Author: AIN Author

ಸೂರ್ಯೋದಯ: 06.36 AM, ಸೂರ್ಯಾಸ್ತ : 05.58 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಮಾರ್ಗಶಿರ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಸಪ್ತಮಿ 01:06 PM ತನಕ ನಂತರ ಅಷ್ಟಮಿ ನಕ್ಷತ್ರ: ಇವತ್ತು ಶತಭಿಷ 01:22 AM ತನಕ ನಂತರ ಪೂರ್ವಾ ಭಾದ್ರ ಯೋಗ: ಇವತ್ತು ಸಿದ್ಧಿ 06:38 PM ತನಕ ನಂತರ ವ್ಯತೀಪಾತ ಕರಣ: ಇವತ್ತು ಗರಜ 02:08 AM ತನಕ ನಂತರ ವಣಿಜ 01:06 PM ತನಕ ನಂತರ ವಿಷ್ಟಿ ರಾಹು ಕಾಲ: 03:00 ನಿಂದ 04:30 ವರೆಗೂ ಯಮಗಂಡ: 09:00 ನಿಂದ 10:30 ವರೆಗೂ ಗುಳಿಕ ಕಾಲ: 12:00 ನಿಂದ 01:30 ವರೆಗೂ ಅಮೃತಕಾಲ: 04.29 PM to 05.59 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:51 ನಿಂದ ಮ.12:34 ವರೆಗೂ ಮೇಷ ರಾಶಿ: ನಿಮ್ಮ ಸಂಗಾತಿಯ ಒಳ ಮನಸ್ಸು ಮತ್ತು ಹೊರ ಮನಸ್ಸು ಸಾಕಷ್ಟು ವ್ಯತ್ಯಾಸ ಗಮನಿಸುವಿರಿ, ಬಂಧುಗಳನ್ನು…

Read More

ಬೆಂಗಳೂರು:- ಪ್ರಧಾನಿ ಭೇಟಿಗೆ ಸಮಯ ಕೇಳಿದ್ದೇನೆ, ಇನ್ನೂ ನಿಗದಿ ಆಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಭದ್ರಾ ಮೇಲ್ದಂಡೆ ಯೋಜನೆ ಅನುದಾನ ಸೇರಿದಂತೆ ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪ್ರಧಾನಿ ಮೋದಿ ಭೇಟಿಗೆ ಸಮಯ ಕೇಳಿದ್ದೇನೆ, ಇನ್ನೂ ನಿಗದಿಯಾಗಿಲ್ಲ’ ಎಂದರು. ಪ್ರಧಾನಿ ಭೇಟಿಗೆ ಸಿಎಂ ಸಮಯ ಕೇಳಿದ್ದು, ಬರ ಪರಿಹಾರ, ನರೇಗಾ ಯೋಜನೆಯಲ್ಲಿ ಮಾನವ ದಿನಗಳ ಹೆಚ್ಚಳ ಸೇರಿದಂತೆ ಇತರೆ ಪ್ರಮುಖ ವಿಚಾರವಾಗಿ ಚರ್ಚೆ ಮಾಡಲಿದ್ದಾರೆ. ಪ್ರಧಾನಿ ಭೇಟಿಗೆ ನನಗೆ ಇನ್ನು ಸಮಯ ನಿಗದಿಯಾಗಿಲ್ಲ. ಹೀಗಾಗಿ ಕೆಲವು ಕೇಂದ್ರ ಸಚಿವರ ಭೇಟಿಗೆ ಸಮಯ ಕೇಳಿದ್ದೇನೆ’ ಎಂದು ತಿಳಿಸಿದರು. ‘ಇಂದು ಪಕ್ಷದ ನಾಯಕರ ಜತೆ ಸಭೆ ನಡೆಯಲಿದೆ. ಯಾವೆಲ್ಲಾ ವಿಷಯ ಚರ್ಚೆ ಮಾಡುತ್ತೇವೆ ಎಂಬುದನ್ನು ನಾನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ನಿಗಮ, ಮಂಡಳಿಗಳಿಗೆ ಮೊದಲು ಶಾಸಕರ ನೇಮಕ ಆಗಲಿದೆ. ಸಾಧ್ಯವಾದರೆ ಕೆಲವು ಕಾರ್ಯಕರ್ತರ ನೇಮಕವನ್ನೂ ಮಾಡುತ್ತೇವೆ. ಒಟ್ಟು ಮೂರು ಹಂತಗಳಲ್ಲಿ ನಿಗಮ…

Read More

ಚಹಾದಲ್ಲಿ ಕೆಫೇನ್ ಅಂಶ ಹೆಚ್ಚಾಗಿರುವ ಕಾರಣ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ನೀವು ಬೆಳಿಗ್ಗೆ ಕುಡಿಯುವಾಗ ಈ ತಪ್ಪನ್ನು ಮಾಡಬೇಡಿ. ಚಹಾವನ್ನು ಹೆಚ್ಚಿನ ಜನರು ಕಾಲಿ ಹೊಟ್ಟೆಯಲ್ಲಿ ಕುಡಿಯುತ್ತಾರೆ. ಇದರಿಂದ ಹೊಟ್ಟೆಯ ಸಮಸ್ಯೆ ಕಾಡುತ್ತದೆಯಂತೆ. ಹೊಟ್ಟೆಯಲ್ಲಿ ಉರಿ, ಆಯಸಿಡಿಟಿಯಂತಹ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಯಾವುದೇ ಆಹಾರ ಅಥವಾ ಪಾನೀಯದೊಂದಿಗೆ ಚಹಾವನ್ನು ಕುಡಿಯಬೇಡಿ. ಇದು ತಲೆನೋವಿನ ಸಮಸ್ಯೆಗೆ ಕಾರಣವಾಗಬಹುದು. ಹಾಗೇ ಚಹಾದೊಂದಿಗೆ ನಿಂಬೆ ರಸವನ್ನು ಬೆರೆಸಿ ಕುಡಿಯಬೇಡಿ. ಇದು ಆಯಸಿಡಿಟಿ ಮತ್ತು ಅತಿಸಾರದಂತಹ ಸಮಸ್ಯೆಗಳಿಗೆ ಕಾರಣವಾಗುತ್ತದೆಯಂತೆ. ಅಲ್ಲದೇ ತಣ್ಣನೆಯ ವಸ್ತು ಅಥವಾ ನೀರನ್ನು ಚಹಾದೊಂದಿಗೆ ಸೇವಿಸಬೇಡಿ. ಇದು ಜೀರ್ಣಕ್ರಿಯೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯಂತೆ.

Read More

ಬೆಂಗಳೂರು:- ಪ್ರಧಾನಿ ಮೋದಿ ಅವರು ವಿರೋಧ ಪಕ್ಷಗಳ ಮುಖ್ಯಮಂತ್ರಿಗಳನ್ನು ಕಡೆಗಣಿಸುತ್ತಾರೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಸಿಎಂ ಭೇಟಿಗೆ ಪ್ರಧಾನಿ ಕಾಲಾವಕಾಶ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ವರ್ಷಾನುಗಟ್ಟಲೆ ಅವಕಾಶ ಕೊಟ್ಟಿರಲಿಲ್ಲ. ರಾಜ್ಯದ ಸಮಸ್ಯೆಗಳು, ಅನುದಾನದ ಬಗ್ಗೆ ಚರ್ಚೆ ಮಾಡುವುದಕ್ಕೆ ಹೋದಾಗ ಅವಕಾಶ ಕೊಟ್ಟಿರಲಿಲ್ಲ. ಈಗ ಕೊನೆ ಗಳಿಗೆಯಲ್ಲಿ ಅವಕಾಶ ಕೊಟ್ಟಿದ್ದಾರೆ. ಇನ್ನೂ ಸ್ವಲ್ಪ ದಿನ ಬಿಟ್ಟು ಅವಕಾಶ ಕೊಟ್ಟಿದ್ದರೆ ಚುನಾವಣಾ ನೀತಿ ಸಂಹಿತೆ ಬರುತ್ತಿತ್ತು. ವಿರೋಧ ಪಕ್ಷದ ಮುಖ್ಯಮಂತ್ರಿಗಳಿರಬಹುದು, ಸ್ವಪಕ್ಷದ ಮುಖ್ಯಮಂತ್ರಿಗಳಿರಬಹುದು. ಈ ರೀತಿ ಕಡೆಗಣಿಸಿರುವ ಇತಿಹಾಸವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಟೀಕಿಸಿದರು. ಈ ಹಿಂದೆ ವಾಜಪೇಯಿ, ಮನಮೋಹನ್ ಸಿಂಗ್, ರಾಜೀವ್ ಗಾಂಧಿ ಯಾರೂ ಈ ರೀತಿ ನಡೆಸಿಕೊಂಡಿರಲಿಲ್ಲ. ಈ ರೀತಿಯಾಗಿ ಮುಖ್ಯಮಂತ್ರಿಗಳನ್ನು ನಡೆಸಿಕೊಂಡಿಲ್ಲ. ಪ್ರಧಾನಿ ವಿರೋಧ ಪಕ್ಷಗಳ ಮುಖ್ಯಮಂತ್ರಿಗಳನ್ನು ಕಡೆಗಣಿಸುತ್ತಾರೆ. ಆ ರಾಜ್ಯಗಳು ಅಭಿವೃದ್ಧಿ ಹೊಂದಬಾರದು, ಅನುದಾನ ಸಿಗಬಾರದು ಅಂತ ಅವರ ಮನಸ್ಥಿತಿ ಇದ್ದಂತೆ ಕಾಣುತ್ತಿದೆ ಎಂದು ಹೇಳಿದರು.

Read More

ಬೇಲೂರು:- ವಿದ್ಯಾರ್ಥಿಗಳಲ್ಲಿ ವ್ಯವಹಾರಿಕ ಜ್ಞಾನವನ್ನು ತಿಳಿಸಪಡಿಸುವ ಉದ್ದೇಶದಿಂದ ಕ್ಯಾಂಟೀನ್ ಡೇ ಆಯೋಜಿಸಲಾಗಿದೆ ಎಂದು ಮುಖ್ಯಶಿಕ್ಷಕಿ ರುಭಾನಾ ತಿಳಿಸಿದರು. ಐಡಿಯಲ್ ಪಬ್ಲಿಕ್ ಶಾಲೆಯ ಆವರಣದಲ್ಲಿ ಯುಕೆಜಿ ಇಂದ ಮೊದಲನೇ ತರಗತಿಯ ವಿದ್ಯಾರ್ಥಿಗಳಿಗೆ ಕ್ಯಾಂಟೀನ್ ಡೇ ನಡೆಸಲಾಯಿತು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ವಿವಿಧ ಚಟುವಟಿಕೆಗಳನ್ನು ನಡೆಸಿದರೆ ಕೌಶಲ್ಯ ಅಭಿವೃದ್ದಿ ಹಾಗೂ ಗಣಿತದ ಅಂಕಗಳಿಕೆಗೆ ಸಹ ಉಪಯುಕ್ತವಾಗುತ್ತದೆ.ಕ್ಯಾಂಟೀನ್ ಡೇ ನಡೆಸುವುದರಿಂದ ಅವರಲ್ಲಿರುವ ನೈಜ್ಯ ಕಲೆ ಹಾಗೂ ವ್ಯಾಪಾರದ ಬಗ್ಗೆ ಸಂಪೂರ್ಣವಾಗಿ ಅವರಿಗೆ ಮಾಹಿತಿ ಸಿಗುವಂತಾಗುತ್ತದೆ. ಇದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಇತುವ ಆತ್ಮವಿಶ್ವಾಸ ಹೆಚ್ಚಾಗುವುದಲ್ಲದೆ ತಾವು ದುಡಿದು ಕೂಡಿಟ್ಟ ಹಣವನ್ನು ಯಾವರೀತಿ ಖರ್ಚುಮಾಡಬೇಕೆಂಬ ಮನಸ್ಥಿತಿ ಬಲವಾಗಿ ಬೀರುವುದರಿಂದ ಇಂತಹ ಚಟುವಟಿಕೆ ಉತ್ತಮ .ಇಲ್ಲಿ ಅತಿಹೆಚ್ಚು ವ್ಯಾಪಾರ ವಹಿವಾಟು ಮಾಡುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಸಲುವಾಗಿ ಪ್ರಥಮ ದ್ವಿತೀಯ ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರೋತ್ಸಾಹಿಸಲು ಬಹುಮಾನ ವಿತರಿಸಲಾಗುತ್ತದೆ ಎಂದರು. ಇದೇ ವೇಳೆ ವಿದ್ಯಾರ್ಥಿಗಳು ಹಲವು ಬಗೆಯ ವೆಜ್ ರೋಲ್,ಚಿಕನ್ ರೋಲ್, ಸಮೋಸ,ಕೇಕ್ ಸೇರಿದಂತೆ…

Read More

ಕೃಷಿ ಜಮೀನಿನ ವಿಸ್ತೀರ್ಣ ದಾಖಲಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಗಡುವು ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರೈತರ ಜಮೀನಿನ ವಿಸ್ತೀರ್ಣಕ್ಕೆ ಸಂಬಂಧಿಸಿದ ದತ್ತಾಂಶವನ್ನು ಫ್ರೂಟ್ಸ್‌ನಲ್ಲಿ ದಾಖಲಿಸುವಂತೆ ಎರಡು ತಿಂಗಳ ಹಿಂದೆಯೇ ಸೂಚಿಸಲಾಗಿತ್ತು. ಈವರೆಗೆ ಒಟ್ಟು ವಿಸ್ತೀರ್ಣದ ಶೇಕಡ 70ರಷ್ಟನ್ನೂ ದಾಖಲಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬರಗಾಲದಿಂದ ಬೆಳೆ ನಷ್ಟಕ್ಕೀಡಾದ ರೈತರಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರದ ಖಜಾನೆಯಲ್ಲಿ ಹಣವಿದೆ. ಆದರೆ, ಫ್ರೂಟ್ಸ್‌ನಲ್ಲಿ ಮಾಹಿತಿ ದಾಖಲಿಸದೇ ಇದ್ದರೆ ಅಂತಹ ರೈತರು ಪರಿಹಾರದಿಂದ ವಂಚಿತರಾಗುತ್ತಾರೆ. ಇದಕ್ಕೆ ಜಿಲ್ಲಾಧಿಕಾರಿಗಳೇ ಹೊಣೆ ಎಂದರು. ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಜಮೀನು ವಿಸ್ತೀರ್ಣ ದಾಖಲಿಸುವಲ್ಲಿ ಹೆಚ್ಚು ಪ್ರಗತಿಯಾಗಿಲ್ಲ. ಜಿಲ್ಲಾಧಿಕಾರಿಗಳು ಮಾಡುವ ಸಣ್ಣ ತಪ್ಪು ಕೂಡ ರೈತರು ಪರಿಹಾರದಿಂದ ವಂಚಿತರಾಗಲು ಕಾರಣವಾಗಲಿದೆ. ಆಂದೋಲನದ ಮಾದರಿಯಲ್ಲಿ ಈ ಕೆಲಸ ಮಾಡಬೇಕು. ಹೋಬಳಿವಾರು ಅಧಿಕಾರಿಗಳ ಸಭೆ ನಡೆಸಿ, ಇದೇ ಶುಕ್ರವಾರದೊಳಗೆ ಎಲ್ಲ ರೈತರ ಜಮೀನುಗಳ ವಿಸ್ತೀರ್ಣವನ್ನು ದಾಖಲಿಸಬೇಕು ಎಂದು ತಾಕೀತು ಮಾಡಿದರು. 134 ತಾಲ್ಲೂಕುಗಳಲ್ಲಿ ಈವರೆಗೂ ಬರ ನಿರ್ವಹಣೆ ಕಾರ್ಯಪಡೆ…

Read More

ಐಪಿಎಲ್ ಮಿನಿ ಹರಾಜಿಗೂ ಮುನ್ನ ಐದು ಬಾರಿಯ ಚಾಂಪಿಯನ್ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ವಜಾಗೊಳಿಸಲಾಯಿತು ಮತ್ತು ಇದು ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ತೀವ್ರ ಆಶ್ಚರ್ಯ ಉಂಟುಮಾಡಿತು. ಗುಜರಾತ್ ಟೈಟನ್ಸ್‌ನಿಂದ ವ್ಯಾಪಾರ ಮಾಡಿಕೊಂಡ ಹಾರ್ದಿಕ್ ಪಾಂಡ್ಯ ಅವರನ್ನು ನೂತನ ನಾಯಕ ಎಂದು ಘೋಷಿಸಿತು. ಐದು ಪ್ರಶಸ್ತಿಗಳನ್ನು ಗೆದ್ದುಕೊಟ್ಟ ರೋಹಿತ್ ಶರ್ಮಾರನ್ನು ದಿಢೀರ್‌ನೆ ನಾಯಕತ್ವದಿಂದ ತೆಗೆದುಹಾಕಿದ್ದು, ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ವಿರುದ್ಧ ಅಪ್ಪಟ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಇದರ ಪರಿಣಾಮವಾಗಿ, ಮುಂಬೈ ಇಂಡಿಯನ್ಸ್ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ 10 ಲಕ್ಷಕ್ಕೂ ಅಧಿಕ ಫಾಲೋವರ್ಸ್‌ಗಳನ್ನು ಕಳೆದುಕೊಂಡಿದೆ. ಕೆಲವು ಅಭಿಮಾನಿಗಳು ಮುಂಬೈ ಇಂಡಿಯನ್ಸ್ ಜೆರ್ಸಿಯನ್ನು ನಡುರಸ್ತೆಯಲ್ಲಿ ಸುಟ್ಟುಹಾಕುತ್ತಿದ್ದಾರೆ. ಇದೀಗ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಮುಂಬೈ ಇಂಡಿಯನ್ಸ್ ತಂಡದಿಂದ ಹೊರಬಂದು ಬೇರೆ ಯಾವುದಾದರೂ ಐಪಿಎಲ್ ಫ್ರಾಂಚೈಸಿ ಪರ ಆಡಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ. ಈ ಕುರಿತು ಕೆಲವು ಪೋಸ್ಟ್‌ಗಳು, ಟ್ವೀಟ್‌ಗಳು, ಮೀಮ್ಸ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಇದರಲ್ಲಿ ಜನಪ್ರಿಯ ಐಪಿಎಲ್ ಫ್ರಾಂಚೈಸಿ ಆರ್‌ಸಿಬಿ ಅಭಿಮಾನಿಗಳು…

Read More

ತುಮಕೂರು:- ಬೈಕ್ ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಅರೆಸ್ಟ್ ಮಾಡಲಾಗಿದೆ. ಇರ್ಫಾನ್ ಅಲಿಯಾಸ್ ಫಾಕ್ಸ್ ಬಂಧಿತ ಆರೋಪಿ. ಇರ್ಫಾನ್‌ ಹೊನ್ನುಡಿಕೆ ಬಳಿ ಅನುಮಾನಾಸ್ಪದವಾಗಿ ಬೈಕ್‌ನಲ್ಲಿ ತೆರಳುತ್ತಿದ್ದ. ಅಗತ್ಯ ದಾಖಲೆ ಕೇಳಿದಾಗ ಸೂಕ್ತ ಉತ್ತರ ನೀಡಿಲ್ಲ. ಇದರಿಂದ ಅನುಮಾನಗೊಂಡ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ ತಂದು ವಿಚಾರ ನಡೆಸಿದಾಗ ಕಳ್ಳತನ ಮಾಡಿರುವ ವಿಚಾರ ಗೊತ್ತಾಗಿದೆ. 11 ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೈಕ್‌ ಕದ್ದು ವ್ಹೀಲಿಂಗ್‌ ಮಾಡಲು ಬಾಡಿಗೆಗೆ ಕೊಡುತ್ತಿದ್ದ. ಪ್ರತಿಯೊಂದು ಬೈಕ್‌ಗೆ ₹5 ಸಾವಿರ ಪಡೆಯುತ್ತಿದ್ದ ಎನ್ನಲಾಗಿದೆ.

Read More

ಕಲಬುರ್ಗಿ:- ನ್ಯೂ ಇಯರ್ ಗೈಡ್‌ಲೆನ್ಸ್ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ಸಚಿವ ಶರಣ ಪ್ರಕಾಶ ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಕೋವಿಡ್ ಹೊಸ ರೂಪಾಂತರಿ ತಳಿ ಎಂಟ್ರಿ ಹಿನ್ನಲೆ, ಈ ಕೋರೊನಾ ಎಷ್ಟರಮಟ್ಟಿಗೆ ಅಪಾಯಕಾರಿ ಇದೆ ಅನ್ನೊದು ಇನ್ನೂ ತಿಳಿದಿಲ್ಲ. ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ್ದೇನೆ. ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೆನೆ. ಆರೋಗ್ಯ ಸಚಿವ ಗುಂಡೂರಾವ್ ಕೂಡ ನಿರಂತರವಾಗಿ ಸಭೆ ನಡೆಸುತ್ತಿದ್ದಾರೆ. ನ್ಯೂ ಇಯರ್ ಗೈಡ್‌ಲೆನ್ಸ್ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ಕಲಬುರಗಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಹೇಳಿಕೆ ನೀಡಿದ್ದಾರೆ.

Read More

ಬೆಳಗಾವಿ:- ಜಿಲ್ಲೆಯ ಹುಕ್ಕೇರಿ ತಾಲೂಕಿನ ಪ್ರಾದೇಶಿಕ ಅರಣ್ಯ ವಲಯದ ಬಸ್ಸಾಪುರ ಶಾಖಾ ವ್ಯಾಪ್ತಿಯ ಶಿರೂರು ಡ್ಯಾಮ್ ಹತ್ತಿರ ರಸ್ತೆ ಬದಿ ಹೆಬ್ಬಾವು ಒಂದು ಕಂಡು ಬಂದಿದೆ. ಇನ್ನು ಮಾಹಿತಿ ಪಡೆದ ಅರಣ್ಯ ಅಧಿಕಾರಿಗಳು ಉರಗ ಪ್ರೇಮಿ ಹಾಗೂ ಶ್ರೀರಾಮ ಸೇನೆಯ ಸಕ್ರಿಯ ಕಾರ್ಯಕರ್ತ ಅನಿಲ್ ಬಡಿಗೇರ ಹಾಗೂ ಸಂಗಡಿಗರ ಸಹಾಯದಿಂದ ಹೆಬ್ಬಾವು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಇನ್ನು ಯುವಕರ ಸಾಹಸಕ್ಕೆ ಸಾರ್ವಜನಿಕರು ಪ್ರಸಂಸೆ ವ್ಯಕ್ತಪಡಿಸಿದ್ದಾರೆ.

Read More