Author: AIN Author

ಬೆಂಗಳೂರು: ಕಾರ್ಯನಿರ್ವಹಣೆಯ ಸಂದರ್ಭದಲ್ಲಿ ಪೈಲಟ್‌ಗಳಿಗೆ ದಿಕ್ಕು ತಪ್ಪಿಸುವುದನ್ನು ತಡೆಯಲು ಫೈಟರ್‌ಜೆಟ್‌ಗಳಿಗೆ ಶೀಘ್ರದಲ್ಲೇ ಡಿಜಿಟಲ್‌ ನಕ್ಷೆ (India Made Digital Maps) ಗಳನ್ನು ಅಳವಡಿಸಲು ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (HAL) ಸಜ್ಜಾಗಿರುವುದಾಗಿ ಹೆಚ್‌ಎಎಲ್‌ನ ಉನ್ನತ ಅಧಿಕಾರಿ ತಿಳಿಸಿದ್ದಾರೆ. ಡಿಜಿಟಲ್‌ ನಕ್ಷೆ (Digital Maps) ಹೊಂದುವುದರಿಂದ ಪೈಲಟ್‌ಗಳು ಅಚಾನಕ್ಕಾಗಿ ಗಡಿ ದಾಟುವುದಿಲ್ಲ. ಗ್ರೂಪ್‌ ಕ್ಯಾಪ್ಟನ್‌ ಅಭಿನಂದನ್‌ ಅವರ ರೀತಿ ಮತ್ತೊಂದು ಘಟನೆ ಸಂಭವಿಸಬಾರದು. ಅದಕ್ಕಾಗಿ ಈ ಡಿಜಿಟಲ್‌ ನಕ್ಷೆಯನ್ನು ಸಿದ್ಧಪಡಿಸಲಾಗಿದೆ. ಇನ್ಮುಂದೆ ಅವರು ತಮ್ಮ ಕೈಯಲ್ಲಿ ಮ್ಯಾಪ್‌ ಹಿಡಿದಿಟ್ಟುಕೊಳ್ಳುವ ಅಗತ್ಯವಿರುವುದಿಲ್ಲ ಎಂದು ಹೆಚ್‌ಎಎಲ್‌ನ ಎಂಜಿನಿಯರಿಂಗ್‌ ಮತ್ತು ಆರ್‌&ಡಿ ವಿಭಾಗದ ನಿರ್ದೇಶಕ ಡಿ.ಕೆ ಸುನೀಲ್‌ ಹೇಳಿದ್ದಾರೆ. ಡಿಜಿಟಲ್‌ ನಕ್ಷೆಯಿಂದ ಏನು ಅನುಕೂಲ? ಡಿಜಿಟಲ್‌ ನಕ್ಷೆಯಿಂದ ವಿಮಾನ ಹಾರಾಟ ಸಂದರ್ಭದಲ್ಲಿ ಪೈಲಟ್‌ಗಳು ಕಾಕ್‌ಪಿಟ್ ಡಿಸ್‌ಪ್ಲೇನಲ್ಲಿ (Cockpit Display) ನಕ್ಷೆಯನ್ನು ಪರಿಶೀಲಿಸಬಹುದು. 2ಡಿ ಮತ್ತು 3ಡಿ ರೂಪದಲ್ಲಿ ನಕ್ಷೆ ಲಭ್ಯವಿರಲಿದ್ದು, ಪೈಲಟ್‌ಗಳು ಗುಡ್ಡಗಾಡು ಪ್ರದೇಶದಲ್ಲಿದ್ದರೆ ಮೊದಲೇ ಎಚ್ಚರಿಸುತ್ತದೆ. ಹಾಗಾಗಿ ಎತ್ತರದ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಉಂಟಾಗುವ ಅಪಘಾತಗಳನ್ನು ತಡೆಯಲು…

Read More

ರಿಲಯನ್ಸ್ ಜಿಯೋದಿಂದ (Reliance Jio) ಈಗ ಜಿಯೋಟಿವಿ ಪ್ರೀಮಿಯಂ ಪ್ಲ್ಯಾನ್‌ಗಳನ್ನು (JioTV Premium Plans) ಪರಿಚಯಿಸಲಾಗುತ್ತಿದೆ. ಜಿಯೋ ಪ್ರೀಪೇಯ್ಡ್ ಬಳಕೆದಾರರು ಈಗ ಜಿಯೋಟಿವಿ ಪ್ರೀಮಿಯಂ ಪ್ಲ್ಯಾನ್‌ಗಳ ಜೊತೆಗೆ ನಿರಂತರ ಮನರಂಜನೆ ಆನಂದಿಸಬಹುದು. ಮಾಸಿಕ, ತ್ರೈಮಾಸಿಕ ಹಾಗೂ ವಾರ್ಷಿಕ ಪ್ಲ್ಯಾನ್‌ಗಳು ಇರಲಿದ್ದು, ಇದರ ಮೂಲಕ ಅನಿಯಮಿತ ಡೇಟಾ, ಧ್ವನಿ, ಎಸ್‌ಎಂಎಸ್‌ ಹಾಗೂ 14 ಪ್ರಮುಖ OTT (ಓವರ್ ದಿ ಟಾಪ್)ಗಳಿಗೆ ಚಂದಾದಾರಿಕೆ ಪಡೆಯಬಹುದು. 1,000 ರೂ. ಮೌಲ್ಯದ ಒಟಿಟಿ ಚಂದಾದಾರಿಕೆ ಯಾವುದೇ ಹೆಚ್ಚುವರಿ ಶುಲ್ಕ ಇಲ್ಲದೇ ಇದು ಲಭ್ಯವಾಗಲಿದೆ. ಪ್ಲ್ಯಾನ್‌ಗಳು ತಿಂಗಳಿಗೆ 398 ರೂ.ನೊಂದಿಗೆ ಆರಂಭವಾಗುತ್ತದೆ. ಅಂದ ಹಾಗೆ ಈ 14 OTT ಗಳಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಹಾಗೂ ಪ್ರಾದೇಶಿಕ ಕಂಟೆಂಟ್ ಲಭ್ಯವಾಗುತ್ತದೆ. ಡಿಜಿಟಲ್ ಟಿವಿ, ಕ್ರೀಡಾ, ಒರಿಜಿನಲ್ಸ್, ಟೀವಿ ಶೋಗಳು ಮುಂತಾದವು ದೊರೆಯುತ್ತವೆ. ಪ್ರೀಪೇಯ್ಡ್ ಸೆಗ್ಮೆಂಟ್‌ನಲ್ಲಿ ವಾರ್ಷಿಕ ಪ್ಲ್ಯಾನ್‌ ಖರೀದಿ ಮಾಡುವಂಥ ಗ್ರಾಹಕರಿಗಾಗಿಯೇ ಒನ್ ಕ್ಲಿಕ್ ಕಾಲ್ ಸೆಂಟರ್ ಬೆಂಬಲ ಸಹ ದೊರೆಯುತ್ತದೆ. ಯಾವ್ಯಾವ ಆ್ಯಪ್‌ಗಳು ದೊರೆಯುತ್ತವೆ? ರಾಷ್ಟ್ರೀಯ ಆ್ಯಪ್‌ಗಳು: ಜಿಯೋಸಿನಿಮಾ (JioCinema)…

Read More

ಕನ್ನಡದ ಹೆಸರಾಂತ ನಟ ದರ್ಶನ್ (Darshan) ಅವರ ಸಿನಿಮಾರಿಲೀಸ್ ಆಗುವ ವೇಳೆಯಲ್ಲೇ ಬೇಕು ಅಂತಾನೇ ಕೆಲವರು ನೆಗೆಟಿವ್ ಟ್ರೋಲ್ (Troll) ಮಾಡುತ್ತಾರೆ. ಈ ಬಾರಿಯೂ ಕಾಟೇರ  (Katera)ಕುರಿತಾಗಿ ಟ್ರೋಲ್ ಮಾಡಲಾಗುತ್ತಿದೆ. ಈ ಕುರಿತಂತೆ ದರ್ಶನ್ ಫ್ಯಾನ್ಸ್ ಗರಂ ಆಗಿದ್ದಾರೆ. ನೆಗೆಟಿವ್ ಟ್ರೋಲ್ ಮಾಡುವವರನ್ನು ಹುಡುಕುವ ಪ್ರಯತ್ನವನ್ನು ಅವರು ಮಾಡುತ್ತಿದ್ದಾರೆ. ಕನ್ನಡ ಸಿನಿಮಾ ಕುರಿತಂತೆ ದರ್ಶನ್ ಮೊನ್ನೆಯಷ್ಟೇ ಗಟ್ಟಿ ಧ್ವನಿಯಲ್ಲಿ ಮಾತನಾಡಿದ್ದಾರೆ. ನಮ್ಮದು ಪ್ಯಾನ್ ಇಂಡಿಯಾ ಸಿನಿಮಾವಲ್ಲ, ಅಪ್ಪಟ ಕನ್ನಡ ಸಿನಿಮಾ. ನಮ್ಮ ನೆಲದಲ್ಲಿ ಬೇರೆ ಸಿನಿಮಾಗಳು ರಿಲೀಸ್ ಆಗೋಕೆ ಭಯ ಪಡಬೇಕು. ನಾವೇಕೆ ಭಯ ಪಡಬೇಕು ಎಂದೆಲ್ಲ ಮಾತನಾಡಿದ್ದಾರೆ. ಈ ಕುರಿತಂತೆಯೂ ಟ್ರೋಲ್ ಮಾಡಲಾಗುತ್ತಿದೆ. ನಾನಾ ಕಾರಣಗಳಿಂದಾಗಿ ಕಾಟೇರ ಸಿನಿಮಾ ನಿರೀಕ್ಷೆ ಮೂಡಿಸಿದೆ. ಇವತ್ತು ಸಿನಿಮಾದ ಟ್ರೈಲರ್ ಕೂಡ ಬಿಡುಗಡೆ ಆಗುತ್ತಿದೆ. ಅದಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಸಿನಿಮಾದಲ್ಲಿ ದರ್ಶನ್ ಹೊಸ ಬಗೆಯ ಪಾತ್ರ ಮಾಡಿದ್ದು, ಆ ಪಾತ್ರವನ್ನು ನೋಡಲು ನೋಡುಗರು ಕಾಯುತ್ತಿದ್ದಾರೆ.

Read More

ಬೆಂಗಳೂರು:- ಕೋವಿಡ್‌ ಪರೀಕ್ಷಾ ಪ್ರಮಾಣ ಹೆಚ್ಚಳ ಮಾಡುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಒಂದು ತಿಂಗಳಿನಿಂದ ಸಾಂಕ್ರಾಮಿಕ ಕಾಯಿಲೆಗಳು ಹೆಚ್ಚುತ್ತಿದ್ದು, ಕರ್ನಾಟಕದಲ್ಲೂ ಕೋವಿಡ್‌ ಪರೀಕ್ಷಾ ಪ್ರಮಾಣವನ್ನು ಹೆಚ್ಚಿಸಲಾಗುವುದು ಎಂದರು. ಕೋವಿಡ್‌ ಸೇರಿ ಯಾವುದೇ ವೈರಾಣು ಜ್ವರದ ಲಕ್ಷಣಗಳಿದ್ದರೂ ತಪಾಸಣೆಗೆ ಒಳಪಡಿಸುವಂತೆ ಸೂಚಿ ಸಿದ್ದು, ಹೆಚ್ಚುವರಿ ಆರ್‌ಟಿಪಿಸಿಆರ್‌ ಕಿಟ್‌ಗಳ ಖರೀದಿಗೂ ಆದೇಶಿಸಲಾಗಿದೆ ಎಂದರು. ಕೇರಳದಲ್ಲಿ ಕೋವಿಡ್‌ ಉಪತಳಿ ಪ್ರಕರಣ ದಿನೇದಿನೆ ಹೆಚ್ಚುತ್ತಿದೆ. ರಾಜ್ಯ ದಲ್ಲೂ 58 ಸಕ್ರಿಯ ಪ್ರಕರಣಗಳಿವೆ. 47 ಮಂದಿ ಹೋಮ್‌ ಐಸೋಲೇಶನ್‌ನಲ್ಲಿದ್ದಾರೆ. 11 ಮಂದಿ ಆಸ್ಪತ್ರೆಯಲ್ಲಿದ್ದು, ಈ ಪೈಕಿ 5 ಮಂದಿ ಜನರಲ್‌ ವಾರ್ಡ್‌ನಲ್ಲಿ ಹಾಗೂ 6 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಕ್ಟೋಬರ್‌ ತಿಂಗಳಲ್ಲಿ 64 ವರ್ಷದ ಒಬ್ಬರು ಕೋವಿಡ್‌ ಮತ್ತು ಬಹುಸಹವರ್ತಿ ಕಾಯಿಲೆಗಳಿಂದ ಬೆಂಗಳೂರಿನಲ್ಲಿ ಮೃತ ಪಟ್ಟಿರುವ ವರದಿಯಾಗಿದೆ. 2 ತಿಂಗಳಿಂ ದೀಚೆಗೆ ಸಾವು ಸಂಭವಿಸಿಲ್ಲ. ಆದರೆ ಸಾಂಕ್ರಾಮಿಕ ಕಾಯಿಲೆಗಳು ಅದರಲ್ಲೂ ಐಎಲ್‌ಐ, ಸಾರಿಯಂತಹ ವೈರಾಣು ಜ್ವರ ಕಾಣಿಸಿಕೊಳ್ಳುತ್ತಿದ್ದು, ಅಂಥವರಿಗೂ ಕೋವಿಡ್‌…

Read More

ಇಡೀ ವಿಶ್ವವೇ ಇದರತ್ತ ನೋಡುತ್ತಿದೆ. ಮೂರು ವರ್ಷದಿಂದ ಕಾಯುತ್ತಿದ್ದ ಗಳಿಗೆ ಹತ್ತಿರವಾಗಿದೆ. ಕಾರಣ ಸಲಾರ್ (Salaar) ಅಬ್ಬರಿಸಲು ಸಜ್ಜಾಗಿದೆ. ಈ ಹೊತ್ತಲ್ಲಿ ಹಲವು ರಹಸ್ಯ ಬಿಚ್ಚಿಟ್ಟಿದ್ದಾರೆ ಕ್ಯಾಮೆರಾಮನ್ ಭುವನ್ ಗೌಡ. ಯರ‍್ಯಾರೊ ಏನೇನೊ ಅಂದುಕೊಂಡಿದ್ದು ಸುಳ್ಳು. ಇದು ಸತ್ಯ ಎಂದು ಗುಡುಗಿದ್ದಾರೆ. ಏನಿದು ಸಲಾರ್ ಅಪರೂಪದ ಸಮಾಚಾರ ಇಲ್ಲಿದೆ ನೋಡಿ. ಬರೀ ಪ್ರಭಾಸ್ (Prabhas) ಫ್ಯಾನ್ಸ್ ಮಾತ್ರ ಅಲ್ಲ, ಇಡೀ ವಿಶ್ವವೇ ಸಲಾರ್‌ಗಾಗಿ ಕಾಯುತ್ತಿದೆ. ಒಂದು ಕಡೆ ಪ್ರಶಾಂತ್ ನೀಲ್ ಏನು ಮಾಡಲಿದ್ದಾರೆ ಎನ್ನುವ ಕುತೂಹಲ ಇನ್ನೊಂದು ಕಡೆ ಪ್ರಭಾಸ್ ಕಾಂಬಿನೇಶನ್ ಹೆಂಗೆ ಕಿಕ್ ಏರಿಸುತ್ತದೆ ಎನ್ನುವ ಹಂಬಲ. ಎರಡೂ ಸೇರಿ ಸಲಾರ್‌ಗೆ ಭೂಮಿ ತೂಕದ ಬಲ ತಂದುಕೊಟ್ಟಿದೆ. ಈ ಹೊತ್ತಲ್ಲಿ ಕ್ಯಾಮೆರಾಮನ್ ಭುವನ್ ಗೌಡ (Bhuvan Gowda) ಹಲವು ರಹಸ್ಯ ಹರವಿಟ್ಟಿದ್ದಾರೆ. ಅದನ್ನು ಕೇಳಿ ಪ್ರಭಾಸ್ ಭಕ್ತಗಣ ರಣಕೇಕೆ ಹಾಕಿದೆ.‌ ಕೆಜಿಎಫ್ (KGF) ಚಿತ್ರಕ್ಕಿಂತ ಐದು ಪಟ್ಟು ದೊಡ್ಡದು ಸಲಾರ್. ರಾಮೋಜಿ ಫಿಲ್ಮ್ ಸಿಟಿಯಲ್ಲಿ ಇನ್ನೊಂದು ಫಿಲ್ಮ್ ಸಿಟಿ ನಿರ್ಮಿಸಿದಂತಾಗಿತ್ತು…

Read More

ಕರ್ನಾಟಕದಲ್ಲಿ ಈ ವರ್ಷ ಮಾನ್ಸೂನ್ ಕ್ಷೀಣಗೊಂಡಿದೆ. 60 ರಿಂದ 70% ಪ್ರಮಾಣದ ಬೆಳೆ ನಾಶವಾಗಿದೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕರ್ನಾಟಕದ ರೈತರ (Karnataka Farmers) ನೆರವಿಗೆ ಧಾವಿಸಬೇಕು. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮಂಡ್ಯ ಸಂಸದೆ ಸುಮಲತಾ ಮನವಿ ಮಾಡಿದ್ದಾರೆ. ಲೋಕಸಭೆ ಕಲಾಪದಲ್ಲಿ ಶೂನ್ಯವೇಳೆಯಲ್ಲಿ ಬರ ಪರಿಸ್ಥಿತಿಯ ಬಗ್ಗೆ ಸಂಸದೆ ಸುಮಲತಾ (Sumalatha Ambareesh) ಪ್ರಸ್ತಾಪಿಸಿದರು. 2023ರಲ್ಲಿ ಜಾಗತಿಕವಾಗಿ ಅತ್ಯಂತ ಹೆಚ್ಚು ಉಷ್ಣಾಂಶ ವರ್ಷವಾಗಿದೆ. ಆದ್ದರಿಂದಾಗಿ ನಮ್ಮ ರಾಜ್ಯದಲ್ಲಿಯೂ ಉಷ್ಣಾಂಶ ಹೆಚ್ಚಾಗಿದೆ. ಕರ್ನಾಟಕದಲ್ಲಿ ಈ ವರ್ಷ ಮಾನ್ಸೂನ್ ಕ್ಷೀಣಗೊಂಡಿದೆ. 236ರ ಪೈಕಿ ರಾಜ್ಯದ 223 ತಾಲೂಕುಗಳು ಬರ ಪೀಡಿತವಾಗಿದ್ದು, ಅಂದಾಜು 30 ಸಾವಿರ ಕೋಟಿ ನಷ್ಟವಾಗಿದೆ ಎಂದು ಪ್ರಧಾನಿಗಳ ಗಮನಕ್ಕೆ ತಂದರು. ಮುಂದುವರಿದು, ನನ್ನ ಮತಕ್ಷೇತ್ರ ಮಂಡ್ಯದ ಎಲ್ಲಾ ತಾಲೂಕುಗಳು ಬರ ಪೀಡಿತವಾಗಿವೆ. ರೈತರು ಸಂಕಷ್ಟದಲ್ಲಿದ್ದಾರೆ, 60 ರಿಂದ 70% ಪ್ರಮಾಣದ ಬೆಳೆ ನಾಶವಾಗಿದೆ. ಕಬ್ಬು ಬೆಳೆಗಾರರಿಗೆ ಬೆಳೆ ವಿಮೆ ಲಭ್ಯವಾಗಿಲ್ಲ. ಕರ್ನಾಟದ ರೈತರ…

Read More

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದಿನಿಂದ ಡಿ.20ರ ತನಕ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದ ಪ್ರತ್ಯೇಕ ಸ್ಥಳದಲ್ಲಿ ಮಳೆಯಾಗಲಿದೆ. ಮಲೆನಾಡಿನ ಹಾಸನ, ಶಿವಮೊಗ್ಗ, ಕೊಡಗು ಭಾಗದಲ್ಲೂ ಜಿಟಿ ಜಿಟಿ ಮಳೆ ಇರಲಿದೆ. ಉಳಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರದಲ್ಲಿ ಮಳೆಯ ಸಿಂಚನವಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೊಂದು ವಾರವೂ ಮಳೆ ಸುರಿಯಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ರಾಮನಗರದಲ್ಲೂ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿ ವೇಳೆ ಕೆಲವು ಪ್ರದೇಶಗಳಲ್ಲಿ ಅತಿ ಹಗುರದೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.

Read More

ಅಯೋಧ್ಯಯ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ದಕ್ಷಿಣ ಭಾರತದ ಕೆಲವೇ ಕೆಲವರು ನಟ ನಟಿಯರನ್ನು ಆಹ್ವಾನಿಸಿದ್ದು, ಕನ್ನಡದಲ್ಲಿ ರಿಷಬ್ ಶೆಟ್ಟಿ (Rishabh Shetty) ಅವರಿಗೆ ಇಂಥದ್ದೊಂದು ಅವಕಾಶ ಸಿಕ್ಕಿದೆ. ರಾಮಮಂದಿರ ಉದ್ಘಾಟನೆಗೆ ರಿಷಬ್ ಶೆಟ್ಟಿ ಅವರನ್ನು ಆಹ್ವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ರಜನಿಕಾಂತ್, ಮೋಹನ್ ಲಾಲ್, ಚಿರಂಜೀವಿ ಸೇರಿದಂತೆ ಕೆಲವೇ ಕೆಲವು ನಟರಿಗೆ ಇಂಥದ್ದೊಂದು ಆಹ್ವಾನ ಸಿಕ್ಕಿದೆ. ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ (Ayodhya Ram Mandir) ಲೋಕಾರ್ಪಣೆಯಾಗುತ್ತಿದ್ದು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆ ಪುನಸ್ಕಾರ ಆಯೋಜನೆಗೊಂಡಿದೆ. ಇದರ ಭಾಗವಾಗಿ ಬೆಂಗಳೂರಿನ (Bengaluru) ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಘಂಟಾದಾನ ಸಮರ್ಪಣೆ ಮಾಡಿದ್ದಾರೆ. 2.5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳು, 38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳನ್ನು ಸಮರ್ಪಣೆ ಮಾಡಲಾಗಿದೆ. ಈ ಘಂಟಾದಾನ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭಾಗಿಯಾಗಿದ್ದಾರೆ.

Read More

ಮುಂಬೈ: ಅಚ್ಚರಿಯ ಬೆಳವಣಿಗೆಯಲ್ಲಿ ಮುಂಬೈ ಇಂಡಿಯನ್ಸ್ ಐಪಿಎಲ್ 2024ರ ಆವೃತ್ತಿಗೆ ಮತ್ತೆ ಮುಂಬೈ ತಂಡಕ್ಕೆ ಕಂಬ್ಯಾಕ್‌ ಮಾಡಿರುವ ಹಾರ್ದಿಕ್‌ ಪಾಂಡ್ಯ (Hardik Pandya) ಅವರನ್ನು ನಾಯಕನನ್ನಾಗಿ ನೇಮಿಸಿದೆ ಈ ಬಗೆಗಿನ ಮಾಹಿತಿಯನ್ನು ಮುಂಬೈ ಇಂಡಿಯನ್ಸ್‌ ಫ್ರಾಂಚೈಸಿಯು (Mumbai Indians) ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ. ರೋಹಿತ್ ಶರ್ಮಾ (Rohit Sharma) ಅವರ 10 ವರ್ಷಗಳ ನಾಯಕತ್ವದ ನಂತರ ಹಾರ್ದಿಕ್​ ತಂಡದ ಸಾರಥ್ಯ ವಹಿಸಿಕೊಂಡಿದ್ದಾರೆ. 2022ರಲ್ಲಿ ಗುಜರಾತ್‌ ಟೈಟಾನ್ಸ್‌ ತಂಡ ಸೇರಿದ್ದ ಹಾರ್ದಿಕ್‌ ಪಾಂಡ್ಯ ನಾಯಕನಾಗಿ ತಂಡದ ಚೊಚ್ಚಲ ಆವೃತ್ತಿಯಲ್ಲೇ ಪ್ರಶಸ್ತಿ ಗೆಲ್ಲುವಂತೆ ಮಾಡಿದ್ದರು. 2023ರ ಐಪಿಎಲ್‌ನಲ್ಲಿ ರನ್ನರ್‌ ಅಪ್‌ ಪ್ರಶಸ್ತಿ ತಂದುಕೊಟ್ಟಿದ್ದರು. ಎರಡು ವರ್ಷಗಳ ನಂತರ ಮುಂಬೈ ಇಂಡಿಯನ್ಸ್​ ತಂಡಕ್ಕೆ ಮರಳಿರುವ ಇದೀಗ 5 ಬಾರಿ ಚಾಂಪಿಯನ್‌ ಆಗಿರುವ ಮುಂಬೈ ಇಂಡಿಯನ್ಸ್‌ ತಂಡವನ್ನು ಮುನ್ನಡೆಸಲು ತಯಾರಿ ಶುರು ಮಾಡಿದ್ದಾರೆ. ಫ್ರಾಂಚೈಸಿಯನ್ನು 10 ವರ್ಷ ತಂಡವನ್ನು ಮುನ್ನಡೆಸಿದ ರೋಹಿತ್ ಶರ್ಮಾ ಅವರ ಭವಿಷ್ಯದ ಬಗ್ಗೆ ಮಾಹಿತಿ ಲಭ್ಯವಿಲ್ಲ. ಅವರು ನಾಯಕತ್ವದ ಹೊರತಾಗಿಯೂ ತಂಡದಲ್ಲಿ ಮುಂದುವರಿಯುವರೇ…

Read More

ಈ ಚಳಿಗಾಲದಲ್ಲಿ ಜ್ವರ, ನೆಗಡಿ, ಗಂಟಲು ಕೆರೆತ ಹೆಚ್ಚಿನವರಲ್ಲಿ ಸರ್ವೇಸಾಮಾನ್ಯ. ಹವಾಮಾನ ಬದಲಾವಣೆ ವೇಳಗೆ ಆರೋಗ್ಯದಲ್ಲಾಗುವ ಏರುಪೇರು ಕಿರಿಕಿರಿಯುಂಟುಮಾಡುತ್ತದೆ. ಇಂತಹ ಸಂದರ್ಭದಲ್ಲಿ ನೀವು ಬೆಚ್ಚಗಿನ ಗಿಡಮೂಲಿಕೆಗಳ ಚಹಾ ಕುಡಿಯುವುದು ಉತ್ತಮ. ನಾವಿಂದು ಪುದೀನಾ ಚಹಾ ಮಾಡೋದು ಹೇಗೆಂದು ಹೇಳಿಕೊಡುತ್ತೇವೆ. ಬೇಕಾಗುವ ಪದಾರ್ಥಗಳು: ನೀರು – 3 ಕಪ್ ದಾಲ್ಚಿನ್ನಿ ಚಕ್ಕೆ – 1 ಇಂಚು ಲವಂಗ – 2 ನಿಂಬೆಹಣ್ಣು – 1 ತಾಜಾ ಪುದೀನಾ ಎಲೆಗಳು – 1 ಕಪ್ ಜೇನು ತುಪ್ಪ – ಸ್ವಾದಕ್ಕನುಸಾರ ಮಾಡುವ ವಿಧಾನ: * ಮೊದಲಿಗೆ ಒಂದು ಪಾತ್ರೆಯಲ್ಲಿ ನೀರು ಹಾಕಿ ಕುದಿಸಿಕೊಳ್ಳಿ. * ಉರಿಯನ್ನು ಕಡಿಮೆ ಮಾಡಿ, ಅದಕ್ಕೆ ದಾಲ್ಚಿನ್ನಿ, ಲವಂಗ ಸೇರಿಸಿ 1 ನಿಮಿಷ ಕುದಿಸಿಕೊಳ್ಳಿ. * ನಂತರ ಪುದೀನಾ ಎಲೆಗಳನ್ನು ಸೇರಿಸಿ 1-2 ನಿಮಿಷ ಕುದಿಸಿ. * ಈಗ ಉರಿಯನ್ನು ಆಫ್ ಮಾಡಿ, ಅದನ್ನು ಕಪ್‌ಗಳಿಗೆ ಸೋಸಿಕೊಳ್ಳಿ. * ಬಳಿಕ ಜೇನುತುಪ್ಪ ಹಾಗೂ ನಿಂಬೆ ರಸವನ್ನು ಸೇರಿಸಿ. * ಇದೀಗ…

Read More