Author: AIN Author

ಬೆಂಗಳೂರು: ಸಿನಿಮಾ ಮಾದರಿಯಲ್ಲಿ 20 ಕೋಟಿ ರೂ. ಮೌಲ್ಯದ 2 ಕೆಜಿ ಕೊಕೇನ್ ಕ್ಯಾಪ್ಸೂಲ್‍ಗಳನ್ನು ನುಂಗಿಕೊಂಡು ಸಾಗಿಸುತ್ತಿದ್ದ ವ್ಯಕ್ತಿಯನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಆರೋಪಿ ಅಡಿಸ್ ಅಬಾಬಾದಿಂದ ಇಥಿಯೋಪಿಯಾ ಏರ್ಲೈನ್ಸ್‌ನಲ್ಲಿ ಬಂದಿದ್ದ. ಆತನ ಹೊಟ್ಟೆಯಲ್ಲಿ ಸುಮಾರು 50ಕ್ಕೂ ಹೆಚ್ಚಿನ ಕೊಕೇನ್ ಕ್ಯಾಪ್ಸೂಲ್ಸ್ ಪತ್ತೆಯಾಗಿವೆ. ಕ್ಯಾಪ್ಸೂಲ್‍ಗಳಲ್ಲಿ ಕೊಕೇನ್ ತುಂಬಿ ಅದನ್ನು ಆರೋಪಿ ನುಂಗಿಕೊಂಡು ಸಾಗಿಸುತ್ತಿದ್ದ. ಬಳಿಕ ಆತನ ಹೊಟ್ಟೆಯನ್ನು ಸ್ಕ್ಯಾನ್ ಮಾಡಿ, ಹೊಟ್ಟೆಯಲ್ಲಿದ್ದ ಕ್ಯಾಪ್ಸೂಲ್‍ಗಳನ್ನು ವೈದ್ಯರು ಹೊರಗೆ ತೆಗೆದಿದ್ದಾರೆ. ಆರೋಪಿ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಆತನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆತನನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ

Read More

ಬೆಂಗಳೂರು: 24 ಲಕ್ಷ ರೂ. ಮೌಲ್ಯದ ಬೈಕ್‌ ಕಾರಿಗೆ ಡಿಕ್ಕಿ ಹೊಡೆದ (Bike Accident) ಪರಿಣಾಮ ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ಜಯನಗರದ ಅಶೋಕ ಪಿಲ್ಲರ್ ಬಳಿ ತಡರಾತ್ರಿ ನಡೆದಿದೆ. ಜಯನಗರದ (Jayanagara) ಅಶೋಕ ಪಿಲ್ಲರ್ ಬಳಿ ಘಟನೆ ನಡೆದಿದ್ದು, ಬೈಕ್‌ ಸವಾರ ಶೇಕ್ ನಾಸಿರ್ (32) ಸಾವನ್ನಪ್ಪಿದ್ದಾರೆ. ಹಿಂಬದಿ ಬೈಕ್‌ ಸವಾರ ಸೈಯದ್ ಮುದಾಸಿರ್ ಗಾಯಗೊಂಡಿದ್ದಾರೆ. ಬೈಕ್ ಸವಾರರು ದುಬಾರಿ ಬೆಲೆಯ ಬಿಎಂಡಬ್ಲ್ಯೂ ಆರ್‌ಆರ್ 1000 ಸಿಸಿ (BMW RR 1000CC Bike) ಚಲಾಯಿಸುತ್ತಿದ್ದರು. ವ್ಹೀಲಿಂಗ್‌ ಮಾಡುತ್ತಾ ಅತಿ ವೇಗವಾಗಿ ಬಂದು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದ್ದರು. ಡಿಕ್ಕಿಯ ಪರಿಣಾಮ ಬೈಕ್ ಚಲಾಯಿಸುತ್ತಿದ್ದ ಶೇಕ್ ನಾಸಿರ್ ಎಂಬ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಬೈಕ್‌ ಸವಾರರು ಹೆಲ್ಮೆಟ್‌ ಕೂಡ ಧರಿಸಿರಲಿಲ್ಲ. ಕುತ್ತಿಗೆಗೆ ತೀವ್ರ ಏಟು ಬಿದ್ದ ಕಾರಣ ಸ್ಥಳದಲ್ಲೇ ನಾಸಿರ್‌ ಸಾವಿಗೀಡಾಗಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಸವಾರನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ…

Read More

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ (Winter Parliament Session) ಅಶಿಸ್ತಿನ ನಡವಳಿಕೆ ಹಿನ್ನೆಲೆ 141 ಸಂಸದರನ್ನು (MP) ಅಮಾನತುಗೊಳಿಸಿದ ಕುರಿತು ಕಾಂಗ್ರೆಸ್ ಸಂಸದೀಯ ಪಕ್ಷದ (CPP) ಮುಖ್ಯಸ್ಥೆ ಸೋನಿಯಾ ಗಾಂಧಿ (Sonia Gandhi) ಪ್ರತಿಕ್ರಿಯಿಸಿದ್ದು, ನರೇಂದ್ರ ಮೋದಿ (Narendra Modi) ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ 141 ಸಂಸದರನ್ನು ಸರ್ಕಾರ ಅಮಾನತುಗೊಳಿಸಿರುವುದನ್ನು ಖಂಡಿಸಿದ ಅವರು, ಸಂಪೂರ್ಣವಾಗಿ ಸಮಂಜಸವಾದ ಮತ್ತು ನ್ಯಾಯಸಮ್ಮತವಾದ ಬೇಡಿಕೆಗೆ ಒತ್ತಾಯಿಸಿದ್ದಕ್ಕಾಗಿ ಹಿಂದೆಂದೂ ಇಷ್ಟು ವಿರೋಧ ಪಕ್ಷದ ಸಂಸದರನ್ನು ಸದನದಿಂದ ಅಮಾನತುಗೊಳಿಸಿಲ್ಲ ಎಂದು ವಾಗ್ದಾಳಿ ನಡೆಸಿದರು. https://ainlivenews.com/sore-throat-cough-problem-in-winter-make-these-things-and-drink-tea/ ಡಿಸೆಂಬರ್ 13ರಂದು ಸಂಸತ್ ಭವನದಲ್ಲಿ ನಡೆದ ಭದ್ರತಾ ಉಲ್ಲಂಘನೆ (Security Breach) ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah)ಅವರಿಂದ ಹೇಳಿಕೆ ನೀಡುವಂತೆ ವಿಪಕ್ಷ ನಾಯಕರು ಒತ್ತಾಯಿಸಿದ್ದಾರೆ. ಭದ್ರತಾ ಲೋಪದ ಕುರಿತು ಅಮಿತ್ ಶಾ ಹೇಳಿಕೆ ಕೊಡಬೇಕಾಗಿತ್ತು ಎಂದು ಸಂಸದರನ್ನು ಬೆಂಬಲಿಸಿದರು.

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಹೆಚ್ಚಿದೆ. ಜನರಿಗೆ ಧನುರ್‌ ಮಾಸದ ಚಳಿಯ ಅನುಭವ ಶುರುವಾಗಿದೆ. ಮತ್ತೊಂದೆಡೆ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ. ಡಿ.21 ರಿಂದ 26ರ ವರೆಗೆ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ. ಇನ್ನು ಮಳೆಯ ಮುನ್ಸೂಚನೆ ಇಲ್ಲ ಆದರೂ ರಾಜ್ಯದ ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆ ಆಗಲಿದ್ದು ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ.

Read More

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಏರಿಕೆ ಆದರೆ ಬೆಂಗಳೂರು ಹಾಟ್ ಸ್ಪಾಟ್ ಆಗುವ ಭಯದ ಹಿನ್ನೆಲೆಯಲ್ಲಿ ಈಗಾಗಲೇ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕಳೆದ ಮೂರು ಅಲೆಗಳಲ್ಲೂ ಕರ್ನಾಟಕದ ಒಟ್ಟು ಕೊವಿಡ್ (COVID 19) ಕೇಸ್‍ಗಳ ಪಟ್ಟಿಯಲ್ಲಿ ಬೆಂಗಳೂರಿನದ್ದು ಬಹುಪಾಲು. ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ಮಾಡಲು ಮತ್ತು ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸಭೆ ಮೇಲೆ ಸಭೆ ಮಾಡುತ್ತಿದೆ. ಬಿಬಿಎಂಪಿ (BBMP) ಅಧಿಕಾರಿಗಳ ಜೊತೆ ಬುಧವಾರ ಕೂಡ ಆರೋಗ್ಯ ಸಚಿವರು ಸಭೆ ಮಾಡಿದ್ದಾರೆ. ಕೊರೊನಾ ಮುನ್ನೆಚ್ಚರಿಕಾ ಕ್ರಮ: ಹೋಂ ಐಸೋಲೇಷನ್ (Home Isolation) ನಿಯಮ ಕಟ್ಟುನಿಟ್ಟಾಗಿ ಪಾಲಿಸುವುದು. ಕ್ವಾರಂಟೈನ್ ಆದವರ ಮೇಲೆ ಹೆಚ್ಚು ನಿಗಾ ಇಡುವುದು. ಬೆಂಗಳೂರಿನಲ್ಲಿ ಕೋವಿಡ್ ಟೆಸ್ಟ್ ಹೆಚ್ಚಿಸುವುದು. ಐಎಲ್‍ಐ, ಸಾರಿ ಕೇಸ್‍ಗಳನ್ನ ಪತ್ತೆ ಮಾಡಿ ಟೆಸ್ಟ್ ಮಾಡುವುದು. ನೆರೆ ರಾಜ್ಯಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ಇಡುವುದು ಹಾಗೂ ಆಕ್ಸಿಜನ್, ವೆಂಟಿಲೇಟರ್ ಹಾಗೂ ವೈದ್ಯಕೀಯ ಉಪಕರಣ ಸಿದ್ಧ ಪಡಿಸುವುದು.

Read More

ಬೆಂಗಳೂರು: ಬೇರೆ ಯುವಕರಿಂದ ಬರುತ್ತಿದ್ದ ಫೋನ್‌ ಕಾಲ್‌ಗಳ (Phone Call) ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯತಮೆಯೊಬ್ಬಳು ತನ್ನ ಕಾನ್‌ಸ್ಟೇಬಲ್‌ ಪ್ರಿಯಕರನನ್ನೇ ಬೆಂಕಿಹಚ್ಚಿ ಕೊಂದಿರುವ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿ ಠಾಣಾ (Puttenahalli Police Station) ವ್ಯಾಪ್ತಿಯಲ್ಲಿ ನಡೆದಿದೆ. ಹೌದು,ಮದುವೆಯಾಗಿದ್ದರೂ ಎರಡೆರಡು ಪ್ರೇಮಿಗಳನ್ನು ಮೆಂಟೇನ್‌ ಮಾಡುತ್ತಿದ್ದ ಆಕೆ ಒಬ್ಬರಿಗೆ ಗೊತ್ತಾಗದಂತೆ ಇನ್ನೊಬ್ಬನ ಜತೆ ಚಕ್ಕಂದ ಆಡುತ್ತಿದ್ದಳು. ಇದು ಪೊಲೀಸ್‌ ಕಾನ್ಸ್‌ಟೇಬಲ್‌ಗೆ ಗೊತ್ತಾಯಿತು. ಆತ ಅದನ್ನು ಪ್ರಶ್ನಿಸಿದ್ದೇ ತಡ, ಆಕೆ ಪೆಟ್ರೋಲನ್ನು ಅವನ ಮೇಲೆ ಸುರಿದು ಬೆಂಕಿ ಹಚ್ಚೇ ಬಿಟ್ಟದ್ದಾಳೆ. ಬಸವನಗುಡಿ ಪೊಲೀಸ್‌ ಠಾಣೆಯಲ್ಲಿ ಅವರಿಬ್ಬರೂ ಜತೆಯಾಗಿ ಕೆಲಸ ಮಾಡುತ್ತಿದ್ದರು.ಅವನು ಪೊಲೀಸ್‌ ಕಾನ್ಸ್‌ ಟೇಬಲ್‌ ಸಂಜಯ್‌. ಅವಳು ಹೋಮ್‌ ಗಾರ್ಡ್‌ ರಾಣಿ. ಅವರಿಬ್ಬರು ಠಾಣೆಯಲ್ಲಿ ಕೆಲಸ ಮಾಡಿದ್ದಕ್ಕಿಂತ ಲವ್ವಿಡವ್ವಿ ಮಾಡ್ಕೊಂಡು ಚಕ್ಕಂದ ಆಡಿದ್ದೇ ಹೆಚ್ಚು. ಹಾಗಂತ ಅವಳೇನೂ ಇನ್ನೂ ಎಳೆ ಯುವತಿಯಲ್ಲ. ಮದುವೆಯಾಗಿ ಗಂಡ ಇದ್ದಾನೆ, ಮಕ್ಕಳೂ ಇದ್ದಾರೆ. ಆದರೆ, ಪ್ರೇಮದ ಆಕರ್ಷಣೆಯನ್ನು ಬಿಡಲಾಗದೆ ಆಕೆ ಕಾನ್ಸ್‌ಟೇಬಲ್‌ನನ್ನು ಆವರಿಸಿಕೊಂಡಿದ್ದಳು. 2021ರಿಂದಲೇ ಅವರು ಸ್ವಚ್ಛಂದ ಹಕ್ಕಿಗಳಂತೆ ಹಾರಾಡುತ್ತಿದ್ದರು.ಆದರೆ, ಇತ್ತೀಚೆಗೆ ಯಾಕೋ ಹೋಮ್‌ ಗಾರ್ಡ್‌…

Read More

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಬಳಿಕ ಮೊದಲ ಬಾರಿಗೆ ದಳಪತಿಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಇಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಪುತ್ರರಾದ ಹೆಚ್‌ಡಿ ಕುಮಾರಸ್ವಾಮಿ ಮತ್ತು ಹೆಚ್‌ಡಿ ರೇವಣ್ಣ ಅವರೊಂದಿಗೆ ಮೋದಿ ಅವರನ್ನು ಭೇಟಿಯಾದರು. https://twitter.com/narendramodi/status/1737732480105685006?ref_src=twsrc%5Etfw%7Ctwcamp%5Etweetembed%7Ctwterm%5E1737732480105685006%7Ctwgr%5E2646db710b11e69e6681396509acb01830567f0f%7Ctwcon%5Es1_&ref_url=https%3A%2F%2Fpublictv.in%2Fformer-pm-hd-devegowda-along-with-hd-kumaraswamy-and-hd-revanna-meets-pm-modi-in-delhi%2F ಭೇಟಿ ಮಾಡಿದ ಬಳಿಕ ಎಕ್ಸ್‌ನಲ್ಲಿ ಫೋಟೋಗಳನ್ನು ಮೋದಿ ಪೋಸ್ಟ್‌ ಮಾಡಿ, ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರನ್ನು ಭೇಟಿಯಾಗಲು ಯಾವಾಗಲೂ ಸಂತೋಷವಾಗುತ್ತದೆ. ರಾಷ್ಟ್ರದ ಪ್ರಗತಿಗೆ ದೇವೇಗೌಡರ ಅನುಕರಣೀಯ ಕೊಡುಗೆಯನ್ನು ಭಾರತವು ಬಹಳವಾಗಿ ಗೌರವಿಸುತ್ತದೆ ಎಂದು ಬರೆದುಕೊಂಡಿದ್ದಾರೆ. ಭೇಟಿಯ ವೇಳೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರು ಜೊತೆಗಿದ್ದರು.

Read More

ನವದೆಹಲಿ: ಬೆಂಗಳೂರಿನಲ್ಲಿ ಟನಲ್ ರಸ್ತೆ ನಿರ್ಮಾಣ, ಮೆಟ್ರೋ ಸಂಪರ್ಕ ವಿಸ್ತರಣೆ, ಭದ್ರಾ ಮೇಲ್ದಂಡೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು ಯೋಜನೆ ಸೇರಿದಂತೆ ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುಮತಿ ಹಾಗೂ ಹಣಕಾಸಿನ ನೆರವು ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitaraman) ಅವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ (D.K.Shivakumar) ಮನವಿ ಮಾಡಿದ್ದಾರೆ. ಸಂಸತ್ ಭವನದಲ್ಲಿ ಬುಧವಾರ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಅವರು, ಬೆಂಗಳೂರು ಸಂಚಾರ ದಟ್ಟಣೆ ಸಮಸ್ಯೆ ಎದುರಿಸುತ್ತಿದ್ದು, ಈ ಸಮಸ್ಯೆ ಬಗೆಹರಿಸಲು 60 ಕಿ.ಮೀ ಉದ್ದದ ನಗರ ಸುರಂಗ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದೇವೆ. ನಗರದೊಳಗೆ ಉತ್ತರದಿಂದ ದಕ್ಷಿಣ, ಪೂರ್ವದಿಂದ ಪಶ್ಚಿಮ ಕಾರಿಡಾರ್ ಮೂಲಕ ನಗರದೊಳಗಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮುಂದಾಗಿದ್ದೇವೆ. https://ainlivenews.com/sore-throat-cough-problem-in-winter-make-these-things-and-drink-tea/ ಈ ಯೋಜನೆಯಲ್ಲಿ ಪ್ರತಿ ಕಿ.ಮೀ ಸುರಂಗ ರಸ್ತೆಗೆ 500 ರೂ.ನಂತೆ ಒಟ್ಟು 30 ಸಾವಿರ ಕೋಟಿ ವೆಚ್ಚ ತಗುಲುವ ಅಂದಾಜು ಮಾಡಲಾಗಿದೆ. ಈ ಯೋಜನೆಗಳು ರಾಷ್ಟ್ರೀಯ ಹೆದ್ದಾರಿ 7 ಮತ್ತು 4ರ ಸಂಪರ್ಕ ಸಾಧಿಸುವ ಹಿನ್ನೆಲೆಯಲ್ಲಿ ಈ…

Read More

ಎಲಾನ್​ ಮಸ್ಕ್​ ಒಡೆತನದ ಎಕ್ಸ್​(ಟ್ವಿಟ್ಟರ್​)ನಲ್ಲಿ ಸಮಸ್ಯೆ ಕಂಡುಬಂದಿದ್ದು, ಬಳಕೆದಾರರು ಇದರಿಂದ ಪರದಾಡಿದ್ದಾರೆ. ಎಕ್ಸ್​ನಲ್ಲಿ ಯೂಸರ್​ ಟೈಮ್​ಲೈನ್​ ಗೋಚರಿಸದೇ ಟ್ವಿಟ್ಟಿಗರಿಗೆ ನಿರಾಸೆಯುಂಟಾಗಿದೆ. ವಿಶ್ವದಾದ್ಯಂತ ಕೋಟ್ಯಾಂತರ ಜನರು ಟ್ವಿಟ್ಟರ್​ ಬಳಸುತ್ತಿದ್ದಾರೆ. ಅನೇಕರು ಇದರ ಮೂಲಕ ಮಾಹಿತಿ ಹಂಚಿಕೊಳ್ಳುತ್ತಾರೆ ಮತ್ತು ಪಡೆಯುತ್ತಾರೆ. ಅಷ್ಟೇ ಏಕೆ ವಿಶ್ವದ ಪ್ರಮುಖ ನಾಯಕರು ಕೂಡ ಟ್ವಿಟ್ಟರ್​ನಲ್ಲಿ ಖಾತೆ ಹೊಂದಿದ್ದಾರೆ. ಆದರೆ ಗುರುವಾರದಂದು ಬೆಳಗ್ಗಿನಿಂದಲೇ ಟ್ವಿಟ್ಟರ್​ನಲ್ಲಿ ಸಮಸ್ಯೆ ಕಾಡಲಾರಂಭಿಸಿದೆ. ಇನ್ನು ಟ್ವಿಟ್ಟರ್​ನಲ್ಲಿ ಕಾಣಿಸಿಕೊಂಡ ಸಮಸ್ಯೆ ಬಗ್ಗೆ ಅನೇಕರು ಸ್ಕ್ರೀನ್​ ಶಾಟ್​ ಹಂಚಿಕೊಂಡಿದ್ದಾರೆ. ಇನ್ನು ಕೆಲವರು ಇಂಥಾ ಸಮಸ್ಯೆ ನಿಮಗೂ ಕಾಡುತ್ತಿದೆಯಾ? ಎಂದು ಪ್ರಶ್ನಿಸಿದ್ದಾರೆ. ಒಟ್ಟಿನಲ್ಲಿ ಇದಾವುದಕ್ಕೆ ಟ್ವಿಟ್ಟರ್​ ಉತ್ತರಿಸದೇ ಇರುವುದು ಬಳಕೆದಾರರಿಗೆ ಅಚ್ಚರಿ ಮೂಡಿಸಿದೆ.

Read More

ನವದೆಹಲಿ: ರಾಜ್ಯಕ್ಕೆ ಬರ ಪರಿಹಾರ (Drought Relief Fund) ಬಿಡುಗಡೆಗೊಳಿಸುವ ಸಂಬಂಧ ಕೇಂದ್ರ ಸಚಿವ ಅಮಿತ್ ಶಾ (Amit Shah) ನೇತೃತ್ವದಲ್ಲಿ ಡಿ.23 ರಂದು ಉನ್ನತ ಮಟ್ಟದ ಸಭೆ ನಡೆಯಲಿದೆ ಎಂದು ಸಚಿವ ಕೃಷ್ಣಬೈರೇಗೌಡ (Krishna Byre Gowda) ತಿಳಿಸಿದ್ದಾರೆ. ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಸಚಿವರಾದ ಅಜುರ್ನ್ ಮುಂಡಾ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ರಾಜ್ಯ ಈ ವರ್ಷ ಭೀಕರ ಬರಕ್ಕೆ ತುತ್ತಾಗಿದೆ. ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. https://ainlivenews.com/mp-died-of-heart-attack-while-speaking-in-parliament/ ಸರಿಯಾದ ಸಮಯದಲ್ಲಿ ಅವರಿಗೆ ಪರಿಹಾರ ಧನ ನೀಡಬೇಕಿದೆ. ಹೀಗಾಗಿ ಕೇಂದ್ರ ಸರ್ಕಾರ ಶೀಘ್ರವಾಗಿ ಕರ್ನಾಟಕದ ಬರ ಪರಿಹಾರ ಮನವಿಯ ಬಗ್ಗೆ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಬೇಕು. ಆದಷ್ಟು ಶೀಘ್ರದಲ್ಲಿ ಹಣ ಬಿಡುಗಡೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರ ಜೊತೆ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಅಮಿತ್ ಶಾ ಅವರು ಡಿ.23 ರಂದು…

Read More