Author: AIN Author

ಬೆಂಗಳೂರು: ಇಬ್ಬರು ಅಲ್‌ ಖೈದಾ (Al-Qaeda) ಉಗ್ರರಿಗೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯ (NIA Special Court) 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಖ್ತರ್ ಹುಸೇನ್ ಲಷ್ಕರ್ ಮತ್ತು ಅಬ್ದುಲ್ ಅಲೀಂ ಮೊಂಡಲ್‌ಗೆ ಕೋರ್ಟ್‌ ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದೆ. 2022ರ ಆಗಸ್ಟ್ 30ರಂದು ಪ್ರಕರಣ ದಾಖಲಾಗಿತ್ತು. ಇಬ್ಬರು ಉಗ್ರರು ವಿದೇಶದಲ್ಲಿರುವ ಹ್ಯಾಂಡ್ಲರ್‌ಗಳಿಂದ ಆನ್‌ಲೈನ್ ಮೂಲಕ ಮನ ಪರಿವರ್ತನೆಗೊಂಡು ಅಲ್‌ ಖೈದಾಗೆ ಹೊಸ ಯುವಕರನ್ನು ಸೇರ್ಪಡೆಗೊಳಿಸುತ್ತಿದ್ದರು. ಬಳಿಕ ಟೆಲಿಗ್ರಾಂ ಗ್ರೂಪ್‌ಗಳಿಗೆ ಸೇರಿಸಿ ಅಫ್ಘಾನಿಸ್ತಾನಕ್ಕೆ ತೆರಳಲು ಪ್ಲಾನ್ ಮಾಡುತ್ತಿದ್ದರು. ಅಸ್ಸಾಂ (Assam) ಮೂಲದ ಅಖ್ತರ್ ಹುಸೇನ್‍ನ್ನು ಸಿಸಿಬಿ ಪೊಲೀಸರು ಮೊದಲು ಬಂಧಿಸಿದ್ದರು. ಈತ ತಿಲಕ್ ನಗರದ ಬಿಟಿಪಿ ಏರಿಯಾದ ಕಟ್ಟಡದ ಮೂರನೇ ಮಹಡಿ ಕೋಣೆಯಲ್ಲಿ ಕೆಲ ಯುವಕರೊಂದಿಗೆ ವಾಸ್ತವ್ಯ ಹೂಡಿದ್ದ. ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ

Read More

ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಲಾಭ ಎಲ್ಲಾ ಫಲಾನುಭವಿಗಳಿಗೆ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ ಅವರು, ನಾಡಿನ ಮಹಿಳೆಯರ ಆರ್ಥಿಕ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಾ, ಜನಪರ ಆಡಳಿತದ ಮೂಲಕ ನುಡಿದಂತೆ ನಡೆಯುತ್ತಿರುವ ನಮ್ಮ ಕಾಂಗ್ರೆಸ್ (Congress) ಸರ್ಕಾರವು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಮತ್ತಷ್ಟು ಜನರಿಗೆ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಶೇಷ ಶಿಬಿರವನ್ನು ಆಯೋಜಿಸಿದೆ ಎಂದು ತಿಳಿಸಿದ್ದಾರೆ. ರಾಜ್ಯದ ಎಲ್ಲಾ 5,000ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಏಕಕಾಲದಲ್ಲಿ ಡಿಸೆಂಬರ್ 27ರಿಂದ 29ರವರೆಗೆ ಮೂರು ದಿನಗಳ ಕಾಲ ಆಧಾರ್ ಜೋಡಣೆ, ಬ್ಯಾಂಕಿಗೆ ಸಂಬಂಧಿಸಿದ ತೊಂದರೆ, ಇ-ಕೆವೈಸಿ ಅಪ್ಡೇಟ್, ಹೊಸ ಬ್ಯಾಂಕ್ ಖಾತೆ ಸಂಪರ್ಕ ಸೇರಿದಂತೆ ಹಲವು ಅಡೆತಡೆಗಳನ್ನು ನಿವಾರಿಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನೇರ ಹಣ…

Read More

ಕಲುಬುರಗಿ: ನ್ಯೂ ಇಯರ್ ಪಾರ್ಟಿಗಾಗಿ ಗೋವಾದಿಂದ ಎಣ್ಣೆ ತರುತ್ತಿದ್ದ ಬಸ್ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮೂರು ತಂಡಗಳಿಂದ ವಿವಿದ ಕಡೆ ಪ್ರತ್ಯೇಕ ದಾಳಿ ನಡೆಸಿ ಪಣಜಿಯಿಂದ ಬಸ್ ನಲ್ಲಿ ಸಾಗಿಸುತ್ತಿದ್ದ 51 ಲಕ್ಷ ಮೌಲ್ಯದ 48 ಲೀಟರ್ ಲಿಕ್ಕರ್ ಜಪ್ತಿ ಮಾಡಿ ಆರು ಜನ ಆರೋಪಿಗಳ ಬಂಧಿಸಿದ್ದಾರೆ. ಇದೇ ವೇಳೆ ಲಿಕ್ಕರ್ ಸಾಗಿಸಲು ಬಳಸಿದ್ದ ಖಾಸಗಿ ಬಸ್ ಹಾಗೂ ಎರಡೂ ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದಾರೆ. ಗೋವಾದಿಂದ ರಾಜ್ಯಕ್ಕೆ ಅಕ್ರಮವಾಗಿ ಮಧ್ಯ ತಂದು ಸಾಗಟ ಮಾಡುತ್ತಿದ್ದ ಹಿನ್ನಲೆ ಅಬಕಾರಿ ಪೋಲೀಸರು ಕೇಸ್ ದಾಖಲಿಸಿದ್ದಾರೆ.

Read More

ಬೆಂಗಳೂರು: ಬಿಜೆಪಿಯವರದ್ದು ಡೋಂಗಿ ಹಿಂದುತ್ವದಂತೆ ಅವರಲ್ಲಿ ಸಾಮಾಜಿಕ ನ್ಯಾಯವಿಲ್ಲ ನಮ್ಮಕಾಂಗ್ರೆಸ್‌ನಿಂದ ಮಾತ್ರ ಸಾಮಾಜಿಕ ನ್ಯಾಯ ಉಳಿದಿರುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ್‌ ಜೋಡೊ ಸಭಾಂಗಣದಲ್ಲಿ ನಡೆದ 139ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಬಿಜೆಪಿ, ಜನಸಂಘ, ಆರೆಸ್ಸೆಸ್ ಮತ್ತು ಸಂಘ ಪರಿವಾರದ ಒಬ್ಬೇ ಒಬ್ಬರು ಬ್ರಿಟಿಷರ ವಿರುದ್ಧ ಹೋರಾಟ ಮಾಡಿಲ್ಲ. ಬ್ರಿಟಿಷರ ಅವಧಿಯಲ್ಲೇ ಅರೆಸ್ಸೆಸ್ ಹುಟ್ಟಿತ್ತು. ಆದರೆ, ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಒಂದು ದಿನವೂ ಭಾಗವಹಿಸಲಿಲ್ಲ. ಬಿಜೆಪಿಯ ಡೋಂಗಿತನವನ್ನು ಜನರಿಗೆ ಮನವರಿಕೆ ಮಾಡಬೇಕಿದೆ’ ಎಂದರು. ‘ಹಿಂದೂ ಬೇರೆ. ಹಿಂದುತ್ವವೇ ಬೇರೆ. ನಾವು ರಾಮನನ್ನು ಪೂಜಿಸುವುದಿಲ್ಲವೇ? ನಮ್ಮೂರುಗಳಲ್ಲಿ ರಾಮಮಂದಿರ ಕಟ್ಟಿಲ್ಲವೇ? ರಾಮನ ಭಜನೆ ಮಾಡುವುದಿಲ್ಲವೇ?’ ಎಂದೂ ಪ್ರಶ್ನಿಸಿದರು. ‘ನೆಹರೂ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಭಾರತದ – ನಿರ್ಮಾತೃಗಳು. ಇಂಟರ್ ನೆಟ್ ದೇಶದ ತುಂಬ ವಿಸ್ತರಿಸಲು ಅಡಿಪಾಯ ಹಾಕಿದವರು ರಾಜೀವ್ ಗಾಂಧಿ, ಬಿಜೆಪಿಯವರು ಬುರುಡೆ ಬಿಡುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ.…

Read More

ಬಳ್ಳಾರಿ: ಶಾಸಕ ಜನಾರ್ದನ ರೆಡ್ಡಿ ಅವರ  ಕುಟೀರಕ್ಕೆ ಬೆಂಕಿ ಹಿನ್ನಲೆ ಬಳ್ಳಾರಿಯಲ್ಲಿ KRPP ಕಾರ್ಯಕರ್ತರ ಪ್ರತಿಭಟನೆ ನಡೆಸಲಾಯಿತು. ಬಳ್ಳಾರಿಯ ರಾಯಲ್ ವೃತ್ತದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಾರ್ಯಕರ್ತ ರಿಂದ ಪ್ರತಿಭಟನೆ ನಡೆಸಲಾಗಿದ್ದು, ಪಂಪಾಸರೋವರದ ರೆಡ್ಡಿ ಕುಟೀರಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಕೃತ್ಯ ನಡೆಸಿದ ಕಿಡಿಗೇಡಿಗಳ ಮೇಲೆ ಕ್ರಮಕ್ಕೆ ಮುಂದಾಗುವಂತೆ ಹಾಗೂ ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಬಳ್ಳಾರಿಯಲ್ಲಿ 100 ಕ್ಕೂ ಹೆಚ್ಚು ಕಾರ್ಯಕರ್ತರ ಪ್ರತಿಭಟನೆಯಲ್ಲಿ ಭಾಗಿಯಾಗಿ ಕಿಡಿಗೇಡಿಗಳ ವಿರುದ್ಧ KRPP ಕಾರ್ಯಕರ್ತರು ಆಕ್ರೋಶ ಹೊರ ಹಾಕಿದರು.

Read More

ಧಾರವಾಡ: ಧಾರವಾಡ ತಾಲೂಕಿನ ತಡಸಿನಕೊಪ್ಪ ಗ್ರಾಮದಲ್ಲಿ ಇಂದು 14 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ವಿಶೇಷ ಪೂಜೆ ಹಾಗೂ ಶ್ರೀ ಅಯ್ಯಪ್ಪ ಮೂರ್ತಿ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಗ್ರಾಮದ ಹೊರವಲಯದ ಶ್ರೀ ಅಯ್ಯಪ್ಪ ಸನ್ನಿಧಾನದಿಂದ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಅಯ್ಯಪ್ಪ ಸ್ವಾಮಿ ಮೂರ್ತಿ ಮೆರವಣಿಗೆ ನಡೆಸಲಾಯಿತು. ಇನ್ನೂ ಮೆರವಣಿಗೆಯಲ್ಲಿ ಮಹಿಳೆಯರು ತಲೆಯ ಮೇಲೆ ಕುಂಬ ಹೊತ್ತು ಸಾಗಿದ್ದು, ಮೂರ್ತಿ ಮೆರವಣಿಗೆಯ ಮೆರುಗು ಹೆಚ್ಚಿಸಿತ್ತು. ಮಹಿಳೆಯರೊಂದಿಗೆ ಚಿಕ್ಕ ಚಿಕ್ಕ ಹೆಣ್ಣು ಮಕ್ಕಳು ಭಕ್ತಿ ಭಾವದಿಂದ ಕುಂಬ ಹೊತ್ತು ಸಾಗುತ್ತಿದ್ದು, ಅವರಿಗೆ ಹಿರಿಯ ಮಹಿಳೆಯರು ಮಾರ್ಗದರ್ಶ ಮಾಡುತ್ತಿರುವ ದೃಶ್ಯ ಕಂಡು ಬಂದಿತ್ತು. ಜೊತೆಗೆ ಕುಂಬ ಮುಂದೆ ಅಯ್ಯಪ್ಪ ಮಾಲಾಧಾರಿಗಳು ಶ್ರೀ ಅಯ್ಯಪ್ಪನ ನಾಮ ಜಪ ಮಾಡುತ್ತಾ ಸಾಗಿದ್ದು, ತಡಸಿನಕೊಪ್ಪದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದ ಗುರು ಸ್ವಾಮಿ ನಾಗೇಂದ್ರ ಸ್ವಾಮಿ ನೇತೃತ್ವದಲ್ಲಿ ಮೆರವಣಿಗೆ ಸಾಗಿತ್ತು. ಕೊನೆಯಲ್ಲಿ ಟ್ಯಾಕ್ಟರನಲ್ಲಿ ಶ್ರೀ ಅಯ್ಯಪ್ಪ ಮೂರ್ತಿ ತರಲಾಗಿದ್ದು, ಅದ್ದೂರಿಯಾಗಿ ಗ್ತಾಮದಲ್ಲಿ ಅಯ್ಯಪ್ಪ ಸ್ವಾಮಿಯ ವಿಶೇಷ ಪೂಜೆ ಹಾಗೂ…

Read More

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಟಿಡಿಪಿ ಕಾರ್ಯಕರ್ತರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ವರ್ಮಾ ನಿರ್ದೇಶನ ಮಾಡಿರುವ ವ್ಯೂಹಂ ಸಿನಿಮಾ ರಿಲೀಸ್ ಮಾಡದಂತೆ ಪ್ರತಿಭಟಿಸಲಾಗುತ್ತಿದೆ. ಈ ಕುರಿತಂತೆ ಮಾಧ್ಯಮದೊಂದಿಗಿನ ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿರುವ ಟಿಡಿಪಿ ಮುಖಂಡ ಕೋಲಿಕಪುಡಿ ಶ್ರೀನಿವಾಸ್ ನಾಯ್ಡು (Kolikapudi Srinivas Naidu), ಎಡವಟ್ಟಿನ ಹೇಳಿಕೆಯನ್ನು ನೀಡಿದ್ದಾರೆ. ವರ್ಮಾ ತಲೆ ಕಡಿದು ತಂದಿವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ನಿನ್ನೆಯಷ್ಟೇ ರಾಮ್ ಗೋಪಾಲ್ ವರ್ಮಾ ಕಚೇರಿಗೆ ಟಿಡಿಪಿ ಕಾರ್ಯಕರ್ತರು ಮತ್ತು ಎನ್.ಟಿ.ಆರ್ ಅಭಿಮಾನಿಗಳು ಮುತ್ತಿಗೆ ಹಾಕಿದ್ದರು. ಹೈದರಾಬಾದ್ ನಲ್ಲಿರುವ ವರ್ಮಾ ಅವರ ಡೆನ್ ಕಚೇರಿಗೆ ಮುತ್ತಿಗೆ ಹಾಕಿರುವ ಕಾರ್ಯಕರ್ತರು ವ್ಯೂಹಂ ಸಿನಿಮಾದ ಪೋಸ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ ಪಡಿಸಿದ್ದರು. ಆಗ ಸಿನಿಮಾಗಳ ಮೂಲಕ ಸಖತ್ ಸುದ್ದಿ ಆಗುತ್ತಿದ್ದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Verma) , ಇದೀಗ ವಿವಾದಗಳಿಂದಾಗಿ ಹೆಚ್ಚು ಪ್ರಚಾರ ಪಡೆಯುತ್ತಿದ್ದಾರೆ. ಸದ್ಯ ವರ್ಮಾ ‘ವ್ಯೂಹಂ’ (Vyuham) ಹೆಸರಿನಲ್ಲಿ…

Read More

ಕನ್ನಡದ ಹೆಮ್ಮೆಯ ಹೊಂಬಾಳೆ ಫಿಲ್ಮ್ಸ್ (Hombale Films) ನಿರ್ಮಾಣದ ಮತ್ತೊಂದು ಸಲಾರ್ (Salaar) ಸಿನಿಮಾ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ. ಕಳೆದ ಶುಕ್ರವಾರ ರಿಲೀಸ್ ಆಗಿರುವ ಈ ಸಿನಿಮಾ ಬಿಡುಗಡೆಯಾದ ಆರೇ ದಿನಕ್ಕೆ ವಿಶ್ವದಾದ್ಯಂತ 500 ಕೋಟಿಗೂ ಅಧಿಕ ಹಣವನ್ನು ಗಳಿಸಿದೆ. ಬಾಕ್ಸ್ ಆಫೀಸಿಗೆ ಕೋಟಿ ಕೋಟಿ ಹಣ ಹರಿದು ಬರುತ್ತಿದೆ. ಶುಕ್ರವಾರ ಜಗತ್ತಿನಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿರುವ ಚಿತ್ರವು ಮೊದಲ ದಿನವೇ 178.7 ಕೋಟಿ ರೂ ಸಂಪಾದಿಸಿದರೆ, ಎರಡನೇ ದಿನಕ್ಕೆ 295.7 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಮೂರನೇ ದಿನಕ್ಕೆ 350 ಕೋಟಿಗೂ ಅಧಿಕ ಗಳಿಕೆ ಆಗಿತ್ತು. ನಾಲ್ಕು, ಐದು ಮತ್ತು ಆರನೇ ದಿನದ ಒಟ್ಟು ಗಳಿಕೆ 500 ಕೋಟಿಗೂ ಅಧಿಕ ಎಂದು ಅಂದಾಜು ಮಾಡಲಾಗಿದೆ. ಸಲಾರ್ ಎನ್ನುವ ಅಧಿಕೃತ ಸೋಷಿಯಲ್ ಮೀಡಿಯಾ ಪುಟದಲ್ಲಿ ಪೋಸ್ಟರ್ ಕೂಡ ಹಾಕಲಾಗಿದೆ. ಈ ಮೂಲಕ ಭಾರತೀಯ ಚಿತ್ರರಂಗದಲ್ಲಿ, ಮೊದಲ ದಿನ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಹೊಸ…

Read More

ಧಾರವಾಡ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಉಜ್ವಲ್ ಯೋಜನೆಯ ಗ್ಯಾಸ್ ಸಿಲಿಂಡರ್‌ಗಾಗಿ ಧಾರವಾಡದಲ್ಲಿ ಏಜೆನ್ಸಿಗಳ ಮುಂದೆ ಮಹಿಳೆಯರ ಸರದಿ ಸಾಲು ಕಂಡುಬರುತ್ತಿದೆ. ನಗರದ ಹೆಡ್ ಪೋಸ್ಟ್ ಕಚೇರಿ ಬಳಿಯ ಹೆಚ್ ಪಿ ಹಾಗೂ ಭಾರತ ಗ್ಯಾಸ್ ಸಿಲಿಂಡರ್ ಏಜೆನ್ಸಿ ಮುಂಭಾಗದಲ್ಲಿ ಮಹಿಳೆಯರು ಉಚಿತ ಗ್ಯಾಸ್ ಸಿಲಿಂಡರ ಪಡೆಯಲು ಮುಂಜಾನೆಯಿಂದಲೇ ಸರದಿ ಸಾಲಿನಲ್ಲಿ ನಿಂತಿದ್ದಾರೆ. ಇಷ್ಟು ದಿನ ಖಾಲಿ ಖಾಲಿಯಾಗಿ ಕಾಣುತ್ತಿದ್ದ ನಗರದ ಬಹುತೇಕ ಗ್ಯಾಸ್ ಏಜೆನ್ಸಿಗಳಲ್ಲ ಮುಂದೆ ಮಹಿಳೆಯರ ಸರದಿ ಸಾಲು ಕಂಡು ಬರುತ್ತಿದೆ. ಹೊಗೆ ಮುಕ್ತ ರಾಷ್ಡ್ರವನ್ನಾಗಿಸುವ ಉದ್ದೇಶದಿಂದ ಸ್ವಚ್ಚ ಭಾರತ ಬೆಹ್ತಾರ್ ಜೀವನ ಅಡಿಬರಹದೊಂದಿಗೆ ಕಳೆದ ಮೇ.1 2016 ರಂದು ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯನ್ಮು ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. ಬಿಪಿಎಲ್ ಕಾರ್ಡ್ ಹೊಂದಿದ್ದರಿಗೆ ಉಚಿತ ಗ್ಯಾಸ್ ಸಲಿಂಡರ್ ನೀಡಲಾಗುತ್ತಿದೆ. ಆರಂಭದಲ್ಲಿ ಯೋಜನೆಗೆ ಉತ್ತಮ ರಸ್ಪಾನ್ಸ್ ವ್ಯಕ್ತವಾಗಿದ್ದು, ಮತ್ತೆ ಯೋಜನೆ ಮುಂದುವರಿಸಿದ್ದ ಬೆನ್ನಲೇ ಧಾರವಾಡದಲ್ಲಿ ಪ್ರಧಾನ ಮಂತ್ರಿ ಉಜ್ವಲ್ ಯೋಜನಯ ಉಚಿತ ಸಿಲಿಂಡರ್‌ಗಾಗಿ ಈಗ ಮಹಿಳೆಯರು…

Read More

ತಮಿಳಿನ (Tamil Nadu) ಹೆಸರಾಂತ ನಟ, ರಾಜಕಾರಣಿ ಕ್ಯಾಪ್ಟನ್ ವಿಜಯಕಾಂತ್ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದವರು. ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಇತ್ತೀಚೆಗಷ್ಟೇ ಅವರಿಗೆ ಕೋವಿಡ್ ಪಾಸಿಟಿವ್ (Covid positive) ಆಗಿದ್ದು, ನಂತರ ತತಕ್ಷಣವೇ ಅವರನ್ನು ಐಸಿಯೂಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಮಿಳು ನಾಡಿನ ಡಿಎಂಡಿಕೆ (DMDK) ಮುಖ್ಯಸ್ಥರೂ ಆಗಿರುವ ಕ್ಯಾಪ್ಟನ್ ವಿಜಯಕಾಂತ್ ಹಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿದ್ದವು. ಕ್ಯಾಪ್ಟನ್ ವಿಜಯಕಾಂತ್ (Vijayakanth) ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿದರೆ, ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಪಕ್ಷ ಅದನ್ನು ನಿರಾಕರಿಸಿತ್ತು. ಮಾಧ್ಯಮಗಳು ಪ್ರಸಾರ ಮಾಡುವಂತೆ ಕ್ಯಾಪ್ಟನ್ ಅವರ ಆರೋಗ್ಯ ತೀರಾ ಹದಗೆಟ್ಟಿಲ್ಲ. ಜ್ವರ ಮತ್ತು ಶೀತದಿಂದ ಅವರು ಬಳಲುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಅವರು ಮನೆಗೆ ಬರಲಿದ್ದಾರೆ ಎಂದು ಹೇಳಿದ್ದರು.ಆದರೆ, ಮನೆಗೆ ಬಾರದೇ, ಬಾರದ…

Read More