Author: AIN Author

ಬಳ್ಳಾರಿ: ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನಾರಾ ಪ್ರತಾಪ್ ರೆಡ್ಡಿಯವರಿಗೆ ಆಮ್ ಆದ್ಮಿ ಪಕ್ಷ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಘೋಷಿಸಿದರು. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1985ರಲ್ಲಿ ನಾನು ಮತ್ತು ಪ್ರತಾಪ್ ಜನತಾ ಪಾರ್ಟಿಯಲ್ಲಿ ಇದ್ದೆವು. ಇಬ್ಬರು ಬೇರೆ ಬೇರೆ ದಾರಿಯಲ್ಲಿ ನಡೆದರು ಚಿಂತನೆ ಒಂದೇ ಆಗಿದೆ. ಪಾರದರ್ಶಕ ಆಡಳಿತ, ಭ್ರಷ್ಟಾಚಾರ ಮುಕ್ತ ವ್ಯವಸ್ಥೆ, ಶೋಷಿತರ ಧ್ವನಿಯಾಗಬೇಕು, ಒಳ್ಳೇ ಕೆಲಸ ಮಾಡಬೇಕು ಎನ್ನವ ಚಿಂತನೆಯನ್ನು ಪ್ರತಾಪ್ ರೆಡ್ಡಿ ಹೊಂದಿದ್ದಾರೆ ಎಂದರು. ಪಾರದರ್ಶಕ, ಪ್ರಾಮಾಣಿಕ ವ್ಯಕ್ತಿಗಳಿಗೆ ಬೆಂಬಲ ಕೊಡಲು ನಿರ್ಧರಿಸಿದಾಗ ಪ್ರತಾಪ್ ರೆಡ್ಡಿ ಅವರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ. ಪ್ರತಾಪ್ ರೆಡ್ಡಿ ಹೋರಾಟದ ಹಿನ್ನೆಲೆಯಿಂದ ಬಂದವರು. ನೀರಿಗಾಗಿ, ಮೂಲ ಸೌಕರ್ಯಗಳಿಗಾಗಿ ಹೋರಾಡಿ ಜನರಿಗೆ ವ್ಯವಸ್ಥೆ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಜೊತೆ ಆಮ್ ಆದ್ಮಿ ಪಕ್ಷ ಕೈ ಜೋಡಿಸಲಿದೆ. ಏಳು ಜಿಲ್ಲೆಯ ಜಿಲ್ಲಾಧ್ಯಕ್ಷರಿಗೆ ಬೆಂಬಲ ನೀಡಲು ಮನವಿ ಮಾಡಿದ್ದೇವೆ. ಕೇಂದ್ರದ ನಾಯಕರಿಗೆ ಕೂಡ…

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಕೂಡಲೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರರಾದ ತುಷಾರ್ ಗಿರಿ ನಾಥ್ ರವರು ವಲಯ ಆಯುಕ್ತರಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಭಾಷೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಪಾಲಿಕೆ ಕೇಂದ್ರ ಕಛೇರಿಯ ಸಂಬಾಂಗಣ-01ರಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಅಂಗಡಿ ಮುಂಗಟ್ಟುಗಳು, ಹೋಟೆಲ್ ಗಳು, ಮಾಲ್ ಸೇರಿದಂತೆ ಇನ್ನಿತರೆ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಅನುಷ್ಠಾನಗೊಳ್ಳಬೇಕೆಂದು ಸೂಚನೆ ನೀಡಿದರು. ನಗರದಲ್ಲಿರುವ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ವಾಣಿಜ್ಯ ಮಳಿಗೆಗಳ ಸರ್ವೇ ಕಾರ್ಯವನ್ನು ಪ್ರಾರಂಭಿಸಿ ಕನ್ನಡ ಭಾಷೆಯ ನಾಮಫಲಕಗಳನ್ನು ಬಳಸಡಿರುವ ಮಳಿಗೆಗಳಿಗೆ ನೋಟಿಸ್ ಜಾರಿಗೊಳಿಸಬೇಕು. ನಂತರ ಕನ್ನಡ ಭಾಷೆಯುಳ್ಳ ನಾಮಫಲಕಗಳನ್ನು ಅನುಷ್ಠಾನಗೊಳಿಸಲು ಗಡವು ನೀಡಬೇಕು. ಆದರೂ ನಾಮಫಲಕ ಬದಲಾಯಿಸದಿದ್ದಲ್ಲಿ ಮೊದಲು ಪರವಾನಗಿಯನ್ನು…

Read More

ಲಕ್ನೋ: ಧಾರ್ಮಿಕ ನಗರಗಳ ಪ್ರತಿಷ್ಠಿತ ದೇವಾಲಯಗಳ ಬಳಿ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸಬಾರದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಸೂಚನೆ ನೀಡಿದ್ದಾರೆ. ಸಭೆಯೊಂದರಲ್ಲಿ ಮಾತನಾಡಿದ ಅವರು, ಗೋರಖ್‌ಪುರ, ವಾರಣಾಸಿ ಮತ್ತು ಮಥುರಾ-ವೃಂದಾವನದಂತಹ ಧಾರ್ಮಿಕ ನಗರಗಳ ಪುರಾತನ ಮತ್ತು ಐತಿಹಾಸಿಕ ಸಾರವನ್ನು ಕಾಪಾಡುವ ಸಲುವಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ. ದೇವಾಲಯಗಳ ಎತ್ತರವನ್ನು ಮೀರಿದ ಯಾವುದೇ ರೀತಿಯ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡದಂತೆ ಆಡಳಿತ ವಲಯಕ್ಕೆ ಸೂಚಿಸಿದ್ದಾರೆ. ಗೋರಖ್‌ಪುರ, ವಾರಣಾಸಿ ಮತ್ತು ಮಥುರಾ-ವೃಂದಾವನದ ಯೋಜಿತ ಅಭಿವೃದ್ಧಿಗಾಗಿ ಸಂಬಂಧಿಸಿ ಅಧಿಕಾರಿಗಳು ಸಿದ್ಧಪಡಿಸಿದ ಜಿಐಎಸ್ ಆಧಾರಿತ ಮಾಸ್ಟರ್ ಪ್ಲಾನ್-2031 ಅನ್ನು ಸಿಎಂ ಪರಿಶೀಲಿಸಿದರು. ಜೊತೆಗೆ ಅಗತ್ಯ ಮಾರ್ಗಸೂಚಿಗಳನ್ನು ನೀಡಿದರು. ಧಾರ್ಮಿಕ ನಗರಗಳ ದೇವಾಲಯಗಳು ಮಹತ್ವದ ರಚನೆಗಳಿಗೆ ಹೆಸರುವಾಸಿಯಾಗಿವೆ. ಈ ದೇವಾಲಯಗಳು ಮತ್ತು ಪವಿತ್ರ ಕಟ್ಟಡಗಳ ಎತ್ತರವನ್ನು ಮೀರಿದ ರಚನೆಗಳಿಗೆ ಅನುಮತಿಸಬಾರದು. ನಿಯಂತ್ರಣಕ್ಕೆ ಮಾಸ್ಟರ್‌ ಪ್ಲ್ಯಾನ್‌ ಅಳವಡಿಸಬೇಕು. ನಾವು ಸಂಘಟಿತ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

Read More

ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ ಕ್ಲುಲ್ಲಕ ವಿಚಾರಕ್ಕಾಗಿ ಮದುವೆಗಳು (Marriage Cancel) ರದ್ದಾಗುವ ಪ್ರಕರಣಗಳು ಹೆಚ್ಚುತ್ತಿವೆ. ಅಂಥದ್ದೇ ಘಟನೆಯೊಂದು ನಡೆದು ಹೋಗಿರುವ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ. ಹೌದು. ವಧುವಿನ ಕಡೆಯವರು ಊಟದ ಮೆನುವಿನಲ್ಲಿ ಮಟನ್ ಬೋನ್ ಮ್ಯಾರೋ (Mutton Bone Marrow) ಸೇರಿಸಿಲ್ಲವೆಂದು ವರನ ಕಡೆಯವರು ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾರೆ. ನಿಜಾಮಾಬಾದ್‍ನ ವಧು ಹಾಗೂ ಜಗ್ತಿಯಾಳ್ ಮೂಲದ ವರನಿಗೂ ಮದುವೆ ನಿಶ್ಚಯವಾಗಿತ್ತು. ಅಂತೆಯೇ ಕಳೆದ ನವೆಂಬರ್ ತಿಂಗಳಲ್ಲಿ ವಧುವಿನ ಮನೆಯಲ್ಲಿ ನೆರವೇರಿತ್ತು. ಆದರೆ ಇದೀಗ ಸಣ್ಣ ವಿಚಾರವೊಂದಕ್ಕೆ ಮದುವೆಯೇ ರದ್ದಾಗಿದೆ. ನಿಶ್ಚಿತಾರ್ಥದ (Engagement) ಬಳಿಕ ವಧುವಿನ ಮನೆಯವರು ತಮ್ಮ ಕುಟುಂಬ ಸದಸ್ಯರು ಮತ್ತು ವರನ ಸಂಬಂಧಿಕರು ಸೇರಿದಂತೆ ಅತಿಥಿಗಳಿಗಾಗಿ ಮಾಂಸಾಹಾರಿ ಮೆನುವನ್ನು ಏರ್ಪಡಿಸಿದ್ದರು. ಆದರೆ ಈ ಮೆನುವಿನಲ್ಲಿ ಮಟನ್ ಐಟಮ್ ಇರಲಿಲ್ಲ. ಇದನ್ನು ಗಮನಿಸಿದ ವರನ ಕಡೆಯವರು ಮಟನ್ ಬೇಕು ಎಂದು ಹಠಕ್ಕೆ ಬಿದ್ದರು. ಈ ಸಂಬಂಧ ಎರಡೂ ಮನೆಯವರಿಗೂ ಜಗಳ ಆರಂಭವಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದ ಪರಿಣಾಮ ಪೊಲೀಸರು ಕೂಡ…

Read More

ಬೆಂಗಳೂರು: ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್ ಗಳನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. ಈ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಶಾಸಕರಾದ ಟಿ ಎ ಶರವಣ ಅವರು ಭಾಗಿಯಾಗಿದ್ದರು. ರಾಜ್ಯದ 4 ಕೋಟಿ 30 ಲಕ್ಷ ಮಂದಿ ನೇರವಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಆ ಮೂಲಕ ಬಡವರು ಮತ್ತು ದುಡಿಯುವ ವರ್ಗಗಳನ್ನು ಆರ್ಥಿಕ ಪ್ರಗತಿಯ ಮುಖ್ಯವಾಹಿನಿಗೆ ತರಲಾಗುತ್ತಿದೆ ಎಂದರು. ಆರ್ಥಿಕ ಶಕ್ತಿ ಮೂಲಕ ನಾಡಿನ ಸಮಸ್ತ ಮಹಿಳೆಯರಿಗೆ ಮತ್ತು ಬಡ, ಶ್ರಮಿಕ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಸ್ವಾತಂತ್ರ್ಯ ಲಭಿಸಿದೆ. ಇದನ್ನು ಸಾಧಿಸಲು ಕಾಂಗ್ರೆಸ್ ಸರ್ಕಾರವೇ ಬರಬೇಕಾಯಿತು. ಹಿಂದಿದ್ದ ಬಿಜೆಪಿ ಸರ್ಕಾರಗಳು ಇದನ್ನು ಸಾಧಿಸಲಿಲ್ಲ. ಬದಲಿಗೆ ಟೀಕಿಸುತ್ತಾ ಕುಳಿತಿವೆ ಎಂದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘನ ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದರು. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ…

Read More

ಹಾಸನ  : ಕೌಟುಂಬಿಕ ಜಗಳದ ಹಿನ್ನಲೆ ಪತಿ ಪತ್ನಿ ಚಿಕ್ಕಕಟ್ಟೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ರಾಜಕುಮಾರ ನಗರದ ಬಳಿ ನಡೆದಿದೆ. ರಿಜ್ವಾನ್ (31), ಸಮ್ರಿನ್ ಭಾನು (25) ಆತ್ಮಹತ್ಯೆಗೆ ಶರಣಾದ ದಂಪತಿ ನಗರದ, ಅಡ್ಲಿಮನೆ ರಸ್ತೆಯ ಚಿಕ್ಕಟ್ಟೆ ಕೆರೆಯಲ್ಲಿ ಘಟನೆ ನಿನ್ನೆ ಸಂಜೆ ಜಗಳವಾಡಿದ್ದ ಗಂಡ-ಹೆಂಡತಿ ಮಂಗಳವಾರ ಬೆಳಿಗ್ಗೆ ಫಲ್ಸರ್ ಬೈಕ್ ನಲ್ಲಿ ಬದು ಚಿಕ್ಕಟ್ಟೆ ಕೆರೆಗೆ ಹಾರಿದ ಸಮ್ರಿನ್ ಬಾನು ನಂತರ ಅದೇ ಕೆರೆಗೆ ಹಾರಿದ ಪತಿ ರಿಜ್ವಾನ್ ಕೂಡ ಆತ್ಮಹತ್ಯೆ ಶಂಕೆದಂಪತಿ ಶವ ಹೊರತೆಗೆದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ಪೆನ್‌ಷನ್‌ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Read More

ಜಗತ್ತಿನಾದ್ಯಂತ ಕ್ರಿಸ್ಮಸ್ ಹಬ್ಬದ (Christmas Festival) ಸಂಭ್ರಮ ಮನೆ ಮಾಡಿದೆ. ಎಲ್ಲೆಡೆ ಏಸುಕ್ರಿಸ್ತನ ಸ್ಮರಣೆ ಮಾಡಲಾಗುತ್ತಿದೆ. ಇದರ ನಡುವೆ ಸಿನಿಮಾ ನಟ-ನಟಿಯರು ಕೂಡ ಕ್ರಿಸ್ಮಸ್ ಹಬ್ಬ ಸೆಲೆಬ್ರೇಟ್ ಮಾಡಿದ್ದಾರೆ. ಕ್ರಿಸ್ಮಸ್ ಹಬ್ಬದಂದು ಚೆಂದದ ಫೋಟೋಗಳನ್ನ ಕೂಡ ಶೇರ್ ಮಾಡಿದ್ದಾರೆ. ಕ್ರಿಸ್ಮಸ್ ಹಬ್ಬದ ದಿನದಂದು ‘ಗಟ್ಟಿಮೇಳ’ (Gattimela) ಬ್ಯೂಟಿ ಶರಣ್ಯ ಶೆಟ್ಟಿ (Sharanya Shetty) ಅವರು ಕೆಂಪು ಬಣ್ಣದ ಉಡುಗೆಯಲ್ಲಿ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಕೆಂಪು ಕಲರ್ ಗೌನ್‌ಗೆ ಬಿಳಿ ಬಣ್ಣದ ಉಲ್ಲನ್ ಶಾಲ್ ಮತ್ತು ಟೋಪಿ ಧರಿಸಿ ಸಖತ್ ಹಾಟ್ ಆಗಿ ಪೋಸ್ ನೀಡಿದ್ದಾರೆ. ಶರಣ್ಯ ಲುಕ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ‘ಬಚ್ಚನ್’ ಚಿತ್ರದ ನಟಿ ಪಾರುಲ್ ಯಾದವ್ (Parul Yadav) ಅವರು ತಮ್ಮ ನಾಯಿ ಮರಿಗಳ ಜೊತೆ ಕ್ರಿಸ್ಮಸ್ ಆಚರಣೆ ಮಾಡಿದ್ದಾರೆ. ಇದರ ಸ್ಪೆಷಲ್ ಫೋಟೋಗಳನ್ನ ಕೂಡ ನಟಿ ಹಂಚಿಕೊಂಡಿದ್ದಾರೆ ಉಗ್ರಂ, ಬಘೀರ ಹೀರೋ ಶ್ರೀಮುರಳಿ (Srimurali) ಕೂಡ ಕ್ರಿಸ್ಮಸ್ ಹಬ್ಬದ ಸಂಭ್ರಮದಲ್ಲಿದ್ದಾರೆ. ಪತ್ನಿ ವಿದ್ಯಾ ಮತ್ತು ಮಕ್ಕಳೊಂದಿಗಿನ…

Read More

ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ.27 ರಿಂದ 29 ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರ ಆಯೋಜಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಆಧಾರ್ ಜೋಡಣೆ, ಬ್ಯಾಂಕಿಗೆ ಸಂಬಂಧಿಸಿದ ತೊಂದರೆ, ಇ-ಕೆವೈಸಿ ಅಪ್ಡೆಟ್, ಹೊಸ ಬ್ಯಾಂಕ್ ಖಾತೆ ಆರಂಭ ಸೇರಿದಂತೆ ಹಲವು ಸಮಸ್ಯೆಗಳಿಂದಾಗಿ ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಹಲವು ಮಹಿಳೆಯರು ತೊಂದರೆ ಎದುರಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಈ ತೊಂದರೆಗಳನ್ನು ಪರಿಹರಿಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ಜಮಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಈ ಶಿಬಿರ ಸಜ್ಜುಗೊಳಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ. ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಮೂರು ದಿನಗಳ ಕಾಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ಈ ಶಿಬಿರಗಳನ್ನು ಆಯೋಜಿಸಲಾಗುವುದು, ಬಾಪೂಜಿ ಸೇವಾ ಕೇಂದ್ರದ ಗಣಕಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು ಮತ್ತು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್…

Read More

ಸ್ಯಾಂಡಲ್‌ವುಡ್‌ಗೆ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ನಾಯಕ ನಟನಾಗಿ ಎಂಟ್ರಿ ಕೊಡ್ತಿದ್ದಾರೆ. ಚೊಚ್ಚಲ ಸಿನಿಮಾ ‘ಗೌರಿ’ (Gowri Film) ಶೂಟಿಂಗ್ ಕೂಡ ಭರದಿಂದ ನಡೆಯುತ್ತಿದೆ. ‘ಗೌರಿ’ ಸಿನಿಮಾದಲ್ಲಿ ಸಲಗ (Salaga) ಸುಂದರಿ ಸಂಜನಾ ಆನಂದ್ (Sanjana Anand) ಕೂಡ ನಟಿಸುತ್ತಿದ್ದಾರೆ. ಇಂದ್ರಜಿತ್ ನಿರ್ದೇಶನದ ಈ ಸಿನಿಮಾದಲ್ಲಿ ಸಮರ್ಜಿತ್‌ಗೆ ನಾಯಕಿಯಾಗಿ ಸಾನ್ಯ ಅಯ್ಯರ್ (Saanya Iyer) ನಟಿಸುತ್ತಿದ್ದಾರೆ. ಲವ್ ಸ್ಟೋರಿ ಜೊತೆ ಆ್ಯಕ್ಷನ್ ಓರಿಯೆಂಟೆಡ್ ಸಿನಿಮಾವಾಗಿದೆ. ಇದೇ ಚಿತ್ರದಲ್ಲಿ ಸಂಜನಾ ಆನಂದ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ ಚಿತ್ರದಲ್ಲಿ ಸಂಜನಾ ಪಾತ್ರ ತಿರುವು ಕೊಡಲಿದೆ. ಅಷ್ಟೇ ಅಲ್ಲ, ಹೀರೋ ಸಮರ್ಜಿತ್ ಜೊತೆ ಸ್ಪೆಷಲ್ ಹಾಡಿಗೆ ಮಸ್ತ್ ಆಗಿ ಹೆಜ್ಜೆ ಹಾಕಿ ಬಂದಿದ್ದಾರೆ. ಸಂಜನಾ ಆ್ಯಕ್ಟಿಂಗ್ ಜೊತೆಗೆ ಡ್ಯಾನ್ಸ್ ಕೂಡ ತೆಗೆಸಿದ್ದಾರೆ ನಿರ್ದೇಶಕರು. ಎರಡು ದಿನ ರಿಹರ್ಸಲ್ ಮಾಡಿದ್ದು, ಇನ್ನೆರಡು ದಿನಗಳಲ್ಲಿ ಹಾಡಿನ ಚಿತ್ರೀಕರಣ ಮಾಡಿದ್ದಾರೆ. ಸಮರ್ಜಿತ್ ನೃತ್ಯ ಕೌಶಲ್ಯದ ಬಗ್ಗೆ ನಟಿ ಮೆಚ್ಚುಗೆ ಸೂಚಿಸಿದ್ದಾರೆ. ಕನ್ನಡ ಮತ್ತು ತೆಲುಗು ಸಿನಿಮಾಗಳಲ್ಲಿ ಸಂಜನಾ…

Read More

ಬಿಗ್ ಬಾಸ್ ಸೀಸನ್ 7 (Bigg Boss Kannada 7) ಸ್ಪರ್ಧಿ ವಾಸುಕಿ ವೈಭವ್ (Vasuki Vaibhav) ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ಜೊತೆ ನವೆಂಬರ್ 16ರಂದು ಹೊಸ ಬಾಳಿಗೆ ಕಾಲಿಟ್ಟಿದ್ದರು. ಮದುವೆಯಾಗಿ ಒಂದು ತಿಂಗಳ ನಂತರ ಇದೀಗ ಮದುವೆಯ ಸುಂದರ ಫೋಟೋಗಳನ್ನ ಶೇರ್ ಮಾಡಿದ್ದಾರೆ. ವಾಸುಕಿ- ಬೃಂದಾ ಜೋಡಿ ರಂಗಭೂಮಿಯಲ್ಲಿರುವಾಗಲೇ ಪರಿಚಿತರು. ಹಲವು ವರ್ಷಗಳು ಪ್ರೀತಿಸಿ ಇತ್ತೀಚೆಗೆ ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟರು. ಇದೀಗ ಇಬ್ಬರ ಮದುವೆ ಸುಂದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ. ವಾಸುಕಿ ಮದುವೆಗೆ ಡಾಲಿ, ಕಿಶನ್, ದೀಪಿಕಾ ದಾಸ್, ಸಾನ್ಯ ಅಯ್ಯರ್, ಶೈನ್ ಶೆಟ್ಟಿ, ಕೃಷಿ ತಾಪಂಡ, ಶೃತಿ ಹರಿಹರನ್, ಮೇಘನಾ ರಾಜ್ ಸೇರಿದಂತೆ ಅನೇಕರು ಭಾಗಿಯಾಗಿ ಶುಭಕೋರಿದ್ದರು

Read More