Author: AIN Author

ಚಿಕ್ಕಮಗಳೂರು: ವಿದ್ಯಾರ್ಥಿಗಳ ಮನಸ್ಸಿನಲ್ಲಿ ಏಕತೆ ಬೆಳೆಯಲಿ ಎಂಬ ಕಾರಣಕ್ಕೆ ಶಾಲೆಗಳಲ್ಲಿ ಮಾತ್ರ ಸಮವಸ್ತ್ರ ಕಡ್ಡಾಯಗೊಳಿಸಿ ಹಿಜಬ್‌ (Hijab) ನಿಷೇಧಿಸಲಾಗಿತ್ತು. ಆದ್ರೆ ಸಾರ್ವಜನಿಕ ಸ್ಥಳಗಳಲ್ಲಿ ಹಿಜಬ್‌ಗೆ ನಿಷೇಧ ಹೇರಿರಲಿಲ್ಲ ಎಂದು ಮಾಜಿ ಸಚಿವ ಸಿ.ಟಿ ರವಿ (CT Ravi)  ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಜಬ್ ನಿಷೇಧ ಮಾಡಿರಲಿಲ್ಲ. ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಲಾಗಿತ್ತು. ಸಿದ್ದರಾಮಯ್ಯ (Siddaramaiah) ಸಮವಸ್ತ್ರಕ್ಕೆ ಹಿಜಬ್ ಜೋಡಿಸುತ್ತಾರೋ ಅಥವಾ ಸಮವಸ್ತ್ರ ಕಡ್ಡಾಯ ಅನ್ನೋದನ್ನೇ ತೆಗೆಯುತ್ತಾರೋ ಗೊತ್ತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಹಿಜಬ್ ನಿಷೇಧ ಆಗಿರಲಿಲ್ಲ. ಕೇವಲ ಶಾಲೆ-ಕಾಲೇಜುಗಳಲ್ಲಿ 1964 ಶಿಕ್ಷಣ ಕಾಯ್ದೆ ಪ್ರಕಾರ ಯೂನಿಫಾರಂ ಕಡ್ಡಾಯ ಮಾಡಲಾಗಿತ್ತು ಎಂದು ಹೇಳಿದ್ದಾರೆ. ಕಾಲೇಜು ಆಡಳಿತ ಮಂಡಳಿ ತೀರ್ಮಾನಿಸುವ ಸಮವಸ್ತ್ರ ಪಾಲಿಸಬೇಕು ಅಂತ ನಿಯಮವಿತ್ತು. ಆದ್ರೆ ಈಗ ಮುಖ್ಯಮಂತ್ರಿಗಳು ಎಲ್ಲಾ ಯೂನಿಫಾರಂಗೂ ಹಿಜಬ್ ಕಡ್ಡಾಯ ಮಾಡಲು ಹೊರಟಿದ್ದಾರೋ ಅಥವಾ ಅವರಿಷ್ಟದಂತೆ ಮಾಡಲು ಹೊರಟಿದ್ದಾರೋ ಎಂಬುದನ್ನು ಸ್ಪಷ್ಟಪಡಿಸಬೇಕು. ಮಕ್ಕಳಿಗೆ ಯೂನಿಫಾರಂ ಕಡ್ಡಾಯಗೊಳಿಸಿದ್ದು, ಬಡವ ಬಲ್ಲಿದ ಅಂತ ಭೇದ ಇರಬಾರದು, ಜಾತಿಯ ತಾರತಮ್ಯ ಇರಬಾರದು, ನಾವೆಲ್ಲರೂ…

Read More

ಕಲಬುರಗಿ: ಕಾಂಗ್ರೆಸ್ ಮುಖಂಡನ ಪುತ್ರ ಭೀಕರವಾಗಿ ಕೊಲೆಯಾಗಿರೋ ಘಟನೆ ಕಲಬುರಗಿಯಲ್ಲಿ ನಡೆದಿದೆ. ಅಳಂದ ಪಟ್ಟಣದ ಹೊರವಲಯದಲ್ಲಿ ಘಟನೆ ನಡೆದಿದ್ದು ಕೈ ಲೀಡರ್ ಬಸವರಾಜ್ ಚೌಲೆಯ ಪುತ್ರ ಚಂದ್ರಶೇಖರ್ ಕೊಲೆಯಾದ ದುರ್ದೈವಿಯಾಗಿದ್ದಾನೆ. https://ainlivenews.com/hijab-ban-back-siddaramaiahs-statement-sparks-page/ KMF ಅಧ್ಯಕ್ಷ ಆರ್ ಕೆ ಪಾಟೀಲ್ PA ಆಗಿರುವ ಬಸವರಾಜ ಕಾಂಗ್ರೆಸ್ ಪಕ್ಷದಲ್ಲಿ ಅತ್ಯಂತ ಪ್ರಭಾವಿ ಎನ್ನಲಾಗಿದೆ.ಕೊಲೆಯಾದ ಚಂದ್ರಶೇಖರ್ ಗೆಳೆಯ ಮಿಲನ್ ಕೊಲೆ ಮಾಡಿರೋ ಶಂಕೆ ಹಿನ್ನಲೆ ಆರೋಪಿಯನ್ನ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಎಣ್ಣೆ ಪಾರ್ಟಿ ಮಾಡಲು ಗೆಳೆಯರಿಬ್ಬರು ಸೇರಿದ್ದಾರೆ.ಈ ವೇಳೆ ಮಾತಿಗೆ ಮಾತು ಬೆಳೆದು ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಅಂತ ಹೇಳಲಾಗ್ತಿದೆ..

Read More

ಕಲಬುರಗಿ: ಶಾಸಕ ಬಿ.ಆರ್ ಪಾಟೀಲ್ (BR Patil) ಆಪ್ತರೂ ಆಗಿರುವ ಕಾಂಗ್ರೆಸ್‌ ಮುಖಂಡ (Congress Leader) ಬಸವರಾಜ್ ಚೌಲ್ ಪುತ್ರನನ್ನು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಆಳಂದ (Aland) ಪಟ್ಟಣದ ಹೊರವಲಯದ ಜಿಡಗಾ ರಸ್ತೆಯಲ್ಲಿ ಘಟನೆ ನಡೆದಿದ್ದು, ಕಾಂಗ್ರೆಸ್ ಮುಖಂಡನ ಪುತ್ರ ಚಂದ್ರಶೇಖರ್ ಚೌಲ್ (21) ಹತ್ಯೆಗೀಡಾಗಿದ್ದಾನೆ. ಚಂದ್ರಶೇಖರ್ ಚೌಲ್ ಸ್ನೇಹಿತರಿಂದಲೇ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ಸಾವಿಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಆಳಂದ ಪಟ್ಟಣದ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ

Read More

ಬೆಳಗಾವಿ : ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ನಿಗಿನಿಗಿ ಕೆಂಡವಾಗಿದ್ದಾರೆ. ಇನ್ನೂ ಈ ಬಗ್ಗೆ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ಅಸಮಾಧಾನ ಹೊರಹಾಕಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಸಿದ್ದರಾಮಯ್ಯ ರಾಜ್ಯದ ಎಲ್ಲರ ಮುಖ್ಯಮಂತ್ರಿ ಆಗಿದ್ದಾರೆಯೇ ಹೊರತು ಯಾವುದೇ ಒಂದು ಪಂಗಡದ ಮುಖ್ಯಮಂತ್ರಿ ಅಲ್ಲ’ ಎಂದು ತಿಳಿಸಿದ್ದಾರೆ. ‘ಒಬ್ಬರಿಗೆ ಒಂದು ಕಾನೂನು, ಇನ್ನೊಬ್ಬರಿಗೆ ಒಂದು ಕಾನೂನು ಮಾಡುವುದರಿಂದ ಸಮಾಜದಲ್ಲಿ ದೊಡ್ಡ ಕ್ಷೋಭೆ ಉಂಟು ಮಾಡಬಹುದು. ಕಾನೂನು ಮಾಡಲಿ. ಆದರೆ, ಅದು ಸಮಾಜದಲ್ಲಿ ಒಂದು ಪಂಗಡವನ್ನು ಮಾತ್ರ ಗುರಿಯಾಗಿರಿಸಿಕೊಂಡು ಮಾಡುವುದು ಸರಿಯಲ್ಲ’ ಎಂದು ಹೇಳಿದ್ದಾರೆ.

Read More

ಈ ಹಿಂದೆ ‘ಮಂಡ್ಯದ ಹುಡುಗರು’, ‘ಗರ್ನಲ್’ ಚಿತ್ರಗಳನ್ನು ನಿರ್ದೇಶಿಸಿದ್ದ ಜೆ‌.ಜೆ.ಶ್ರೀನಿವಾಸ್  (Srinivas)ನಿರ್ದೇಶಿಸಿ ಹಾಗೂ ನಿರ್ಮಾಣವನ್ನು ಮಾಡುತ್ತಿರುವ ‘ಡಿಟೆಕ್ಟಿವ್‌ ಗಜವದನ’ (Detective Gajavadana)ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಇಟ್ಟಮಡುವಿನ ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಕನ್ನಡ ಚಿತ್ರರಂಗದ ಸಾಕಷ್ಟು ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳಿಂದ ಕಲಾವಿದನಾಗಿ ಸಕ್ರಿಯರಾಗಿರುವ ಬಸು ಕುಮಾರ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು. ಇದು ನನ್ನ ನಿರ್ದೇಶನದ ಮೂರನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಜೆ‌.ಜೆ ಶ್ರೀನಿವಾಸ್, ಡಿಟೆಕ್ಟಿವ್‌ ಗಜವದನ ಚಿತ್ರದ ಚಿತ್ರೀಕರಣ ಇಂದಿನಿಂದ ಆರಂಭವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ  ಬೆಂಗಳೂರಿನಲ್ಲೇ ಹೆಚ್ಚು ಚಿತ್ರೀಕರಣ ನಡೆಯಲಿದೆ. ಕುಟುಂಬ ಸಮೇತ ನೋಡಬಹುದಾದ ಚಿತ್ರ ಇದಾಗಿದೆ. ಉತ್ತಮ ತಂತ್ರಜ್ಞರ ಹಾಗೂ ಕಲಾವಿದರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬರುವ ಭರವಸೆಯಿದೆ ಎಂದರು. ನಾನು ಡಿಟೆಕ್ಟಿವ್‌ ಗಜವದನ ಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ‌.  ನಾನು ಚಿತ್ರದಲ್ಲಿ ಡಿಟೆಕ್ಟಿವ್‌ಆಗಿರುವುದಿಲ್ಲ. ನನ್ನ ಕುಟುಂಬ…

Read More

ಬಿಗ್ ಬಾಸ್ ಮನೆಯ (Bigg Boss Kannada 10) ಆಟ 76 ದಿನಗಳನ್ನ ಪೂರೈಸಿ ಮುನ್ನುಗ್ಗುತ್ತಿದೆ. ಹೀಗಿರುವಾಗ ದೊಡ್ಮನೆಯಲ್ಲಿ ‘ಚಾರ್ಲಿ’ ಸುಂದರಿ ಸಂಗೀತಾ ಶೃಂಗೇರಿ (Sangeetha Sringeri) ಕೂಡ ಸಹ ಸ್ಪರ್ಧಿಗಳಿಗೆ ಪೈಪೋಟಿ ನೀಡುತ್ತಿದ್ದಾರೆ. ಇನ್ನೂ ಕೆಲ ಕಿಡಿಗೇಡಿಗಳು ಸಂಗೀತಾ ಅಭಿಮಾನಿಗಳು ಎನ್ನುವ ಸೋಗಿನಲ್ಲಿ ಬೇರೇ ಸ್ಪರ್ಧಿಗಳ ಹೆಸರನ್ನ ಟಾರ್ಗೆಟ್ ಮಾಡಿ ಅಪಪ್ರಚಾರ ಮಾಡುತ್ತಿರೋದು ನಟಿಯ ಕುಟುಂಬದ ಗಮನಕ್ಕೆ ಬಂದಿದೆ. ಸಂಗೀತಾ ಅತ್ತಿಗೆ ಸುಚಿತ್ರಾ ಅವರು ಈ ಬಗ್ಗೆ ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ. ಇದೀಗ ಸಂಗೀತಾ ಅತ್ತಿಗೆ ಸುಚಿತ್ರಾ, ಕೆಲವರು ಫೇಕ್ ಅಕೌಂಟ್ ಸೃಷ್ಟಿ ಮಾಡಿ, ಪ್ರತಿಸ್ಪರ್ಧಿಗಳ ಮೇಲೆ ಆರೋಪ ಮಾಡುತ್ತಿದ್ದಾರಂತೆ. ಪ್ರಸ್ತುತ ‘ಬಿಗ್ ಬಾಸ್’ ಸಂಗೀತಾ ಕುಟುಂಬದವರು ಈ ವಿಷಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಧ್ವನಿಯೆತ್ತಿದ್ದಾರೆ.‌ ಸಂಗೀತಾಳ ಅಭಿಮಾನಿಗಳು ಎನ್ನುವ ಸೋಗಿನಲ್ಲಿ ಅವಳ ಹೆಸರಿನಲ್ಲಿ ಫೇಕ್ ಅಕೌಂಟ್ಸ್ ಸೃಷ್ಟಿ ಮಾಡಿ, ಅನ್ಯ ಸ್ಪರ್ಧಿಗಳ ಮೇಲೆ ಸುಳ್ಳು ಪ್ರಚಾರಗಳನ್ನು ಮಾಡುತ್ತ, ಸಂಗೀತಾತಾ ಹೆಸರನ್ನು ಎಳೆಯುತ್ತಾ ಸುಮ್ಮ ಸುಮ್ಮನೆ ನಿಮ್ಮ ಕಪಿ…

Read More

ಡಿಬಾಸ್ ದರ್ಶನ್ (Darshan) ನಟನೆಯ ‘ಕಾಟೇರ’ (Katera) ಸಿನಿಮಾದ ಸಾಂಗ್ ರಿಲೀಸ್ ಆಗಿದೆ. ಮಂಡ್ಯದ ಜನತೆಯ ಎದುರು ‘ಕಾಟೇರ’ ಥೀಮ್ ಸಾಂಗ್ ಅನ್ನು ಸುಮಲತಾ ಅಂಬರೀಶ್ ರಿಲೀಸ್ ಮಾಡಿದ್ದಾರೆ ನೆತ್ತರಲ್ಲಿ ನೆಂದ ಭೂಮಿ ಎಂದು ಶುರುವಾಗುವ ಸಾಂಗ್ ಸಖತ್ ಥ್ರಿಲ್ಲಿಂಗ್ ಆಗಿ ಮೂಡಿ ಬಂದಿದೆ. ನನ್ನ ಮಣ್ಣು, ನನ್ನ ಹಕ್ಕು ಮೊದಲಾದ ರೈತರ ಭಾವನೆಗಳನ್ನ ಈ ಹಾಡು ಒಳಗೊಂಡಿದೆ. ವಿಶೇಷ ಅಂದರೆ, ರೈತರ ದಿನದಂದೇ ಈ ಹಾಡನ್ನ ರಿಲೀಸ್ ಮಾಡಲಾಗಿದೆ. ನನ್ನ ಮಣ್ಣು, ನನ್ನ ಹಕ್ಕು ಹಾಡಿಗೆ ಪುನೀತ್ ಆರ್ಯ ಸಾಹಿತ್ಯ ಬರೆದಿದ್ದಾರೆ. ವಿ ಹರಿಕೃಷ ‘ಕಾಟೇರ’ ಹಾಡುಗಳನ್ನ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕಾಟೇರ’ ಚಿತ್ರದ ಎಲ್ಲಾ ಹಾಡುಗಳು ಸೂಪರ್ ಡೂಪರ್ ಹಿಟ್ ಆಗಿದೆ. ಮಂಡ್ಯದಲ್ಲಿ ಅದ್ದೂರಿಯಾಗಿ ಇಂದು (ಡಿ.23) ಸಾಂಗ್ ರಿಲೀಸ್ ಕಾರ್ಯಕ್ರಮ ನಡೆದಿದೆ. ದರ್ಶನ್ & ಟೀಮ್‌ಗೆ ನಟಿ ಸುಮಲತಾ ಕೂಡ ಸಾಥ್ ನೀಡಿದ್ದಾರೆ. ದರ್ಶನ್‌ಗೆ ನಾಯಕಿಯಾಗಿ ಮಾಲಾಶ್ರೀ ಪುತ್ರಿ ಆರಾಧನಾ ರಾಮ್ ನಟಿಸಿದ್ದಾರೆ. ರಾಕ್‌ಲೈನ್ ವೆಂಕಟೇಶ್ ಸಿನಿಮಾಗೆ…

Read More

ದೆಹಲಿ: ಹಿಂದೂ ಮಹಾಸಾಗರದಲ್ಲಿ (Indian Ocean) ಇಸ್ರೇಲ್-ಸಂಯೋಜಿತ ವ್ಯಾಪಾರಿ ಹಡಗಿನ ಮೇಲೆ ಡ್ರೋಣ್‌ ಬಳಸಿ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ಇದು ಜಲಮೂಲದ ಮೂಲಕ ಹಾದುಹೋಗುವ ಎಲ್ಲಾ ವಾಣಿಜ್ಯ ಹಡಗುಗಳಿಗೆ ಎಚ್ಚರಿಕೆ ನೀಡಲಾಗಿದೆ. ಭಾರತದ ವೆರ್ವಾಲ್‌ನ ನೈಋತ್ಯ ದಿಕ್ಕಿನಲ್ಲಿ ಸುಮಾರು 200 ಕಿಮೀ ದೂರದಲ್ಲಿ ಮಾನವರಹಿತ ವೈಮಾನಿಕ ವಾಹನ ಬಳಸಿ ವ್ಯಾಪಾರಿ ಹಡಗನ್ನು ಗುರಿಯಾಗಿರಿಸಿಕೊಂಡಿದೆ ಎಂದು ಬ್ರಿಟಿಷ್ ಕಡಲ ಭದ್ರತಾ ಸಂಸ್ಥೆ ಆಂಬ್ರೆ ಹೇಳಿದ್ದಾರೆ. ದಾಳಿಯಿಂದ ಹಡಗಿಗೆ ಹಾನಿಯಾಗಿದೆ. ಹಡಗು ಇಸ್ರೇಲ್-ಸಂಯೋಜಿತವಾಗಿತ್ತು. ಭಾರತದ ಕರಾವಳಿಯಲ್ಲಿ ಹಕ್ಕು ಪಡೆಯದ ದಾಳಿಯು ಹಡಗಿನಲ್ಲಿ ಬೆಂಕಿಯನ್ನು ಉಂಟುಮಾಡಿತು. ಆದರೆ ಯಾವುದೇ ಪ್ರಾಣಹಾನಿ ಉಂಟಾಗಿಲ್ಲ. ದಾಳಿಗೊಳಗಾದ ನೌಕೆಯನ್ನು ಎಂವಿ ಕೆಮ್ ಪ್ಲುಟೊ ಎಂದು ಗುರುತಿಸಲಾಗಿದೆ. ಇದು ಕಚ್ಚಾ ತೈಲವನ್ನು ಹೊತ್ತೊಯ್ದು ಸೌದಿ ಅರೇಬಿಯಾದ ಬಂದರಿನಿಂದ ಹೊರಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More

ಅಯೋಧ್ಯೆ: ರಾಮನ ಭಕ್ತರನ್ನು ಖುಷಿ ಪಡಿಸಲು ತನ್ನ ಕೈಯಲ್ಲಿ ಏನೆಲ್ಲಾ ಸಾಧ್ಯವೋ ಅದೆಲ್ಲವನ್ನೂ ಕೇಂದ್ರ ಸರ್ಕಾರ ಮಾಡುತ್ತಿದೆ. ರಾಮಮಂದಿರ (Ayodhya Ram Mandir) ಉದ್ಘಾಟನೆ ಹಿನ್ನೆಲೆಯಲ್ಲಿ ರೈಲ್ವೇ ಇಲಾಖೆ ವಿಶೇಷ ಅಮೃತ ಭಾರತ ರೈಲು ಓಡಿಸಲು ನಿರ್ಧರಿಸಿದೆ. ಇದರ ಜೊತೆಗೆ ಅಯೋಧ್ಯೆಗೆ ವಂದೇ ಭಾರತ್ (Vande Bharat) ರೈಲು ಕೂಡಾ ಓಡಾಟ ನಡೆಸಲಿದೆ. ಇನ್ನೂ ವಿಶೇಷ ಎಂದರೆ ಶ್ರೀರಾಮ ದೇವರ ಪತ್ನಿ ಸೀತಾಮಾತೆಯ ಊರಿನ ಮೂಲಕ ಅಯೋಧ್ಯೆಗೆ ಈ ರೈಲು ಓಡಲಿದೆ. ರಾಮ ಮಂದಿರ ಉದ್ಘಾಟನೆಗೂ ಮುನ್ನವೇ ಈ ವಿಶೇಷ ಅಮೃತ ಭಾರತ ರೈಲಿನ ಸಂಚಾರ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಈ ರೈಲು ಶ್ರೀರಾಮ ಜನ್ಮಸ್ಥಾನ ಅಯೋಧ್ಯೆಯಿಂದ ಸೀತಾಮರ್ಹಿ (ಸೀತಾ ಮಾತೆಯ ಜನ್ಮಸ್ಥಳ) ಮೂಲಕ ದರ್ಭಂಗಾ ತಲುಪಲಿದೆ. ನಾನ್ ಎಸಿ ಹಾಗೂ ಸ್ಲೀಪರ್ ಕ್ಲಾಸ್ ಸೀಟುಗಳ ಸೇವೆ ಈ ರೈಲಿನಲ್ಲಿರಲಿದೆ. ಡಿಸೆಂಬರ್ 30 ರಂದು ಈ ಅಮೃತಭಾರತ್ ರೈಲಿನ ಜೊತೆ ವಂದೇಭಾರತ್ ರೈಲಿಗೆ ಕೂಡಾ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಉತ್ತರ…

Read More

ಗಾಂಧಿನಗರ: ಗುಜರಾತ್‌ನಲ್ಲಿ ಮದ್ಯ ಸೇವನೆ ಮತ್ತು ಮಾರಾಟಕ್ಕೆ ಅಲ್ಲಿನ ಸರ್ಕಾರ ಅವಕಾಶ ಕಲ್ಪಿಸಿದೆ. ಗುಜರಾತ್ ಸರ್ಕಾರವು ಗುಜರಾತ್ ಇಂಟರ್‌ನ್ಯಾಷನಲ್ ಫೈನಾನ್ಸ್ ಟೆಕ್-ಸಿಟಿ (GIFT City) ನಲ್ಲಿ ವೈನ್ ಮತ್ತು ಡೈನ್ (Wine and Dine) ನೀಡುವ ಹೋಟೆಲ್‌, ರೆಸ್ಟೋರೆಂಟ್ಸ್‌ ಹಾಗೂ ಕ್ಲಬ್‌ಗಳಲ್ಲಿ ಮದ್ಯ ಸೇವನೆಗೆ ಅನುಮತಿ ನೀಡಿದೆ. ರಾಜಧಾನಿ ಗಾಂಧಿನಗರದ ಸಂಪೂರ್ಣ ಗಿಫ್ಟ್ ಸಿಟಿಯಲ್ಲಿ ಕೆಲಸ ಮಾಡುವ ಎಲ್ಲಾ ಉದ್ಯೋಗಿಗಳು ಹಾಗೂ ಮಾಲೀಕರಿಗೆ ಮದ್ಯ ಸೇವನೆ ಪರವಾನಗಿಯನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ ಇದಲ್ಲದೇ, ಪ್ರತಿ ಕಂಪನಿಯ ಅಧಿಕೃತ ಸಂದರ್ಶಕರು ಆ ಕಂಪನಿಯ ಕಾಯಂ ಉದ್ಯೋಗಿಗಳ ಉಪಸ್ಥಿತಿಯಲ್ಲಿ ತಾತ್ಕಾಲಿಕ ಪರವಾನಗಿ ಹೊಂದಿರುವ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕ್ಲಬ್‌ಗಳಲ್ಲಿ ಮದ್ಯ ಸೇವಿಸಲು ಅವಕಾಶ ಕಲ್ಪಿಸಲಾಗಿದೆ ಗಿಫ್ಟ್ ಸಿಟಿಯಲ್ಲಿರುವ ಅಥವಾ ಬರುವ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಅಥವಾ ಕ್ಲಬ್‌ಗಳು ಅಲ್ಲಿ ವೈನ್ ಮತ್ತು ಡೈನ್ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಗಿಫ್ಟ್ ಸಿಟಿಯಲ್ಲಿ ಅಧಿಕೃತವಾಗಿ ಸೇವೆ ಸಲ್ಲಿಸುತ್ತಿರುವ ಉದ್ಯೋಗಿಗಳು ಮತ್ತು ಅಧಿಕೃತವಾಗಿ ಭೇಟಿ ನೀಡುವ ಸಂದರ್ಶಕರು ಹೋಟೆಲ್‌ಗಳು, ಕ್ಲಬ್‌, ರೆಸ್ಟೋರೆಂಟ್‌ಗಳಲ್ಲಿ…

Read More