Author: AIN Author

ಬೆಂಗಳೂರು:- ಇಂದಿನಿಂದ ರಾಜ್ಯದ ದಕ್ಷಿಣ ಒಳನಡಿನಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಇಂದಿನಿಂದ ಕೆಲವು ದಿನಗಳ ಕಾಲ ತಂಪು ಗಾಳಿ, ಮೋಡ ಕವಿದ ವಾತಾವರಣ ಉಂಟಾಗಲಿದೆ. ಉಳಿದಂತೆ ಇಲ್ಲಿ ಒಂದೆರಡು ಕಡೆ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಮಳೆ ಮುನ್ಸೂಚನೆ ಇಲ್ಲ. ಇಲ್ಲಿ ಅಧಿಕ ತಾಪಮಾನ ಉಂಟಾಗಲಿದ್ದು, ಶುಷ್ಕ ವಾತಾವರಣ ಮುಂದುವರಿಯಲಿದೆ. ಕೆಲವು ದಿನಗಳಲ್ಲಿ ಬೆಳಗ್ಗೆ ಮತ್ತು ತಡರಾತ್ರಿ ಚಳಿ ವಾತಾವರಣ ಇರಬಹುದು ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ

Read More

ಚಾಮರಾಜನಗರ:- ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಮಲೆಮಹದೇಶ್ವರಬೆಟ್ಟದಲ್ಲಿ ಕಡೆ ಕಾರ್ತಿಕ ಸೋಮವಾರದ ಅಂಗವಾಗಿ ಮಲೆ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಪುನಸ್ಕಾರಗಳು ವಿಜೃಂಭಣೆಯಿಂದ ನಡೆದವು. ಕಡೆಯ ಕಾರ್ತಿಕ ಮಾಧ ಪ್ರಯುಕ್ತ ಸೋಮವಾರ ಮಾದಪ್ಪನ ದೇವಾಲಯದ ಆವರಣದಲ್ಲಿ ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಲಾಗಿತ್ತು. ಮಾದಪ್ಪನ ಮೂರ್ತಿಗೆ ಹೂವಿನ ಅಲಂಕಾರದೊಂದಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಕಡೆಯ ಕಾರ್ತಿಕ ಮಾಸದ ಪ್ರಯುಕ್ತ ಎಲ್ಲೇಲ್ಲೂ ಜನಸಾಗರವೇ ಹರಿಯಿತು. ಬೆಟ್ಟದ ತುಂಬೆಲ್ಲಾ ಭಕ್ತರ ಉಘೇ ಉಘೆ ಮಾದಪ್ಪ ಎಂಬ ಝೇಂಕಾರ ನಾದ ಮೊಳಗಿತ್ತು. ಭಕ್ತ ಸಾಗರದಿಂದ ಪವಾಡ ಪುರುಷ ಮಾದಪ್ಪನ ಬೆಟ್ಟ ಮುಳುಗಿದೆ. ಮಲೆಮಹದೇಶ್ವರಬೆಟ್ಟ ಅಭಿವೃದ್ದಿ ಪ್ರಾಧಿಕಾರದಿಂದ ಭಕ್ತರಿಗೆ ಸಕಲ ಸೌಲಭ್ಯ ಹಮ್ಮಿಕೊಳ್ಳಲಾಗಿತ್ತು ಎನ್ನಲಾಗಿದೆ.

Read More

ಚಾಮರಾಜನಗರ:- ಮನೆ ಮುಂದೆ ನಿಲ್ಲಿಸಿದ್ದ ಎಲೆಕ್ಟ್ರಿಕ್​ ಸ್ಕೂಟರ್ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಘಟನೆ ಚಾಮರಾಜನಗರದ ಮುಬಾರಕ್ ಮೊಹಲ್ಲಾದಲ್ಲಿ ತಡರಾತ್ರಿ ನಡೆದಿದೆ. ಮುಬಾರಕ್ ಮೊಹಲ್ಲಾ ನಿವಾಸಿ ಅಸಾದುಲ್ಲಾ ಎಂಬವರು ತಮ್ಮ ಮನೆ ಮುಂದೆ ನಿಲ್ಲಿಸಿದ್ದ ಇ-ಸ್ಕೂಟರ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡಿದೆ. ನೋಡ ನೋಡುತ್ತಿದ್ದಂತೆ ಬೆಂಕಿ ವ್ಯಾಪಿಸಿ ಹೊತ್ತಿ ಉರಿದಿದ್ದು, ಸ್ಥಳೀಯರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಕೆಲ ತಿಂಗಳುಗಳ ಹಿಂದೆ ಚಾಮರಾಜನಗರ ತಾಲೂಕಿನ ಅರಕಲವಾಡಿ ಗ್ರಾಮದಲ್ಲಿ ಚಾರ್ಜ್​ ಮಾಡಿ‌ ನಿಲ್ಲಿಸಿದ್ದ ಇ-ಸ್ಕೂಟರ್​ವೊಂದು ಹೊತ್ತಿ ಉರಿದು ಆತಂಕ ಸೃಷ್ಟಿಸಿತ್ತು. ಮುಬಾರಕ್ ಮೊಹಲ್ಲಾದಲ್ಲಿ ನಡೆದ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Read More

ಬೆಂಗಳೂರು:- ಹಿಂದೂಗಳನ್ನು ಅಡಿಯಾಳುಗಳೆಂದ ಜಮೀರ್ ರಾಜೀನಾಮೆ ನೀಡಲಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ. ಸಚಿವ ಜಮೀರ್‌ ಅಹ್ಮದ್‌ ಅವರು ಹೈದರಾಬಾದ್‌ನ ಮುಸ್ಲಿಮರೇ ಸೇರಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಆಡಿದ ಮಾತಿನ ಅರ್ಥ ʻʻಹಿಂದುಗಳು ಮುಸ್ಲಿಮರ ಅಡಿಯಾಳುಗಳುʼ ಎಂದೇ ಆಗಿದೆ. ಹೀಗೆ ಸ್ಪೀಕರ್‌ ಸ್ಥಾನವನ್ನು ಮುಂದಿಟ್ಟುಕೊಂಡು ಅವರು ಹಿಂದು ಮತ್ತು ಮುಸ್ಲಿಮರ ನಡುವೆ ದ್ವೇಷ ಹುಟ್ಟಿಸುವ ಕೆಲಸ ಮಾಡಿದ್ದಾರೆ, ಇದನ್ನು ಕಾಂಗ್ರೆಸ್‌ನವರು ಸಮರ್ಥಿಸುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು. ಹಿಂದು ದ್ವೇಷ ಪ್ರಕಟಿಸಿದ ಜಮೀರ್‌ ಅಹಮದ್‌ ಖಾನ್‌ ಅವರನ್ನು ವಜಾಗೊಳಿಸಬೇಕು, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಬಿಜೆಪಿ ಸದಸ್ಯರು ಸೋಮವಾರ ಬೆಳಗ್ಗೆ ವಿಧಾನಸಭೆಯಲ್ಲಿ ಗದ್ದಲವೆಬ್ಬಿಸಿದರು. ಜಮೀರ್‌ ಅಹಮದ್‌ ಖಾನ್‌ ಪ್ರಶ್ನೆಗೆ ಉತ್ತರ ನೀಡಲು ನಿಂತಾಗ ಆಕ್ಷೇಪಿಸಿದರು. ಬಿಜೆಪಿ ಗದ್ದಲದಿಂದಾಗಿ ಸ್ಪೀಕರ್‌ ಖಾದರ್‌ ಅವರು ಸಂಧಾನ ಸಭೆ ನಡೆಸಿದರೂ ಫಲ ದೊರೆಯಲಿಲ್ಲ. ಬಳಿಕವೂ ಪ್ರತಿಭಟನೆ, ಗದ್ದಲ ಮುಂದುವರಿದಿತ್ತು. ಅದರ ನಡುವೆಯೇ ಸದನದ ಕಲಾಪ, ವಿಧೇಯಕಗಳ ಮಂಡನೆ ನಡೆದಿದೆ…

Read More

ಬೆಂಗಳೂರು:- ಹಿಂದು ʼಅಶ್ಲೀಲʼ ಪದ ಹೇಳಿಕೆ ನೀಡಿದ ಸಚಿವ ಸತೀಶ್ ಜಾರಕಿಹೊಳಿಗೆ ಕೋರ್ಟ್‌ ನೋಟಿಸ್ ನೀಡಿದೆ. ವಕೀಲ‌ ದಿಲೀಪ್ ಕುಮಾರ್ ಎಂಬುವವರು ದೂರು ನೀಡಿದ್ದರಿಂದ ಬೆಂಗಳೂರಿನ ಸೆಷನ್ಸ್ ಕೋರ್ಟ್‌ನಿಂದ ವಿಚಾರಣಗೆ ಹಾಜರಾಗುವಂತೆ ಸತೀಶ್‌ ಜಾರಕಿಹೊಳಿಗೆ ನೋಟಿಸ್‌ ನೀಡಲಾಗಿದೆ. 2022ರ ನವೆಂಬರ್‌ 7ರಂದು ಕಾರ್ಯಕ್ರಮವೊಂದರಲ್ಲಿ ಹಿಂದು ಪದಕ್ಕೆ ಆಶ್ಲೀಲ ಅರ್ಥವಿದೆ ಎಂದು ವಿವಾದಿತ ಹೇಳಿಕೆ ನೀಡಿದ್ದರು. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರ್ಟ್‌ಗೆ ವಕೀಲ‌ ದೂರು ನೀಡಿದ್ದಾರೆ. ಹಿಂದು ಧರ್ಮದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಸಚಿವ ಜಾರಕಿಹೊಳಿ ವಿರುದ್ಧ ಹಿಂದು ಸಂಘಟನೆಗಳು, ಬಿಜೆಪಿ ನಾಯಕರು ವ್ಯಾಪಕ ಆಕ್ರೋಶ ಹೊರಹಾಕಿದ್ದರು. ನಂತರ ಸಚಿವರು ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದರು. ಹಲವು ತಿಂಗಳ ಬಳಿಕ ಪ್ರಕರಣದಲ್ಲಿ ಸಚಿವರ ವಿರುದ್ಧ ದೂರು ದಾಖಲಾಗಿದೆ.

Read More

#AINlivenews #ainlivenews #KannadaNews #BreakingNews #BreakingNewsinKannada #KannadaLiveTv #KannadaNewsLive #KarnatakaNewsLive #KannadaNewsChannel #LiveNews #LatestNews #KarnatakaNews #KarnatakaLatestNews #KannadaLatestNews #NewsinKannada #KannadaNewsToday #KannadaNewsHeadlines #OnlineNewsKannada #NewsHeadlines ಬೆಂಗಳೂರು #nammabengaluru #bengaluru #karnataka #bangalore #kannada #bescom #bda #bbmp #breakingnews # namma Metro #bmtc #KSRTC  #crimenews #bignews #karnatakatody #instagram #kannadamemes #photography #bengalurulive #siddaramaiah #DKShivakumar  #DK Shivkumaŗ  #Hd Kumarswamy #bengalurudiaries #bengaluruadda #bengalurunews ಜಿಲ್ಲೆ #karnataka #kannada #india #bangalore #sandalwood #mysore #kerala #bengaluru #yash #karnatakatourism #photography #kannadaactress #mumbai #instagram #dboss #kicchasudeep #mandya #udupi #banglore #love #darshan #tamilnadu #mangalore #official #delhi #kannadamovies #hubli #kannadamusically #sandalwoodactress #mysuru #hubballi #hubli ರಾಷ್ಟ್ರೀಯ #india #instagram #love #photography #instagood #mumbai #kerala #bhfyp #follow #nature #indian #travel #likeforlikes #delhi #like #fashion #photooftheday…

Read More

ಬೆಂಗಳೂರು:- ಬೆಂಗಳೂರಿನ ಜೆಜೆ ನಗರದ ನಾಲ್ಕನೆ ಕ್ರಾಸ್‌ನಲ್ಲಿ ಪತ್ನಿ ತನ್ನನ್ನು ದೂರ ಮಾಡಿದ್ದರಿಂದ ಡಿಪ್ರೆಷನ್‌ಗೆ ಒಳಗಾದ ವ್ಯಕ್ತಿಯೊಬ್ಬ ಆಕೆಯ ಸಂಬಂಧಿ ಮಹಿಳೆಯನ್ನು ಕೊಲೆ ಮಾಡಿದ್ದಾನೆ. ಪರ್ವಿನ್ ತಾಜ್ ಹಲ್ಲೆಗೀಡಾಗಿ ಮೃತಪಟ್ಟ ಮಹಿಳೆ‌. ಮಹಮ್ಮದ್ ಜುನೈದ್ ಎಂಬಾತನಿಂದ ಕೊಲೆ‌ ನಡೆದಿದೆ. ಆರೋಪಿ ಮತ್ತು ಮೃತ ಮಹಿಳೆ ಸಂಬಂಧಿಗಳಾಗಿದ್ದಾರೆ. ಜುನೈದ್ ಹಾಗೂ ಆತನ ಪತ್ನಿ ಜಗಳವಾಡಿಕೊಂಡಿದ್ದರು. ಈ ವಿಚಾರ ಪೊಲೀಸ್ ಠಾಣೆ ಮೆಟ್ಟಿಲೇರಿ ಇಬ್ಬರಿಗೂ ಬುದ್ಧಿವಾದ ಹೇಳಿ ಕಳಿಸಲಾಗಿತ್ತು. ಇದಾದ ಮೇಲೆ ಜುನೈದ್‌ ಪತ್ನಿಯಿಂದ ದೂರಾಗಿದ್ದ. ಪತ್ನಿಯಿಂದ ದೂರವಾಗಿ ಡಿಪ್ರೆಶನ್‌ಗೆ ಒಳಗಾಗಿದ್ದ. ಪತ್ನಿ ದೂರವಾದುದರಿಂದ ಮಾನಸಿಕವಾಗಿ ನೊಂದಿದ್ದ. ಈ ವೇಳೆ ಆತ ಪರ್ವಿನ್ ತಾಜ್‌ಗೆ ಹತ್ತಿರವಾಗಿದ್ದ. ಪರ್ವಿನ್ ತಾಜ್ ಆರೋಪಿಯ ಪತ್ನಿಯ ಸಂಬಂಧಿಯಾಗಿದ್ದಳು. ಆದರೆ ಇತ್ತೀಚೆಗೆ ಪರ್ವಿನ್ ಸಹ ಜುನೈದ್‌ನನ್ನು ದೂರವಿಟ್ಟಿದ್ದಳು. ಈ ವಿಚಾರಕ್ಕೆ ಕೋಪಗೊಂಡಿದ್ದ ಆರೋಪಿ ಜುನೈದ್, ಚಾಕು ಸಹಿತ ನೇರವಾಗಿ ಪರ್ವಿನ್ ಮನೆಗೆ ಹೋಗಿದ್ದ. ಪರ್ವಿನ್ ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಪರ್ವಿನ್‌ ಮೃತ ದೇಹವನ್ನು…

Read More

ನೆಲಮಂಗಲ:- ಬೆಂಗಳೂರು ಉತ್ತರ ತಾಲೂಕಿ ಗುಣಿ ಅಗ್ರಹಾರ ಗ್ರಾಮದಲ್ಲಿ ಮನೆಯ ಬಳಿ ಹುಲ್ಲು ಮೇಯಲು ಬಂದ ಹಸುಗಳ ಮೇಲೆ ಕ್ರೈಸ್ತ ವೃದ್ಧೆಯೊಬ್ಬರು ಆಯಸಿಡ್ ಎರಚಿ ಪೈಶಾಚಿಕ ಕೃತ್ಯವೆಸಗಿರುವ ಘಟನೆ ಜರುಗಿದೆ ಆಯಸಿಡ್ ಎರಚಿದ ಹಿನ್ನೆಲೆಯಲ್ಲಿ 10ಕ್ಕೂ ಹೆಚ್ಚು ಹಸುಗಳು ಗಾಯಗೊಂಡಿದ್ದು, ನೋವು ತಾಳಲಾರದೇ ರೋದಿಸುತ್ತಿವೆ. ಗುಣಿ ಅಗ್ರಹಾರ ಗ್ರಾಮದ ನಿವಾಸಿ ಗ್ರೀಸ್ ಜೋಸೆಫ್ ಎಂಬ ಕ್ರೈಸ್ತ ವೃದ್ಧ ಮಹಿಳೆ ವಿರುದ್ಧ ಅಮಾನವೀಯ ಕೃತ್ಯ ಎಸಗಿದ ಆರೋಪ ಕೇಳಿಬಂದಿದೆ. ಆಯಸಿಡ್ ದಾಳಿಯಿಂದ ಗ್ರಾಮದ ಕೃಷ್ಣ, ನಾಗರಾಜು, ಹನುಮಂತ ರಾಜು ಮತ್ತು ಶ್ರೀರಾಮ್ ಎಂಬುವರ ಹಸುಗಳು ಗಾಯಗೊಂಡಿವೆ. ಹೊಟ್ಟೆ ಮತ್ತು ಬೆನ್ನಿನ ಭಾಗದಲ್ಲಿ ತೀವ್ರವಾಗಿ ಗಾಯಗಳಾಗಿರುವುದರಿಂದ ನೋವು ತಾಳಲಾರದೇ ಮೂಕ ಪ್ರಾಣಿಗಳು ರೋದಿಸುತ್ತಿವೆ. ಮನೆ ಬಳಿ ಹುಲ್ಲು ಮೇಯಲು ಬಂದ ಹಸುಗಳ ಮೇಲೆ ಟೈಲ್ಸ್ ಕ್ಲೀನ್ ಮಾಡುವ ಆಯಸಿಡ್ ಅನ್ನು ವೃದ್ಧೆ ಎರಚಿದ್ದಾಳೆ

Read More

ಲಕ್ನೋ: ಬಿಎಸ್‍ಪಿ  (BSP) ನಾಯಕಿ ಮಾಯಾವತಿಯವರು (mayawati) ತಮ್ಮ ಸೋದರಳಿಯ ಆಕಾಶ್ ಆನಂದ್ (Akash Anand) ಅವರನ್ನು ಉತ್ತರಾಧಿಕಾರಿಯಾಗಿ ಘೋಷಣೆ ಮಾಡಿದ್ದಾರೆ. ಪಕ್ಷದ ಪದಾಧಿಕಾರಿಗಳ ಪ್ರಮುಖ ಸಭೆಯ ನಂತರ ಈ ಮಹತ್ವದ ಬೆಳವಣಿಗೆ ನಡೆದಿದೆ. ಮಾಯಾವತಿಯವರು ತಮ್ಮ ರಾಜಕೀಯ ಉತ್ತರಾಧಿಕಾರಿಯನ್ನು ಘೋಷಣೆ ಮಾಡಿದರು. ಸದ್ಯಕ್ಕೆ ಉತ್ತರ ಪ್ರದೇಶದ (Uttarapradesh) ಮಾಜಿ ಮುಖ್ಯಮಂತ್ರಿ ಮಾಯಾವತಿಯವರೇ ಪಕ್ಷದ ಮುಖ್ಯಸ್ಥರಾಗಿ ಮುಂದುವರಿಯಲಿದ್ದು, https://ainlivenews.com/notice-to-shah-rukh-khan-ajay-akshay-kumar-do-you-know-why/ ಇವರ ನಂತರ ಸೋದರಳಿಯ ಆಕಾಶ್ ಆನಂದ್ ಪಕ್ಷದ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ. ಬಿಎಸ್‍ಪಿಯ ರಾಷ್ಟ್ರೀಯ ಸಂಯೋಜಕರಾಗಿರುವ ಆಕಾಶ್ ಇತ್ತೀಚೆಗೆ ನಡೆದ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‍ಪಿಯ ಉಸ್ತುವಾರಿಯಾಗಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಮಧ್ಯಪ್ರದೇಶ, ಛತ್ತೀಸ್‍ಗಢ ಮತ್ತು ತೆಲಂಗಾಣದಲ್ಲಿ (Telangana) ಬಿಎಸ್‍ಪಿ ಪ್ರಚಾರಕ್ಕಾಗಿ ಕೆಲಸ ಮಾಡಿದ್ದಾರೆ.

Read More

ಬೆಂಗಳೂರು:- ಬಿಜೆಪಿ ಅವಧಿಯ ವಿವಿಧ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ’ ಎಂಬ ಆರೋಪಗಳ ಕುರಿತಂತೆ ತನಿಖೆ ನಡೆಸಲು ವಿಶೇಷ ತನಿಖಾ ಸಮಿತಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ. ‘ಹೊಸ ಸರ್ಕಾರವು ಈ ಹಿಂದಿನ ಸರ್ಕಾರದ ನಿಲುವಿಗಿಂತಲೂ ಭಿನ್ನವಾದ ನಿಲುವು ಕೈಗೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ರಾಜ್ಯ ಸರ್ಕಾರ ತನ್ನ ಕ್ರಮದ ಕುರಿತು ಸಮರ್ಥನೆ ನೀಡಬೇಕಿದೆ. ಅದಕ್ಕಾಗಿ ತನಿಖಾ ಸಮಿತಿ ಮತ್ತು ಏಕವ್ಯಕ್ತಿ ತನಿಖಾ ಆಯೋಗ ರಚನೆ ಮಾಡಿರುವ ಸರ್ಕಾರದ ಆದೇಶ, ಅದಕ್ಕೆ ಸಂಬಂಧಿಸಿದ ಮುಂದಿನ ಎಲ್ಲಾ ಪ್ರಕ್ರಿಯೆಗಳಿಗೆ ತಡೆ ನೀಡಲಾಗಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

Read More