Author: AIN Author

ಬೆಳಗಾವಿ: ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಸಿಎಂ ಸಿದ್ದರಾಮಯ್ಯ ಕೂಡಲೇ 500 ಕೋಟಿ ಅನುದಾನ ಬಿಡುಗಡೆ ಮಾಡಬೇಕು ಅಂತ ಬಿಜೆಪಿ ಸದಸ್ಯ ರವಿಕುಮಾರ್ (Ravi Kumar) ಆಗ್ರಹಿಸಿದ್ದಾರೆ. ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪ ಮಾಡಿದ ರವಿಕುಮಾರ್, ಬೆಂಗಳೂರಿನಲ್ಲಿ ಈಡಿಗ, ಬಿಲ್ಲವ ಸಮುದಾಯದ ಸಮಾವೇಶ ನಡೆಯಿತು. ಸಿಎಂ ಸಿದ್ದರಾಮಯ್ಯ ಅವರು ನಾರಾಯಣಗುರು ನಿಗಮನಕ್ಕೆ 500 ಕೋಟಿ ಬಿಡುಗಡೆ ಮಾಡಿ ಅಂದರೆ ಅಧಿವೇಶನ ಇದೆ ಅಂತ ಹೇಳಿ ಘೋಷಣೆ ಮಾಡಿರಲಿಲ್ಲ. ಆದರೆ ಹುಬ್ಬಳ್ಳಿಯಲ್ಲಿ ನಡೆದ ಅಲ್ಪಸಂಖ್ಯಾತ ಸಮುದಾಯ ಸಮಾವೇಶದಲ್ಲಿ 10 ಸಾವಿರ ಕೋಟಿ ಕೊಡೋದಾಗಿ ಘೋಷಣೆ ಮಾಡಿದ್ದಾರೆ. ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಘೋಷಣೆ ಮಾಡಿ ನಾರಾಯಣಗುರು ನಿಗಮಕ್ಕೆ 500 ಕೋಟಿ ಬಿಡುಗಡೆ ಮಾಡದೇ ಹೋದರೆ ಹೇಗೆ ಅಂತ ಪ್ರಶ್ನೆ ಮಾಡಿದರು. https://ainlivenews.com/see-how-hot-and-hot-this-cold-can-be/ ಸಿದ್ದರಾಮಯ್ಯ (Siddaramaiah) ಅವರ ಈ ನಡೆ ಹಿಂದುಳಿದ ವರ್ಗಕ್ಕೆ ಮಾಡಿದ ಅಪಮಾನ, ಅನ್ಯಾಯ. ಇಂದು ಅಥವಾ ನಾಳೆ ಒಳಗೆ ಸದನದಲ್ಲಿ ನಾರಾಯಣಗುರು ನಿಗಮಕ್ಕೆ 500 ಕೋಟಿ ಘೋಷಣೆ ಮಾಡಬೇಕು ಅಂತ…

Read More

ಬೆಂಗಳೂರು: “ನಾವು ಕೊಟ್ಟ ಮಾತಿನಂತೆ ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಯುವನಿಧಿ ಯೋಜನೆ ಜಾರಿ ಪ್ರಕ್ರಿಯೆ ಆರಂಭಿಸುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸುವರ್ಣಸೌಧದಲ್ಲಿ ಮಾಧ್ಯಮಗಳು, ಡಿ. 21ರಿಂದ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗುವ ಬಗ್ಗೆ ಕೇಳಿದ ಪ್ರಶ್ನೆಗೆ ಮಂಗಳವಾರ ಉತ್ತರಿಸಿದ್ದು ಹೀಗೆ: “ಈ ಯೋಜನೆ ಜಾರಿಗೆ ತಾಂತ್ರಿಕ ವಿಚಾರವಾಗಿ ಚರ್ಚೆ ಮಾಡಿದ್ದು, ಅನುಷ್ಠಾನದ ಜವಾಬ್ದಾರಿಯನ್ನು ಕೌಶ್ಯಲ್ಯಾಭಿವೃದ್ಧಿ ಸಚಿವರಿಗೆ ನೀಡಿದ್ದೇವೆ. ಜನವರಿಯಲ್ಲಿ ಈ ಯೋಜನೆಯ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಅಧಿಕೃತ ದಿನಾಂಕವನ್ನು ಸಚಿವರು ಪ್ರಕಟಿಸಲಿದ್ದಾರೆ.” ಬೆಳಗಾವಿ ಅಧಿವೇಶನ ಒಂದು ವಾರ ಮುಂದುವರಿಸಿ ಉತ್ತರ ಕರ್ನಾಟಕ ಸಮಸ್ಯೆ ಕುರಿತು ಚರ್ಚೆ ಮಾಡುವ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳಿದಾಗ, “ನಾವು ಇಲ್ಲಿ ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡಲು. ಆದರೆ ಬಿಜೆಪಿಯವರು ಏನು ಮಾಡುತ್ತಿದ್ದಾರೆ? ಕೇಂದ್ರ ಸರ್ಕಾರ ಒಂದು ರೂಪಾಯಿ ಬರ ಪರಿಹಾರ ನೀಡಿಲ್ಲ. ನರೇಗಾ ಯೋಜನೆಯಡಿ ಇರುವ 100 ಕೂಲಿ ದಿನಗಳನ್ನು 150ಕ್ಕೆ ಏರಿಸಲು…

Read More

ಬೆಂಗಳೂರು: ಹಿರಿಯ ನಟಿ ಲೀಲಾವತಿಯವರನ್ನ ನೋಡಿಕೋಳ್ಳುತ್ತಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.ಚಿಕ್ಕ ವಯಸ್ಸಿನಿಂದ ಲೀಲಾವತಿ ಜೊತೆಗೆ ಇದ್ದ ಬಂಗಾರಮ್ಮ 65 ಎಂಬುವರು ಸಾವನ್ನಪ್ಪಿದ್ದಾರೆ. ಚೆನೈನಲ್ಲಿ ಲೀಲಾವತಿಯವರ ಜೊತೆಗೆ ಇದ್ದ ಮಹಿಳೆ ಲೀಲಾವತಿಯವರು ಎಲ್ಲಿ ಹೋದರು ಜೊತೆಗೆ ಇರುತ್ತಿದ್ದ ಮಹಿಳೆ ಬಂಗಾರಮ್ಮಕ್ಯಾನ್ಸರ್ ನಿಂದ ಬಳಲುತ್ತಿದ್ದು ವಿನೋದ್ ರಾಜ್ ನೋಡಿಕೊಳ್ಳು ತಿದ್ದರು ಮೈಲನಹಳ್ಳಿ ತೋಟದಲ್ಲಿ ಸುಮಾರು 25 ವರ್ಷಗಳಿಂದ ಜೊತೆಯಲ್ಲಿದ್ದ ಬಂಗಾರಮ್ಮ ಕಳೆದ ರಾತ್ರಿ ನಾಗರಭಾವಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಬಂಗಾರಮ್ಮ ಸೋಲದೇವನಹಳ್ಳಿ ತೋಟದಲ್ಲಿ ಅಂತಿಮ ದರ್ಶನ ಪಡೆದ ವಿನೋದ್ ರಾಜ್

Read More

ಉಡುಪಿ: ಸಮಾಜ ಸೇವೆ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಕಾಪು (Kapu) ತಾಲೂಕಿನಾದ್ಯಂತ ಭಾರೀ ಹೆಸರು ಗಳಿಸಿದ್ದ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂದರಾ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಪುವಿನಲ್ಲಿರುವ ಅವರ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ್ದು, ದಂಪತಿ ಸಮಾಜ ಸೇವೆ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಬಹಳ ಸಕ್ರೀಯರಾಗಿದ್ದರು. ಲೀಲಾಧರ ಶೆಟ್ಟಿಯವರು ರಂಗಕರ್ಮಿಯಾಗಿದ್ದು, ರಂಗತರಂಗ ನಾಟಕ ತಂಡದವನ್ನು ಬೆಳೆಸಿದ್ದರು. https://ainlivenews.com/see-how-hot-and-hot-this-cold-can-be/ ಒಂದು ಬಾರಿ ಕಾಪು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸಹ ಸ್ಪರ್ಧಿಸಿದ್ದರು. ದಂಪತಿ ಕೌಟುಂಬಿಕ ಕಾರಣಗಳಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕಾಪು ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Read More

ಅದ್ವಿತ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ ನಿರ್ಮಿಸುತ್ತಿರುವ “ಆಪರೇಶನ್ ಡಿ” ಚಿತ್ರದ ಟೀಸರ್ ಗೆ ಖ್ಯಾತ ನಟಿ ಸಂಗೀತ ಭಟ್ ಹಾಗೂ ಅವರ ಪತಿ ಸುದರ್ಶನ್ ರಂಗಪ್ರಸಾದ್ ಧ್ವನಿ ನೀಡಿದ್ದಾರೆ. ವಿಭಿನ್ನ ರೀತಿಯಲ್ಲಿ Mythology Concept ಇಟ್ಟುಕೊಂಡು Teaser ಸಿದ್ಧವಾಗುತ್ತಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ. ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟನಾಗಿದ್ದ ತಿರುಮಲೇಶ್ ವಿ ಈ ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ. ತಿರುಮಲೇಶ್ ವಿ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸುರೇಶ್ ಬಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಹಾಗೂ ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ವೇದಿಕ ಹಾಗೂ ಸಂತೋಷ್ ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಕೆಂಪಗಿರಿ ಒಂದು ಹಾಡು ಹಾಗೂ ವೇದಿಕ ಉಳಿದ ಎಲ್ಲಾ ಹಾಡುಗಳನ್ನು ರಚಿಸಿದ್ದಾರೆ. ಅನಿರುದ್ ಶಾಸ್ತ್ರೀ, ವೇದಿಕ ಹಾಗೂ ಪೃಥ್ವಿ ಭಟ್ ಗಾಯನದಲ್ಲಿ ಈ ಚಿತ್ರದ ಹಾಡುಗಳು ಸುಮಧುರವಾಗಿ ಮೂಡಿಬಂದಿದೆ. ಕಾರ್ತಿಕ್ ಪ್ರಸಾದ್ ಛಾಯಾಗ್ರಹಣ, ವಿಕ್ರಮ್ ಶ್ರೀಧರ್ ಸಂಕಲನ ಹಾಗೂ…

Read More

ಬೆಂಗಳೂರು: ಕಾಂಗ್ರೆಸ್ ಶಾಸಕರಿಗೆ ಡಿ.ಕೆ.ಶಿವಕುಮಾರ್​​ ಭೋಜನ ಕೂಟ ಆಯೋಜನೆ ಮಾಡಿದ್ದಾರೆ. ನಾಳೆ ರಾತ್ರಿ ಬೆಳಗಾವಿ ಫಾರಂ ರೀಟ್ರಿಟ್‌ನಲ್ಲಿ ಭೋಜನ ಕೂಟಯನ್ನ ಹಮ್ಮಿಕೊಂಡಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬಳಿಕ ಭೋಜನ‌ ಕೂಟ ಆಯೋಜನೆ ಮಾಡಲಾಗಿದ್ದು, ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ  ನಾಳೆ ಅಥವಾ ನಾಡಿದ್ದು ಡಿಕೆಶಿ ಸಿಬಿಐ ಕೇಸ್ ವಾಪಾಸ್ ಪಡೆದ ವಿಚಾರದ ಬಗ್ಗೆ ಬಿಜೆಪಿ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ. ಇನ್ನು ಈ ವೇಳೆ ಸರ್ಕಾರದ ನಿರ್ಧಾರ ಸಮರ್ಥನೆ ಮಾಡಿಕೊಳ್ಳಬೇಕು. ವಿಪಕ್ಷಗಳ ಆರೋಪಗಳಿಗೆ ತಿರುಗೇಟು ಕೊಡಬೇಕು. ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ಪಡೆಯಲು ಡಿಕೆಶಿವಕುಮಾರ್​ ಮುಂದಾಗಿದ್ದಾರೆಂಬ ಪ್ರಶ್ನೆ ಮುಂದಾಗಿದೆ. ಇನ್ನು ಸಿಎಂ ಸಿದ್ದರಾಮಯ್ಯ ಸೇರಿ ಸಚಿವರು, ಶಾಸಕರಿಗೆ ಈ ಭೋಜನ ಕೂಟ ಆಹ್ವಾನ ನೀಡಲಾಗಿದೆ.

Read More

ವಾಷಿಂಗ್ಟನ್: ಭಾರತ, ಅಮೆರಿಕ ಕಾರ್ಯತಂತ್ರದ ಪಾಲುದಾರ ಹಾಗೂ ಅಮೆರಿಕದ ಪ್ರಜೆಯಾಗಿರುವ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನೂ (Gurpatwant Singh Pannun) ಹತ್ಯೆ ಮಾಡುವ ಸಂಚು ರೂಪಿಸಿದವರನ್ನು ನೇರ ಹೊಣೆಗಾರರನ್ನಾಗಿ ಮಾಡುವಂತೆ ಶ್ವೇತಭವನವು ನವದೆಹಲಿಯನ್ನು ಒತ್ತಾಯಿಸಿದೆ. ಈ ಸಂಬಂಧ ಶ್ವೇತಭವನದ (White House) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಷ್ಟ್ರೀಯ ಭದ್ರತಾ ವಕ್ತಾರ ಜಾನ್ ಕಿರ್ಬಿ (John Kirby),  ಭಾರತವು ಒಂದು ಕಾರ್ಯತಂತ್ರದ ಪಾಲುದಾರ. ನಾವು ಆ ಕಾರ್ಯತಂತ್ರದ ಪಾಲುದಾರಿಕೆಯನ್ನು ಆಳಗೊಳಿಸುತ್ತಿದ್ದೇವೆ. ಭಾರತ- ಅಮೆರಿಕ (India- America) ಕ್ವಾಡ್ ಸದಸ್ಯ ರಾಷ್ಟ್ರಗಳಾಗಿವೆ. ಈ ಎರಡೂ ರಾಷ್ಟ್ರಗಳು ಅನೇಕ ಸಮಸ್ಯೆಗಳ ಕುರಿತು ಮಾತುಕತೆ ನಡೆಸುತ್ತಿವೆ. ಅದು ನಿರಂತರವಾಗಿ ಮುಂದುವರಿಯುವುದನ್ನು ನಾವು ನೋಡಲು ಬಯಸುತ್ತೇವೆ. ಇದೇ ಸಮಯದಲ್ಲಿ ಈ ಆರೋಪಗಳ ಗಂಭೀರತೆಯನ್ನು ನಾವು ಖಂಡಿತವಾಗಿ ಗುರುತಿಸುತ್ತೇವೆ ಎಂದು ತಿಳಿಸಿದರು. https://ainlivenews.com/i-welcome-the-judgment-of-honble-supreme-court-amit-shah/ ಇದೇ ವೇಳೆ ಈ ಆರೋಪ ಎರಡೂ ರಾಷ್ಟ್ರಗಳ ಮೇಲೆ ಪರಿಣಾಮ ಬೀರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಕಿರ್ಬಿ, ನಾವು ಅದನ್ನು ಸಂಪೂರ್ಣವಾಗಿ ತನಿಖೆ ಮಾಡಬೇಕೆಂದು ಬಯಸುತ್ತೇವೆ. ಅಲ್ಲದೆ…

Read More

ಹುಬ್ಬಳ್ಳಿ: ರಸ್ತೆ ದಾಟುತ್ತಿರುವಾಗ ವೇಗವಾಗಿ ಬಂದ ಕಾರು ಚಾಲಕ, ಪಾದಾಚಾರಿಗೆ ಗುದ್ದಿದ ಪರಿಣಾಮ, ಆ ವ್ಯಕ್ತಿಯ ಕಾಲು ಮುರಿದು ರಕ್ತಗತವಾಗಿ ಗಂಭೀರವಾದ ಗಾಯವಾದ ಘಟನೆ ಇಂದು ಬೆಳಿಗ್ಗೆ, ಹುಬ್ಬಳ್ಳಿ ತಾಲ್ಲೂಕಿನ ಅದರಗುಂಚಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹೌದು,,, ಅಪರಿಚಿತ ಪಾದಾಚಾರಿಯೊಬ್ಬರು ರಸ್ತೆ ದಾಟುತ್ತಿರುವಾಗ ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ಹೊರಟ ಕಾರು ಚಾಲಕ ಆ ಪಾದಾಚಾರಿಗೆ ಗುದ್ದಿ ನಿಲ್ಲಿಸದೆ ಪರಾರಿಯಾಗಿದ್ದಾನೆ. ಪಾದಾಚಾರಿಗೆ ಗಂಭೀರವಾದ ಗಾಯವಾಗಿದ್ದು, ಅಲ್ಲೆ ಸ್ಥಳದಲ್ಲಿದ್ದ ಸಾರ್ವಜನಿಕರು ಪೊಲೀಸರಿಗೆ ಮತ್ತು ಆ್ಯಂಬುಲೆನ್ಸ್ ಗೆ ಕರೆ ಮಾಡಿ ತಿಳಿಸಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸರು ತನಿಖೆ ನಡೆಸಿದ್ದಾರೆ.

Read More

ಬೆಂಗಳೂರು:- ಕಾಂಗ್ರೆಸ್ ನ ಪಂಚ ಗ್ಯಾರಂಟಿಗಳ ಪೈಕಿ ಕೊನೆಯ ಗ್ಯಾರಂಟಿಯಾದ ‘ಯುವನಿಧಿ’ ಯೋಜನೆಗೆ ಜನವರಿಯಲ್ಲಿ ಚಾಲನೆ ನೀಡಲಿದ್ದು, ಡಿಸೆಂಬರ್‌ ಮಾಸಾಂತ್ಯದ ವೇಳೆಗೆ ನೋಂದಣಿ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣ ಪ್ರಕಾಶ್‌ ಪಾಟೀಲ್‌ ಟ್ವೀಟ್‌ ಮೂಲಕ ತಿಳಿಸಿದ್ದಾರೆ. ಯುವ ನಿಧಿ ಕಾರ್ಯಕ್ರಮ ಅರ್ಜಿ ಸಲ್ಲಿಸಲು ಡಿಸೆಂಬರ್ 21 ರಿಂದ ಅವಕಾಶ ನೀಡಲಾಗಿದ್ದು ಜನವರಿಯಿಂದ ಯುವನಿಧಿ ಯೋಜನೆ ಚಾಲನೆ ನೀಡಲಾಗುವುದು ಹಾಗೆ  ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಐದನೇ ಗ್ಯಾರಂಟಿಗೆ ಮುಹೂರ್ತ ನಿಗದಿಯಾಗಿದೆ. ಕಾಂಗ್ರೆಸ್‌ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಿಸಲಾಗಿದ್ದ 5 ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೆ ಸರ್ಕಾರವು 4 ಗ್ಯಾರಂಟಿ ಯೋಜನೆಗಳನ್ನು ವ್ಯವಸ್ಥಿತವಾಗಿ ಜಾರಿಗೊಳಿಸಿದೆ. ಇದೀಗ 5ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಜಾರಿಗೆ ಎಲ್ಲ ಸಿದ್ಧತೆ ಮಾಡಿಕೊಂಡಿದೆ ಎಂದು ಗೊತ್ತಾಗಿದೆ.

Read More

ಬೆಳಗಾವಿ: ವಿಧಾನಸಭೆ ಕಲಾಪ ಸದ್ದುಗದ್ದಲದಲ್ಲೇ ಕೊನೆಯಾಯ್ತು.ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆಯಾಯ್ತು.ಯತ್ನಾಳ್,ಜೆ.ಟಿ.ಪಾಟೀಲ್ ಸೇರಿದಂತೆ ಹಲವರು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ್ರು. ಮಹಿಳೆಯ ವಿವಸ್ತ್ರಗೊಳಿಸಿದ ಪ್ರಕರಣವೂ ಸದ್ದುಮಾಡ್ತು.. ಭ್ರೂಣಹತ್ಯೆಯ ಪ್ರಸ್ತಾಪವೂ ಆಯ್ತು.. ಪ್ರಶ್ನೋತ್ತರದ ವೇಳೆ ಹಲವರು ತಮ್ಮ ಕ್ಷೇತ್ರಗಳ ಸಮಸ್ಗೆಗಳ ಬಗ್ಗೆ ಪ್ರಸ್ತಾಪಿಸಿ ಪರಿಹಾರ ಕಂಡುಕೊಂಡ್ರು. ಕುಂದನಗರಿಯಲ್ಲಿ ಅರಂಭವಾಗಿರೋ ಚಳಿಗಾಲದ ಅಧಿವೇಶನದ ಮೊದಲ ದಿನವೇ ಉತ್ತರದ ಚರ್ಚೆಗೆ ಅವಕಾಶ ಕೊಡಿ ಎಂದು ಒತ್ತಾಯ ಮಾಡಲಾಯಿತು.ಆದ್ರೆ ಕೆಲವೊಂದು ವಿಷಯಗಳ ಸದ್ದುಗದ್ದಲದಲ್ಲಿ ಸದನ ಕದನವಾಗಿತ್ತು. ಆದ್ರೆ ಎರಡನೇ ವಾರದ ಎರಡನೇ ದಿನ ಇದೀಗ ಉತ್ತರದ ಕಡೆ ಕೊನೆಗೂ‌ ಸದನ ಬಂತು.ಇಂದು ಉತ್ತರ ಕರ್ನಾಟಕದ ಬಗ್ಗೆ‌ ಸದನದಲ್ಲಿ ಗಂಭೀರ ಚರ್ಚೆಯಾಯಿತು. https://ainlivenews.com/see-how-hot-and-hot-this-cold-can-be/ ಇನ್ನು‌ ಉತ್ತರ ಕರ್ನಾಟಕದ ಚರ್ಚೆ ಮೊದಲಾವಧಿಯ ವೇಳೆ ಡಿಸಿಎಂ ಡಿಕೆಶಿಯನ್ನ ಯತ್ನಾಳ್ ಲೇವಡಿ ಮಾಡಿದ ಪ್ರಸಂಗಕ್ಕೆ ಸದನ ಸಾಕ್ಷಿಯಾಯ್ತು.ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಯಾಗ್ತಿಲ್ಲ, ಹಳೆ ಮೈಸೂರು ಭಾಗ ಮಾತ್ರ ಅಭಿವೃದ್ಧಿಯಾಗ್ತಿದೆ.ಅದಕ್ಕೆ ಮೈಸೂರು ಮಹಾರಾಜರು ಕಾರಣ.ಹಾಗೆ ಕನಕಪುರವೂ ಅಭಿವೃದ್ಧಿಯಾಗಿಲ್ಲ. ಅಲ್ಲಿರುವ ಶಾಸಕರ ಆದಾಯ ಮಾತ್ರ…

Read More