Author: AIN Author

ಬೆಂಗಳೂರು: ತನ್ನ ಪತ್ನಿಯನ್ನು ವಿಧವೆ ಎಂದು ಹೇಳಿ ನೋಡಿಕೊಳ್ಳುವಂತೆ ಉದ್ಯಮಿ ಜೊತೆ ಬಿಟ್ಟು ಹನಿಟ್ಯ್ರಾಪ್ ನಡೆಸಿದ ಪ್ರಕರಣ ಸಂಬಂಧ ದಂಪತಿ ಸಹಿತ ನಾಲ್ವರು ಆರೋಪಿಗಳನ್ನು CCB ಪೊಲೀಸರು ಬಂಧಿಸಿದ್ದಾರೆ. ಖಲೀಮ್, ಸಭಾ, ಓಬೆದ್ ರಕೀಮ್, ಅತೀಕ್ ಬಂಧಿತ ಆರೋಪಿಗಳಾಗಿದ್ದು, ಈ ಪೈಕಿ ಖಲೀಮ್ ಮತ್ತು ಸಭಾ ದಂಪತಿಯಾಗಿದ್ದಾರೆ. ಈ ಗ್ಯಾಂಗ್ ಅತೀವುಲ್ಲಾ ಎಂಬ ಉದ್ಯಮಿಗೆ ಬಲೆಬೀಸಿ ಕೆಡ್ಡಕ್ಕೆ ಕೆಡವಿ ಹನಿಟ್ರ್ಯಾಪ್ ಮಾಡಿತ್ತು. ಅತೀವುಲ್ಲಾಗೆ ಪತ್ನಿ ಸಭಾಳನ್ನ ವಿಧವೆ ಅಂತಾ ಪರಿಚಯ ಮಾಡಿಸಿಕೊಟ್ಟು ಆಕೆಯನ್ನು ನೋಡಿಕೊಳ್ಳುವಂತೆ ಹೇಳಿದ್ದ. ನಂತರ ಸಭಾ ಮತ್ತು ಅತೀವುಲ್ಲಾ ನಡುವೆ ದೈಹಿಕ ಸಂಪರ್ಕ ನಡೆದಿತ್ತು. ಕೆಲ ದಿನಗಳ ನಂತರ ಆರ್.ಆರ್ ನಗರದಲ್ಲಿ ರೂಮ್ ಬುಕ್ ಮಾಡಲು ಆಧಾರ್ ಕಾರ್ಡ್ ಜೊತೆ ಬಾ‌ ಎಂದು ಅತೀವುಲ್ಲಾನನ್ನು ಕರೆದಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.

Read More

ಕಲಬುರಗಿ:  ಬೆಳಗಾವಿಯಲ್ಲಿ ನಡೆದ ಮಹಿಳೆ ವಿರುದ್ಧ ಅಮಾನವೀಯ ಘಟನೆ ಖಂಡಿಸಿ ಕಲಬುರಗಿಯಲ್ಲಿ ಬಿಜೆಪಿ ಪ್ರೊಟೆಸ್ಟ್ ನಡೆಸಿತು ಸಂಸದ ಉಮೇಶ್ ಜಾಧವ್ ನೇತ್ರತ್ವದಲ್ಲಿ ಡಿಸಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆ. ಈ ಫ್ರತಿಭಟನೆಯಲ್ಲಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಭಾಗವಹಿಸಿದ್ರು.ರಾಜ್ಯ ಸರ್ಕಾರಕ್ಕೆ ಈ ಘಟನೆ ಬಗ್ಗೆ ಎಚ್ಚರಿಕೆ ಕೊಡ್ತಿದ್ದೀವಿ. ಕೂಡಲೇ ಮಹಿಳಾ ಮಕ್ಕಳ ಸಚಿವರು ರಾಜೀನಾಮೆ ಕೊಡ್ಬೇಕು ಅಂತ ಆಗ್ರಹಿಸಿದ್ರು..

Read More

ಟೆಲ್‌ ಅವೀವ್‌: ಜೆರುಸಲೆಮ್‌ ಮೇಲೆ ರಾಕೆಟ್‌ ದಾಳಿ ನಡೆದ ಸಂದರ್ಭದಲ್ಲಿ ಭಯೋತ್ಪಾದಕರು ಎಂದು ತಪ್ಪಾಗಿ ಭಾವಿಸಿ ಮೂವರು ಒತ್ತೆಯಾಳುಗಳನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್‌ ಸೇನೆ (Israel Army) ತಿಳಿಸಿದೆ. ಹಮಾಸ್ (Hamas) ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ದಾಳಿ ನಡೆಸಿದ ನಂತರ ಯುದ್ಧ ಪ್ರಾರಂಭವಾಯಿತು. ಇಲ್ಲಿಯವರೆಗೆ ಇಸ್ರೇಲಿ ಅಧಿಕಾರಿಗಳು ಸುಮಾರು 1,200 ಜನರನ್ನು ಹತ್ಯೆ ಮಾಡಿದ್ದಾರೆ. ಅವರ ಪೈಕಿ ಹೆಚ್ಚಿನವರು ನಾಗರಿಕರೇ ಆಗಿದ್ದಾರೆ ಎಂದು ತಿಳಿದುಬಂದಿದೆ. ಹಮಾಸ್ ಬಂಡುಕೋರರ ಗುಂಪನ್ನು ನಾಶಮಾಡಲು ಮತ್ತು ಉಗ್ರಗಾಮಿಗಳಿಂದ ಅಪಹರಿಸಲ್ಪಟ್ಟ ಅಂದಾಜು 250 ಒತ್ತೆಯಾಳುಗಳನ್ನು ವಾಪಸ್‌ ಕರೆತರುವುದಾಗಿ ಪ್ರತಿಜ್ಞೆ ಮಾಡಿದ ಇಸ್ರೇಲ್, ಭಾರಿ ಆಕ್ರಮಣ ನಡೆಸಿದೆ. ಇಸ್ರೇಲ್‌ ಸೇನೆ ಮುತ್ತಿಗೆ ಹಾಕಿದ ಹೆಚ್ಚಿನ ಪ್ರದೇಶವನ್ನು ನಾಶಮಾಡಿದೆ. ಯುದ್ಧದಿಂದ ಕನಿಷ್ಠ 18,800 ಜನರು ಹತರಾಗಿದ್ದಾರೆ. ಅವರ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಹಮಾಸ್ ಸರ್ಕಾರ ತಿಳಿಸಿದೆ. ಶುಕ್ರವಾರವೂ ಭೀಕರ ದಾಳಿ ಮುಂದುವರಿದಿದ್ದು, ದಕ್ಷಿಣದ ನಗರವಾದ ಖಾನ್ ಯೂನಿಸ್‌ನಲ್ಲಿ ಇಸ್ರೇಲಿ ಸೈನಿಕರಿದ್ದ ಮನೆಯನ್ನು ಸ್ಫೋಟಿಸಿರುವುದಾಗಿ…

Read More

ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಪೊಲೀಸ್ ಠಾಣೆ (Police Station) ಒಂದರ ಮೇಲೆ ಆತ್ಮಹತ್ಯಾ ಬಾಂಬರ್‌ಗಳು ನಡೆಸಿದ ದಾಳಿಯಲ್ಲಿ ಕನಿಷ್ಠ 23 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಈ ದಾಳಿ ನಡೆದಿದೆ. ಉಗ್ರರು ಸ್ಫೋಟಕಗಳನ್ನು ತುಂಬಿದ ವಾಹನವನ್ನು ಪೊಲೀಸ್ ಠಾಣೆಯ ಮುಖ್ಯ ಗೇಟ್‍ಗೆ ನುಗ್ಗಿಸಿದ್ದಾರೆ. ಬಳಿಕ ಗುಂಡು ಹಾರಿಸಲು ಪ್ರಾರಂಭಿಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಗ್ರರ ನಡುವೆ ಗುಂಡಿನ ಚಕಮಕಿ ಇನ್ನೂ ಮುಂದುವರೆದಿದೆ. ಪಾಕಿಸ್ತಾನಿ ಸೇನೆ ಹಾಗೂ ಪೊಲೀಸರನ್ನು ಗುರಿಯಾಗಿಟ್ಟುಕೊಂಡು ಉಗ್ರರು ಈ ದಾಳಿ (Terrorist Attack) ನಡೆಸಿದ್ದಾರೆ. ದೇಶದ ಭಯೋತ್ಪಾದಕ ಸಂಘಟನೆಗಳಲ್ಲಿ ಒಂದಾದ ತೆಹ್ರೀಕ್-ಎ-ಜಿಹಾದ್ ಪಾಕಿಸ್ತಾನವು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More

ಬೆಂಗಳೂರು: ಇಂದು  ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ 64ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಟಿ.ಎ. ಶರವಣ ಅವರು ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನ ಕೋರಿದ್ದಾರೆ. ನಮ್ಮೆಲ್ಲರ ಪ್ರೀತಿಯ ಕುಮಾರಣ್ಣ, ಮಾಜಿ ಮುಖ್ಯಮಂತ್ರಿಗಳು, ಜಾತ್ಯಾತೀತ ಜನತಾದಳ ಪಕ್ಷದ ಶಾಸಕಾಂಗ ಅಧ್ಯಕ್ಷರಾದ  ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ  ಭಗವಂತ ಉತ್ತಮ ಆಯುಷ್ಯ ಆರೋಗ್ಯ ನೀಡಿ ಕಾಪಾಡಲಿ ಎಂದು ದೇವರಲ್ಲಿ  ಪ್ರಾರ್ಥಿಸುತ್ತೇನೆ ಎಂದು ಹಾರೈಸಿದ್ದಾರೆ. ಈಗಾಗಲೇ HDK  ಸಿಂಗಾಪುರ ಪ್ರವಾಸದಲ್ಲಿದ್ದು ಆದರೆ ಹೋಗುವ ಮೊದಲು ಅಭಿಮಾನಿಗಳಿಗೆ ಪೋಸ್ಟ್‌ ಮಾಡಿದ್ದಾರೆ.  ನನ್ನ ಜನ್ಮದಿನವಾದ ಡಿಸೆಂಬರ್ 16ರಂದು, ನಾನು ಬೆಂಗಳೂರು ನಗರದಲ್ಲಿ ಲಭ್ಯವಿರುವುದಿಲ್ಲ. ಕಾರ್ಯಕರ್ತರಾದಿಯಾಗಿ ನನ್ನ ಮೇಲೆ ಪ್ರೀತಿ, ವಾತ್ಸಲ್ಯ ಇರಿಸಿರುವ ಪ್ರತಿಯೊಬ್ಬರೂ ನನ್ನ ವೈಯಕ್ತಿಕ ಭೇಟಿಗೆ ಪ್ರಯತ್ನಿಸದೇ ತಾವು ಇದ್ದಲ್ಲಿಂದಲೇ ಶುಭ ಕೋರಬೇಕಾಗಿ ನಿಮ್ಮೆಲ್ಲರಲ್ಲೂ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಹೆಚ್ಡಿಕೆ ಪೋಸ್ಟ್ ಮಾಡಿದ್ದಾರೆ.…

Read More

ಧಾರವಾಡ: ಬೆಳಗಾವಿ ವಂಟಮೂರಿ ಗ್ರಾಮದಲ್ಲಿ ಮಹಿಳೆ ಬೆತ್ತಲೆ ಮಾಡಿ ಹಲ್ಲೆ ಮಾಡಿದ ಪ್ರಕರಣ ಖಂಡಿಸಿ ಧಾರವಾಡದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬೀದಿಗಿಳಿದು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಯಿತು. ಧಾರವಾಡ ಜಿಲ್ಲೆಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಹು-ಧಾ ಮಾಹಾನಗರ ಜಿಲ್ಲಾಧ್ಯಕ್ಷ ಸಂಜಯ ಹಾಗೂ ಮಾಜಿ ಶಾಸಕಿ ಸೀಮಾ ನೇತೃತ್ವದಲ್ಲಿ ಪ್ರತಿಭಟನೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆ ಬೆತ್ತಲೆ ಮಾಡಿ ಹಲ್ಲೆ ಮಾಡಿರುವ ಘಟನೆ ಖಂಡನೀಯವಾಗಿದೆ ಸರ್ಕಾರ ಗ್ಯಾರಂಟಿ ಹೆಸರು ಹೇಳಿಕೊಂಡು ದಿನಗಳ ದೂಡುತ್ತಿದೆ ಹಲವಾರು ಮಹಿಳೆಯರು ಕಾಂಗ್ರೆಸ್ ಗ್ಯಾರಂಟಿ ಮುಟ್ಟಿಲ್ಲವೆಂದು ಹೇಳುತ್ತಿದ್ದಾರೆ ಈ ರಾಜ್ಯ ಸರ್ಕಾರಕ್ಕೆ ಅಧಿಕಾರವೇ ಮುಖ್ಯವಾಗಿದೆ ದಿನ ದಲಿತರ ಹಾಗೂ ಸಾಮನ್ಯ ಜನರ ಸುರಕ್ಷತೆ ಕಾಂಗ್ರೆಸ್ ಸರ್ಕಾರಕ್ಕೆ ಮುಖ್ಯವಾಗಿಲ್ಲ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ವಂಟಮೂರಿ ಘಟನೆಯ ಬಳಿಕ ಹೈ ಕೋರ್ಟ ಪೀಠವು ಕೂಡಾ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಮಧಾನ ಹೊರಹಾಕಿದೆ ಘಟನೆಯ ಕುರಿತು…

Read More

ಬೆಂಗಳೂರು:   ತೆಲಂಗಾಣ ಮಾಜಿ ಕಾರ್ಪೋರೇಟರ್ ಮಗನ ಬಂಧನ ಮಾಡಲಾಗಿದ್ದು  ಸಚಿವ ಜಾರ್ಜ್ ವಿರುದ್ಧ ಪೋಸ್ಟ್ ಮಾಡಿದ್ದ ಆರೋಪಿಯನ್ನ ಬಂಧಿಸಿದ ಸೈಬರ್‌ ಕ್ರೈಂ ಪೊಲೀಸರು. ಬಿಆರ್ ಎಸ್ ಪಾರ್ಟಿಯ ಐಟಿ ಸೆಲ್ ಉದ್ಯೋಗಿಯಾಗಿದ್ದ ರವಿಕಾಂತ ಶರ್ಮಾ ಸಚಿವ ಕೆ.ಜೆ ಜಾರ್ಜ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ತೆಲಂಗಾಣದ ಕರೀಂನಗರ ನಿವಾಸಿ ರವಿಕಾಂತ ಶರ್ಮಾ (33) ಬಂಧಿತ ಆರೋಪಿಯಾಗಿದ್ದು  ತೆಲಂಗಾಣ ವಿಧಾನಸಭೆ ಚುನಾವಣೆ ವೇಳೆ ಪೋಸ್ಟ್ ಮಾಡಲಾಗಿದ್ದು  ಕರ್ನಾಟಕದ ವಿದ್ಯುತ್ ಪರಿಸ್ಥಿತಿ ಮತ್ತು ಗೃಹಜ್ಯೋತಿ ಯೋಜನೆ ಬಗ್ಗೆ ನಕಲಿ ಆಡಿಯೋ ಕ್ಲಿಪ್ ವೊಂದನ್ನ ಕಕೂ ಶೇರ್ ಮಾಡಿ ಪೋಸ್ಟ್.. ಈ ಸಂಬಂಧ ಪೂರ್ವ ವಿಭಾಗದ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿತ್ತು ಪ್ರಕರಣ ಸಂಬಂಧ ಆರೋಪಿ ಬಂಧನ.. ತೆಲಂಗಾಣದ ಬಿಆರ್ ಎಸ್ ಪಕ್ಷದಲ್ಲಿ ಗುರುತಿಸಿಕೊರೋ ಆರೋಪಿಅವರ ತಂದೆ ತಾಯಿ ಕೂಡ ಮಾಜಿ ಕಾರ್ಪೋರೆಟರ್ ಗಳು ಅನ್ನೋದು ಬೆಳಕಿಗೆ ಬಂದಿದೆ. ಸದ್ಯ ಆರೋಪಿಯನ್ನ ಬಂಧಿಸಿ ಹೆಚ್ಚಿನ ತನಿಖೆ ನಡೆಸ್ತಿರೋ ಸೈಬರ್ ಕ್ರೈಮ್…

Read More

ಬೆಂಗಳೂರು : ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರ ಮಗಳ ವಿರುದ್ಧ ಎಫ್ಐಆರ್ ದಾಖಲಾಗಿದ್ದು  ನಕಲಿ ದಾಖಲೆಗಳ ಸೃಷ್ಟಿಸಿದ ಆರೋಪದಲ್ಲಿ ತನಿಖೆಗೆ ಕೋರ್ಟ್ ಆದೇಶ ನೀಡಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶದ ಮೇರೆಗೆ ವಿಲ್ಸನ್ ಗಾರ್ಡನ್ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಹೌದು.. ಕಾರಣವೆನೆಂದರೆ ಕೊರ್ಟ್ ಬದಲಾವಣೆಗಾಗಿ ನಕಲಿ ವಿಳಾಸದ ದಾಖಲೆ ಸೃಷ್ಟಿಸಿದ ಆರೋಪ ಹಾಗೆ  ವಿಚ್ಚೇದನ ಕೋರಿದ್ದ ಅರ್ಜಿಯಲ್ಲಿ ದೀಪಾಲಿ ಲಿಂಗಾಡೆ ನಕಲಿ ದಾಖಲೆ ಸೃಷ್ಟಿ ಮಾಡಲಾಗಿದ್ದು ಹೀಗಾಗಿ  ಪತ್ನಿ ದೀಪಾಲಿ ವಿರುದ್ಧವೇ ಕೋರ್ಟ್ಗೆ ದೂರು ನೀಡಿದ್ದ ಪತಿ ಸಂದೀಪ್ ಲಿಂಗಾಡೆ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದ ಪೊಲೀಸರ ಮೇಲೆಯೂ ಒತ್ತಡ ಹಾಕಲಾಗಿದ್ದು   ಪೊಲೀಸರು ಸಲ್ಲಿಸಿದ್ದ ಬಿ.ರಿಪೋರ್ಟ್ ನಿರಾಕರಿಸಿ ಮರುತನಿಖೆಗೆ ಆದೇಶ ಮಾಡಿದ ಕೋರ್ಟ್  ಹಾಗೆ ಪೊಲೀಸರ ಮೇಲೆ ಒತ್ತಡ ಹಾಕಲಾಗಿದೆ ಎಂದು ಸಂದೀಪ್ ಲಿಂಗಾಡೆ ಆರೋಪ ಮಾಡಿದ್ದಾರೆ. ವಿಚ್ಚೇದನ ಕೋರಿದ್ದ ಅರ್ಜಿಯಲ್ಲಿ ಹೆಚ್ಚು ಜೀವನಾಂಶ ಪಡೆಯಲು ನಕಲಿ ದಾಖಲೆ ಸೃಷ್ಟಿ ಮಾಡಲಾಗಿದ್ದು  ಬಿಸಿನೆಸ್ ಮೆನ್ ಆಗಿರುವ ಸಂದೀಪ್ ಲಿಂಗಾಡೆಯಿಂದ ಜೀವನಾಂಶಕ್ಕಾಗಿ  ದೀಪಾಲಿ  ಷಡ್ಯಂತ್ರ…

Read More

ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ – ಇಳಿಕೆಯಾಗುತ್ತಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಏರಿಕೆ – ಇಳಿಕೆಯ ಆಧಾರದ ಮೇಲೂ ಆಭರಣ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ. ಇಂದು ಬೆಂಗಳೂರಿನಲ್ಲಿ ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ದೇಶದಲ್ಲಿ ಬಂಗಾರದ ದರದಲ್ಲಿ ಹೆಚ್ಚಿದ್ದು, ಆದರೆ ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇನ್ನು ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.. ಒಂದು ಗ್ರಾಂ ಚಿನ್ನ (1GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,770 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,295 ಎಂಟು ಗ್ರಾಂ ಚಿನ್ನ (8GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 46,160 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 50,360 ಹತ್ತು ಗ್ರಾಂ ಚಿನ್ನ…

Read More

ಬೆಂಗಳೂರು:   ಬೊಮ್ಮನಹಳ್ಳಿ ಶಾಸಕ‌‌ ಸತೀಶ್ ರೆಡ್ಡಿಗೆ ಮೊಣಕಾಲಿಗೆ ಶಸ್ತ್ರ ಚಿಕಿತ್ಸೆ ಆಗಿದ್ದು  ಚಾಲೇಂಜಿಂಗ್ ಸ್ಟಾರ್ ದರ್ಶನ್ ಭೇಟಿ ಮಾಡಿ‌ ಆರೋಗ್ಯ ‌ವಿಚಾರಿಸಿದ್ದಾರೆ. ಕೆಲ‌ ತಿಂಗಳುಗಳಿಂದ ಮೊಣಕಾಲು‌ ನೋವಿಂದ ಬಳಲುತ್ತಿದ್ದ ಶಾಸಕ.ಸತೀಶ್ ರೆಡ್ಡಿ ಅವರು  ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ  ಈಗ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದಾರೆ . ಈ ಹಿನ್ನೆಲೆಯಲ್ಲಿ ನಟ ದರ್ಶನ್‌ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಸದ್ಯ  ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸತೀಶ್ ರೆಡ್ಡಿ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.

Read More