Author: AIN Author

ಬೆಂಗಳೂರು:  ಐಟಿ ಹಬ್ ಆಗಿ ಮಾರ್ಪಟ್ಟಿದೆ. ಇದರಿಂದ ಎಲ್ಲೆಲ್ಲೂ ಇಂಗ್ಲೀಷ್ ನಾಮಫಕಗಳೇ ರಾರಾಜಿಸುತ್ತಿವೆ.ರಾಜಧಾನಿಯಲ್ಲಿ ಕನ್ನಡ ನಾಮಫಲಕ ಕಡ್ಡಾಯ ರೂಲ್ಸ್ ಹೊರಡಿಸಿದ್ರೂ ಉದ್ದಿಮೆದಾರರ ಕ್ಯಾರೆ ಎನ್ನುತ್ತಿಲ್ಲ..ಇದು ಕನ್ನಡ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿ ಉದ್ದಿಮೆದಾರರ ವಿರುದ್ದ ಕನ್ನಡ ಪರ ಸಂಘಟನೆಗಳು ಹೋರಾಟಕ್ಕೆ ಧುಮ್ಮಕ್ಕಿದ್ರೆ ಇತ್ತ ಪಾಲಿಕೆ ಕನ್ನಡ ನಾಮಫಲಕ ಕಡ್ಡಾಯ ಆಳವಡಿಕೆಗೆ ಫೆಬ್ರವರಿ 28 ವರಿಗೆ ಡೆಡ್ಲೈನ್ ನೀಡಿದೆ. ಜಗತ್ತಿನ ಪ್ರಮುಖ ನಗರಗಳಲ್ಲಿ ಬೆಂಗಳೂರು ಸಹ ಒಂದು. ದೇಶದ ಪ್ರಮುಖ ನಗರಗಳಿಗೆ ಬೆಂಗಳೂರು ಪೈಪೋಟಿ ನೀಡ್ತಿದೆ. ನಗರ ಬೆಳೆದಂತೆ ಮಾತೃಭಾಷೆ ಕಡೆಗಣಿಸಲಾಗ್ತಿದೆ ಅನ್ನೋ ಆರೋಪ ಇದೆ. ನಗರದಾದ್ಯಂತ ಇಂಗ್ಲೀಷ್‌ ಬರಹಗಳಿರುವ ನಾಮಫಲಕಗಳೇ ರಾರಾಜಿಸುತ್ತಿರೋದು ಕನ್ನಡ ಪರ ಸಂಘನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡ ನಾಮಫಲಕ ಆಳವಡಿಸದ ಉದ್ದಿಮೆದಾರರ ವಿರುದ್ದ ಕ್ರಮ ಕೈಗೊಳ್ಳುವಂತೆ ಕನ್ನಡ ಪರ ಸಂಘಟನೆಗಳು ಬಿಬಿಎಂಪಿ ಒತ್ತಾಯಿಸಿವೆ. ಈ ಸಂಬಂಧ ಇವತ್ತು ಕನ್ನಡ ಪರ ಸಂಘನೆಗಳ ಜೊತೆ ಬಿಬಿಎಂಪಿ ಕಮೀಷನರ್ ಸಹ ಸಭೆ ನಡೆಸಿ ಕನ್ನಡ ನಾಮಫಲಕ ಆಳವಡಿಕೆ ಮಾಡದ ವಾಣಿಜ್ಯ ಮಳಿಗೆಗಳ…

Read More

ಬೆಂಗಳೂರು:  ಸಚಿವ  ಶಿವಾನಂದ ಪಾಟೀಲ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಬಗ್ಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಯವರು ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ. ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು,  ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು. ನಾನು ಕೃಷಿಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಸಚಿವರು ಬೇಷರತ್ ಕ್ಷಮೆ ಕೇಳಬೇಕು, ತಮ್ಮ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು.

Read More

ಬೆಂಗಳೂರು: ದೆಹಲಿಯಲ್ಲಿ ಒಂದು ವರ್ಷ ಕಾಲ ಹೋರಾಟ ಮಾಡಿದ ರೈತರಿಗೆ 2021 ರ ಡಿಸೆಂಬರ್ 21 ರಂದು ಪ್ರಧಾನ ಮಂತ್ರಿಗಳು ನೀಡಿದ್ದ ಭರವಸೆ ಈಡೇರದ ಕಾರಣ ದೇಶಾದ್ಯಂತ ಮುಂದಿನ ಫೆಬ್ರವರಿ 26 ಕ್ಕೆ ದೆಹಲಿ ಚಲೋ (Delhi Chalo) ಮಾಡಲು ರೈತರು ತೀರ್ಮಾನಿಸಿದ್ದಾರೆ. ದೇಶದ ರೈತರ ಪ್ರಮುಖ 7 ಒತ್ತಾಯಗಳ ಬಗ್ಗೆ ‘ದೆಹಲಿ ಚಲೋ’ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ರಾಜಕೀಯತರವಾಗಿ ರೈತರನ್ನ ಜಾಗೃತಿ ಮೂಡಿಸಲು ದೇಶಾದ್ಯಂತ ಕಿಸಾನ್ ಮಹಾ ಪಂಚಾಯತ್ ನಡೆಸಲಾಗುತ್ತಿದೆ. ಈಗಾಗಲೇ ವಿವಿಧ ರಾಜ್ಯಗಳಲ್ಲಿ 6 ಕಿಸಾನ್ ಮಹಾ ಪಂಚಾಯತ್‌ಗಳನ್ನು ಒಡಿಸ್ಸಾದ ಭುವನೇಶ್ವರ, ಪಂಜಾಬಿನ ಲೂಧಿಯಾನ ಮತ್ತು ಮೊಗಾ, ಕೇರಳದ ಪಾಲಕ್ಕಾಡ್, ತಮಿಳುನಾಡಿನ ಚೆನ್ನೈ, ಕರ್ನಾಟಕದ ಬೆಂಗಳೂರು ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ನಡೆಸಲಾಗಿದೆ. ಮುಂಬರುವ ಒಂದೂವರೆ ತಿಂಗಳಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿ ಇನ್ನೂ 14 ಕಿಸಾನ್ ಮಹಾ ಪಂಚಾಯತ್ ಹಮ್ಮಿಕೊಳ್ಳಲಾಗಿದೆ. ದೆಹಲಿ ಚಲೋ ಕಾರ್ಯಕ್ರಮದ ಪ್ರಮುಖ ಒತ್ತಾಯಗಳು * ಡಾ. ಸ್ವಾಮಿನಾಥನ್ ವರದಿಯಂತೆ C2+50% ಸೂತ್ರದ ಪ್ರಕಾರ ಕನಿಷ್ಠ…

Read More

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ನೀಡಿರುವ ಹಿಜಬ್ (Hijab) ನಿಷೇಧ ವಾಪಸ್ ಹೇಳಿಕೆ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅಂತರ ಕಾಯ್ದುಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ಕೊಡದೆ ತೆರಳಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ಕೊಟ್ಟು 2 ದಿನ ಕಳೆದರೂ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಇಂದು (ಭಾನುವಾರ) ಮಾಧ್ಯಮಗಳಿಗೆ ಯಾವುದೇ ಹೇಳಿಕೆ ಕೊಡದೇ ಕಾರಿನಲ್ಲೆ ಕುಳಿತು ಮಾತನಾಡಲ್ಲ ಎಂದು ಕೈ ಸನ್ನೆ ಮಾಡಿ ತೆರಳಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರದಲ್ಲಿ ಅಂತರ ಕಾಯ್ದುಕೊಳ್ಳಲು ಡಿಸಿಎಂ ಡಿಕೆಶಿ ನಿರ್ಧರಿಸಿದಂತಿದೆ. ಬಳಿಕ ಸಿದ್ದರಾಮಯ್ಯ ಅವರನ್ನು ಅವರ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ನಿಗಮ ಮಂಡಳಿಗೆ ಕಾರ್ಯಕರ್ತರ ಪಟ್ಟಿ ಕೊಡಬೇಕಾದ ಕಾರಣ ಆ ಸಂಬಂಧ ಪಟ್ಟಿ ಅಂತಿಮ ಪಡಿಸುವ ಬಗ್ಗೆ ಪೂರ್ವ ತಯಾರಿಯ ಮಾತುಕತೆ ನಡೆಸಿದರು. ಹಿಜಬ್ ವಿಚಾರ ಮಾತನಾಡಿದ ನಂತರ ಮೊದಲ ಬಾರಿಗೆ ಭೇಟಿ ಇದಾಗಿದ್ದು, ಹೇಳಿಕೆ ವಿಚಾರವೂ ಚರ್ಚೆಯಾಗಿದೆ ಎನ್ನಲಾಗಿದೆ.

Read More

ಬೆಂಗಳೂರು: ಕ್ರಿಸ್ಮಸ್‌ ಹಾಗೂ ಹೊಸ ವರ್ಷದ ಹೊತ್ತಲ್ಲೇ ಕೊರೊನಾ ವೈರಸ್‌ (Corona Virus) ಮತ್ತೆ ಭೀತಿ ಹುಟ್ಟಿಸಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 106 ಕೊರೊನಾ ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ಇಂದು (ಭಾನುವಾರ) 33 ಮಂದಿ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ಇಂದು ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 344 ಕ್ಕೆ ಏರಿಕೆಯಾಗಿದೆ. ಪಾಸಿಟಿವಿ ರೇಟ್‌ ಕೂಡ ಏರಿಕೆ ಕಂಡಿದ್ದು, 7.35 % ಆಗಿದೆ ಬೆಂಗಳೂರು ನಗರದಲ್ಲಿ ದಿನೇ ದಿನೇ ಕೊರೊನಾ (Covid-19) ಕೇಸ್‌ ಏರಿಕೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಇಂದು ನಗರದಲ್ಲಿ 95 ಪಾಸಿಟಿವ್‌ ಪ್ರಕರಣ ದೃಢಪಟ್ಟಿದೆ. ಆ ಮೂಲಕ ದಿನದ ಕೇಸ್‌ ಶತಕದ ಸನಿಹಕ್ಕೆ ತಲುಪಿದೆ. ಚಾಮರಾಜನಗರದಲ್ಲಿ 1, ದಕ್ಷಿಣ ಕನ್ನಡದಲ್ಲಿ 2, ಮಂಡ್ಯದಲ್ಲಿ 1, ಮೈಸೂರಿನಲ್ಲಿ 6, ಶಿವಮೊಗ್ಗದಲ್ಲಿ 1 ಪ್ರಕರಣ ವರದಿಯಾಗಿದೆ. ಕೊರೊನಾದಿಂದಾಗಿ ಇಂದು 323 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 21 ಮಂದಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 7 ಮಂದಿ ಐಸಿಯುನಲ್ಲಿದ್ದಾರೆ

Read More

ಬೆಂಗಳೂರು : ಅಧಿಕಾರಕ್ಕೆ ಬಂದ ಆರು ತಿಂಗಳಲ್ಲೇ 18.50 ಕೋಟಿ ಜಾಹೀರಾತು ನೀಡಿ ಪ್ರಚಾರ ಗಿಟ್ಟಿಸಿಕೊಂಡ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ‘ಬರದಿಂದ ಬಸವಳಿದ ರೈತರ ಪರಿಹಾರಕ್ಕೆ ಹಣವಿಲ್ಲ. ಆದರೆ, ಜಾಹೀರಾತು ಕೊಟ್ಟು ಬಿಟ್ಟಿ ಪ್ರಚಾರ ಪಡೆಯಲು ಮಾತ್ರ ಸ್ವಯಂ ಘೋಷಿತ ಆರ್ಥಿಕ ತಜ್ಞ ಅಲಿಯಾಸ್ ಮಜವಾದಿ ಸಿದ್ದರಾಮಯ್ಯ ಅವರ ಬಳಿ ಕೋಟಿ ಕೋಟಿ ಹಣವಿದೆ’ ಎಂದು ಕುಟುಕಿದೆ. ‘ಅಭಿವೃದ್ಧಿ ಮಾಡಲು ಸರ್ಕಾರದ ಬಳಿ ಹಣವಿಲ್ಲ. ಘೋಷಿಸಿದ ಗ್ಯಾರಂಟಿಗಳನ್ನು ನೀಡುವುದಕ್ಕೂ ಹಣವಿಲ್ಲ. ಶಾಸಕರಿಗೆ ಅನುದಾನ ಕೊಡುವುದಕ್ಕೂ ಹಣವಿಲ್ಲ. ಭಲೇ ಭಲೆ ಮಜವಾದಿ ಸಿದ್ದರಾಮಯ್ಯ ಸರ್ಕಾರ’ ಎಂದು ಸಿದ್ದರಾಮಯ್ಯ ಸರ್ಕಾರವನ್ನು ಮೂದಲಿಸಿದೆ. ‘ಆರು ತಿಂಗಳಲ್ಲಿ ಸರ್ಕಾರದ ಸಾಧನೆ ಏನೇನೂ ಇಲ್ಲ. ಆದರೂ ಕೂಡ ಜಾಹೀರಾತಿಗಾಗಿ ಬರೊಬ್ಬರಿ 18.50 ಕೋಟಿ‌ ರೂ. ವ್ಯಯ ಮಾಡಲಾಗಿದೆ. ಕಾಂಗ್ರೆಸ್​ ಶೋಕಿ,‌ ಮೋಜು, ಮಸ್ತಿ ಮಾಡುತ್ತಿದೆ. ಇಲ್ಲದ ವಿವಾದಗಳನ್ನು ಮುನ್ನಲೆಗೆ ತಂದು ಧರ್ಮ ಧರ್ಮಗಳ ನಡುವೆ, ಜಾತಿ ಜಾತಿಗಳ…

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಯೋಜನೆಗಳಿಗೆ ಅಡಿಗಲ್ಲು ಹಾಕುವ ಬದಲು ಕನ್ನಡಿಗರ ತಲೆಯ ಮೇಲೆ ಕಲ್ಲು ಹಾಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದೂ-ಮುಸ್ಲಿಮರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ (R.Ashok) ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಳು ಕೋಟಿ ಕನ್ನಡಿಗರ ತಲೆ ಮೇಲೆ ಕಲ್ಲು ಹಾಕಿರುವ ಸರ್ಕಾರ, ಅಭಿವೃದ್ಧಿ ಕಾಮಗಾರಿಗೆ ಒಂದು ಅಡಿಗಲ್ಲನ್ನೂ ಹಾಕಿಲ್ಲ. ಜನರು ಸರ್ಕಾರದ ಬಗ್ಗೆ ಛೀ, ಥೂ ಎಂದು ಮಾತನಾಡುತ್ತಿದ್ದಾರೆ. ಸರ್ಕಾರ ಹಿಂದೂ-ಮುಸ್ಲಿಮರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯನವರು ಜಾತಿ, ಧರ್ಮಗಳ ನಡುವೆ ಬೆಂಕಿ ಹಚ್ಚುವ ವೀರ ಎಂದು ಟೀಕಿಸಿದ್ದಾರೆ ಬರ ಪರಿಹಾರಕ್ಕೆ ಇದೇ ವಾರದಲ್ಲಿ 2 ಸಾವಿರ ರೂ. ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರ ಹೇಳಿದೆ. ಆದರೆ ಈವರೆಗೆ ಹಣ ಸಿಕ್ಕಿಲ್ಲ. ಶಾಲೆಯ ಶೌಚಾಲಯ ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. 15-20 ಸಾವಿರ ರೂ.ಗೆ ಯಾರೂ ಬರದೆ ಶಾಲಾ ಮಕ್ಕಳ ಕೈಯಲ್ಲಿ ಶೌಚಾಲಯ…

Read More

ಬೆಂಗಳೂರು: ಜಗತ್ತಿಗೆ ಶಾಂತಿ, ಪ್ರೀತಿಯ ಸಂದೇಶ ಸಾರಿದ ದೇವಪುತ್ರ ಯೇಸುವಿನ ಜನ್ಮದಿನದ ಆಚರಣೆಯೇ ಕ್ರಿಸ್ಮಸ್ (Christmas). ಮನುಷ್ಯ ಎಲ್ಲರಿಗೂ ಉಪಯುಕ್ತನಾಗಬೇಕು, ಎಲ್ಲರಲ್ಲಿಯೂ ಒಂದಾಗಿ ಬಾಳಬೇಕು ಮತ್ತು ಒಳ್ಳೆಯದನ್ನ ಕೇಳುವಂತವನಾಗಿರಬೇಕು ಎನ್ನುವುದೇ ಹಬ್ಬದ ಮುಖ್ಯ ಧ್ಯೇಯ. ಪ್ರತಿ ವರ್ಷ ಡಿಸೆಂಬರ್‌ 25ರಂದು ದೇಶಾದ್ಯಂತ ಕ್ರೈಸ್ತ ಬಾಂಧವರು ಕ್ರಿಸ್ಮಸ್‌ ಹಬ್ಬವನ್ನು (Christmas Festival) ಆಚರಿಸುತ್ತಾರೆ. ವಿವಿಧ ಚರ್ಚ್‌ಗಳಲ್ಲಿ ಯೇಸುವಿಗೆ ವಿಶೇಷ ಪೂಜೆ ಸಲ್ಲಿಸುವ ಜೊತೆ ಭಾರೀ ಗಾತ್ರದ ಕೇಕ್‌ಗಳನ್ನು ಕತ್ತರಿಸುತ್ತಾರೆ. ಪ್ರಮುಖ ನಗರದ ಮಾಲ್‌ಗಳಲ್ಲಿಯೂ ವಿಶೇಷ ಕ್ರಿಸ್ಮಸ್‌ ದೀಪಾಲಂಕಾರ, ಕ್ರಿಸ್ಮಸ್‌ ಟ್ರೀ (Christmas Tree) ಸ್ಥಾಪಿಸಿ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸುತ್ತಾರೆ ಈ ಬಾರಿ ಏನು ವಿಶೇಷ? ಈ ಬಾರಿಯ ಕ್ರಿಸ್ಮಸ್‌ ಹಬ್ಬಕ್ಕೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ಫೀನಿಕ್ಸ್‌ ಮಾಲ್‌ ಆಫ್‌ ಏಷ್ಯಾದಲ್ಲಿ ದೇಶದಲ್ಲೇ ಅತಿದೊಡ್ಡ 100 ಅಡಿ ಎತ್ತರದ ಕ್ರಿಸ್ಮಸ್‌ ಟ್ರೀಯನ್ನು ಅನಾವರಣಗೊಳಿಸಲಾಗಿದೆ. ಇದರೊಂದಿಗೆ ನೀರು ಹಾಗೂ ಸಂಗೀತ ಕಾರಂಜಿಯನ್ನೂ ಆಯೋಜಿಸಲಾಗಿದೆ. ಇದರ ಪಕ್ಕದಲ್ಲೇ ಸಾಂತಾಕ್ರೂಸ್‌ ವೇಶದಲ್ಲಿರುವ ವ್ಯಕ್ತಿಗೆ ಕ್ರಿಸ್ಮಸ್‌ ವಿಶ್‌ ಮಾಡುವ ಮೂಲಕ ಜನರು…

Read More

ಬೆಂಗಳೂರು : ರಾಜ್ಯದಲ್ಲಿ ಕೊವಿಡ್​​ ಪ್ರಕರಣಗಳ ಸಂಖ್ಯೆ 300ರ ಗಡಿದಾಟಿದೆ. ರಾಜ್ಯದಲ್ಲಿ ಒಟ್ಟು 344 ಸಕ್ರಿಯ ಕೊವಿಡ್ ಪ್ರಕರಣ ದಾಖಲಾಗಿದೆ. ಕಳೆದ 24 ಗಂಟೆಯಲ್ಲಿ (ಇಂದು ಹೊಸದಾಗಿ) 106 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 7.35% ಕೊವಿಡ್ ಪಾಸಿಟಿವ್ ರೇಟ್ ವರದಿಯಾಗಿದೆ. ಕಳೆದ 24 ಗಂಟೆಯಲ್ಲಿ 1,441 ಟೆಸ್ಟ್‌ಗಳನ್ನು ಮಾಡಲಾಗಿದ್ದು, 1135 RTCPR ಹಾಗೂ 306 RAT ಟೆಸ್ಟ್‌ಗಳನ್ನ ಮಾಡಲಾಗಿದೆ. ಬೆಂಗಳೂರಿನಲ್ಲೇ ಅತಿ ಹೆಚ್ಚು ಪಾಸಿಟಿವ್ ಪ್ರಕರಣ ವರದಿಯಾಗಿವೆ. ಬೆಂಗಳೂರಿನಲ್ಲಿ ಇಲ್ಲಿಯವರೆಗೂ 297 ಪ್ರಕರಣಗಳು ವರದಿಯಾಗಿವೆ. ಒಟ್ಟು 343 ಸಕ್ರಿಯ ಪ್ರಕರಣಗಳಲ್ಲಿ 323 ಸೋಂಕಿತರು (ಪ್ರಕರಣ) ಹೋಂ ಐಸೋಲೇಷನ್‌ನಲ್ಲಿ ಇರಲು ಸೂಚನೆ ನೀಡಲಾಗಿದೆ. 21 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅದರಲ್ಲಿ 7 ಸೋಂಕಿತರಿಗೆ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನಲ್ಲಿ 6 ಪ್ರಕರಣ ಪತ್ತೆ ಬೆಂಗಳೂರಿನಲ್ಲಿ 95 ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಮೈಸೂರಿನಲ್ಲಿ 6, ಮಂಡ್ಯದಲ್ಲಿ 1, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2, ಶಿವಮೊಗ್ಗ ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ತಲಾ ಒಂದು…

Read More

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ಗೆ ಯುನೆಸ್ಕೋದ ವಿಶೇಷ ವಿಶ್ವ ಮನ್ನಣೆ ಸಿಕ್ಕಿದೆ. ಇದಕ್ಕೆ ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಿ ‌ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಜಗತ್ತಿನ ಅತ್ಯಂತ ಸುಂದರ ವಿಮಾನ ನಿಲ್ದಾಣಗಳ ಪೈಕಿ ಇದೂ ಒಂದು ಎಂಬ ಕೀರ್ತಿಗೆ ನಮ್ಮ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾಜನವಾಗಿದೆ ಎಂದು ಕಳೆದ ವರ್ಷ ಟರ್ಮಿನಲ್ ಕಟ್ಟಡ ಉದ್ಘಾಟನೆಯ ಫೋಟೋಗಳನ್ನ ಶೇರ್‌ ಮಾಡಿ ಮೋದಿ ಹರ್ಷವನ್ನ ವ್ಯಕ್ತಪಡಿಸಿದ್ದಾರೆ. ಉತ್ಸಾಹಭರಿತ ನಗರದ ಜೊತೆಗೆ ವಾಸ್ತುಶಿಲ್ಪದಲ್ಲಿ ತನ್ನ ಜಾಣ್ಮೆಯನ್ನ ಇಲ್ಲಿ ತೋರಿಸಲಾಗಿದೆ. ಇದು ಭಾರತಕ್ಕೆ ಹೆಮ್ಮೆ ಎಂದು ಪ್ರಧಾನಿಗಳು ಶ್ಲಾಘಿಸಿದ್ದಾರೆ. ‘ಶ್ಲಾಘನೀಯ ಸಾಧನೆ! ಬೆಂಗಳೂರಿನ ಜನತೆಗೆ ಅಭಿನಂದನೆಗಳು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಕೇವಲ ರೋಮಾಂಚಕ ನಗರವಾದ ಬೆಂಗಳೂರಿನ ಹೆಬ್ಬಾಗಿಲು ಮಾತ್ರವಲ್ಲದೆ, ವಾಸ್ತುಶಿಲ್ಪದ ವೈಭವದ ಪ್ರದರ್ಶನವಾಗಿದೆ. ಈ ಸಾಧನೆಯು ವಿಶ್ವ ದರ್ಜೆಯ ಮೂಲಸೌಕರ್ಯವನ್ನು ಕಲಾತ್ಮಕ ಸೌಂದರ್ಯದೊಂದಿಗೆ ಸಂಯೋಜಿಸುವಲ್ಲಿ ದೇಶದ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತದೆ. ಕಳೆದ ವರ್ಷ ಟರ್ಮಿನಲ್ ಕಟ್ಟಡದ ಉದ್ಘಾಟನೆಯ ಝಲಕ್ ಇಲ್ಲಿದೆ’ ಎಂದು…

Read More