Author: AIN Author

ಲಕ್ನೋ: ತನ್ನ ಹೆಸರಿಗೆ ಆಸ್ತಿ ವರ್ಗಾಯಿಸಲು ನಿರಾಕರಿಸಿದ ಕಾರಣಕ್ಕೆ ಮಗ (Son) ತನ್ನ ತಾಯಿಯ (Mother) ಶಿರಚ್ಛೇದ ಮಾಡಿ ರುಂಡದೊಂದಿಗೆ ಪರಾರಿಯಾದ ಘಟನೆ ಉತ್ತರಪ್ರದೇಶದ (Uttar Pradesh) ಸೀತಾಪುರ (Sitapur) ಜಿಲ್ಲೆಯ ತಾಳಂಗಾವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಿಲ್ಲೆಯ ಮೇಜಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು,  ಆರೋಪಿ ದಿನೇಶ್ ಪಾಸಿ (35) ತನ್ನ ತಾಯಿ ಕಮಲಾ ದೇವಿಯನ್ನು (65) ಕೃಷಿ ಬ್ಲೇಡ್‌ನಿಂದ ಹತ್ಯೆಗೈದು ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಸೀತಾಪುರ ಪೊಲೀಸ್ ವರಿಷ್ಠಾಧಿಕಾರಿ ಚಕ್ರೇಶ್ ಮಿಶ್ರಾ ಮಾಹಿತಿ ನೀಡಿದ್ದಾರೆ. ದಿನೇಶ್ ಮದ್ಯವ್ಯಸನಿಯಾಗಿದ್ದ. https://ainlivenews.com/i-welcome-the-judgment-of-honble-supreme-court-amit-shah/ ಈತ ಪ್ರತಿದಿನ ಕುಡಿದು ಬಂದು ತಾಯಿಯೊಂದಿಗೆ ಜಗಳವಾಡುತ್ತಿದ್ದು, ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸುವಂತೆ ಕಿರುಕುಳ ನೀಡುತ್ತಿದ್ದ. ಅದೇ ರೀತಿ ಶನಿವಾರವೂ ಇವರಿಬ್ಬರ ಮಧ್ಯೆ ಜಗಳ ನಡೆದಿದ್ದು, ಜಗಳ ವಿಕೋಪಕ್ಕೆ ತಿರುಗಿ ತಾಯಿಯ ರುಂಡವನ್ನು ಕತ್ತರಿಸಿದ್ದಾನೆ. ರುಂಡವಿಲ್ಲದ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆರೋಪಿ ಪತ್ತೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಮಿಶ್ರಾ ತಿಳಿಸಿದ್ದಾರೆ. 

Read More

ಬೆಂಗಳೂರು:- ಕಾಂಗ್ರೆಸ್ ನ ಪಂಚ ಗ್ಯಾರಂಟಿಗಳ ಪೈಕಿ ಕೊನೆಯ ಗ್ಯಾರಂಟಿಯಾದ ‘ಯುವನಿಧಿ’ ಯೋಜನೆಗೆ ಜನವರಿಯಲ್ಲಿ ಚಾಲನೆ ನೀಡಲಿದ್ದು, ಡಿಸೆಂಬರ್‌ ಮಾಸಾಂತ್ಯದ ವೇಳೆಗೆ ನೋಂದಣಿ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಹೇಳಲಾಗಿದೆ. ಕಾಂಗ್ರೆಸ್‌ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಿಸಲಾಗಿದ್ದ 5 ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೆ ಸರ್ಕಾರವು 4 ಗ್ಯಾರಂಟಿ ಯೋಜನೆಗಳನ್ನು ವ್ಯವಸ್ಥಿತವಾಗಿ ಜಾರಿಗೊಳಿಸಿದೆ. ಇದೀಗ 5ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಜಾರಿಗೆ ಎಲ್ಲ ಸಿದ್ಧತೆ ಮಾಡಿಕೊಂಡಿದೆ ಎಂದು ಗೊತ್ತಾಗಿದೆ. ಸರ್ಕಾರದ ಉನ್ನತ ಮೂಲಗಳ ಪ್ರಕಾರ ಯುವ ನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಈ ಮಾಸಾಂತ್ಯದ ವೇಳೆಗೆ ಆರಂಭವಾಗಲಿದ್ದು, ಜನವರಿಯಲ್ಲಿ ಯೋಜನೆ ಅಧಿಕೃತವಾಗಿ ಚಾಲನೆ ಪಡೆದುಕೊಳ್ಳಲಿದೆ. ಯೋಜನೆಯ ನೋಂದಣಿ, ಸಹಾಯಧನ ಪಾವತಿ ಸೇರಿದಂತೆ ಸಂಪೂರ್ಣ ವಿವರ ನೀಡಲು ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ್‌ ಪಾಟೀಲ್‌ ಡಿ.19 ಅಥವಾ 20ರಂದು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. 2023ರಲ್ಲಿ ಪದವಿ ಮತ್ತು ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿ, ಆರು ತಿಂಗಳಾದರೂ ಉದ್ಯೋಗ ಸಿಗದೆ ಪರದಾಡುತ್ತಿರುವ ಯುವಕ-ಯುವತಿಯರು ಯುವನಿಧಿ ಯೋಜನೆಯ ಲಾಭ ದೊರೆಯಲಿದೆ. ಸರ್ಕಾರದ ಅಂದಾಜಿನಂತೆ…

Read More

ಬೆಳಗಾವಿ:- ಸಕ್ರಮ ಕಲ್ಲು ಗಣಿಗಾರಿಕೆಗಳಿಗೆ ಕಾನೂನು ಪಾರದರ್ಶಕತೆ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಕೋಲಾರದಲ್ಲಿ ಎಷ್ಟು ಅಕ್ರಮ ಕಲ್ಲು ಗಣಿಗಾರಿಕೆಗಳಿವೆ? ಇವುಗಳಿಂದ ಸಂಗ್ರಹಿಸಿದ ದಂಡದ ಮೊತ್ತ ಎಷ್ಟು? ಎಂದು ವಿಧಾನ ಪರಿಷತ್​ನಲ್ಲಿ ಬಿಜೆಪಿಯ ನಾರಾಯಸ್ವಾಮಿ ಕೇಳಿದ್ದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕೋಲಾರದಲ್ಲಿ ಒಟ್ಟು 85 ಕಡೆಗಳಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಆದರೆ, ಇಲ್ಲಿ ಗಣಿಗಾರಿಕೆ ನಡೆಸುತ್ತಿರುವವರೆಲ್ಲರೂ ದಲಿತ ಸಮಾಜಕ್ಕೆ ಸೇರಿದವರು ಮತ್ತು ದೊಡ್ಡ ಮಟ್ಟದಲ್ಲಿ ಗಣಿಗಾರಿಕೆ ನಡೆಸುವವರಲ್ಲ ಕಳೆದ 50 ವರ್ಷಗಳಿಂದ ಆ ಭಾಗದಲ್ಲಿ ಬಂಡೆ, ಚಪ್ಪಡಿ ತೆಗೆಯುವ ಕೆಲಸ ಮಾಡುತ್ತಿದ್ದಾರೆ. ಇವರ ಕೆಲಸದ ಬಗ್ಗೆ ತಕ್ಷಣಕ್ಕೆ ಮತ್ತೇನನೊನೕ ಅರ್ಥೈಸುವುದು ಬೇಡ ಎಂದರು. ಕೋಲಾರದಲ್ಲಿ ಎಲ್ಲಾ ಕಲ್ಲು ಗಣಿಗಾರಿಕೆಗಳಲ್ಲೂ ಸರ್ಕಾರದಿಂದ ಪರವಾನಗಿ ಪಡೆದಿರುವುದಕ್ಕಿಂತ ಹೆಚ್ಚುವರಿಯಾಗಿ ಗಣಿಗಾರಿಕೆ ನಡೆಸಲಾಗಿದೆ. ಹೀಗಾಗಿ 12 ಕೋಟಿ ರೂ. ದಂಡ ವಿಧಿಸಲಾಗಿದೆ. ಇದಲ್ಲದೇ ರಾಜ್ಯದ ಬಹುತೇಕ ಕಡೆಗಳಲ್ಲಿ ನಿಯಮ ಮೀರಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ. ಕಳೆದ ಮೂರು ವರ್ಷದಲ್ಲಿ ಅಧೀಕೃತ ಪರವಾನಗಿ…

Read More

ನೆಲಮಂಗಲ: ಜಿಲ್ಲೆಯಲ್ಲಿ ಸಿಕ್ಕ ಸಿಕ್ಕಕಡೆಯಲ್ಲಿ ನಿರಂತರವಾಗಿ ಚಿರತೆ ದಾಳಿ ನಡೆದಿದೆ. ನೆಲಮಂಗಲ ವಲಯ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ನೆನ್ನೆ ಸಂಜೆ ಶೀಲಾ ಅಭಿಷೇಕ್ ತೋಟದಲ್ಲಿ ಪ್ರತ್ಯಕ್ಷವಾಗಿದೆ. ಸಾಕು ನಾಯಿಯ ಮೇಲೆ ದಾಳಿ ಮಾಡಿರುವ ವಿಡಿಯೋ ಸೆರೆಯಾಗಿದೆ. ತೋಟದ ಮನೆಯ ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆಯಾಗಿದೆ. ನಿರಂತರವಾಗಿ ನೆಲಮಂಗಲ ತಾಲೂಕಿನಲ್ಲಿ ಚಿರತೆ ದಾಳಿ ನಡೆದರೂ ಅರಣ್ಯಾಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಹೀಗಾಗಿ ನೆಲಮಂಗಲ ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

Read More

ಮಾಸ್ಕೋ: ಪ್ರಧಾನಿ ಮೋದಿ ಅವರು ಇರುವಾಗ ಭಾರತದ ವಿರುದ್ಧ ಮತ್ತು ಭಾರತೀಯರ ವಿರುದ್ಧ ರಾಷ್ಟ್ರದ ಹಿತಾಸಕ್ತಿಗೆ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಬಹುದು ಅಥವಾ ಪ್ರಧಾನಿ ಮೋದಿ (Narendra Modi) ಅವರನ್ನ ಹೆದರಿಸಬಹುದು ಅಂತ ಊಹಿಸೋದಕ್ಕೂ ಸಾಧ್ಯವಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ (Vladimir Putin) ಹಾಡಿ ಹೊಗಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಪುಟಿನ್‌ ಮೋದಿ‌ ನೀತಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಭದ್ರತೆ National Security) ವಿಚಾರದಲ್ಲಿ ಮೋದಿ ಅವರು ತೆಗೆದುಕೊಳ್ಳುವ ಕಠಿಣ ನಿಲುವುಗಳು ನನಗೆ ಆಗಾಗ್ಗೆ ಅಚ್ಚರಿಯನ್ನುಂಟುಮಾಡುತ್ತದೆ. ದೇಶದ ಜನರ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ಭಾರತದ ಪ್ರಧಾನಿ ಕಠಿಣ ನಿಲುವು ತೆಗೆದುಕೊಳ್ಳುತ್ತಾರೆ. ಮೋದಿ ಅವರ ನೀತಿಯು ದೆಹಲಿ ಮತ್ತು ಮಾಸ್ಕೋ (Moscow) ನಡುವಿನ ಸಂಬಂಧವನ್ನು ಗಟ್ಟಿಗೊಳಿಸಿದೆ ಎಂದು ಒತ್ತಿ ಹೇಳಿದ್ದಾರೆ. https://ainlivenews.com/i-welcome-the-judgment-of-honble-supreme-court-amit-shah/ ಮೋದಿ ಅವರು ಹೊರಗಿನಿಂದ ಏನಾಗುತ್ತಿದೆ ಎಂಬುದನ್ನೆಲ್ಲಾ ನಿರಂತರವಾಗಿ ಗಮನಿಸುತ್ತಿದ್ದಾರೆ. ಇತ್ತೀಚೆಗೆ ರಷ್ಯಾ-ಚೀನಾ ಸಂಬಂಧಗಳು ನಿರಂತರವಾಗಿ ಎಲ್ಲಾ ದಿಕ್ಕುಗಳಲ್ಲೂ ಅಭಿವೃದ್ಧಿಯತ್ತ ಸಾಗುತ್ತಿದೆ. ಇದಕ್ಕೆ ಮೋದಿ ಅವರ ನೀತಿಯೂ ಮುಖ್ಯ ಕಾರಣವಾಗಿದೆ ಎಂದು…

Read More

ಬೆಳಗಾವಿ:”ನಾವು ಕೊಟ್ಟ ಮಾತಿನಂತೆ ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಯುವನಿಧಿ ಯೋಜನೆ ಜಾರಿ ಪ್ರಕ್ರಿಯೆ ಆರಂಭಿಸುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸುವರ್ಣಸೌಧದಲ್ಲಿ ಮಾಧ್ಯಮಗಳು, ಡಿ. 21ರಿಂದ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗುವ ಬಗ್ಗೆ ಕೇಳಿದ ಪ್ರಶ್ನೆಗೆ ಮಂಗಳವಾರ ಉತ್ತರಿಸಿದ್ದು ಹೀಗೆ: “ಈ ಯೋಜನೆ ಜಾರಿಗೆ ತಾಂತ್ರಿಕ ವಿಚಾರವಾಗಿ ಚರ್ಚೆ ಮಾಡಿದ್ದು, ಅನುಷ್ಠಾನದ ಜವಾಬ್ದಾರಿಯನ್ನು ಕೌಶ್ಯಲ್ಯಾಭಿವೃದ್ಧಿ ಸಚಿವರಿಗೆ ನೀಡಿದ್ದೇವೆ. ಜನವರಿಯಲ್ಲಿ ಈ ಯೋಜನೆಯ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಅಧಿಕೃತ ದಿನಾಂಕವನ್ನು ಸಚಿವರು ಪ್ರಕಟಿಸಲಿದ್ದಾರೆ.” ಬೆಳಗಾವಿ ಅಧಿವೇಶನ ಒಂದು ವಾರ ಮುಂದುವರಿಸಿ ಉತ್ತರ ಕರ್ನಾಟಕ ಸಮಸ್ಯೆ ಕುರಿತು ಚರ್ಚೆ ಮಾಡುವ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳಿದಾಗ, “ನಾವು ಇಲ್ಲಿ ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡಲು. ಆದರೆ ಬಿಜೆಪಿಯವರು ಏನು ಮಾಡುತ್ತಿದ್ದಾರೆ? ಕೇಂದ್ರ ಸರ್ಕಾರ ಒಂದು ರೂಪಾಯಿ ಬರ ಪರಿಹಾರ ನೀಡಿಲ್ಲ. ನರೇಗಾ ಯೋಜನೆಯಡಿ ಇರುವ 100 ಕೂಲಿ ದಿನಗಳನ್ನು 150ಕ್ಕೆ ಏರಿಸಲು ಕಾನೂನಿನಲ್ಲಿ…

Read More

ಹುಬ್ಬಳ್ಳಿ: ಸಾಲ ಪಡೆದಿದ್ದ ಗೆಳೆಯ ಮೂರು ತಿಂಗಳಿನ ಬಳಿಕ ಸಾಲ ಮರಳಿಸದ ಕಾರಣ ಸಾಲ ನೀಡಿದ್ದ ವ್ಯಕ್ತಿಯು ಐದು ಜನರ ಗುಂಪು ಕಟ್ಟಿಕೊಂಡು ಬಂದು ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ ಘಟನೆ ನಗರದ ದೊಡ್ಡಮನಿ ಕಾಲೊನಿ ಕ್ರಿಶ್ಚಿಯನ್‌ ಸ್ಮಶಾನದ ಆವರಣ ಗೋಡೆ ಪಕ್ಕದಲ್ಲಿ ನಡೆದಿದೆ. ಗದಗ ಮಾರ್ಗದ ಚೇತನಾ ಕಾಲೊನಿ ನಿವಾಸಿ ಚಿನ್ನಾ ನಾ. ಗುಂಟಕಿಪೋಗು ಘಟನೆಯಲ್ಲಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುವಿನ ಪತ್ನಿಯ ಪರವಾಗಿ ಆಕೆಯ ಸಹೋದರಿಯ ಪತಿಯು ಬೆಂಡಿಗೇರಿ ಪೊಲೀಸ್‌ ಠಾಣೆಯಲ್ಲಿ ಐದು ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಮೊದಲ ಆರೋಪಿ ಸುಲೋಮನ್‌ ಪಲಕುರ್ಕಿ ₹25 ಸಾವಿರ ಸಾಲ ನೀಡಿದ್ದ. ಸಕಾಲಕ್ಕೆ ಸಾಲ ಮರಳಿಸದ ಗೆಳೆಯನ ಮೇಲೆ ಗುಂಪಾಗಿ ಸರಪಳಿ, ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿದ್ದಾರೆ ಎಂದು ತಿಳಿಸಲಾಗಿದೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Read More

ಅರಿಶಿನ ಮಿಶ್ರಿತ ಹಾಲು ಭಾರತದ ಜನಪ್ರಿಯ ಪಾನೀಯಗಳಲ್ಲಿ ಒಂದು. ಇದು ಆಯುರ್ವೇದ ಚಿಕಿತ್ಸಾ ಪದ್ಧತಿಯಲ್ಲಿ ಅದ್ಭುತ ಔಷಧವೆಂದು ಪರಿಗಣಿಸಲಾಗಿದೆ. ನಿತ್ಯದ ಆಹಾರ ಪದ್ಧತಿಯಲ್ಲಿ ಅರಿಶಿನ ಹಾಲನ್ನು ಸೇರಿಸಿಕೊಂಡರೆ ಆರೋಗ್ಯವು ಉತ್ತಮ ಸ್ಥಿತಿಯಲ್ಲಿ ಇರುತ್ತದೆ ಎಂದು ಹೇಳಲಾಗುವುದು. ಪ್ರತಿ ದಿನ ಅರಿಶಿನ ಮಿಶ್ರಿತ ಹಾಲನ್ನು ಕುಡಿಯುವುದರಿಂದ ಆರೋಗ್ಯದಲ್ಲಿ ಉಂಟಾಗುವ ಬದಲಾವಣೆಯನ್ನು ಪರಿಶೀಲಿಸಿ. ರೋಗನಿರೋಧಕ ಶಕ್ತಿ ಅರಿಶಿನ ಮಿಶ್ರಿತ ಹಾಲನ್ನು ಪ್ರತಿದಿನ ಮಲಗುವ ಮುನ್ನ ಕುಡಿಯಬೇಕು. ಆಗ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುವುದು ಎಂದು ಹೇಳಲಾಗುವುದು. ಅರಿಶಿನದಲ್ಲಿ ಖನಿಜ, ಜೀವಸತ್ವ ಹಾಗೂ ಉತ್ಕರ್ಷಣ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣಗಳನ್ನು ಒಳಗೊಂಡಿದೆ. ಇದನ್ನು ಹಾಲಿನೊಂದಿಗೆ ಸೇರಿಸಿದಾಗ ಅದರ ಶಕ್ತಿಯು ದ್ವಿಗುಣವಾಗುವುದು. ನಿತ್ಯವೂ ಅರಿಶಿನ ಮಿಶ್ರಿತ ಹಾಲನ್ನು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುವುದು. ಉರಿಯೂತದ ಸಮಸ್ಯೆಯನ್ನು ನಿವಾರಿಸುತ್ತದೆ. ದೇಹವು ರೋಗಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಪಡೆದುಕೊಂಡಿದೆ. ಹೃದಯದ ಆರೋಗ್ಯವನ್ನು ಸುಧಾರಿಸುವುದು ಅರಿಶಿನ ಪುಡಿ ರಕ್ತವನ್ನು ಶುದ್ಧೀಕರಿಸುವ ಗುಣವನ್ನು ಪಡೆದುಕೊಂಡಿದೆ. ಇದು ಅಪದಮನಿಯ ಕೆಲಸವನ್ನು ತೆರವುಗೊಳಿಸಿ, ರಕ್ತದೊತ್ತಡವನ್ನು ನಿಯಂತ್ರಣದಲ್ಲಿ…

Read More

ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ ಪೋಸ್ಟ್‌ಗಳನ್ನು ಭರ್ತಿ ಮಾಡಲು IDBI ಬ್ಯಾಂಕ್ ಅಧಿಕೃತ ಅಧಿಸೂಚನೆಯ ಮೂಲಕ ಡಿಸೆಂಬರ್ 2023 ರ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 25-Dec-2023 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. IDBI ಬ್ಯಾಂಕ್ ಹುದ್ದೆಯ ಅಧಿಸೂಚನೆ ಬ್ಯಾಂಕ್ ಹೆಸರು: ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI ಬ್ಯಾಂಕ್) ಹುದ್ದೆಗಳ ಸಂಖ್ಯೆ: 86 ಉದ್ಯೋಗ ಸ್ಥಳ: ಅಖಿಲ ಭಾರತ ಹುದ್ದೆಯ ಹೆಸರು: ಸ್ಪೆಷಲಿಸ್ಟ್ ಕೇಡರ್ ಅಧಿಕಾರಿಗಳು ವೇತನ: ರೂ.98000-155000/- ಪ್ರತಿ ತಿಂಗಳು IDBI ಹುದ್ದೆಯ ವಿವರಗಳು ಉಪ ಪ್ರಧಾನ ವ್ಯವಸ್ಥಾಪಕರು 1 ಸಹಾಯಕ ಜನರಲ್ ಮ್ಯಾನೇಜರ್ 39 ಮ್ಯಾನೇಜರ್ – ಗ್ರೇಡ್ ಬಿ 46 IDBI ಬ್ಯಾಂಕ್ ನೇಮಕಾತಿ 2023 ಅರ್ಹತಾ ವಿವರಗಳು ಆಡಿಟ್-ಮಾಹಿತಿ ವ್ಯವಸ್ಥೆ: BCA, B.Sc in CS,…

Read More

ಸೂರ್ಯೋದಯ: 06.32 AM, ಸೂರ್ಯಾಸ್ತ : 05.55 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಮಾರ್ಗಶಿರ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಅಮವಾಸ್ಯೆ 05:01 AM ತನಕ ನಂತರ ಪಾಡ್ಯ ನಕ್ಷತ್ರ: ಇವತ್ತು ಜೇಷ್ಠ 11:05 AM ತನಕ ನಂತರ ಮೂಲ ಯೋಗ: ಇವತ್ತು ಶೂಲ04:18 PM ತನಕ ನಂತರ ಗಂಡ ಕರಣ: ಇವತ್ತು ನಾಗವ 05:01 AM ತನಕ ನಂತರ ಕಿಂಸ್ತುಘ್ನ 04:08 PM ತನಕ ನಂತರ ಬವ ರಾಹು ಕಾಲ: 12:00 ನಿಂದ 01:30 ವರೆಗೂ ಯಮಗಂಡ: 07:30 ನಿಂದ 09:00 ವರೆಗೂ ಗುಳಿಕ ಕಾಲ: 10:30 ನಿಂದ12:00 ವರೆಗೂ ಅಮೃತಕಾಲ: 02.36 AM to 04.09 AM ಅಭಿಜಿತ್ ಮುಹುರ್ತ: 0: ನಿಂದ 0: ವರೆಗೂ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ…

Read More