Author: AIN Author

ಚಿಕ್ಕಬಳ್ಳಾಪುರ : ಜಿಲ್ಲೆಯ  ಚೇಳೂರು ತಾಲ್ಲೂಕಿನ ಚಾಕವೇಲು ಗ್ರಾಮದ ಮುಖ್ಯರಸ್ತೆ ವೃತ್ತದಲ್ಲಿ ಕೆಟ್ಟು ನಿಂತಿರುವ ಹೈಮಾಸ್ಕ್ ಲೈಟ್ ರಿಪೇರಿ ಮಾಡಲು ಹೋಗಿದ್ದ ಕಾರ್ಮಿಕ 240  ವೋಲ್ಟ್ ವಿದ್ಯುತ್ ತಂತಿ ಮೇಲೆ ಪ್ರಜ್ಞೆ ತಪ್ಪಿ ಬಿದ್ದು ಗಾಯಗೊಂಡ ಘಟನೆ  ನಡೆದಿದೆ. ಚಾಕವೇಲು ಗ್ರಾಮ ಪಂಚಾಯತಿ ವತಿಯಿಂದ ವಿದ್ಯುತ್ ಬಲ್ಫ್ ಗಳು ರಿಪೇರಿ ಮಾಡಲು ಗುತ್ತಿಗೆದಾರರಾದ ಶಮೀರ್ ಗೆ ಗುತ್ತಿಗೆ ನೀಡಿದ್ದು, ಗುತ್ತಿಗೆ ದಾರರು ಹೈಮಾಸ್ಕ್ ಲೇಟ್ ರಿಪೇರಿ ಮಾಡಿದ ನಂತರ ವಿದ್ಯುತ್ ಸಂಪರ್ಕವನ್ನು ಮಾಡಲು ಚಾಕವೇಲು ಗ್ರಾಮದ ಉಮಾಶಂಕರ್ ನನ್ನು ಬಳಸಿಕೊಂಡು ವಿದ್ಯುತ್ ಕಂಬವನ್ನು ಹತ್ತಿ ತಂತಿ ಸಂಪರ್ಕ ನೀಡಲು ಸೂಚಿಸಿದ್ದು,ಉಮಾಶಂಕರ್ ತಂತಿ ಸಂಪರ್ಕ ಕೊಡಲು ಹೋಗಿ ಗ್ರಾಮದಲ್ಲಿ ಹಾದುಹೋಗಿರುವ 240 ವೋಲ್ಟ್ ತಂತಿಯನ್ನು ಮುಟ್ಟಿ ಪ್ರಜ್ಞೆ ತಪ್ಪಿ ತಂತಿ ಮೇಲೆ ನೇತಾಡುತ್ತಿರುವುದನ್ನು ಗ್ರಾಮಸ್ಥರು ನೋಡಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿ ತಕ್ಷಣ ಚಾಕವೇಲು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ನಂತರ ಬಾಗೇಪಲ್ಲಿ ಆಸ್ಪತ್ರೆಗೆ ಕರೆದೋಯ್ಯಲಾಗಿ ಆಸ್ಪತ್ರೆಯಲ್ಲಿ, https://ainlivenews.com/know-how-to-take-care-of-gums-and-teeth-in-winter-here-are-the-tips/ ಚಿಕಿತ್ಸೆ ಪಡೆದು ಪ್ರಾಣಕ್ಕೆ…

Read More

ಬೆಂಗಳೂರು: ಟಿಕೆಟ್ ಪಡೆಯದೆ ಪ್ರಯಾಣ ಮಾಡ್ತಿದ್ದವರಿಗೆ BMTC ಶಾಕ್ ನೀಡಿದೆ. ಮಹಿಳೆಯರಿಗೆ ಮೀಸಲಾದ ಸೀಟ್ ನಲ್ಲಿ ಕೂತು ಪ್ರಯಾಣಿಸುವವರಿಗೂ ದಂಡ ವಿಧಿಸಿದ ಬಿಎಂಟಿಸಿ ನವೆಂಬರ್ ನಲ್ಲಿ ಟಿಕೆಟ್ ರಹಿತ ಪ್ರಯಾಣಿಕರಿಗೆ ವಿಧಿಸಿದ ದಂಡದಿಂದ BMTC ಬೊಕ್ಕಸಕ್ಕೆ ಬಿತ್ತು 6,68,610 ರೂ ಮಹಿಳಾ ಪ್ರಯಾಣಿಕರಲ್ಲಿ ಮೀಸಲಿರಿಸಿದ್ದ ಸೀಟ್ ನಲ್ಲಿ ಪ್ರಯಾಣಿಸಿದ್ದ 438 ಪುರುಷರಿಗೂ ದಂಡ* 16,421ಟ್ರಿಪ್ ಗಳಲ್ಲಿ ತಪಾಸಣೆ ಮಾಡಿದ್ದ ಚೆಕ್ಕಿಂಗ್ ಇನ್ಸ್ಪೆಕ್ಟರ್ ಗಳು ಈ ವೇಳೆ 3,329ಮಂದಿ ಟಿಕೆಟ್ ರಹಿತ ಪ್ರಯಾಣ ಪತ್ತೆ ಇದೇ ವೇಳೆ ಬೇಜವಾಬ್ದಾರಿ 1,062 ನಿರ್ವಾಹಕರ ವಿರುದ್ಧವೂ ನಿಗಮ ದಂಡಾಸ್ತ್ರ ಪ್ರಯೋಗ ಮಹಿಳಾ‌ ಸೀಟ್ ನಲ್ಲಿ ಕುಳಿತ ಪ್ರಯಾಣಿಕರಿಂದ 43800ರೂ ದಂಡ ವಸೂಲಿ ಮೋಟಾರು ವಾಹನ ಕಾಯ್ದೆ 1988ರ ಕಾಲಂ 177&94 ರ ಅನ್ವಯದಂತೆ ದಂಡ ನವೆಂಬರ್ ತಿಂಗಳಲ್ಲಿ ಬಿಎಂಟಿಸಿ ಬೊಕ್ಕಸಕ್ಕೆ ಬಿತ್ತು 7,12,410 ರೂ

Read More

ಉಡುಪಿ: ಹೆಸರಾಂತ ಸಮಾಜ ಸೇವಕ, ಕಾಪು ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ ಲೀಲಾಧರ ಶೆಟ್ಟಿ (68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ(58) ಜೊತೆಯಾಗಿ ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ನಿನ್ನೆ ರಾತ್ರಿ ನಡೆದಿದೆ. ಲೀಲಾಧರ ಶೆಟ್ಟಿ ಮತ್ತು ವಸುಂಧರಾ ಶೆಟ್ಟಿ ದಂಪತಿ ಮಂಗಳವಾರ ಮಧ್ಯರಾತ್ರಿ 11.20 ರಿಂದ 12.30 ರ ನಡುವಿನ‌ ಅವಧಿಯಲ್ಲಿ ತಮ್ಮ ಮನೆಯ ಪಕ್ಕಾಸಿಗೆ‌ ಒಂದೇ ಸೀರೆಯನ್ನು ಬಿಗಿದು, ಅದರ ಎರಡೂ ತುದಿಗೆ ನೇಣು ಹಾಕಿಕೊಂಡು ಸಾವಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಸರಳ ಸಜ್ಜನ ವ್ಯಕ್ತಿಯಾಗಿದ್ದ ಲೀಲಾಧರ ಶೆಟ್ಟಿ ಅವರು ಒಂದು ಬಾರಿ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಅತ್ಯುತ್ತಮ ನಾಟಕ ತಂಡ ಹೊಂದಿದ್ದರು. ಕಾಪು ರಂಗತರಂಗ ತಂಡದ ಯಜಮಾನ ಆಗಿ ಭಾರೀ ಜನಪ್ರಿಯತೆ ಪಡೆದಿದ್ದರು. ಅಶಕ್ತರ ನೆರವಿಗೆ ಧಾವಿಸುವ ಅವರು ಯಾವಾಗಲೂ ಸಮಾಜದ ಪರವಾಗಿ ಕಾಳಜಿ ಹೊಂದಿದ್ದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಆತ್ಯಂತ ಆಪ್ತರಾಗಿದ್ದ ಅವರು ಕಾಪು ಬಂಟರ ಸಂಘದ ಮಾಜಿ…

Read More

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ಮತ್ತೊಮ್ಮೆ ಮುಂದೂಡಿದೆ. ಡಿಸೆಂಬರ್‌ 31ರಂದು ನಿಗದಿಯಾಗಿದ್ದ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಿ, 2024ರ ಜನವರಿ 13ಕ್ಕೆ ಮುಂದೂಡಿದೆ. ಜತೆಗೆ ಕೆಲವು ಪರೀಕ್ಷೆ ಕೇಂದ್ರಗಳನ್ನೂ ಬದಲಾವಣೆ ಮಾಡಲಾಗಿದೆ. ಈ ವಿಷಯವನ್ನು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ ಇದಲ್ಲದೆ, ಕಲ್ಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳನ್ನು ತಮ್ಮ ಪರೀಕ್ಷಾ ಕೇಂದ್ರಗಳಾಗಿ ಆಯ್ಕೆ‌ ಮಾಡಿಕೊಂಡಿದ್ದ ಅಭ್ಯರ್ಥಿಗಳು ಕ್ರಮವಾಗಿ ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬೇಕಾಗುತ್ತದೆ. ಧಾರವಾಡ ಜಿಲ್ಲಾ‌ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚುವರಿಯಾಗಿ ಹಾವೇರಿ ಮತ್ತು ಮೈಸೂರು ಜಿಲ್ಲಾ ಕೇಂದ್ರಗಳಿಗೆ ಮಂಡ್ಯ ಪರೀಕ್ಷಾ ಕೇಂದ್ರಗಳನ್ನು ಸೇರಿಸಲಾಗಿದೆ. ಇವು ಬಿಟ್ಟು ಉಳಿದ ಜಿಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ ಎಂದು ಅವರು ವಿವರಿಸಿದ್ದಾರೆ. ಪರೀಕ್ಷೆ ಕೇಂದ್ರ ಬದಲು ಕೆಸೆಟ್‌-2023ಕ್ಕೆ ಆನ್‌ಲೈನ್‌ನಲ್ಲಿ ರಿಜಿಸ್ಟ್ರೇಷನ್‌ ಪಡೆಯುವ ವೇಳೆ ಕಲಬುರಗಿ ಆಯ್ಕೆ ಮಾಡಿಕೊಂಡಿದ್ದವರು ಬೆಂಗಳೂರಿನಲ್ಲಿ ಪರೀಕ್ಷೆ ಬರೆಯಬೇಕು. ವಿಜಯಪುರದ…

Read More

ಮೈಸೂರು/ನವದೆಹಲಿ: ಕಲಾಪ ನಡೆಯುತ್ತಿದ್ದ ಹೊತ್ತಿನಲ್ಲೇ ಪಾರ್ಲಿಮೆಂಟ್ ಒಳಗೆ ಕಲರ್ ಸ್ಮೋಕ್ ಸಿಡಿಸಿದ ಯುವಕರಿಗೆ ಪ್ರತಾಪ್ ಸಿಂಹ  ಕಚೇರಿಯಿಂದಲೇ ಪಾಸ್ ವಿತರಣೆಯಾಗಿದೆ ಎಂಬ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಸಂಸದ ಪ್ರತಾಪ್ ಸಿಂಹ  ಪ್ರತಿಕ್ರಿಯೆ ನೀಡಿದ್ದಾರೆ. ಕಲಾಪ ವೀಕ್ಷಿಸುತ್ತೇವೆ ಎಂದು ಹೇಳಿ ಯುವಕರು ಪಾಸ್ ಪಡೆದುಕೊಂಡು ಹೋಗಿದ್ದರು ಎಂದು ಅವರು ತಿಳಿಸಿದ್ದಾರೆ. ಮೈಸೂರು (Mysuru) ಮೂಲದ ಮನೋರಂಜನ್ ಹಾಗೂ ಸಾಗರ್‌ ಶರ್ಮಾ ಎಂಬ ಯುವಕರು ಕಲಾಪದ ವೇಳೆ ನುಗ್ಗಿರುವುದು ಎಂದು ತಿಳಿದು ಬಂದಿದೆ. ಇಬ್ಬರನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಲೋಕಸಭಾ ವೀಕ್ಷಕರ ಗ್ಯಾಲರಿಯಿಂದ ಇಬ್ಬರು ವ್ಯಕ್ತಿಗಳು ಮೇಲಿನಿಂದ ಜಿಗಿದಿದ್ದಾರೆ. ಕೂಡಲೇ ಭದ್ರತಾ ಸಿಬ್ಬಂದಿ ಇಬ್ಬರನ್ನು ಹಿಡಿದಿದ್ದಾರೆ. ಸಂಸತ್ ಮೇಲೆ ದಾಳಿ ನಡೆದು 22 ವರ್ಷವಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಹುತಾತ್ಮ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಲಾಗಿತ್ತು. https://ainlivenews.com/massive-security-failure-unidentified-man-breaks-into-new-parliament-house/ ಈಗ ಬಂದಿರುವ ಮಾಹಿತಿ ಪ್ರಕಾರ ಒಟ್ಟು ಎರಡು ಘಟನೆ ನಡೆದಿದೆ. ಇಬ್ಬರು ವ್ಯಕ್ತಿಗಳು ಲೋಕಸಭೆ ಗ್ಯಾಲರಿಯಿಂದ ಜಿಗಿದು ಕಲರ್ ಬಾಂಬ್ ಸಿಡಿಸಿದರೆ, ಇಬ್ಬರು…

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಳ್ಳಹಿಡಿಯುತ್ತಿದ್ಯಾ ಎಂಬ ಅನುಮಾನ ಶುರುವಾಗಿದೆ. ಬೆಂಗಳೂರು, ಹಾಸನ, ರಾಯಚೂರು, ಮಂಡ್ಯ, ಕೋಲಾರ ಜಿಲ್ಲೆಯಲ್ಲಿ ಕೆಲವು ಮಹಿಳೆಯರಿಗೆ (Women) ಮೊದಲ ತಿಂಗಳ ಹಣ ಮಾತ್ರ ಬಂದಿದ್ದರೆ, ಕೆಲವರಿಗೆ ಮೂರು ತಿಂಗಳ ಹಣ ಬಂದಿದೆ. ಆದರೆ ಕಡು ಬಡವರು, ಬೀದಿ ಬದಿ ವ್ಯಾಪಾರಿಗಳಿಗೆ ಒಂದು ತಿಂಗಳ ಹಣವೂ ಬಂದಿಲ್ಲ ಅಧಿಕಾರಿಗಳನ್ನು ಪ್ರಶ್ನಿಸಿದರೆ ಆಧಾರ್ ಕಾರ್ಡ್ ನಂಬರ್, ಫೋನ್ ನಂಬರ್ ಸರಿಯಲ್ಲ ಎನ್ನುತ್ತಾರೆ. ಎಲ್ಲವನ್ನು ಸರಿಪಡಿಸಿದರೂ ಸಹ ಹಣ ಬಂದಿಲ್ಲ ಎಂದು ಸರ್ಕಾರದ ವಿರುದ್ದ ಮಹಿಳೆಯರು ಕಿಡಿಕಾರಿದ್ದಾರೆ.ಬ್ಯಾಂಕ್ ಹಾಗೂ ಕಂಪ್ಯೂಟರ್ ಸೆಂಟರ್‌ಗಳಲ್ಲಿ ಗ್ಯಾರೆಂಟಿ ಯೋಜನೆ ಹಣದ ಬಗ್ಗೆ ವಿಚಾರಿಸಿ ನಿರಾಶರಾಗಿದ್ದೇವೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ

Read More

ಬೆಂಗಳೂರು : ದುನಿಯಾ ದಿನೇ ದಿನೇ ಸಿಕ್ಕಾಪಟ್ಟೆ ಕಾಸ್ಟ್ಲಿ ಆಗಿದೆ. ಜನ ಸಾಮಾನ್ಯರುಂತೂ ಬದುಕೋಕೆ ಆಗ್ತಿಲ್ಲ. ಏಪ್ರಿಲ್ ಮೇ, ತಿಂಗಳು ಬಂದ್ರೆ ಕರೆಂಟ್ ಬಿಲ್ ಏರಿಕೆ ಆಗೇ ಬಿಡುತ್ತೆ. ಆದ್ರೀಗ ಕರೆಂಟ್ ಬಿಲ್ ನಂತೆ ಆಟೋ ಪ್ರಯಾಣ ದರವೂ ವರ್ಷಕ್ಕೊಮ್ಮೆ ಏರಿಸುವಂತೆ ಆಟೋ ಚಾಲಕರು ಮಾಲೀಕರು ಸರ್ಕಾರದ ಕದ ತಟ್ಟಿದ್ದಾರೆ. ಹಾಗಾದ್ರೆ ನಗರದಲ್ಲಿ ಇನ್ಮೇಲೆ ಆಟೋ ಪ್ರಯಾಣ ದುಬಾರಿಯಾಗುತ್ತಾ ಬನ್ನಿ ತೋರಿಸ್ತೀವಿ ಬೆಂಗಳೂರು ಜನರಿಗೆ ಒಂದಲ್ಲ ಒಂದು ಶಾಕ್ ಕಾಡ್ತಾನೆ ಇದೆ. ಶ್ರೀ ಸಾಮಾನ್ಯರು ಮಧ್ಯಮ ವರ್ಗದ ಜನರಿಗಂತೂ ಈ ದುನಿಯಾದಲ್ಲಿ ಜೀವನ ಮಾಡೋಕೆ ಆಗ್ತಿಲ್ಲ. ಎಲ್ಲಾವೂ ತುಂಬನೇ ಕಾಸ್ಟ್ಲಿ . ಸರ್ಕಾರಿ ಇಲಾಖೆಗಳು ಅಂತೂ ನಷ್ಟದ ನೆಪವೊಡ್ಡಿ ಕರೆಂಟ್ ದರ ನಂದಿನಿ ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನ ಏರಿಕೆ ಮಾಡ್ತಾನೆ ಬಂದಿದೆ.ಆದ್ರೆ ಈಗ ಸರ್ಕಾರಿ ಇಲಾಖೆಗಳಂತೆ ನಮಗೂ ಪ್ರತಿ ವರ್ಷ ಆಟೋ ಪ್ರಯಾಣದ ಏರಿಸಿ ಅಂತ ಆಟೋ ಚಾಲಕರು ಪಟ್ಟು ಹಿಡಿದಿದ್ದಾರೆ. ಹೌದು.. ಒಂದು ಕಡೆ ಪೆಟ್ರೋಲ್ ರೇಟ್…

Read More

ಬೆಂಗಳೂರು: ಮೆಟ್ರೋ ರೈಲು, ಕ್ಯಾಬ್, ಬಸ್ ಗಳು ಸೇರಿದಂತೆ ವಿವಿಧ ಮಾದರಿಯ ಸಂಚಾರ ವ್ಯವಸ್ಥೆಗಳಿಗೆ ದೇಶಾದ್ಯಂತ ಒಬ್ಬ ಪ್ರಯಾಣಿಕರಿಗೆ ಒಂದು ಸ್ಮಾರ್ಟ್ ಕಾರ್ಡ್ ಸೌಲಭ್ಯ ಕೇಂದ್ರದಿಂದ ಶೀಘ್ರವೇ ಜಾರಿಯಾಗಲಿದೆ. ನಿಲ್ದಾಣಗಳಲ್ಲಿ ಇ-ವಾಹನ ಚಾರ್ಜಿಂಗ್‌ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಹೇಳಿದರು. ಇತ್ತೀಚೆಗೆ ಬೆಂಗಳೂರು ಟೆಕ್ ಸಮ್ಮಿಟ್ʼನ ಎರಡನೇ ದಿನ ಭವಿಷ್ಯದ ಸಂಚಾರಕ್ಕಾಗಿ ಸಮನ್ವಯದ, ಸ್ವಾಯತ್ತ, ಹಂಚಿಕೆಯ ಮತ್ತು ಎಲೆಕ್ಟ್ರಿಕ್ ವ್ಯವಸ್ಥೆʼ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಇನ್ನು 6 ತಿಂಗಳಲ್ಲಿ ವಿವಿಧ ಮಹಾನಗರಗಳಲ್ಲಿ ಜಾರಿಗೊಳ್ಳಲಿದೆ ಎಂದರು. ಪರಿಸರಸ್ನೇಹಿ ಸಂಚಾರ ವ್ಯವಸ್ಥೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬೆಂಗಳೂರಿನ ಮೆಟ್ರೋ ರೈಲು ನಿಲ್ದಾಣಗಳಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

Read More

ಬೆಂಗಳೂರು: ಶಾಲಾ ಮಕ್ಕಳಿಗೆ ಸಿಹಿಸುದ್ದಿಯನ್ನು ನೀಡಲು ಮುಂದಾಗಿದ್ದು, ಮುಂದಿನ ವರ್ಷದಿಂದಲೇ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆಗೆ ಅವರು ಉತ್ತರಿಸಿದರು. ಶಾಲಾ ಮಕ್ಕಳಿಗೆ ಯಾಕೆ ಸೈಕಲ್ ಕೊಡ್ತಿಲ್ಲ? ಬಿಜೆಪಿ‌ ಸರ್ಕಾರ ಸೈಕಲ್ ನಿಲ್ಲಿಸಿತ್ತು ಒಪ್ಪುತ್ತೇನೆ? ಅದಕ್ಕೆ ಜನ ನಮ್ಮನ್ನ ಇಲ್ಲಿಗೆ ಕೂರಿಸಿದ್ದಾರೆ. ಆದರೇ, ಈ ಸರ್ಕಾರಕ್ಕೆ ಸೈಕಲ್ ಕೊಡಲು ಹಣದ ಕೊರತೆ ಇದೆಯಾ? ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, 2023-24ನೇ ಸಾಲಿನಲ್ಲಿ 55,43,828 ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ನೀಡಲಾಗಿದೆ. 45,45,749 ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ, ಸಾಕ್ಸ್ ವಿತರಿಸಲಾಗಿದೆ. ವಿದ್ಯಾರ್ಥಿಗಳಿಗೆ ಸೈಕಲ್ ಹಿಂದಿನ ಸರ್ಕಾರ ಕೊಡೋದು ನಿಲ್ಲಿಸಿದೆ. ನಾನು ಈಗಾಗಲೇ ಸಿಎಂ ಜೊತೆಗೆ ಮಾತಾಡಿದ್ದೇನೆ. ಮುಂದಿನ ವರ್ಷದಿಂದಲೇ 8ನೇ ತರಗತಿ ಮಕ್ಕಳಿಗೆ ಸೈಕಲ್ ಕೊಡುವ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ಕೊಟ್ಟರು.

Read More

ಬೆಂಗಳೂರು: ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಪ್ರಕರಣವು ಇತ್ತೀಚೆಗೆ ಬೆಳಗಾವಿಯ ವೆಂಟಮೂರಿ ಗ್ರಾಮದಲ್ಲಿ ನಡೆದಿತ್ತು. ಸಂತ್ರಸ್ತೆಯ ಗುರುತು ಪತ್ತೆಯಾಗುವಂತೆ ವರದಿ ಮಾಡಿದ ಮಾಧ್ಯಮಗಳ ಕ್ರಮಕ್ಕೆ ರಾಜ್ಯ ಹೈಕೋರ್ಟ್​ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಸಂತ್ರಸ್ತೆಯ ವಿಡಿಯೋ ಅಥವಾ ಫೋಟೋ ಪ್ರಸಾರ ಮಾಡದಂತೆ ಮಂಗಳವಾರ ಆದೇಶಿಸಿದೆ. ಮಹಿಳೆಯೊಬ್ಬರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ ಬಗ್ಗೆ ಮಾಧ್ಯಮಗಳ ವರದಿಗಳನ್ನು ಗಮನಿಸಿದ ಹೈಕೋರ್ಟ್, ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ ಮತ್ತು ಘಟನೆಗೆ ಸಂಬಂಧಿಸಿದ ಯಾವುದೇ ವೀಡಿಯೊಗಳನ್ನು ಪ್ರಸಾರ ಮಾಡದಂತೆ ಎಲ್ಲಾ ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಆದೇಶಿಸಿದೆ. ಘಟನೆಯ ಸ್ಥಿತಿಗತಿ ವರದಿಯನ್ನು ಡಿಸೆಂಬರ್ 14 ರಂದು ಸಲ್ಲಿಸುವಂತೆ ಅಡ್ವೊಕೇಟ್ ಜನರಲ್ ಅವರಿಗೆ ಹೈಕೋರ್ಟ್ ಸೂಚಿಸಿದೆ. ಗೃಹ ಸಚಿವರು ಸಂತ್ರಸ್ತೆಯನ್ನು ಭೇಟಿಯಾದ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಪ್ರಕಟವಾದ ಫೋಟೋದಲ್ಲಿ ಸಂತ್ರಸ್ತೆಯ ಗುರುತು ಸಿಗುವಂತೆ ಇದೆ. ಇದು ಮಾಧ್ಯಮದವರ ಅತ್ಯಂತ ಬೇಜವಾಬ್ದಾರಿ ಮತ್ತು ಸಂವೇದನಾರಹಿತವರ್ತನೆ ಹೈಕೋರ್ಟ್ ಕಿಡಿ ಕಾರಿದೆ. ವಿದ್ಯುನ್ಮಾನ ಮಾಧ್ಯಮದಲ್ಲಿ ಈಗಾಗಲೇ ಅಂತಹ ಸಂದರ್ಶನವನ್ನು ಪ್ರದರ್ಶಿಸಿದರೆ ಅಥವಾ…

Read More