Author: AIN Author

2023ರ ವರ್ಷವು ಶೀಘ್ರದಲ್ಲೇ ಕೊನೆಗೊಳ್ಳಲಿದೆ ಮತ್ತು ಪ್ರತಿಯೊಬ್ಬರೂ 2024 ರ ವರ್ಷವನ್ನು ಉತ್ಸಾಹದಿಂದ ಸ್ವಾಗತಿಸಲು ಸಿದ್ಧರಾಗಿದ್ದಾರೆ. ಈ ವರ್ಷದ ಭಾರತದಲ್ಲಿ ನಡೆದ ಪ್ರಮುಖ ಘಟನೆಗಳತ್ತ ಕಣ್ಣು ಹಾಯಿಸಿದರೆ ಸಾಕಷ್ಟು ಸಂಗತಿಗಳು ಕಾಣಿಸುತ್ತವೆ. ಇವುಗಳಲ್ಲಿ ದುರಂತವೇ ಹೆಚ್ಚು. ಆದರೆ ನಾವು ಪ್ರಮುಖ 10 ಪ್ರಮುಖ ಘಟನೆ ಬಗ್ಗೆ ಹೇಳುತ್ತೇವೆ ಕೇಳಿ! ಚಂದ್ರಯಾನ-3ರ ಯಶಸ್ಸು ಬಾಹ್ಯಾಕಾಶ ಲೋಕದಲ್ಲಿನ ಭಾರತದ ಸಾಧನೆ ಇಡೀ ಜಗತ್ತಿನ ಮೆಚ್ಚುಗೆಗೆ ವ್ಯಕ್ತವಾದ ವರ್ಷವಿದು. ಜುಲೈ 14ರಂದು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಚಂದ್ರಯಾನ-3 ನೌಕೆಯು ಆಗಸ್ಟ್ 23ರಂದು ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿದಿತ್ತು. ಈ ಮೂಲಕ ಚಂದ್ರನ ಮೇಲೆ ನೌಕೆ ಇಳಿಸಿದ ವಿಶ್ವದ ನಾಲ್ಕನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು ಒಡಿಶಾ ರೈಲು ಅಪಘಾತ ಜೂನ್ 2ರಂದು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲುಗಳ ಅಪಘಾತ, ಇತ್ತೀಚಿನ ವರ್ಷಗಳಲ್ಲಿಯೇ ದೇಶ ಕಂಡ ಘೋರ ರೈಲು ದುರಂತವಾಗುತ್ತು. ಮೂರು ರೈಲುಗಳು ಇಲ್ಲಿ ಡಿಕ್ಕಿಯಾಗಿ ಭೀಕರ ದುರಂತ ಸಂಭವಿಸಿತ್ತು.…

Read More

ವೀಳ್ಯದೆಲೆಯನ್ನು ವಾರಕ್ಕೆ ಕನಿಷ್ಠ ಎರಡು ಬಾರಿ ಸೇವಿಸಿದರೆ ಹಲವು ಆರೋಗ್ಯ ಲಾಭ ಪಡೆಯಬಹುದು. ವೀಳ್ಯದೆಲೆಯನ್ನು ರಾತ್ರಿ ಚೆನ್ನಾಗಿ ತೊಳೆದು ನಂತರ ಅವುಗಳನ್ನು ನೀರಿನಲ್ಲಿ ನೆನೆಸಿ ಬೆಳಿಗ್ಗೆ ನೀರು ಕುಡಿಯುವುದು ತುಂಬಾ ಪ್ರಯೋಜನಕಾರಿ. ಪ್ರಯೋಜನಗಳು: ವೀಳ್ಯದೆಲೆಯ ಇತರ ಪ್ರಯೋಜನಗಳು ಯಾವುವು ಎಂದು ತಿಳಿಯೋಣ. ವೀಳ್ಯದೆಲೆಯಲ್ಲಿ ಸ್ವಲ್ಪ ಉಪ್ಪು ಮತ್ತು ಜೀರಿಗೆ ಬೀಜಗಳನ್ನು ಸೇವಿಸಿದರೆ, ನೀವು ಅಜೀರ್ಣದಿಂದ ಪರಿಹಾರ ಪಡೆಯುತ್ತೀರಿ. ವೀಳ್ಯದೆಲೆಯ ರಸವನ್ನು ಸೇವಿಸಿದರೆ ಮೂಳೆಗಳು ಬಲಗೊಳ್ಳುತ್ತವೆ. ವೀಳ್ಯದೆಲೆಗೆ ಸ್ವಲ್ಪ ನಿಂಬೆ ರಸವನ್ನು ಬೆರೆಸಿ ಸೇವಿಸಿದರೆ ಗಂಟಲು ಸಮಸ್ಯೆ ಕಡಿಮೆಯಾಗುತ್ತದೆ. ತಲೆನೋವು ಮತ್ತು ಮೈಗ್ರೇನ್ ಸಮಸ್ಯೆ ಇರುವವರು ವೀಳ್ಯದೆಲೆಯನ್ನು ಸೇವಿಸಿದರೆ ಉತ್ತಮ ಫಲಿತಾಂಶವನ್ನು ಪಡೆಯಬಹುದು. ಹೊಟ್ಟೆ ಉಬ್ಬಿಕೊಂಡಿದ್ದರೆ ವೀಳ್ಯದೆಲೆ ತಿನ್ನುವುದರಿಂದ ನಿವಾರಣೆಯಾಗುತ್ತದೆ. ವೀಳ್ಯದೆಲೆಯನ್ನು ತಿಂದರೆ ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಕಂಡುಬಂದಿದೆ. ನೀವು ವಾರಕ್ಕೆ ಕನಿಷ್ಠ ಎರಡು ಬಾರಿ ವೀಳ್ಯದೆಲೆಯನ್ನು ಸೇವಿಸಿದರೆ ದೇಹವು ಆರೋಗ್ಯವಾಗಿರುತ್ತದೆ.

Read More

ಜೋಹಾನ್ಸ್‌ಬರ್ಗ್: ವಿಶ್ವದ ನಂ.1 ಟಿ20 ಬ್ಯಾಟರ್‌ ಸೂರ್ಯಕುಮಾರ್‌ ಯಾದವ್‌ ದಕ್ಷಿಣ ಆಫ್ರಿಕಾ ವಿರುದ್ಧ ಸ್ಫೋಟಕ ಶತಕ ಸಿಡಿಸುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದ್ದಾರೆ. ಟಿ20 ಕ್ರಿಕೆಟ್‌ ವೃತ್ತಿಜೀವನದ 4ನೇ ಹಾಗೂ ವೇಗದ ಶತಕ ಸಿಡಿಸಿದ ಸೂರ್ಯ, ಈ ಸಾಧನೆ ಮಾಡಿದ ರೋಹಿತ್‌ ಶರ್ಮಾ ಹಾಗೂ ಆಸೀಸ್‌ನ ಗ್ಲೇನ್‌ ಮ್ಯಾಕ್ಸ್‌ವೆಲ್‌ ದಾಖಲೆಯನ್ನ ಸರಿಗಟ್ಟಿದ್ದಾರೆ. ರೋಹಿತ್‌ ಶರ್ಮಾ 148 ಪಂದ್ಯಗಳು 140 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು. ಹಾಗೆಯೇ ಗ್ಲೇನ್‌ ಮ್ಯಾಕ್ಸ್‌ವೆಲ್‌ 100 ಪಂದ್ಯ, 92 ಇನ್ನಿಂಗ್ಸ್‌ನಲ್ಲಿ 4ನೇ ಶತಕ ಸಿಡಿಸಿದ್ದರು. ಆದ್ರೆ ಸೂರ್ಯಕುಮಾರ್‌ ಕೇವಲ 61 ಪಂದ್ಯ 57 ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿರುವುದು ವಿಶೇಷ. ಗುರುವಾರ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಪಂದ್ಯದಲ್ಲಿ 178.57 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಸೂರ್ಯ ಮೊದಲ 25 ಎಸೆತಗಳಲ್ಲಿ 27 ರನ್‌ ಗಳಿಸಿದ್ರೆ, ಮುಂದಿನ 31 ಎಸೆತಗಳಲ್ಲಿ 73 ರನ್‌ ಚಚ್ಚಿ ಶತಕ ಪೂರೈಸಿದರು. ಈ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 4ನೇ…

Read More

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (SBI) ತನ್ನ ಮಾರ್ಜಿನಲ್ ಕಾಸ್ಟ್-ಆಧಾರಿತ ಸಾಲದ ದರವನ್ನು (MCLR) ಹೆಚ್ಚಳ ಮಾಡಿದೆ. ಇದರಿಂದಾಗಿ ಬ್ಯಾಂಕ್‌ನ ಸಾಲದ ಇಎಂಐ (EMI) ಏರಿಕೆಯಾಗಲಿದೆ. ಆಯ್ದು ಅವಧಿಗೆ ಅನುಗುಣವಾಗಿ 5-10 ಬೇಸಿಸ್‌ ಪಾಯಿಂಟ್ಸ್‌ ಹೆಚ್ಚಳ ಮಾಡಿದೆ. ಇದರಿಂದಾಗಿ ಗೃಹ ಸಾಲ, ವಾಹನ ಸಾಲ, ಗ್ರಾಹಕರ ಸಾಲ ಏರಿಕೆಯಾಗಲಿದೆ. ಎಸ್‌ಬಿಐ ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. ಆರ್‌ಬಿಐ (RBI) ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ನಡೆದ ಹಣಕಾಸು ನೀತಿ ಸಮಿತಿ (MPC) ಸಭೆಯಲ್ಲಿ ರೆಪೋ ದರವನ್ನು ಏರಿಸದೇ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲಾಗಿತ್ತು. ಈಗಾಗಲೇ ಸಾಲ ಪಡೆದಿರುವ ಗ್ರಾಹಕರು ತಮ್ಮ ಮುಂದಿನ ಕಂತುಗಳನ್ನು ಹೆಚ್ಚಿನ ದರದಲ್ಲಿ ಪಾವತಿಸಬೇಕಾಗುತ್ತದೆ. ಹಿಂದೆ ಎಷ್ಟಿತ್ತು? ಎಷ್ಟು ಏರಿಕೆಯಾಗಲಿದೆ?

Read More

ಪ್ರತಿದಿನ ಈರುಳ್ಳಿ ತಿನ್ನುವುದರಿಂದ ದೇಹಕ್ಕೆ ಹಲವಾರು ಲಾಭಗಳು ಸಿಗುತ್ತವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಇದರ ಗುಣಲಕ್ಷಣಗಳು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ. ಆಲಿಲ್ ಪ್ರೊಪೈಲ್ ಡೈಸಲ್ಫೈಡ್ ಈರುಳ್ಳಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ. ಆದ್ದರಿಂದ ಇದನ್ನು ಪ್ರತಿದಿನ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ. ಇದರೊಂದಿಗೆ, ತೀವ್ರವಾದ ದೀರ್ಘಕಾಲದ ಕಾಯಿಲೆಗಳನ್ನು ಸಹ ತೆಗೆದುಹಾಕಲಾಗುತ್ತದೆ. ವಿನೆಗರ್‌ನಲ್ಲಿ ನೆನೆಸಿದ ಈರುಳ್ಳಿಯನ್ನು ತಿನ್ನುವುದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಇದಲ್ಲದೇ ಪ್ರತಿದಿನ ತಿನ್ನುವುದರಿಂದ ಒಳ್ಳೆಯ ಕೊಲೆಸ್ಟ್ರಾಲ್ ಕೂಡ ದೇಹದಲ್ಲಿ ಹೆಚ್ಚುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಈರುಳ್ಳಿ ತಿನ್ನುವುದರಿಂದ ಪ್ರಾಸ್ಟೇಟ್ ಕ್ಯಾನ್ಸರ್ ಬರುವ ಅಪಾಯವೂ ಕಡಿಮೆಯಾಗುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಇದಲ್ಲದೆ, ಹೊಟ್ಟೆ ಮತ್ತು ಸ್ತನ ಕ್ಯಾನ್ಸರ್ ಅಪಾಯವೂ ಕಡಿಮೆಯಾಗುತ್ತದೆ.

Read More

ತಿರುವನಂತಪುರಂ:- ಕೊರೋನಾ ಮತ್ತೆ ಕೇರಳದಲ್ಲಿ ಉಲ್ಬಣವಾಗಿದ್ದು, ಜನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸಂಕ್ರಾಮಿಕ ರೋಗದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ನಿರಂತರ ಮುಂಜಾಗ್ರತೆ ವಹಿಸುವಂತೆ ಸೂಚನೆಗಳನ್ನು ನೀಡಲಾಗಿದೆ. ಸಿಂಗಾಪುರ, ಮಲೇಷ್ಯಾ ಮತ್ತು ಇಂಡೋನೇಷ್ಯಾದಂತಹ ಹಲವಾರು ಆಗ್ನೇಯ ಏಷ್ಯಾದ ದೇಶಗಳಲ್ಲಿ ಕೊರೋನಾ ಪ್ರಕರಣಗಳು ದಾಖಲೆಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಈ ಸಮಯದಲ್ಲಿ ಕೇರಳದಲ್ಲೂ ಕೊರೋನಾ ತ್ವರಿತ ಏರಿಕೆ ಕಂಡಿದೆ. ಓಮಿಕ್ರಾನ್‌ನ ಉಪ ತಳಿಯಾದ ಜೆಎನ್.1 ಹೆಚ್ಚಳವು ಕೇರಳದಲ್ಲಿ ಈಗ ಆತಂಕಕ್ಕೆ ಕಾರಣವಾಗಿದೆ. ಆದರೆ ಈ ಬಗ್ಗೆ ಚಿಂತಿಸಬೇಕಾಗಿಲ್ಲ. ಆದರೆ ವೈರಸ್‌ಗಳ ನಿರಂತರ ಮೇಲ್ವಿಚಾರಣೆ ಮಾಡುವ ಅಗತ್ವಿದೆ ಎಂದು ತಜ್ಞರು ಹೇಳಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಲೇ ಇದ್ದರೆ ಕೇರಳ ಸರ್ಕಾರವು ಸೂಕ್ಷ್ಮ ಪ್ರದೇಶಗಳಲ್ಲಿ ನಿರ್ಬಂಧಗಳು ಮತ್ತು ತಡೆಗಟ್ಟುವ ಕ್ರಮಗಳನ್ನು ವಿಧಿಸಬಹುದು ಎಂದು ಹೇಳಲಾಗುತ್ತಿದೆ. ಕೇವಲ ಒಂದು ತಿಂಗಳಲ್ಲಿ ಕೇರಳದಲ್ಲಿ ಸಕ್ರಿಯ ಪ್ರಕರಣಗಳು 33 ರಿಂದ 768 ಕ್ಕೆ ಏರಿಕೆಯಾಗಿದ್ದು ಆತಂಕವನ್ನು ಉಂಟುಮಾಡಿದೆ. ಜೆಎನ್.1 ಗೆ ಸಂಬಂಧಿಸಿದ ಸಾಮಾನ್ಯ…

Read More

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಭಾರತ ಮೂಲದ ವಿವೇಕ್‌ ರಾಮಸ್ವಾಮಿ (Vivek Ramaswamy) ಹಿಂದೂ ಧರ್ಮದ ಸಾರ್ವತ್ರಿಕ ಮೌಲ್ಯಗಳ ಬಗ್ಗೆ ಮಾತನಾಡಿದ್ದಾರೆ. ಅಮೆರಿಕದ ಸಿಎನ್‌ಎನ್‌ ಟೌನ್‌ ಹಾಲ್‌ನಲ್ಲಿ ವಿವೇಕ್‌ ಮಾತನಾಡುತ್ತಿದ್ದಾಗ, ಅಮೆರಿಕ (America) ಹಿಂದೂ ಅಧ್ಯಕ್ಷರನ್ನು ಒಪ್ಪಿಕೊಳ್ಳಬಹುದೇ ಎಂಬ ಪ್ರಶ್ನೆ ಕೇಳಿಬಂತು.  ಅದಕ್ಕೆ ವಿವೇಕ್‌ ಪ್ರತಿಕ್ರಿಯಿಸಿ, ನನ್ನದು ‘ನಕಲಿ ಮತಾಂತರ’ ಅಲ್ಲ, ನಾನು ಹಿಂದೂ (Hinduism). ರಾಜಕೀಯ ವೃತ್ತಿಜೀವನವನ್ನು ಹೆಚ್ಚಿಸಲು ಸುಳ್ಳು ಹೇಳುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಅಲ್ಲದೇ, ಹಿಂದೂ ಧರ್ಮ ಮತ್ತು ಕ್ರಿಶ್ಚಿಯನ್ ಧರ್ಮ ಒಂದೇ ಸಮಾನ ಮೌಲ್ಯವನ್ನು ಹೇಳುತ್ತವೆ ಎಂದು ಪ್ರತಿಪಾದಿಸಿದ್ದಾರೆ.  https://ainlivenews.com/mother-sells-her-daughter-for-rs-4-lakh-compulsion-to-engage-in-immoral-activity-by-an-intoxicated-person/ ನಾನು ನಕಲಿ ಮತಾಂತರ ಆಗಬಹುದು. ಆದರೆ ಅದನ್ನು ನಾನು ಮಾಡುವುದಿಲ್ಲ. ನನ್ನ ನಂಬಿಕೆಯ ಬಗ್ಗೆ ನಿಮಗೆ ಹೇಳುತ್ತೇನೆ. ನನ್ನ ಪಾಲನೆ ಸಾಕಷ್ಟು ಸಾಂಪ್ರದಾಯಿಕವಾಗಿತ್ತು. ಮದುವೆಗಳು ಪವಿತ್ರವೆಂದು ನನ್ನ ಪೋಷಕರು ನನಗೆ ಹೇಳುತ್ತಿದ್ದರು. ಕುಟುಂಬಗಳು ಸಮಾಜದ ಮೂಲಾಧಾರವಾಗಿದೆ ಎಂದು ತಿಳಿಸಿದ್ದಾರೆ. ದೇವರು ಎಂಬುದು ಸತ್ಯ. ದೇವರ ಹೆಸರನ್ನು ವ್ಯರ್ಥವಾಗಿ ತೆಗೆದುಕೊಳ್ಳಬೇಡಿ. ನಿಮ್ಮ ಹೆತ್ತವರನ್ನು ಗೌರವಿಸಿ. ಕೊಲ್ಲಬೇಡಿ, ಸುಳ್ಳು ಹೇಳಬೇಡಿ,…

Read More

ಬೆಂಗಳೂರು:- ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ ಸರ್ವೇ ಕಾರ್ಯಕ್ಕಾಗಿ ಹೆಚ್ಚು ಭೂಮಾಪಕರನ್ನು ನಿಯೋಜಿಸಲು ಭೂದಾಖಲೆಗಳ ಇಲಾಖೆಗೆ ಪತ್ರ ಬರೆಯಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆಯ ಸಂಬಂಧ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಸರ್ವೇ ಮಾಡಲು ಹೆಚ್ಚು ಭೂಮಾಪಕರ ಅವಶ್ಯಕತೆಯಿದ್ದು, ಕಂದಾಯ ಇಲಾಖೆಯ ಅಡಿ ಬರುವ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಗೆ ಪತ್ರ ಬರೆದು ಹೆಚ್ಚು ಭೂಮಾಪಕರನ್ನು ನಿಯೋಜನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಯಿತು. ನಗರದಲ್ಲಿ ಬೃಹತ್ ನೀರುಗಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಸ್ಥಳಗಳನ್ನು ಭೂಮಾಪಕರಿಂದ ಸರ್ವೇ ನಡೆಸಿ ಮಾರ್ಕ್ ಮಾಡಿ, ತಹಶೀಲ್ದಾರ್ ರವರಿಂದ ಆದೇಶಗಳನ್ನು ಜಾರಿಮಾಡಿರುವಂತಹ ಒತ್ತುವರಿಗಳನ್ನು ಕೂಡಲೆ ತೆರವುಗೊಳಿಸಬೇಕು. ಉಚ್ಛ ನ್ಯಾಯಾಲಯದಲ್ಲಿ ತಡೆಯಾಜ್ಞೆಯಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಿಕೊಂಡು ತೆರವು ಕಾರ್ಯಾಚರಣೆ ನಡೆಸಲು ಸೂಚನೆ ನೀಡಲಾಯಿತು. ನಿಗದಿತ…

Read More

ಪಾದದ ಗಾಯದ ಸಮಸ್ಯೆಯಿಂದ ಬಳಸುತ್ತಿರುವ ಭಾರತ ತಂಡದ ಹಿರಿಯ ವೇಗಿ ಮೊಹಮ್ಮದ್‌ ಶಮಿ ಅವರು ದಕ್ಷಿಣ ಆಫ್ರಿಕಾ ಪ್ರವಾಸದ ಎರಡು ಪಂದ್ಯಗಳ ಟೆಸ್ಟ್‌ ಸರಣಿಯಿಂದ ಹೊರಗುಳಿಯಲಿದ್ದಾರೆಂದು ವರದಿಯಾಗಿದೆ. ಪ್ರಸ್ತುತ ಭಾರತ ಹಾಗೂ ಆಫ್ರಿಕಾ ತಂಡಗಳು ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಕಾದಾಟ ನಡೆಸುತ್ತಿವೆ. ವೈಟ್‌ ಬಾಲ್‌ ಸರಣಿ ಮುಗಿದ ಬಳಿಕ ಉಭಯ ತಂಡಗಳು ಡಿಸೆಂಬರ್‌ 26 ರಿಂದ ಟೆಸ್ಟ್‌ ಸರಣಿಯಲ್ಲಿ ಕಾದಾಟ ನಡೆಸಲಿವೆ. ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಹಾಗೂ ಜಸ್‌ಪ್ರೀತ್‌ ಬುಮ್ರಾ ಅವರು ವಿಮಾನದ ಮೂಲಕ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸಿದ್ದಾರೆ. ಆದರೆ, ಮೊಹಮ್ಮದ್‌ ಶಮಿ ಇವರ ಜೊತೆ ಹೋಗಿಲ್ಲ ಎಂದು ಕ್ರಿಕ್‌ಬಝ್‌ ವರದಿ ಮಾಡಿದೆ. ಈ ಮೂವರು ಹಿರಿಯರ ಆಟಗಾರರ ಜೊತೆ ನವದೀಪ್‌ ಸೈನಿ ಹಾಗೂ ಹರ್ಷಿತ್‌ ರಾಣಾ ಕೂಡ ವಿಮಾನದಲ್ಲಿ ತೆರಳಿದ್ದಾರೆಂದು ವರದಿಯಾಗಿದೆ. ಬೌಲಿಂಗ್‌ ಲ್ಯಾಂಡಿಂಗ್‌ ಪಾದದಲ್ಲಿ ನೋವು ಕಾಣಿಸಿಕೊಂಡಿದೆ ಎಂದು ಮೊಹಮ್ಮದ್‌ ಶಮಿ ಇತ್ತೀಚೆಗೆ ಹೇಳಿಕೊಂಡಿದ್ದಾರೆಂದು ವರದಿಯಾಗಿದೆ. ಕಳೆದ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿಯೇ ಮೊಹಮ್ಮದ್‌ ಶಮಿ…

Read More

ದರ್ಶನ್ ನಟನೆಯ ‘ಕಾಟೇರ’ (Katera Film) ಸಿನಿಮಾದ ರಿಲೀಸ್ ಆಗೋಕೆ ಕೆಲವೇ ಕೆಲವು ದಿನಗಳು ಬಾಕಿಯಿದೆ. ಈ ಚಿತ್ರದ ಟ್ರೈಲರ್ ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ಇದೀಗ ಸುದ್ದಿಗೋಷ್ಠಿಯಲ್ಲಿ ‘ಕಾಟೇರ’ ಚಿತ್ರದ ಸ್ಪೆಷಾಲಿಟಿ ಬಗ್ಗೆ ದರ್ಶನ್ ಮಾತನಾಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ (Katera) ಸಿನಿಮಾ ಇದೇ ಡಿ.29ಕ್ಕೆ ರಿಲೀಸ್ ಆಗ್ತಿದೆ. ಟ್ರೈಲರ್‌ ರಿಲೀಸ್ ಬಗ್ಗೆ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸಿಹಿಸುದ್ದಿ ನೀಡಿದ್ದಾರೆ. ಸಿನಿಮಾದಲ್ಲಿ ದರ್ಶನ್ (Darshan) ಲುಕ್ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಒಂದು ಸಂತೋಷದ ಸುದ್ದಿ ಹಂಚಿಕೊಳ್ಳಲು ನಾವೆಲ್ಲರೂ ಇಂದು ಇಲ್ಲಿ ಸೇರಿದ್ದೀವಿ. ಡಿ.16ಕ್ಕೆ ‘ಕಾಟೇರ’ ಚಿತ್ರದ ಟ್ರೈಲರ್‌ ರಿಲೀಸ್‌ ಆಗ್ತಿದೆ. ಇದೇ ತಿಂಗಳು 29ಕ್ಕೆ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದ ನಿರ್ಮಾಪಕನಾಗಿ ಚಿತ್ರ ಹಿಟ್ ಆಗಬೇಕು ಅನ್ನೋ ಆಸೆಯೊಂದಿಗೆ ಚಿತ್ರ ಮಾಡಿದ್ದೇನೆ. ಸಾಕಷ್ಟು ಹಿರಿಯ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಎಲ್ಲರೂ ಯಾರನ್ನೋ ಮೆಚ್ಚಿಸೋಕೆ ಮಾತಾಡಿಲ್ಲ. ಪ್ರತಿಯೊಬ್ಬರು ಪ್ರೀತಿಯಿಂದ ಟೀಮ್ ವರ್ಕ್‌ನಿಂದ ಸಿನಿಮಾ ಮಾಡಿದ್ವಿ. ಈ ಥರ ಸ್ಟ್ರೈಟ್…

Read More