Author: AIN Author

ಚಾಮರಾಜನಗರ:- ದಂಗೆ, ಗಲಭೆ ಮಾಡುವವರು ಬಿಜೆಪಿ ವರೆತೂ ಕಾಂಗ್ರೆಸ್ ಅಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ದಂಗೆ ಆಗಲಿ ಎನ್ನುವವರೇ ಬಿಜೆಪಿಯವರು, ಕೋಮು ಗಲಭೆ ಬಯಸುವವರು ಬಿಜೆಪಿಯವರು, ಇಬ್ಬರು-ಮೂರು ಜನ ಸತ್ತರೆ ರಾಜಕೀಯ ಲಾಭ ಸಿಗಲಿದೆ ಎಂದು ಯೋಚಿಸುವವರೇ ಬಿಜೆಪಿಯವರು, ಇದೇ ಬಿಜೆಪಿಯವರ ಸ್ರ್ಟಾಟಜಿ ಎಂದು ಹಿಜಾಬ್ ವಿಚಾರದಲ್ಲಿ ದಂಗೆ ಆಗಲಿದೆ ಎಂಬ ಈಶ್ವರಪ್ಪ ಹೇಳಿಕೆಗೆ ತಿರುಗೇಟು ಕೊಟ್ಟರು. ಹಿಜಾಬ್ ನಿಷೇಧದ ಆದೇಶ ಹಿಂಪಡೆಯುವದರ ಬಗ್ಗೆ ಅವರು ಮಾತನಾಡಿ,ಇದು ಜಾತ್ಯಾತೀತ ರಾಷ್ಟ್ರ ಎಲ್ರಿಗೂ ಗೌರವದಿಂದ ಕರೆದು ಕೊಂಡು ಹೋಗುವ ಅವಕಾಶ ಮಾಡಿ ಕೊಡಬೇಕು, ವಾತಾವರಣವನ್ನ ಹಾಳು ಮಾಡುವುದಕ್ಕೆ ಚಕ್ರವರ್ತಿ ಸೂಲಿಬೆಲೆ ಅಂತ ವ್ಯಕ್ತಿಗಳಿದ್ದಾರೆ, ಇಷ್ಟು ವರ್ಷ ಇಲ್ದೆ ಇರೋ ವಿಚಾರಗಳು ಈಗ ಯಾಕೆ ತಲೆ ಎತ್ತುತ್ತಿವೆ, ಈ ವಿಚಾರವನ್ನ ಬೆಳೆಸಲು ಹೋದ್ರೆ ಅವರಿಗೂ ಕೂಡ ಒಳ್ಳೆದಾಗಲ್ಲ ಎಂದು ಕಿಡಿಕಾರಿದರು. ಇದೇ ವೇಳೆ, ಚಾಮರಾಜನಗರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾತನಾಡಿ, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ 8 ಮಂದಿ…

Read More

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಅಶ್ವತ್ ನಗರದಲ್ಲಿ ಮಗು ಜತೆಗೆ ಸ್ನಾನಕ್ಕೆ ಹೋದಾಗ ಗೀಸರ್‌ ಲೀಕ್‌ ಆಗಿ ಪ್ರಜ್ಞೆ ತಪ್ಪಿ ಬಾತ್‌ರೂಮ್‌ನಲ್ಲೇ ಗರ್ಭಿಣಿಯೊಬ್ಬರು ಮೃತಪಟ್ಟಿರುವ ಘಟನೆ ಜರುಗಿದೆ. 23 ವರ್ಷದ ರಮ್ಯ ಮೃತ ದುರ್ದೈವಿ. ರಮ್ಯ ತಮ್ಮ ನಾಲ್ಕು ವರ್ಷದ ಮಗುವಿನೊಟ್ಟಿಗೆ ಸ್ನಾನ ಮಾಡಲು ಹೋಗಿದ್ದಾರೆ. ಆದರೆ ಈ ವೇಳೆ ಗ್ಯಾಸ್ ಗೀಸರ್‌ನಿಂದ ವಿಷ ಅನಿಲ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿದೆ. ಆದರೆ ಇದು ತಿಳಿಯದೆ ಸ್ನಾನ ಮಾಡಲು ಬಾತ್‌ ರೂಮ್‌ಗೆ ಹೋಗಿದ್ದಾರೆ. ಗೀಸರ್‌ ಸೋರಿಕೆಯಾದ ಕಾರಣ ಸ್ನಾನ ಮಾಡುತ್ತಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಕೂಡಲೇ ಕುಟುಂಬಸ್ಥರು ರಮ್ಯಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗರ್ಭಿಣಿಯಾಗಿದ್ದ ರಮ್ಯರ ಮಗುವೂ ಪ್ರಪಂಚ ನೋಡುವ ಮುನ್ನವೇ ಗರ್ಭದಲ್ಲೇ ಮೃತಪಟ್ಟಿದೆ. ಇತ್ತ ರಮ್ಯರ ನಾಲ್ಕು ವರ್ಷದ ಮಗುವಿಗೂ ಚಿಕಿತ್ಸೆ ಮುಂದುವರಿದಿದೆ. ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Read More

ಹೊಂಬಾಳೆ ಫಿಲಂಸ್‍ ನಿರ್ಮಾಣದ ಪ್ಯಾನ್‍ ಇಂಡಿಯಾ ಚಿತ್ರ ‘ಸಲಾರ್’, ಶುಕ್ರವಾರ ಜಗತ್ತಿನಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿದೆ. ಚಿತ್ರವು ಮೊದಲ ದಿನವೇ 178.7 ಕೋಟಿ ರೂ ಸಂಪಾದಿಸುವ ಮೂಲಕ ಭಾರತೀಯ ಚಿತ್ರರಂಗದಲ್ಲಿ, ಮೊದಲ ದಿನ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಹೊಸ ದಾಖಲೆಯನ್ನು ಮಾಡಿದೆ. ಕನ್ನಡದ ನಿರ್ಮಾಣದ ಸಂಸ್ಥೆಯೊಂದು ರಾಷ್ಟ್ರೀಯ ಮಟ್ಟದಲ್ಲಿ ಇಂಥದ್ದೊಂದು ದಾಖಲೆ ಮಾಡಿರುವುದು ಕನ್ನಡ ಚಿತ್ರರಂಗಕ್ಕೆ ಮತ್ತು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ. ಕನ್ನಡದಲ್ಲಿ ‘ಮಾಸ್ಟರ್ ಪೀಸ್‍’, ‘ರಾಜಕುಮಾರ’, ‘ಯುವರತ್ನ’, ‘ಕೆಜಿಎಫ್‍ 1 ಮತ್ತು 2’, ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್’ ಮುಂತಾದ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲಂಸ್, ತನ್ನ ನಿರ್ಮಾಣದ ಚಿತ್ರಗಳ ಮೂಲಕ ಜಗತ್ತಿನ ಗಮನ ಸೆಳೆದಿರುವುದಷ್ಟೇ ಅಲ್ಲ, ಕನ್ನಡ ಚಿತ್ರಗಳನ್ನು ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋಗುವ ಮೂಲಕ ಎಲ್ಲರ ಗಮನ ಸೆಳೆದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ‘ಸಲಾರ್’ ಪ್ಯಾನ್‍ ಇಂಡಿಯಾ ಚಿತ್ರವಾದರೂ, ಈ ಚಿತ್ರದ ಹಿಂದಿರುವ ತಾಂತ್ರಿಕ ತಂಡದವರೆಲ್ಲರೂ ಕನ್ನಡದವರಾಗಿದ್ದಾರೆ. ನಿರ್ಮಾಪಕರಾದ ವಿಜಯ್‍ ಕಿರಗಂದೂರು, ನಿರ್ದೇಶಕ ಪ್ರಶಾಂತ್‍…

Read More

ಬೆಂಗಳೂರು:- ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 104 ಜನರಲ್ಲಿ ಕೊರೊನಾ ಪತ್ತೆಯಾಗಿದೆ. ಅದರಲ್ಲಿ ಬೆಂಗಳೂರಿನಲ್ಲಿ ಬರೊಬ್ಬರಿ 85 ಪ್ರಕರಣ ವರದಿ ಆಗಿದೆ. 1752 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು ಬೆಂಗಳೂರಿನಲ್ಲಿ 677 ಟೆಸ್ಟ್ ಮಾಡಲಾಗಿತ್ತು. ಎರಡೇ ದಿನದಲ್ಲಿ ಪಾಸಿಟಿವಿಟಿ ರೇಟ್ 5.93ಗೆ ಏರಿಕೆ ಆಗಿದೆ. ಕಳೆದ 24 ಗಂಟೆಯಲ್ಲಿ 8 ಜನ ಕೊರೊನಾ ಸೋಂಕಿನಿಂದ ಗಣಮುಖವಾಗಿದ್ದಾರೆ ಎನ್ನಲಾಗಿದೆ.

Read More

ಕಾಜು ಮಸಾಲಾ ಒಂದೊಮ್ಮೆ ಮಾಡಿ ತಿಂದ್ರೆ ಮತ್ತೊಮ್ಮೆ ತನ್ನದೇ ಇರಲಾಗದು. ಇದು ಬರೀ ನಾನ್, ಕುಲ್ಚಾ ಅಲ್ಲ, ಬದಲಾಗಿ ಜೀರಾ ರೈಸ್, ಚಪಾತಿ, ಪೂರಿಗೂ ಸೂಟ್ ಆಗತ್ತೆ. ಹಾಗಾದ್ರೆ ಕಾಜು ಮಸಾಲಾ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. 2ರಿಂದ 3ಟೊಮೆಟೋವನ್ನು, 10ರಿಂದ 20 ಕಾಜು ಜೊತೆ ಪೇಸ್ಟ್ ಮಾಡಿ. ಈ ಪೇಸ್ಟ್ ತಯಾರಿಸುವಾಗ, ಚಕ್ಕೆ, ಲವಂಗ, ಏಲಕ್ಕಿಯನ್ನನೂ ಸೇರಿಸಿಕೊಳ್ಳಿ. ಈಗ ಗ್ಯಾಸ್ ಆನ್ ಮಾಡಿ, ಪ್ಯಾನ್ ಬಿಸಿ ಮಾಡಿ, ಅದಕ್ಕೆ ನಾಲ್ಕು ಸ್ಪೂನ್ ತುಪ್ಪ, 2 ಸ್ಪೂನ್ ಎಣ್ಣೆ, 1 ಸ್ಪೂನ್ ಜೀರಿಗೆ, 1 ಪಲಾವ್ ಎಲೆ, ಎರಡು ಏಲಕ್ಕಿ, ಚಿಕ್ಕ ತುಂಡು ಚಕ್ಕೆ, ನಾಲ್ಕು ಲವಂಗ, ಇವಿಷ್ಟನ್ನು ಹಾಕಿ ಚೆನ್ನಾಗಿ ಹುರಿಯಿರಿ. ಬಳಿಕ ಈರುಳ್ಳಿಯನ್ನೂ ಹುರಿಯಿರಿ. ಇದರೊಂಗಿ ಶುಂಠಿ, ಬೆಳ್ಳುಳ್ಳಿ ಪೇಸ್ಟ್ ಸೇರಿಸಿ ಹುರಿಯಿರಿ. ಈಗ ಅರಿಶಿನ, ಖಾರದ ಪುಡಿ, ಜೀರಿಗೆ ಪುಡಿ, ಗರಂ ಮಸಾಲೆ ಪುಡಿ, ಕೊತ್ತೊಂಬರಿ ಕಾಳಿನ ಪುಡಿ, ಉಪ್ಪು ಮಿಕ್ಸ್ ಮಾಡಿ. ಈಗ ಪೇಸ್ಟ್…

Read More

ಕೊಪ್ಪಳ:- ಹಿಜಾಬ್‌ ನಿಷೇಧ ವಾಪಸ್‌ ಕುರಿತು ಮುಖ್ಯಮಂತ್ರಿ ನೀಡಿದ ಹೇಳಿಕೆ ಬಗ್ಗೆ ಮಾಜಿ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಅಭಿವೃದ್ಧಿ ಕೆಲಸ ಮಾಡಲು ಖಜಾನೆಯಲ್ಲಿ ಹಣ ಖಾಲಿಯಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ಜನರ ಗಮನ ಬೇರೆಡೆ ಸೆಳೆಯಲು ಕುತಂತ್ರ ಮಾಡುತ್ತಿದ್ದಾರೆ’ ಎಂದರು. ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಖಚಿತವಾದ ಮೇಲೆಯೇ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪ್ರಧಾನಿ ಸ್ಥಾನಕ್ಕೆ ಎಳೆದು ತರಲಾಗಿದೆ. ಹಿಂದೆ ಯುಪಿಎ ಸರ್ಕಾರ ಆಡಳಿತ ನಡೆಸಿದಾಗ ಯಾಕೆ ಅವರನ್ನು ಪ್ರಧಾನಿ ಮಾಡಲಿಲ್ಲ. ದಲಿತ ಸಿಎಂ, ಪಿಎಂ. ಎನ್ನುವುದು ಕಾಂಗ್ರೆಸ್‌ನ ಗಿಮಿಕ್‌’ ಎಂದು ಹೇಳಿದರು. ‘ಕಾಂಗ್ರೆಸ್‌ ಮುಳುಗುವ ಹಡಗು, ಒಬ್ಬೊಬ್ಬರೇ ಇಳಿದು ಹೋಗುವುದು ಸ್ವಾಭಾವಿಕ. ಹರಿಪ್ರಸಾದ್‌ ಸೇರಿದಂತೆ ಹಲವರು ರಾಜಕೀಯ ಅಸ್ತಿತ್ವಕ್ಕಾಗಿ ಹೊರಹೋಗಬಹುದು. ಹಿಂದುಳಿದವರನ್ನು ಕಾಂಗ್ರೆಸ್‌ನಲ್ಲಿ ಎಂದೂ ಗೌರವಯುತವಾಗಿ ನಡೆಸಿಕೊಂಡಿಲ್ಲ. ಹರಿಪ್ರಸಾದ್‌ ಅವರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ’ ಎಂದು ಹೇಳಿದ್ದಾರೆ.

Read More

ಥೈರಾಯ್ಡ್ ಸಮಸ್ಯೆಗೆ ಕೊತ್ತಂಬರಿ ಬೀಜ ಸಹಕಾರಿ ಎಂದು ವರದಿಯೊಂದು ಹೇಳಿದೆ. 1 ದೊಡ್ಡ ಚಮಚದಷ್ಟು ಕೊತ್ತಂಬರಿ ಬೀಜಗಳನ್ನು ತೆಗೆದುಕೊಂಡು ಅದನ್ನು ಕಲ್ಲಿನಲ್ಲಿ ಜಜ್ಜಿ ಪುಡಿ ಮಾಡಿಕೊಳ್ಳಿ. ಅದನ್ನು ಒಂದು ಲೋಟ ನೀರಿನಲ್ಲಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಅದನ್ನು ರಾತ್ರಿ ಹಾಗೇ ಬಿಟ್ಟು ಬೆಳಿಗ್ಗೆ ಚೆನ್ನಾಗಿ ಕುದಿಸಿ ಸೋಸಿ ಅದನ್ನು ಉಗುರು ಬೆಚ್ಚಗಿರುವಾಗ ಸ್ವಲ್ಪ ಸ್ವಲ್ಪ ನಿಧಾನವಾಗಿ ಕುಡಿಯಿರಿ. ಇದನ್ನು 6 ತಿಂಗಳು ಗಳ ಕಾಲ ಮಾಡಿ. ಹಾಗೇ ವಾಲ್ ನಟ್ಸ್ ಆಯಿಲ್ ಅನ್ನು ತೆಗೆದುಕೊಂಡು ಅದನ್ನು ರಾತ್ರಿ ಮಲಗುವಾಗ ಥೈರಾಯ್ಡ್ ಗ್ರಂಥಿಯ ಸ್ಥಳದಲ್ಲಿ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ. ಇಲ್ಲವಾದರೆ ಈರುಳ್ಳಿ ರಸವನ್ನು ಹಚ್ಚಿ ಮಸಾಜ್ ಮಾಡಿ ಬೆಳಿಗ್ಗೆ ವಾಶ್ ಮಾಡಿ.

Read More

ಬಿಗ್ ಬಾಸ್ ನಲ್ಲಿ ಈ ವಾರದ ಟಾಸ್ಕ್​ನಲ್ಲಿ ನಮ್ರತಾ ಗೌಡ ಅತ್ಯುತ್ತಮ ಪ್ರದರ್ಶನದ ಮೂಲಕ ಮನೆಯ ಕ್ಯಾಪ್ಟನ್​ ಆಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನಮ್ರತಾ ಕ್ಯಾಪ್ಟನ್ ಆಗುವಲ್ಲಿ ಪ್ರತಾಪ್ ಅವರ ಪಾತ್ರವೂ ಇದೆ. ತಮ್ಮ ಪಾಲಿನ ಪಾಯಿಂಟ್ಸ್​ ಶೇರ್ ಮಾಡಿ ನಮ್ರತಾ ಕ್ಯಾಪ್ಟನ್ಸಿ ರೇಸ್​ನಲ್ಲಿ ಉಳಿದುಕೊಳ್ಳುವಂತೆ ಪ್ರತಾಪ್​ ಸಹಾಯ ಮಾಡಿದ್ದಾರೆ ಎಂದು ಹಲವರು ಹೇಳುತ್ತಿದ್ದಾರೆ. ಆದರೆ, ಮನೆಯ ಕ್ಯಾಪ್ಟನ್​ ಆಗಿ ದಿನ ಕಳೆಯುವದರೊಳಗೆ ನಮ್ರತಾ ಅವರು ಉಲ್ಟಾ ಹೊಡೆದಂತೆ ಕಾಣುತ್ತಿದ್ದು, ಪ್ರತಾಪ್ ಹಳ್ಳಿಯವರನ್ನು ಸೆಳೆಯಲು ಅಲ್ಲಿಯವರಂತೆ ಮಾತನಾಡುತ್ತಾರೆ ಅನ್ನೋದು ಕೆಲವರ ವಾದವಾಗಿದೆ. ಈ ವಾದಕ್ಕೆ ನಮ್ರತಾ ಕೂಡ ಧ್ವನಿಗೂಡಿಸಿದ್ದಾರೆ. ಸದ್ಯ ಬಿಡುಗಡೆಯಾಗಿರುವ ಪ್ರೋಮೋದಲ್ಲಿ ನಮ್ರತಾ ಅವರ ಹೇಳಿಕೆ ವೈರಲ್ ಆಗುತ್ತಿದ್ದು, ಪ್ರತಾಪ್​ ಬೆನ್ನಿಗೆ ನಮ್ರತಾ ಚಾಕು ಹಾಕಿದರು ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ಟಾಸ್ಕ್​ ವೇಳೆ ಸ್ಪರ್ಧಿಗಳು ಜಗಳವಾಡುತ್ತ ನಿಂದಿಸುತ್ತಾ, ಮನಸ್ತಾಪ, ದೂರುಗಳಿಂದಲೇ ಕಾಲ ಕಳೆಯುವ ಇವರು ವಾರದ ಕೊನೆಯಲ್ಲಿ ನಗುವಿನ ಅಲೆಯಲ್ಲಿ ತೇಲುತ್ತಿರುತ್ತಾರೆ. ಈ ವಾರ ನಟ ಕಿಚ್ಚ ಸುದೀಪ್​ ಅವರ…

Read More

ದಾವಣಗೆರೆ:- ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಾತಿಗಣತಿ ವಿರೋಧಿಯಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ವೈಜ್ಞಾನಿಕ ಆಧಾರದಲ್ಲಿ ಜಾತಿಗಣತಿ ಮಾಡಬೇಕು ಎಂದು ದಾವಣಗೆರೆಯಲ್ಲಿ ಸಚಿವ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಒತ್ತಾಯ ಮಾಡಿದ್ದಾರೆ. ನಾವು ಈ ಬಗ್ಗೆ ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ. ವಾಸ್ತವಾಂಶದ ಆಧಾರದ ಮೇಲೆ ಸತ್ಯಾಸತ್ಯತೆ ಖಚಿತಪಡಿಸಿಕೊಂಡು ಜಾತಿಗಣತಿ ಮಾಡಲಿ. ವೀರಶೈವ ‌ಲಿಂಗಾಯತದ ಎಲ್ಲ ಒಳಪಂಗಡಗಳನ್ನ ಸೇರಿಸಿಕೊಂಡು‌ ಜಾತಿಗಣತಿ ಮಾಡಬೇಕು ಎಂದರು. ಹಿಜಾಬ್ ಹಿಂಪಡೆದ ವಿಚಾರವಾಗಿ ಮಾತನಾಡಿ, ಅವರವರ ಧರ್ಮದ ಆಚರಣೆ ಮಾಡಲು ಸಂವಿಧಾನ ಅವಕಾಶ ಕೊಟ್ಟಿದೆ. ಅದನ್ನ ಜಾರಿ ಮಾಡುವುದು ಮತ್ತು ಅವಕಾಶ ಕೊಡುವ ಕೆಲಸವನ್ನ ಸಿಎಂ ಮಾಡುತ್ತಾರೆ. ಸಿಎಂ ಯಾವುದೇ ನಿರ್ಧಾರ ತೆಗೆದುಕೊಂಡ್ರು ಸಂವಿಧಾನಬದ್ದವಾಗಿರುತ್ತದೆ, ನ್ಯಾಯಬದ್ಧವಾಗಿರುತ್ತದೆ ಎಂದರು. ಯತ್ನಾಳ ನಾಲಿಗೆ ಮತ್ತು ಮೆದುಳಿಗೆ ಲಿಂಕ್ ಇಲ್ಲ. ಅವರು ಯಾವ ಸಮಯದಲ್ಲಿ ಏನು ಮಾತಾಡ್ತಾರೆ ಅಂತ ಅವರಿಗೆ ಅರಿವಿದೆಯೋ ಗೊತ್ತಿಲ್ಲ ಎಂದು ದಾವಣಗೆರೆಯಲ್ಲಿ…

Read More

ಚಾಮರಾಜನಗರ:- ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ಕೃಷಿ ಇಲಾಖೆಯಿಂದ ಆಯೋಜಿಸಲಾಗಿದ್ದ ರೈತ ದಿನಾಚರಣೆ ಮತ್ತು ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬದ ವಸ್ತು ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಚಾಲನೆ ನೀಡಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬದ ವಸ್ತು ಪ್ರದರ್ಶನದಲ್ಲಿ ಜಿಲ್ಲೆಯ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರು ಸಿರಿಧಾನ್ಯಗಳಿಂದ ತಯಾರಿಸಿದ್ದ ತಿನಿಸುಗಳು ಹಾಗೂ ವಿವಿಧ ಇಲಾಖೆಗಳಿಂದ ತಯಾರಿಸಲಾಗಿದ್ದ ಸಿರಿಧಾನ್ಯಗಳ ಪದಾರ್ಥಗಳ ಪ್ರದರ್ಶನಗೊಂಡು ಮಾರಾಟವಾದವು. ಇದೇ ಸಂದರ್ಭದಲ್ಲಿ ಎಲ್ಲಾ ಮಳಿಗೆಗಳಿಗೆ ತೆರಳಿದ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರು ರೈತರನ್ನು ಪರಿಚಯ ಮಾಡಿಕೊಂಡು ರೈತರು ಸಿರಿಧಾನ್ಯಗಳಿಂದ ತಯಾರಿಸಲಾಗಿದ್ದ ತಿನಿಸುಗಳ ರುಚಿ ಸವಿದು ರೈತರಿಗೆ ಶುಭಕೋರಿದರು.

Read More