Author: AIN Author

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು ಎನ್​ಐಎ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಇತ್ತೀಚೆಗೆ ಅಲಿ ಅಬ್ಬಾಸ್ ಮನೆ ಮೇಲೆ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ದಿನ‌ ವಶಕ್ಕೆ ಪಡೆದು ವಿಚಾರಣೆ ನಡೆಸಿ ಕಳುಹಿಸಲಾಗಿತ್ತು. ಇದಾದ ಬಳಿಕ ದಾಖಲೆಗಳ‌ ಪರಿಶೀಲನೆ ನಡೆಸಿ ಮತ್ತಷ್ಟು ವಿಚಾರಣೆಗಾಗಿ ಮತ್ತೆ ವಶಕ್ಕೆ ಪಡೆದಿದ್ದರು. ಸದ್ಯ ಈಗ ಅಬ್ಬಾಸ್ ಅಲಿಯನ್ನ ಬಂಧಿಸಿ ತೀವ್ರ ವಿಚಾರಣೆ ನಡೆಸ್ತಿದ್ದಾರೆ. ಪುಲಿಕೇಶಿನಗರದ ಮೋರ್ ರಸ್ತೆಯಲ್ಲಿ ವಾಸವಾಗಿದ್ದ ಅಲಿ ಅಬ್ಬಾಸ್ ಪೇಟಿವಾಲ ಎಂಬಾತನ ಮನೆಯ ಮೇಲೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿ ತೀವ್ರ ಶೋಧ ನಡೆಸಿದ್ದರು. ಬಳಿಕ ಮರುದಿನ ಮತ್ತೆ ಅಬ್ಬಾಸ್ ಮನೆಯ ಮೇಲೆ ದಾಳಿ ಮಾಡಿ ಪರಿಶೀಲಿಸಿ 16,42,000 ಹಣ ಸೀಜ್ ಮಾಡಿದ್ದರು. ಮೊಬೈಲ್​, ಲ್ಯಾಪ್​ಟಾಪ್​​​ ಪರಿಶೀಲನೆ ನಡೆಸಿ ಐಸಿಸ್​​ ಶಂಕಿತ ಉಗ್ರ ಅಬ್ಬಾಸ್​ನನ್ನ ವಶಕ್ಕೆ ಪಡೆದಿದ್ದರು. ಬಳಿಕ ವಿಚಾರಣೆ ನಡೆಸಿ ಬಿಟ್ಟು ಕಳಿಸಿದ್ದರು. ನಂತರ ದಾಖಲೆಗಳ ಪರಿಶೀಲನೆ ನಡೆಸಿ ಮತ್ತೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಸದ್ಯ…

Read More

ಬೆಂಗಳೂರು:- ಎಲೆಕ್ಟ್ರಿಕ್ ವಾಹನಗಳ ಮೇಲಿನ ಶೇ 20ರ ತೆರಿಗೆ ಪ್ರಸ್ತಾವವನ್ನು ಕರ್ನಾಟಕ ಸರ್ಕಾರ ಹಿಂಪಡೆದಿದೆ. ಆಡಳಿತಾರೂಢ ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳ ಶಾಸಕರ ಒತ್ತಾಯದ ನಂತರ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬುಧವಾರ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ರೆಡ್ಡಿ ಅವರು ಕರ್ನಾಟಕ ಮೋಟಾರು ವಾಹನಗಳ ತೆರಿಗೆ ಮಸೂದೆಯ ಭಾಗವಾಗಿ ಹೊಸ ಎಲೆಕ್ಟ್ರಿಕ್ ವಾಹನಗಳ ಮೇಲೆ ಶೇಕಡಾ 20 ರಷ್ಟು ಜೀವಿತಾವಧಿ ತೆರಿಗೆಯನ್ನು ಪ್ರಸ್ತಾಪಿಸಿದ್ದರು. 20ರಷ್ಟು ತೆರಿಗೆ ಪ್ರಸ್ತಾವನೆಯನ್ನು ಕೈಬಿಡಲು ಸಚಿವರು ಒಪ್ಪಿಗೆ ಸೂಚಿಸಿದ ಬಳಿಕ ವಿಧೇಯಕವನ್ನು ವಿಧಾನಸಭೆ ಅಂಗೀಕರಿಸಿತು. ಮಸೂದೆಯ ತಿದ್ದುಪಡಿ ಆವೃತ್ತಿಯು ಎಲೆಕ್ಟ್ರಿಕ್ ವಾಹನಗಳ ಮೇಲೆ ಶೇ 10ರ ತೆರಿಗೆಯನ್ನು ಪ್ರಸ್ತಾಪಿಸಿದೆ. ಮಸೂದೆಯ ಪ್ರಕಾರ, 10 ಲಕ್ಷದಿಂದ 15 ಲಕ್ಷ ಮೌಲ್ಯದ ಹಳದಿ ಬೋರ್ಡ್ ಕಾರುಗಳು ಮತ್ತು 1,500-12,000 ಕೆಜಿ ಸಾಮರ್ಥ್ಯದ ಉತ್ತಮ ವಾಹನಗಳ ಮೇಲೆ ಸರ್ಕಾರವು ಜೀವಿತಾವಧಿಯ ತೆರಿಗೆ ವಿಧಿಸುವುದಿಲ್ಲ ಎಂದು ರೆಡ್ಡಿ ತಿಳಿಸಿದ್ದಾರೆ.

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ಆಕ್ಷೇಪಾರ್ಹ ಲೇಖನ ಪ್ರಕಟಿಸಿದ್ದಕ್ಕೆ ಶಿವಸೇನೆ (Shiv Sena) ಉದ್ದವ್‌ ಠಾಕ್ರೆ (Uddhav Thackeray) ಬಣದ ನಾಯಕ ಸಂಜಯ್‌ ರಾವತ್‌ (Sanjay Raut) ವಿರುದ್ಧ ದೇಶದ್ರೋಹದ (Sedition) ಪ್ರಕರಣ ದಾಖಲಾಗಿದೆ. ಪಕ್ಷದ ಮುಖವಾಣಿ ಸಾಮ್ನಾದಲ್ಲಿ (Saamana) ಡಿ.11 ರಂದು ಪ್ರಕಟವಾದ ಲೇಖನ ದೂರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿ ಬಿಜೆಪಿ ಯವತ್ಮಾಲ್ ಸಂಚಾಲಕ ನಿತಿನ್ ಭೂತಾಡ್ ದೂರು ನೀಡಿದ್ದರು. ಉಮರಖೇಡ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದ್ದು, ದೂರಿನ ಪ್ರಕಾರ ನಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ ಮತ್ತು ಅದರ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  https://ainlivenews.com/know-how-to-take-care-of-gums-and-teeth-in-winter-here-are-the-tips/ ರಾವತ್‌ ಅವರು ಮೋದಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಗಾಗ ಸಾಮ್ನಾದಲ್ಲಿ ಟೀಕೆ ಮಾಡುತ್ತಲೇ ಇರುತ್ತಾರೆ. ಆದರೆ ಡಿ.11 ರಂದು ಮಧ್ಯಪ್ರದೇಶ ಫಲಿತಾಂಶಕ್ಕೆ ಸಂಬಂಧಿಸಿದಂತೆ ಲೇಖನ ಪ್ರಕಟವಾಗಿತ್ತು. ತಮ್ಮ ‘ರೋಖ್‌ಥೋಕ್’ ಅಂಕಣದಲ್ಲಿ ತವರು ರಾಜ್ಯವಾದ ಮಧ್ಯಪ್ರದೇಶದಲ್ಲಿ ಶಿವರಾಜ್‌ ಸಿಂಗ್‌ ಅವರನ್ನು ಬಿಜೆಪಿ ಹೈಕಮಾಂಡ್‌…

Read More

ಸ್ವೀಡಿಷ್ ಟೆಲಿಕಾಂ ಉಪಕರಣಗಳ ಉತ್ಪಾದನಾ ಕಂಪನಿ ನೋಕಿಯಾ ಬೆಂಗಳೂರಿನ ತನ್ನ ಜಾಗತಿಕ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದಲ್ಲಿ 6G ಪ್ರಯೋಗಾಲಯವನ್ನು ಸ್ಥಾಪಿಸಿದೆ. ಕೇಂದ್ರ ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್ ಅವರು ಡಿಜಿಟಲ್ ಮಾಧ್ಯಮದ ಮೂಲಕ ಪ್ರಯೋಗಾಲಯವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವೈಷ್ಣವ್, ನೋಕಿಯಾ 6ಜಿ ರಿಸರ್ಚ್ ಲ್ಯಾಬ್ ಬೆಂಗಳೂರಿನಲ್ಲಿ ಉದ್ಘಾಟನೆಗೊಂಡಿದ್ದು, ಭಾರತವನ್ನು ನಾವೀನ್ಯತೆಯ ಕೇಂದ್ರವನ್ನಾಗಿ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಗೆ ಮತ್ತೊಂದು ಹೆಜ್ಜೆಯಾಗಿದೆ. ಈ ಪ್ರಯೋಗಾಲಯದಿಂದ ಹೊರಬರುವ ವಿಷಯಗಳು ಸಾರಿಗೆ ಭದ್ರತೆ, ಆರೋಗ್ಯ ರಕ್ಷಣೆ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಆಸಕ್ತಿದಾಯಕ ಉಪಯೋಗಗಳನ್ನು ಹೊಂದಿರುತ್ತದೆ. ಇದು ಡಿಜಿಟಲ್ ಇಂಡಿಯಾಗೆ ಮತ್ತೊಂದು ಪ್ರಮುಖ ಕೊಡುಗೆಯಾಗಿದೆ ಎಂದರು. ಇದು ಈ ರೀತಿಯ ಮೊದಲ ಯೋಜನೆಯಾಗಿದೆ. ಇದು ಉದ್ಯಮ ಮತ್ತು ಸಮಾಜ ಎರಡರ ಭವಿಷ್ಯದ ಅಗತ್ಯಗಳನ್ನು ಪೂರೈಸುವ 6G ತಂತ್ರಜ್ಞಾನದ ಆಧಾರದ ಮೇಲೆ ಕೋರ್ ತಂತ್ರಜ್ಞಾನಗಳು ಮತ್ತು ನವೀನ ಬಳಕೆಯ ಪ್ರಕರಣಗಳ ಅಭಿವೃದ್ಧಿಯನ್ನು ವೇಗಗೊಳಿಸುವ ಗುರಿಯನ್ನು ಹೊಂದಿದೆ.

Read More

ಮೊಬೈಲ್ ಅಥವಾ ಲ್ಯಾಪ್ಟಾಪ್ನಲ್ಲಿ ವೆಬ್ ಬ್ರೌಸರ್ನಲ್ಲಿ ಸರ್ಚ್ ಮಾಡಿದ್ದು, ನೋಡಿದ್ದು ಯಾವುದು ಸಹ ಹಿಸ್ಟರಿಯಲ್ಲಿ ಉಳಿಯಬಾರದು, ವೆಬ್ ಬ್ರೌಸರ್ ಸೇವೆ ನೀಡುವವರು ಸಹ ಈ ಡಾಟಾವನ್ನು ಬಳಕೆ ಮಾಡಬಾರದು, ಬಳಕೆದಾರರ ಈ ರೀತಿಯ ಯಾವುದೇ ಡಾಟಾವು ಆನ್ಲೈನ್ನಲ್ಲಿ ಯಾರಿಗೂ ಸಿಗಬಾರದು, ಭೇಟಿ ನೀಡಿದ ವೆಬ್ಪೇಜ್ಗಳ ರೆಕಾರ್ಡ್ ಸಂಪೂರ್ಣ ಖಾಸಗಿ ಆಗಿರಬೇಕು, ಯಾರಿಗೂ ಗೊತ್ತಾಗಬಾರದು ಎಂದರೆ ವೆಬ್ ಬ್ರೌಸರ್ನಲ್ಲಿ ಇನ್ಕಾಗ್ನಿಟೊ ಮೋಡ್ ಎಂಬ ಸೆಟ್ಟಿಂಗ್ ಅನ್ನು ಬಳಕೆ ಮಾಡಬೇಕು ಎನ್ನುತ್ತಾರೆ ಹಲವರು. ಹಾಗಿದ್ರೆ ಇದು ಸಂಪೂರ್ಣ ಖಾಸಗಿಯೇ, 100% ಯಾರಿಗೂ ಈ ಡಾಟಾ ಮಾಹಿತಿ ಸಿಗುವುದಿಲ್ಲವೇ ಎಂಬುದು ಹಲವರ ಪ್ರಶ್ನೆ. ಇದಕ್ಕೆ ಉತ್ತರವನ್ನು ಇಂದಿನ ಲೇಖನದಲ್ಲಿ ತಿಳಿಸುತ್ತಿದ್ದೇವೆ ಗೂಗಲ್ನ ಇನ್ಕಾಗ್ನಿಟೊ ಮೋಡ್ ಎಂದರೇನು? ಇದು ಖಂಡಿತ ಸಂಪೂರ್ಣ ಖಾಸಗಿಯೇ? ಗೂಗಲ್ ಪ್ರಕಾರ ಪ್ರಪಂಚದಾದ್ಯಂತ ಹೆಚ್ಚು ಬಳಕೆದಾರರನ್ನು ಹೊಂದಿರುವ ಕ್ರೋಮ್ ಬ್ರೌಸರ್ನಲ್ಲಿನ ‘ಇನ್ಕಾಗ್ನಿಟೊ ಮೋಡ್’ ಬಳಕೆದಾರರಿಗೆ ವೆಬ್ ಟ್ರ್ಯಾಕಿಂಗ್ ಕುಕೀಸ್ಗಳಿಂದ ಸ್ವತಂತ್ರವಾಗಿ ಹಾಗೂ ಇಂಟರ್ನೆಟ್ ಬಳಕೆಯ ಹಿಸ್ಟರಿಯು ಉಳಿಯದಂತೆ ಬಳಸುವ ಫೀಚರ್ ಅನ್ನು ಆಫರ್…

Read More

ಬೆಂಗಳೂರು:-ಕರ್ನಾಟಕದಾದ್ಯಂತ ಮೈಕೊರೆವ ಚಳಿ ಆರಂಭವಾಗಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 17 ರಿಂದ ಎರಡು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ. ಹಾಗೆಯೇ ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಸುಳ್ಯದಲ್ಲಿ ಬುಧವಾರ ಮಳೆಯಾಗಿದೆ, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ವಿಜಯಪುರದಲ್ಲಿ 12.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆಬರುವ ಸಾಧ್ಯತೆ ಕಡಿಮೆ ಇದೆ. ಎಚ್​ಎಎಲ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ…

Read More

ಆಧಾರ್‌ ಕಾರ್ಡ್‌ನಲ್ಲಿ ತಮ್ಮ ವಿವರಗಳನ್ನು ಯಾವುದೇ ಶುಲ್ಕವಿಲ್ಲದೆ ನವೀಕರಿಸಲು ಮತ್ತೊಂದು ಅವಕಾಶವನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಕಾಲಾವಕಾಶವನ್ನು ಮತ್ತೊಮ್ಮೆ ವಿಸ್ತರಿಸಿದೆ. ಹೌದು, ಯುಐಡಿಎಐ ಹೊರಡಿಸಿದ ಪ್ರಕಟಣೆಯಲ್ಲಿ “ಆಧಾರ್‌ ಕಾರ್ಡ್‌ನ ಮಾಹಿತಿಯನ್ನು ಉಚಿತವಾಗಿ ನವೀಕರಿಸಬಹುದಾದ ಸೌಲಭ್ಯವನ್ನು ಇನ್ನೂ 3 ತಿಂಗಳು ವಿಸ್ತರಿಸಲಾಗಿದೆ. ಅಂದರೆ 2024ರ ಮಾರ್ಚ್‌ 14ರವರೆಗೆ ಉಚಿತ ನವೀಕರಣಕ್ಕೆ ಅವಕಾಶವಿದೆ ಎಂದು ತಿಳಿಸಿದೆ. ಈ ಸೇವೆಯು ಹಿಂದಿನಂತೆ ಮೈ ಆಧಾರ್ ಪೋರ್ಟಲ್‌ನಲ್ಲಿ ಮಾತ್ರ ಉಚಿತವಾಗಿದ್ದು, ಆಧಾರ್ ಕೇಂದ್ರಗಳಲ್ಲಿ 50 ರೂ. ಶುಲ್ಕ ಪಾವತಿಸಬೇಕಾಗುತ್ತದೆ. ಹೆಸರು, ವಿಳಾಸ, ಜನ್ಮ ದಿನಾಂಕ, ಲಿಂಗ, ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಮುಂತಾದ ವಿವರಗಳನ್ನು ನವೀಕರಿಸಬಹುದು. 2024ರ ಮಾರ್ಚ್‌ 14ರ ನಂತರ ನೀವು ಶುಲ್ಕ ಪಾವತಿಸಿ ಅಪ್‌ಡೇಟ್‌ ಮಾಡಬೇಕಾಗುತ್ತದೆ ಎಂದು ಯುಐಡಿಎಐ ತಿಳಿಸಿದೆ. ಆಧಾರ್‌ನ ಆಡಳಿತ ಮಂಡಳಿ ಯುಐಡಿಎಐ, ಪ್ರಜೆಗಳು ತಮ್ಮ ಆಧಾರ್ ವಿವರಗಳನ್ನು ಪ್ರತಿ 10 ವರ್ಷಗಳಿಗೊಮ್ಮೆ ನವೀಕರಿಸುವುದನ್ನು ಕಡ್ಡಾಯಗೊಳಿಸಿದೆ. ಮದುವೆ, ವಾಸಸ್ಥಾನ ಬದಲಾವಣೆ ಇತ್ಯಾದಿ ಜೀವನ ಘಟನೆಗಳಿಂದ ವ್ಯಕ್ತಿ ಹೆಸರು ಮತ್ತು ವಿಳಾಸದಂತಹ ಮೂಲಭೂತ…

Read More

ಬೆಂಗಳೂರು:- ಸೈಬರ್ ಬುಲ್ಲಿಂಗ್ ರಾಜಧಾನಿಯ ಮಕ್ಕಳಲ್ಲಿಯೂ ಶುರುವಾಗಿದೆ. ತಂತ್ರಜ್ಞಾನವನ್ನು ಬಳಸಿ ಸೆಲೆಬ್ರಿಟಿಗಳ ಫೋಟೋಗಳನ್ನು ಎಡಿಟ್‌ ಮಾಡಿ ವೈರಲ್‌ ಮಾಡಲಾಗುತ್ತಿದೆ. ಇತ್ತೀಚೆಗಷ್ಟೇ ಡೀಪ್‌ಫೇಕ್ ತಂತ್ರಜ್ಞಾನದಿಂದ ಎಡಿಟ್‌ ಮಾಡಿದ ರಶ್ಮಿಕಾ ಮಂದಣ್ಣ ಅವರ ವಿಡಿಯೋ ಮತ್ತು ಕತ್ರಿನಾ ಅವರ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದವು. ಆದರೆ ಈಗ ಇದೇ ರೀತಿಯ ಕೇಸ್​ಗಳು ಮಕ್ಕಳ ಹಕ್ಕುಗಳ ಸಂಸ್ಥೆಗೆ ಹೆಚ್ಚಾಗಿ ಕೇಳಿ ಬರ್ತಿವೆ. ರಾಜಧಾನಿಯ ಚಾಮರಾಜಪೇಟೆಯ ಖಾಸಗಿ ಶಾಲೆಯ 9ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಜಗಳವಾಡಿ ಕೋಪದಲ್ಲಿ ತನ್ನ ಸ್ನೇಹಿತನ ಫೋಟೋ ಮಾರ್ಪ್ ಮಾಡಿ ಬುಲ್ಲಿಂಗ್ ಮಾಡಿದ್ದ ಎಂಬ ಬಗ್ಗೆ ದೂರು ಕೇಳಿ ಬಂದಿತ್ತು. ಬಳಿಕ ಇತಂಹ ಪ್ರಕರಣಗಳು ಹೆಚ್ಚಾಗುತ್ತಿವೆ. ಮಕ್ಕಳು ಈಗ ಇತಂಹ ಸಾಮಾಜಿಕ ಜಾಲತಾಣಗಳ ಗೀಳಿನಿಂದ ತಂತ್ರಜ್ಞಾನದ ಬಳಕೆಯಿಂದ ಅಡ್ಡ ಹಾದಿ ಹಿಡಿದಿದ್ದಾರೆ. ಇನ್ನು ಕೆಲವು ವಿಧ್ಯಾರ್ಥಿಗಳು ಫೇಸ್ ಬುಕ್, ಇನ್ಸಾಟಾಗ್ರಾಮ್, ಟ್ವೀಟರ್ ಗಳಲ್ಲಿ ವಯೋಮಿತಿ ಸುಳ್ಳು ಮಾಹಿತಿ ನೀಡಿ ಬಳಕೆ ಮಾಡುತ್ತಿದ್ದು ಇಷ್ಟವಾಗದ ಸಹಪಾಠಿಗಳನ್ನ ಅಥವಾ ಜಗಳವಾಡಿದ ಸ್ನೇಹಿತರ ಪೋಟೋಗಳನ್ನ ಕೆಟ್ಟದಾಗಿ ಮಾರ್ಪ್…

Read More

ಗದಗ: ಅಯೋಧ್ಯೆಯ ರಾಮ ಮಂದಿರ (Ayodhya Ram Mandir) ನಿರ್ಮಾಣ ಕಾರ್ಯಕ್ಕೆ ಗದಗ (Gadag) ಜಿಲ್ಲೆಯ ಶಿಲ್ಪಿಯೋರ್ವನಿಗೆ (Sculptor) ಆಹ್ವಾನ ಬಂದಿದೆ. ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ಕೆಲಸ ಮಾಡುತ್ತಿದ್ದ ಶಿಲ್ಪಿ ನಾಗಮೂರ್ತಿಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಅಯೋಧ್ಯೆಗೆ ಬರುವಂತೆ ಆಮಂತ್ರಣ ಬಂದಿದೆ. ನಾಗಮೂರ್ತಿ ಮೂಲತಃ ಕೊಪ್ಪಳ ಜಿಲ್ಲೆ ಕಾತರಕಿ ಗ್ರಾಮದ ನಿವಾಸಿ. ಮುಂಡರಗಿ ಪಟ್ಟಣದಲ್ಲಿ ಶಿಲ್ಪ ಕಲೆಯ ಶಾಪ್ ನಡೆಸುತ್ತಿದ್ದಾರೆ. ಇವರು ಮೈಸೂರು ಜಿಲ್ಲೆ ಹೆಚ್‌ಡಿ ಕೋಟೆಯಲ್ಲಿ ದೊರೆಯುವ (ಕೃಷ್ಣ ಶಿಲೆ) ಕರಿಕಲ್ಲುಗಳನ್ನು ಬಳಸಿ ಮೂರ್ತಿ ತಯಾರಿಸುತ್ತಿದ್ದರು. ಇವರು ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀಗಂಧ ಕಲಾ ಸಂಕಿರಣ ಕಲಾ ವಿದ್ಯಾಲಯ ವ್ಯಾಸಂಗ ಮಾಡಿದ್ದಾರೆ. ಐದಾರು ವರ್ಷಗಳಿಂದ ಶಿಲ್ಪ ಕಲೆಯ ಬಗ್ಗೆ ಮುಂಡರಗಿ ವೆಂಕಟೇಶ್ ಸುತಾರ ಎಂಬವರ ಹತ್ತಿರ ತರಬೇತಿ ಪಡೆದುಕೊಂಡು ಈಗ ತಾವೇ ಶಾಪ್ ಆರಂಭಿಸಿದ್ದಾರೆ. https://ainlivenews.com/see-how-hot-and-hot-this-cold-can-be/ ಇವರ ಅದ್ಭುತ ಕಲಾ ಮೂರ್ತಿಗಳ ತಯಾರಿಕೆ ಗಮನಿಸಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಅಯೋಧ್ಯೆಗೆ ಆಹ್ವಾನಿಸಲಾಗಿದೆ. ಸ್ಥಳೀಯರು ನಾಗಮೂರ್ತಿಯವರನ್ನು…

Read More

ಬೆಂಗಳೂರು:- ನಿರುದ್ಯೋಗಿಗಳೇ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದಲ್ಲಿ 2.55 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆಯಲ್ಲೇ ಹೆಚ್ಚು ಹುದ್ದೆ ಖಾಲಿ ಇರುವುದು ತಿಳಿದು ಬಂದಿದೆ. ಖಾಲಿ ಇರುವ ಹುದ್ದೆಗಳ ಪೈಕಿ 75,000 ಕ್ಕೂ ಹೆಚ್ಚು ಶಿಕ್ಷಣ ಇಲಾಖೆಯಲ್ಲಿ 35,196 ಆರೋಗ್ಯ ಇಲಾಖೆಯಲ್ಲಿ ಮತ್ತು 22,069 ಗೃಹ ಇಲಾಖೆಯಲ್ಲಿ ಇವೆ. ಇದರಲ್ಲಿ ಶಿಕ್ಷಕರು, ಆರೋಗ್ಯ ಕಾರ್ಯಕರ್ತರು ಮತ್ತು ಪೊಲೀಸ್ ಕಾನ್ಸ್‌ಟೇಬಲ್‌ಗಳ ಹುದ್ದೆಗಳು ಸೇರಿವೆ. ಇದಲ್ಲದೇ ಕಂದಾಯ, ಆರ್‌ಡಿಪಿಆರ್‌, ಪಶುಸಂಗೋಪನೆ, ಹಣಕಾಸು ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳಲ್ಲಿ ತಲಾ ಸುಮಾರು 10 ಸಾವಿರ ಹುದ್ದೆಗಳು ಖಾಲಿ ಇವೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ತಿಳಿಸಿದೆ. ಮುಂದಿನ ಕೆಲವು ವರ್ಷಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಕಾಂಗ್ರೆಸ್ ಸರ್ಕಾರ ತಿಳಿಸಿರುವುದಾಗಿ ಉನ್ನತ ಮೂಲಗಳು ಹೇಳಿವೆ. 2.55 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು ಸವಾಲಿನ ಸಂಗತಿಯಾಗಿದೆ. ವೇತನ ಆಯೋಗದ ಶಿಫಾರಸುಗಳನ್ನು ಅನುಷ್ಠಾನಗೊಳಿಸುವುದು ಸವಾಲಿನದ್ದಾಗಿದೆ.…

Read More