Author: AIN Author

ಮಂಗಳೂರು:- ವಿದ್ಯಾರ್ಥಿಗಳು ಸಂಘಟನೆಗಳಲ್ಲಿ ತೊಡಗಿಸಿಕೊಂಡು ದೇಶ ಸೇವೆ ಮಾಡಬೇಕು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸೇವಾದಳ ದೇಶದ ದೊಡ್ಡ ಸಂಘಟನೆಯಾಗಿದೆ. ವಿದ್ಯಾರ್ಥಿಗಳು ದೇಶಪ್ರೇಮವನ್ನು ಮೈಗೂಡಿಸಿಕೊಳ್ಳುವುದರೊಂದಿಗೆ ಇಂತಹ ಸಂಘಟನೆಗಳಲ್ಲಿ ತೊಡಗಿಸಿಕೊಂಡು ದೇಶ ಸೇವೆ ಮಾಡಬೇಕು ಎಂದು ವಿದಾನಸಭಾ ಅಧ್ಯಕ್ಷ ಯು.ಟಿ.ಖಾದರ್‌ ಕರೆ ನೀಡಿದರು ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬಹಳಷ್ಟು ಮಂದಿ ಯುವಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ದೇಶ ಸೇವೆ ಮಾಡುವ ಮನಸ್ಸು ಪ್ರತಿಯೊಬ್ಬರಲ್ಲೂ ಮೂಡಬೇಕು. ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಎಲ್ಲರೂ ತಿಳಿದುಕೊಂಡು ಅವರ ಆದರ್ಶದಡಿ ಸಾಗಬೇಕು ಎಂದರು.

Read More

ದೋಹಾ: ಗೂಢಚರ್ಯೆ ಪ್ರಕರಣದಲ್ಲಿ ಮರಣದಂಡನೆಯ (Death Sentence) ಭೀತಿ ಎದುರಿಸುತ್ತಿದ್ದ ಭಾರತೀಯ ನೌಕಾಪಡೆಯ ಎಂಟು ಮಂದಿ ನಿವೃತ್ತ ಅಧಿಕಾರಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಎಂಟು ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ರದ್ದು ಮಾಡಿ ಕತಾರ್ ಕೋರ್ಟ್ (Qatar Court) ತೀರ್ಪು ನೀಡಿದೆ. ಈ ಮೂಲಕ ಕಾನೂನು ಸಮರದಲ್ಲಿ ಭಾರತ ಸರ್ಕಾರಕ್ಕೆ (Indian Government) ಮೊದಲ ಗೆಲುವು ಸಿಕ್ಕಿದೆ. ಮರಣದಂಡನೆಯನ್ನು ಜೈಲು ಶಿಕ್ಷೆಯಾಗಿ ಮಾರ್ಪಾಡು ಮಾಡಿ ತೀರ್ಪು ನೀಡಿದೆ. ಆದರೆ ಎಷ್ಟು ವರ್ಷ ಶಿಕ್ಷೆ ಎನ್ನುವ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಈ ಬಗ್ಗೆ ಕತಾರ್ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವುದಾಗಿ ಭಾರತೀಯ ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ. ಈ ಪ್ರಕರಣದಲ್ಲಿ ಮುಂದಿನ ಹೆಜ್ಜೆ ಇಡುವ ಬಗ್ಗೆ ಕಾನೂನು ಪರಿಣಿತರನ್ನು ಸಂಪರ್ಕಿಸಿದೆ. ಕತಾರ್‌ನಲ್ಲಿರುವ ಭಾರತದ ರಾಯಭಾರಿ ವಿಪುಲ್ ಮತ್ತು ಇತರ ಅಧಿಕಾರಿಗಳು ಬಂಧಿತ ವ್ಯಕ್ತಿಗಳ ಕುಟುಂಬ ಸದಸ್ಯರೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದರು. https://ainlivenews.com/attention-students-mphil-not-recognized-ugc-notice-to-stop-admission/ ತೀರ್ಪಿನ ಸಂಪೂರ್ಣ ವಿವರಕ್ಕೆ ನಾವು ಕಾಯುತ್ತಿದ್ದೇವೆ. ಈ ವಿಚಾರದಲ್ಲಿ ಆರಂಭದಿಂದಲೂ ಕುಟುಂಬದ ಬೆಂಬಲಕ್ಕೆ ನಿಂತಿದ್ದೇವೆ…

Read More

ಬೆಂಗಳೂರು:- 1.6 ಲಕ್ಷ ಮನೆಗಳ ನಿರ್ಮಾಣ ಮಾರ್ಚ್‌ ಒಳಗೆ ಪೂರ್ಣಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯಾದ್ಯಂತ ವಸತಿ ಇಲಾಖೆಯ ವಿವಿಧ ಯೋಜನೆಗಳಡಿ ನಿರ್ಮಿಸುತ್ತಿರುವ 1.6 ಲಕ್ಷ ಮನೆಗಳ ನಿರ್ಮಾಣ 2024ರ ಮಾರ್ಚ್‌ ಒಳಗಾಗಿ ಪೂರ್ಣಗೊಳ್ಳಬೇಕು. ಜತೆಗೆ ರಾಜೀವ್‌ಗಾಂಧಿ ವಸತಿ ನಿಗಮದಿಂದ ನಿರ್ಮಿಸುತ್ತಿರುವ 52,189 ಮನೆಗಳ ನಿರ್ಮಾಣವನ್ನು ಸರ್ಕಾರದ ಹಣದಿಂದಲೇ ಪೂರ್ಣಗೊಳಿಸಲು ಅಗತ್ಯವಿರುವ ಹೆಚ್ಚುವರಿ ಅನುದಾನಕ್ಕೆ ಸಚಿವ ಸಂಪುಟ ಸಭೆ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು’ ಎಂದರು. ವಿವಿಧ ವಸತಿ ಯೋಜನೆಗಳಡಿ ವರ್ಷ 3 ಲಕ್ಷ ಮನೆಗಳ ನಿರ್ಮಾಣ ಗುರಿ ಹೊಂದಲಾಗಿತ್ತು. ಇದೀಗ 1.31 ಲಕ್ಷ ಮನೆಗಳ ನಿರ್ಮಾಣ ಪೂರ್ಣವಾಗಿದೆ. ಉಳಿದಂತೆ ನಿರ್ಮಾಣ ಹಂತದಲ್ಲಿರುವ 1.6 ಲಕ್ಷ ಮನೆಗಳನ್ನು 2024ರ ಮಾರ್ಚ್‌ ಒಳಗೆ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

Read More

ಮಂಗಳೂರು:- ಬರ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಬೇಡ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಈ ಸಂಬಂಧ BC ಮಾತನಾಡಿದ ಅವರು ಬರದ ವಿಚಾರದಲ್ಲಿ ರಾಜ್ಯ ಸರ್ಕಾರ ಕೇಂದ್ರವನ್ನ ದೂರುತ್ತಿದೆ. ಅದರ ಬದಲು ರಾಜ್ಯ ಸರ್ಕಾರವೇ 10 ಸಾವಿರ ಕೋಟಿ ರು. ಘೋಷಿಸಲಿ, ಕೇಂದ್ರ ಸರ್ಕಾರದ ಜತೆ ನಾವು ನೀವು ಒಟ್ಟಾಗಿ ಮಾತನಾಡೋಣ. ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಬೇಡಿ ಎಂದರು. ಯುವನಿಧಿ ಯೋಜನೆಯಲ್ಲಿ ಪದವಿ ಪಡೆದ ಎಲ್ಲ ನಿರುದ್ಯೋಗಿಗಳಿಗೆ ಹಣ ಕೊಡುತ್ತೇವೆ ಎಂದು ಹೇಳಿದ್ದರು. ಆದರೆ ಈಗ 2022-23ರಲ್ಲಿ ಪದವಿ ಪೂರೈಸಿದ ನಿರುದ್ಯೋಗಿಗಳಿಗೆ ಮಾತ್ರ ಎನ್ನುತ್ತಿದ್ದಾರೆ. ಕರ್ನಾಟಕ ಸರ್ಕಾರ ಆಡಳಿತದಲ್ಲಿ ವಿಫಲವಾಗಿ ಅಸಹಾಯಕವಾಗಿದೆ. ಬರ ನಿರ್ವಹಣೆ,‌ ಕಾನೂನು ಸುವ್ಯವಸ್ಥೆ ಎಲ್ಲ ವಿಚಾರದಲ್ಲಿ ಸರ್ಕಾರ ವಿಫಲವಾಗಿದೆ. ಆರ್‌ಎಸ್‌ಎಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್, ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ಬಂಧಿಸುವ ವಿಚಾರದಲ್ಲಿ ಸರ್ಕಾರ ಮುಳುಗಿದೆ ಎಂದರು. ಶಾಸಕ ಬಸನಗೌಡ ಪಾಟೀಳ್‌ ಯತ್ನಾಳರ…

Read More

ಬಾಳೆಹಣ್ಣು ರುಚಿಕರವಾದ ಪೌಷ್ಟಿಕಾಂಶದ ಹಣ್ಣು (Health). ಇದು ಕೈಗೆಟುಕುವ ದರದಲ್ಲಿಯೂ ಸಿಗುತ್ತದೆ. ಬಾಳೆಹಣ್ಣು ಪೊಟ್ಯಾಸಿಯಮ್ ಅನ್ನು ಹೊಂದಿರುತ್ತದೆ. ಇದು pH ಅನ್ನು ಸಮತೋಲನಗೊಳಿಸುವ ವಿದ್ಯುದ್ವಿಚ್ಛೇದ್ಯಗಳಲ್ಲಿ ಒಂದಾಗಿದೆ. ನಮ್ಮ ದೇಹವನ್ನು ಹೈಡ್ರೇಟ್ ಮಾಡುವುದು, ರಕ್ತದೊತ್ತಡವನ್ನು ನಿಯಂತ್ರಿಸುವುದು ಮತ್ತು ಜೀರ್ಣಕ್ರಿಯೆ, ಸ್ನಾಯುವಿನ ಸಂಕೋಚನದಂತಹ ದೈಹಿಕ ಕಾರ್ಯಗಳನ್ನು ನಿಯಂತ್ರಿಸುವುದು ಅವಶ್ಯಕ (Side effects). ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನಬಹುದೇ? ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನುವುದು ಸರಿಯೋ ಅಲ್ಲವೋ ಎಂಬುದಕ್ಕೆ ನೇರವಾದ ಉತ್ತರವನ್ನು ನೀಡಲಾಗುವುದಿಲ್ಲ. ಇದು ಬಾಳೆಹಣ್ಣಿನ ಮೇಲೆ ಅವಲಂಬಿತವಾಗಿರುತ್ತದೆ. ಬಾಳೆಹಣ್ಣು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ತಜ್ಞರು ಹೇಳುತ್ತಾರೆ. ಬಾಳೆಹಣ್ಣುಗಳು ಹಸಿರಾಗಿರುವಾಗ ಹೆಚ್ಚು ಫೈಬರ್ ಅನ್ನು ಹೊಂದಿರುತ್ತವೆ. ತುಂಬಾ ನಿರೋಧಕ ಪಿಷ್ಟವನ್ನು ಹೊಂದಿರುತ್ತದೆ. ಬಾಳೆಹಣ್ಣುಗಳು ಹಳದಿ ಮತ್ತು ಹಣ್ಣಾಗಲು ಪ್ರಾರಂಭಿಸಿದ ತಕ್ಷಣ, ಫೈಬರ್ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ. ಅದೇ ವೇಳೆ ಬಾಳೆಹಣ್ಣಿನಲ್ಲಿ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ. ಇದು ನಿಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಸಹ ಕ್ಷಿಪ್ರವಾಗಿ ಹೆಚ್ಚಿಸುತ್ತದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿಂದರೆ ದೇಹದಲ್ಲಿ ಸಕ್ಕರೆ…

Read More

ಸೂರ್ಯೋದಯ: 06.41 AM, ಸೂರ್ಯಾಸ್ತ : 06.03 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಹೇಮಂತ ಋತು, ತಿಥಿ: ಇವತ್ತು ತದಿಗೆ 09:43 AM ತನಕ ನಂತರ ಚೌತಿ ನಕ್ಷತ್ರ: ಇವತ್ತು ಪುಷ್ಯ 03:10 AM ತನಕ ನಂತರ ಆಶ್ಲೇಷ ಯೋಗ: ಇವತ್ತು ವೈಧೃತಿ 02:29 AM ತನಕ ನಂತರ ವಿಷ್ಕುಂಭ ಕರಣ: ಇವತ್ತು ವಿಷ್ಟಿ 09:43 AM ತನಕ ನಂತರ ಬವ 10:46 PM ತನಕ ನಂತರ ಬಾಲವ ರಾಹು ಕಾಲ: 09:00 ನಿಂದ 10:30 ವರೆಗೂ ಯಮಗಂಡ:01:30 ನಿಂದ 03:00 ವರೆಗೂ ಗುಳಿಕ ಕಾಲ: 06:00 ನಿಂದ 07:30 ವರೆಗೂ ಅಭಿಜಿತ್ ಮುಹುರ್ತ: ಬೆಳಗ್ಗೆ.11:56 ನಿಂದ ಮ.12:40 ವರೆಗೂ ಮೇಷ: ಈ ದಿನ ನಿಮಗೆ ವ್ಯಾಪಾರದಲ್ಲಿ ಪ್ರಗತಿ. ಧನ ಲಾಭ ಆಗಲಿದೆ, ಮಾನಸಿಕ ನೆಮ್ಮದಿ.ಉದ್ಯೋಗದಲ್ಲಿ ಬಡ್ತಿ. ಶತ್ರುಗಳ ಬಾಧೆ.ದಾನ-ಧರ್ಮದಲ್ಲಿ ಆಸಕ್ತಿ ಹೆಚ್ಚಾಗಲಿದೆ.ವ್ಯಾಪಾರಿ ವರ್ಗದವರುತಮ್ಮವ್ಯವಹಾರದಲ್ಲಿ ಹೆಚ್ಚಿನ ಸ್ಪರ್ಧೆ ಎದುರಿಸಬೇಕಾಗುತ್ತದೆ. ಧನಾದಾಯ…

Read More

ನವದೆಹಲಿ:- ಭಾರತದಲ್ಲಿ ʻಶೂನ್ಯ ರೂಪಾಯಿ ನೋಟು ಮುದ್ರಣವಾಗಿದ್ದು, ಇದರ ಉಪಯೋಗವೇನು ಎಂಬುವ ಕಂಪ್ಲೀಟ್ ಮಾಹಿತಿ ತಿಳಿಯಲು ಪೂರ್ತಿ ಓದಿ. ಭಾರತದಲ್ಲಿ ಶೂನ್ಯ ರೂಪಾಯಿ ನೋಟು ಏಕೆ ಮುದ್ರಿಸಲಾಗಿದೆ ಎಂದು ಎಲ್ಲರಿಗೂ ಕಾಡುವ ಪ್ರಶ್ನೆ. ಇದರ ಅಗತ್ಯವೇನಿತ್ತು? ಅಂತಾ ಇಲ್ಲಿ ನೋಡೋಣ ಬನ್ನಿ… ವಾಸ್ತವವಾಗಿ, 2007 ರಲ್ಲಿ 5 ನೇ ಪಿಲ್ಲರ್, ಚೆನ್ನೈನ ಸರ್ಕಾರೇತರ ಸಂಸ್ಥೆ (ಎನ್‌ಜಿಒ) ಶೂನ್ಯ ರೂಪಾಯಿಯ ನೋಟನ್ನು ಮುದ್ರಿಸಿತ್ತು. ಈ ನೋಟಿನ ಮೇಲೆ ಸರ್ಕಾರ ಅಥವಾ ರಿಸರ್ವ್ ಬ್ಯಾಂಕ್ ಯಾವುದೇ ಗ್ಯಾರಂಟಿ ನೀಡಿಲ್ಲ. ಅದು ಆಚರಣೆಗೂ ಬರಲಿಲ್ಲ. ಅಂದರೆ, ಅದನ್ನು ವಹಿವಾಟಿನಿಂದ ಹೊರಗಿಡಲಾಗಿದೆ. ಈ ಟಿಪ್ಪಣಿಯ ಮೂಲಕ ವಿಶೇಷ ಸಂದೇಶವನ್ನು ನೀಡಲಾಗಿದೆ. ಇದು ಹಿಂದಿ, ತಮಿಳು, ಕನ್ನಡ, ಮಲಯಾಳಂ ಮತ್ತು ತೆಲುಗು ಭಾಷೆಗಳಲ್ಲಿ ಪ್ರಕಟವಾಯಿತು. ಶೂನ್ಯ ರೂಪಾಯಿ ನೋಟುಗಳನ್ನು ಏಕೆ ಮುದ್ರಿಸಲಾಯಿತು? ದೇಶದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿತ್ತು. ಎಲ್ಲೆಲ್ಲಿ ಯಾವುದೇ ಕೆಲಸವಿದ್ದರೂ ಹಣವಿಲ್ಲದೇ ಯಾವ ಕೆಲಸವೂ ನಡೆಯುತ್ತಿರಲಿಲ್ಲ. ಇದರಿಂದ ಸಾರ್ವಜನಿಕರ ಸ್ಥಿತಿ ಶೋಚನೀಯವಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಭ್ರಷ್ಟಾಚಾರವನ್ನು…

Read More

ಬೆಂಗಳೂರು:- ಕೆಂಪೇಗೌಡ ಏರ್ಪೋರ್ಟ್ನಲ್ಲಿ ಟರ್ಮಿನಲ್-2 ವಾಯುವಜ್ರ ಬಸ್ ನಿಲ್ದಾಣ ಉದ್ಘಾಟಿಸಿ ರಾಮಲಿಂಗಾರೆಡ್ಡಿ ಹೇಳಿಕೆ ಸತೀಶ್ ಜಾರಕಿ ಹೊಳಿ ಡಿಸಿಎಂ ಸ್ಥಾನಕ್ಕೆ ಬೇಡಿಕೆ ವಿಚಾರವಾಗಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಡಿ.ಸಿ.ಎಂ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ. ಡಿ.ಸಿ.ಎಂ ಸ್ಥಾನ ಕೊಡೋದು ಬೀಡೋ ತೀರ್ಮಾನ ಹೈಕಮ್ಯಾಂಡ್ ನದ್ದು. ನಾನು ಡಿ.ಸಿ.ಎಂ ಸ್ಥಾನದ ಆಕಾಂಕ್ಷಿ ಅಲ್ಲ ಎಂದರು. ಇನ್ನೂ ಯತ್ನಾಳ್ ಕಾಂಗ್ರೆಸ್ ಜೊತೆ ಮ್ಯಾಚ್ ಫಿಕ್ಸಿಂಗ್ ಬಿಜೆಪಿ ಆರೋಪ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರಿಗೆ ಮಾಡೋಕೆ ಬೇರೆ ಏನು ಕೆಲಸ ಇಲ್ಲ. ಯತ್ನಾಳ್ ಯಾರ ಮಾತು ಕೇಳೋದಿಲ್ಲ. ಮನಸ್ಸಿಗೆ ಬರೋದನ್ನ ಹೇಳೋದು ಅವರ ವ್ಯಕ್ತಿತ್ವ. ಮೈಸೂರುಹಕ್ಕಿ ವಿಶ್ವನಾಥ್ ಸಹ ಹಾಗೆಯೇ. ಮನಸ್ಸಿಗೆ ಏನ್ ಬರುತ್ತೋ ಅದನ್ನ ಹೇಳಿಬಿಡ್ತಾರೆ. ಮನಸ್ಸಲ್ಲಿ ಇಟ್ಟಕೊಳ್ಳಲ್ಲ ಅಂತಹವರಲ್ಲಿ ಯತ್ನಾಳ್ ಕೂಡ ಒಬ್ಬರು. ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಿಜೆಪಿ ಪಕ್ಷಕ್ಕೆ ಟಾಂಗ್ ನೀಡಿ ಯತ್ನಾಳ್ ಪರ ರಾಮಲಿಂಗಾರೆಡ್ಡಿ ಸಾಫ್ಟ್ ಕಾರ್ನರ್ ಮಾತನಾಡಿದ್ದಾರೆ.

Read More

ಬೆಂಗಳೂರು:- ಮಗನನ್ನು ಬಿಡುಗಡೆ ಮಾಡದಿದ್ದರೆ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದು ಕರವೇ ನಾರಾಯಣಗೌಡರ ತಾಯಿ ಎಚ್ಚರಿಕೆ ನೀಡಿದ್ದಾರೆ. ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಆಗ್ರಹಿಸಿ ಹೋರಾಟ ನಡೆಸಿದ್ದ ನಾರಾಯಣಗೌಡರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಹಿನ್ನೆಲೆಯಲ್ಲಿ ಗೌರಮ್ಮ ಅವರು ತಮ್ಮ ಅಳಲು ತೋಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ʼನನ್ನ ಮಗ ಏನು ತಪ್ಪು ಮಾಡಿದ್ದ ಎಂದು ಜೈಲಿಗೆ ಹಾಕಿದ್ದೀರಿʼ ಎಂದು ಸರಕಾರವನ್ನು ಗೌರಮ್ಮ ಪ್ರಶ್ನಿಸಿದ್ದು, ನನ್ನ ಮಗನ ಆರೋಗ್ಯ ಸರಿಯಿಲ್ಲ. ಮಾತನಾಡಲೂ ತ್ರಾಣವಿಲ್ಲದಷ್ಟು ಸುಸ್ತಾಗಿದ್ದರು. ಆದರೂ ಕನ್ನಡಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಅದೇ ತಪ್ಪೇ. ದರೋಡೆ, ಕಳ್ಳತನ ಮಾಡಿದ್ದಾರೆಯೇ, ಯಾವ ಕಾರಣಕ್ಕೆ ಜೈಲಿನಟ್ಟಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.28ರಂದು ನಮ್ಮ ಕುಟುಂಬದ ಸದಸ್ಯರು ನಾರಾಯಣಗೌಡರಿಗೆ ಕೊಡಲು ಊಟ ಮತ್ತು ಮಾತ್ರೆಯನ್ನು ತೆಗೆದುಕೊಂಡು ಹೋಗಿದ್ದರು. ಆದರೆ ಜೈಲಿನ ಅಧಿಕಾರಿಗಳು ಅದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ನನ್ನ ಮಗ ಊಟ ಇಲ್ಲದೆ, ಜೈಲಿನಲ್ಲಿರಬೇಕಾದರೆ ಹೆತ್ತ ಕರಳು ಎಷ್ಟು ಸಂಕಟ ಪಡುತ್ತದೆ ಎಂದು ನಿಮಗೆ ಗೊತ್ತಾಗುತ್ತದೆಯೇ ಎಂದು…

Read More

ಬೆಂಗಳೂರು:- ಬೆಂಗಳೂರಿನ ನಾಗರೀಕರು ತಮ್ಮ ಅಹವಾಲುಗಳನ್ನು ನಮ್ಮ ಮನೆವರೆಗೂ ತರುವುದನ್ನು ತಪ್ಪಿಸಿ, ಸರ್ಕಾರವೇ ಅವರ ಬಳಿಗೆ ಹೋಗಿ ಅವರ ಸಮಸ್ಯೆ ಆಲಿಸಲು ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಾರ್ಯಕ್ರಮದ ಪೂರ್ವಭಾವಿ ಸಭೆ ನಂತರ ಬಿಬಿಎಂಪಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಶುಕ್ರವಾರ ಅವರು ಈ ವಿಚಾರ ತಿಳಿಸಿದರು. ಒಟ್ಟಾರೆ ಅವರು ಹೇಳಿದ್ದಿಷ್ಟು; ಮುಂದಿನ ತಿಂಗಳು 3 ರಿಂದ ತಿಂಗಳಾಂತ್ಯದವರೆಗೂ 10 ದಿನಗಳ ಕಾಲ ಜನಸಂಖ್ಯೆಗೆ ಅನುಗುಣವಾಗಿ ಎರಡು ಮೂರು ವಿಧಾನಸಭಾ ಕ್ಷೇತ್ರಗಳ ಜನರ ಅಹವಾಲು ಆಲಿಸಲಾಗುವುದು. ಬಿಬಿಎಂಪಿ, ಬಿಡಿಎ, ಬೆಸ್ಕಾಂ, ಬಿಎಂಟಿಸಿ, ಕಂದಾಯ ಇಲಾಖೆಯ ಖಾತೆ ಸಮಸ್ಯೆ, ನಮ್ಮ ಇಲಾಖೆ ಹಾಗೂ ಸರ್ಕಾರದ ಐದು ಗ್ಯಾರಂಟಿ ಸೇರಿದಂತೆ ಜನರ ಸಮಸ್ಯೆಗಳ ವಿಚಾರವಾಗಿ ಸಾರ್ವಜನಿಕರ ಕುಂದುಕೊರತೆ ಆಲಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲಾ ನಾಗರೀಗರು ತಮ್ಮ ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜನರು ನನ್ನ ಬಳಿ, ಮುಖ್ಯಮಂತ್ರಿಗಳು ಹಾಗೂ ಇತರ ಸಚಿವರುಗಳ ಬಳಿ ಪ್ರತಿನಿತ್ಯ…

Read More