Author: AIN Author

ಹಾಸನ: ಕಾಡು ಹಂದಿ ದಾಳಿಗೆ ಓರ್ವ ರೈತ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಾರಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಜೇಗೌಡ (63) ಮೃತ ದುರ್ದೈವಿಯಾಗಿದ್ದು, ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡಿದ್ದಾರೆ. ರಾಜೇಗೌಡ, ಕಾಂತಮ್ಮ ಹಾಗೂ ನಂಜಮ್ಮ ಎಂಬುವವರು ಜಮೀನಿಗೆ ನೀರು ಹಾಯಿಸುತ್ತಿದ್ದಾಗ, ಕಾಡುಹಂದಿ ದಾಳಿ ಮಾಡಿದೆ. https://ainlivenews.com/aishwarya-rai-left-her-husbands-house-mother-in-law-rift-in-big-bs-house/ ಹಂದಿ ತಪ್ಪಿಸಿಕೊಳ್ಳಲು ಕಿರುಚಾಡಿದ್ದಾರೆ. ಆದರೆ ಕಾಡುಹಂದಿ ರಾಜೇಗೌಡರ ಮೇಲೆ ಎರಗಿ ಸಾಯಿಸಿದೆ. ಕಾಡುಹಂದಿ ದಾಳಿಯಿಂದ ಸ್ಥಳದಲ್ಲೇ ರಾಜೇಗೌಡ ಸಾವನ್ನಪ್ಪಿದ್ದಾರೆ. ಇತ್ತ ರಾಜೇಗೌಡನನ್ನು ಬಚಾವ್ ಮಾಡಲು ಹೋದ ಶಾಂತಮ್ಮ, ನಂಜಮ್ಮನಿಗೆ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳನ್ನು ಹೊಳೆನರಸೀಪುರ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಹಿಮ್ಸ್‌ಗೆ ರವಾನೆ ಮಾಡಲಾಗಿದೆ.

Read More

ಬೆಂಗಳೂರು: ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ಸಾಧ್ಯತೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashok) ಕಿವಿ ಮಾತು ಹೇಳಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅಶೋಕ್, ಕ್ಷುಲ್ಲಕ ರಾಜಕೀಯ ಬದಿಗಿಟ್ಟು, ರಾಜ್ಯದ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಸಿಎಂ ಚರ್ಚಿಸಲಿ ಎಂದು ತಿಳಿಸಿದ್ದಾರೆ. ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಅವರ ಭೇಟಿಗೆ ಸಮಯ ಸಿಕ್ಕಿರುವಾಗ ತಮ್ಮ ಕ್ಷುಲ್ಲಕ ರಾಜಕೀಯ ಬದಿಗಿಟ್ಟು, ರಾಜ್ಯದ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ, ಕನ್ನಡ ನಾಡಿನ ಆರೂವರೆ ಕೋಟಿ ಜನತೆಯ ಹಿತರಕ್ಷಣೆಯ ದೃಷ್ಟಿಯಿಂದ ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿಯಾಗಿ ಮಾನ್ಯ ಸಿದ್ದರಾಮಯ್ಯನವರು ತಮ್ಮ ಮುತ್ಸದ್ಧಿತನ ಪ್ರದರ್ಶಿಸಲಿ. ಮೊನ್ನೆ ಸದನದಲ್ಲಿ ಪ್ರಧಾನಿ ಮೋದಿ (Narendra Modi) ಅವರ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತೋರಿದ ರೋಷಾವೇಶ ಗಮನಿಸಿದರೆ ರಾಜ್ಯದ ಜನತೆಯ ಹಿತರಕ್ಷಣೆಗಿಂತ ತಮ್ಮ ಹೈಕಮಾಂಡ್ ಅನ್ನು ಮೆಚ್ಚಿಸುವುದೇ ಅವರ ಉದ್ದೇಶವೆಂದು ಅನ್ನಿಸುತ್ತದೆ. ಒಕ್ಕೂಟ ವ್ಯವಸ್ಥೆಯಲ್ಲಿ…

Read More

ಕೆಸಿಸಿ ಮ್ಯಾಚ್ ಗೆ ಕೌಂಟ್ ಡೌನ್ ಶುರುವಾಗಿದ್ದು  ಭರ್ಜರಿ ತಾಲೀಮಿನಲ್ಲಿ ಕೆಸಿಸಿ ತಂಡಗಳು ಇಂದು 6 ಎಲ್ಲಾ ತಂಡಗಳಿಂದ ಪ್ರಾಕ್ಟೀಸ್ ಮ್ಯಾಚ್ ಬೆಳ್ಳಂ ಬೆಳಗ್ಗೆ ಸಮೃದ್ಧಿ ಮೈದಾನದಲ್ಲಿ ತಂಡಗಳು ಪ್ರಾಕ್ಟೀಸ್ ಶಿವಣ್ಣ ,ಕಿಚ್ಚ ಸುದೀಪ್,ಗಣೇಶ್, ಡಾರ್ಲಿಂಗ್ ಕೃಷ್ಣ, ಜೆಕೆ, ದಿನಕರ್ ತೂಗುದೀಪ ಸೇರಿದಂತೆ ಹಲವು ಸ್ಟಾರ್ ಗಳು ಬಾಕಿ ವಿಷ್ಣುವರ್ಧನ್ ಪುಣ್ಯ ಭೂಮಿ ಇಲ್ಲೇ ಇರಲಿ ನಾನು ಅಭಿಮಾನಿ ಆಗಿ ಹೇಳ್ತಿದ್ದೇನೆ ಮೈಸೂರಿನಲ್ಲೂ ಇರಲಿ ಇಲ್ಲೂ ಇರಲಿ ಸ್ಮಾರಕ ಎಂದು ನಟ ಗೋಲ್ಡನ್ ಸ್ಟಾರ್ ಗಣೇಶ್ ಹೇಳಿಕೆ ನೀಡಿದರು.

Read More

ರಿಷಿ ಸ್ಪೀಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕರ್ನಾಟಕದ ಅತಿದೊಡ್ಡ ಬ್ಯೂಟಿ ಪೇಜೆಂಟ್ ರಿಷಿಸ್ ಮಿಸಸ್ ಕರ್ನಾಟಕ ಕಿರೀಟವನ್ನು ಕವಿತಾ ವೀರೇಂದ್ರ ತಮ್ಮದಾಗಿಸಿಕೊಂಡಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಆದ ಜೆ ಡಬ್ಲ್ಯೂ ಮ್ಯಾರಿಯೊಟ್ ನಡೆದ ಈ ಕಾರ್ಯಕ್ರಮಕ್ಕೆ ಖ್ಯಾತ ಬಾಲಿವುಡ್ ನಟಿ ಮಧುಬಾಲ ವಿಶೇಷ ಅತಿಥಿಯಾಗಿ ಆಗಮಿಸಿ ರೂಪದರ್ಶಿಗಳಿಗೆ ಪ್ರೋತ್ಸಾಹ ಕೊಟ್ಟರು. ಈ ವೇಳೆ ಮಾತನಾಡಿದ ಮಧುಬಾಲ, ಈ ಕಾರ್ಯಕ್ರಮದಲ್ಲಿ ಭಾಗವಾಗಿರುವುದು ಖುಷಿ ಕೊಟ್ಟಿದೆ. ಇಂದು ಮಹಿಳೆಯರು ರಾಜಕೀಯ, ಸಾಹಿತ್ಯ, ಶಿಕ್ಷಣ ಮತ್ತು ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿ ತೋರಿಸಿದ್ದಾರೆ. ತಾಯಿಯಾಗಿ ಮಕ್ಕಳ ಲಾಲನೆ, ಪಾಲನೆ ಜೊತೆಯಲ್ಲಿ ತನ್ನ ಸೌಂದರ್ಯ ಮತ್ತು ಆರೋಗ್ಯದ ಮೇಲೆ ಗಮನಹರಿಸಬೇಕಿದೆ ಎಂದರು. ಸರ್ಕಾರದ ರಾಜಕೀಯ ದಿಗ್ಗಜರು, ಸಾಮಾಜಿಕ ಕಾರ್ಯಕರ್ತರು, ಉದ್ಯಮಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಕವಿತಾ ವೀರೇಂದ್ರ ವಿನ್ನರ್ ಆಗಿ ಹೊರಹೊಮ್ಮಿದ್ರೆ, ಪ್ರಿಯಾಂಕ ರಿಯಾ ಫಸ್ಟ್ ವಿನ್ನರ್ ಆಗಿ ಹಾಗೂ ಶಹಿಸ್ತಾ ನಾಜ್ ಸೆಕೆಂಡ್ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡರು. ರಿಷಿ ಸ್ಪೀಕ್ ಚಾರಿಟೇಬಲ್ ಟ್ರಸ್ಟ್…

Read More

ನವದೆಹಲಿ: ಕೋವಿಡ್ (Covid) ಉಲ್ಬಣವಾಗುತ್ತಿರುವ ಬಗ್ಗೆ ಯಾರೂ ಗಾಬರಿಯಾಗುವುದು ಬೇಡ. ಆರೋಗ್ಯ ಇಲಾಖೆ ವತಿಯಿಂದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಜನರು ಆತಂಕಗೊಳ್ಳಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ನವದೆಹಲಿಯಲ್ಲಿ (New Delhi) ಮಾತನಾಡಿದ ಅವರು, ಈಗಾಗಲೇ ಜನರು ಮಾಸ್ಕ್ ಹಾಕಲು ಆರಂಭಿಸಿದ್ದಾರೆ. ಕೊರೊನಾ (Corona) ಹೆಚ್ಚಾಗುತ್ತಿದೆ ಎಂದುಕೊಳ್ಳಬೇಡಿ ಎಂದು ಮನವಿ ಮಾಡಿದರು. ಇನ್ನು ದೆಹಲಿ ಭೇಟಿಯ ಬಗ್ಗೆ ಮಾತನಾಡಿದ ಅವರು, ಪಕ್ಷದ ಕೆಲ ವರಿಷ್ಠರನ್ನು ಭೇಟಿ ಮಾಡಲು ಬಂದಿದ್ದೇವೆ. ಕೆಲವು ಕೇಂದ್ರ ಸಚಿವರ ಭೇಟಿಗೂ ಸಮಯ ಕೇಳಿದ್ದೇವೆ. ಮುಖ್ಯಮಂತ್ರಿಗಳಿಗೆ ಪಿಎಂ ಅವರು ಸಮಯ ನೀಡಿದ್ದಾರೆ. ನಾನು ಸಹ ಪ್ರಧಾನಿ ಭೇಟಿಗೆ ಸಮಯ ಕೇಳಿದ್ದೇನೆ. ನಿರ್ಮಲಾ ಸೀತಾರಾಮನ್ ಅವರನ್ನು ನಾನು ಭೇಟಿಯಾಗಲು ಕೇಳಿದ್ದೇನೆ. ಆದರೆ ಸಮಯ ಇನ್ನು ನಿಗದಿ ಆಗಿಲ್ಲ ಎಂದರು. https://ainlivenews.com/aishwarya-rai-left-her-husbands-house-mother-in-law-rift-in-big-bs-house/ ನಿಗಮಮಂಡಳಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪಕ್ಷದ ಸಭೆ ಇದೆ. ನಿಗಮ ಮಂಡಳಿ ವಿಚಾರ ಫೈನಲ್ ಮಾಡುತ್ತೇವೆ. ಖಂಡಿತವಾಗಿಯೂ ಅದನ್ನ ಮಾಡಲೇಬೇಕು. ಎಷ್ಟು ದಿನ…

Read More

ಬೆಂಗಳೂರು : ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ವಿಚಾರ ಕುರಿತು ಬಿಜೆಪಿ ಎಂಎಲ್​ಸಿ ಎನ್. ರವಿಕುಮಾರ್​​​​ ಪ್ರತಿಕ್ರಿಯಿಸಿದ್ದು, ದೇಶದಲ್ಲಿ ಸಾಕಷ್ಟು ಅನ್ಯಾಯ ಮಾಡಿದ ಟಿಪ್ಪುವಿನ ಹೆಸರಿಡಬಾರದು ಎಂದು ಹೇಳಿದ್ದಾರೆ. ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಈ ದೇಶದಲ್ಲಿದ್ದು, ಈ ದೇಶದವರಂತೆ ಬದುಕಲಿಲ್ಲ. ಆತ ಮತಾಂಧ. ಮತಾಂತರ ಮಾಡಿದ, ಸಾವಿರಾರು ಮಂದಿರಗಳನ್ನ ಕೊಳ್ಳೆ ಹೊಡೆದ. ಹಿಂದೂ ಸ್ತ್ರೀಯರ ಮಾನಭಂಗ ಮಾಡಿದ್ದಾನೆ ಎಂದು ಕಿಡಿಕಾರಿದ್ದಾರೆ. ಕೋಲಾರದ ವಸತಿ ಶಾಲೆಯಲ್ಲಿ ಮಲದ ಗುಂಡಿಗೆ ವಿದ್ಯಾರ್ಥಿಗಳನ್ನು ಇಳಿಸಿದ್ದಕ್ಕೆ ರವಿಕುಮಾರ್​​​​ ಆಕ್ರೋಶ ಹೊರಹಾಕಿದ್ದಾರೆ. ತ್ರೇತಾಯುಗದಲ್ಲಿ ನಾವಿಲ್ಲ. ಇಷ್ಟೊಂದು ಟೆಕ್ನಾಲಜಿ ಬಂದಿದೆ. ಶೌಚಗುಂಡಿ ಸ್ವಚ್ಚತೆಗೆ ಮಶಿನ್ ಬಳಸಬೇಕು ಎಂಬ ನಿಯಮವಿದೆ. ಆದರೆ, ವಿದ್ಯಾರ್ಥಿಗಳನ್ನು ಇಳಿಸಿದ್ದು ನಾಚಿಕೆಗೇಡಿನ ಪರಮಾವಧಿ ಎಂದು ಬೇಸರಿಸಿದ್ದಾರೆ. ಇನ್ನು ಹಿಂದೂ ರಾಷ್ಟ್ರವಾಗೋದಕ್ಕೆ ನಾನು ಬಿಡೋದಿಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಯಾವುದೋ ಅಮಲಿನಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Read More

ಬೆಂಗಳೂರು: ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುದಾನ ನೀಡಿಲ್ಲ. ಹೀಗಾಗಿ ಸ್ಥಗಿತಗೊಂಡಿದ್ದ ಯೋಜನೆಯ ಕೆಲಸವನ್ನು ಮತ್ತೆ ನಮ್ಮ ಸರ್ಕಾರ ಆರಂಭಿಸಿದೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು,ಎತ್ತಿನ ಹೊಳೆ ಯೋಜನೆಯು ಪ್ರಾರಂಭದಲ್ಲಿ ಅಂದಾಜು ವೆಚ್ಚ 13,500 ಸಾವಿರ ಕೋಟಿ ರೂ. ಮಾಡಲಾಗಿತ್ತು. ಈ ಹಿಂದಿನ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುದಾನವನ್ನು ನೀಡಿಲ್ಲ. ಇದೇ ಕಾರಣದಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಈಗ ನಮ್ಮ ಸರ್ಕಾರವು ಅನುದಾನ ಬಿಡುಗಡೆ ಮಾಡಲಾಗಿದೆ. ಯೋಜನೆಯ ಅಂದಾಜು ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಪ್ರಸ್ತುತ 22 ಸಾವಿರ ಕೋಟಿ ರೂ. ಆಗುತ್ತಿದೆ. ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ತಿಳಿಸಿದರು. ವಾಟರ್ ಸ್ಟೋರೆಜ್‌ಗಾಗಿ ಕೊರಟಗೆರೆ ರೈತರು ನೀಡಿರುವ ಭೂಮಿಗೆ ಎಕರೆಗೆ 8 ಲಕ್ಷ ರೂ. ಹಾಗೂ ದೊಡ್ಡಬಳ್ಳಾಪುರದಲ್ಲಿ ಎಕರೆ ಭೂಮಿಗೆ 32 ಲಕ್ಷ ರೂ. ಪರಿಹಾರ ನಿಗದಿಪಡಿಸಲಾಗಿದೆ. ಎಲ್ಲ ರೈತರಿಗೂ…

Read More

ಮುಂಬೈ: ಗೆಳತಿಯ ಕಾಲಿನ ಮೇಲೆ ಕಾರು ಹರಿಸಿದ ಪ್ರಕರಣಕ್ಕೆ ಸಂಬಂಧ ಥಾಣೆ (Thane) ವಿಭಾಗದ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಅಧ್ಯಕ್ಷ (BJYM) ಅಶ್ವಜಿತ್ ಗಾಯಕ್ವಾಡ್ ವಿರುದ್ಧ ಕೇಸ್ ದಾಖಲಾಗಿದೆ. ಗಾಯಾಳು ಗೆಳತಿಯನ್ನು ಪ್ರಿಯಾ ಎಂದು ಗುರುತಿಸಲಾಗಿದೆ. ಸದ್ಯ ಪ್ರಿಯಾ ಆರೋಪಗಳನ್ನೆಲ್ಲಾ ಅಶ್ವಜಿತ್ ತಿರಸ್ಕರಿಸಿದ್ದು, ಹಣಕ್ಕಾಗಿ ಈ ರೀತಿ ಮಾಡುತ್ತಿದ್ದಾಳೆ. ಅಲ್ಲದೇ ಅವಳು ಬಿಂಬಿಸಿದ್ದೆಲ್ಲ ಸುಳ್ಳಾಗಿದೆ. ಪ್ರಿಯಾ ನನಗೆ ಜಸ್ಟ್ ಫ್ರೆಂಡ್ ಅಷ್ಟೇ ಎಂದು ಪೊಲೀಸರ ಮುಂದೆ ಅಶ್ವಜಿತ್ ಹೇಳಿದ್ದಾನೆ. ನಾನು ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಹೋಟೆಲ್‍ಗೆ ಕುಡಿದ ಅಮಲಿನಲ್ಲಿ ಬಂದಿದ್ದ ಪ್ರಿಯಾ, ತನ್ನೊಂದಿಗೆ ಮಾತನಾಡುವಂತೆ ಒತ್ತಾಯಿಸಿದಳು. ಈ ವೇಳೆ ನಾನು ನಿರಾಕರಿಸಿದಾಗ ಆಕೆ ನನ್ನ ಮೇಲೆ ದೌರ್ಜನ್ಯ ಎಸಗಿದಳು. ಅಲ್ಲದೆ ನನ್ನ ಸ್ನೇಹಿತರು ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ಮುಂದಾದಾಗ ಅವರ ಮೇಲೂ ಹಲ್ಲೆ ನಡೆಸಿದ್ದಾಳೆ. https://ainlivenews.com/aishwarya-rai-left-her-husbands-house-mother-in-law-rift-in-big-bs-house/ ನನ್ನ ಡ್ರೈವರ್ ಶೆಲ್ಕೆ, ಅವಳು ಪಕ್ಕಕ್ಕೆ ಹೋಗುವಂತೆ ನನ್ನ ಕಾರನ್ನು ಸ್ಟಾರ್ಟ್ ಮಾಡಿದರು. ಆದರೆ ಕಾರು ಸ್ವಲ್ಪ ತಾಗಿ ಕೆಳಗೆ ಬಿದ್ದಳು. ಈ…

Read More

ನವದೆಹಲಿ: ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ (Adhir Ranjan Chowdhury) ಸೇರಿದಂತೆ ವಿಪಕ್ಷಗಳ 31 ಸಂಸದರನ್ನು ಲೋಕಸಭೆಯಿಂದ (Lok Sabha) ಅಮಾನತುಗೊಳಿಸಲಾಗಿದೆ. ಕಳೆದ ವಾರ ಆಗಿದ್ದ ಲೋಕಸಭಾ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ವಿಪಕ್ಷಗಳು ಪ್ರತಿಭಟಿಸಿದ್ದವು.  ಕಲಾಪಕ್ಕೆ ಅಡ್ಡಿಪಡಿಸಿದ್ದರಿಂದ ಪ್ರತಿಪಕ್ಷಗಳ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಅಮಾನತುಗೊಳಿಸಲಾಯಿತು. https://ainlivenews.com/aishwarya-rai-left-her-husbands-house-mother-in-law-rift-in-big-bs-house/ ಗೃಹ ಸಚಿವರ ಹೇಳಿಕೆಗೆ ಒತ್ತಾಯಿಸಿ ಕಳೆದ ವಾರ ವಿಪಕ್ಷಗಳ 13 ಸಂಸದರು ಅಮಾನತುಗೊಂಡಿದ್ದರು. ಈಗ ಮತ್ತೊಂದು ಸುತ್ತಿನಲ್ಲಿ 31 ಸಂಸದರು ಅಮಾನತುಗೊಂಡಿದ್ದಾರೆ. ಇದಲ್ಲದೇ ಇನ್ನೂ ಮೂವರು ಸಂಸದರನ್ನು ವಿಶೇಷಾಧಿಕಾರ ಸಮಿತಿ ವರದಿ ಬರುವವರೆಗೆ ಅಮಾನತುಗೊಳಿಸಲಾಗಿದೆ. ಇದರರ್ಥ ಒಟ್ಟು 46 ಸಂಸದರನ್ನು ಅಮಾನತುಗೊಳಿಸಲಾಗಿದೆ. ಅವರಲ್ಲಿ 43 ಮಂದಿ ಭದ್ರತಾ ಲೋಪದ ಬಗ್ಗೆ ಗೃಹ ಸಚಿವರ ಹೇಳಿಕೆಗೆ ಆಗ್ರಹಿಸಿದ್ದಾರೆ.   

Read More

ಸೋಮಶೇಖರ್B.Sc ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ರಾಶಿ ಹರಳು ಪರಿಣಿತರು. Mob.9353488403 ಸರ್ಕಾರಿ ಕೆಲಸ ಅವುಗಳಲ್ಲಿ ನೂರಾರು ಇಲಾಖೆಗಳಿವೆ. ತುಂಬಾ ಜನ ಪ್ರಯತ್ನ ಮಾಡುತ್ತಾರೆ ಆದರೆ ದುರ್ದೈವ ಯಶಸ್ವಿನಿ ದಾರಿ ದೊರೆಯುವುದಿಲ್ಲ.ಆದ್ದರಿಂದ ಅವನು ಜೀವನದಲ್ಲಿ ತುಂಬಾ ಹತಾಶನಾಗುತ್ತಾನೆ. ಅದಕ್ಕಾಗಿ ಜ್ಯೋತಿಷ್ಯಶಾಸ್ತ್ರ ಏನು ಹೇಳುತ್ತದೆ ಬನ್ನಿ ತಿಳಿಯೋಣ. ಜಾತಕದ ಕುಂಡಲಿಯಲ್ಲಿ ಲಗ್ನ ಹಾಗೂ ದಶಮ ಸ್ಥಾನದಲ್ಲಿ ಮಂಗಳ, ರಾಹು ಹಾಗೂ ಶನಿ ಗ್ರಹಗಳು ಇದ್ದರೆ ಸರಕಾರಿ ಕೆಲಸ ಸಿಗುತ್ತದೆ. ಮೇಷ ಲಗ್ನವಾಗಿ ದಶಮ ಸ್ಥಾನದಲ್ಲಿ ಶನಿ ಮಂಗಳ ಗ್ರಹ ಇದ್ದರೆ ಸರಕಾರಿ ಇಲಾಖೆಯಲ್ಲಿ ಮೇಲಾಧಿಕಾರಿ ಆಗುತ್ತಾನೆ. ಮೇಷ ಲಗ್ನದಲ್ಲಿ ಶುಕ್ರ ಯೋಗ ಇದ್ದರೆ ನೌಕರಿ ಸಿಗಲು ಅವಕಾಶ ತುಂಬಾ ಇದೆ. ದಶಮ ಸ್ಥಾನ ಚರರಾಶಿ ಆಗಿ ಅಂದರೆ ಮೇಷ, ಕರ್ಕ ತುಲಾ ಹಾಗೂ ಮಕರವಾದರೆ ಜಾತಕ ಹೊಂದಿದವರಿಗೆ ಸರ್ಕಾರಿ ಯಾವುದಾದರೂ ಇಲಾಖೆಯಲ್ಲಿ ಕೆಲಸ ದೊರೆಯುತ್ತದೆ. ಸೋಮಶೇಖರ್B.Sc ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು,ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.  Mob.9353488403

Read More