Author: AIN Author

ಧಾರವಾಡ:- ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧ್ಯಕ್ಷತೆಯಲ್ಲಿ ನಡೆದ ಜನತಾ ದರ್ಶನ ಸುಮಾರು 3 ಗಂಟೆ ತಡವಾಗಿ ಆರಂಭವಾಗಿದೆ. ಧಾರವಾಡ ಜಿಪಂ ಸಭಾಭವನದಲ್ಲಿ ಬೆಳಿಗ್ಗೆ 9 ಕ್ಕೆ ಆರಂಭವಾಗಬೇಕಿದ್ದ ಜನತಾ ದರ್ಶನ ಮಧ್ಯಾಹ್ನ 12 ಗಂಟೆಯಾದರೂ ಆರಂಭ ಆಗದೇ ಮೂರು ತಾಸು ವಿಳಂಬವಾಗಿ ನಂತರ ಆರಂಭವಾಗಿದೆ. ಇನ್ನೂ ಸಚಿವರ ಆಗಮನಕ್ಕಾಗಿ ಅಧಿಕಾರಿಗಳು, ಸಾರ್ವಜನಿಕರು ಕಾದು ಕುಳಿತಿದರು. ಸಚಿವರಾದಿಯಾಗಿ ಜಿಲ್ಲಾಧಿಕಾರಿಗಳೂ ಜನತಾ ದರ್ಶನಕ್ಕೆ ತಡವಾಗಿ ಆಗಮಿಸಿದರು. ಸಚಿವರು ಹಾಗೂ ಅಧಿಕಾರಿಗಳ ತಡ ಆಗಮನದಿಂದ ಸಾರ್ವಜನಿಕರು ಕಾದು ಕಾದು ಸುಸ್ತಾಗಿದ್ದರು.

Read More

ಯಲಹಂಕ:- ಬೆಂಗಳೂರು ನಗರದ 103, ಯಲಹಂಕದ 5ಸರ್ಕಾರಿ ಪಶು ಆಸ್ಪತ್ರೆ ಏಕಾಏಕಿ ವರ್ಗಾವಣೆ ವಿರುದ್ದ ಸ್ಥಳೀಯ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಅವರು ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಯಲಹಂಕ ತಾಲೂಕಿನಾದ್ಯಂತ ಸಾವಿರಾರು ಜಾನುವಾರುಗಳಿವೆ. ಹೈನುಗಾರಿಕೆ ಈ‌ಭಾಗದ ಪ್ರಮುಖ ವಾಣಿಜ್ಯ‌ ಕಸುಬು. ಪ್ರತಿದಿನ ಒಂದು ಲಕ್ಷಕ್ಕೂ ಹೆಚ್ಚು ಲೀಟರ್ ಹಾಲು ಉತ್ಪಾದನೆಯಾಗ್ತದೆ. ಪಶುಸಂಗೋಪನಾ ಸಚಿವ ವೆಂಕಟೇಶ್ ತಮ್ಮ ಜಿಲ್ಲೆಗಳಿಗೆ ಆಸ್ಪತ್ರೆ ವರ್ಗಾವಣೆ ಮಾಡಿಕೊಳ್ತಿತ್ತಿರೋದು ಎಸ್ಟು ಸರಿ..!? ಎಂದು ಪ್ರಶ್ನಿಸುವ ಮೂಲಕ ಪಶುಸಂಗೋಪನಾ ಸಚಿವರ ನಡೆ ವಿರುದ್ಧ ಎಸ್.ಆರ್.ವಿಶ್ವನಾಥ್ ಅಸಮಾಧಾನ ಹೊರಹಾಕಿದ್ದಾರೆ. ಈ ಪಶು ಆಸ್ಪತ್ರೆಗಳ ವರ್ಗಾವಣೆ ಕೈ ಬಿಡದಿದ್ದರೆ ಮುಂದಿನ ದಿನ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಯಲಹಂಕದಲ್ಲಿ ಪಶು ಸಚಿವರ ಅವೈಜ್ಞಾನಿಕ ನಡೆ ವಿರುದ್ಧ ಎಸ್ ಆರ್ ವಿಶ್ವನಾಥ್ ಕಿಡಿಕಾರಿದ್ದಾರೆ.

Read More

ಬೆಂಗಳೂರು: ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಅಧಿಕೃತ ಜಾತಿಗಣತಿ ಮಾಡಿಸಿಲ್ಲ. ಹೀಗಾಗಿ ಈಗ ಬಿಡುಗಡೆ ಮಾಡುವುದು ಜಾತಿಗಣತಿಯಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಖಿಲ ಭಾರತ ಲಿಂಗಾಯತ ವೀರಶೈವ ಮಹಾಸಭೆ ಪ್ರತಿ ವರ್ಷ ಸಮಾಜವನ್ನು ಒಗ್ಗೂಡಿಸುವ ಸಲುವಾಗಿ ಸಮ್ಮೇಳನ ನಡೆಯುತ್ತದೆ. ಈ ವರ್ಷ ದಾವಣಗೆರೆಯಲ್ಲಿ ನಡೆಸಲಾಗುತ್ತಿದೆ ಎಂದರು. ಈ ಸಮಾವೇಶದಲ್ಲಿ ಜಾತಿಗಣತಿ ವಿರೋಧಿಸುವ ನಿರ್ಧಾರ‌ಕೈಗೊಳ್ಳಲಾಗುತ್ತದೆಯೇ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದುಳಿದ ವರ್ಗದ ಆಯೋಗ ಮಾಡಿರುವುದು ಜಾತಿ ಗಣತಿಯೇ ಅಲ್ಲ. ಎಲ್ಲ ಸಮುದಾಯಗಳ ಶೈಕ್ಷಣಿಕ ಮತ್ತು ಆರ್ಥಿಕ ಪರಿಸ್ಥಿತಿ ಹೇಗಿದೆ ಅಂತ ಅಧ್ಯಯನ ಮಾಡಿದೆ. ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರ ಇಲ್ಲ. ಬೇರೆ ರಾಜ್ಯಗಳ ಜಾತಿಗಣತಿಗಳ ಬಗ್ಗೆಯೂ ಸುಪ್ರೀಂ ಕೋರ್ಟ್ ನಲ್ಲಿ ಚರ್ಚೆ ನಡೆಯುತ್ತಿದೆ. ಈಗಿರುವ ಹಿಂದುಳಿದ ವರ್ಗದ ಅಧ್ಯಕ್ಷರು ಈಗಾಗಲೇ‌ ಸಿದ್ದವಾಗಿರುವ ವರದಿಯನ್ನು ಏಕೆ ಇಟ್ಟುಕೊಂಡಿದ್ದಾರೆ. ನಾವೂ ಸಾಮಾಜಿಕ ನ್ಯಾಯದ ಪರವಾಗಿದ್ದೇವೆ. ಸಾಮಾಜಿಕ ನ್ಯಾಯ…

Read More

ಬೆಂಗಳೂರು: ಶಾಲೆಯ ಶೌಚಾಲಯಗಳನ್ನು ಶುಚಿಗೊಳಿಸಲು ವಿದ್ಯಾರ್ಥಿಗಳನ್ನು ಬಳಸುವುದು ಅತ್ಯಂತ ಹೀನ ಕೃತ್ಯ. ಇತ್ತೀಚೆಗೆ ಇಂತಹ ಪ್ರಕರಣಗಳು ವರದಿಯಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ. https://twitter.com/CMofKarnataka/status/1738464489216040970?t=gAQk0tKitjUOuOYp6V71Vw&s=19 ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು,  ಈಗಾಗಲೇ ವರದಿಯಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಪ್ಪಿತಸ್ಥ ಶಿಕ್ಷಕರ ವಿರುದ್ಧ ಸೂಕ್ತ ಕ್ರಮಕೈಗೊಂಡಿದ್ದಾರೆ. ಇಂತಹ ಕೃತ್ಯಗಳು ಬೇರೆ ಶಾಲೆಗಳಲ್ಲಿ ನಡೆಯುತ್ತಿದ್ದರೆ ಅವುಗಳನ್ನು ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದೇನೆ. ಶಾಲೆ-ಕಾಲೇಜುಗಳ ಹಾಸ್ಟೆಲ್‌ಗಳಲ್ಲಿಯೂ ಈ ಬಗ್ಗೆ ನಿಗಾವಹಿಸುವಂತೆ ಸಮಾಜ ಕಲ್ಯಾಣ ಸಚಿವರಿಗೂ ತಿಳಿಸಿದ್ದೇನೆ. ಪ್ರತಿಯೊಂದು ಶಾಲೆಯಲ್ಲಿಯೂ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಇರಬೇಕು ಮತ್ತು ಅವುಗಳನ್ನು ಪ್ರತಿದಿನ ಶುಚಿಗೊಳಿಸಲು ಸಿಬ್ಬಂದಿಯನ್ನು ನೇಮಕ ಮಾಡಬೇಕು. ಈ ಬಗ್ಗೆ ಒಂದು ಸಮೀಕ್ಷೆ ನಡೆಸಿ ಜಿಲ್ಲಾ ಶಿಕ್ಷಣಾಧಿಕಾರಿಗಳಿಂದ ವರದಿ ತರಿಸುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ತಿಳಿಸಿದ್ದೇನೆ.

Read More

ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಮರೆಮಾಚಿ ಜನರ ದಾರಿ ತಪ್ಪಿಸಲು, ರಾಜಕೀಯ ಲಾಭಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಹಿಜಾಬ್ ವಿಷಯ ಪ್ರಸ್ತಾಪ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲೆಡೆ ಹಿಜಾಬ್ ನಿಷೇಧ ಆಗಿಯೇ ಇಲ್ಲ. ಎಲ್ಲಿ ಡ್ರೆಸ್ ಕೋಡ್ ಇದೆ ಅಲ್ಲಿ ಮಾತ್ರ ನಿಷೇಧ ಇದೆ. ಮಹಿಳೆಯರು ಬೇರೆಡೆ ಎಲ್ಲಿ ಬೇಕು ಅಲ್ಲಿ ಹಾಕಿಕೊಳ್ಳಲು ಅವಕಾಶ ಇದೆ. ಹಿಜಾಬ್ ನಿಷೇಧ ಆಗಿಯೇ ಇಲ್ಲ. ಅದನ್ನು ವಾಪಸ್ ಪಡೆಯುವ ಪ್ರಶ್ನೆ ಎಲ್ಲಿ ಬಂತು ಎಂದು ಪ್ರಶ್ನಿಸಿದರು. 1984 ರಲ್ಲಿ ಸಮಗ್ರ  ಶಿಕ್ಷಣ ಕಾಯ್ದೆ ಅನ್ವಯ  ಶಾಲಾ ಸಮವಸ್ತ್ರ  ಜಾರಿಗೆ ತರಲಾಗಿತ್ತು, ಅದನ್ನು ನಮ್ಮ ಅವಧಿಯಲ್ಲಿ ಜಾರಿಗೆ ತರಲಾಗಿತ್ತು. ಮುಖ್ಯಮಂತ್ರಿಗಳು ಅದನ್ನು ಹಿಂದೆ ಪಡೆಯುವ ಮಾನಾಡಿದ್ದಾರೆ. ಹಿಜಾಬ್ ಪ್ರಕರಣ  ಈಗಾಗಲೇ ಕೊರ್ಟ್ ನಲ್ಲಿ  ಇದೆ. ರಾಜಕೀಯ ಕಾರಣಕ್ಕೆ ಹಿಜಾಬ್ ಪ್ರಸ್ತಾಪ ಮಾಡಿದ್ದಾರೆ. ಇದನ್ನು ಖಂಡಿಸುತ್ತೇನೆ ಎಂದರು. ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವಾಗ…

Read More

ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಎರಡನೇ ಟಿಪ್ಪು ಸುಲ್ತಾನ ಆಗುತ್ತಿದ್ದಾರೆ. ಹಿಜಬ್ ನಿಷೇಧ (Hijab Ban) ಹಿಂತೆಗೆದುಕೊಳ್ಳುವುದು ಸೂಕ್ತ ಅಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ತಿಳಿಸಿದ್ದಾರೆ. ಹಿಜಬ್ ನಿಷೇಧ ವಾಪಸ್ ಪಡೆಯುವ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಹಿಜಬ್ ನಿಷೇಧವನ್ನ ಬಿಜೆಪಿ ಮಾಡಿಲ್ಲ. ಶಾಲೆಯಲ್ಲಿ ಸಮಾನತೆ ಇರಲಿ ಅಂತಾ ಬಾಬಾಸಾಹೇಬ್ ಅಂಬೇಡ್ಕರ್ ಒಂದೇ ಸಮವಸ್ತ್ರದ ಕಾಯ್ದೆ ಮಾಡಿದ್ರು. ಈ ರೀತಿ ಅವರವರಿಗೆ ತಿಳಿದಿದ್ದನ್ನ ಅವರು ಧರಿಸಿ ಬರೋದಾದ್ರೆ, ನಾಳೆ ಹಿಂದೂಗಳು ಕೇಸರಿ ಶಾಲು, ಹಣೆಗೆ ತಿಲಕ ಇಟ್ಟುಕೊಂಡು ಬರುತ್ತಾರೆ. ಇದು ಸಂಘರ್ಷಕ್ಕೆ ಹಾದಿ ಆಗುತ್ತೆ ಎಂದು ಎಚ್ಚರಿಸಿದರು. ಈ ರೀತಿ ಆದ್ರೆ ಶ್ರೀಮಂತರ ಒಳ್ಳೆಯ ಬಟ್ಟೆ, ಬಂಗಾರ ಹಾಕಿಕೊಂಡು ಬರುತ್ತಾರೆ. https://ainlivenews.com/consuming-okra-is-very-good-for-diabetics-do-you-know-why/ ಆಗ ಬಡ ಮಕ್ಕಳಿಗೆ ಹೇಗೆ ಅನಿಸುತ್ತೆ, ಬೇಜಾರಾಗುತ್ತೆ. ಹಿಂದೂಗಳು ಗೋಮಾಂಸ ತಿನ್ನಬಾರದು ಅಂತಾ ಇದೆ, ಅದಕ್ಕೆ ನಾವು ತಿನ್ನಲ್ಲ. ಮುಸ್ಲಿಮರು ಹಂದಿ ತಿನ್ನಬಾರದು ಅಂತಾ ಇದೆ, ಅದಕ್ಕೆ ಅವರು ತಿನ್ನಲ್ಲ.…

Read More

ಬೆಂಗಳೂರು: ಐಟಿ ದಾಳಿ ಬಳಿ ಪೈಟರ್ ರವಿಗೆ ಶಾಕ್ ಕೊಟ್ಟ ಸಿಸಿಬಿ ಟೀಂ ಏನಂದ್ರೆ ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳಿಂದ ಫೈಟರ್ ರವಿ ನಿವಾಸದ ಮೇಲೆ ದಾಳಿ ನಡೆಸಿದೆ. ವೈಯಾಲಿ ಕಾವಲ್ ನಿವಾಸದ ಮೇಲೆ ಸಿಸಿಬಿ ದಾಳಿ ನಡೆಸಿದ ಸಿಸಿಬಿ ಟೀಂ. https://ainlivenews.com/the-government-has-taken-the-corona-case-seriously/ ಕಳೆದ ಬಾರಿ ಬಿಜೆಪಿಯಿಂದ ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಫೈಟರ್ ರವಿ ರೌಡಿಶೀಟರ್ ಹಿನ್ನಲೆ ಇದೆ ಎಂಬ ವಿವಾದ ಆಗಿತ್ತು ನಂತರ ಬಿಜೆಪಿಗೆ ರಾಜೀನಾಮೆ ನೀಡಿ ಪಕ್ಷೇತರವಾಗಿ ಸ್ಪರ್ಧೆ ಸಹ ಮಾಡಿದ್ದ ಫೈಟರ್ ಆದ್ರೀಗ ಹಳೆ ಪ್ರಕರಣವೊಂದರ ಸಂಬಂಧ ತನಿಖೆ ವೇಳೆ ಫೈಟರ್ ಗೆ ಶಾಕ್ ಕಳೆದ ಒಂದೂವರೆ ವರ್ಷದ ಹಿಂದೆ ದಾಖಲಾಗಿದ್ದ ಪ್ರಕರಣ ಆ ಪ್ರಕರಣದ ತನಿಖೆ ಹಂತದ ವೇಳೆ ಕೇಳಿ ಬಂದ ಫೈಟರ್ ರವಿ ಹೆಸರು ಈ ಹಿನ್ನಲೆ ದಾಳಿ ಮಾಡಿ ಪರಿಶೀಲನೆ ಕಳೆದ ಕೆಲ ದಿನಗಳ ಹಿಂದಷ್ಟೇ ಫೈಟರ್ ನಿವಾಸಕ್ಕೆ ಐಟಿ ಸಹ ದಾಳಿ ನಡೆಸಿತ್ತು ಅದಾದ ಕೆಲವೇ ದಿನಗಳ…

Read More

ಹೆಸರಾಂತ ನಟಿ ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದಲ್ಲದೇ, ತಿಶ್ರಾ ವಿರುದ್ಧವೇ ಮಾನನಷ್ಟ ಮೊಕದ್ದಮೆ ಹೂಡಿದ್ದ ನಟ ಮನ್ಸೂರ್ ಅಲಿಖಾನ್ (Mansoor Alikhan) ಗೆ ಮದ್ರಾಸ್ ಹೈಕೋರ್ಟ್ (Madras High Court) ಒಂದು ಲಕ್ಷ ರೂಪಾಯಿ ದಂಡವಿಧಿಸಿದೆ. ಜೊತೆಗೆ ತ್ರಿಶಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಅನುಮತಿಯನ್ನೂ ನಿರಾಕರಿಸಿದೆ. ಈ ಹಿಂದೆ ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದ ಮನ್ಸೂರ್ ಅಲಿ ಖಾನ್ ಮೇಲೆ ಲೈಂಗಿಕ ಕಿರುಕುಳ ದೂರು ದಾಖಲಾಗಿತ್ತು. ಚೆನ್ನೈನ ಥೌ‍ಸಂಡ್ ಲೈಟ್ಸ್ ಆಲ್ ವುಮೆನ್ ಪೊಲೀಸ್ ಠಾಣೆಗೆ ಬಂದು ಹಾಜರಾಗುವಂತೆ ನಟನಿಗೆ ನೋಟಿಸ್ ನೀಡಲಾಗಿತ್ತು. ಅನಾರೋಗ್ಯದ ನೆಪವೊಡ್ಡಿ ಬರಲು ಆಗುವುದಿಲ್ಲ ಎಂದು ಮನ್ಸೂರ್ ಅಲಿ ಖಾನ್ ಹೇಳಿದ್ದ. ಜೊತೆಗೆ ಜಾಮೀನು ಅರ್ಜಿಯನ್ನೂ (Court) ಸಲ್ಲಿಸಿದ್ದ. ಆದರೆ, ಡಿಢೀರ್ ಅಂತ ಮನಸ್ಸು ಬದಲಾಯಿಸಿ ಪೊಲೀಸ್ ಠಾಣೆಗೆ ಹಾಜರಾಗಿದ್ದ. ಇತ್ತ ಜಾಮೀನು ಅರ್ಜಿಯಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ನಿರೀಕ್ಷೆ ಜಾಮೀನು (Bail) ಸ್ವೀಕೃತವಾಗಿರಲಿಲ್ಲ. ಹಾಗಾಗಿ ನ್ಯಾಯಾಧೀಶರು ಛೀಮಾರಿ ಹಾಕಿದ್ದರು. ನ್ಯಾಯಾಲಯದ ಸಮಯ ವ್ಯರ್ಥ…

Read More

ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಇಲ್ಲ. ಬದಲಾಗಿ ಟಿಪ್ಪು ಸುಲ್ತಾನ್ ನೇತೃತ್ವದ ತುಘಲಕ್ ಸರ್ಕಾರ‌ ಇದೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ‘ಮುಸ್ಲಿಂ ಹೆಣ್ಣು ಮಕ್ಕಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದರೆ,  ಹಿಂದೂ ಯುವಕ, ಯುವತಿಯರಿಗೂ ಕೇಸರಿ ಶಾಲು ಧರಿಸಲು ಅವಕಾಶ ನೀಡಬೇಕು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು. ‘ಅಂದಿನ ಬಿಜೆಪಿ ಸರ್ಕಾರದ ಅದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಹಿಜಾಬ್ ಆದೇಶ ವಾಪಸ್ ಪಡೆದರೆ ಹಿಂದೂ ಯುವಕರಿಗೆ ಕೇಸರಿ ಶಾಲು ಧರಿಸುವಂತೆ ನಾವೇ ಕರೆ ನೀಡುತ್ತೇವೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಊಟ,  ಬಟ್ಟೆ ನಮ್ಮ ಹಕ್ಕು ಎನ್ನುತ್ತಿದ್ದಾರೆ. https://ainlivenews.com/consuming-okra-is-very-good-for-diabetics-do-you-know-why/  ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಇಲ್ಲ. ಬದಲಾಗಿ ಟಿಪ್ಪು ಸುಲ್ತಾನ್ ನೇತೃತ್ವದ ತುಘಲಕ್ ಸರ್ಕಾರ‌ ಇದೆ’ ಎಂದು ಆರೋಪಿಸಿದರು. ‘ಎಲ್‌ಕೆಜಿಯಿಂದ ಕಾಲೇಜಿನವರೆಗೂ‌ ಸಮವಸ್ತ್ರ ಕಡ್ಡಾಯ ಮಾಡಲಾಗಿದ್ದು, 2021ರಲ್ಲಿ ಉಡುಪಿ ಪಿಯು ಕಾಲೇಜು ವಿದ್ಯಾರ್ಥಿನಿಯರು ಹಿಜಾಬ್ ಅನ್ನು ಮುನ್ನೆಲೆಗೆ ತಂದಿದ್ದರು. ಅಂದು…

Read More

ಬೆಂಗಳೂರು: ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ ಮನೆ ಮಾಡಿದೆ.ಪ್ರತಿವರ್ಷದಂತೆ ಈ ಬಾರಿ ಕೂಡ ಮಲ್ಲೇಶ್ವರ ಟಿಟಿಡಿಯಲ್ಲಿ ಸಂಭ್ರಮದ ವಾತವರಣ ಸೃಷ್ಟಿಯಾಗಿದೆ. ವೈಕುಂಠ ಏಕಾದಶಿ ಪ್ರಯುಕ್ತವಾಗಿಯೇ ದೇವಸ್ಥಾನದ ಸುತ್ತಲೂ ದಕ್ಷಿಣ ಶೈಲಿಯ ಚಪ್ಪರ ಹಾಕಿ ಹೂವಿನಿಂದ ಅಲಾಂಕಾರ ಮಾಡಲಾಗಿದೆ. ಬೆಳಗ್ಗೆ 6 ಗಂಟೆ ಸುಮಾರಿಗೇ ವಿಶೇಷ ಪೂಜೆ ಆರಂಭವಾಗಿದೆ. ವೆಂಕಟೇಶ್ವರನಿಗೆ ಪಂಚಾಭಿಷೇಕ ಮಾಡಿ, ಪುಷ್ಪಾಭಿಷೇಕ ಮಾಡಿ ನಂತರ ವಿಶೇಷ ಅಲಂಕಾರ ಮಾಡಿ ಭಕ್ತದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ವೈಕುಂಠನಿಗೆ ಬೆಳಗ್ಗೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೂ ವಿಶೇಷ ಪೂಜೆ, ಹೊಮ, ಹವನಗಳು ನೆರವೇರಲಿದ್ದು, ಮಧ್ಯರಾತ್ರಿಯವರೆಗೂ ಭಕ್ತದಿಗಳು ದೇವಸ್ಥಾನಕ್ಕೆ ಬರಲು ಅವಕಾಶ ಮಾಡಿಕೊಡಲಾಗಿದೆ. ವೈಕುಂಠ ಏಕಾದಶಿ ಅಂದರೆ ಹಿಂದೂಗಳಿಗೆ ಒಂದು ಸಂಭ್ರಮ. ಈ ದಿನ ದೇವಸ್ಥಾನಕ್ಕೆ ಬಂದು ವೈಕುಂಠ ದರ್ಶನ ಮಾಡಿದ್ರೆ ಒಳ್ಳೆಯದಾಗುತ್ತೆ ಎನ್ನೋದು ನಂಬಿಕೆ.‌ ಅಲ್ಲದೇ ಟ್ರಾಫಿಕ್ ಜಾಮ್ ಆಗುವ ಸಾಧ್ಯಾತೆಗಳು ಇರುವುದರಿಂದ ಟ್ರಾಪಿಕ್ ಪೋಲಿಸರನ್ನೂ ನಿಯೋಜನೆ ಮಾಡಲಾಗಿದೆ.‌

Read More