Author: AIN Author

ಮುಂದಿನ ಆವೃತ್ತಿಯ ಐಪಿಎಲ್ ಆರಂಭದ ಬಗ್ಗೆ ಬಿಗ್​ ಅಪ್​ಡೇಟ್ ಹೊರಬಿದ್ದಿದ್ದು, ವರದಿಯ ಪ್ರಕಾರ 17ನೇ ಆವೃತ್ತಿಯ ಐಪಿಎಲ್ ಮಾರ್ಚ್ 22 ರಿಂದ ಆರಂಭವಾಗಿ ಮೇ ಅಂತ್ಯದವರೆಗೆ ಅಂದರೆ ಮೇ 29 ರವರೆಗೆ ನಡೆಯುವ ನಿರೀಕ್ಷೆಯಿದೆ. ಜೂನ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು, ಈ ಬಾರಿಯ ಐಪಿಎಲ್ ಅನ್ನು ಬೇಗನೇ ಮುಗಿಸುವ ನಿರ್ಧಾರಕ್ಕೆ ಬರಲಾಗಿದೆ ಎಂದು ವರದಿಯಾಗಿದೆ. ಮುಂದಿನ ವರ್ಷ ಭಾರತದಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿದ್ದು, ಇದು ಐಪಿಎಲ್ ವೇಳಾಪಟ್ಟಿಯ ಮೇಲೂ ಪರಿಣಾಮ ಬೀರುವ ನಿರೀಕ್ಷೆಯಿದೆ. ಈ ಕಾರಣಕ್ಕೆ ಐಪಿಎಲ್‌ನ ಸಂಪೂರ್ಣ ವೇಳಾಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ. ಕ್ರಿಕ್‌ಬಜ್ ವರದಿಯ ಪ್ರಕಾರ, ಎಲ್ಲವೂ ಸರಿಯಾಗಿ ನಡೆದರೆ ಐಪಿಎಲ್ 2024 ಅನ್ನು ಮಾರ್ಚ್ 22 ರಿಂದ ಮೇ ಅಂತ್ಯದವರೆಗೆ ಆಯೋಜಿಸಬಹುದು. ಬಿಸಿಸಿಐ ಐಪಿಎಲ್ 2024 ಕ್ಕೆ ವಿಂಡೋವನ್ನು ನಿಗದಿಪಡಿಸಿದೆ. ಹರಾಜು ಪ್ರಕ್ರಿಯೆ ಮುಗಿದ ಬಳಿಕ ವೇಳಾಪಟ್ಟಿಗೆ ಸಂಬಂಧಿಸಿದ ಸಿದ್ಧತೆಗಳು ಆರಂಭವಾಗಲಿವೆ. ಐಪಿಎಲ್‌ನ ಮಿನಿ ಹರಾಜಿನ ಕುರಿತು ಮಾತನಾಡುವುದಾದರೆ, ಮೊದಲ ಬಾರಿಗೆ ಐಪಿಎಲ್ 2024…

Read More

ಬೆಂಗಳೂರು:- ಅನುದಾನ ಕೊರತೆಯಿಂದ ವಿವಿಗಳ ಮುಚ್ಚಬೇಡಿ ಎಂದು ಸಿಎಂಗೆ ಮಾಜಿ ಸಿಎಂ ಬೊಮ್ಮಾಯಿ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರ ಅತ್ಯಂತ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ನೂತನ ವಿಶ್ವ ವಿದ್ಯಾಲಯಗಳನ್ನು ಅನುದಾನದ ಕೊರತೆ ನೆಪ ಹೇಳಿ ಮುಚ್ಚಲು ಮುಂದಾಗುತ್ತಿರುವುದು ಹಿಂದುಳಿದ ಜಿಲ್ಲೆಗಳು ಮತ್ತು ಬಡ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಅನ್ಯಾಯ ಮಾಡಿದಂತಾಗುತ್ತದೆ. ಆದ್ದರಿಂದ ನೂತನ ವಿಶ್ವ ವಿದ್ಯಾಲಯಗಳನ್ನು ಅನುದಾನದ ಕೊರತೆ ನೆಪದಲ್ಲಿ ಮುಚ್ಚುವ ಪ್ರಸ್ತಾಪವನ್ನು ಕೈಬಿಡುವಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಇನ್ನೂ ಹೊಸ ಸರ್ಕಾರ ಬಂದು ಬೆಳಗಾವಿಯಲ್ಲಿ ಪ್ರಥಮ ಅಧಿವೇಶನ ನಡೆಸುವ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಬಗ್ಗೆ ವಿಶೇಷ ಚರ್ಚೆ ಮತ್ತು ಸಮರ್ಪಕವಾದ ಉತ್ತರವನ್ನು ಉತ್ತರ ಕರ್ನಾಟಕದ ಜನರು ನಿರೀಕ್ಷೆ ಮಾಡಿದ್ದರು. ಆದರೆ, ಯಾವುದೇ ವಿಶೇಷವಾಗಿರುವ ಅಭಿವೃದ್ಧಿ ಪರ ನಿರ್ಣಯಗಳನ್ನು ಸರ್ಕಾರ ಘೋಷಿಸದೇ ಈಗಾಗಲೇ ಇರುವಂತಹ ಕಾರ್ಯಕ್ರಮಗಳನ್ನು ಪುನಃ ಘೋಷಿಸಿ ಜನರ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ. ಉತ್ತರ ಕರ್ನಾಟಕ ಅಷ್ಟೇ ಅಲ್ಲ, ಇಡೀ ಕರ್ನಾಟಕದಲ್ಲಿ…

Read More

ಬಿಗ್​ ಬಾಸ್​ ಸೀಸನ್​ 10 ರ ವಿನ್ನರ್​ ಕಾರ್ತಿಕ್​ ಆಗಬಹುದು ಎಂದು ಪವಿ ಪೂವಪ್ಪ ಭವಿಷ್ಯ ನುಡಿದಿದ್ದಾರೆ. ಹೌದು,ವೈಲ್ಡ್‌ ಕಾರ್ಡ್‌ ಎಂಟ್ರಿ ಮೂಲಕ ಬಿಗ್‌ಬಾಸ್ ಮನೆಯೊಳಗೆ ಪ್ರವೇಶಿಸಿದ್ದ ಪವಿ ಪೂವಪ್ಪ ಅವರ ಮೇಲಿನ ನಿರೀಕ್ಷೆಗಳೂ ಜಾಸ್ತಿಯೇ ಇದ್ದವು. ಹಳೆಯ ಎಪಿಸೋಡ್‌ಗಳನ್ನು ನೋಡಿಕೊಂಡು, ಸದಸ್ಯರ ವರ್ತನೆಗಳನ್ನು ಅರಿತುಕೊಂಡು ಲೆಕ್ಕಾಚಾರ ಮಾಡಿ ಆಡುವ ಅವಕಾಶ ಇರುವುದರಿಂದ ಅವರಿಂದ ಮನೆಯ ಪರಿಸ್ಥಿತಿಯೇ ಬದಲಾಗುತ್ತದೆ ಎಂದುಕೊಳ್ಳಲಾಗಿತ್ತು. ಆದರೆ ಮನೆಯೊಳಗೆ ಪವಿತ್ರಾ ಅಂದುಕೊಂಡಷ್ಟೇನೂ ಸದ್ದು ಮಾಡಲಿಲ್ಲ. ಒಂದು ವಾರ ಉತ್ತಮ ಪಡೆದುಕೊಂಡು ಇನ್ನೊಂದು ವಾರ ಜೈಲುಶಿಕ್ಷೆಯನ್ನೂ ಅನುಭವಿಸಿದ್ದು ಅವರ ಆಟದ ಏರಿಳಿತವನ್ನು ಸೂಚಿಸುವಂತಿದೆ. ಒಳಗೆ ಹೋಗಿ ಮೂರೇ ವಾರಕ್ಕೆ ಮರಳಿ ಬಂದಿರುವ ಅವರು ಮನೆಯಿಂದ ಹೊರಬಿದ್ದಿದ್ದೇ JioCinemaಗೆ ಎಕ್ಸ್‌ಕ್ಲ್ಯೂಸಿವ್ ಸಂದರ್ಶನ ನೀಡಿದ್ದಾರೆ. ಮೂರು ವಾರಗಳ ಪುಟ್ಟ ಜರ್ನಿಯ ಕುರಿತು ಅವರು ಹಂಚಿಕೊಂಡ ಅಭಿಪ್ರಾಯಗಳು ಇಲ್ಲಿವೆ. ‘ನಾನು ಪವಿ ಪೂವಪ್ಪ. ಈವಾಗ ಜಸ್ಟ್ ಬಿಗ್‌ಬಾಸ್‌ ಸೀಸನ್‌ 10 ಮನೆಯಿಂದ ಹೊರಗೆ ಬಂದಿದ್ದೇನೆ. ಮನೆಯಿಂದ ಹೊರ ಬರುವ ಸಣ್ಣ ಸುಳಿವಿತ್ತು ಸಣ್ಣ…

Read More

ಬೆಂಗಳೂರು:- ರೈತರಿಗೆ ಸೂಕ್ತ ಸಮಯದಲ್ಲಿ ಬರ ಪರಿಹಾರ ಸಿಗದಿದ್ದರೆ ಜಿಲ್ಲಾಧಿಕಾರಿಗಳೇ ಹೊಣೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ವಿಡಿಯೋ ಕಾನ್ಪರೆನ್ಸ್ ಮೂಲಕ ಜಿಲ್ಲಾಧಿಕಾರಿಗಳ ಸಭೆ ನಡೆಸಿದ ಸಚಿವ ಕೃಷ್ಣ ಬೈರೇಗೌಡ, ರೈತರ ಜಮೀನಿನ ಸಂಪೂರ್ಣ ವಿಸ್ತೀರ್ಣವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸುವಂತೆ ಕಳೆದ ಎರಡು ತಿಂಗಳಿನಿಂದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರಂತರವಾಗಿ ಸೂಚಿಸಲಾಗುತ್ತಿದೆ. ಆದರೂ, ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಜಮೀನಿನ ಮಾಹಿತಿ ಶೇ.70ನ್ನೂ ಮೀರಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ರೈತರಿಗೆ ಅನ್ಯಾಯವಾಗಲಿದೆ ಎಂದು ಅಸಮಾಧಾನ ಹೊರಹಾಕಿದರು. ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿನ ಸಾಧನೆ ತೀರಾ ಕಳಪೆಯಾಗಿದೆ. ಬರ ಪರಿಹಾರ ಹಣ ನೀಡಲು ರಾಜ್ಯ ಸರ್ಕಾರದ ಸಿದ್ದವಾಗಿದೆ. ಖಜಾನೆಯಲ್ಲಿ ಹಣವೂ ಇದೆ. ಆದರೆ, ಪರಿಹಾರ ಫ್ರೂಟ್ಸ್ ದತ್ತಾಂಶವನ್ನು ಆಧರಿಸಿರುವ ಕಾರಣ ಜಿಲ್ಲಾಧಿಕಾರಿಗಳು ಮಾಡುವ ಸಣ್ಣ ತಪ್ಪೂ ಸಹ ರೈತರ ಮೇಲೆ ಪರಿಣಾಮ ಬೀರಲಿದೆ. ಶೀಘ್ರದಲ್ಲಿ ತಾಲೂಕು ಹೋಬಳಿ ಸಭೆ ನಡೆಸಿ ಎಲ್ಲಾ ಅಧಿಕಾರಿಗಳನ್ನು ಸ್ಥಳ ವೀಕ್ಷಣೆಗೆ ಕಳುಹಿಸಿ ಡಿಸೆಂಬರ್…

Read More

ಬೆಂಗಳೂರು:- ಆಶ್ರಯ ಯೋಜನೆ ಜಾರಿ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಈ ಸಂಬಂಧ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಮತ್ತು ಹಿಂದುಳಿದ ಅಲ್ಪ ಸಂಖ್ಯಾತರ ಗ್ರಾಮಾಭಿವೃದ್ಧಿ ಸಂಘ ಮತ್ತು ಕರ್ನಾಟಕ ಸರ್ಕಾರ ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿರುವ ಹೈಕೋರ್ಟ್​, ಸಂವಿಧಾನದ 162ನೇ ವಿಧಿಯ ಅಡಿ ಲಭ್ಯವಾದ ಕಾರ್ಯಕಾರಿ ಅಧಿಕಾರ ಬಳಕೆ ಮಾಡಿ ರಾಜ್ಯ ಸರ್ಕಾರವು ಆಶ್ರಯ ಯೋಜನೆ ರೂಪಿಸಿದೆ. ಸರ್ಕಾರವು ತನ್ನ ಅಧಿಕಾರ ವ್ಯಾಪ್ತಿ ಮೀರಿ ಆಶ್ರಯ ಯೋಜನೆ ರೂಪಿಸಿದೆ. ಇದರಿಂದ ಯೋಜನೆಯನ್ನು ಜಾರಿ ಮಾಡಲಾಗದು ಮತ್ತು ಯೋಜನೆಯನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದೆ. ಅಲ್ಲದೇ, ಈ ಕಾನೂನಿನ ಘೋಷಣೆಯು ಗಂಗಾಜಲದಂತೆ ಸ್ಪಷ್ಟವಾಗಿರುವ ಕಾರಣ, ಆಶ್ರಯ ಯೋಜನೆಯಡಿ ಮೇಲ್ಮನವಿದಾರರಿಗೆ ಯಾವುದೇ ಪರಿಹಾರ ಕಲ್ಪಿಸಲಾಗುವುದಿಲ್ಲ ಎಂದು ವಿಭಾಗೀಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

Read More

ಇಸ್ಲಾಮಾಬಾದ್: ಗಂಭೀರ ಆರೋಗ್ಯ ಸಮಸ್ಯೆಗಳಿಂದಾಗಿ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು (Dawood Ibrahim) ಪಾಕಿಸ್ತಾನದ ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ವರದಿಗಳ ನಡುವೆ, ಆತನ ಕುಟುಂಬದ ಸದಸ್ಯರು ವಿಷಪ್ರಾಶನ ವಿಚಾರವನ್ನು ಅಲ್ಲಗೆಳೆದಿದ್ದಾರೆ. ದಾವೂದ್ ಆರೋಗ್ಯದ ಕುರಿತ ವಿಚಾರ ಹೊರಬೀಳುತ್ತಿದ್ದಂತೆಯೇ ಮುಂಬೈ ಪೊಲೀಸರು ನಗರದಲ್ಲಿರುವ ಅವರ ಕುಟುಂಬ ಸದಸ್ಯರಿಂದ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ತಂಡವನ್ನು ಕಳುಹಿಸಿದ್ದಾರೆ. ಆಗ ದಾವೂದ್ ಸೋದರಳಿಯ, ಆರೋಗ್ಯ ಸಮಸ್ಯೆಗಳಿಂದ ಚೆನ್ನಾಗಿಲ್ಲ ಎಂದು ಖಚಿತಪಡಿಸಿದ್ದಾರೆ. ಆದರೆ ವಿಷಪ್ರಾಶನವಾಗಿಲ್ಲ‌ (Poisoning) ಎಂದು ಅವರು ತಿಳಿಸಿದ್ದಾರೆ. https://ainlivenews.com/aishwarya-rai-left-her-husbands-house-mother-in-law-rift-in-big-bs-house/ ಭಾನುವಾರ ರಾತ್ರಿಯಿಂದ ದಾವೂದ್ ಆರೋಗ್ಯದ ಬಗ್ಗೆ ವರದಿಗಳು ಹೊರಬಿದ್ದಿವೆ. ಆದರೆ ಭಾರತೀಯ ಅಧಿಕಾರಿಗಳಿಂದ ಯಾವುದೇ ದೃಢೀಕರಣವಿಲ್ಲ. ಈ ಸಂಬಂಧ ಪಾಕಿಸ್ತಾನ ಸರ್ಕಾರದಿಂದಲೂ ಅಧಿಕೃತ ಮಾಹಿತಿ ಇಲ್ಲ. ವಿಷಪ್ರಾಶನದಿಂದಾಗಿ ದಾವೂದ್ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಹೇಳಲಾಗಿದೆ. ಸದ್ಯ ದಾವೂದ್ ಪಾಕಿಸ್ತಾನದ ಕರಾಚಿ ಆಸ್ಪತ್ರೆಯಲ್ಲಿ (Karachi Hospital) ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಯ ಸುತ್ತಮುತ್ತ ಪಾಕ್‌ ಸೇನೆಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ದಾವೂದ್ ಆಸ್ಪತ್ರೆಗೆ ದಾಖಲಾಗಿರುವುದು ಸುದ್ದಿಯಾಗುತ್ತಿದ್ದಂತೆಯೇ ಕರಾಚಿ, ರಾವಲ್ಪಿಂಡಿ,…

Read More

ಬಿಗ್ ಬಾಸ್ (Bigg Boss) ಕಂಟೆಸ್ಟೆಂಟ್ ಅಭಿಮಾನಿಗಳು ಕಿತ್ತಾಡಿಕೊಂಡ ಪ್ರಕರಣ ಹೈದರಾಬಾದ್ ನಲ್ಲಿ ನಡೆದಿದೆ. ಫಿನಾಲೆ ವೇಳೆ ಸ್ಟುಡಿಯೋದಲ್ಲಿ ಗಲಾಟೆ ನಡೆದಿದ್ದು, ಕಾರು ಮತ್ತು ಬಸ್ ಗಳು ಜಖಂ ಆಗಿವೆ. ಹೈದರಾಬಾದ್ ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಬಿಗ್ ಬಾಸ್ ತೆಲುಗು ಸೀಸನ್ 7ರ ಗ್ರ್ಯಾಂಡ್ ಫಿನಾಲೆ ನಡೆಯುತ್ತಿತ್ತು. ಈ ವೇಳೆ ಕಂಟೆಸ್ಟೆಂಟ್ ಆಗಿದ್ದ ಅಮರ್ ದೀಪ್  (Amar Deep) ಮತ್ತು ಪಲ್ಲವಿ ಪ್ರಶಾಂತ್ (Pallavi Prashant) ಅವರ ಅಭಿಮಾನಿಗಳು ಆಗಮಿಸಿದ್ದರು. ಗ್ರ್ಯಾಂಡ್ ಫಿನಾಲೆಯಲ್ಲಿ ತಮ್ಮ ನೆಚ್ಚಿನ ಕಂಟೆಸ್ಟೆಂಟ್ ವಿನ್ನರ್ ಆಗುತ್ತಾರೆ ಎನ್ನುವುದು ಅವರವರ ಅಭಿಮಾನಿಗಳ ನಿರೀಕ್ಷೆ ಆಗಿತ್ತು. ಆದರೆ, ಆಗಿದ್ದು ಉಲ್ಟಾ ಎನ್ನುವ ಕಾರಣಕ್ಕಾಗಿ ಗಲಾಟೆ ಶುರುವಾಗಿದೆ. ಪಲ್ಲವಿ ಪ್ರಶಾಂತ್ ವಿನ್ ಆಗಿ, ಅಮರ್ ದೀಪ್ ರನ್ನರ್ ಅಪ್ ಆಗಿ ಘೋಷಣೆ ಆಗುತ್ತಿದ್ದಂತೆಯೇ ಗಲಾಟೆ ಶುರುವಾಗಿದೆ. ಇಬ್ಬರ ಫ್ಯಾನ್ಸ್ ಮಾತು ವಿಕೋಪಕ್ಕೆ ಹೋದ ಕಾರಣದಿಂದಾಗಿ ಆರ್.ಟಿ.ಸಿ ಬಸ್ ಮತ್ತು ಕಾರಿನ ಗಾಜು ಪುಡಿ ಪುಡಿ ಆಗಿದೆ. ಪಲ್ಲವಿ ಪ್ರಶಾಂತ್ ಅಭಿಮಾನಿಗಳು ರನ್ನರ್…

Read More

ಬೆಂಗಳೂರು:- ರಾಜ್ಯ ಸರ್ಕಾರವು ಪಾಲಿಕೆ ಅಕ್ರಮಗಳ ತನಿಖೆಗೆ ರಚಿಸಲಾಗಿದ್ದ ತನಿಖಾ ಸಮಿತಿ ರದ್ದುಗೊಳಿಸಿದೆ. 2019-20ರಿಂದ 2022-23ರವರೆಗೆ ಪ್ರಮುಖ ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆಯನ್ನು ನಡೆಸಲು ನಾಲ್ಕು ಪರಿಣಿತರ ತನಿಖಾ ಸಮಿತಿಗಳನ್ನು ರಚಿಸಿ ಆದೇಶಿಸಲಾಗಿತ್ತು. ಆದರೆ ಇದೀಗ ಕರ್ನಾಟಕ ಸರ್ಕಾರ ರದ್ದು ಮಾಡಿದೆ.. ಘನತ್ಯಾಜ್ಯ ನಿರ್ವಹಣೆ ಕಾಮಗಾರಿ, ರಸ್ತೆ ಅಭಿವೃದ್ಧಿ, ಓಎಫ್‌ಸಿ ಕೇಬಲ್ ಅಳವಡಿಕೆ, ಬೃಹತ್ ನೀರುಗಾಲುವೆ ಕಾಮಗಾರಿ, ಕೇಂದ್ರ/ವಲಯ ನಗರ ಯೋಜನೆ ವಿಭಾಗಗಳಲ್ಲಿ ನಕ್ಷೆ ಮಂಜೂರಾತಿ/ ಸ್ವಾಧೀನಾನುಭವ ಪತ್ರ ನೀಡುವಿಕೆ, ಕೆರೆಗಳ ಅಭಿವೃದ್ಧಿ ಕಾಮಗಾರಿ, ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿನ ಕಾಮಗಾರಿ, ವಾರ್ಡ್ ಮಟ್ಟದ ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆ ನಡೆಸಿ, 30 ದಿನಗಳಲ್ಲಿ ವರದಿ ಒಪ್ಪಿಸುವಂತೆ ಆದೇಶಿಸಲಾಗಿತ್ತು. ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮಗಳನ್ನು ತನಿಖೆ ನಡೆಸಲು ಈಗಾಗಲೇ ನಿವೃತ್ತ ನ್ಯಾಯಮೂರ್ತಿ ಎಚ್. ಎನ್ ನಾಗಮೋಹಾನ್ ದಾಸ್ ನೇತೃತ್ವದಲ್ಲಿ ಆಯೋಗ ರಚಿಸಿ, ಸರ್ಕಾರ ಆದೇಶಿಸಿತ್ತು. ಬಿಬಿಎಂಪಿ ಕಾಮಗಾರಿಗಳು ಇದರ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ನಾಲ್ಕು ಸಮಿತಿಗಳನ್ನು ರದ್ದುಪಡಿಸುವಂತೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು.…

Read More

ಬೆಂಗಳೂರು: ಕೋವಿಡ್‌ ಹಿನ್ನೆಲೆ ಸ್ಥಗಿತಗೊಂಡಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗೆ ಮರುಚಾಲನೆ ನೀಡಲಾಗಿದೆ. 2020ರ ಫೆಬ್ರವರಿ 2ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಕನಿಷ್ಠ 30 ಹಾಗೂ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳಿಗೆ ದೇಹದಾರ್ಢ್ಯ ಪರಿಶೀಲನೆ ನಡೆಯಲಿದೆ. ಇದೇ ಡಿಸೆಂಬರ್‌ 26ರಿಂದ 28ರವರೆಗೆ ಶಾಂತಿನಗರದಲ್ಲಿರುವ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ ಆವರಣದಲ್ಲಿ ದಾಖಲಾತಿ/ದೇಹದಾರ್ಢ್ಯ ಪರಿಶೀಲನೆ ನಡೆಯಲಿದೆ.

Read More

ಬೆಳಗಾವಿ :-ಜಿಲ್ಲೆಯ ರಾಯಬಾಗ ಸರ್ಕಾರಿ ಆಸ್ಪತ್ರೆಯು ಕತ್ತಲೆಯಲ್ಲಿ ಎರಡು ದಿನಗಳಿಂದ ಸರ್ಕಾರಿ ಆಸ್ಪತ್ರೆಯು ಕತ್ತಲೆಯಲ್ಲಿ ಇದೆ ಬೆಳಕಿನ ವ್ಯವಸ್ಥೆಗೆ ಜನರೇಟರ್ ಇದ್ದರೂ ಸ್ಟಾರ್ಟ್ ಮಾಡಿಲ್ಲ. ರೋಗಿಗಳು ಬಾಣಂತಿಯರು ಅಷ್ಟೇ ಅಲ್ಲ ಹುಟ್ಟಿದ ಮಗು ಕೂಡಾ ಎಲ್ಲಿದೆ ಅನ್ನೋದು ಕತ್ತಲೆಯಲ್ಲಿ ಹುಡುಕಬೇಕಾಗಿದೆ. ಸಂಜೆ ಆದರೆ ಸಾಕು ಯಾವ ಸಿಬ್ಬಂದಿಗಳು ಇರೋದಿಲ್ಲ. ಸರ್ಕಾರ ಜನರೇಟರ್ ವ್ಯವಸ್ಥೆಗೆ ಹಣ ಕೊಟ್ಟರು ಸ್ಟಾರ್ಟ್ ಮಾಡದೆ ಕತ್ತಲೆಯಲ್ಲಿ ಮುಖ್ಯಾಧಿಕಾರಿ R ರಂಗಣ್ಣವರ್ ತಳ್ಳಿದ್ದಾರೆ. ಸರ್ಕಾರಿ ಆಸ್ಪತ್ರೆಗೆ ಬರುವ ಅನುದಾನ ಏನಾಗುತ್ತಿದೆ ಜನರೇಟರ್ ಸ್ಟಾರ್ಟ್ ಗೆ ಹಣ ಇಲ್ವಾ…ಅಥವಾ ಕತ್ತಲೆಯಲ್ಲಿ ಇರಬೇಕಾ ರೋಗಿಗಳು ಬಾಣಂತಿಯರು..ಇದನೆಲ್ಲ ಕೇಳೋಕೆ ಅಲ್ಲಿ ಯಾವ ಸಿಬ್ಬಂದಿಗಳು ಇಲ್ಲ ರಾಯಬಾಗ ಸರ್ಕಾರಿ ಆಸ್ಪತ್ರೆಯು ಸಂಜೆ ಆದರೆ ಸಾಕು ಭೂತದ ಮನೆ ಮಾರ್ಪಟ್ಟಿದ್ದಾರೆ ಅಧಿಕಾರಿಗಳು.

Read More