Author: AIN Author

ಬೆಂಗಳೂರು:- ಕಳೆದ ಕೆಲವು ದಿನಗಳಿಂದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಅಲ್ಲಲ್ಲಿ ಮಳೆಯಾಗಿತ್ತು. ಆದರೆ ಇದೀಗ ಮಳೆ ದೂರವಾಗಿತ್ತು. ಚಳಿ ಆರಂಭವಾಗಿದೆ. ಡಿಸೆಂಬರ್ 21ರ ಗುರುವಾರ ಬೆಳಗ್ಗೆ 8.30ರ ವರೆಗೆ ದಾಖಲಾಗಿರುವ ವರದಿಯ ಪ್ರಕಾರ ರಾಜ್ಯಾದ್ಯಂತ ಒಣ ಹವೆ ಮುಂದುವರಿಸಿದೆ. ನಾಳೆ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿಯಲ್ಲೂ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ. ಹವಾಮಾನ ವರದಿಯ ಪ್ರಕಾರ ಕರ್ನಾಟಕದಲ್ಲಿ ಚಂಡಮಾರುತ ಸೇರಿದಂತೆ ಯಾವುದೇ ರೀತಿಯ ಮಳೆಯ ಭೀತಿ ಇಲ್ಲ. ಪರಿಣಾಮವಾಗಿ ಭಾರಿ ಮಳೆ, ಗುಡುಗು ಸಹಿತ ಮಳೆ ಹಾಗೂ ಮೀನುಗಾರರಿಗೆ ಯಾವುದೇ ರೀತಿಯ ಮುನ್ನೆಚ್ಚರಿಕೆಯೂ ಇಲ್ಲ ಅಂತ ಹೇಳಿದೆ. ಇವತ್ತು ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಬೆಳಗಿನ ಜಾನ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 18…

Read More

ಯುರೋಪ್ ಖಂಡ ಮತ್ತು ಗ್ರೀನ್ ಲ್ಯಾಂಡ್ ಮಧ್ಯೆ ಇರುವ ಅಟ್ಲಾಂಟಿಕ್ ಮಹಾಸಾಗರದಲ್ಲಿ ಐಸ್‍ಲ್ಯಾಂಡ್ ದ್ವೀಪವಿದೆ. ಪ್ರಪಂಚದ 18ನೇ ದೊಡ್ಡ ದ್ವೀಪ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಐಸ್‍ಲ್ಯಾಂಡ್ ತನ್ನ ಪ್ರಕೃತಿ ಸೌಂದರ್ಯದಿಂದ ಪ್ರವಾಸಿಗರನ್ನು ಸೆಳೆಯುತ್ತಿದೆ. ಐಸ್‍ಲ್ಯಾಂಡ್‍ನ ಜಿಡಿಪಿಯಲ್ಲಿ ಶೇ.5ರಷ್ಟು ಪಾಲನ್ನು ಪಡೆದುಕೊಂಡಿರುವುದು ಪ್ರವಾಸೋದ್ಯಮದ ಹೆಗ್ಗಳಿಕೆ. ಕಳೆದ 15 ವರ್ಷದಲ್ಲಿ ಪ್ರವಾಸೋದ್ಯಮ ಉದ್ಯಮ ಭಾರೀ ಬೆಳವಣಿಗೆಯಾಗಿದ್ದು ಜುಲೈ- ಸೆಪ್ಟೆಂಬರ್ ನಡುವಿನ ಬೇಸಿಗೆಯ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಐಸ್‍ಲ್ಯಾಂಡಿಗೆ ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಐಸ್‍ಲ್ಯಾಂಡ್ ನಲ್ಲಿ ಅಂಥ ವಿಶೇಷತೆ ಏನಿದೆ? ನೀವು ಯಾಕೆ ತೆರಳಬೇಕು ಎನ್ನುವುದಕ್ಕೆ ಟಾಪ್ 10 ಕಾರಣಗಳನ್ನು ಇಲ್ಲಿ ನೀಡಲಾಗಿದೆ. ನೀವು ಗಮನಿಸಿರಬಹುದು ಭಾರತದಲ್ಲಿ ಮಧ್ಯಾಹ್ನದ ವೇಳೆ ಸೂರ್ಯ ನಡು ನೆತ್ತಿಯಲ್ಲಿ ಇರುತ್ತಾನೆ. ಆದರೆ ಐಸ್‍ಲ್ಯಾಂಡ್‍ನಲ್ಲಿ ಸೂರ್ಯ ನಡು ನೆತ್ತಿಗೆ ಬರೋದಿಲ್ಲ. ಉತ್ತರಧ್ರುವದ ಹತ್ತಿರ ಐಸ್‍ಲ್ಯಾಂಡ್ ಇರುವ ಕಾರಣ ಅಲ್ಲಿ ಸೂರ್ಯನ ಬೆಳಕು ಅಷ್ಟಾಗಿ ಬೀಳುವುದಿಲ್ಲ. ಗರಿಷ್ಟ ಅಂದ್ರೆ ಬೆಳಗ್ಗೆ 9 ಗಂಟೆಗೆ ಭಾರತದಲ್ಲಿ ಸೂರ್ಯ ಹೇಗೆ ಕಾಣುತ್ತಾನೋ ಅದೇ…

Read More

ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಲಿರುವ ಕಾಂತಾರ ಚಾಪ್ಟರ್ 1 (Kantara 1) ಸಿನಿಮಾಗೆ ಕಲಾವಿದರು (Artists) ಬೇಕಾಗಿದ್ದಾರೆ ಎಂದು ಚಿತ್ರತಂಡ ಪೋಸ್ಟರ್ ರಿಲೀಸ್ ಮಾಡಿತ್ತು. ಹಲವಾರು ಪಾತ್ರಗಳು ಇರುವುದರಿಂದ ಕಲಾವಿದರ ವಯಸ್ಸನ್ನೂ ನಿಗದಿ ಪಡಿಸಿ, ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅದಕ್ಕೆ ಸಾಕಷ್ಟು ರೆಸ್ಪಾನ್ಸ್ ಬಂದಿದೆ. ಚಿತ್ರತಂಡವೇ ಹೇಳಿಕೊಂಡಂತೆ 25 ಸಾವಿರಕ್ಕೂ ಹೆಚ್ಚು ಜನರು ಅರ್ಜಿ ಸಲ್ಲಿಸಿದ್ದಾರೆ. ರಿಕ್ ಪಾರ್ಟಿ ಮಾಡಿದಾಗಲೂ ಆಡಿಷನ್ ಗೆ ಚಿತ್ರತಂಡ ಕಾಲ್ ಮಾಡಿತ್ತು. ಆಗ ಎರಡು ಸಾವಿರಕ್ಕೂ ಹೆಚ್ಚು ಕಲಾವಿದರು ಅರ್ಜಿ ಸಲ್ಲಿಸಿದ್ದರು. ಕಾಂತಾರ 1 ಚಿತ್ರಕ್ಕೆ ನಿರೀಕ್ಷೆಗೂ ಮೀರಿ ಜನರು ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಚಿತ್ರತಂಡವು ಅದನ್ನು ಪರಿಶೀಲಿಸುವ ಕೆಲಸವನ್ನು ನಡೆಸಿದೆ. ಸಾಮಾನ್ಯ ಕಲಾವಿದರು ಮಾತ್ರವಲ್ಲ, ಈಗಾಗಲೇ ಸಾಕಷ್ಟು ಚಿತ್ರಗಳಲ್ಲಿ ನಟಿಸಿರುವ ನಾಯಕಿಯರು ಅವಕಾಶ ಕೇಳಿದ್ದಾರೆ ಎನ್ನವುದು ವಿಶೇಷ. ಕಾಂತಾರ ಸಿನಿಮಾದಲ್ಲಿ ನಟಿಸೋಕೆ ಆಸೆ ಇರುವುದಾಗಿ ಪಾಯಲ್ ರಜಪೂತ್ (Payal Rajput) ಮತ್ತು ಕನ್ನಡದ ನಟಿ ಕಾರುಣ್ಯ ರಾಮ್ (Karunya Ram)…

Read More

ಕೋಳಿ ಸಾಕಾಣಿಕೆ ಮಾಡಬೇಕು ಎನ್ನುವ ಪ್ರತಿಯೊಬ್ಬರಿಗೂ ಉಪಯುಕ್ತವಾಗುವ ಸೂಕ್ತ ಸಲಹೆಗಳನ್ನು ಇಲ್ಲಿ ನೀಡಲಾಗಿದೆ. ಶುದ್ಧ ಪಾತ್ರೆಯಲ್ಲಿ ಯಾವಾಗಲೂ ಕೋಳಿಗಳಿಗೆ ಶುದ್ಧ ನೀರನ್ನು ಒದಗಿಸಬೇಕು. ಕೋಳಿ ಆಹಾರವನ್ನು ಒಣಗಿದ ಹಾಗೂ ಸ್ವಚ್ಛ ಸ್ಥಳದಲ್ಲಿ ಇಡಬೇಕು. ಮೇವಿಣಿಕೆಗಳನ್ನು ಮತ್ತು ನೀರುಣಿಕೆಗಳನ್ನು ಪ್ರತಿದಿನ ಶುದ್ಧ ನೀರಿನಿಂದ ತೊಳೆದು ಒಣಗಿಸಿದ ನಂತರ ಆಹಾರವನ್ನು ನೀಡಬೇಕು. ಕೋಳಿ ಮನೆಯನ್ನು ಪ್ರತಿದಿನ ಸ್ವಚ್ಛವಾಗಿ ಇಡಬೇಕು. ನೆಲ ಮತ್ತು ಗೋಡೆಯ ಸುತ್ತಮುತ್ತ ಸುಣ್ಣವನ್ನು ಹಾಕಬೇಕು. ಯಾವ ಕೋಳಿಗಳು ರೋಗಕ್ಕೆ ತುತ್ತಾಗುವ ಸಾಧ್ಯತೆ ಇದೆ ಅಂತಹ ಕೋಳಿಗಳನ್ನು ಬೇರ್ಪಡಿಸಬೇಕು. ಕೋಳಿಗಳ ಜೊತೆಯಲ್ಲಿ ಬೇರೆ ಪ್ರಾಣಿಗಳನ್ನು ಸಾಕಬಾರದು. ಜಂತುನಾಶಕ ಔಷಧಿಯನ್ನು ಲಸಿಕೆ ಹಾಕುವ 12 ರಿಂದ15 ದಿನಗಳ ಮುಂಚೆ ನೀಡಬೇಕು. ಲಸಿಕೆಯನ್ನು ವೇಳಾ ಪಟ್ಟಿಯಂತೆ ಹಾಕಿಸಬೇಕು. ಕೋಳಿಗಳಲ್ಲಿ ಪ್ರಮುಖವಾಗಿ ಕಂಡು ಬರುವ ರೋಗಗಳು ಮತ್ತು ಅವುಗಳ ನಿರ್ವಹಣೆ: ಕೋಳಿಗಳಲ್ಲಿ ಬರುವ ಮುಖ್ಯ ರೋಗಗಳೆಂದರೆ, ರಾಣಿಖೇತ, ಸಿಡುಬು ರೋಗ, ಲಿಂಪಾಯ್ಡ್ ಲ್ಯುಕೋಸಿಸ್, ರಕ್ತಬೇಧಿ. ರೋಗ ಬಂದ ಕೋಳಿಗಳು ತೋರುವ ಸಾಮಾನ್ಯ ಲಕ್ಷಣಗಳೆಂದರೆ ಆಹಾರ ತಿನ್ನದೆ ಚುರುಕಾಗಿರದೆ…

Read More

ಹೊಸದಿಲ್ಲಿ :- ಭಾರತದಲ್ಲಿ “ಸುರಕ್ಷಿತ ಸ್ವರ್ಗ’ವನ್ನೇ ಕಂಡುಕೊಂಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬೇರೆ ರಾಷ್ಟ್ರಗಳಲ್ಲಿ ಕಿರುಕುಳವನ್ನು ಎದುರಿಸುತ್ತಿದ್ದರೂ, ಮುಸ್ಲಿಮರು ಭಾರತದಲ್ಲಿ “ಸುರಕ್ಷಿತ ಸ್ವರ್ಗ’ವನ್ನೇ ಕಂಡುಕೊಂಡಿದ್ದಾರೆ. ಇದು ಭಾರತದ ಸಮಾಜವು ಯಾವುದೇ ಧಾರ್ಮಿಕ ಅಲ್ಪಸಂಖ್ಯಾಕರ ಬಗ್ಗೆ ತಾರತಮ್ಯ ಹೊಂದಿಲ್ಲ ಎಂಬುದಕ್ಕೆ ನಿದರ್ಶನ’ ಎಂದರು. ದೇಶದಲ್ಲಿ ಸೂಕ್ಷ್ಮ ಅಲ್ಪಸಂಖ್ಯಾಕ ವರ್ಗವೆಂದು ಗುರುತಿ ಸಲಾಗಿರುವ ಪಾರ್ಸಿಗಳ ಆರ್ಥಿಕ ಯಶಸ್ಸಿನ ಉದಾಹರಣೆ ನೀಡಿದರು. ಅಲ್ಲದೇ, ಯಾವುದೇ ಧಾರ್ಮಿಕ ಅಲ್ಪಸಂಖ್ಯಾಕರಿಗೂ ಇಲ್ಲಿನ ಸಮಾಜ ತಾರತಮ್ಯ ತೋರುತ್ತಿಲ್ಲ. ಮುಸ್ಲಿಮರು ಬೇರೆ ರಾಷ್ಟ್ರಗಳಿಗಿಂತಲೂ ಹೆಚ್ಚಿನ ಸುರಕ್ಷಿತ ಸ್ವರ್ಗವನ್ನು ಭಾರತದಲ್ಲಿ ಕಂಡುಕೊಂಡಿದ್ದಾರೆ. ಸಂತೋಷವಾಗಿ, ಸಮೃದ್ಧವಾಗಿ ಜೀವಿಸುತ್ತಿದ್ದಾರೆ ಎಂದು ಪ್ರಧಾನಿ ಪ್ರತಿಪಾದಿಸಿದ್ದಾರೆ.

Read More

ಬೆಂಗಳೂರು:- ಒಬ್ಬ ಅಥವಾ ಹೆಚ್ಚಿನ ಪತ್ನಿಯರು ಕುಟುಂಬ ಪಿಂಚಣಿ ಪಡೆಯಲು ಅರ್ಹರು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮೊದಲನೇ ಪತ್ನಿ ಮತ್ತು ಆಕೆಯ ಪುತ್ರಿಯರಿಗೆ ಶೇ.50 ಕುಟುಂಬ ಪಿಂಚಣಿ ಮಂಜೂರು ಮಾಡುವಂತೆ ನೈಋತ್ಯ ರೈಲ್ವೆಗೆ ಆದೇಶಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಾವನ್ನಪ್ಪಿದ ರೈಲ್ವೆ ಉದ್ಯೋಗಿಯ 2ನೇ ಪತ್ನಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಭಾಗಶಃ ಪುರಸ್ಕರಿಸದೆ. ಪಿಂಚಣಿ ಪಾವತಿಸಲು ಯಾವೆಲ್ಲ ನಿಯಮಗಳು ಅನ್ವಯಿಸಲಿವೆಯೋ ಅವುಗಳನ್ನು ಅನ್ವಯಿಸಲಾಗುವುದು. ಉದ್ಯೋಗಿಯ ಹಕ್ಕುಗಳು ಅಥವಾ ಅವರ ಕುಟುಂಬವು ಪಿಂಚಣಿ ನಿಯಮವನ್ನು ಅವಲಂಬಿಸಿರುತ್ತದೆ. ನಿಯಮಗಳು ಇಲ್ಲದಿದ್ದರೆ ಪಿಂಚಣಿ ಇಲ್ಲ. ಒಂದೊಮ್ಮೆ ನಿಯಮಗಳು ಇದ್ದರೆ ಪಿಂಚಣಿಯನ್ನು ನಿಯಮದ ಪ್ರಕಾರ ಪಾವತಿಸಬೇಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Read More

ಎಲ್ಲರ ಮನೆಯಲ್ಲಿ ಬಾಳೆ ಹಣ್ಣು ಇದ್ದೆ ಇರುತ್ತದೆ. ಊಟ ಆದ ಮೇಲೆ ತಿಂದು ಅದರ ಸಿಪ್ಪೆಯನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ. ಆದರೆ ಬಾಳೆಹಣ್ಣಿನಲ್ಲಿ ಇರುವಂತಹ ಹಲವಾರು ರೀತಿಯ ಪೋಷಕಾಂಶಗಳು ಬಾಳೆಹಣ್ಣಿನ ಸಿಪ್ಪೆಯಲ್ಲೂ ಇದೆ. ಇದನ್ನು ಕೆಲವೊಂದು ಅಧ್ಯಯನಗಳು ಹೇಳುತ್ತವೆ. ಬಾಳೆಹಣ್ಣಿನ ಸಿಪ್ಪೆ ಕೂಡ ಆರೋಗ್ಯಕ್ಕೆ ತುಂಬಾ ಲಾಭಕರವಾಗಿದೆ. ಬಾಳೆಹಣ್ಣಿನ ಸಿಪ್ಪೆಯಲ್ಲಿ ವಿಟಮಿನ್ ಬಿ6 ಮತ್ತು ವಿಟಮಿನ್ ಬಿ12 ಅತ್ಯಧಿಕ ಮಟ್ಟದಲ್ಲಿ ಇರುತ್ತದೆ. ಅಷ್ಟೇ ಅಲ್ಲದೇ ಮೆಗ್ನಿಷಿಯಂ, ಪೊಟ್ಯಾಶಿಯಂ, ನಾರಿನಾಂಶ ಮತ್ತು ಪ್ರೋಟಿನ್ ಬಾಳೆಹಣ್ಣಿನ ಸಿಪ್ಪೆಯಲ್ಲಿದೆ. ಆದ್ದರಿಂದ ಬಾಳೆ ಹಣ್ಣಿನ ಸಿಪ್ಪೆಯಿಂದ ಏನೆಲ್ಲಾ ಸದುಪಯೋಗಗಳನ್ನು ಪಡೆದುಕೊಳ್ಳಬಹುದು ಎಂಬುದನ್ನು ತಿಳಿಯೋಣ. ಹೊಳೆಯುವ ಹಲ್ಲುಗಳಿಗಾಗಿ:ಬಾಳೆಹಣ್ಣಿನ ಸಿಪ್ಪೆಯನ್ನು ಚಿಕ್ಕ ತುಂಡುಗಳನ್ನಾಗಿ ಮಾಡಿಕೊಂಡು ಎರಡರಿಂದ ಮೂರು ನಿಮಿಷದ ತನಕ ಹಲ್ಲುಗಳ ಮೇಲೆ ಉಜ್ಜಿ. ಆಮೇಲೆ ಹತ್ತು ನಿಮಿಷ ಹಾಗೆಯೇ ಬಿಡಿ. ನಂತರ ನಿಮ್ಮ ಹಲ್ಲುಗಳನ್ನು ತೊಳೆಯಿರಿ. ಇದರಿಂದ ನಿಮ್ಮ ಹಲ್ಲುಗಳಿಗೆ ಫಳ ಫಳ ಎನ್ನುವ ಹೊಳಪು ದೊರೆಯುತ್ತದೆ. ಮೊಡವೆಯ ಸಮಸ್ಯೆ ಪರಿಹಾರ:ಸಾಮಾನ್ಯವಾಗಿ ಯುವತಿ ಮತ್ತು ಯುವಕರಿಗೆ ಮೊಡವೆಗಳ ಸಮಸ್ಯೆ…

Read More

ಗಾಂಧೀನಗರ: ಅಯೋಧ್ಯೆ ರಾಮಮಂದಿರ ಉದ್ಘಾಟನೆ ದಿನ ಹತ್ತಿರ ಬರುತ್ತಿದೆ. ರಾಮಮಂದಿರ ಉದ್ಘಾಟನೆಗೆ ಗಣ್ಯರು, ಸೆಲೆಬ್ರಿಟಿಗಳು, ಸುಂದರ ಕೆತ್ತನೆಯ ವಿಗ್ರಹಗಳು ಸುದ್ದಿಯಾಗುತ್ತಿವೆ. ಈ ಹೊತ್ತಿನಲ್ಲೇ ರಾಮಮಂದಿರ ಮಾದರಿಯಲ್ಲೇ ನೆಕ್ಲೆಸ್‌ ತಯಾರಿಸಿರುವುದು ಗಮನ ಸೆಳೆದಿದೆ. ಗುಜರಾತ್‌ನ ಸೂರತ್‌ನ ವಜ್ರದ ವ್ಯಾಪಾರಿಯೊಬ್ಬರು 5000 ಅಮೆರಿಕನ್ ವಜ್ರಗಳು ಮತ್ತು 2 ಕೆಜಿ ಬೆಳ್ಳಿಯನ್ನು ಬಳಸಿ ರಾಮಮಂದಿರ ಮಾದರಿಯ ನೆಕ್ಲೇಸ್ ಮಾಡಿದ್ದಾರೆ. ಜೊತೆಗೆ ಶ್ರೀರಾಮ, ಸೀತೆ, ಲಕ್ಷ್ಮಣ, ಹನುಮಂತ ಮತ್ತು ಮಾಯಾ ಜಿಂಕೆ ಮೂರ್ತಿಗಳನ್ನೂ ಕೆತ್ತನೆ ಮಾಡಿಸಿದ್ದಾರೆ. 40 ಕುಶಲಕರ್ಮಿಗಳು 35 ದಿನಗಳಲ್ಲಿ ಇದನ್ನು ವಿನ್ಯಾಸಗೊಳಿಸಿದ್ದಾರೆ. https://ainlivenews.com/sore-throat-cough-problem-in-winter-make-these-things-and-drink-tea/ ಈ ಬಗ್ಗೆ ಮಾತನಾಡಿರುವ ರಸೇಶ್ ಜ್ಯುವೆಲ್ಸ್‌ನ ನಿರ್ದೇಶಕ ಕೌಶಿಕ್ ಕಾಕಡಿಯಾ, 2 ಕೆಜಿ ಬೆಳ್ಳಿ ಬಳಸಿ ನೆಕ್ಲೆಸ್‌ ಮತ್ತು ಮೂರ್ತಿಗಳನ್ನು ಮಾಡಲಾಗಿದೆ. ಜೊತೆಗೆ 5000 ಕ್ಕೂ ಹೆಚ್ಚು ಅಮೆರಿಕನ್ ವಜ್ರಗಳನ್ನು ಬಳಸಲಾಗಿದೆ ಎಂದು ತಿಳಿಸಿದ್ದಾರೆ. ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರದಿಂದ ಸ್ಫೂರ್ತಿ ಪಡೆದು ನೆಕ್ಲೆಸ್‌ ವಿನ್ಯಾಸಗೊಳಿಸಿದ್ದೇವೆ. ಇದು ಯಾವುದೇ ವಾಣಿಜ್ಯ ಉದ್ದೇಶಕ್ಕಾಗಿ ರೂಪಿಸಿಲ್ಲ. ರಾಮಮಂದಿರಕ್ಕೆ ಏನಾದರೂ ಉಡುಗೊರೆ ಕೊಡಬೇಕು ಎಂಬ ಉದ್ದೇಶದಿಂದ…

Read More

ಗದಗ:- ಹಿಂದು ರಾಷ್ಟ್ರ ಮಾಡುವುದು ಬಿಜೆಪಿ ಅಜೆಂಡಾ ಅಲ್ಲ, ಜನರ ತೀರ್ಮಾನ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಹಿಂದು ರಾಷ್ಟ್ರ ಮಾಡುವುದು ಬಿಜೆಪಿ ಅಜೆಂಡಾ ಅಲ್ಲ, ಅದು ಹಿಂದುಗಳದ್ದು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದರು. ದೇಶದ ಹಿಂದುಗಳು ಹಿಂದು ರಾಷ್ಟ್ರ ಆಗಬೇಕು ಎಂದು ನಿರ್ಧಾರ ಮಾಡಿದ್ದಾರೆ. ಆಯೋಧ್ಯೆಯಲ್ಲಿ ರಾಮಮಂದಿರ ಕಟ್ಟಬೇಕು ಎನ್ನುವುದು ಇವತ್ತಿನ ತೀರ್ಮಾನ ಅಲ್ಲ, ಸ್ವಾತಂತ್ರ್ಯ ಪೂರ್ವದಿಂದ ಇದರ ಬಗ್ಗೆ ಹೋರಾಟ ಮಾಡಲಾಗುತ್ತಿದೆ. ಜ. 22ರಂದು ಅಯೋಧ್ಯೆಯಲ್ಲಿ ಇಡೀ ಪ್ರಪಂಚವೇ ನೋಡುವ ವಿಶೇಷ ಕಾರ್ಯಕ್ರಮವಾಗುತ್ತದೆ ಎಂದರು. ಕಾಶಿ ಕುರಿತು ಕೋರ್ಟ ಆರ್ಡರ್ ಆಗಿದೆ, ಮಧುರಾ ಬಗ್ಗೆ ಸರ್ವೇ ಕೊಟ್ಟಿದ್ದಾರೆ. ದೇಶದಲ್ಲಿ ಹೊಸ ಮಸೀದಿಗಳ ಬಗ್ಗೆ ನಾನು ವಿರೋಧ ಮಾಡೋದಿಲ್ಲ. ದೇವಸ್ಥಾನ ಕೆಡವಿ ಕಟ್ಟಿದ ಒಂದೇ ಒಂದು ಮಸೀದಿ ಉಳಿಸೋದಿಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದರು

Read More

ಹುಬ್ಬಳ್ಳಿ: ಗುತ್ತಿಗೆ ಕಾರ್ಮಿಕರಿಗೆ ಸೇವಾ ಭದ್ರತೆ ನೀಡಬೇಕು, ಬಂಡವಾಳಶಾಹಿಗಳ ಪರ ಹಾಗೂ ಕಾರ್ಮಿಕ ವಿರೋಧಿ ಲೇಬರ್ ಕೋಡ್ ರದ್ದು ಮಾಡುವುದು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನಡೆಯುತ್ತಿರುವ ಅಖಿಲ ಭಾರತ ಪ್ರತಿಭಟನಾ ಸಪ್ತಾಹದ ಅಂಗವಾಗಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗಂಗಾಧರ ಬಡಿಗೇರ ಮಾತನಾಡಿ, ಕೇಂದ್ರ, ರಾಜ್ಯ ಸರ್ಕಾರಗಳು ಕಾರ್ಪೋರೇಟ್ ಕಂಪನಿಗಳ ಪರ ನೀತಿಗಳನ್ನು ರೂಪಿಸುತ್ತಿರುವುದರಿಂದ ದುಡಿಯುವ ಜನರ ಶೋಷಣೆಯಾಗುತ್ತಿದೆ. ಕೆಲಸದ ಅವಧಿಯನ್ನು 12 ಗಂಟೆಗಳಿಗೆ ಹೆಚ್ಚಳ ಮಾಡಲಾಗಿದೆ. ಹಳೇ ಪಿಂಚಣಿ ಯೋಜನೆಯನ್ನೇ ಪುನರ್ ಜಾರಿಗೊಳಿಸಬೇಕೆಂಬ ಬೇಡಿಕೆಯನ್ನು ಕಡೆಗಣಿಸಲಾಗುತ್ತಿದೆ ಎಂದು ದೂರಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಎಐಯುಟಿಯುಸಿ ಜಿಲ್ಲಾ ಘಟಕದ ಉಪಾಧ್ಯಕ್ಷೆ ಭುವನಾ ಬಳ್ಳಾರಿ, ಲಕ್ಷಾಂತರ ಮಹಿಳೆಯರೇ ಇರುವ ವಿವಿಧ ಯೋಜನೆಗಳಲ್ಲಿ ತೊಡಗಿರುವ ಆಶಾ, ಅಂಗನವಾಡಿ, ಬಿಸಿಯೂಟ ಮುಂತಾದ ಸ್ಕೀಂ ಕಾರ್ಯಕರ್ತೆಯರನ್ನು ಸರ್ಕಾರಗಳು ನಿರ್ಲಕ್ಷ ಮಾಡುತ್ತಿವೆ ಎಂದು ಆರೋಪಿಸಿದರು. ಕೇಂದ್ರ…

Read More