Author: AIN Author

ಹುಬ್ಬಳ್ಳಿ: ಹೆಸ್ಕಾಂನ ಹುಬ್ಬಳ್ಳಿಯ ಉಗ್ರಾಣದಲ್ಲಿ ನಡೆದ 51 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಸ್ಕಾಂನ ಲೆಕ್ಕಾಧಿಕಾರಿ ಸೇರಿದಂತೆ ಐವರನ್ನು ಅಮಾನತು ಮಾಡಲಾಗಿದೆ. ಲೆಕ್ಕಾಧಿಕಾರಿ ಬೆಂಜಮಿನ್ ಮಸ್ಕನರ್ಸ್, ಸಹಾಯಕ ಲೆಕ್ಕಾಧಿಕಾರಿ ಯು.ಎಸ್.ಉಳ್ಳಾಗಡ್ಡಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಾದ ವಿಶ್ವನಾಥ ಶಿರಹಟ್ಟಿಮಠ, ವಸಂತಕುಮಾರ ರಾಠೋಡ, ಅಂಜಿನಪ್ಪ ಬಿ, ಅಮಾನತುಗೊಂಡವರು. ಅವ್ಯವಹಾರದ ಕುರಿತು ತನಿಖೆ ನೆಡೆಸಲು ಐವರು ಅಧಿಕಾರಿಗಳ ತಂಡ ರಚಿಸಲಾಗಿತ್ತು. ತಂಡ ಮೂರು ವರ್ಷ ತನಿಖೆ ನಡೆಸಿ, ಮಧ್ಯಂತರ ವರದಿ ಸಲ್ಲಿಸಿದ್ದು, ಅದರನ್ವಯ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಐವರನ್ನು ಅಮಾನತುಗೊಳಿಸಿ ಅದೇಶಿಸಿದ್ದಾರೆ ಏನಿದು ಪ್ರಕರಣ… ಬಸವರಾಜ್ ಮರಳಿಮಠ ಅವರು2007 ರಿಂದ 2023 ರ ಜುಲೈ 31 ರವರೆಗೆ ಹೆಸ್ಕಾಂ‌ನ ಕಾರ್ಯ ಮತ್ತು ಪಾಲನೆ ನಗರದ ವಿಭಾಗ ಮತ್ತು 2014 ರಿಂದ 2023 ಜುಲೈ 31ರವರೆಗೆ ಗ್ರಾಮೀಣ ವಿಭಾಗದ ಹುಬ್ಬಳ್ಳಿಯ ಉಗ್ರಾಣದಲ್ಲಿ ಉಗ್ರಾಣ ಪಾಲಕರಾಗಿ ನಿವೃತ್ತರಾಗಿದ್ದಾರೆ. ಈ ಅವಧಿಯಲ್ಲಿ ಅವ್ಯಹಾರ ನಡೆದಿರುವ ಬಗ್ಗೆ ಹೆಸ್ಕಾಂಗೆ ದೂರು ಸಲ್ಲಿಕೆಯಾಗಿತ್ತು. ಬಸವರಾಜ ಮಳಿಮಠ ಅವರು ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ…

Read More

ವಿಧ್ವಂಸಕ ಕೃತ್ಯ ಹಾಗೂ ಅಶಾಂತಿಗೆ ಕಾರಣ ಆಗಿದ್ದಾರೆ ಎನ್ನುವ ಕಾರಣಕ್ಕಾಗಿ ತೆಲುಗಿನ ಬಿಗ್ ಬಾಸ್ ಸೀಸನ್ 7 ರ ವಿಜೇತ ಪಲ್ಲವಿ ಪ್ರಶಾಂತ್ ಅವರನ್ನು ಹೈದರಾಬಾದ್ ನ ಜುಬಿಲಿ ಹಿಲ್ಸ್ ಪೊಲೀಸರು ಬಂಧಿಸಿದ್ದಾರೆ (Arrest). ಪಲ್ಲವಿ ಪ್ರಶಾಂತ್ ಅವರ ಜೊತೆಗೆ ಸಹೋದರ ಮನೋಹರ್ ಅವರನ್ನು ಕೂಡ ಬಂಧಿಸಲಾಗಿದ್ದು, ನ್ಯಾಯಾಲಯವು ಇಬ್ಬರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಏನಿದು ಪ್ರಕರಣ? ಬಿಗ್ ಬಾಸ್ (Bigg Boss) ಕಂಟೆಸ್ಟೆಂಟ್ ಅಭಿಮಾನಿಗಳು ಕಿತ್ತಾಡಿಕೊಂಡ ಪ್ರಕರಣ ಹೈದರಾಬಾದ್ ನಲ್ಲಿ ಮೊನ್ನೆ ನಡೆದಿತ್ತು. ಫಿನಾಲೆ ವೇಳೆ ಸ್ಟುಡಿಯೋದಲ್ಲಿ ಗಲಾಟೆ ನಡೆದಿದ್ದು, ಕಾರು ಮತ್ತು ಬಸ್ ಗಳು ಜಖಂ ಆಗಿದ್ದವು. ಹೈದರಾಬಾದ್ ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಬಿಗ್ ಬಾಸ್ ತೆಲುಗು ಸೀಸನ್ 7ರ ಗ್ರ್ಯಾಂಡ್ ಫಿನಾಲೆ ನಡೆಯುತ್ತಿತ್ತು. ಈ ವೇಳೆ ಕಂಟೆಸ್ಟೆಂಟ್ ಆಗಿದ್ದ ಅಮರ್ ದೀಪ್  (Amar Deep) ಮತ್ತು ಪಲ್ಲವಿ ಪ್ರಶಾಂತ್ (Pallavi Prashant) ಅವರ ಅಭಿಮಾನಿಗಳು ಆಗಮಿಸಿ ದಾಂಧಲೆ ಮಾಡಿದ್ದರು. ಗ್ರ್ಯಾಂಡ್ ಫಿನಾಲೆಯಲ್ಲಿ ತಮ್ಮ ನೆಚ್ಚಿನ…

Read More

ಹುಬ್ಬಳ್ಳಿ: ಹಿರಿಯ ಮುತ್ಸದ್ದಿ ರಾಜಕಾರಣಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ದೇಶದ ಪ್ರಧಾನಿ ಆದರೆ 12ನೇ ಶತಮಾನದ ಬಸವ ರಾಜ್ಯದ ಆಡಳಿತ ಆರಂಭವಾಗುವುದು ಖಂಡಿತ ಸಾಧ್ಯವಾಗುತ್ತದೆ ಎಂದು ಹಿರಿಯ ಲಿಂಗಾಯತ ಮುಖಂಡ ಕೆಪಿಸಿಸಿ ವಕ್ತಾರ ಗಂಗಾಧರ ದೊಡವಾಡ ಮಲ್ಲಿಕಾರ್ಜುನ ಖರ್ಗೆಯವರನ್ನು ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿಸಿದ್ದಕ್ಕೆ ಹರ್ಷ ವ್ಯಕ್ತಪಡಿಸಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಹಿಂದೆ ಅನೇಕರು ಈ ದೇಶವನ್ನು ನಾವು ಪ್ರಧಾನಿಗಳಾದಾಗ ರಾಮರಾಜ್ಯ ಮಾಡುತ್ತೇವೆ ರೈತರ ರಾಜ್ಯ ಮಾಡುತ್ತೇವೆ ಎಂದು ಘೋಷಣೆ ಕೂಗಿ ಅಧಿಕಾರಕ್ಕೆ ಬಂದು ರಾಮರಾಜ್ಯವನ್ನೂಮಾಡಲಿಲ್ಲ ರೈತ ರಾಜ್ಯವನ್ನೂ ಮಾಡಲಿಲ್ಲ ಕಲ್ಯಾಣ ಕರ್ನಾಟಕದ ಜಗಜ್ಯೋತಿ ಬಸವಣ್ಣನವರ ಪರಿಸರದಲ್ಲಿ ಬೆಳೆದು ಬಂದ ಮಲ್ಲಿಕಾರ್ಜುನ ಖರ್ಗೆ ಅಪ್ಪಟ ಬಸವವಾದಿಯಾಗಿದ್ದು ಬಸವಣ್ಣನವರ ಕಲ್ಪನೆಯ ಬಸವ ನಾಡು ನಿರ್ಮಿಸುವಲ್ಲಿ ಯಶಸ್ವಿಯಾಗುವ ಎಲ್ಲಾ ಅರ್ಹತೆ ಪಡೆದಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡವಾಡ ಹೇಳಿದ್ದಾರೆ.

Read More

ಬಳ್ಳಾರಿ: ಅತಿಥಿ ಉಪನ್ಯಾಸಕರನ್ನು ಖಾಯಂ ಗೊಳಿಸುವಂತೆ   ಬಳ್ಳಾರಿಯ ರಾಯಲ್ ವೃತ್ತದಲ್ಲಿ ಸರಪಳಿ ರಚಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು. ಅತಿಥಿ ಉಪನ್ಯಾಸಕರು ತಮಟೆ, ಡೊಳ್ಳು ಬಾರಿಸಿ ರ್ಯಾಲಿ ನಡೆಸಿದರು.  ಕಳೆದ ಕೆಲ ದಿನಗಳಿಂದ ಅನಿರ್ದಿಷ್ಟವಧಿ ಧರಣಿ ನಡೆಸುತ್ತಿದ್ದು, ಬಳ್ಳಾರಿ ನಗರದ ಸರಳಾದೇವಿ ಕಾಲೇಜಿನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ರ್ಯಾಲಿ ನಡೆಸಿದ್ದಾರೆ. ರ್ಯಾಲಿಯಲ್ಲಿ ನ್ಯಾಯ ಬೇಕು, ವಿ ವಾಂಟ್ ಜಸ್ಟಿಸ್ ಎಂದು ಘೋಷಣೆ ಕೂಗಿದರು. ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರಕಾರಕ್ಕೆ ಅತಿಥಿ ಉಪನ್ಯಾಸಕರು ಮನವಿ ಸಲ್ಲಿಸಿದರು.  

Read More

ಬಳ್ಳಾರಿ: ಬಳ್ಳಾರಿ ನಗರದ ವಿಮ್ಸ್ ಆಸ್ಪತ್ರೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರು ಭೇಟಿ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ವಿಮ್ಸ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ, ಒಂದೇ ಬೆಡ್ನಲ್ಲಿ ಮೂರು ಮಕ್ಕಳಿಗೆ ಚಿಕಿತ್ಸೆ ನೀಡುತ್ತಿರುವುದನ್ನು ಕಂಡು ಅಧಿಕಾರಿಗಳಿಗೆ ಸರಿಪಡಿಸಲು ಸೂಚನೆ ನೀಡಲಾಗಿತ್ತು. ಈಗ ಒಂದು ಬೆಡ್ನಲ್ಲಿ ಒಂದೇ ಮಗುವಿಗೆ ಚಿಕಿತ್ಸೆ ನೀಡುತ್ತಿರುವುದು ಕಂಡು ತೃಪ್ತಿ ತಂದಿದೆ ಎಂದರು. ಎನ್ಆರ್ ಸಿ ಘಟಕ, ಆರ್ ಬಿಎಸ್ ಹೆಚ್ ತಂಡ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತೀರಾ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಸರ್ವೇ ಮಾಡದೇ ಇರುವುದು ಬೇಸರದ ಸಂಗತಿಯಾಗಿದೆ. ಎರಡು ಆರ್ ಬಿಎಸ್ ಹೆಚ್ ತಂಡಗಳನ್ನು ರಚಿಸಿ, ಮಕ್ಕಳ ದಾಖಲೆ ಮಾಡುವುದಕ್ಕೆ ಮುಂದಾಗಬೇಕು ಎಂದು ಸೂಚನೆ ನೀಡಿದರು. ಕಳೆದ ಎರಡು ಮೂರು ವರ್ಷಗಳಿಂದ ಪೌಷ್ಠಿಕ ಪುರ್ನಚೇತನ ಘಟಕದಲ್ಲಿ ಕೆಲಸ ನಿರ್ವಹಿಸುವ ತಾಯಂದಿರಿಗೆ ದಿನಗೂಲಿ ಅನುದಾನ ನೀಡಿಲ್ಲ, ತಾಯಂದಿಯರು ಬಡವರು…

Read More

ಎರಡು ದಿನಗಳ ಹಿಂದೆ ಬ್ರೈನ್ ಹ್ಯಾಮರೇಜ್ (Brain Hemorrhage) ಗೆ ತುತ್ತಾಗಿದ್ದ ಹಿರಿಯ ನಟಿ ಹೇಮಾ ಚೌಧರಿ (Hema Chaudhary) ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ನಗರ ಪ್ರತಿಷ್ಠಿತ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು ಬೆಳಗ್ಗೆಗಿಂತ ಈಗ ಅವರ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡಿದೆ ಎಂದು ಹೇಳಲಾಗುತ್ತಿದೆ. ಬೆಳಗ್ಗೆ ಹೇಮಾ ಚೌಧರಿ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಎರಡು ದಿನಗಳ ಹಿಂದೆ ಅವರಿಗೆ ಬ್ರೈನ್ ಹ್ಯಾಮರೇಜ್ ಆಗಿದ್ದು,  ಕೂಡಲೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಕನ್ನಡ, ಮಲಯಾಳಂ, ತೆಲುಗು, ತಮಿಳು ಹೀಗೆ ನಾನಾ ಭಾಷೆಗಳಲ್ಲಿ ಹೇಮಾ ಚೌಧರಿ ನಟಿಸಿದ್ದಾರೆ. ಕಿರುತೆರೆಯಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹೀಗಾಗಿ ಹೇಮಾ ಅವರ ಅನಾರೋಗ್ಯ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಹೇಮಾ ಅವರ ಪುತ್ರ ಐರ್ಲೆಂಡ್ ನಲ್ಲಿ ಇದ್ದು, ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಅವರ…

Read More

ತುಮಕೂರು: ಚುನಾವಣೆ ಬಂದಾಗ ಬಿಜೆಪಿಗರು (BJP) ಯಾವುದಾರೂ ಒಂದು ಗಲಾಟೆಯನ್ನ ಸೃಷ್ಟಿ ಮಾಡ್ತಾರೆ. ಅಂದು ಪುಲ್ವಾಮಾ ದಾಳಿ (Pulwama Attack) ಮಾಡಿಸಿದ್ದು ಬಿಜೆಪಿಗರೇ ಎಂದು ಗುಬ್ಬಿ ಶಾಸಕ ಎಸ್‌.ಆರ್‌ ಶ್ರೀನಿವಾಸ್‌ (SR Srinivas) ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪುಲ್ವಾಮಾ ದಾಳಿ ಮಾಡಿಸಿದ್ದು, ಬಿಜೆಪಿಗರೇ, ಚುನಾವಣೆ ಬಂದಾಗ ಯಾವುದಾರೂ ಒಂದು ಗಲಾಟೆ ಸೃಷ್ಟಿ ಮಾಡಿಸುತ್ತಾರೆ. ಸ್ಮೋಕ್‌ ಬಾಂಬ್‌ ಪ್ರಕರಣ (Smoke Bomb Parliament) ವಿಚಾರದಲ್ಲಿಯೂ ಪಾಸ್‌ ಕೊಟ್ಟಿದ್ದು ಪ್ರತಾಪ್‌ ಸಿಂಹ. ಅದೇ ಪಾಸನ್ನ ಪೀರ್‌ ಸಾಬ್‌ನೋ ಅಥವಾ ಕಾಂಗ್ರೆಸ್‌ನವರೋ ಕೊಟ್ಟಿದ್ದರೇ ಅದರ ಲಾಭವನ್ನ ಬಿಜೆಪಿಯವರೇ ಪಡೆಯುತ್ತಿದ್ದರು. ಈ ದೇಶದಲ್ಲಿ ಎಷ್ಟು ಗಲಾಟೆ ಮಾಡಿಸುತಿದ್ರು ಎಂದು ಕಿಡಿ ಕಾರಿದ್ದಾರೆ. https://ainlivenews.com/mp-died-of-heart-attack-while-speaking-in-parliament/ ಸಂಸದ ಪ್ರತಾಪ್‌ ಸಿಂಹನನ್ನ ವಿಚಾರಣೆ ಮಾಡುತ್ತಿಲ್ಲ. ಯಾವ ಮೂಲದಿಂದ ಹೇಗೆ ಪಾಸ್‌ ಕೊಟ್ಟ ಅನ್ನೋದನ್ನ ತನಿಖೆ ಮಾಡಿಸಬೇಕು. ಸಂಸದ ಸದಸ್ಯತ್ವದಿಂದಲೇ ಪ್ರತಾಪ್‌ ಸಿಂಹನನ್ನ ವಜಾಗೊಳಿಸಬೇಕು ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರು ಎಷ್ಟು ಲೂಟಿ ಮಾಡಿದ್ರೂ ಪರ್ವಾಗಿಲ್ಲ, ಬೇರೆ ಪಕ್ಷದವರು…

Read More

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪತ್ನಿಯಿಂದಲೇ ಪತಿ ಬರ್ಬರ ಹತ್ಯೆಗೈದ ಪ್ರಕರಣವೊಂದು ನಡೆದಿದೆ. ಉಮೇಶ್ ದಾಮಿ (27) ಕೊಲೆಯಾದ ಪತಿಯಾಗಿದ್ದು, ಈತನನ್ನು ಪತ್ನಿ ಮನಿಷಾ ದಾಮಿ ಕೊಲೆ ಮಾಡಿದ್ದಾಳೆ. ಈ ಘಟನೆ ಹುಳಿಮಾವು (Hulimavu) ಸಮೀಪದ ಕಾಲೇಜಿನಲ್ಲಿ ನಡೆದಿದೆ. ಈ ದಂಪತಿ ಕಾಲೇಜೊಂದರಲ್ಲಿ ಸೆಕ್ಯುರಿಟಿ ಹಾಗೂ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಘಟನೆ ನಡೆದಂದು ಉಮೇಶ್ ರಾತ್ರಿ ಗೆಳೆಯನೊಂದಿಗೆ ಎಣ್ಣೆ ಪಾರ್ಟಿಗೆ ಹೋಗಿದ್ದ. ಪಾರ್ಟಿ ಮುಗಿಸಿಕೊಂಡು ರಾತ್ರಿ 12 ಗಂಟೆ ಸುಮಾರಿಗೆ ಮನೆಗೆ ವಾಪಸ್ಸಾಗಿದ್ದ. ಆ ವೇಳೆ ಮನಿಷಾ ಫೋನ್ ನಲ್ಲಿ ಮಾತನಾಡುತ್ತಿದ್ದಳು. ಇದರಿಂದ ಕೋಪಗೊಂಡ ಉಮೇಶ್ ಆಕೆಯ ಜೊತೆಗೆ ಜಗಳವಾಡಿದ್ದಾನೆ ಅನೈತಿಕ ಸಂಬಂಧ ಹೊಂದಿರೋ ಬಗ್ಗೆ ಅನುಮಾನದಿಂದ ಪತ್ನಿ ಜೊತೆ ಗಲಾಟೆ ಮಾಡಿದ್ದಾನೆ. ಈ ಜಗಳ ವಿಕೋಪಕ್ಕೆ ಹೋದಾಗ ಮನಿಷಾ, ಚಾಕು ತೆಗೆದುಕೊಂಡು ಉಮೇಶ್ ದಾಮಿಗೆ ಇರಿದಿದ್ದಾಳೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಉಮೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಬಳಿಕ ಉಮೇಶ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇತ್ತ ಆರೋಪಿ ಮನಿಷಾಳನ್ನ ಬಂಧಿಸಿ ಹುಳಿಮಾವು…

Read More

ಕನ್ನಡದ ಹಿರಿಯ ನಟಿ ತಾರಾ (Thara Anuradha) ಅವರ ಫೇಸ್‍ಬುಕ್ ಹ್ಯಾಕ್ ಮಾಡಿ ಅನಾವಶ್ಯಕ ವಿಚಾರಗಳ ಕುರಿತಾಗಿ ಪೋಸ್ಟ್ ಮಾಡಲಾಗಿದೆ. ಫೇಸ್‍ಬುಕ್ (Facebook Account Hack) ಐಡಿ ಮೂಲಕ ಸ್ನೇಹಿತರಿಗೆ ಟ್ಯಾಗ್ ಮಾಡಿ ಅನಾವಶ್ಯಕ ಸಂದೇಶ ಕಳಿಸಿದ ಆರೋಪದ ಮೇಲೆ ತಾರಾ ಅವರು ದಕ್ಷಿಣ ವಿಭಾಗ ಸೆನ್ ಠಾಣೆಗೆ ದೂರು ನೀಡಿದ್ದಾರೆ. ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿರೋ ಹಿರಿಯ ನಟಿ, ಕಾನೂನು ಮೂಲಕ ಕ್ರಮಕ್ಕೆ ಒತ್ತಾಯಿಸಿದ್ದಾರೆ. ನಟಿ ತಾರಾನುರಾಧ ಹಾಗೂ ತಾರಾನುರಾಧ ವೇಣು ಎಂಬ ಎರಡು ಅಕೌಂಟ್‍ಗಳನ್ನು ಬಳಕೆ ಮಾಡುತ್ತಿದ್ದರು. ಇತ್ತೀಚೆಗೆ ಅವರು ಹೆಚ್ಚಾಗಿ ತಾರಾನುರಾಧ ವೇಣು ಎಂಬ ಅಕೌಂಟ್ ಬಳಸುತ್ತಿದ್ದರು. ಈ ವೇಳೆ ಸ್ನೇಹಿತರೊಬ್ಬರು ತಾರಾಗೆ ಲಿಂಕ್ ಒಂದನ್ನ ಕಳುಹಿಸಿದ್ದಾರೆ. ಆಗ ವಿಚಾರ ಬಯಲಾಗಿದೆ. ತಾರಾನುರಾಧ ಎಂಬುವ ಅಕೌಂಟ್‍ನಲ್ಲಿ ವಿಚಾರವೊಂದನ್ನ ಪೋಸ್ಟ್ ಮಾಡಲಾಗಿತ್ತು. ಆದರೆ ಅದು ನಾನು ಮಾಡಿದ ಪೋಸ್ಟ್ ಅಲ್ಲ. ನನ್ನ ಅಕೌಂಟ್ ಓಪನ್ ಮಾಡಿದಾಗ ಆ ಪೋಸ್ಟ್ ಕಾಣುತ್ತಿಲ್ಲ. ಆದರೆ ಲಿಂಕ್ ಓಪನ್ ಮಾಡಿದರೆ ಆ ಪೋಸ್ಟ್…

Read More

ಧಾರವಾಡ : ಸರಿಯಾದ ಸಮಯಕ್ಕೆ ಬಸ್ ಬಿಡ್ತಿಲ್ಲ.. ಸರಿಯಾಗಿ ಶಾಲೆಗೆ ಹೋಗಲು ಆಗ್ತಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡು ಆಕ್ರೋಶ ವ್ಯಕ್ತಪಡಿಸಿದ ಘಟನೆ ಧಾರವಾಡ ರಾಮನಗರ ಬಡಾವಣೆಯಲ್ಲಿ ನಡೆದಿದ್ದು, ವಿದ್ಯಾರ್ಥಿಗಳು ಬಸ್ ಮುಂಬಾಗದಲ್ಲಿ ಪ್ರತಿಭಟನೆ ನಡೆಸಿದರು. ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಎಷ್ಟೇ ಬೇಡಿಕೊಂಡರು ಸರಿಯಾದ ಸಮಯಕ್ಕೆ ಬಸ್ ಬರ್ತಿಲ್ಲ ನಿತ್ಯ ಶಾಲೆಗೆ ಹೋಗಲು ಆಗ್ತಿಲ್ಲ ಹಿಂಗಾದ್ರೆ ಹೆಂಗೆ ನಾವು ಕಲಿಯುವುದು ಎಂದು ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. https://ainlivenews.com/mp-died-of-heart-attack-while-speaking-in-parliament/ ಪರೀಕ್ಷಾ ಸಂದರ್ಭದಲ್ಲಿ ಈ ರೀತಿ ಬಸ್ ಬಿಡ್ದೇ ಚೆಲ್ಲಾಟ ಆಡುತ್ತಾ ಇರೋ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳು ಘೋಷಣೆ ಕೂಗುತ್ತ ಕೇಳೋರು ಯಾರು ಅಧಿಕಾರಿಗಳೇ ವಿದ್ಯಾರ್ಥಿಗಳ ಗೋಳು… ಕೇಳಿ ಎಂದು ಆಗ್ರಹಿಸಿದರು. ಈ ಗಂಭೀರವಾಗಿ ಪರಿಗಣಿಸಿ ಸರಿಯಾಗಿ ಬಸ್ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸ್ಥಳಿಯರು ಹಾಗೂ ವಿದ್ಯಾರ್ಥಿಗಳು ಆಗ್ರಹಿಸಿದರು.

Read More