Author: AIN Author

ಹಿರಿಯೂರು : ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ತಾಂತ್ರಿಕ ಸಮಸ್ಯೆಯಿಂದ ತುರ್ತು ಭೂಸ್ಪರ್ಶವಾದ ಘಟನೆ ಆರನಕಟ್ಟೆ ಗ್ರಾಮದಲ್ಲಿ ಘಟನೆ ಭಾನುವಾರ ನಡೆದಿದೆ. ಸಚಿವರು ಬೆಂಗಳೂರಿನಿಂದ ಗದಗ ಜಿಲ್ಲೆಯ ಸಂಕೇಶ್ವರ ಕಡೆಗೆ ಪ್ರಯಾಣಿಸುತ್ತಿದ್ದಾಗ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಆರನಕಟ್ಟೆ ಗ್ರಾಮದ ವಾಣಿ ವಿಲಾಸ ಪ್ರೌಢಶಾಲಾ ಆವರಣದಲ್ಲಿ ಹೆಲಿಕಾಪ್ಟರ್ ನನ್ನು ತುರ್ತು ಭೂ ಸ್ಪರ್ಶ ಮಾಡಲಾಯಿತು. ಸದ್ಯ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಸಚಿವರು ಭಾನುವಾರ ಬೆಳಗ್ಗೆ ಬೆಂಗಳೂರಿನಿಂದ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ 10.15 ಕ್ಕೆ ಬೆಂಗಳೂರಿನ ಜಕ್ಕೂರು ಏರೋಡ್ರಂನಿಂದ ಟೇಕಾಫ್ ಆಗಿತ್ತು. ಆರನಕಟ್ಟೆ ಬಳಿ 11.30ರ ಸಮಯದಲ್ಲಿ ಆರನಕಟ್ಟೆ ಬಳಿ ತುರ್ತು ಭೂಸ್ಪರ್ಶವಾಗಿಯಿತು. ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾದ ಬಳಿಕ ಸಚಿವರು ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ವಿಶ್ರಾಂತಿ ಪಡೆದರು. ಈ ವೇಳೆ ಕೆಪಿಸಿಸಿ ಸದಸ್ಯ ಕಂದಿಕೆರೆ ಸುರೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಸೇರಿದಂತೆ  ಕಾಂಗ್ರೆಸ್ ಕಾರ್ಯಕರ್ತರು ಸಚಿವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ನಂತರ ಸಚಿವರು…

Read More

ಬೆಂಗಳೂರು: ಕ್ರಿಸ್ಮಸ್‌ ಹಾಗೂ ಹೊಸ ವರ್ಷದ ಹೊತ್ತಲ್ಲೇ ಕೊರೊನಾ ವೈರಸ್‌ (Corona Virus) ಮತ್ತೆ ಭೀತಿ ಹುಟ್ಟಿಸಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 106 ಕೊರೊನಾ ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ಭಾನುವಾರ)33 ಮಂದಿ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ಇಂದು ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 344 ಕ್ಕೆ ಏರಿಕೆಯಾಗಿದೆ. ಪಾಸಿಟಿವಿ ರೇಟ್‌ ಕೂಡ ಏರಿಕೆ ಕಂಡಿದ್ದು, https://ainlivenews.com/what-do-you-know-about-the-iphone-16-lineup-do-you-know-why-they-put-the-a18-chip/  7.35 % ಆಗಿದೆ. ಬೆಂಗಳೂರು ನಗರದಲ್ಲಿ ದಿನೇ ದಿನೇ ಕೊರೊನಾ (Covid-19) ಕೇಸ್‌ ಏರಿಕೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಇಂದು ನಗರದಲ್ಲಿ 95 ಪಾಸಿಟಿವ್‌ ಪ್ರಕರಣ ದೃಢಪಟ್ಟಿದೆ. ಆ ಮೂಲಕ ದಿನದ ಕೇಸ್‌ ಶತಕದ ಸನಿಹಕ್ಕೆ ತಲುಪಿದೆ. ಚಾಮರಾಜನಗರದಲ್ಲಿ 1, ದಕ್ಷಿಣ ಕನ್ನಡದಲ್ಲಿ 2, ಮಂಡ್ಯದಲ್ಲಿ 1, ಮೈಸೂರಿನಲ್ಲಿ 6, ಶಿವಮೊಗ್ಗದಲ್ಲಿ 1 ಪ್ರಕರಣ ವರದಿಯಾಗಿದೆ. ಕೊರೊನಾದಿಂದಾಗಿ ಇಂದು 323 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 21 ಮಂದಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 7 ಮಂದಿ ಐಸಿಯುನಲ್ಲಿದ್ದಾರೆ.

Read More

ತಮಿಳುನಾಡು: ರಾಜ್ಯ  ಮೈಚೌಂಗ್ ಚಂಡಮಾರುತದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಭಾರೀ ಮಳೆಯಿಂದ ಬಹುತೇಕ ಗ್ರಾಮಗಳು ಮುಳುಗಡೆಯ ಜೊತೆಗೆ ಸಾವಿರಾರು ಎಕರೆ ಬೆಳೆಗಳಿಗೆ ಹಾನಿಯುಂಟಾಗಿದೆ. ಭಾರೀ ಮಳೆಗೆ ಹಲವು ಮನೆಗಳು ಕುಸಿದಿದ್ದು, ಕೆಲವು ಪ್ರದೇಶಗಳು ಜಲಾವೃತಗೊಂಡಿವೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಪ್ರವಾಹ ದ ತೀವ್ರತೆ ಕಡಿಮೆಯಾಗಿದ್ದರೂ ಸಹ  ಕೆಸರು ತುಂಬಿ ತೀವ್ರ ತೊಂದರೆಯಾಗುತ್ತಿದೆ. ಇಂತಹ ಸನ್ನಿವೇಶಗಳ ನಡುವೆ ಕೇಂದ್ರ  ಸರ್ಕಾರ ಜನರಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸಿದ್ಧವಾಗಿದ್ದು, ಸ್ವತಹ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಧೈರ್ಯ ಹೇಳಿದ್ದಾರೆ. ಪ್ರವಾಹದ ನಂತರದ ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಈ ಪರಿಸ್ಥಿತಿಯಲ್ಲಿ ರಾಜ್ಯವನ್ನು ಬೆಂಬಲಿಸಲು ಇಂದು ಪಿಎಂಒದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. https://ainlivenews.com/what-do-you-know-about-the-iphone-16-lineup-do-you-know-why-they-put-the-a18-chip/  ಎನ್‌ಡಿಆರ್‌ಎಫ್ ಮತ್ತು ಹೆಲಿಕಾಪ್ಟರ್ ಸೇರಿದಂತೆ ಸಶಸ್ತ್ರ ಪಡೆಗಳ ನಿಯೋಜನೆಯ ಹೆಚ್ಚಿನ ಅಗತ್ಯತೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ವಾರದ ಹಿಂದೆ ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದ್ದರು. ಸದ್ಯ ಪ್ರವಾಹ ಸಂತ್ರಸ್ತರಿಗೆ ಆಹಾರ, ಉತ್ತಮ ನೀರು ಪೂರೈಕೆ ಮಾಡಲಾಗುತ್ತಿದೆ.

Read More

ಬೆಂಗಳೂರು: ಕ್ರಿಸ್‌ಮಸ್ ಹಬ್ಬದ ಅಲಂಕಾರದ ವಿಚಾರಕ್ಕೆ ಮಾಲ್‌ಗೆ ನುಗ್ಗಿ ಗಲಾಟೆ ಮಾಡಿರೋ ಆರೋಪ ಹಿನ್ನೆಲೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್‌ಕುಮಾರ್‌ ಅಲಿಯಾಸ್‌ ಪುನೀತ್‌ ಕೆರೆಹಳ್ಳಿ ಮೇಲೆ ಮತ್ತೊಂದು ಎಫ್‌ಐಆರ್ ದಾಖಲು ಮಾಡಲಾಗಿದೆ. ನಿನ್ನೆ ಏಷ್ಯಾ ಮಾಲ್‌ ಬಳಿ ಹೋಗಿದ್ದ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರು. ಈ ವೇಳೆ ಯಾಕೆ ಕ್ರಿಸ್ಮಸ್ ಟ್ರೀ ಗಳ ಅಲಂಕಾರ ಮಾಡಿದ್ದೀರ ಅಂತಾ ಮಾಲ್‌ ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿರುವ ಪುನೀತ್ ಕೆರೆಹಳ್ಳಿ, https://ainlivenews.com/what-do-you-know-about-the-iphone-16-lineup-do-you-know-why-they-put-the-a18-chip/ ಸಹಚರರು. ಕ್ರಿಸ್‌ಮಸ್‌ ಟ್ರೀ ಅಲಂಕಾರ ಮಾಡಿದ್ದಲ್ಲದೇ 200 ರೂ ಎಂಟ್ರಿ ಫೀಸ್ ಬೇರೆ ಇಟ್ಟಿದ್ದೀರಾ? ಇದಕ್ಕೆ ಕಾನೂನು ಇದ್ಯಾ? ಹಿಂದೂ ಹಬ್ಬಗಳಿಗೆ ನೀವು ಇದೇ ರೀತಿಯ ಅಲಂಕಾರ ಮಾಡ್ತೀರ? 22-01-24 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಇದೆ. ಅವತ್ತೂ ಹೀಗೆ ಅಲಂಕಾರ ಮಾಡಬೇಕು. ಮಾಡದಿದ್ರೆ ಮಾಲ್ ಮುಂದೆ ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಹಿನ್ನೆಲೆ ಎಫ್‌ಐಆರ್ ದಾಖಲು ಮಾಡಲಾಗಿದೆ.

Read More

ಬೆಂಗಳೂರು: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್‌ ಜೊತೆಗಿನ ಸೀಟು ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ಸ್ಪಷ್ಟಪಡಿಸಿದರು. ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಆದ ಬಳಿಕ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ನನಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು. https://ainlivenews.com/what-do-you-know-about-the-iphone-16-lineup-do-you-know-why-they-put-the-a18-chip/  ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಸಂಚಲನ ಸೃಷ್ಟಿಸುವ ಭರವಸೆ ಮೂಡಿಸಿದೆ. ಈ‌ ಭೇಟಿ‌ ಸ್ಫೂರ್ತಿದಾಯಕ ಅಂತ ಕುಮಾರಸ್ವಾಮಿ ತಿಳಿಸಿದರು. ದೇವೇಗೌಡರ ಜತೆಗೂ ಪ್ರಧಾನಿಯವರು ಆತ್ಮೀಯವಾಗಿ ಮಾತಾಡಿದ್ದಾರೆ. ಈ ಸಲ ಲೋಕಸಭೆ ಚುನಾವಣೆಯಲ್ಲಿ ನಾವು ಎಲ್ಲಾ ಸ್ಥಾನಗಳನ್ನೂ ಗೆಲ್ಲುತ್ತೇವೆ ಎಂದು ಹೇಳಿದರು. “ಪ್ರಧಾನಿಯವರ ಜತೆ ಟಿಕೆಟ್ ಹಂಚಿಕೆ ವಿಚಾರವಾಗಿ ಏನೂ ಮಾತಾಡಿಲ್ಲ ಅಂತ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಆದರೆ ಈ ವಿಚಾರದಲ್ಲಿ ಯಾವುದೇ ತಕರಾರು ಇಲ್ಲ. ಸೀಟು ಹಂಚಿಕೆಯಲ್ಲಿ ಒಂದು ಸೀಟ್ ಹೆಚ್ಚು ಕಡಿಮೆ ಆದರೂ ನಡೆಯುತ್ತದೆ ಎಂದಿದ್ದಾರೆ.

Read More

ಚಾಮರಾಜನಗರ: ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ಕೃಷಿ ಇಲಾಖೆಯಿಂದ ಆಯೋಜಿಸಲಾಗಿದ್ದ ರೈತ ದಿನಾಚರಣೆ ಮತ್ತು ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬದ ವಸ್ತು ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಚಾಲನೆ ನೀಡಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬದ ವಸ್ತು ಪ್ರದರ್ಶನದಲ್ಲಿ ಜಿಲ್ಲೆಯ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರು ಸಿರಿಧಾನ್ಯಗಳಿಂದ ತಯಾರಿಸಿದ್ದ ತಿನಿಸುಗಳು ಹಾಗೂ ವಿವಿಧ ಇಲಾಖೆಗಳಿಂದ ತಯಾರಿಸಲಾಗಿದ್ದ ಸಿರಿಧಾನ್ಯಗಳ ಪದಾರ್ಥಗಳ ಪ್ರದರ್ಶನಗೊಂಡು ಮಾರಾಟವಾದವು. https://ainlivenews.com/what-do-you-know-about-the-iphone-16-lineup-do-you-know-why-they-put-the-a18-chip/ ಇದೇ ಸಂದರ್ಭದಲ್ಲಿ ಎಲ್ಲಾ ಮಳಿಗೆಗಳಿಗೆ ತೆರಳಿದ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರು ರೈತರನ್ನು ಪರಿಚಯ ಮಾಡಿಕೊಂಡು ರೈತರು ಸಿರಿಧಾನ್ಯಗಳಿಂದ ತಯಾರಿಸಲಾಗಿದ್ದ ತಿನಿಸುಗಳ ರುಚಿ ಸವಿದು ರೈತರಿಗೆ ಶುಭಕೋರಿದರು.

Read More

ಕಾರವಾರ: ಸಿದ್ದರಾಮಯ್ಯನವರಿಗೆ (Siddaramaiah) ಧಮ್ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ. ಹಿಜಬ್‌ನ ಹಿಂದೆ ತಿರುಗುವ ಈ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ. ಸಿದ್ದರಾಮಯ್ಯನ ಸರ್ಕಾರ ಹುಚ್ಚು ಮಹಮ್ಮದ್‌ನ ಸರ್ಕಾರ ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (Ananth Kumar Hegade) ಕಿಡಿಕಾರಿದ್ದಾರೆ. ಶಿರಸಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರ ವೋಟುಗಳು ಇಲ್ಲದೇ ಕಾಂಗ್ರೆಸ್ ಬದುಕಲು ಸಾಧ್ಯವಿಲ್ಲ. ಯಾವತ್ತೂ ಕಾಂಗ್ರೆಸ್ ಬಹುಸಂಖ್ಯಾತರ ರಾಜಕಾರಣ ಮಾಡಿಲ್ಲ. ಮನಸ್ಸಿಗೆ ಬಂದಂತೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. https://ainlivenews.com/what-do-you-know-about-the-iphone-16-lineup-do-you-know-why-they-put-the-a18-chip/ ಈ ರಾಜ್ಯದ ಜನತೆ ತೆಗೆದಿಟ್ಟ ವ್ಯಕ್ತಿ ಟಿಪ್ಪು. ಈ ರಾಜ್ಯವನ್ನು ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ ತೊಂದರೆಗೀಡು ಮಾಡಿದ ವ್ಯಕ್ತಿ. ಅವನ ಹೆಸರನ್ನೇ ತೆಗದುಕೊಂಡು ಕಾಂಗ್ರೆಸ್ ರಾಜಕಾರಣ ಮಾಡುತ್ತೆ ಎಂದರೇ ಕಾಂಗ್ರೆಸ್‌ಗೆ ಮುಂದಿನ ದಿನ ಜನತೆ ಹೇಗೆ ಉತ್ತರ ಕೊಡುತ್ತಾರೆ ಎಂಬುದನ್ನು ಯೋಚನೆ ಮಾಡಬೇಕು ಎಂದು ತಿಳಿಸಿದ್ದಾರೆ. ಹಿಜಬ್ ವಿಷಯದಲ್ಲಿ ಸಿದ್ದರಾಮಯ್ಯ ಅವರ, ಯಾರು ಬೇಕಾದ್ರು ಏನು ಬೇಕಾದ್ರು ಡ್ರೆಸ್ ಹಾಕಿಕೊಂಡು ಹೋಗಬಹುದು ಎಂಬ ಹೇಳಿಕೆ ಮುಂದಿನ ದಿನ ಆತಂಕಕಾರಿ…

Read More

ಬಿಗ್ ಬಾಸ್ ಮನೆ ಇದೀಗ 77 ದಿನಗಳನ್ನ ಪೂರೈಸಿ ಮುನ್ನುಗ್ಗುತ್ತಿದೆ. ಇದೀಗ ಎಂದಿನಂತೆ ಎಲಿಮಿನೇಷನ್ ಪ್ರಕ್ರಿಯೆ ನಡೆದಿದೆ. ಸುದೀಪ್ (Sudeep) ಅನುಪಸ್ಥಿತಿಯಲ್ಲಿ ಡಬಲ್ ಎಲಿಮಿನೇಷನ್ ನಡೆದಿದ್ದು, ಬಿಗ್ ಬಾಸ್ ಮನೆಯಿಂದ ಅಸ್ಥಿಕ್ ಅವಿನಾಶ್ ಶೆಟ್ಟಿ (Avinash Shetty) ಎಲಿಮಿನೇಟ್ ಆಗಿದ್ದಾರೆ. ದೊಡ್ಮನೆ ಆಟ 50 ದಿನ ಪೂರೈಸಿದ ಸಂದರ್ಭದಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮಂಗಳೂರಿನ ಅವಿನಾಶ್ ಶೆಟ್ಟಿ ಎಂಟ್ರಿ ಕೊಟ್ಟಿದ್ದರು. ಮನೆಗೆ ಎಂಟ್ರಿ ಕೊಟ್ಟಾಗಲೇ ಆನೆ ವಿನಯ್‌ಗೆ ಮಾವುತನಾಗಿ ಪಳಗಿಸುತ್ತೇನೆ ಎಂದು ಅವಿನಾಶ್ ಡೈಲಾಗ್ ಹೊಡೆದಿದ್ದರು. ಇದೀಗ ಆನೆ ವಿನಯ್‌ನ ಪಳಗಿಸೋದ್ರಲ್ಲಿ ಮತ್ತು ಬಿಗ್ ಬಾಸ್ ಮನೆ ಆಟ ಆಡೋದ್ರಲ್ಲಿ ಅವಿನಾಶ್ ಸೋತಿದ್ದಾರೆ. https://ainlivenews.com/what-do-you-know-about-the-iphone-16-lineup-do-you-know-why-they-put-the-a18-chip/ ಕಳೆದ ವಾರ ವೈಲ್ಡ್ ಕಾರ್ಡ್ ಎಂಟ್ರಿ ಪವಿ ಪೂವಪ್ಪ ಎಲಿಮಿನೇಟ್ ಆಗಿದ್ದರು. ಇದೀಗ ಈ ವಾರ ಅವಿನಾಶ್‌ಗೆ ದೊಡ್ಮನೆ ಆಟ ಅಂತ್ಯವಾಗಿದೆ. ಡಬಲ್ ಎಲಿಮಿನೇಷನ್‌ನ (Elimination) ಮೊದಲ ಸ್ಪರ್ಧಿ ಅವಿನಾಶ್ ಎಂದು ತಿಳಿದು ಬಂದಿದ್ದು, ಮತ್ತೊಬ್ಬ ಸ್ಪರ್ಧಿ ಯಾರು ರಿವೀಲ್ ಆಗಿಲ್ಲ.  ಬಿಗ್ ಬಾಸ್…

Read More

ಬೆಂಗಳೂರು: ಹಿಜಬ್‌ (Hijab) ವಿಚಾರದಲ್ಲಿ ಕಾನೂನು ಪರಿಶೀಲಿಸಿಯೇ ಕ್ರಮ ತಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್‌ (Parameshwar) ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸರ್ಕಾರದ ನಿಲುವನ್ನು ತಿಳಿಸಿದ್ದಾರೆ.  ಹಾಗಾಗಿ ಎಲ್ಲರಿಗೂ ಈಗ ಗೊತ್ತಾಗಿದೆ. ಪ್ರತಿಯೊಬ್ಬ ಪ್ರಜೆಗೂ ತಾನು ಏನು ಸೇವಿಸಬೇಕು ತಾನು ಏನು ಧರಿಸಬೇಕು ಎನ್ನುವುದು ಅವರವರಿಗೆ ಬಿಟ್ಟಿದ್ದು. ಈ ಹಕ್ಕು ಸಂವಿಧಾನದಲ್ಲೇ (Constitution) ಇದೆ. ಇದು ಅವರ ಮೂಲಭೂತ ಹಕ್ಕು. ಹಾಗಾಗಿ ಮುಖ್ಯಮಂತ್ರಿಗಳು ಆ ಅರ್ಥದಲ್ಲಿ ಹೇಳಿದ್ದಾರೆ ಎಂದರು. ಬಿಜೆಪಿಯವರು ಅದನ್ನೇ ಮೂಲವಾಗಿ ಇಟ್ಟುಕೊಂಡು ದೊಡ್ಡ ಪ್ರಮಾಣದಲ್ಲಿ ಬಿಂಬಿಸುತ್ತಿದ್ದಾರೆ. ಅದರ ಅವಶ್ಯಕತೆ ಇಲ್ಲ ಎಂಬುದು ನನ್ನ ಭಾವನೆ. https://ainlivenews.com/what-do-you-know-about-the-iphone-16-lineup-do-you-know-why-they-put-the-a18-chip/ ಕಾನೂನನ್ನು ಪರಿಶೀಲನೆ ಮಾಡಿಯೇ ಮಾಡುತ್ತೇವೆ. ಕಾನೂನನ್ನ ಬಿಟ್ಟು ಮಾಡುವುದಕ್ಕೆ ಹೋಗುವುದಿಲ್ಲ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸಲು ಸರ್ಕಾರ ಸಮರ್ಥವಾಗಿದೆ ಎಂದು ಹೇಳಿದರು. ನಾವು ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿದ್ದೇವೆ. ಎಲ್ಲಾ ಕಡೆ ಶಾಂತಿ ಇರಬೇಕು ಅಂತ ಹೇಳಿದ್ದೇವೆ ಅದನ್ನು ಮಾಡುತ್ತೇವೆ. ಸಮಾಜದಲ್ಲಿ ಅನೇಕ…

Read More

ಧಾರವಾಡ: ಧಾರವಾಡ ಜಿಲ್ಲಾಡಳಿತದಿಂದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲೆಯ ವಿವಿಧ ಸ್ಥಳಗಳಿಂದ ಆಗಮಿಸಿದ್ದ ಸಾರ್ವಜನಿಕರು ಸಚಿವರಿಗೆ ಸುಮಾರು 177 ಅಹವಾಲುಗಳನ್ನು ಸಲ್ಲಿಸಿದರು. ಹೆಸ್ಕಾಂ 07, ಉದ್ಯೋಗ ಇಲಾಖೆ 03, ಸಹಕಾರಿ ಇಲಾಖೆ 03, ಸಾರಿಗೆ ಇಲಾಖೆ 03, ವಸತಿ ಇಲಾಖೆ 07, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ 10, ಕಾರ್ಮಿಕ ಇಲಾಖೆ 05, ಶಾಲಾ ಶಿಕ್ಷಣ ಇಲಾಖೆ 10, ಲೋಕೋಪಯೋಗಿ ಇಲಾಖೆ 02, ಸಮಾಜ ಕಲ್ಯಾಣ ಇಲಾಖೆ 03, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 03, ಪೌರಾಡಳಿತ ಮತ್ತು ನಗರಾಭಿವೃದ್ಧಿ ಇಲಾಖೆ 04, ಆರೋಗ್ಯ ಇಲಾಖೆ 03, ಕ್ರೀಡಾ ಇಲಾಖೆ 03, ಅಲ್ಪಸಂಖ್ಯಾತರ ಇಲಾಖೆ 01, ಗೃಹ ಇಲಾಖೆ 03, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ 02, ಕನ್ನಡ ಮತ್ತು ಸಂಸ್ಕೃತಿ ಇಲಾಖೆ 03, ಮಹಾನಗರಪಾಲಿಕೆ 44, ನೋಂದಣಿ ಇಲಾಖೆ 01, ಕಂದಾಯ…

Read More