Author: AIN Author

ಬೆಂಗಳೂರು: ಅನುದಾನ ಖಾಲಿಯಾಗಿದ್ದಕ್ಕೆ ಮೂರು ವರ್ಷಗಳಿಂದ ಜಾರಿಯಲ್ಲಿದ್ದ ಮಹಿಳಾ ಪರ ಯೋಜನೆಯನ್ನು ಸಿದ್ದರಾಮಯ್ಯ ಸರ್ಕಾರ ನಿಲ್ಲಿಸಿದೆ. ಹೌದು. ಸೇಫ್ ಸಿಟಿ ಪ್ರಾಜೆಕ್ಟ್ (Safe City Project) ಆಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವುಮೆನ್ ಹೆಲ್ಪ್ ಡೆಸ್ಕ್ (Women Help Desk) ಸಿಬ್ಬಂದಿಯ ತೆರವಿಗೆ ಸರ್ಕಾರ ಸೂಚಿಸಿದೆ. ಮಹಿಳೆಯರಿಗೆ ಆಗುವ ಕಿರಿ ಕಿರಿ ತಪ್ಪಿಸುವ ಉದ್ದೇಶದಿಂದ 2021 ಜನವರಿಯಲ್ಲಿ ಮಹಿಳಾ ಸಹಾಯ ಕೇಂದ್ರ ಆರಂಭವಾಗಿತ್ತು. ಪೋಕ್ಸೋ, ಅತ್ಯಾಚಾರ, ಲೈಂಗಿಕ ದೌರ್ಜನ್ಯದಂತಹ ಪ್ರಕರಣದ ಸಂತ್ರಸ್ತರಿಗೆ ಮಹಿಳಾ ಹೆಲ್ಪ್ ಡೆಸ್ಕ್ ಸಹಕಾರಿಯಾಗಿತ್ತು ಮೂರು ವರ್ಷಗಳಿಗೆ ಮಾತ್ರ ಅನುದಾನ ಮೀಸಲಿಡಲಾಗಿತ್ತು ಎಂದು ಈಗ ಈ ವುಮೆನ್ ಹೆಲ್ಪ್ ಡೆಸ್ಕ್  ನಿಲ್ಲಿಸಿದೆ. ಈಗಾಗಲೇ ಸರ್ಕಾರ ಪೊಲೀಸ್  ಠಾಣೆಗಳಿಗೆ ಹೆಲ್ಪ್ ಡೆಸ್ಕ್ ಸಿಬ್ಬಂದಿಯನ್ನು ಡಿ.31ಕ್ಕೆ ಬಿಡುಗಡೆ ಮಾಡುವಂತೆ ಅದೇಶಿಸಿದೆ.

Read More

ಪ್ರಭಾಸ್ (Prabhas) ನಟನೆಯ ಸಲಾರ್ (Salaar) ಸಿನಿಮಾ ಇಂದು ವಿಶ್ವದಾದ್ಯಂತ ರಿಲೀಸ್ ಆಗಿದೆ. ಈ ಸಂದರ್ಭದಲ್ಲಿ ಅಭಿಮಾನಿಯೊಬ್ಬ ಸಲಾರ್ ಸಿನಿಮಾದ ಫ್ಲೆಕ್ಸ್ ಹಾಕುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟಿರುವ ಅಭಿಮಾನಿ ಶ್ರೀ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ ಪಟ್ಟಣದ ಬಾಲರಾಜು (Balaraju) ಎಂದು ಗುರುತಿಸಲಾಗಿದೆ. ಧರ್ಮಾವರಂ ಪಟ್ಟಣದ ರಂಗ ಚಿತ್ರಮಂದಿರ ಮುಂದೆ ತನ್ನ ನೆಚ್ಚಿನ ನಾಯಕ ಪ್ರಭಾಸ್ ಅವರ ಫ್ಲೆಕ್ಸ್ ಹಾಕುತ್ತಿದ್ದ ಬಾಲರಾಜು ಮತ್ತು ಗೆಳೆಯರಿಗೆ ವಿದ್ಯುತ್ ಶಾಕ್ ತಗುಲಿದೆ. ಬಾಲರಾಜು ಮೃತಪಟ್ಟಿದ್ದರೆ, ಗಜೇಂದ್ರ ಎಂಬ ಯುವಕನಿಗೆ ಗಾಯಗಳಾಗಿವೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲರಾಜುಗೆ 27 ವರ್ಷ ವಯಸ್ಸಾಗಿದ್ದು ಪತ್ನಿ ಸಿರಿಶಾ ಮತ್ತು ಇಬ್ಬರು ಪುತ್ರರನ್ನು ಅಗಲಿಸಿದ್ದಾರೆ. ಘಟನಾ ಸ್ಥಳಕ್ಕೆ ಧರ್ಮವರಂ ಪೊಲೀಸರು ಆಗಮಿಸಿ, ಪರಿಶೀಲನೆ ಮಾಡಿದ್ದಾರೆ. ಪ್ರಕರಣ ಕೂಡ ದಾಖಲಾಗಿದೆ. ನಿನ್ನೆ ರಾತ್ರಿಯೇ ಈ ಅವ‍ಘಡ ನಡೆದಿದ್ದು, ಮೃತರ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡಿ ಎಂದು ಕುಟುಂಬಸ್ಥರು ಪ್ರತಿಭಟನೆ ಕೂಡ ನಡೆಸಿದ್ದಾರೆ.

Read More

ಚಾಮರಾಜನಗರ: ಸಂಸದರನ್ನು ಅಮಾನತು ಮಾಡುವ ಮೂಲಕ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹತ್ಯೆಗೈದಿದೆ ಎಂದು ಆಕ್ರೋಶ ಹೊರ ಹಾಕಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಶ್ರೀ ಚಾಮರಾಜೇಶ್ವರ ದೇಗುಲದ ಎದುರು ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಡು ರಾಷ್ಟ್ರೀಯ ಹೆದ್ದಾರಿ 2009 ತಲುಪಿ ರಾಷ್ಟ್ರೀಯ ಹೆದ್ದಾರಿ-209 ಹಾದು ಹೋಗಿರುವ ಶ್ರೀ ಭುವನೇಶ್ವರಿ ವೃತ್ತ ತಲುಪಿ,ಲೋಕಸಭಾ ಸ್ಪೀಕರ್ ಹಾಗೂ ಪ್ರಧಾನಿ ಮೋದಿ ವಿರುದ್ದ ಧಿಕ್ಕಾರದ ಘೋಷಣೆ ಕೂಗಿದರು. ಅಪರಿಚಿತರು ಸಂಸತ್ ಒಳಗೆ ಸ್ಮೋಕ್ ಬಾಂಬ್ ಸ್ಪೋಟಿಸಿರುವುದು ಕೇಂದ್ರ ಸರ್ಕಾರದ ಭದ್ರತಾ ಲೋಪವನ್ನು ತೋರಿಸಲಿದೆ. ಭದ್ರತಾ ಲೋಪದ ಬಗ್ಗೆ ಉತ್ತರ ನೀಡಬೇಕಿರುವುದು ಗೃಹಸಚಿವರ ಕರ್ತವ್ಯವಾಗಿದೆ. ಆದರೆ ಈ ಬಗ್ಗೆ ಚರ್ಚೆಗೆ ಒತ್ತಾಯಿಸಿದ 141 ಜನ ವಿರೋಧ ಪಕ್ಷಗಳ ಸಂಸದರನ್ನು ಅಧಿವೇಶನದಿಂದ ಅಮಾನತು ಮಾಡಿ, ಲೋಕಸಭಾ ಸ್ಪೀಕರ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಸಚಿವರು ಸರ್ವಾಧಿಕಾರಿತನ ಮೆರೆದಿದ್ದಾರೆ. ಕೇವಲ ಇಲ್ಲಿ ವಿರೋಧ ಪಕ್ಷಗಳ ಬಾಯಿ ಮುಚ್ಚಿಸುವುದು ಮಾತ್ರವಲ್ಲ. ದೇಶದ ಬಾಯಿ ಮುಚ್ಚಿಸುವ ಪ್ರಯತ್ನ…

Read More

ಧಾರವಾಡ: ಕೇಂದ್ರ ಸರ್ಕಾರದ ಸಂಸದರ ಅಮಾನತು ನಡೆ ಖಂಡಿಸಿ ಕೇಂದ್ರ ಬಿಜೆಪಿ ವಿರುದ್ಧ ಕಪ್ಪು ಬಾವುಟ ಹಿಡಿದು ಧಾರವಾಡದಲ್ಲಿ ಕೈ ನಾಯಕರ ಪ್ರತಿಭಟನೆ ನಡೆಸಿದರು. ಎಐಸಿಸಿ ಹಾಗೂ ಕೆಪಿಸಿಸಿ ಅಧ್ಯಕ್ಷರುಗಳ ಆದೇಶ ಮೇರೆಗೆ ಪ್ರತಿಭಟನೆ ಮೆರವಣಿಗೆಯಾಗಿದ್ದು, ನಗರದ ಡಾ.ಬಾಬಾ ಸಹೇಬ್ ಅಂಬೇಡ್ಕರ್ ಮೂರ್ತಿಯಿಂದ ಜಿಲ್ಲಾ ಕಚೇರಿಯವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿದರು. ಹು-ಧಾ ಮಾಹಾನಗರ ಕಾಂಗ್ರೆಸ್ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮೆರವಣಿಗೆ ಉದ್ದಕ್ಕೂ ಕೇಂದ್ರ ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಕೂಡಲೇ ಕೆಂದ್ರ ಬಿಜೆಪಿ ಸರ್ಕಾರ ಸಂಸದರ ಅಮಾನತು ಹಿಂಪಡೆಯಬೇಕು. ಇಲ್ಲವಾದಲ್ಲಿ ಮತ್ತಷ್ಟು ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.

Read More

ದೊಡ್ಡಬಳ್ಳಾಪುರ: ಟ್ರ್ಯಾಕ್ಟರ್ ಮತ್ತು ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿರುವ ಟಿ.ಬಿ ಸರ್ಕಲ್ ಸಮೀಪ ನಡೆದಿದೆ. ಡಿಕ್ಕಿ ರಭಸಕ್ಕೆ ನೀರಿನ ಟ್ಯಾಂಕರ್ ರಸ್ತೆಯಲ್ಲಿ ಮುಗುಚಿ ಬಿದ್ದದ್ದು, ಸ್ಥಳದಲ್ಲಿ ವಾಹನ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿತ್ತು. ಟ್ಯಾಂಕರ್ ನಲ್ಲಿ ನೀರನ್ನು ತುಂಬಿಕೊಂಡು ಕೋರ್ಟ್ ರಸ್ತೆ ಮುಖಾಂತರ ಬಂದ ಟ್ರ್ಯಾಕ್ಟರ್, ಡಿಕ್ರಾಸ್ ಕಡೆ ಹೋಗಲು ಯೂಟರ್ನ್ ತೆಗೆದುಕೊಳ್ಳುವ ಸಮಯದಲ್ಲಿ ಗೌರಿಬಿದನೂರು ಕಡೆಯಿಂದ ಬಂದ ಲಾರಿ ಏಕಾಏಕಿ ಡಿಕ್ಕಿ ಹೊಡೆದ ರಭಸಕ್ಕೆ ನೀರಿನ ಟ್ಯಾಂಕರ್ ಮುಗುಚಿ ಬಿದ್ದಿದೆ. ಸ್ಳಳಕ್ಕೆ ನಗರ ಠಾಣಾ ಪೊಲೀಸರು ದೌಡಾಯಿಸಿ ವಾಹನ‌ ದಟ್ಟಣೆ ನಿಯಂತ್ರಣ ಮಾಡಿದರು.

Read More

ಚಾಮರಾಜನಗರ: ಕೋವಿಡ್ ಉಲ್ಬಣ ಹಿನ್ನಲೆ ಅಯ್ಯಪ್ಪಸ್ವಾಮಿ ಭಕ್ತರನ್ನು ತಪಾಸಣೆ ಮಾಡುವಂತೆ ಚಾಮರಾಜನಗರ  ಜಿಲ್ಲಾ ಉಸ್ತುವಾರಿ  ಸಚಿವ ಕೆ.ವೆಂಕಟೇಶ್ ಸೂಚನೆ ನೀಡಿದ್ದಾರೆ. ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ಪ್ರವಾಸಿಗರ ಮೇಲೆ ನಿಗಾವಹಿಸುವಂತೆ ಹಾಗೂ, ಕರ್ನಾಟಕದಿಂದ ಕೇರಳ ರಾಜ್ಯದ  ಅಯ್ಯಪ್ಪಸ್ವಾಮಿಗೆ ತೆರಳುವ ಭಕ್ತರನ್ನು ತಪಾಸಣೆ ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೇರಳದಲ್ಲಿ ಕೋವಿಡ್ ಪ್ರಮಾಣ ಹೆಚ್ಚಾಗುತ್ತಿರುವ ಕಾರಣ ಕಠಿಣ ಕ್ರಮಕೈಗೊಳ್ಳುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.  

Read More

ಕಲಬುರಗಿ: ಕೊರೋನಾ ರೂಪಾಂತರಿ ವೈರಸ್ JN1 ಆತಂಕದ ಹಿನ್ನಲೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಸಚಿವ ಶರಣ ಪ್ರಕಾಶ ಪಾಟೀಲ ಭೇಟಿ ನೀಡಿದ್ದಾರೆ.. ಆಸ್ಪತ್ರೆಯಲ್ಲಿ ಕೈಗೊಂಡಿರುವ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದ ಸಚಿವರು DHO ಡಾ.ರಾಜಶೇಖರ್ ಮಾಲಿ ಮತ್ತು ಜಿಮ್ಸ್ ಅಧೀಕ್ಷಕ ಡಾ.ಶಿವಕುಮಾರ್ ಜೊತೆ ಚರ್ಚಿಸಿ ಮಾಹಿತಿ ಪಡೆದ್ರು.

Read More

ಬೆಂಗಳೂರು: ಕಾರ್ಯಕರ್ತರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ಕೊಡದ ಹೊರತು ನಿಗಮ ಮಂಡಳಿ ನೇಮಕ ಬೇಡ ಎಂದು ರಾಹುಲ್ ಗಾಂಧಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಶಾಸಕರ ಪಟ್ಟಿ ಸಮರ್ಥಿಸಿಕೊಳ್ಳಲು ಮುಂದಾದ ಸಿದ್ದರಾಮಯ್ಯ (Siddaramaiah) ಇರಿಸು ಮುರಿಸಿಗೆ ಒಳಗಾಗಿದ್ದಾರೆ. ರಾಹುಲ್ ಗಾಂಧಿ ಮುಂದೆ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಸಹ ಕಾರ್ಯಕರ್ತರ ಪರ ಮಾತನಾಡಿ ಸಿಎಂಗೆ ಮತ್ತಷ್ಟು ಮುಜುಗರ ಉಂಟು ಮಾಡಿದ್ದಾರೆ ಎನ್ನಲಾಗಿದೆ. https://ainlivenews.com/kial-is-one-of-the-most-beautiful-airports-in-the-world/ ಮೊದಲಿನಿಂದಲೂ ಕಾರ್ಯಕರ್ತರ ಪರ ಡಿಕೆಶಿ ಲಾಬಿ‌ ಮಾಡುತ್ತಿದ್ದರು. ಆದರೆ ಸದ್ಯಕ್ಕೆ ಶಾಸಕರಿಗಷ್ಟೆ ಅವಕಾಶ ಕೊಡೋಣ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದರು. ಇಬ್ಬರು ಒಮ್ಮತಕ್ಕೆ ಬಂದ ಮೇಲೆ ದೆಹಲಿಗೆ ಬನ್ನಿ ಎಂದು ಹೈಕಮಾಂಡ್‌ ಹೇಳಿತ್ತು. ಶಾಸಕರಿಗೆ ಪಕ್ಷ ಟಿಕೆಟ್ ನೀಡಿದೆ. ಅವರನ್ನು ಪಕ್ಷ ಶಾಸಕರನ್ನಾಗಿ ಮಾಡಿದೆ. ಪಕ್ಷದ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ ಅಧಿಕಾರ ಕೊಡದಿದ್ದರೆ ಅದು ಲೋಕಸಭೆ ಮೇಲೆ‌ ಪರಿಣಾಮ ಬೀರಲ್ವಾ ಎಂದು ರಾಹುಲ್ ಗಾಂಧಿ ಪ್ರಶ್ನೆ ಮಾಡಿದರು. ಇರುವ 50 ನಿಗಮ…

Read More

ದೊಡ್ಡಬಳ್ಳಾಪುರ: ನಗರದ ಒಕ್ಕಲಿಗರ ಭವನದಲ್ಲಿ ಡಿ.25 ರಂದು 2024ರ ನೂತನ ವರ್ಷದ ದಿನಚರಿ (ಕ್ಯಾಲೆಂಡರ್) ಬಿಡುಗಡೆ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ತಾಲ್ಲೂಕಿನ ನಗರ ಭಾಗದ ಒಕ್ಕಲಿಗರ ಭವನದಲ್ಲಿ ಆಯೋಜಿಸಿದ್ದು, ಕಾರ್ಯಕ್ರಮಕ್ಕೆ ತಾಲ್ಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು . ಪಕ್ಷದ ಮುಖಂಡರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಲು ದೊಡ್ಡಬಳ್ಳಾಪುರ ಜೆಡಿಎಸ್ ಪಕ್ಷ ಸಿದ್ದತೆ ನಡೆಸಲಾಗುತ್ತಿದೆ ಎಂದು ಹೇಳಿದರು. ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಪ್ರಬಲವಾಗಿದ್ದು ವಿಧಾನ ಸಭಾ ಚುನಾವಣಾ ಸಂದರ್ಭಗಳಲ್ಲಿ ಕೆಲ ಸಮಸ್ಯೆಗಳಿಂದ ಹಿನ್ನಡೆಯಾಗುತ್ತಿದೆ ಮುಂದೆ ಈ ರೀತಿಯ ಸಮಸ್ಯೆಗಳು ಎದುರಾಗದಂತೆ ಕಾರ್ಯ ನಿರ್ವಹಿಸಲು ನಮ್ಮ ಪಕ್ಷದ ಮುಖಂಡರು ಮುಂದಾಗಿದ್ದೇವೆ ಎಂದರು. ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಚೈತನ್ಯ ತುಂಬಲು ಹಾಗೂ ತಾಲ್ಲೂಕಿನ ಸಮಸ್ಯೆಗಳ ಪರಿಹಾರಕ್ಕೆ ತಾಲ್ಲೂಕಿನ ಜನತೆಯ…

Read More

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (KIAL) ಟರ್ಮಿನಲ್ 2 (Terminal 2) ವಿಶ್ವದ ಅತ್ಯಂತ ಸುಂದರ ವಿಮಾನ ನಿಲ್ದಾಣಗಳಲ್ಲಿ (Beautiful Airport Terminals in the World) ಒಂದೆಂಬ ಗೌರವಕ್ಕೆ ಪಾತ್ರವಾಗಿದೆ. ಈ ಮೂಲಕ ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ಯುನೆಸ್ಕೋದ ಪ್ರತಿಷ್ಠಿತ ವಾಸ್ತುಶಿಲ್ಪ ಸ್ಪರ್ಧೆಯ ಪ್ರಿಕ್ಸ್ ವರ್ಸೈ (Prix Versailles) ಗೌರವಕ್ಕೆ ಬೆಂಗಳೂರು ವಿಮಾನ ನಿಲ್ದಾಣ (Bengaluru Airport) ಪಾತ್ರವಾಗಿದೆ. ಟಿ2ನಲ್ಲಿರುವ ಒಳಾಂಗಣ ವಿನ್ಯಾಸಕ್ಕಾಗಿ ಈ ವರ್ಷದ ಗೌರವ ಸಿಕ್ಕಿದೆ. ಅಷ್ಟೇ ಅಲ್ಲದೇ ಈ ಗೌರವಕ್ಕೆ ಪಾತ್ರವಾದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಯೂ ಈಗ ಕೆಐಎಎಲ್‌ಗೆ ಸಿಕ್ಕಿದೆ. ಪ್ಯಾರಿಸ್‌ ಮೂಲದ ಪ್ರಿಕ್ಸ್ ವರ್ಸೈಲ್ಸ್ 2015 ರಲ್ಲಿ ಸ್ಥಾಪಿಸಲಾಗಿದ್ದು ವಿಮಾನ ನಿಲ್ದಾಣಗಳು, ಶಾಪಿಂಗ್ ಮಾಲ್‌ಗಳು, ಕ್ಯಾಂಪಸ್‌ಗಳು ಮತ್ತು ಪ್ರಯಾಣಿಕರ ನಿಲ್ದಾಣಗಳು ಸೇರಿದಂತೆ ಹಲವಾರು ವಿಭಾಗಗಳಲ್ಲಿ ಪ್ರಶಸ್ತಿಯನ್ನು ನೀಡುತ್ತದೆ. ಕಳೆದ ವರ್ಷದ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಟರ್ಮಿನಲ್‌ 2 ಉದ್ಘಾಟಿಸಿದ್ದರು. ಈ ವರ್ಷದ ಜನವರಿ 15 ದಿಂದ…

Read More