Author: AIN Author

ಬೆಂಗಳೂರು: ಪೋಷಕರೇ, ರಾಜಧಾನಿಯ ಬೀದಿಯಲ್ಲಿ ನಿಮ್ಮ ಮಕ್ಕಳನ್ನು ಆಡಲು ಬಿಡುವವರು ನೀವಾದರೆ ಕಟ್ಟೆಚ್ಚರ ವಹಿಸಿ. ಯಾಕೆಂದ್ರೆ ರಸ್ತೆಯಲ್ಲಿ ಬರೋರನ್ನ ಹರಿದು ಮುಕ್ಕೋಕೆ ಬೀದಿನಾಯಿಗಳು ಕಾಯ್ತಾ ಇರರ್ತವೆ. ಹೌದು ರಾಜಧಾನಿಯಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ದಿನಕ್ಕೆ ಸರಾಸರಿ 60 ರಿಂದ 70 ಮಂದಿ ಮೇಲೆ ಅಟ್ಯಾಕ್ ಮಾಡುತ್ತಿವೆ ಅಂತೆ ಪಾಲಿಕೆಯೇ ರಿಪೋರ್ಟ್ ಬಿಡುಗಡೆ ಮಾಡಿದೆ.ಇವರಲ್ಲೂ ಮಕ್ಕಳೇ ಅಧಿಕವಾಗಿರೋದು ಆತಂಕ ಹುಟ್ಟಿಸಿದೆ. ಹಾಗಾದ್ರೆ ಕಳೆದ ಕೆಲ ವರ್ಷಗಳಲ್ಲಿ ನಗರದಲ್ಲಿ ನಾಯಿಗಳಿಂದ ಅಟ್ಯಾಕ್ ಆದವರ ಸಂಖ್ಯೆ ಎಷ್ಟಿದೆ ಗೊತ್ತಾ, ಇಷ್ಟು ಇದ್ರೂ ಪಾಲಿಕೆ ಏನ್ಮಾಡ್ತಿದೆ ಬನ್ನಿ ತೋರಿಸ್ತಿವಿ.. ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಬೀದಿನಾಯಿಗಳ ಹಾವಳಿ ಹೆಚ್ಚಾಗ್ತಿದೆ. ಬೀದಿನಾಯಿಗಳ ಹಾವಳಿಯಿಂದ ಎಷ್ಟೋ ಮಕ್ಕಳು ಬಲಿಯಾಗಿದ್ದಾರೆ. ಆದ್ರೂ ಬಿಬಿಎಂಪಿ ಈ ಬಗ್ಗೆ ತಲೆನೇ ಕೆಡೆಸಿಕೊಂಡಿಲ್ಲ. ನಗರದ ಪಾರ್ಕ್ ನಲ್ಲೂ ನಾಯಿ ಕಾಟ.. ಬೀದಿಯಲ್ಲೂ ಶ್ವಾನಗಳ ಹಾವಾಳಿ ಮಿತಿ ಮೀರಿದೆ. ಬೀದಿನಾಯಿಗಳ ಉಪಟಳಕ್ಕೆ ಈಗಾಗಲೇ ಬೆಂಗಳೂರಿಗರು ಬೆದರಿ ಹೋಗಿದ್ದಾರೆ. ವರ್ಷದಿಂದ ವರ್ಷಕ್ಕೆ ಹೆಚ್ಚಾಗ್ತಿರೋ ಈ ಸಂತತಿಯ…

Read More

ಬೆಂಗಳೂರು:  ಸಿಲಿಕಾನ್ ಸಿಟಿಯಲ್ಲಿ ಲೆಕ್ಕಕ್ಕೆ ಸಿಗ್ತಿಲ್ಲ ಶೇ 35 ರಷ್ಟು ಕಾವೇರಿ ನೀರು. ಬೆಂಗಳೂರು ಜಲ ಮಂಡಳಿ ಅನಧಿಕೃತ ಸಂಪರ್ಕ ಪಡೆದವರ ಮೇಲೆ ಕಾನೂನು ಕ್ರಮಕ್ಕೆ ಸನ್ನದ್ಧ ಆಗಿದ್ದು, ಇನ್ಮೇಲೆ ಅಕ್ರಮ ನೀರಿನ ಸಂಪರ್ಕ ಪಡೆದಿದ್ರೆ ದಂಡ ಅಲ್ಲ,ಕಾನೂನು ಕ್ರಮ… ಬೆಂಗಳೂರಿನಲ್ಲಿ ಕಾವೇರಿ ನೀರು ಕಳ್ಳರಿಗೆ ಮತ್ತೊಂದು ಶಾಕ್ ಸಿಗಲಿದೆ‌.ಯಾಕೆಂದರೆ ಬೆಂಗಳೂರಿನಲ್ಲಿ 12ಲಕ್ಷಕ್ಕೂ ಹೆಚ್ಚಿನ ಕಾವೇರಿ ನೀರಿನ ಸಂಪರ್ಕಗಳಿದ್ದು,ಶೇಕಡಾ 35ರಷ್ಟು ನೀರು ಲೆಕ್ಕಕ್ಕೆ ಸಿಗುತ್ತಿಲ್ಲ.ಬೆಂಗಳೂರಿನಲ್ಲಿ ಅನಧಿಕೃತ ಕಾವೇರಿ ನೀರಿನ ಸಂಪರ್ಕ ಶಿಕ್ಷಾರ್ಹ ಅಪರಾಧವಾಗಿದ್ರೂ,ಕಾವೇರಿ ನೀರನ್ನ ಕಳ್ಳತನ ಮಾಡ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಸಾವಿರಾರು ಮಂದಿ ಅನಧಿಕೃತ ನೀರಿನ ಸಂಪರ್ಕ ಪಡೆದುಕೊಂಡಿದ್ದಾರೆ.ಅನಧಿಕೃತ ಸಂಪರ್ಕಗಳ ಪತ್ತೆಗೆ ವಿಶೇಷ ತಂಡ ರಚನೆ ಇದ್ರೂ ಕೇವಲ ದಂಡಕ್ಕೆ ಮಾತ್ರ ಸೀಮಿತವಾಗಿದೆ. ಇಷ್ಟು ದಿನ ಜಲಮಂಡಳಿ ಇಂಜಿನಿಯರ್ಸ್ ದಂಡ ಹಾಕಿ ಸೈಲೆಂಟ್ ಆಗ್ತಿದ್ರು.ಈಗ ಅನಧಿಕೃತ ನೀರಿನ ಸಂಪರ್ಕ ಪಡೆದವರ ಮೇಲೆ ಎಫ್ ಐ ಆರ್ ದಾಖಲಿಸುವಂತೆ ಜಲಮಂಡಳಿ ಅಧ್ಯಕ್ಷರು ಸೂಚಿಸಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಬರಗಾಲವಿದ್ದು.ಹೀಗಿರುವಾಗ ಕಾವೇರಿ ನೀರನ್ನು ಅನಧಿಕೃತವಾಗಿ…

Read More

ಚಿತ್ರದುರ್ಗ: ಬೈಕ್‌ಗೆ ಕಾರು ಡಿಕ್ಕಿ,ಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಬಳಿ ಿಂದು ಮುಂಜಾನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 150(ಎ) ರಲ್ಲಿ ನಡೆದ ಭೀಕರ ಅಪಘಾತದಲ್ಲಿ, https://ainlivenews.com/see-how-hot-and-hot-this-cold-can-be/  ಮೃತಪಟ್ಟವರನ್ನು ಕೋನಾಪುರ ನಿವಾಸಿ ಮಾರಣ್ಣ(45), ಶಂಕರ್(44) ಎಂದು ಗುರುತಿಸಲಾಗಿದೆ. ಅವರಿಬ್ಬರೂ ಉದ್ಯೋಗ ನಿಮಿತ್ತ ಬೈಕ್‌ ನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

Read More

ಬೆಳಗಾವಿ: ಮೈಸೂರು ಕಾಗದ ಕಾರ್ಖಾನೆ (Mysore Paper Mills) ಮರುಪ್ರಾರಂಭ ಮಾಡಲು ಸರ್ಕಾರ ಉತ್ಸುಕವಾಗಿದೆ. ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ (MB Patil) ಭರವಸೆ ನೀಡಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರುದ್ರೇಗೌಡ ಪ್ರಶ್ನೆ ಕೇಳಿದ್ದು, ಸರ್ಕಾರ ಮೈಸೂರು ಕಾಗದ ಕಾರ್ಖಾನೆ ಮರು ಪ್ರಾರಂಭ ಮಾಡಬೇಕು. 3 ವರ್ಷಗಳಿಂದ ನಾನು ಈ ಪ್ರಶ್ನೆ ಕೇಳುತ್ತಿದ್ದೇನೆ. ಈ ಕಾರ್ಖಾನೆ ಪ್ರಾರಂಭ ಮಾಡಿದರೆ ನೌಕರರಿಗೆ ಅನುಕೂಲ ಆಗುತ್ತದೆ. ಸರ್ಕಾರ ಪಾಸಿಟಿವ್ ಆಗಿ ಕಾರ್ಖಾನೆ ಪ್ರಾರಂಭ ಮಾಡಲು ಕ್ರಮವಹಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಸಚಿವ ಎಂಬಿ ಪಾಟೀಲ್ ಉತ್ತರ ನೀಡಿ, ಮೈಸೂರು ಕಾಗದ ಕಾರ್ಖಾನೆ ಹಣಕಾಸಿನ ಸಮಸ್ಯೆಯಿಂದ 2015ರಲ್ಲಿ ಸ್ಥಗಿತ ಮಾಡಲಾಗಿದೆ. ಜೂನ್ 2023ರ ಅಂತ್ಯಕ್ಕೆ 1,482 ಕೋಟಿ ಸಂಚಿತ ನಷ್ಟ ಆಗಿದೆ. ಖಾಸಗಿ ಅವರು ಕಂಪನಿ ಅವರಿಗೂ 3 ಬಾರಿ ಆಹ್ವಾನ ಮಾಡಿದ್ದೇವೆ. ಆದರೂ ಯಾರೂ ಕಾರ್ಖಾನೆ ಪ್ರಾರಂಭಕ್ಕೆ ಮುಂದೆ ಬರಲಿಲ್ಲ ಎಂದು…

Read More

ಬೆಳಗಾವಿ:”ನಾವು ಕೊಟ್ಟ ಮಾತಿನಂತೆ ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಯುವನಿಧಿ ಯೋಜನೆ ಜಾರಿ ಪ್ರಕ್ರಿಯೆ ಆರಂಭಿಸುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸುವರ್ಣಸೌಧದಲ್ಲಿ ಮಾಧ್ಯಮಗಳು, ಡಿ. 21ರಿಂದ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗುವ ಬಗ್ಗೆ ಕೇಳಿದ ಪ್ರಶ್ನೆಗೆ ಮಂಗಳವಾರ ಉತ್ತರಿಸಿದ್ದು ಹೀಗೆ: “ಈ ಯೋಜನೆ ಜಾರಿಗೆ ತಾಂತ್ರಿಕ ವಿಚಾರವಾಗಿ ಚರ್ಚೆ ಮಾಡಿದ್ದು, ಅನುಷ್ಠಾನದ ಜವಾಬ್ದಾರಿಯನ್ನು ಕೌಶ್ಯಲ್ಯಾಭಿವೃದ್ಧಿ ಸಚಿವರಿಗೆ ನೀಡಿದ್ದೇವೆ.ಜನವರಿಯಲ್ಲಿ ಈ ಯೋಜನೆಯ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಅಧಿಕೃತ ದಿನಾಂಕವನ್ನು ಸಚಿವರು ಪ್ರಕಟಿಸಲಿದ್ದಾರೆ.” ಬೆಳಗಾವಿ ಅಧಿವೇಶನ ಒಂದು ವಾರ ಮುಂದುವರಿಸಿ ಉತ್ತರ ಕರ್ನಾಟಕ ಸಮಸ್ಯೆ ಕುರಿತು ಚರ್ಚೆ ಮಾಡುವ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳಿದಾಗ, https://ainlivenews.com/see-how-hot-and-hot-this-cold-can-be/ “ನಾವು ಇಲ್ಲಿ ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡಲು. ಆದರೆ ಬಿಜೆಪಿಯವರು ಏನು ಮಾಡುತ್ತಿದ್ದಾರೆ? ಕೇಂದ್ರ ಸರ್ಕಾರ ಒಂದು ರೂಪಾಯಿ ಬರ ಪರಿಹಾರ ನೀಡಿಲ್ಲ. ನರೇಗಾ ಯೋಜನೆಯಡಿ ಇರುವ 100 ಕೂಲಿ ದಿನಗಳನ್ನು 150ಕ್ಕೆ ಏರಿಸಲು ಕಾನೂನಿನಲ್ಲಿ…

Read More

ಬೆಂಗಳೂರು: ನಾಳೆಯಿಂದ ಬೆಂಗಳೂರು- ಮಂಗಳೂರು ರೈಲು ರದ್ದು ಡಿಸೆಂಬರ್ 14 ರಿಂದ ಡಿಸೆಂಬರ್ 22ರ ವರೆಗೆ ರೈಲು ಸಂಚಾರ ರದ್ದು ಹಾಸನ ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಯಾರ್ಡ್ ಮರು ನಿರ್ಮಾಣ ಕಾಮಗಾರಿ ಹಿನ್ನೆಲೆ ಹೀಗಾಗಿ ನಾಳೆಯಿಂದಲೇ ಮಂಗಳೂರು- ಬೆಂಗಳೂರು ರೈಲು ಸಂಚಾರ ರದ್ದು ರೈಲು ಸಂಚಾರ ರದ್ದುಗೊಳಿಸುವುದರ ಬಗ್ಗೆ ನೈಋತ್ಯ ರೈಲ್ವೆಯಿಂದ ಮಾಹಿತಿ ಪ್ರಯಾಣಿಕರ ಗಮನಕ್ಕೆ ಡಿಸೆಂಬರ್ 14 ರಿಂದ 18 ರ ಅವಧಿಯಲ್ಲಿ ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ ಸಂಜೆ 6 ರಿಂದ ರಾತ್ರಿ 8 ರವರೆಗೆ ಲೈನ್ ಬ್ಲಾಕ್, ಸಿಗ್ನಲ್ ಮತ್ತು ದೂರಸಂಪರ್ಕ ಬ್ಲಾಕ್ ಜಾರಿಯಲ್ಲಿರಲಿದೆ ಈ ಸಮಯದಲ್ಲಿ ರೈಲು ಸಂಚಾರಕ್ಕೆ ಹಾಸನದಲ್ಲಿ ಯಾವುದೇ ರೈಲು ಮಾರ್ಗಗಳು ಲಭ್ಯವಿರುವುದಿಲ್ಲ ಡಿಸೆಂಬರ್ 19 ರಿಂದ ಡಿಸೆಂಬರ್ 22 ರವರೆಗೆ ಎಂಜಿನಿಯರಿಂಗ್ ಕೆಲಸಕ್ಕಾಗಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಟ್ರಾಫಿಕ್ ಬ್ಲಾಕ್ ಈ ಅವಧಿಯಲ್ಲಿ ಯಾವುದೇ ರೈಲುಗಳು ಕಾರ್ಯ ನಿರ್ವಹಿಸುವುದಿಲ್ಲ ಈ ಬಗ್ಗೆ ನೈರುತ್ಯ ರೈಲ್ವೆ…

Read More

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟಿ-20 ಪಂದ್ಯ ಇಲ್ಲಿನ ಗೆಬರ್ಹದಲ್ಲಿರುವ ಸೇಂಟ್ ಜಾರ್ಜ್ ಪಾರ್ಕ್​ನಲ್ಲಿ ನಡೆಯಲಿದೆ. ಭಾನುವಾರ ನಡೆಯಬೇಕಿದ್ದ ಮೊದಲ ಟಿ-20 ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಇದರಿಂದ ಕ್ರಿಕೆಟ್ ಅಭಿಮಾನಿಗಳು ನಿರಾಸೆಗೊಂಡಿದ್ದರು. 3 ಪಂದ್ಯಗಳ ಸರಣಿ ಇದಾಗಿದ್ದು, ಭಾರತಕ್ಕೆ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಇಂದಿನ ಪಂದ್ಯ ನಡೆಯುವ ಗೆಬರ್ಹಾದಲ್ಲಿಯೂ ಮೋಡ ಕವಿದ ವಾತಾವರಣವಿದೆ. ಹೀಗಿರುವಾಗ ಇಂದಿನ ಪಂದ್ಯವೂ ಮಳೆಯಿಂದಾಗಿ ರದ್ದಾಗುವ ಸಾಧ್ಯತೆಯಿದೆ. ಶೇ.60ತರಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಆಫ್ರಿಕನ್ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಂದ್ಯಕ್ಕೆ ಮಳೆ ಅಡ್ಡಿಯಾಗಬಾರದು ಎಂದು ಪ್ರಾರ್ಥಿಸುತ್ತಿದ್ದಾರೆ. ಪಂದ್ಯ ಆರಂಭ : ರಾತ್ರಿ 8.30 (ಭಾರತೀಯ ಕಾಲಮಾನ) ಸ್ಥಳ : ಸೇಂಟ್ ಜಾರ್ಜ್ ಪಾರ್ಕ್, ​ಗೆಬರ್ಹಾ, ದಕ್ಷಿಣ ಆಫ್ರಿಕಾ ಪ್ರಸಾರ ಹಕ್ಕು : ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌. (ಸ್ಟಾರ್​ ಸ್ಪೋರ್ಟ್ಸ್ ಹಾಗೂ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್​ನಲ್ಲಿ ಪಂದ್ಯ ವೀಕ್ಷಿಸಬಹುದು) ಭಾರತ ತಂಡ ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿ.ಕೀ.), ಜಿತೇಶ್ ಶರ್ಮಾ (ವಿ.ಕೀ.), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲ್ದೀಪ್ ಯಾದವ್,…

Read More

ಹರಿಣಗಳ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ರಿಂಕು ಸಿಂಗ್ ಬೆಂಕಿ ಬ್ಯಾಟಿಂಗ್ ಮೂಲಕ ಗಮನ ಸೆಳೆದರು. ಅದರಲ್ಲೂ ರಿಂಕು ಸಿಂಗ್ ಸಿಡಿಸಿದ ಸಿಕ್ಸರ್‌ ಕ್ರಿಡಾಂಗಣದ ಮೀಡಿಯಾ ಬಾಕ್ಸ್‌ನ ಗಾಜು ಪುಡಿಪುಡಿ ಆಯಿತು. ದಕ್ಷಿಣ ಆಫ್ರಿಕಾ ನಾಯಕ ಐಡೆನ್ ಮಾರ್ಕ್ರಮ್ ಎಸೆತದಲ್ಲಿ ರಿಂಕು ಸಿಂಗ್ ಸಿಡಿಸಿದ ಭರ್ಜರಿ ಸಿಕ್ಸರ್ ಮೀಡಿಯಾ ಬಾಕ್ಸ್​ಗೆ ಬಡಿಯಿತು. ಇರದಿಂದ ಅದರ ಗಾಜು ಒಡೆದು ಹೋಯಿತು. ಇನ್ನೂ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಡಿ-20 ಪಂದ್ಯಕ್ಕೂ ನಳೆ ಅಡ್ಡಿಯಾಯಿತು. 19.3 ಓವರ್​ಗಳಲ್ಲಿ ಭಾರತ 7 ವಿಕೆಟ್ ಕಳೆದುಕೊಂಡು 180 ರನ್​ ಗಳಿಸಿದ್ದಾಗ ಗೆಬರ್ಹಾದಲ್ಲಿರುವ ಸೇಂಟ್ ಜಾರ್ಜ್ ಪಾರ್ಕ್​ನಲ್ಲಿ ಜೋರು ಮಳೆಸುರಿಯತೊಡಗಿತು. ಹೀಗಾಗಿ, ಅಂಪೈರ್​ಗಳು ಪಂದ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದರು. ಭಾರತಕ್ಕೆ ರಿಂಕು, ಸೂರ್ಯ ಆಸರೆ ಆರಂಭಿಕ ಆಘಾತ ಕಂಡಿದ್ದ ಭಾರತಕ್ಕೆ ಆಸರೆಯಾಗಿದ್ದು ನಾಯಕ ಸೂರ್ಯಕುಮಾರ್ ಯಾದವ್ (56) ಹಾಗೂ ಗ್ರೇಟ್ ಫಿನಿಷರ್ ರಿಂಕು ಸಿಂಗ್ (68*) ಅವರ ಭರ್ಜರಿ ಆಟ. ಇವರಿಬ್ಬರ ಬೊಂಬಾಟ್ ಆಟದಿಂದ ಭಾರತ ತಂಡದ ಮೊತ್ತ 150 ರನ್​ಗಳ ಗಡಿ ದಾಡಿತು.…

Read More

ಬೆಳಗಾವಿ: ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಸಿಎಂ ಸಿದ್ದರಾಮಯ್ಯ ಕೂಡಲೇ 500 ಕೋಟಿ ಅನುದಾನ ಬಿಡುಗಡೆ ಮಾಡಬೇಕು ಅಂತ ಬಿಜೆಪಿ ಸದಸ್ಯ ರವಿಕುಮಾರ್ (Ravi Kumar) ಆಗ್ರಹಿಸಿದ್ದಾರೆ. ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪ ಮಾಡಿದ ರವಿಕುಮಾರ್, ಬೆಂಗಳೂರಿನಲ್ಲಿ ಈಡಿಗ, ಬಿಲ್ಲವ ಸಮುದಾಯದ ಸಮಾವೇಶ ನಡೆಯಿತು. ಸಿಎಂ ಸಿದ್ದರಾಮಯ್ಯ ಅವರು ನಾರಾಯಣಗುರು ನಿಗಮನಕ್ಕೆ 500 ಕೋಟಿ ಬಿಡುಗಡೆ ಮಾಡಿ ಅಂದರೆ ಅಧಿವೇಶನ ಇದೆ ಅಂತ ಹೇಳಿ ಘೋಷಣೆ ಮಾಡಿರಲಿಲ್ಲ. ಆದರೆ ಹುಬ್ಬಳ್ಳಿಯಲ್ಲಿ ನಡೆದ ಅಲ್ಪಸಂಖ್ಯಾತ ಸಮುದಾಯ ಸಮಾವೇಶದಲ್ಲಿ 10 ಸಾವಿರ ಕೋಟಿ ಕೊಡೋದಾಗಿ ಘೋಷಣೆ ಮಾಡಿದ್ದಾರೆ. ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಘೋಷಣೆ ಮಾಡಿ ನಾರಾಯಣಗುರು ನಿಗಮಕ್ಕೆ 500 ಕೋಟಿ ಬಿಡುಗಡೆ ಮಾಡದೇ ಹೋದರೆ ಹೇಗೆ ಅಂತ ಪ್ರಶ್ನೆ ಮಾಡಿದರು. https://ainlivenews.com/see-how-hot-and-hot-this-cold-can-be/ ಸಿದ್ದರಾಮಯ್ಯ (Siddaramaiah) ಅವರ ಈ ನಡೆ ಹಿಂದುಳಿದ ವರ್ಗಕ್ಕೆ ಮಾಡಿದ ಅಪಮಾನ, ಅನ್ಯಾಯ. ಇಂದು ಅಥವಾ ನಾಳೆ ಒಳಗೆ ಸದನದಲ್ಲಿ ನಾರಾಯಣಗುರು ನಿಗಮಕ್ಕೆ 500 ಕೋಟಿ ಘೋಷಣೆ ಮಾಡಬೇಕು ಅಂತ…

Read More

ಬೆಂಗಳೂರು: “ನಾವು ಕೊಟ್ಟ ಮಾತಿನಂತೆ ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಯುವನಿಧಿ ಯೋಜನೆ ಜಾರಿ ಪ್ರಕ್ರಿಯೆ ಆರಂಭಿಸುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸುವರ್ಣಸೌಧದಲ್ಲಿ ಮಾಧ್ಯಮಗಳು, ಡಿ. 21ರಿಂದ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗುವ ಬಗ್ಗೆ ಕೇಳಿದ ಪ್ರಶ್ನೆಗೆ ಮಂಗಳವಾರ ಉತ್ತರಿಸಿದ್ದು ಹೀಗೆ: “ಈ ಯೋಜನೆ ಜಾರಿಗೆ ತಾಂತ್ರಿಕ ವಿಚಾರವಾಗಿ ಚರ್ಚೆ ಮಾಡಿದ್ದು, ಅನುಷ್ಠಾನದ ಜವಾಬ್ದಾರಿಯನ್ನು ಕೌಶ್ಯಲ್ಯಾಭಿವೃದ್ಧಿ ಸಚಿವರಿಗೆ ನೀಡಿದ್ದೇವೆ. ಜನವರಿಯಲ್ಲಿ ಈ ಯೋಜನೆಯ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಅಧಿಕೃತ ದಿನಾಂಕವನ್ನು ಸಚಿವರು ಪ್ರಕಟಿಸಲಿದ್ದಾರೆ.” ಬೆಳಗಾವಿ ಅಧಿವೇಶನ ಒಂದು ವಾರ ಮುಂದುವರಿಸಿ ಉತ್ತರ ಕರ್ನಾಟಕ ಸಮಸ್ಯೆ ಕುರಿತು ಚರ್ಚೆ ಮಾಡುವ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳಿದಾಗ, “ನಾವು ಇಲ್ಲಿ ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡಲು. ಆದರೆ ಬಿಜೆಪಿಯವರು ಏನು ಮಾಡುತ್ತಿದ್ದಾರೆ? ಕೇಂದ್ರ ಸರ್ಕಾರ ಒಂದು ರೂಪಾಯಿ ಬರ ಪರಿಹಾರ ನೀಡಿಲ್ಲ. ನರೇಗಾ ಯೋಜನೆಯಡಿ ಇರುವ 100 ಕೂಲಿ ದಿನಗಳನ್ನು 150ಕ್ಕೆ ಏರಿಸಲು…

Read More