Author: AIN Author

ಬೆಳಗಾವಿ:- ಪೊಲೀಸ್ ಇಲಾಖೆಯಲ್ಲಿ ಪತಿ -ಪತ್ನಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಪೊಲೀಸ್ ಇಲಾಖೆಯಲ್ಲಿ ಪತಿ -ಪತ್ನಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ಮಾಡಿ ಕೊಡಲಾಗಿದೆ. ಪೊಲೀಸ್ ಅಧಿಕಾರಿಗಳ ಕನಿಷ್ಠ ವರ್ಗಾವಣೆಯನ್ನು ಎರಡು ವರ್ಷಗಳಿಗೆ ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಅವಯು ಮೊದಲು ಎರಡು ವರ್ಷವಿತ್ತು. 7 ವರ್ಷದ ಹಿಂದೆ ಅದನ್ನು ಒಂದು ವರ್ಷಕ್ಕೆ ಮಾಡಲಾಗಿದೆ. ಪೊಲೀಸ್ ವರ್ಗಾವಣೆ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವುದು ಎಂದು ಸಚಿವರು ಹೇಳಿದರು. ಇದಕ್ಕೂ ಮುನ್ನ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್, ಇನ್ಸ್ಪೆಕ್ಟರ್, ಡಿವೈಎಸ್ಪಿಗಳ ವರ್ಗಾವಣೆಯನ್ನು ಒಂದು ವರ್ಷಕ್ಕೆ ನಿಗದಿ ಪಡಿಸಲಾಗಿದೆ. ಒಂದು ಜಾಗಕ್ಕೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗುವ ಅಧಿಕಾರಿಗಳೇ ಠಾಣೆಯ ಸರಹದ್ದಿನ ಸಮಗ್ರ ಮಾಹಿತಿ ಪಡೆದು, ಕ್ರಿಮಿನಲ್ ಗುಂಡಾಗಳನ್ನೂ…

Read More

ಬೆಳಗಾವಿ:- ಪೊಲೀಸ್ ಇಲಾಖೆಯಲ್ಲಿ ಪತಿ -ಪತ್ನಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಪೊಲೀಸ್ ಇಲಾಖೆಯಲ್ಲಿ ಪತಿ -ಪತ್ನಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ಮಾಡಿ ಕೊಡಲಾಗಿದೆ. ಪೊಲೀಸ್ ಅಧಿಕಾರಿಗಳ ಕನಿಷ್ಠ ವರ್ಗಾವಣೆಯನ್ನು ಎರಡು ವರ್ಷಗಳಿಗೆ ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಅವಯು ಮೊದಲು ಎರಡು ವರ್ಷವಿತ್ತು. 7 ವರ್ಷದ ಹಿಂದೆ ಅದನ್ನು ಒಂದು ವರ್ಷಕ್ಕೆ ಮಾಡಲಾಗಿದೆ. ಪೊಲೀಸ್ ವರ್ಗಾವಣೆ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವುದು ಎಂದು ಸಚಿವರು ಹೇಳಿದರು. ಇದಕ್ಕೂ ಮುನ್ನ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್, ಇನ್ಸ್ಪೆಕ್ಟರ್, ಡಿವೈಎಸ್ಪಿಗಳ ವರ್ಗಾವಣೆಯನ್ನು ಒಂದು ವರ್ಷಕ್ಕೆ ನಿಗದಿ ಪಡಿಸಲಾಗಿದೆ. ಒಂದು ಜಾಗಕ್ಕೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗುವ ಅಧಿಕಾರಿಗಳೇ ಠಾಣೆಯ ಸರಹದ್ದಿನ ಸಮಗ್ರ ಮಾಹಿತಿ ಪಡೆದು, ಕ್ರಿಮಿನಲ್ ಗುಂಡಾಗಳನ್ನೂ…

Read More

ನವದೆಹಲಿ:- ಲೋಕಸಭೆಗೆ ನುಗ್ಗಿದ ಆರೋಪಿಗಳಿಗೂ ಎಸ್ ಕೆಎಂ, ಬಿಕೆಯುಗೂ ಯಾವುದೇ ಸಂಬಂಧ ಇಲ್ಲ ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ. ರೈತರ ಪ್ರತಿಭಟನೆ, ಮಣಿಪುರ ಬಿಕ್ಕಟ್ಟು, ನಿರುದ್ಯೋಗದಂತಹ ಸಮಸ್ಯೆಗಳಿಂದ ಆಕ್ರೋಶಗೊಂಡು ಈ ಕೃತ್ಯ ಎಸಗಿರುವುದಾಗಿ ಬಂಧಿತ ಆರೋಪಿ ಅಮೋಲ್ ಶಿಂಧೆ ಪೊಲೀಸರ ವಿಚಾರಣೆ ವೇಳೆ ಹೇಳಿರುವುದಾಗಿ ಮೂಲವೊಂದು ತಿಳಿಸಿದೆ. ಮತ್ತೋರ್ವ ಆರೋಪಿ ನೀಲಂ ಈ ಹಿಂದೆ ರೈತರ ಪ್ರತಿಭಟನೆ ಸೇರಿದಂತೆ ಹಲವು ಆಂದೋಲನಗಳಲ್ಲಿ ಭಾಗವಹಿಸಿದ್ದರು ಎಂದು ಅವರ ಕುಟುಂಬದ ಸದಸ್ಯರು ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಹಿಂದಿಯಲ್ಲಿ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಟಿಕಾಯತ್ ಅವರು, ‘ಇಂದು ಸಂಸತ್ತಿನಲ್ಲಿ ನಡೆದ ಘಟನೆ ಅತ್ಯಂತ ಖಂಡನೀಯ. ಸಂಯುಕ್ತ ಕಿಸಾನ್ ಮೋರ್ಚಾ ಹೆಸರಿನಲ್ಲಿ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿ ಸಂಪೂರ್ಣ ಆಧಾರ ರಹಿತ. SKM ಅಥವಾ BKU ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

Read More

ನವದೆಹಲಿ:- ಈ ವಾರಾಂತ್ಯದಲ್ಲಿ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಶುಕ್ರವಾರದಿಂದ ಮುಂದಿನ ಸೋಮವಾರದವರೆಗೆ (ಡಿಸೆಂಬರ್‌ 15-18) ತಮಿಳುನಾಡು ಮತ್ತು ಕೇರಳದಾದ್ಯಂತ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ಶನಿವಾರದಿಂದ ಸೋಮವಾರದವರೆಗೆ (ಡಿಸೆಂಬರ್‌ 16-18) ದಕ್ಷಿಣ ತಮಿಳುನಾರು ಮತ್ತು ಭಾನುವಾರ ಮತ್ತು ಸೋಮವಾರದಂದು (ಡಿಸೆಂಬರ್ 17-18) ಕೇರಳದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ (64.5-115.5 ಮಿಮೀ) ಬೀಳುವ ನಿರೀಕ್ಷೆಯಿದೆ ಎಂದು ತಿಳಿಸಿದೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಈ ಎರಡು ರಾಜ್ಯಗಳ ಹಲವೆಡೆ ಯೆಲ್ಲೋ ಅಲರ್ಟ್‌ ಅನ್ನೂ ಘೋಷಣೆ ಮಾಡಲಾಗಿದೆ. ತಮಿಳುನಾಡಿನ ನಾಗಪಟ್ಟಣಂ, ತಂಜಾವೂರು, ತಿರುವಾರೂರ್, ಪುದುಕೋಟೈ, ರಾಮನಾಥಪುರಂ, ತೂತುಕುಡಿ, ತಿರುನಲ್ವೇಲಿ ಮತ್ತು ಕನ್ಯಾಕುಮಾರಿ, ಕೇರಳದ ಎರ್ನಾಕುಲಂ ಸೇರಿದಂತೆ ವಾರಾಂತ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಈಗಾಗಲೇ ತಮಿಳುನಾಡಿನ ಚೈನ್ನೈನಲ್ಲಿ ಸುನಾಮಿಯಂತಹ ಮಳೆಯಾಗಿದ್ದು, ಆದ್ದರಿಂದ ಎಚ್ಚೆತ್ತುಕೊಳ್ಳುವಂತೆ ಮುಂಜಾಗ್ರತಾ…

Read More

ದಾವಣಗೆರೆ:- ಬಿ. ವೈ. ವಿಜಯೇಂದ್ರರ ವಿರುದ್ಧ ಮಾತನಾಡಿದರೆ ಸುಮ್ಮನೆ ಕೂರಲ್ಲ ಎಂದು MP ರೇಣುಕಾಚಾರ್ಯ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರರ ವಿರುದ್ಧ ಇನ್ಮುಂದೆ ಮಾತನಾಡಿದರೆ ಸುಮ್ಮನೆ ಕೂರಲು ಸಾಧ್ಯವಿಲ್ಲ. ನಮಗೂ ತಾಳ್ಮೆಯಿದೆ. ಅದನ್ನು ಪರೀಕ್ಷಿಸಬೇಡಿ ಎಂದು ಯತ್ನಾಳ್‌, ವಿ.ಸೋಮಣ್ಣ ವಿರುದ್ಧ ಎಂ.ಪಿ.ರೇಣುಕಾಚಾರ್ಯ ಅವರು ಗುಡುಗಿದ್ದಾರೆ. ಯತ್ನಾಳ್, ಸೋಮಣ್ಣ ಎಲ್ಲಿಯವರೆಗೂ ಬಿಎಸ್‌ವೈ ಹಾಗೂ ಬಿ.ವೈ.ವಿಜಯೇಂದ್ರ ವಿರುದ್ಧ ಮಾತನಾಡುತ್ತಾರೋ ಅಲ್ಲಿಯವರೆಗೆ ನಾವು ಮಾತನಾಡುತ್ತೇವೆ. ಸಹಿಸಲು ಆಗದು. ನಮಗೂ ತಾಳ್ಮೆಯಿದೆ. ಪ್ರತಿದಿನ ಇಬ್ಬರೂ ಮಾತನಾಡಿದರೆ ಯಡಿಯೂರಪ್ಪರ ತೂಕ ಕಡಿಮೆಯಾಗುತ್ತಾ? ಯಡಿಯೂರಪ್ಪನವರು ನಡೆದ ಹಾದಿಯ ಮಣ್ಣು ತೆಗೆದುಕೊಂಡು ಚಾಮರಾಜನಗರ, ಮೈಸೂರು ಜನರು ಹಣೆಗೆ ಇಟ್ಟುಕೊಳ್ಳುತ್ತಾರೆ. ಅಷ್ಟು ಹೋರಾಟದ ಮೂಲಕ ರಾಜಕಾರಣದಲ್ಲಿ ಮೇಲೆ ಬಂದು ಜನರಿಗಾಗಿ ಜೀವನ ಮುಡುಪಿಟ್ಟ ನಾಯಕ ಎಂದು ಹೇಳಿದರು. ಯತ್ನಾಳ್, ಸೋಮಣ್ಣ ಅವರ ಪಾಪದ ಕೊಡ ತುಂಬಿದೆ. ಅದಕ್ಕೆ ಸದ್ಯದಲ್ಲೇ ಅಂತ್ಯ ಆಗುತ್ತೆ ಎಂಬ ಕಾರಣಕ್ಕೆ ಯಡಿಯೂರಪ್ಪ, ವಿಜಯೇಂದ್ರರನ್ನು ಜರನ ಮುಂದೆ ವಿಲನ್ ಮಾಡಲು…

Read More

ಬೆಳಗಾವಿ:- ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದಿಂದ ಪ್ರತಿಭಟನೆ ನಡೆಸಿದ್ದು, ತಮ್ಮ ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಮದ್ಯಪಾನ ಪ್ರಿಯರ ಬೇಡಿಕೆಗೆ ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಸಚಿವ ಸಂತೋಷ ಲಾಡ್ ಭೇಟಿ ನೀಡಿ, ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದಿಂದ ಪ್ರತಿಭಟನೆ ಮದ್ಯಪಾನ ಪ್ರಿಯರ ಬೇಡಿಕೆ ಕೇಳಿ ಸಚಿವ ಸಂತೋಷ ಲಾಡ್ ಸುಸ್ತೋಸುತ್ತು ಆಗಿದ್ದಾರೆ. ಇನ್ನೂ ಮದ್ಯಪಾನ ಪ್ರಿಯರ ವಿಚಿತ್ರ ಹೋರಾಟ ಕಂಡು ಶಾಕ್ ಆಗಿದ್ದಾರೆ. ಸರ್ಕಾರದ ಪರವಾಗಿ ಪ್ರತಿಭಟನಾಕಾರರ ಮನವಿ ಸ್ವೀಕಾರ ಮಾಡಲು ಬಂದಿದ್ದ ಲಾಡ್ ಮುಂದೆ ರಾಜ್ಯ ಕುಡುಕರಿಗೆ ಆಗುತ್ತಿರುವ ಅನ್ಯಾಯ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. ಅಲ್ಲದೇ ಡಿಸೆಂಬರ್ 31 ರಂದು ಮದ್ಯಪಾನ ಪ್ರಿಯರ ದಿನವನ್ನಾಗಿ ಆಚರಣೆ ಮಾಡಬೇಕು.ಅಂದು ಎಲ್ಲಾ ರೀತಿಯ ಬಾರ್ , ರೆಸ್ಟೋರೆಂಟ್ ನಲ್ಲಿ 50 ರಷ್ಟು ರಿಯಾಯಿತಿ ನೀಡಬೇಕು, ಕುಡುಕ ಎಂಬ ಪದಬಳಕೆ ನಿಷೇಧ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Read More

ಶಿವಮೊಗ್ಗ:- ಪ್ರತಾಪ್​ನಂತಹ ದೇಶಭಕ್ತನನ್ನು ಶಂಕಿಸುವುದು ಕಾಂಗ್ರೆಸ್​ಗೆ ಮಾತ್ರ ಸಾಧ್ಯ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಪ್ರತಾಪ್​ ಸಿಂಹನಂಥ ದೇಶಭಕ್ತ, ಹಿಂದುತ್ವವಾದಿಯನ್ನು ಶಂಕಿಸುವುದು ಕಾಂಗ್ರೆಸ್​ಗೆ ಮಾತ್ರ ಸಾಧ್ಯ ಎಂದು ಕಿಡಿಕಾರಿದ್ದಾರೆ. ಭಾರೀ ಭದ್ರತೆಯ ಹೊರತಾಗಿಯೂ ಕಿಡಿಗೇಡಿಗಳು ಸಂಸತತ್‌ಇನ ಒಳಗೆ ನುಗ್ಗಿದ್ದು ಆಘಾತಕಾರಿ ಮತ್ತು ಮನಸ್ಸಿಗೆ ನೋವನ್ನುಂಟು ಮಾಡುವ ಸಂಗತಿಯಾಗಿದೆ. ಬಂಧಿತ ಆರೋಪಿಗಳಿಗೆ ಸಂಸದ ಪ್ರತಾಪ್​ ಸಿಂಹ ಅವರ ಕಚೇರಿಯಿಂದ ಪಾಸ್​ ಪಡೆದಿರುವ ಬಗ್ಗೆ ಕೇಳಿದಾಗ, ಅಚಾತುರತ್ಯ ನಡೆದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಪ್ರಥಮ ಅಧಿವೇಶನದ ವೇಳೆ ವ್ಯಕ್ತಿಯೊಬ್ಬರು ಶಾಸಕರ ಆಸನದಲ್ಲಿ ಬಂದು ಕುಳಿತಿದ್ದರು ಅದು ಭದ್ರತಾ ಲೋಪವಲ್ಲವೇ ಎಂದು ಪ್ರಶ್ನಿಸಿದ್ದಾರೆ. ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್​ ನಾಯಕರು ತನಿಖೆಗೆ ಆಗ್ರಹಿಸಿದ ಕುರಿತು ಪ್ರತಿಕ್ರಿಯಿಸಿದ ಈಶ್ವರಪ್ಪ ಅವರಿಗೆ ಮಾಡಲು ಬೇರೆ ಉದ್ಯೋಗವಿಲ್ಲ, ಪ್ರತಾಪ್ ಸಿಂಹನಂಥ ದೇಶಭಕ್ತ ಮತ್ತು ಹಿಂದೂತ್ವವಾದಿಯ ಮೇಲೆ ಶಂಕೆ ಪಡೋದು, ಖಂಡಿಸೋದು ಕೇವಲ ಕಾಂಗ್ರೆಸ್ಸಿಗರಿಗೆ ಮಾತ್ರ ಸಾಧ್ಯ ಎಂದರು.

Read More

ಸಿಂಧನೂರು:- ತಾಲೂಕಿನ ತಿಮ್ಮಾಪೂರ ಗ್ರಾಮದ ಪರಿಸರ ಪ್ರೇಮಿ ವೀರಭದ್ರಯ್ಯಸ್ವಾಮಿ ಅವರ ಮಗನ ಮೊದಲನೆಯ ವರ್ಷದ ಹುಟ್ಟು ಹಬ್ಬವನ್ನು ಬಿಲ್ವಪತ್ರೆ ಸಸಿನೆಟ್ಟು 51ಸಸಿಗಳನ್ನು ವಿತರಣೆ ಮಾಡುವ ಮೂಲಕ ವಿಶೇಷವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕರ್ನಾಟಕ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷರಾದ ಅಮರೇಗೌಡ ಮಲ್ಲಾಪುರ ಮಾತನಾಡಿ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ.ನಾವು ಮಾಡುವ ಪರಿಸರ ಸಂರಕ್ಷಣೆಯ ಕೆಲಸ ಇತರರಿಗೆ ಮಾದರಿಯಾಗಬೇಕು ಇವತ್ತು ವನಸಿರಿ ಫೌಂಡೇಶನ್ ಸದಸ್ಯರು,ಪರಿಸರ ಪ್ರೇಮಿಗಳು ಹಾಗೂ ಆತ್ಮೀಯರಾದ ತಿಮ್ಮಾಪೂರ ಗ್ರಾಮದ ವೀರಭದ್ರಯ್ಯಸ್ವಾಮಿ ಅವರು ವನಸಿರಿ ಫೌಂಡೇಶನ್ ಜೊತೆಗೆ ಕೈಜೋಡಿಸುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ತೊಡಗಿದ್ದಾರೆ ಇಂದು ತಮ್ಮ ಮಗುವಿನ ಹುಟ್ಟು ಹಬ್ಬದ ಅಂಗವಾಗಿ 51ಸಸಿಗಳನ್ನು ವಿತರಣೆ ಮಾಡಿ ಸಾರ್ವಜನಿಕರಿಗೆ ಪರಿಸರ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.ಇವರ ಸೇವೆ ಹೀಗೆ ನಿರಂತರವಾಗಿರಲಿ ವನಸಿರಿ ತಂಡದ ಜೊತೆಗೆ ಇನ್ನಷ್ಟು ಹೆಚ್ಚಿನ ರೀತಿಯಲ್ಲಿ ಕಾರ್ಯ ನಿರ್ವಹಿಸಲಿ ಎಂದು ಆಶಿಸಿದರು. ಈ ಸಂದರ್ಬದಲ್ಲಿ ವೇ.ಮೂ ಮರಿಸ್ವಾಮಿ,ವನಸಿರಿ ಫೌಂಡೇಶನ್…

Read More

ಬೆಂಗಳೂರು:- ಸಂಸತ್ ಭದ್ರತಾ ವೈಫಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮನೋರಂಜನ್ ಯಾರು? ಆತನ ಹಿನ್ನೆಲೆ ಏನು ಎಂಬುವ ಪಿನ್ ಟು ಪಿನ್ ಮಾಹಿತಿ ಇಲ್ಲಿದೆ. ಸಂಸತ್ ದಾಳಿ ಬಳಿಕ ಮೈಸೂರಿನ ಮನೋರಂಜನ್ ಹಿನ್ನೆಲೆ ಹುಡುಕಾಟ ಶುರುಮಾಡಿದ ಪೊಲೀಸರು. ಮನೋರಂಜನ್ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣ ದಾಖಲಾಗಿರುವ ಬಗ್ಗೆ ಈವರೆಗೂ ಮಾಹಿತಿ ಸಿಕ್ಕಿಲ್ಲ. ಇನ್ನು ಅವನ ಸೋಷಿಯಲ್ ಮೀಡಿಯಾ ಅಕೌಂಟ್ ಬಗ್ಗೆಯು ಹುಡುಕಾಟ ನಡೆಸಿದ್ದಾರೆ. ಸದ್ಯ ಆತನ ಸೋಷಿಯಲ್ ಮೀಡಿಯಾ ಅಕೌಂಟ್ ಕೂಡ ಈವರೆಗು ಪತ್ತೆಯಾಗಿಲ್ಲ. ಬೇರೆ ಹೆಸರಿನಲ್ಲಿ ಸೋಷಿಯಲ್ ಮೀಡಿಯಾ ಅಕೌಂಟ್ ಇದೆಯಾ ಎಂಬ ಬಗ್ಗೆಯು ಹುಡುಕಾಟ‌ ನಡೆಸಿರುವ ತನಿಖಾಧಿಕಾರಿಗಳು.ಸದ್ಯ ಮೈಸೂರು ಪೊಲೀಸರಿಗೆ ಈತನ ಪೂರ್ವಪರ ವಿಚಾರಿಸಿ ಯಾವುದೇ ದೆಹಲಿ ಪೊಲೀಸರಾಗಲಿ ಯಾರೂ ಕೂಡ ಸಂಪರ್ಕಮಾಡಿಲ್ಲ. ಆದರೂ ಆತನ ಹಿನ್ನೆಲೆ ಬಗ್ಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕ್ರಾಂತಿಕಾರಿ ವಿಚಾರಗಳನ್ನು, ಪುಸ್ತಕಗಳನ್ನು ಓದುತ್ತಿದ್ದರೂ ಒಂದೇ ಒಂದು ಹೋರಾಟದಲ್ಲೂ ಭಾಗಿಯಾಗದ ಮನೋರಂಜನ್ ಹೋರಾಟದಲ್ಲಿ ಭಾಗಿಯಾದ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಆತನ ವಿರುದ್ಧ ಕೇಸ್…

Read More

ಮುಂಬೈ:- ಬಿಹಾರದಲ್ಲಿ 8,700 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲು ಅದಾನಿ ಗ್ರೂಫ್‌ ಯೋಜನೆ ರೂಪಿಸುತ್ತಿದ್ದು, ಈ ಮೂಲಕ ಅಂದಾಜು 10,000 ಉದ್ಯೋಗ ಸೃಷ್ಟಿಯಾಗಲಿದೆ. ಹಾಗೂ ಇದು ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದಂತಾಗಿದೆ. ಈ ಬಗ್ಗೆ ಅದಾನಿ ಎಂಟರ್‌ ಪ್ರೈಸಸ್‌ ನಿರ್ದೇಶಕ ಪ್ರಣವ್‌ ಅದಾನಿ ಮಾಹಿತಿ ನೀಡಿದ್ದಾರೆ. ಬಿಹಾರ ಬ್ಯುಸಿನೆಸ್‌ ಕನೆಕ್ಟ್‌ 2023ರ ಯೋಜನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅದಾನಿ, ನಿತೀಶ್‌ ಕುಮಾರ್‌ ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಬಂಡವಾಳ ಹೂಡಲು ಉದ್ಯಮಿಗಳನ್ನು ಆಹ್ವಾನಿಸಿದ್ದು, ಈ ಮೂಲಕ ಹಿಂದುಳಿದ ರಾಜ್ಯದಲ್ಲಿ ಉದ್ಯೋಗಾವಕಾಶ ಕಲ್ಪಿಸುವ ಭರವಸೆಯನ್ನು ಈಡೇರಿಸಲು ಮುಂದಾಗಿದ್ದಾರೆಂದು ಹೇಳಿದರು. ಬಿಹಾರ ಈಗ ಬಂಡವಾಳ ಹೂಡಿಕೆಯ ಆಕರ್ಷಣೆಯ ಸ್ಥಳವಾಗಿದೆ. ಬಿಹಾರದಲ್ಲಿನ ಬದಲಾವಣೆ ಕಾಣಿಸುತ್ತಿದೆ. ಸಾಮಾಜಿಕ ಬದಲಾವಣೆ, ಕಾನೂನು ಸುವ್ಯವಸ್ಥೆ, ಸಾಕ್ಷರತೆ ಮತ್ತು ಮಹಿಳಾ ಸಬಲೀಕರಣ ಪ್ರಮುಖವಾಗಿದೆ ಎಂದರು ಬಿಹಾರದ ಅಭಿವೃದ್ಧಿ ಪಥದ ನಿತೀಶ್‌ ಕುಮಾರ್‌ ಅವರ ಯೋಜನೆಗೆ ಅದಾನಿ ಗ್ರೂಪ್‌ ಕೈಜೋಡಿಸುತ್ತದೆ. ಈಗಾಗಲೇ ಬಿಹಾರದಲ್ಲಿ ಲಾಜಿಸ್ಟಿಕ್ಸ್‌ ಮತ್ತು ಗ್ಯಾಸ್‌ ವಿತರಣೆ ಸೆಕ್ಟರ್‌ ನಲ್ಲಿ 850…

Read More