Author: AIN Author

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಒಟ್ಟು ₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಹೆಚ್ಚುವರಿ ರೂ 13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್‌ಕಾನ್‌ನ ಪ್ರಸ್ತಾವನೆಯನ್ನು ಸಮಿತಿಯು ಅನುಮೋದಿಸಿದೆ. ಫಾಕ್ಸ್‌ಕಾನ್‌, ಈಗಾಗಲೇ ರಾಜ್ಯದಲ್ಲಿ ರೂ 8,000 ಕೋಟಿ ಬಂಡವಾಳ ಹೂಡಿಕೆ ಮಾಡಲು ಅನುಮೋದನೆ ಪಡೆದಿದೆ. ಜೆಎಸ್‌ಡಬ್ಲ್ಯು ರಿನ್ಯೂ ಎನರ್ಜಿ ಫೋರ್ ಲಿಮಿಟೆಡ್ (ರೂ 4,960 ಕೋಟಿ ), ಜೆಎಸ್‌ಡಬ್ಲ್ಯು ಸ್ಟೀಲ್ ಲಿಮಿಟೆಡ್ (ರೂ 3,804 ಕೋಟಿ ), ಟೊಯೊಟಾ ಕಿರ್ಲೋಸ್ಕರ್ ಮೋಟರ್ ಪ್ರೈವೇಟ್ ಲಿಮಿಟೆಡ್ (ರೂ 3237.30 ಕೋಟಿ ), ಟಿಆರ್‌ಐಎಲ್‌ ಬೆಂಗಳೂರು ರಿಯಲ್ ಎಸ್ಟೇಟ್ ಸಿಕ್ಸ್ ಲಿಮಿಟೆಡ್ (ರೂ 3273 ಕೋಟಿ ಹೂಡಿಕೆ), ಜಾನಕಿ ಕಾರ್ಪ್‌ ಲಿಮಿಟೆಡ್‌ (ರೂ 607 ಕೋಟಿ ಮೊತ್ತದ…

Read More

ಬೆಳಗಾವಿ.ಡಿ 12:- ವಾರಾಂತ್ಯದಲ್ಲಿ ಸಾರ್ವಜನಿಕರಿಗೆ ಪ್ರವೇಶ ನೀಡಿ ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವಾಗಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಸುವರ್ಣ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಅವರು ಹೇಳಿದ್ದಿಷ್ಟು; ಸುವರ್ಣಸೌಧದ ಪ್ರಮುಖ ಸ್ಥಳಗಳಲ್ಲಿ ಫೋಟೋ ಶೂಟ್ ಪಾಯಿಂಟ್‌ಗಳನ್ನು ಮಾಡುವ ಮೂಲಕ ಪ್ರವಾಸಿಗರನ್ನು ಆಕರ್ಷಿಸಲಾಗುವುದು. ಈಗಾಗಲೇ ಇದರ ಬಗ್ಗೆ ವಿಧಾನಸಭೆ ಮತ್ತು ಪರಿಷತ್ತಿನ ಮಾಜಿ ಸಭಾಪತಿಗಳು ಸಲಹೆಗಳನ್ನ ನೀಡಿದ್ದಾರೆ. ಇದರ ಬಗ್ಗೆ ಸರ್ಕಾರ ಚಿಂತನೆ ಮಾಡುತ್ತದೆ. ಕರ್ನಾಟಕದ ಇತಿಹಾಸವನ್ನು ಓದುತ್ತಿದ್ದೆ. ಕರ್ನಾಟಕ ಎಂದು ಮರುನಾಮಕರಣವಾದ ಸಂದರ್ಭದಲ್ಲಿ ಕೆ ಬಿ ಕೋಳಿವಾಡ ಅವರು ಸಹ ವಿಧಾನಸಭೆಯಲ್ಲಿ ಅದರ ಪರ ಮತ ಹಾಕುವ ಮೂಲಕ ಬೆಂಬಲ ಸೂಚಿಸಿದ್ದರು. ಇಂದು ಅವರನ್ನು ಕೂಡ ಈ ಸುವರ್ಣ ಸಂಭ್ರಮದಲ್ಲಿ ಸನ್ಮಾನಿಸುವ ಭಾಗ್ಯ ದೊರೆಯಿತು.

Read More

ಪಾಟ್ನಾ:- ಟ್ಯೂಷನ್‌ನಿಂದ ಬರುತ್ತಿದ್ದ ಹುಡುಗಿಗೆ ಪಾಗಲ್ ಪ್ರೇಮಿ ಗುಂಡು ಹೊಡೆದ ಕೊಂದ ಘಟನೆ ಜರುಗಿದೆ. ಬಿಹಾರದ ಗ್ರಾಮೀಣ ಪಾಟ್ನಾದಲ್ಲಿ ನಡೆದಿದೆ. ಫಲಿಸದ ಪ್ರೇಮವೇ ಈ ಘಟನೆಗೆ ಕಾರಣ ಎಂದು ಪಾಟ್ನಾ ಗ್ರಾಮೀಣ ಪೊಲೀಸರು ಅಭಿಪ್ರಾಯಪಟ್ಟಿದ್ದಾರೆ. ಈ ಇಡೀ ಅಪರಾಧದ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೃತಳನ್ನು 12ನೇ ತರಗತಿ ವಿದ್ಯಾರ್ಥಿನಿ ಅನಾಮಿಕಾ ಕುಮಾರಿ ಎಂದು ಗುರುತಿಸಲಾಗಿದೆ. ಅವಳು ತನ್ನ ತಾಯಿಯ ಅಜ್ಜಿಯೊಂದಿಗೆ ಮಸೌರ್ಹಿಯ ಕಾಜಿಚಕ್ ಗ್ರಾಮದಲ್ಲಿ ವಾಸಿಸುತ್ತಿದ್ದಳು. ಅನಾಮಿಕಾ ಕುಮಾರಿಯನ್ನು ಆರೋಪಿ ಪ್ರೇಮಿಸುತ್ತಿದ್ದ. ಆದರೆ, ಹುಡುಗಿಗೆ ಇಷ್ಟವಿರಲ್ಲ. ಆಕೆ ಪ್ರೀತಿಯನ್ನು ನಿರಾಕರಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 8 ಗಂಟೆ ಸುಮಾರಿಗೆ ಅನಾಮಿಕಾ ತನ್ನ ಟ್ಯೂಷನ್‌ಗೆ ಹೋಗುತ್ತಿದ್ದಾಗ ಆರೋಪಿ ಪೊಲೀಸ್ ಠಾಣೆಯಿಂದ 500 ಮೀಟರ್ ದೂರದಲ್ಲಿರುವ ಮಾಣಿಕ್‌ಚಂದ್ ಮೋರ್ ಬಳಿ ಪಾಯಿಂಟ್-ಬ್ಲಾಂಕ್ ರೇಂಜ್‌ನಲ್ಲಿ ಗುಂಡು ಹಾರಿಸಿದ್ದಾನೆ. ಆಕೆ ಕುಸಿದ ಬಿದ್ದು ಕೊಡಲೇ ಮತ್ತೊಮ್ಮೆ ಆಕೆಗೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಬೆಳಗಾವಿ:- ಹೆಣ್ಣು ಭ್ರೂಣ ಹತ್ಯೆ ತಡೆಗೆ ರಾಜ್ಯ ಮಟ್ಟದ ಟಾಸ್ಕ್‌ಫೋರ್ಸ್‌ ರಚಿಸುತ್ತೇವೆ ಎಂದು ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಹೆಣ್ಣು ಭ್ರೂಣ ಹತ್ಯೆಗಳನ್ನು ತಡೆಯಲು ನಾವು ಸ್ಪಷ್ಟ ಕ್ರಮ ತೆಗೆದುಕೊಳ್ಳಲೇಬೇಕು. ಬಹಳ ಕಡೆ ಇದು ಅವ್ಯಾಹತವಾಗಿ ನಡೆಯುತ್ತಿದೆ. ಅಧಿಕಾರಿಗಳು ಈ ಬಗ್ಗೆ ಹೆಚ್ಚು ಗಮನ ಹರಿಸುತ್ತಿಲ್ಲ ಎಂಬುದು ಗೊತ್ತಾಗಿದೆ. ಭ್ರೂಣ ಹತ್ಯೆ ಕೊಲೆಗಿಂತ ಕಮ್ಮಿಯೇನಲ್ಲ. ಹೀಗಾಗಿ ಭ್ರೂಣ ಹತ್ಯೆ ತಡೆಯಲು ರಾಜ್ಯ ಮಟ್ಟದ ಕಾರ್ಯಪಡೆ ರಚಿಸುತ್ತೇವೆ ಎಂದರು. ಪರಿಷತ್‌ನಲ್ಲಿ ಭ್ರೂಣ ಹತ್ಯೆ ಪ್ರಕರಣಗಳ ಬಗ್ಗೆ ನಡೆದ ಚರ್ಚೆ ವೇಳೆ ಮಾತನಾಡಿದ ಸಚಿವರು, ಇಂತಹ ಪ್ರಕರಣದಲ್ಲಿ ಬಂಧನದ ಸಂದರ್ಭದಲ್ಲಿ ಯಾವ ಯಾವ ಸೆಕ್ಷನ್ ಹಾಕಬೇಕು ಎಂಬುದನ್ನು ಗಂಭೀರವಾಗಿ ಚಿಂತನೆ ಮಾಡಬೇಕಾಗಿದೆ. ಕಾನೂನಾತ್ಮಕವಾಗಿ ಹೇಗೆ ಎದುರಿಸಬೇಕು ಎಂಬುದನ್ನು ನೋಡುತ್ತಿದ್ದೇವೆ. ಭ್ರೂಣ ಲಿಂಗ ಪತ್ತೆ ತಡೆ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯದ ಬಗ್ಗೆಯೂ ಕೂಡ ಚರ್ಚೆ ಮಾಡುತ್ತಿದ್ದೇವೆ. ಅಲ್ಟ್ರಾ ಸೌಂಡ್ ಮಿಷನ್ ಖರೀದಿಗೂ ಮಾರಾಟಕ್ಕೂ ಸರ್ಕಾರದ ಅನುಮತಿ ಪಡೆಯಬೇಕಾಗುತ್ತದೆ ಎಂದು ಹೇಳಿದರು.

Read More

ಹುಬ್ಬಳ್ಳಿ: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ (ಐಸಿಎಐ)ಯ ಹುಬ್ಬಳ್ಳಿ ಶಾಖೆಯ 36ನೇ ವಾರ್ಷಿಕ ಸಮ್ಮೇಳನ ಡಿ. 15 ಮತ್ತು 16ರಂದು ನಗರದ ಸವಾಯಿ ಗಂಧರ್ವ ಸಭಾಭವನದಲ್ಲಿ ಆಯೋಜಿಸಲಾಗಿದೆ. ಚನ್ನೈ, ಹೈದರಾಬಾದ್, ವಿವಿಧೆಡೆಯ ಲೆಕ್ಕ ಪರಿಶೋಧಕರು ತಾಂತ್ರಿಕ ಉಪನ್ಯಾಸ ನೀಡುವರು ಎಂದು ಶಾಖೆ ಅಧ್ಯಕ್ಷ ಮಲ್ಲಿಕಾರ್ಜನ ಪಿಸೆ ಹಾಗೂ ಸಮ್ಮೇಳನ ಸಮಿತಿಯ ಚೇರ್ಮನ್ ಚನ್ನವೀರ ಮುಂಗರವಾಡಿ ತಿಳಿಸಿದರು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 15ರಂದು ಬೆಳಗ್ಗೆ 9.30ಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೆ.ಜಿ. ಶಾಂತಿ ಉದ್ಘಾಟಿಸುವರು. ಐಸಿಎಐ ಕೇಂದ್ರ ಪರಿಷತ್ ಸದಸ್ಯ ಕೋಥಾ ಶ್ರೀನಿವಾಸ, ಐಸಿಎಐ ದಕ್ಷಿಣ ಭಾರತ ಪ್ರಾಂತದ ಅಧ್ಯಕ್ಷ ಪನ್ನಾ ರಾಜ್ ಪಾಲ್ಗೊಳ್ಳುವರು ಎಂದು ವಿವರಿಸಿದರು. ಸಮ್ಮೇಳನದಲ್ಲಿ ಒಟ್ಟು 8 ತಾಂತ್ರಿಕ ಗೋಷ್ಠಿಗಳು ನಡೆಯಲಿವೆ. ವೃತ್ತಿಯಲ್ಲಿ ಆಗುತ್ತಿರುವ ಬದಲಾವಣೆ, ವೃತ್ತಿ ಬಾಂಧವರು ಅನುಸರಿಸಬೇಕಾದ ನೀತಿ ಸಂಹಿತೆ, ಜಿಎಸ್​ಟಿ ಕಾಯ್ದೆಯಡಿ ವ್ಯಾಜ್ಯಗಳ ನಿರ್ವಹಣೆ, ಸಾರ್ವಜನಿಕ ಧಾರ್ವಿುಕ ಮತ್ತು ದತ್ತಿ ಸಂಸ್ಥೆಗಳ ಕರಾಕರಣೆ ಮತ್ತು ವಿನಾಯಿತಿಗಳ ಬಗ್ಗೆ ಆಡಿಟ್ ರಿಪೋರ್ಟ್,…

Read More

ಸುವರ್ಣಸೌಧ:- ಗೃಹ ರಕ್ಷಕರ ಕರ್ತವ್ಯ ಭತ್ಯೆ ಪರಿಷ್ಕರಣೆಗೆ ಚಿಂತನೆ ನಡೆಸಲಾಗಿದೆ ಎಂದು ಜಿ. ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಗೃಹ ರಕ್ಷಕ ದಳದ ಸಿಬ್ಬಂದಿಗೆ ನೀಡುತ್ತಿರುವ ಕರ್ತವ್ಯ ಭತ್ಯೆಯನ್ನು ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದರು. ರಾಜ್ಯದಲ್ಲಿ 21,327 ಪುರುಷರು ಮತ್ತು 4,555 ಮಹಿಳೆಯರು ಗೃಹ ರಕ್ಷಕ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸಲು ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಎಲ್ಲ 25,882 ಮಂದಿಗೂ ಸಮಾನವಾಗಿ ಕರ್ತವ್ಯ ಭತ್ಯೆ ನಿಗದಿಪಡಿಸಲು ಯೋಚಿಸಲಾಗಿದೆ’ ಎಂದರು. ಈಗ ಪೊಲೀಸ್‌ ಇಲಾಖೆಯಲ್ಲಿ ಸೇವೆ ಒದಗಿಸುವ ಗೃಹ ರಕ್ಷಕರಿಗೆ ದಿನವೊಂದಕ್ಕೆ ₹ 750 ಮತ್ತು ಇತರ ಇಲಾಖೆಗಳಲ್ಲಿ ₹ 600 ನೀಡಲಾಗುತ್ತಿದೆ. ಪಹರೆ ಕರ್ತವ್ಯಕ್ಕೆ ನಿಯೋಜಿಸುವವರಿಗೆ ಬೆಂಗಳೂರಿನಲ್ಲಿ ₹ 455 ಮತ್ತು ಇತರೆ ಸ್ಥಳಗಳಲ್ಲಿ ₹ 380 ನೀಡಲಾಗುತ್ತಿದೆ. ಎಲ್ಲ ಗೃಹ ರಕ್ಷಕ ಸಿಬ್ಬಂದಿಗೂ ಸಮಾನವಾಗಿ ₹ 750 ನೀಡಲಾಗುವುದು. ನಂತರ ಇತರ ರಾಜ್ಯಗಳಲ್ಲಿ ನೀಡುತ್ತಿರುವ ಕರ್ತವ್ಯ ಭತ್ಯೆಯನ್ನು ಪರಿಶೀಲಿಸಿ ರಾಜ್ಯದಲ್ಲೂ ಪರಿಷ್ಕರಣೆ ಮಾಡಲಾಗುವುದು ಎಂದು ತಿಳಿಸಿದರು.

Read More

ಬೆಳಗಾವಿ : ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತ ಮಹಿಳೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದರು. ಸಂತ್ರಸ್ತ ಮಹಿಳೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಯಾವುದೇ ಕಾರಣಕ್ಕೂ ಧೃತಿಗೆಡದಂತೆ ಧೈರ್ಯ ಹೇಳಿದರು. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇದೊಂದು ಅಮಾನವೀಯ ಹೇಯಕೃತ್ಯ. ಇಡೀ ಸಮಾಜವೇ ತಲೆತಗ್ಗಿಸುವ ಘಟನೆ. ಇಂತಹ ಘಟನೆಗಳು ಸಮಾಜದಲ್ಲಿ ಮತ್ತೆ ಮರುಕಳಿಸಬಾರದು. ಈಗಾಗಲೇ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆರೋಪಿಗಳಿಗೆ ಕಾನೂನಿನ ಚೌಕಟ್ಟಿನಲ್ಲಿ ಅತ್ಯಂತ ಕಠಿಣ ಶಿಕ್ಷೆಯಾಗಬೇಕು ಎಂದರು. ಇಂತಹ ಘಟನೆ ನನ್ನ ಜಿಲ್ಲೆಯಲ್ಲಾಗಿದ್ದು, ನಾನು ತಲೆತಗ್ಗಿಸುವಂತಹ ಘಟನೆ. ಆರೋಪಿಗಳಿಗೆ ಶಿಕ್ಷೆಯಾಗಲು ನಾನು ಕೂಡಾ ಹೋಮ್ ಮಿನಿಸ್ಟರ್‌ಗೆ ಮನವಿ ಮಾಡುತ್ತೇನೆ. ಘಟನೆಯಿಂದಾಗಿ ಸಂತ್ರಸ್ತ…

Read More

ಬೆಂಗಳೂರು:- ಪ್ರಯಾಣಿಕರು ಟಿಕೆಟ್ ರಹಿತ ಪ್ರಯಾಣ ಮಾಡುವುದನ್ನು ತಡೆಗಟ್ಟಲು ಹಾಗೂ ಅಂತಹ ಪ್ರಕರಣಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಲು ಬಿಎಂಟಿಸಿ ಬಸ್​ಗಳನ್ನು ಸಿಬ್ಬಂದಿ ತೀವ್ರ ತಪಾಸಣೆ ನಡೆಸುತ್ತಿದ್ದಾರೆ. ನವೆಂಬರ್‌ ತಿಂಗಳಲ್ಲಿ ವಿವಿಧ ನಿಯಮಗಳನ್ನು ಉಲ್ಲಂಘಿಸಿದ 3,767 ಪ್ರಯಾಣಿಕರ ವಿರುದ್ಧ ಬಿಎಂಟಿಸಿ ಕ್ರಮ ಕೈಗೊಂಡಿದೆ. ಒಟ್ಟು 7 ಲಕ್ಷ ರೂಪಾಯಿಗಳನ್ನು ದಂಡದ ಮೊತ್ತವನ್ನು ಸಂಗ್ರಹಿಸಲಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತಿಳಿಸಿದೆ. ನವೆಂಬರ್‌ ತಿಂಗಳಲ್ಲಿ 16,421 ಟ್ರಿಪ್‌ಗಳನ್ನು ಸಿಬ್ಬಂದಿ ಪರಿಶೀಲಿಸಿದ್ದಾರೆ. ಈ ವೇಳೆ 3,329 ಪ್ರಯಾಣಿಕರು ಟಿಕೆಟ್‌ ರಹಿತವಾಗಿ ಪ್ರಯಾಣಿಸುತ್ತಿದ್ದದ್ದನ್ನು ಪತ್ತೆಹಚ್ಚಿ, ಒಟ್ಟು 6,68,610 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಅಲ್ಲದೆ, ಕರ್ತವ್ಯಲೋಪ ಹಿನ್ನೆಲೆ ಕಂಡಕ್ಟರ್‌ಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತುಕೊಂಡು ಪ್ರಯಾಣ ಮಾಡುತ್ತಿದ್ದ 438 ಪುರುಷ ಪ್ರಯಾಣಿಕರಿಗೆ ಬಿಎಂಟಿಸಿಯ ತಪಾಸಣಾ ಸಿಬ್ಬಂದಿ ದಂಡ ವಿಧಿಸಿದ್ದಾರೆ ಮತ್ತು ಕರ್ನಾಟಕ ಮೋಟಾರು ವಾಹನಗಳ ನಿಯಮಗಳಿಗೆ ಅನುಗುಣವಾಗಿ 43,800 ರೂಪಾಯಿ ದಂಡವನ್ನು ವಸೂಲಿ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Read More

ಬೆಂಗಳೂರು:- ಅಶೋಕ್ – ವಿಶ್ವನಾಥ್ ನಡುವಿನ ಸಮಸ್ಯೆ ಇಂದೇ ಪರಿಹಾರವಾಗಲಿದೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಯಲ್ಲಿ ಯಾವುದೇ ರೀತಿಯ ಭಿನ್ನಮತ ಉದ್ಭವವಾಗಿಲ್ಲ, ಪ್ರತಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಶಾಸಕ ವಿಶ್ವನಾಥ್ ನಡುವೆ ಅಭಿಪ್ರಾಯ ಬೇಧವಿದೆಯೇ ಹೊರತು ಭಿನ್ನಮತವಲ್ಲ ಎಂದರು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ್ದು ಹಾಗೂ ಕೆಲ ತಪ್ಪು ನಿರ್ಧಾರಗಳಿಂದಾಗಿ ಬಿಜೆಪಿ ಸೋಲಿಗೆ ಕಾರಣವಾಯಿತು, ಆತ್ಮಾವಲೋಕನ ಮಾಡಿಕೊಳ್ಳಬೇಕು. ಅದನ್ನು ಬಿಟ್ಟು ಯಡಿಯೂರಪ್ಪ ವಿರುದ್ಧ ಮಾತನಾಡಿದರೆ ದೊಡ್ಡವರಾಗಿಬಿಡುತ್ತೀರಾ? ಉತ್ತರ ಕರ್ನಾಟಕದ ಜನ ವಿಜಯೇಂದ್ರ ಆಯ್ಕೆ ಸ್ವಾಗತ ಮಾಡಿದ್ದಾರೆ. ಯಡಿಯೂರಪ್ಪ ಆ ಭಾಗಕ್ಕೆ ಹೋದಲ್ಲಿ ಜನ ಸ್ವಾಗತ ಮಾಡುತ್ತಾರೆ ವಿನಾಃ ಕಾರಣ ಯಡಿಯೂರಪ್ಪ ಕುಟುಂಬದ ವಿರುದ್ಧ ಆರೋಪ ಮಾಡುವುದನ್ನು ಕೈಬಿಡಬೇಕು. ಇದು ಸರಿಯಲ್ಲ. ನಿಲ್ಲಿಸಬೇಕು, ಇಲ್ಲದೇ ಇದ್ದಲ್ಲಿ, ನಾವೂ ಸಭೆ ಸೇರುತ್ತೇವೆ, ನಮಗೂ ಗೊತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಎಚ್ಚರಿಕೆ ನೀಡಿದರು.

Read More

ಪೀಣ್ಯ ದಾಸರಹಳ್ಳಿ:’ ದೂರದ ಊರುಗಳಿಂದ ಬಂದು ದಾಖಲಾದ ಒಳರೋಗಿಗಳನ್ನು ವಿಚಾರಿಸಿ ಅವರಿಗೆ ಧೈರ್ಯ ತುಂಬಿ ಹಣ್ಣು ಹಂಪಲುಗಳನ್ನು ನೀಡುತ್ತಿದ್ದೇವೆ. ಇವರ ಆರೋಗ್ಯ ಬೇಗ ಗುಣಮುಖವಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ”ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು. ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ವಿಜಯಕುಮಾರ್ ಮತ್ತು ಭರತ್ ಸೌಂದರ್ಯ ಅವರ ನೇತೃತ್ವದಲ್ಲಿ ಆಯೋಜಿಸಲಾದ ಶಾಸಕ ಎಸ್. ಮುನಿರಾಜು ಅವರ ‘ಅಭಿಮಾನೋತ್ಸವ’ ಸಮಾರಂಭದಲ್ಲಿ ಸಪ್ತಗಿರಿ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ನೀಡಿ ಮಾತನಾಡಿದರು. ಸಂಘ ಸಂಸ್ಥೆಗಳು, ಗಣ್ಯರು, ಸಾಹಿತಿಗಳು, ಅಭಿಮಾನಿಗಳು ಆಗಮಿಸಿ ಪುಸ್ತಕಗಳನ್ನು ನೀಡಿ ಶುಭ ಕೋರಿದ್ದಾರೆ. ಈ ಪುಸ್ತಕಗಳನ್ನು ನಾನು ಸರ್ಕಾರಿ ಶಾಲಾ-ಕಾಲೇಜುಗಳಿಗೆ ನೀಡುವ ಮೂಲಕ ಪುಸ್ತಕ ಪ್ರೀತಿಯನ್ನು ಬೆಳೆಸಲು ನೆರವಾಗುತ್ತೇನೆ’ ಎಂದರು. ಕ್ಷೇತ್ರದ ಯುವ ಮೋರ್ಚ ಪ್ರಧಾನ ಕಾರ್ಯದರ್ಶಿ ಭರತ್ ಸೌಂದರ್ಯ ಮಾತನಾಡಿ’ ಬೆಳಿಗ್ಗೆಯಿಂದ ಸಾವಿರಾರು ಅಭಿಮಾನಿಗಳು ಪುಸ್ತಕಗಳನ್ನು ನೀಡಿದ್ದಾರೆ. ನಮ್ಮ ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ನೇಹಿತರಲ್ಲ ಸೇರಿ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಪ್ರತಿ ವರ್ಷದಂತೆ ಸಪ್ತಗಿರಿ ಆಸ್ಪತ್ರೆಯಲ್ಲಿ ಬಡ…

Read More