Author: AIN Author

ಹೊನ್ನಾಳಿ : ಮುಂದಿನ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಜಾಬ್ ನಿಷೇಧ ಹಿಂಪಡೆವ ಹೇಳಿಕೆ ನೀಡಿ ಮುಸ್ಲಿಂ ತುಷ್ಟೀಕರಣಕ್ಕೆ ಮುಂದಾಗಿದ್ದಾರೆ. ಇದರಿಂದ ರಾಜ್ಯದಲ್ಲಿ ಕೋಮು ಸಂಘರ್ಷಕ್ಕೆ ಎಡೆ ಮಾಡುಕೊಡುತ್ತಿದ್ದಾರೆ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರ ಶಾಲಾ ಕಾಲೇಜುಗಳಲ್ಲಿ ಎಲ್ಲರೂ ಸಮವಸ್ತ್ರ ಧರಿಸಬೇಕೆಂದು ಆದೇಶ ಹೊರಡಿಸಿತ್ತು, ಈ ಆದೇಶದ ವಿರುದ್ದವಾಗಿ ಕೆಲವರು ಕೋರ್ಟಿಗೆ ಹೋದಾಗಲೂ ಸರ್ಕಾರದ ಆದೇಶ ಎತ್ತಿ ಹಿಡಿಯಲಾಯಿತು.  ಮತ್ತೆ ಕೆಲವರು ಸುಪ್ರಿಂಕೋರ್ಟಿಗೆ ಹೋಗಿದ್ದಾರೆ. ಇಂತಹ ಸಮಯದಲ್ಲಿ ಮುಖ್ಯಮಂತ್ರಿ ಹಿಜಾಬ್ ನಿಷೇಧ ಹಿಂತೆಗೆತ ಮಾತನಾಡಿರುವುದು ನ್ಯಾಯಾಂಗ ಆದೇಶ ಉಲ್ಲಂಘನೆ ಅಲ್ಲವೆ ಎಂದು ಪ್ರಶ್ನಿಸಿದರು. https://ainlivenews.com/sabarimala-ayyappa-swami-temple-earned-204-crore-rupees-in-39-days/ ಅವರು ಹಿಜಾಬ್ ಧರಿಸಿ ಕಾಲೇಜಿಗೆ ಹೋಗಿ ಎಂದರೆ ನಾವೂ ಸಹ ಕೇಸರಿ ಶಾಲು ಧರಿಸಿ ಕಾಲೇಜಿಗೆ ಹೋಗುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಬೇಕಾಗುತ್ತದೆ. ಆಗ ಕೋಮು ಸಂಘರ್ಷಕ್ಕೆ ದಾರಿಯಾಗಬಹುದು ಎಂದು ಎಚ್ಚರಿಸಿದರು. ಮೌಲ್ವಿಗಳ ಸಭೆಗೆ ಹೋಗುತ್ತಾರೆ. ಅಲ್ಲಿ 10 ಸಾವಿರ ಕೋಟಿ ಕೊಡುತ್ತೇವೆ ಎಂದು ಭರವಸೆ ನೀಡುತ್ತಾರೆ,…

Read More

ದೊಡ್ಡಬಳ್ಳಾಪುರ:- ಇಲ್ಲಿನ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಕಳ್ಳರು ಕರಾಮತ್ತು ತೋರಿದ್ದಾರೆ. ಒಂದೆಡೆ ಹತ್ತು ದಿನಗಳ ರಾಸುಗಳ ಜಾತ್ರೆಗೆ ರಾಜ್ಯದ ನಾನಾ ಭಾಗಗಳಿಂದ ರೈತರು ಬಂದಿದ್ದಾರೆ. ಮತ್ತೊಂದೆಡೆ ಜನಜಂಗುಳಿಯಲ್ಲಿ ದುಡ್ಡು ಹೆಗರಿಸುವುದನ್ನು ಕಳ್ಳರು ಕಸುಬು ಮಾಡಿಕೊಂಡಿದ್ದಾರೆ. ಹೌದು, ರೈತನೋರ್ವನಿಂದ ಎಂಟು ಸಾವಿರ ಹಣ ಕದ್ದು ಪರಾರಿ ಯಾಗಲು 3 ಜನ ಕಳ್ಳರು ಯತ್ನಿಸಿದ್ದಾರೆ. ಕೂಡಲೇ ರೈತನ ಚಿರಟಾದಿಂದ ಎಚೆತ್ತಾ ಅಲ್ಲಿನ ಸ್ಥಳೀಯ ಜನ ಕಳ್ಳರನ್ನು ಹಿಡಿಯಲು ಯತ್ನಿಸಿದ್ದಾರೆ. ಇದರಲ್ಲಿ ಒಬ್ಬ ಮಾತ್ರ ಸಿಕ್ಕಿಬಿದ್ದು ಇನ್ನಿಬ್ಬರು ಪರಾರಿ ಆಗಿದ್ದಾರೆ. ಜಾತ್ರೆಗೆ ಬಂದಿದ್ದ ರೈತರಿಂದ ಸಿಕ್ಕಿಬಿದ್ದ ಓರ್ವ ಕಳ್ಳನಿಗೆ ಸಾರ್ವಜನಿಕರು ಹಿಗ್ಗಮುಗ್ಗ ಥಳಿಸಿದ್ದಾರೆ. ಸಿಕ್ಕಿಬಿದ್ದಾ ಕಳ್ಳ ಈಗ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸರ ಅತಿಥಿ ಆಗಿದ್ದಾನೆ.

Read More

ಮುದ್ದೇಬಿಹಾಳ: ತಂದೆ ಮಾಡಿದ ಸಾಲ ಮಕ್ಕಳು ತೀರಿಸುವ ಹಾಗೆ ಹಿಂದಿನ ಬಿಜೆಪಿ ಸರ್ಕಾರ ಮಾಡಿಟ್ಟ ಸಾಲವನ್ನು ನಮ್ಮ ಕಾಂಗ್ರೆಸ್ ಸರ್ಕಾರ ತೀರಿಸುವ ಪರಿಸ್ಥಿತಿ ಬಂದಿದೆ. ಸರ್ಕಾರದ ಯಾವುದೇ ಇಲಾಖೆಯನ್ನು ಬಿಡದೇ ಖಜಾನೆಯನ್ನೇ ಖಾಲಿ ಮಾಡಿ ಕೊಳ್ಳೆ ಹೊಡೆದು ಹೋಗಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಆರೋಪಿಸಿದರು. ಪಟ್ಟಣದ ಹುಡ್ಕೋ ಬಡಾವಣೆಯಲ್ಲಿನ ಗೃಹ ಕಚೇರಿಯಲ್ಲಿ ಪಕ್ಷದ ತಾಲೂಕು ಎಸ್ಸಿ, ಎಸ್ಟಿ ಘಟಕದ ನೂತನ ಅಧ್ಯಕ್ಷ ಶ್ರೀಕಾಂತ ಚಲವಾದಿ ಹಾಗೂ ಪ್ರಧಾನ ಕಾರ್ಯದರ್ಶಿ ಸಿ.ಜೆ.ವಿಜಯಕರಗೆ ಸನ್ಮಾನಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷ ಬಡವರ, ದೀನ, ದಲಿತರ, ಹಿಂದುಳಿದವರ, ಅಲ್ಪಸಂಖ್ಯಾತರ, ಮಹಿಳೆಯರ, ರೈತರ ಪರ ಕಾಳಜಿ ಇರುವ ಪಕ್ಷ. https://ainlivenews.com/sabarimala-ayyappa-swami-temple-earned-204-crore-rupees-in-39-days/ ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಜನಪರ ಆಡಳಿತ ನಡೆಸುತ್ತಿದೆ. ಚುನಾವಣೆ ವೇಳೆ ಕಾಂಗ್ರೆಸ್ ಭರವಸೆ ನೀಡಿದಂತೆ ಐದು ಗ್ಯಾರಂಟಿಗಳಲ್ಲಿ ನಾಲ್ಕು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆದಿದೆ. ಇದನ್ನು ಸಹಿಸದ ಬಿಜೆಪಿಯವರು ಜನರಿಗೆ ಇಲ್ಲ ಸಲ್ಲದ ಸುಳ್ಳು ಸುದ್ದಿ ಹಬ್ಬಿಸಿ ಜನರ ದಾರಿ ತಪ್ಪಿಸುವ ಕಾರ್ಯ…

Read More

ಬೆಂಗಳೂರು:- ವಿದ್ಯುತ್ ತಂತಿ ತಗುಲಿ ಬಾಲಕಿ ಸಾವನ್ನಪ್ಪಿದ ಘಟನೆ ವರ್ತೂರುವಿನ ಪ್ರೆಸ್ಟೀಜ್ ಹೆಬಿಟೇಡ್ ಅಪಾರ್ಟ್ ಮೆಂಟ್ ನಲ್ಲಿ ಜರುಗಿದೆ. 10 ವರ್ಷದ ಮಾನ್ಯ ವಿದ್ಯುತ್ ತಂತಿ ತುಳಿದು ಮೃತ ಪಟ್ಟ ಬಾಲಕಿ ಎನ್ನಲಾಗಿದೆ. ನಿನ್ನೆ ಸಂಜೆ 7.30 ರ ಸುಮಾರಿಗೆ ಘಟನೆ ಜರುಗಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ಬಾಲಕಿಯನ್ನು ಸ್ಥಳೀಯರು ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಸಹಸ್ತ್ರ ಆಸ್ಪತ್ರೆಯಲ್ಲಿ ಬಾಲಕಿ ಮೃತ ಪಟ್ಟಿದ್ದಾರೆ. ಬಾಲಕಿ ಪೋಷಕರಿಂದ ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Read More

ಕಂಪ್ಲಿ : ವಿದ್ಯಾರ್ಥಿಗಳು ಇಂದು ದಿಢೀರ್ ಪ್ರತಿಭಟನೆಯನ್ನು ಕೈಗೊಂಡಿರುವ ಘಟನೆ ಕಂಪ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ. ಯೆಸ್ ವೀಕ್ಷಕರೇ, ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಅಥಿತಿ ಉಪನ್ಯಾಸಕರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ತರಗತಿಗಳನ್ನು ಬಹಿಷ್ಕರಿಸಿ ಕಳೆದ ೩-೪ ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಬಹುಪಾಲು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿರುವ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬಹುತೇಕ ತರಗತಿಗಳು ಸ್ಥಗಿತಗೊಂಡಿವೆ. ಒಂದೆಡೆ ತರಗತಿಗಳು ನಡೆಯುತ್ತಿಲ್ಲ ಮತ್ತು ಇನ್ನೊಂದೆಡೆ ಸೆಮಿಸ್ಟರ್ ಪರೀಕ್ಷೆಯ ದಿನಾಂಕಗಳು ಸಮೀಪಿಸುತ್ತಿವೆ. ಶೈಕ್ಷಣಿಕವಾಗಿ ನಷ್ಟ ಅನುಭವಿಸುತ್ತಿರುವ ವಿದ್ಯಾರ್ಥಿಗಳನ್ನು ಈ ಪರಿಸ್ಥಿತಿಯು ಸಾಕಷ್ಟು ಆತಂಕಕ್ಕೆ ತಳ್ಳಿದೆ. ರಾಜ್ಯ ಸರ್ಕಾರವು ಕೂಡಲೇ ಈ ಕುರಿತು ಗಮನಹರಿಸಬೇಕು. ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಶೀಲಿಸಿ ಅವರಿಗೆ ನ್ಯಾಯ ಒದಗಿಸಬೇಕು ಮತ್ತು ಕಾಲೇಜುಗಳಲ್ಲಿ ಪಾಠಗಳು ಸರಿಯಾಗಿ ನಡೆಯುವ ನಿಟ್ಟಿನಲ್ಲಿ ಪೂರಕ ವಾತಾವರಣವನ್ನು ಕಲ್ಪಿಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು. ಇನ್ನೂ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ, ನಮಗೆ ಎಕ್ಸಾಮ್ಸ್ ಹತ್ರಾ ಬರ್ತಿವೆ, ನಮಗೆ ಪಾಠ ಮಾಡಿ, ಅತಿಥಿ ಉಪನ್ಯಾಸಕರ…

Read More

ಕಂಪ್ಲಿ:- ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರನ್ನು ಬಂಧಿಸಿರುವುದು ಖಂಡನಿಯ, ಈ ಕೂಡಲೇ ಅವರನ್ನು ಬಿಡುಗಡೆಗೊಳಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಕಂಪ್ಲಿ ತಾಲೂಕು ಅಧ್ಯಕ್ಷ ಬಳೆ ಮಲ್ಲಿಕಾರ್ಜುನ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಹೌದು ವೀಕ್ಷಕರೇ, ನಗರದ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಂಗಳೂರಿನಲ್ಲಿರುವ ಪರ ಭಾಷೆಗಳದ ಹಿಂದಿ,ಇಂಗ್ಲಿಷ್, ತೆಲುಗು ಹಾಗೂ ತಮಿಳು ಭಾಷೆಯಲ್ಲಿರುವ ನಾಮಫಲಕಗಳನ್ನು ತೆರವುಗೊಳಿಸಲು ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಹೋರಾಟ ನಡೆಸಿ, ಪರಭಾಷಾ ನಾಮಫಲಕಗಳನ್ನು ಕಿತ್ತೆಸೆದು, ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿಂದೆ ಕನ್ನಡಕ್ಕೆ ಮೊದಲ ಪ್ರಮುಖ್ಯತೆ ನೀಡುವಂತೆ ಪ್ರತಿಯೊಬ್ಬ ವ್ಯಾಪಾರಸ್ಥರಿಗೆ,ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿತ್ತು. ಹೋರಾಟ ನಿರತರಾಗಿದ್ದ ಟಿ.ಎ. ನಾರಾಯಣ ಗೌಡರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಸರ್ಕಾರ ಕನ್ನಡಪರ ಹೋರಾಟಗಾರರನ್ನು ಹತ್ತಿಕ್ಕುವ ಹುನ್ನಾರವನ್ನು ನಡೆಸಿದೆ ಸರ್ಕಾರದ ಈ ನಡೆಯನ್ನು ಕರವೇ ಕಂಪ್ಲಿ ತಾಲೂಕು ಘಟಕ ಖಂಡಿಸುತ್ತದೆ. ಕರವೇ ಬಳ್ಳಾರಿ ಜಿಲ್ಲಾಧ್ಯಕ್ಷರಾದ ಚಾನಾಳ್ ಶೇಖರ ಅವರ ಆದೇಶದ ಮೇರೆಗೆ ಇಂದು…

Read More

ಕೋಲ್ಕತಾ: ಜನವರಿ 22ರಂದು ನಡೆಯಲಿರುವ ಅಯೋಧ್ಯಾ ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸದೆ ಇರಲು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ತೃಣಮೂಲ ಕಾಂಗ್ರೆಸ್ ಪಕ್ಷವು (ಟಿಎಂಸಿ) ಕಾರ್ಯಕ್ರಮಕ್ಕೆ ಮಮತಾ ಬ್ಯಾನರ್ಜಿ ಅವರ ಬದಲು ಯಾವುದೇ ಪ್ರತಿನಿಧಿಯನ್ನು ಕಳುಹಿಸುವ ಸಾಧ್ಯತೆ ಇಲ್ಲ ಎಂದು ವರದಿಯಾಗಿದೆ. ತನ್ನ ನಿರ್ಧಾರವನ್ನು ಟಿಎಂಸಿ ಅಧಿಕೃತವಾಗಿ ಘೋಷಿಸಿಲ್ಲ. ಆದರೆ ಆಡಳಿತಾರೂಢ ಬಿಜೆಪಿಯ ರಾಜಕೀಯ ನಿರೂಪಣೆಯ ಜಾಲದೊಳಗೆ ಪಕ್ಷ ಸಿಲುಕುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 2024ರ ಲೋಕಸಭೆ ಚುನಾವಣೆಗೆ ರಾಮಮಂದಿರ ಉದ್ಘಾಟನೆಯನ್ನು ಬಿಜೆಪಿ ಚಿಮ್ಮುಹಲಗೆಯನ್ನಾಗಿ ಬಳಸಿಕೊಳ್ಳಲು ನೋಡುತ್ತಿದೆ ಎಂದು ಮಮತಾ ನಂಬಿದ್ದಾರೆ. https://ainlivenews.com/sabarimala-ayyappa-swami-temple-earned-204-crore-rupees-in-39-days/ ಹೀಗಾಗಿ ಬಿಜೆಪಿಯ ತಾಳಕ್ಕೆ ತಕ್ಕಂತೆ ತಾವು ಕುಣಿಯಬಾರದು ಎಂದು ಟಿಎಂಸಿ ನಿರ್ಧರಿಸಿದೆ. ಸಮಾರಂಭಕ್ಕೆ ತಾವು ಹಾಜರಾದರೆ ಅದು ಬಿಜೆಪಿಯ ಗೆಲುವಿನಂತೆ ಭಾಸವಾಗುತ್ತದೆ ಎನ್ನುವುದು ಮಮತಾ ಅಭಿಪ್ರಾಯ ಎನ್ನಲಾಗಿದೆ. ಅಯೋಧ್ಯಾದಲ್ಲಿ ರಾಮಮಂದಿರ ಉದ್ಘಾಟನೆ ಸಮಾರಂಭಕ್ಕೆ ಆಗಮಿಸುವಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮತ್ತು ವಿರೋಧ ಪಕ್ಷಗಳ…

Read More

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಜ. 23ರಿಂದ 25ರವರೆಗೆ ರಾಜ್ಯದ ಎಲ್ಲ ಸಂಸದರ ಮನೆಗಳ ಮುಂದೆ ವಿವಿಧ ವಿಭಾಗದ ಕಾರ್ಮಿಕರ ಸಾಮೂಹಿಕ ಪ್ರತಿಭಟನೆ ಏರ್ಪಡಿಸಲಾಗಿದೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಕರ್ನಾಟಕ ಸಮಿತಿ ಅಧ್ಯಕ್ಷೆ ಎಸ್. ವರಲಕ್ಷ್ಮೀ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಕಾರ್ಮಿಕರು, ರೈತ ಮತ್ತು ಜನಸಾಮಾನ್ಯರ ವಿರೋಧಿ ನೀತಿಗಳನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು. ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ 2 ನೇ ಸ್ಥಾನದಲ್ಲಿದೆ. ಆದರೂ ರಾಜ್ಯಕ್ಕೆ ದೊರಕಬೇಕಾದ ನ್ಯಾಯಯುತ ಪಾಲನ್ನು ಕೇಂದ್ರ ಸರ್ಕಾರ ಕೊಡಲು ನಿರಂತರವಾಗಿ ನಿರಾಕರಿಸುತ್ತಿದೆ. ರಾಜ್ಯದ ಜನತೆಗೆ ಕೇಂದ್ರ ಸರ್ಕಾರ ಮಾಡುತ್ತಿರುವ ವಂಚನೆಯನ್ನು ಕಾಂಗ್ರೆಸ್ ಸರ್ಕಾರವು ರಾಜಕೀಯವಾಗಿ ಬಹಿರಂಗಗೊಳಿಸುತ್ತಿಲ್ಲ ಎಂದರು. ವಿವಿಧ ವಿಷಯ ಒಳಗೊಂಡಂತೆ ಪ್ರತಿರಂಗದಲ್ಲಿಯೂ ಕೇಂದ್ರ ಸರ್ಕಾರದ ನೀತಿಗಳಿಂದ ಆಗುತ್ತಿರುವ ಕೆಟ್ಟ ಪರಿಣಾಮಗಳನ್ನು ಬಯಲು ಮಾಡಲು ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳು ಮುಂದಾಗುತ್ತಿಲ್ಲ. ಕಾರ್ಮಿಕರಿಗೆ ಸಾಮಾಜಿಕ ರಕ್ಷಣಾ ಹಾಗೂ ಕಲ್ಯಾಣ ಯೋಜನೆ…

Read More

ಹುಬ್ಬಳ್ಳಿ: ಚಿಕ್ಕ ವ್ಯಾಪಾರಸ್ಥರಿಗೆ ಜನತಾ ಬಜಾರ್‌ನಲ್ಲಿ ನಿರ್ಮಿಸಿರುವ ಕಟ್ಟಾ ಅಥವಾ ಶೆಡ್‌ಗಳನ್ನು ಹಸ್ತಾಂತರ ಮಾಡಲು ಒತ್ತಾಯಿಸಿ ಸೂಪರ್ ಮಾರ್ಕೆಟ್ ಚಿಕ್ಕ ವರ್ತಕರ ಸಂಘದಿಂದ ನಗರದ ಮಹಾನಗರ ಪಾಲಿಕೆ ಕಚೇರಿ ಮುಂದೆ ಡಿ. 30ರಂದು ಮಧ್ಯಾಹ್ನ 12ಕ್ಕೆ ಮಾರುಕಟ್ಟೆ ಮಾದರಿಯಲ್ಲಿ ವಿನೂತನ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಸಂಘದ ಗೌರವ ಅಧ್ಯಕ್ಷ ಪ್ರೇಮನಾಥ ಚಿಕ್ಕತುಂಬಳ ತಿಳಿಸಿದರು. ನಗರದಲ್ಲಿ ಮಾಹಿತಿ ನೀಡಿದರು ಜನತಾ ಬಜಾರ್‌ನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಹೊಸದಾಗಿ ನಿರ್ಮಿಸಿರುವ ಮಾರುಕಟ್ಟೆ ಸಂಕೀರ್ಣದಲ್ಲಿ ಮೂಲ ಚಿಕ್ಕ ವ್ಯಾಪಾರಸ್ಥರಿಗೆ ಕಟ್ಟಾ ಅಥವಾ ಶೆಡ್‌ಗಳನ್ನು ಮರು ಹಂಚಿಕೆ ಮಾಡಬೇಕು. ಮುಂದೆ ಲೋಕಸಭೆ ಚುನಾವಣೆ ಬರಲಿದೆ. ನೀತಿ ಸಂಹಿತೆ ಜಾರಿಯಾಗಲಿದೆ. ಇದರಿಂದ ಮತ್ತಷ್ಟು ಹಂಚಿಕೆ ವಿಳಂಬವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜನವರಿ ತಿಂಗಳಲ್ಲಿ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು. ಅಂದು ಮಹಾನಗರ ಪಾಲಿಕೆ ಸಾಮಾನ್ಯ ಸಭೆ ನಡೆಯಲಿದೆ. ನಾವು ಹೊರಗಡೆ ವಿನೂತನ ಪ್ರತಿಭಟನೆ ನಡೆಸುತ್ತೇವೆ. ನಂತರ ಮಹಾನಗರ ಪಾಲಿಕೆ ಆಯುಕ್ತರು, ಮೇಯರ್‌ಗೆ ಮನವಿ ಸಲ್ಲಿಸಿ, ಗಡುವು ನೀಡಲಾಗುವುದು…

Read More

ಹುಬ್ಬಳ್ಳಿ: ಇಲ್ಲಿಯ ಶ್ರೀ ಕಾಡಸಿದ್ಧೇಶ್ವರ ಕಲಾ ಮಹಾವಿದ್ಯಾಲಯ ಮತ್ತು ಎಚ್.ಎಸ್.ಕೆ. ವಿಜ್ಞಾನ ಸಂಸ್ಥೆಯಲ್ಲಿ ಗಣಿತ ವಿಭಾಗದಿಂದ ಪೈಥಾನ್ ಪ್ರೋಗ್ರಾಮಿಂಗ್‌ನ ರಾಜ್ಯ ಮಟ್ಟದ ಪ್ರಾಯೋಗಿಕ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಲಾಯಿತು. ಕೆಎಲ್‌ಇ ತಾಂತ್ರಿಕ ಸಂಸ್ಥೆಯ ಕಂಪ್ಯೂಟರ್ ಸೈನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಡಾ. ರಾಜೇಶ ಯಕ್ಕುಂಡಿಮಠ ಉದ್ಘಾಟಿಸಿ ಮಾತನಾಡಿ, ಪೈಥಾನ್ ಜನಪ್ರಿಯ ಪ್ರೋಗ್ರಾಮಿಂಗ್ ಭಾಷೆಯಾಗಿದ್ದು, ಇದನ್ನು ಗೈಡೋ ವ್ಯಾನ್ ರೋಸಮ್ ಅಭಿವೃದ್ಧಿಪಡಿಸಿ, 1991ರಲ್ಲಿ ಬಿಡುಗಡೆ ಮಾಡಿದರು. ವೆಬ್ ಅಭಿವೃದ್ಧಿ (ಸರ್ವರ್-ಸೈಡ್), ತಂತ್ರಾಂಶ ಅಭಿವೃದ್ಧಿ, ಸಿಸ್ಟಮ್ ಸ್ಕ್ರಿಪ್ಟಿಂಗ್, ಗಣಿತ ಮುಂತಾದ ಕ್ಷೇತ್ರಗಳಲ್ಲಿ ಪೈಥಾನ್ ಬಳಸಲಾಗುತ್ತಿದೆ ಎಂದರು. ಸಂಪನ್ಮೂಲ ವ್ಯಕ್ತಿಗಳಾದ ಗಿರೀಶ ಸಂಶಿ, ಶ್ರೀಧರ ಚಿನ್ನಿ, ಡಾ. ಪ್ರಭಾ ಮಂಡಲಗೇರಿ ತರಬೇತಿ ನೀಡಿದರು. ಹುಲಕೋಟಿ, ಶಿರಸಿ, ಹಳಿಯಾಳ, ರಾಣೆಬೆನ್ನೂರು, ಖಾನಾಪುರ, ಕಲಘಟಗಿ, ಧಾರವಾಡ ಸೇರಿ 6 ಜಿಲ್ಲೆಗಳ 90ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು 11 ಉಪನ್ಯಾಸಕರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ಮನಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸುನೀತಾ ಹಾನಗಲ್ ಅಧ್ಯಕ್ಷತೆ ವಹಿಸಿದ್ದರು. ಗಣಿತ ಉಪನ್ಯಾಸಕಿ ಡಾ. ಅರ್ಚನಾ ಸ್ವಾಗತಿಸಿ,…

Read More