Author: AIN Author

ಬೆಂಗಳೂರು:  ಕೋಲಾರ ಜಿಲ್ಲೆಯ ಯಲುವಳ್ಳಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ  ಶಾಲಾ ಮಕ್ಕಳ ಕೈಲಿ ಮಲಗುಂಡಿ ಕ್ಲೀನಿಂಗ್‌ ಮಾಡಿಸಿದ ಬೆನ್ನಲ್ಲೇ  ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಪ್ರಕಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು,  ಸದ್ಯ ಶಾಲಾ ಮಕ್ಕಳು ಶೌಚಾಲಯದಲ್ಲಿ ಆ್ಯಸಿಡ್​ ಬಾಟಲ್ ಮತ್ತು ಬ್ಲೀಚಿಂಗ್​ ಪೌಡರ್ ಹಿಡಿದು ಸ್ವಚ್ಚಗೊಳಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕ ವಲಯಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ. ಇಂತಹ ಶಿಕ್ಷಕರನ್ನು ಶೀಘ್ರವೇ ಅಮಾನತ್ತು ಮಾಡುವಂತೆ ಪೋಷಕರ ಒತ್ತಾಯ ಮಾಡಿದ್ದಲ್ಲದೇ  ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಹಾಗೆ ಸರ್ಕಾರ ಮಕ್ಕಳ ಭವಿಷ್ಯದ ಕಡೆ ಗಮನ ಹರಿಸಬೇಕೆಂದು ಒತ್ತಾಯ ಕೂಡ ಮಾಡಿದರು. ಬೆಂಗಳೂರು ಉತ್ತರ ತಾಲೂಕಿನ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು  ಶಾಲೆಯ ಮಕ್ಕಳ ಕೈಲಿ ಪೊರಕೆ ಕೊಟ್ಟು ಶೌಚಾಲಯ ಕ್ಲೀನಿಂಗ್‌ ಹಾಗೂ  ನಾಲ್ಕೈದು ಮಕ್ಕಳ‌ ಕೈಲಿ ಶೌಚಾಲಯ ಕ್ಲೀನ್ ಮಾಡಿಸಿದ ಶಾಲಾ ಆಡಳಿತ ಮಂಡಳಿ ಹಾಗೆ ಮಕ್ಕಳ ಕೈಲಿ…

Read More

ಕ್ರಿಸ್ಮಸ್‌ ಮತ್ತು ಹೊಸ ವರ್ಷಕ್ಕೆ ಮುನ್ನವೇ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಎಲ್‌ಪಿಜಿ ಸಿಲಿಂಡರ್‌ (Cylinder) ಬೆಲೆ ಭಾರೀ ಇಳಿಕೆಯಾಗಿದೆ. ತೈಲ ಕಂಪನಿಗಳು (Oil Marketing Companies) ವಾಣಿಜ್ಯ ಬಳಕೆಯ (Commercial LPG) 19 ಕೆಜಿ ಸಿಲಿಂಡರ್‌ ಬೆಲೆ 39.50 ರೂ. ಇಳಿಕೆ ಮಾಡಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. ಪ್ರಸ್ತುತ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್‌ಗೆ 1,757.50 ರೂ. ದರವಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಪ್ರತಿ ತಿಂಗಳ ಮೊದಲ ದಿನ ಎಲ್‌ಪಿಜಿ ಸಿಲಿಂಡರ್‌ ಬೆಲೆ ಸಾಧಾರಣವಾಗಿ ಪರಿಷ್ಕರಣೆಗೊಳ್ಳುತ್ತವೆ. ಪ್ರಸ್ತುತ ದಿನ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 905.50 ರೂ. ಇದೆ. ಉಜ್ವಲ ಯೋಜನೆ ಹೊಂದಿದ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್‌ಗೆ 300 ರೂ. ಸಬ್ಸಿಡಿ ಸಿಗುತ್ತಿದೆ. ಉಜ್ವಲ ಯೋಜನೆ ಅಡಿ ವರ್ಷಕ್ಕೆ ಒಟ್ಟು 12 ಸಿಲಿಂಡರ್‌ಗಳಿಗೆ ಈ ಸಬ್ಸಿಡಿ ಹಣ ನೀಡಲಾಗುತ್ತದೆ.

Read More

ಬೆಂಗಳೂರು:  ಕೊರೊನಾ ರಾಜ್ಯದಲ್ಲಿ ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂಬ ತಜ್ಞರ ಸಲಹೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿರುವ ಸಭೆಯಾಗಿದ್ದು   ಹೊಸ ವರ್ಷದ ಆರ್ಚರಣೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ಆಗದಂತೆ ನಿಗಾ ವಹಿಸುಬ ಬಗ್ಗೆ ಚರ್ಚೆ ಹಾಗೂ ಆರೋಗ್ಯ ಇಲಾಖೆಯ ಸೂಚನೆಯಂತೆ ಕೋವಿಡ್ ನಿಯಂತ್ರಣದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ. ಸಭೆಯಲ್ಲಿ ಡಿಜಿಐಜಿಪಿ ಅಲೋಕ್ ಮೋಹನ್, ಬೆಂಗಳೂರು ಕಮಿಷನರ್ ದಯಾನಂದ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತಿ

Read More

ಬೆಳಗಾವಿ: ಅಪರಿಚಿತನೋರ್ವ ಕರ್ನಾಟಕ-ಮಹಾರಾಷ್ಟ್ರ ಸಾರಿಗೆ ಬಸ್​​ಗಳ ಮೇಲೆ ಕಲ್ಲೆಸಿದ್ದು, ಓರ್ವ ಪ್ರಯಾಣಿಕನಿಗೆ ಗಾಯವಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೆಳಗಾವಿ ಎಸ್‌ಪಿ ಭೀಮಾಶಂಕರ ಗುಳೇದ್ ದೌಡಾಯಿಸಿ ಪರಿಶೀಲನೆ ಮಾಡಿದರು. https://ainlivenews.com/mutant-corona-is-worried-in-the-state/ ಬೆನಕನಹೊಳಿ ಗ್ರಾದ ಬಳಿ ಕೆಎ-42, F-962 ಸಂಖ್ಯೆಯ NWKRTC ಹುಕ್ಕೇರಿ – ಬೆಳಗಾವಿ ತಡೆರಹಿತ ಬಸ್​ ಮೇಲೆ ಕಲ್ಲೆಸಿದಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕ ರಮೇಶ್ ಚಿವಟೆ(55) ಎಂಬುವರಿಗೆ ಗಾಯವಾಗಿದೆ. ಇನ್ನು ಸ್ಥಳಕ್ಕೆ ಎಸ್‌ಪಿ ಭೀಮಾಶಂಕರ ಗುಳೇದ್ ಆಗಮಿಸಿದ್ದುಮ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು: 2024ರ ಜನವರಿಯಲ್ಲಿ ಕೊರೊನಾ ರಾಜ್ಯದಲ್ಲಿ ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂಬ ತಜ್ಞರ ಸಲಹೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ಸಿದ್ಧತೆಗಳನ್ನು ಮಾಡಿಕೊಂಡಿದೆ. ಹೌದು,ದೊಡ್ಡ ಪ್ರಮಾಣದಲ್ಲಿ ಸಾವು ನೋವು ಸಂಭವಿಸಿದರೆ ಕಳೆದ ಬಾರಿಯಂತೆ ಚಿತಾಗಾರಗಳ ಸಮಸ್ಯೆ ಎದುರಾಗಬಾರದು ಎಂಬ ಕಾರಣಕ್ಕೆ ನಾಲ್ಕು ಚಿತಾಗಾರಗಳನ್ನು ಮೀಸಲಿಡಲು ರಾಜ್ಯಸರ್ಕಾರ ಮುಂದಾಗಿದೆ. 4 ಚಿತಾಗಾರ ಮೀಸಲು ಆಕ್ಸಿಜನ್‌ ಪ್ಲ್ಯಾಂಟ್‌ಗಳನ್ನು ನಿರ್ವಹಿಸಿ ಸುಸ್ಥಿತಿಯಲ್ಲಿಡುವುದು, ಸೋಂಕಿತರನ್ನು ಚಿಕಿತ್ಸೆಗೆ ಕರೆದೊಯ್ಯಲು ವಾರ್ಡ್ ಗೆ ಎರಡು ಅಥವಾ ಮೂರು ಆಂಬ್ಯುಲೆನ್ಸ್ ಗಳ ವ್ಯವಸ್ಥೆ ಮಾಡುವುದು, ಮೃತಪಟ್ಟರನ್ನ ಅಂತ್ಯಸಂಸ್ಕಾರದ ಸ್ಥಳಕ್ಕೆ ತೆಗೆದುಕೊಂಡು ಹೋಗಲು ವಲಯಕ್ಕೊಂದು ಆ್ಯಂಬುಲೆನ್ಸ್.. ಜತೆಗೆ ನಗರದ ನಾಲ್ಕು ಚಿತ್ತಾಗಾರಗಳನ್ನು ಕೊರೊನಾ ಮೃತಪಟ್ಟರಿಗೆ ಮೀಸಲು ನಿರ್ಧರಿಸಲಾಗಿದೆ. ಯಾವ್ಯಾವ ಚಿತಾಗಾರ ಮೀಸಲು ಚಿತಾಗಾರಗಳು ಯಾವುದು ಎನ್ನುವುದು ಕೂಡಾ ನಿರ್ಧಾರವಾಗಿದ್ದು, ಬನಶಂಕರಿ ಚಿತಾಗಾರ, ಮೇಡಿಅಗ್ರಹಾರ, ಹೆಬ್ಬಾಳ, ಸುಮ್ಮನಹಳ್ಳಿ ಚಿತಾಗಾರ ಕೋವಿಡ್‌ನಿಂದ ಮೃತಪಟ್ಟವರಿಗೆ ಮೀಸಲು ಇಡಲು ನಿರ್ಧರಿಸಲಾಗಿದೆ. ಕಳೆದ ಬಾರಿ ಚಿತಾಗಾರ ಇಲ್ಲದೆ ಅಂತ್ಯಸಂಸ್ಕಾರಕ್ಕೆ ಅಲೆದಾಡಿದ ಕಾರಣಕ್ಕೆ ಈ ಬಾರಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಪ್ರತಿ ವಲಯದಲ್ಲೂ ವಾರ್‌ ರೂಂ…

Read More

ಹುಬ್ಬಳ್ಳಿ: ವೈಯಕ್ತಿಕ ಕೆಲಸಗಳಿಗಾಗಿ ನಾನು ದೆಹಲಿಗೆ ಹೋಗಿದ್ದೆ, ಯಾವುದೇ ಹೈಕಮಾಂಡ್ ನಾಯಕರನ್ನು ಭೇಟಿ ಆಗಿಲ್ಲ,  ನನಗಿಂತ ಒಂದು ದಿನ ಮುಂಚೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದರು. ಅದಾದ ನಂತರ ನಾನು ಹೋಗಿದ್ದೆ, ಅವರು ಪ್ರಧಾನಿಗಳನ್ನು ಭೇಟಿಯಾಗಲು ಹೋಗಿದ್ದರು. ನಾನು ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದೆ.  ಈ ವೇಳೆ ಯಾವುದೇ ನಾಯಕರನ್ನು ಭೇಟಿಯಾಗಿಲ್ಲ. ಯಾವುದೇ ಚುನಾವಣೆಯ ವಿಚಾರವನ್ನು ಚರ್ಚಿಸಿಲ್ಲವೆಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಧಾರವಾಡ ಆಕಾಂಕ್ಷಿಯಾಗಿ ಶೆಟ್ಟರ್ ಹೆಸರು ಶಿಫಾರಸ್ಸು ವಿಚಾರ, ಇನ್ನು ಯಾರ ಹೆಸರನ್ನು ಕಳುಹಿಸಿಲ್ಲ. ಅದು ಹೇಗೆ ನನ್ನದೇ ಒಂದು ಹೆಸರು ಕಳಿಸಿದ್ದಾರೆ ಅಂತ ಹೇಳ್ತೀರಿ..? ನಿಮಗೆ ಆ ಪಟ್ಟಿ ಕೊಟ್ಟವರು ಯಾರು..?ಮೊನ್ನೆಯಷ್ಟೇ ವೀಕ್ಷಕರ ಸಭೆಯಾಗಿದೆ. ಟಿಕೆಟ್ ಆಕಾಂಕ್ಷಿಗಳ ಶಾರ್ಟ್ ಲಿಸ್ಟ್ ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಇಷ್ಟರ ನಡುವೆಯೇ ನನ್ನದೊಂದೇ ಹೆಸರು ಕಳಿಸಿದ್ದಾರೆ ಅಂತ ಹೇಳ್ತಿದ್ದೀರಿ.  ಸಿಎಂ ಸಮ್ಮುಖದಲ್ಲಿಯೇ ನಾನು ಚುನಾವಣೆಗೆ ನಿಲ್ಲಲ್ಲ ಅಂತ ಹೇಳಿದ್ದೇನೆ. ಕಾಂಗ್ರೆಸ್ ನಿಂದ ಯಾರನ್ನೇ…

Read More

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿಲ್ಲ ಆದ್ರೂ ಪರಸ್ತಿತಿ ನಿಭಾಯಿಸಲು ಎಲ್ಲ ರೀತಿಯಿಂದ ಸಜ್ಜಾಗಿದ್ದೇವೆ ಅಂತ ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.. ಸೋಂಕಿತರು ಕಂಡುಬಂದರೆ ಪ್ರತ್ಯೇಕ ವಾರ್ಡ್ ಜೊತೆಗೆ ಆಕ್ಸಿಜನ್ ವ್ಯವಸ್ಥೆ ಮಾಡಲು ಸನ್ನದ್ಧವಾಗಿದ್ದೇವೆ ಅಂತ DHO ತಿಳಿಸಿದ್ದಾರೆ.. ಮಾತ್ರವಲ್ಲ ಸೋಂಕಿತರ ಪರೀಕ್ಷೆ ಮಾಡಲು ಕೊವಿಡ್ ಟೆಸ್ಟ್ ಕಿಟ್ ಕಳಿಸುವಂತೆ ಈಗಾಗಲೇ ಮೇಲಾಧಿಕಾರಿಗಳಿಗೆ ಮನವಿ ಮಾಡಿದ್ದೇವೆ ಅಂದ್ರು..

Read More

ಚಾಮರಾಜನಗರ‌: ಬರ ಪರಿಸ್ಥಿತಿ ನಿರ್ವಹಣಾ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಚತೆಯಲ್ಲಿ ಸಭೆ ಏರ್ಪಡಿಸಲಾಗಿದೆ. ಜಿಲ್ಲಾ ವಿಪತ್ತು ಪ್ರಾಧಿಕಾರದವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಸಭೆಯಾಗಿದ್ದು, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಬರ ಪರಿಸ್ಥಿತಿ ನಿರ್ವಹಣಾ ಕುರಿತು ಪ್ರಗತಿ ಪರಿಶೀಲನಾ ಸಭೆಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಬರದ ಬಗ್ಗೆ ಪಟ್ಟಿ  ವಿವರ ಹಾಗೂ  ಮಾಹಿತಿ ನೀಡಿದ  ಸರ್ಕಾರಿ ಅಧಿಕಾರಿಗಳು, ಸಭೆಯು  ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅಧ್ಯಕ್ಷತೆಯ ಸಂದರ್ಭದಲ್ಲಿ  ಶಾಸಕ ಎ.ಆರ್.ಕೃಷ್ಣಮೂರ್ತಿ ಜಿಲ್ಲಾಧಿಕಾರಿ ಶಿಲ್ಪಾನಾಗ್, ಎಸಪಿ  ಜಿ.ಪಂ.ಸಿ.ಇ.ಓ ಆನಂದ ಪ್ರಕಾಶ ಮೀನಾ ಬಿ.ಆರ್.ಟಿ. ದೀಪಾ ಕಾಂಟ್ರ್ಯಾಕ್ಟರ್ ಡಿಸಿಎಫ ಸಂತೋಷ್  ಎಸಿ ಮಹೇಶ್ ತಜಸೀಲ್ದಾರ್ ಮಂಜುಳಾ  ಜಿಲ್ಲಾ ಮಟ್ಟದ  ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು..

Read More

ಕಲಬುರಗಿ: ಭೀಕರ ಬರಗಾಲ ಎದುರಿಸುತ್ತಿರುವ ಬಿಸಿಲೂರು ಕಲಬುರಗಿ ರೈತರಿಗೆ ಇದೀಗ ಬ್ಯಾಂಕ್  ನೋಟೀಸ್ ನೀಡಿದ್ದು ಸಾಲ ಮರುಪಾವತಿ ಮಾಡುವಂತೆ ಸೂಚಿಸಿದೆ.. ಚಿಂಚೋಳಿ ತಾಲೂಕಿನ ರಟಕಲ್ ಸುತ್ತಮುತ್ತಲಿನ ರೈತರಿಗೆ  SBI ಮತ್ತು ಗ್ರಾಮೀಣ ಬ್ಯಾಂಕುಗಳು ನೀಡಿರುವ ನೋಟೀಸ್ ಗೆ ಅನ್ನದಾತರು ಆತಂಕಗೊಂಡಿದ್ದಾರೆ. ಈಗಾಗಲೇ ನೀವು ಪಡೆದಿರುವ ಸಾಲಕ್ಕೆ ಬಡ್ಡಿ ಹೆಚ್ಚಾಗಿದೆ ಹೀಗಾಗಿ ಒನ್ ಟೈಂ ಸೆಟ್ಲಮೆಂಟ್ ಮಾಡೋಣ ಸಾಲ ಪಾವತಿಸಲು ಬನ್ನಿ ಅಂತ ಪತ್ರದಲ್ಲಿ ಉಲ್ಲೇಖಿಸಲಾಗಿದೆ..ಈ ಬಗ್ಗೆ ಆಕ್ರೋಶ ಹೊರಹಾಕಿರುವ ಅನ್ನದಾತರು ಸಾಲ ಕಟ್ತೇವೆ ಆದ್ರೆ ಈಗ ಆಗಲ್ಲ ಏನ್ ಮಾಡ್ತೀರೋ ಮಾಡ್ಕಳ್ಳಿ ಅಂತ ಕಡ್ಡಿ ಮುರದಂಗೆ ಹೇಳಿದ್ದಾರೆ.

Read More

ಚಾಮರಾಜನಗರ: ನೆರೆಯ ಕೇರಳದಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕೇರಳದಿಂದ ಬರುವ ಪ್ರತಿಯೊಬ್ಬ ಪ್ರಯಾಣಿಕರನ್ನು ಆರೋಗ್ಯ ಇಲಾಖೆಯಿಂದ ತಪಾಸಣೆಗೆ ಗುರಿಪಡಿಸಲಾಗುತ್ತಿದೆ. ಕೊರೊನಾ ವೈರಸ್ ಹರಡದಂತೆ ಜಾಗೃತಿ ಮೂಡಿಸಲು ಯತ್ನಿಸಲಾಗುತ್ತಿದ್ದು, https://ainlivenews.com/can-diabetics-eat-dates-here-is-useful-information/  ಕೇರಳಕ್ಕೆ ಸನಿಹದಲ್ಲಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯದ ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ ವಹಿಸಿಲಾಗಿದೆ. ಮಾರಕ ಕೊರೊನಾ ವೈರಸ್ ಕೇರಳದ ಮೂಲಕ ಭಾರತಕ್ಕೂ ಕಾಲಿಟ್ಟಿದೆ. ಕೇರಳದಲ್ಲಿ ಕೊರೋನಾ ರೂಪಾಂತರ  Jn1 ಪತ್ತೆ ಹಾಗೂ ಸೋಂಕಿಗೆ ಇಬ್ಬರು ಬಲಿ ಹಿನ್ನಲೆ ಕಟ್ಡೆಚ್ಚರ ವಹಿಸಲಾಗಿದೆ.

Read More