Author: AIN Author

ದೊಡ್ಡಬಳ್ಳಾಪುರ:-ಚಲಿಸುತ್ತಿದ್ದ ಕಾರಿನಲ್ಲಿ ಇದಕ್ಕಿದಂತೆ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಸ್ವಿಪ್ಟ್ ಕಾರು ಹೊತ್ತಿ ಉರಿದಿದೆ. ದೊಡ್ಡಬಳ್ಳಾಪುರ- ಯಲಹಂಕ ರಸ್ತೆಯ ಮಾರಸಂದ್ರ ಬಳಿಯಲ್ಲಿ ನಡೆದ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ವಕೀಲರ ಕುಟುಂಬ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಕೀಲರ ಕುಟುಂಬ, ಗೌರಿಬಿದನೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದವೆಳೆ ಇದ್ದಕ್ಕಿದಂತೆ ಕಾರು ಹೊತ್ತಿ ಉರಿದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ‌ ಬೆಂಕಿ‌ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ. ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Read More

ಕಲಬುರಗಿ:- ಇಲ್ಲಿ ನಡೆದಿದ್ದ KEA ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ RD ಪಾಟೀಲ್ ಸೇರಿ 12 ಆರೋಪಿಗಳ ವಿರುದ್ಧ ಪೋಲೀಸರು ಕೊಕಾ ಕಾಯ್ದೆ ಜಾರಿ ಮಾಡಿದ್ದಾರೆ. ವಿವಿದ ಹುದ್ದೆಗಳಿಗಾಗಿ ಅಕ್ಟೋಬರ್ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ಅಕ್ರಮ ಬಯಲಾಗಿತ್ತು. ಅಷ್ಟೇಅಲ್ಲ ಅಕ್ರಮ ಕುರಿತಾದ ಸಾಕ್ಷಗಳೂ ಸಿಐಡಿ ಪೋಲೀಸರಿಗೆ ಸಿಕ್ಕಿದ್ವು. ಈ ಹಿನ್ನಲೆ ಅಕ್ರಮ ದಂಧೆಯಲ್ಲಿ ಶಾಮೀಲಾಗಿರುವ 12 ಜನರ ವಿರುದ್ಧ ಇದೀಗ ಕಠಿಣ ಕೊಕಾ ಕಾಯ್ದೆ ಜಾರಿ ಮಾಡಲಾಗಿದೆ..

Read More

ಬೆಂಗಳೂರು:- ಕೆಲವು ವಿಚಾರದಲ್ಲಿ ನಾನು ಸೈಲೆಂಟ್ ಆಗಿಲ್ಲ. ಹೇಳಿಕೆಗಳನ್ನ ಕೊಡುವುದು ಏನು ಕಡಿಮೆ ಮಾಡಿಲ್ಲ. ಶತ್ರುಗಳಿದ್ದರೆ ಒಳ್ಳೆಯದೇ ಎಂದು ಸ್ವಪಕ್ಷದವರ ವಿರುದ್ಧ ಬಿಕೆ ಹರಿಪ್ರಸಾದ್ ವಾಗ್ದಾಳಿ ಮಾಡಿದ್ದಾರೆ. ಲೋಕಸಭೆ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಸಂಸತ್‌ನಲ್ಲಿ ನಡೆದಿರುವ ಘಟನೆ ತಲೆ ತಗ್ಗಿಸುವ ವಿಚಾರ. ಇಷ್ಟು ಸಂಖ್ಯೆಯ ವಿಪಕ್ಷ ಸದಸ್ಯರನ್ನು ಅಮಾನತು ಮಾಡಿರುವುದು ಇದೇ ಮೊದಲು. ಬಿಜೆಪಿಯ ತತ್ವ, ಸಿದ್ಧಾಂತ ಯಾರಿಗೂ ಗೊತ್ತಾಗದಂತೆ ಜಾರಿಗೆ ತರುತ್ತಿದ್ದಾರೆ ಎಂದರು. ರೋಡ್‌ನಿಂದ ರಫೆಲ್ವರೆಗೆ ಸಂಸದ ಪ್ರತಾಪ್ ಮಾತನಾಡುವುದಷ್ಟೇ ಅಲ್ಲ. ಈಗ ಪ್ರತಾಪ್ ಸಿಂಹ ಅಪರಾಧಿ ಸ್ಥಾನದಲ್ಲಿದ್ದಾರೆ. ಅವರ ತನಿಖೆ ಆಗಲೇ ಬೇಕು. ದಾಳಿಕೋರರಿಗೆ ಅವಕಾಶ ಕೊಟ್ಟವರನ್ನು ಅಮಾನತು ಮಾಡಬೇಕಿತ್ತು. ಆದರೂ ಅವರನ್ನ ಅಮಾನತು ಮಾಡಿಲ್ಲ ಎಂದ ಅವರು ರಷ್ಯಾದ ಯುದ್ಧ ನಿಲ್ಲಿಸುವುದಾಗಿ ವಿಶ್ವಗುರು ಹೇಳಿಕೊಳ್ಳುತ್ತಾರೆ, ಅದೇ ವಿಶ್ವಗುರು ವಿಶ್ವದ ಮುಂದೆ ಭಾರತದ ಮರ್ಯಾದೆ ಹರಾಜು ಹಾಕುತ್ತಿದ್ದಾರೆಂದು ಟೀಕಿಸಿದರು.

Read More

ಶಿರಾ:-ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಲ್ಲಿ ಮುಳುಗಿದ್ದು, ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣ ಕಡೆಗಣಿಸಿದೆ ಎಂದು ವಿಧಾನಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಕಿಡಿಕಾರಿದರು. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ಅಧಿಕಾರಕ್ಕೆ ಬರುವಾಗ ಡಿಸೆಂಬರ್ ಒಳಗೆ ೭ನೇ ವೇತನ ಆಯೋಗ, ಓಪಿಎಸ್ ಜಾರಿ ಮಾಡುವ ಭರವಸೆ ಈಡೇರಿಸುವಲ್ಲಿ ವಿಫಲವಾಗುವ ಮೂಲಕ ಸಿದ್ದರಾಮಯ್ಯ ಸರ್ಕಾರಿ ನೌಕರರು ಮತ್ತು ಶಿಕ್ಷಕರಿಗೆ ಮೋಸ ಮಾಡಿದ್ದಾರೆ ಎಂದು ಟೀಕಿಸಿದರು. ನಗರದ ವಿವಿಧ ಶಾಲೆ,ಕಾಲೇಜುಗಳಿಗೆ ಭೇಟಿ ನೀಡಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹಿನ್ನಲೆಯಲ್ಲಿ ಮತ ಯಾಚಿಸಿದ ಅವರು, ಸಿದ್ದರಾಮಯ್ಯ ಸರ್ಕಾರ ಶಿಕ್ಷಕರು ಮತ್ತು ನೌಕರರಿಗೆ ನೀಡಿರುವ ಭರವಸೆ ಈಡೇರಿಸಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಎನ್‌ಪಿಎಸ್ ರದ್ದು-ಒಪಿಎಸ್ ಜಾರಿ ಮಾಡುವ ಭರವಸೆ ನೀಡಿದ್ದಾರೆ, ಇದನ್ನು ಕಾರ್ಯಗತಗೊಳಿಸಲು ಮುಂದಾಗಿಲ್ಲ ಎಂದು ಟೀಕಿಸಿದ ಅವರು, ಸರ್ಕಾರದ ೬ ತಿಂಗಳ ಸಾಧನೆಯ ಪಕ್ಷಿನೋಟದಲ್ಲಿ ಇದರ ಪ್ರಸ್ತಾಪವೇ ಇಲ್ಲ ಎಂದರು. ಎನ್‌ಪಿಎಸ್ ಅಡಿ ಈಗಾಗಲೇ ನಿವೃತ್ತರಾಗಿರುವ ಕೆಲವು…

Read More

ದಾವಣಗೆರೆ:- ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಘೋಷಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಇಂಡಿಯಾ ಮೈತ್ರಿಕೂಟದಿಂದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಘೋಷಿಸಿರುವುದು ಕೂಸು ಹುಟ್ಟುವ ಮುನ್ನವೇ ಹೆಸರಿಟ್ಟಂತಾಗಿದೆ ಎಂದರು. ಚುನಾವಣೆಯಲ್ಲಿ ಗೆದ್ದ ಬಳಿಕ ಪ್ರಧಾನಿ ಸ್ಥಾನಕ್ಕೆ ಆಯ್ಕೆ ಮಾಡಬೇಕು. ಚುನಾವಣೆ ಮುಗಿದ ಬಳಿಕ ಆಯ್ಕೆಯಾಗಲಿ ಎಂದು ಸ್ವತಃ ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ್ದಾರೆ. ಹಾಗಾಗಿ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿ ಅಭ್ಯರ್ಥಿ ಆಯ್ಕೆ ಬಗ್ಗೆ ಯೋಚನೆ ಮಾಡಬೇಕು. ಆದರೂ, ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಿ ಘೋಷಣೆ ಮಾಡಿರುವುದನ್ನು ಸ್ವಾಗತಿಸುವೆ ಎಂದರು.

Read More

ಬೆಳಗಾವಿ: ವಂಟಮೂರಿ ಪ್ರಕರಣದಲ್ಲಿ ಬಿಜೆಪಿ ಆರೋಪ ಮಾಡುತ್ತಿರುವುದಕ್ಕೆ ತಿರುಗೇಟು ಕೊಟ್ಟಿರುವ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಇದರಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಗೃಹ ಸಚಿವರು ಸ್ಥಳಕ್ಕೆ ಭೇಟಿ ವಿಚಾರಣೆ ಮಾಡಿದ್ದಾರೆ. ಅವರು ಯಾಕೆ ರಾಜೀನಾಮೆ ಕೊಡಬೇಕು.? ಯಾರು ಕೂಡ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಏನು ಮಾಡಬೇಕು ಎಂದು ಸಲಹೆ ನೀಡಲಿ ಎಂದು ತಿಳಿಸಿದ್ದಾರೆ. ಬಿಜೆಪಿ ವಂಟಮೂರಿ ಪ್ರಕರಣಕ್ಕೆ ಹೆಚ್ಚು ಆಸಕ್ತಿ ತೋರುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲದರಲ್ಲೂ ಬಿಜೆಪಿ ರಾಜಕೀಯ ಮಾಡ್ತಾರೆ. ಅದಕ್ಕೆ ಉತ್ತರ ಕೂಡಲಾಗಿದೆ. ಅವರು ರಾಜಕೀಯ ‌ಮಾಡ್ತಾರೆ ಎಂದು ನಾವು‌ ಮಾಡಲ್ಲ. ಅಲ್ಲಿ ಆಗಿದ್ದ ಘಟನೆ ಯಾರಿಗೆ ಚೇಂಜ್ ಮಾಡಲು ಸಾಧ್ಯವಿಲ್ಲ. ಇನ್ನೂ ಹತ್ತು ಸಾರಿ ಬಂದ್ರೂ ವಸ್ತು ಸ್ಥಿತಿ ಹಾಗೆ ಇರುತ್ತದೆ. ಬಿಜೆಪಿಯವರು ಬೆಳಗಾವಿ ಘಟನೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ದೇಶದಲ್ಲಿ ಇಂಥ ಬಹಳಷ್ಟು ಘಟನೆಗಳು ಆಗಿವೆ, ಅಲ್ಲಿಗೂ ಹೋಗಬೇಕು, ಇಲ್ಲಿ ಅಷ್ಟೇ ಬಂದರೆ ಅದು ರಾಜಕೀಯ ಅನಿಸುತ್ತೆ. ಮಣಿಪುರದ ಘಟನೆ ಮೂರು ತಿಂಗಳು…

Read More

ಬೆಂಗಳೂರು:- ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ ಎಂದು ತುಷಾರ್ ಗಿರಿನಾಥ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಮತ್ತೆ ಕೊರೊನಾ ಕಾರ್ಮೋಡ ಆವರಿಸಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಪ್ರಕರಣ ಇದುವರೆಗೂ ಪತ್ತೆಯಾಗಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಸದ್ಯಕ್ಕೆ ವರ್ಷಾಚರಣಗೆ ಯಾವುದೆ ನಿರ್ಬಂಧ ವಿಧಿಸಿಲ್ಲ ಎಂದರು. ಬಿಬಿಎಂಪಿ ವ್ಯಾಪ್ತಿಯ ಪಿಹೆಚ್‍ಸಿ ನಮ್ಮ ಕ್ಲಿನಿಕ್ ಸಿದ್ಧತೆ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಕೇಳಿದ್ದು, ಈ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಂಬಂಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರ್ಯಾಂಡಮ್ ಮತ್ತು ಆರ್‍ಟಿಸಿಪಿಆರ್ ಪರೀಕ್ಷೆ ಅಗತ್ಯವಿದ್ದರೆ ಸಿದ್ಧತೆ ಮಾಡಿಕೊಳ್ಳಿ ಎಂದು ತಿಳಿಸಿದ್ದಾರೆ. ಪಾಲಿಕೆ ವ್ಯಾಪ್ತಿಯ ಎಸ್‍ಎಆರ್‍ಐ ಮತ್ತು ಐಎಲ್‍ಐ ಕೇಸ್ ಮೇಲೆ ನಿಗಾ ವಹಿಸಲು ಪಾಲಿಕೆ ಮುಂದಾಗಿದ್ದು, ಆರೋಗ್ಯಾಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಕೋವಿಡ್ ಪ್ರಕರಣಗಳು ಪತ್ತೆಯಾಗಿಲ್ಲ. ವರ್ಷಾಷರಣೆಗೆ ಯಾವುದೇ ಪ್ರತ್ಯೇಕ ಗೈಡ್‍ಲೈನ್ಸ್ ವಿಧಿಸಿಲ್ಲ. ಆದರೂ ಜನರು ಕ್ರಮಗಳನ್ನು…

Read More

ಬೆಂಗಳೂರು:- ವ್ಯಕ್ತಿಗತವಾಗಿ ಯಾರ ಬಗ್ಗೆಯೂ ಟೀಕೆ ಬೇಡ ಎಂದು ವಿಜಯೇಂದ್ರಗೆ ರೇಣುಕಾಚಾರ್ಯ ಸಲಹೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಪಕ್ಷಕ್ಕೆ ತೊಂದರೆ ಆಗುವ ಹಾಗೂ ವ್ಯಕ್ತಿಗತವಾಗಿ ಯಾರ ಬಗ್ಗೆಯೂ ಟೀಕೆ ಮಾಡಬೇಡಿ ಎಂದು ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಾಕೀತು ಮಾಡಿದ್ದಾರೆ. ಗೊಂದಲ ಮೂಡಿಸದಂತೆ ಹಾಗೂ ಪಕ್ಷ ಮತ್ತು ಯಾರ ಬಗ್ಗೆಯೂ ವ್ಯಕ್ತಿಗತವಾಗಿ ಟೀಕೆ ಮಾಡದಂತೆ ವಿಜಯೇಂದ್ರ ಸೂಚಿಸಿದ್ದಾರೆ. ಹೀಗಾಗಿ ನಾನು ಏನೂ ಮಾತನಾಡುವುದಿಲ್ಲ ಎಂದು ರೇಣುಕಾಚಾರ್ಯ ಹೇಳಿ ಹೋಗಿದ್ದಾರೆ. ಈ ಹಿಂದೆ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ಕೆಲ ನಾಯಕರ ವಿರುದ್ಧ ರೇಣುಕಾಚಾರ್ಯ ಬಹಿರಂಗ ಹೇಳಿಕೆ ನೀಡುತ್ತಿದ್ದರು. ರೇಣುಕಾಚಾರ್ಯ ಹೇಳಿಕೆಗಳಿಂದ ಕೆಲ ಅಸಮಾಧಾನಿತರು ಕೆರಳಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಗೆ ಕರೆದು ಇಂದು ಬಿವೈ ವಿಜಯೇಂದ್ರ ತಾಕೀತು ಮಾಡಿದ್ದಾರೆ.

Read More

ಬೆಂಗಳೂರು:- ಸರ್ಕಾರಿ ಬಸ್‌ ಗಳಲ್ಲಿ ಇನ್ಮುಂದೆ ಮಾಸ್ಕ್‌ ಕಡ್ಡಾಯ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ನೆರೆಯ ಕೇರಳ, ತಮಿಳುನಾಡಿನಲ್ಲಿ ಕೋವಿಡ್‌ ಹಾವಳಿ ಹೆಚ್ಚಿದೆ. ರಾಜ್ಯದಲ್ಲಿಯೂ ಅದಕ್ಕಾಗಿ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯಸರ್ಕಾರದ ಮಾರ್ಗಸೂಚಿಯಂತೆ ಬಸ್‌ಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದರು. ಕೇರಳದಲ್ಲಿ ಕೋವಿಡ್ ಆರ್ಭಟ ಹಿನ್ನೆಲೆ ಕೆಎಸ್‌ಆರ್‌ಟಿಸಿ ಮತ್ತೆ ಅಲರ್ಟ್ ಆಗಿದ್ದು, ಕೇರಳದಿಂದ ಬರುವ ಹಾಗೂ ಹೋಗುವ ಬಸ್ಸುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಅದರಂತೆ ಅಧಿಕಾರಿಗಳು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ

Read More

ಬೆಂಗಳೂರು:- ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣವನ್ನು ಬೆಂಗಳೂರು ಹೈಕೋರ್ಟ್ ರದ್ದುಪಡಿಸಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ಹೊರಹಾಕಿತು. ಅರ್ಜಿದಾರರ ವಿರುದ್ದ ಪ್ರಕರಣ ದಾಖಲಿಸುವ ಸಂದರ್ಭದಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್​ 17 ಎ ಅಲ್ಲಿ ತಿಳಿಸಿರುವ ಪ್ರಕ್ರಿಯೆಯನ್ನು ಪಾಲಿಸಿಲ್ಲ. ಶಾಸಕರಾಗಿದ್ದರೂ ಅವರ ವಿರುದ್ಧ ಪೂರ್ವಾನುಮತಿ ಪಡೆಯದೆ ಪ್ರಕರಣ ದಾಖಲಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರಕರಣ ರದ್ದುಪಡಿಸಿರುವುದಾಗಿ ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ. ಪ್ರಕರಣದ ದೂರುದಾರ ಶ್ರೇಯಸ್ ಕಶ್ಯಪ್ ಅವರ ಕಂಪನಿಗೆ ಮಾಡಾಳು ವಿರೂಪಾಕ್ಷಪ್ಪ ಅಧ್ಯಕ್ಷರಾಗಿದ್ದ ಕೆಎಸ್‌ಡಿಎಲ್​ನಿಂದ ಟೆಂಡರ್ ಕಾರ್ಯಾದೇಶ ನೀಡಲು ಶೇ 30ರಷ್ಟು ಕಮಿಷನ್ ಕೇಳಲಾಗಿದೆ ಎಂಬ ಆರೋಪವಿದೆ. ಆದರೆ, ಟೆಂಡರ್ ಅಂತಿಮಗೊಳಿಸಿ ಕಾರ್ಯಾದೇಶ ನೀಡುವ ಅಧಿಕಾರ ವಿರೂಪಾಕ್ಷಪ್ಷಗೆ ಇಲ್ಲ. ಅವರು ಲಂಚಕ್ಕೆ ಯಾವುದೇ ಬೇಡಿಕೆಯಿಟ್ಟ ಬಗ್ಗೆ ದೂರಿನಲ್ಲಿ ಉಲ್ಲೇಖವಿಲ್ಲ. ಪುತ್ರನೊಂದಿಗೆ ಮಾತನಾಡುವಂತೆ ಅರ್ಜಿದಾರರು ತಿಳಿಸಿರುವುದಾಗಿ ಆರೋಪಿಸಲಾಗಿದೆ. ಒಂದು ರೂಪಾಯಿ ಪಡೆಯದೇ ಟೆಂಡರ್ ಕಾರ್ಯಾದೇಶ ನೀಡಲಾಗಿದೆ. ಅಲ್ಲದೆ, ಪ್ರಕರಣ ಸಂಬಂಧ ವಿರೂಪಾಕ್ಷಪ್ಪ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಅವರು ಲಂಚಕ್ಕೆ ಬೇಡಿಕೆ…

Read More