮ ಏಕದಿನ ಕ್ರಿಕೆಟ್ ವೃತ್ತಿ ಜೀವನಕ್ಕೆ ಹಠಾತ್‌ ವಿದಾಯ ಘೋಷಿಸಿದ್ದಾರೆ. ತಮ್ಮ ಟೆಸ್ಟ್ ಕ್ರಿಕೆಟ್‌ ವೃತ್ತಿ ಜೀವನದ ವಿದಾಯ ಪಂದ್ಯ ಆಡುವ 2 ದಿನಗಳ ಮುನ್ನ ವಾರ್ನರ್ ತೆಗೆದುಕೊಂಡಿರುವ ಈ ನಿರ್ಧಾರದಿಂದ ಅಭಿಮಾನಿಗಳು ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಗೆ ಆಘಾತವಾಗಿದೆ. ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವ ದೃಷ್ಟಿಯಿಂದ ವಾರ್ನರ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 565 ರನ್ ಗಳಿಸಿ ಆಸ್ಟ್ರೇಲಿಯಾ ಟ್ರೋಫಿ ಗೆಲ್ಲುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ವಾರ್ನರ್, ಒಟ್ಟಾರೆ 161 ಏಕದಿನ ಪಂದ್ಯಗಳಿಂದ 6932 ರನ್ ಗಳಿಸಿದ್ದಾರೆ. ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಿದ್ದರೂ 2025 ರಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವುದಾಗಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಹೇಳಿದ್ದಾರೆ. ಸಿಡ್ನಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ತಮ್ಮ ಏಕದಿನ ನಿವೃತ್ತಿಯ ಬಗ್ಗೆ ಘೋಷಿಸಿದ್ದಾರೆ. “ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವ…

Read More

ಬೆಂಗಳೂರು:- ಬೆಂಗಳೂರು ಉತ್ತರ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸುವ ಕುರಿತು ಮಾಜಿ ಸಿಎಂ ಡಿವಿ ಸದಾನಂದಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ‘ನಾನು 30 ವರ್ಷದ ರಾಜಕಾರಣ ನೋಡಿದ್ದೇನೆ. ಹೊಸಬರು ಬರಬೇಕು ಎನ್ನುವ ಕಾರಣಕ್ಕೆ ಚುನಾವಣೆ ರಾಜಕೀಯದಿಂದ ದೂರ ಸರಿಯುವ ಪ್ರಯತ್ನ ಮಾಡಿದ್ದೇನೆ. ಆದರೆ, ಅಶೋಕ, ಬೊಮ್ಮಾಯಿ‌, ಡಾ. ಅಶ್ವತ್ಥನಾರಾಯಣ, ಸೋಮಶೇಖರ್, ದಾಸರಹಳ್ಳಿ ಮುನಿರಾಜು ಸೇರಿದಂತೆ ಪಕ್ಷದ ಎಲ್ಲ ನಾಯಕರು ನೀವೇ ಸ್ಪರ್ಧಿಸಿ ಎಂದು ಒತ್ತಡ ಹಾಕುತ್ತಿದ್ದಾರೆ’ ಎಂದರು. ‘ನಾನು ನನ್ನ ಕ್ಷೇತ್ರದಲ್ಲಿ ಯಾರನ್ನೂ ದೂರ ಇಟ್ಟವನಲ್ಲ. ಎಲ್ಲರ ವಿಶ್ವಾಸ ಗಳಿಸಿದ್ದೇನೆ. ಅನೇಕ ಆರೋಪ, ಅಪವಾದ ಬಂದಾಗಲೂ ಎಲ್ಲರೂ ಜೊತೆಗೆ‌ ನಿಂತಿದ್ದಾರೆ. ಸಣ್ಣ ಕೆಲಸ ಮಾಡಿ ದೊಡ್ಡ ಪ್ರಚಾರ ಪಡೆಯುವ ವ್ಯಕ್ತಿ ನಾನಲ್ಲ‌.‌ ಈ ಹಂತದಲ್ಲಿ ನಾನು ಏನೂ ಹೇಳುವುದಿಲ್ಲ. ಪಕ್ಷ ಏನು ತೀರ್ಮಾನ ಮಾಡುತ್ತದೊ ನೋಡಬೇಕು’ ಎಂದರು. ಬೆಂಗಳೂರು ಉತ್ತರ ಕ್ಷೇತ್ರದ ಮೇಲೆ ಮಾಜಿ ಸಚಿವ ವಿ. ಸೋಮಣ್ಣ ಕಣ್ಣಿಟ್ಟಿದ್ದಾರೆಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಸೋಮಣ್ಣನವರೇ ನಾನು…

Read More

ಬಾಬಾ ವಂಗಾ ಅವರ 2024 ರ ಭವಿಷ್ಯ ಮತ್ತೊಮ್ಮೆ ಸುದ್ದಿಯಲ್ಲಿದೆ. ಬಾಬಾ ವಂಗಾ ಅವರ ಭವಿಷ್ಯವಾಣಿಯ ಪ್ರಕಾರ, ಸೈಬರ್ ದಾಳಿಗಳು, ನೈಸರ್ಗಿಕ ವಿಕೋಪಗಳು ಸೇರಿದಂತೆ ಅನೇಕ ಘಟನೆಗಳು 2024 ರಲ್ಲಿ ಸಂಭವಿಸಲಿವೆ. 2024 ರಲ್ಲಿ ಬಾಬಾ ವೆಂಗಿಯ ಭವಿಷ್ಯವನ್ನು ನೋಡಿ ಜಾಗತಿಕ ಆರ್ಥಿಕತೆಯ ಮೇಲೆ ಬಿಕ್ಕಟ್ಟು ಬಾಬಾ ವೆಂಗಾ ಅವರ ಭವಿಷ್ಯವಾಣಿಯ ಪ್ರಕಾರ, 2024 ರಲ್ಲಿ ದೊಡ್ಡ ಜಾಗತಿಕ ಬಿಕ್ಕಟ್ಟು ಸಂಭವಿಸಬಹುದು. ಇದರಲ್ಲಿ ಸಾಲದ ಪ್ರಮಾಣ ಹೆಚ್ಚಾಗಲಿದೆ. ಭೂಮಿಗೆ ಸಂಬಂಧಿಸಿದಂತೆ ಉದ್ವಿಗ್ನತೆಯೂ ಇರಬಹುದು, ಇದು ಜಾಗತಿಕ ಆರ್ಥಿಕತೆಯನ್ನು ಅಲುಗಾಡಿಸುತ್ತದೆ. ಪ್ರಾಕೃತಿಕ ವಿಕೋಪಗಳ ಭಯ ಬಾಬಾ ವೆಂಗಾ ಅವರ ಭವಿಷ್ಯವಾಣಿಯ ಪ್ರಕಾರ ಭೂಮಿಯ ಕಕ್ಷೆಯಲ್ಲಿ ಬದಲಾವಣೆ ಆಗಬಹುದು. ಇದು ಸಾಮಾನ್ಯವಾಗಿ ದೀರ್ಘಕಾಲದವರೆಗೆ ಸಂಭವಿಸುತ್ತದೆ. ಆದರೆ, ಶೀಘ್ರದಲ್ಲೇ ಈ ಬದಲಾವಣೆ ಕಂಡುಬಂದರೆ ಭೀಕರ ಪ್ರಕೃತಿ ವಿಕೋಪ ಸಂಭವಿಸಬಹುದು. ಸೈಬರ್ ದಾಳಿಯ ಸಾಧ್ಯತೆ ವೆಂಗಾ ಪ್ರಕಾರ, 2024 ರಲ್ಲೂ ಸೈಬರ್ ದಾಳಿ ಸಂಭವಿಸಬಹುದು. ಹ್ಯಾಕರ್‌ಗಳು ಪವರ್ ಗ್ರಿಡ್‌ಗಳು ಮತ್ತು ನೀರಿನ ಸಂಸ್ಕರಣಾ ಘಟಕಗಳ ಮೇಲೆ ದಾಳಿ…

Read More

ದಾವಣಗೆರೆ:- ಪ್ರತಾಪ್ ಸಿಂಹ ಅವರ ತಮ್ಮನ ಕೇಸ್ ರಾಜಕೀಯ ಪ್ರೇರಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಪ್ರತಾಪ್ ಸಿಂಹ ಅವರ ತಮ್ಮನ ಪರವಾಗಿ ನಾವು ಇದ್ದೇವೆ. ಸಂಸದ ಪ್ರತಾಪ್ ಸಿಂಹ ಅವರ ತಮ್ಮನ ಕೇಸ್ ರಾಜಕೀಯ ಪ್ರೇರಿತವಾಗಿದೆ. ಅದು ಇಡೀ ರಾಜ್ಯದ ಜನತೆಗೆ ಗೊತ್ತಿದೆ ಎಂದು ಕುಟುಕಿದ್ದಾರೆ. ಮೈಸೂರಿನಲ್ಲಿ ಚುನಾವಣಾ ರಾಜಕಾರಣ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹತಾಶ ಮನೋಭಾವದಲ್ಲಿದೆ. ಹೀಗಾಗಿ, ಕಾಂಗ್ರೆಸ್ಸಿಗರು ಈ ರೀತಿ ಮಾಡ್ತಾ ಇದ್ದಾರೆ. ಲೋಕಸಭಾ ಚುನಾವಣೆಗೆ ಪ್ರತಾಪ್ ಸಿಂಹ ಹೆಸರು ಕೆಡಿಸಲು ಈ ರೀತಿ ಮಾಡ್ತಾ ಇದ್ದಾರೆ ಎಂದು ವಿಜಯೇಂದ್ರ ಆರೋಪ ಮಾಡಿದ್ದಾರೆ.

Read More

ಹುಬ್ಬಳ್ಳಿ:- ಆರ್ಥಿಕ ಪ್ರಗತಿಯಲ್ಲಿ ಭಾರತ ನಂಬರ್-1 ಸ್ಥಾನಕ್ಕೆರುವುದು ಗ್ಯಾರಂಟಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಆರ್ಥಿಕ ಪ್ರಗತಿಯಲ್ಲಿ ಭಾರತ ವಿಶ್ವದ ಟಾಪ್ 3ನೇ ಸ್ಥಾನಕ್ಕೆ ಬರುವುದು ಸನ್ನಿಹಿತವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಈಗಾಗಲೇ ನಾವು ಟಾಪ್ 5ನೇ ಸ್ಥಾನದಲ್ಲಿದ್ದೇವೆ. ಹೊಸ ವರ್ಷದಲ್ಲಿ ಟಾಪ್ 3ನೇ ಸ್ಥಾನಕ್ಕೆ ಬರಲಿದ್ದೇವೆ. ಅದಾದ ನಂತರ ಹಂತ ಹಂತವಾಗಿ ವಿಶ್ವದಲ್ಲೇ ಭಾರತ ನಂಬರ್-1 ಸ್ಥಾನಕ್ಕೆರುವುದು ಗ್ಯಾರಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರ ಬಂಧನ ಪ್ರಕರಣದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜೋಶಿ, ಪ್ರತಾಪಸಿಂಹ ಜತೆ ನಾನು ಈ ಕುರಿತು ಮಾತನಾಡುವೆ. ಆದರೆ, ಇಷ್ಟು ದಿನ ಬಿಟ್ಟು ಈಗ ಏಕೆ ಬಂಧಿಸಿದ್ದಾರೆ? ಇದರ ಹಿನ್ನೆಲೆ ಏನು? ಎಂಬಂತಹ ಬಹಳಷ್ಟು ಪ್ರಶ್ನೆಗಳಿವೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದರು. ಮೈಸೂರು ಲೋಕಸಭಾ…

Read More

ಮಡಿಕೇರಿ:- ಮೈಸೂರು ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ಕಾಂಗ್ರೆಸ್ ಮುಖಂಡ ಲಕ್ಷ್ಮಣ್ ಸವಧಿ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರಧಾನಿ ನರೇಂದ್ರ ಮೋದಿಯೇ ಬಂದು ನಿಂತರೂ ಜನ ಸೋಲಿಸಲಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ಖಚಿತವೆಂದರು. ಪ್ರತಾಪ್ ಸಿಂಹ ಅವರಿಗೆ ಈ ಈ ಬಾರಿ ಟಿಕೆಟ್ ಇಲ್ಲ ಎನ್ನುವ ಮಾಹಿತಿ ಇದೆ. ಹೀಗಾಗಿ ಪ್ರತಾಪ್ ಸಿಂಹ ಅವರು ಸಿಎಂ ಸಿದ್ದರಾಮಯ್ಯ ಬಗ್ಗೆ ಬಾಯಿಗೆ ಬಂದಂತೆ ಏನೇನೋ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯನವರನ್ನು ಸೋಮಾರಿ ಸಿದ್ದ ಎಂದು ಕರೆಯುವ ಮೂಲಕ ಅಗೌರವ ತೋರಿದ್ದಾರೆ. ಸಿದ್ದರಾಮಯ್ಯ ಎಲ್ಲಿ, ಪ್ರತಾಪ್ ಸಿಂಹ ಎಲ್ಲಿ. ಮಾತನಾಡುವಾಗ ಯೋಚನೆ ಮಾಡಿ ಮಾತನಾಡಬೇಕು ಎಂದರು. ಪ್ರತಾಪ್ ಸಿಂಹ ಅವರು ಮೊದಲು ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ಮೈಸೂರು- ಬೆಂಗಳೂರು ಹೈವೆ ನಾವೇ ಮಾಡಿದ್ದು ಅಂತಾರೆ. ಹೆದ್ದಾರಿ ಅನುಮೋದನೆ ಸಂದರ್ಭ ಅವರು ಎಂಪಿ ಆಗಿರಲಿಲ್ಲ. ಹೈವೇ ವಿಚಾರದಲ್ಲಿ ನಾವೆ ಮಾಡಿದ್ದು ಅಂತ್ತೀರಲ್ಲ ನಿಮ್ಮನೆಯಿಂದ ತಂದು…

Read More

ಹೆಡ್‌ಫೋನ್‌ಗಳು ಹಾಗೂ ಇಯರ್ ‌ಬಡ್ಸ್‌ ಬಳಕೆಯಿಂದಾಗಿ ಕಿವಿಯ ತೊಂದರೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಮಕ್ಕಳ ಶ್ರವಣೇಂದ್ರಿಯ ವ್ಯವಸ್ಥೆಯ ಪಕ್ವತೆಯು ಅಪೂರ್ಣವಾ ಗಿರುವುದರಿಂದ ತಜ್ಞರು ಈ ಎಚ್ಚರಿಕೆಗಳನ್ನು ನೀಡಿದ್ದಾರೆ. ಮಕ್ಕಳು, ಹದಿಹರೆಯದವರು ಮತ್ತು ಯುವ ವಯಸ್ಕರು ಪ್ರತಿದಿನ ಹಲವು ಗಂಟೆಗಳ ಕಾಲ ಹೆಚ್ಚು ಶಬ್ದ ಕೊಟ್ಟುಕೊಂಡು ಸಂಗೀತವನ್ನು ಕೇಳುತ್ತಿದ್ದಾರೆ. 70 ಡೆಸಿಬಲ್​ ಇದು ಒಂದು ವರ್ಷದಲ್ಲಿ ಒಂದು ದಿನದ ಸರಾಸರಿ ವಿರಾಮ ಶಬ್ದ. ಇದನ್ನು ಜಾಗತಿಕವಾಗಿ ಶಿಫಾರಸ್ಸು ಮಾಡಲಾಗಿದೆ. ವೈಯಕ್ತಿಕ ಆಡಿಯೋ ವ್ಯವಸ್ಥೆಯನ್ನು ಬಳಸುವ ಜನರಿಗೆ ಶ್ರವಣೇಂದ್ರಿಯ ಆರೋಗ್ಯದ ಅಪಾಯವು ಐದು ವರ್ಷಗಳ ಅವಧಿಯಲ್ಲಿ ಶೇಕಡಾ 50 ಕ್ಕಿಂತ ಹೆಚ್ಚು ಪ್ರಮಾಣದಲ್ಲಿ ದಿನಕ್ಕೆ ಒಂದು ಗಂಟೆಗೂ ಹೆಚ್ಚು ಕಾಲ ಇರುತ್ತದೆ. 85 ಡೆಸಿಬಲ್ ಮಕ್ಕಳು ಮತ್ತು ಹದಿಹರೆಯದವರಿಗೆ ಸುರಕ್ಷಿತವಾಗಿದೆ ಎಂದು ಇತ್ತೀಚಿನ ವಾಲ್ ಸ್ಟ್ರೀಟ್ ಜರ್ನಲ್ ಲೇಖನದ ಬಗ್ಗೆ ಪ್ರಶ್ನೆ ಮಾಡಿದ ಫಿಂಕ್,  85 ಡೆಸಿಬಲ್‌ಗಳು ಯಾರಿಗೂ ಸುರಕ್ಷಿತ ಮಾನ್ಯತೆ ಅಲ್ಲ ಎಂದು ಹೇಳಿದ್ದರು. ದೈನಂದಿನ ಜೀವನದಲ್ಲಿ ವೈಯಕ್ತಿಕವಾಗಿ…

Read More

ಇನ್​ಸ್ಟಾಗ್ರಾಂನಲ್ಲಿ ಬರೋಬ್ಬರಿ 4 ಮಿಲಿಯನ್​ಗೂ ಅಧಿಕ ಫಾಲೋವರ್ಸ್​ ಹೊಂದಿರುವ ಅಮಲಾ, ಕೇವಲ ರೀಲ್ಸ್​ನಿಂದ ಮಾತ್ರವಲ್ಲ ಸಿನಿಮಾ ಪ್ರಚಾರಗಳನ್ನು ಮಾಡುವ ಮೂಲಕ ಹಣ ಸಂಪಾದನೆ ಮಾಡುತ್ತಾರೆ. ಕೇರಳದ ತ್ರಿವೆಂಡ್ರಮ್​ ಮೂಲದ ಅಮಲಾ ಅವರು ಅನೇಕ ಬಾರಿ ಸಿನಿಮಾ ವೇದಿಕೆಗಳಲ್ಲೂ ಕಾಣಿಸಿಕೊಂಡಿದ್ದಾರೆ. ಜಾಲತಾಣದಲ್ಲಿ ಆಕೆಯ ಖ್ಯಾತಿ ಸೆಲೆಬ್ರಿಟಿ ಪಟ್ಟವನ್ನು ತಂದುಕೊಟ್ಟಿದೆ. ಆದರೆ, ಇದೀಗ ಅವರ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಅಮಲಾ ಶಾಜಿ ಅವರ ಪ್ರಮೋಷನ್​ ನೋಡಿ ಹಣ ಹೂಡಿಕೆ ಮಾಡಿ, ಹಣ ಕಳೆದುಕೊಂಡ ಯುವಕನೊಬ್ಬ ಇದೀಗ ಅಮಲಾ ವಿರುದ್ಧ ಕಿಡಿಕಾರಿದ್ದಾರೆ. ಸಂತ್ರಸ್ತನು ಐಟಿ ಉದ್ಯೋಗಿಯಾಗಿದ್ದು, ಅಮಲಾ ವಿರುದ್ಧ ದೂರು ದಾಖಲಿಸಿದ್ದಾರೆ. ಯೂಟ್ಯೂಬ್​ ಸಂದರ್ಶನವೊಂದರಲ್ಲಿ ಮಾತನಾಡಿರುವ ಸಂತ್ರಸ್ತ, ಸಣ್ಣ ಮೊತ್ತದ ಹಣ ಹೂಡಿಕೆ ಮಾಡಿದರೆ ಒಂದೇ ಗಂಟೆಯಲ್ಲಿ ಹೂಡಿಕೆ ಮಾಡಿದ ಹಣಕ್ಕಿಂತ ಮೂರು ಪಟ್ಟ ಹೆಚ್ಚು ಗಳಿಸಬಹುದು ಎಂದು ಅಮಲಾ ಅವರು ಪ್ರಮೋಷನ್​ ನೀಡಿದ್ದರು. ಅದನ್ನು ನಂಬಿ ಹೂಡಿಕೆ ಮಾಡಿ ಹಣ ಕಳೆದುಕೊಂಡೆ ಎಂದು ಆರೋಪ ಮಾಡಿದ್ದಾನೆ. ಒಂದು ಗಂಟೆಯಲ್ಲಿ 15 ಸಾವಿರ ಕೊಟ್ಟರೆ…

Read More