Author: AIN Author

ಬೆಂಗಳೂರು:- ಬಿಜೆಪಿ ಅವಧಿಯ ವಿವಿಧ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ’ ಎಂಬ ಆರೋಪಗಳ ಕುರಿತಂತೆ ತನಿಖೆ ನಡೆಸಲು ವಿಶೇಷ ತನಿಖಾ ಸಮಿತಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ. ‘ಹೊಸ ಸರ್ಕಾರವು ಈ ಹಿಂದಿನ ಸರ್ಕಾರದ ನಿಲುವಿಗಿಂತಲೂ ಭಿನ್ನವಾದ ನಿಲುವು ಕೈಗೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ರಾಜ್ಯ ಸರ್ಕಾರ ತನ್ನ ಕ್ರಮದ ಕುರಿತು ಸಮರ್ಥನೆ ನೀಡಬೇಕಿದೆ. ಅದಕ್ಕಾಗಿ ತನಿಖಾ ಸಮಿತಿ ಮತ್ತು ಏಕವ್ಯಕ್ತಿ ತನಿಖಾ ಆಯೋಗ ರಚನೆ ಮಾಡಿರುವ ಸರ್ಕಾರದ ಆದೇಶ, ಅದಕ್ಕೆ ಸಂಬಂಧಿಸಿದ ಮುಂದಿನ ಎಲ್ಲಾ ಪ್ರಕ್ರಿಯೆಗಳಿಗೆ ತಡೆ ನೀಡಲಾಗಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

Read More

ಬೆಂಗಳೂರು:- ಅಕ್ರಮವಾಗಿ ಜೂಜು ದಂಧೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಸಿಗುತ್ತಿದ್ದಂತೆ ಹಲಸೂರು ರಸ್ತೆಯಲ್ಲಿರುವ ವೈಎಂಐಎ ಕ್ಲಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು ಜೂಜು ಆಡುತ್ತಿದ್ದವರನ್ನ ವಶಕ್ಕೆ ಪಡೆದಿದ್ದಾರೆ. ಭಾರತೀನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ರಮವಾಗಿ ಅಂದರ್ ಬಾಹರ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ನಗರದ ಕ್ಲಬ್​ವೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಅನೇಕರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ ಎನ್ನಲಾಗಿದೆ.

Read More

ಟಾಲಿವುಡ್ ನಟಿ ಸಮಂತಾ (Samantha) ಅವರು ಅನಾರೋಗ್ಯದ ಸಮಸ್ಯೆಯಿಂದ ಬ್ರೇಕ್ ತೆಗೆದುಕೊಂಡಿದ್ದರು. ಇದೀಗ ಕಿರುತೆರೆಗೆ ಗ್ರ್ಯಾಂಡ್ ಆಗಿ ಸ್ಟೈಲೀಶ್ ಲುಕ್‌ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಮಾಡ್ರರ್ನ್ ಲುಕ್‌ನಲ್ಲಿ ಸಮಂತಾ ಮಿಂಚಿದ್ದಾರೆ. ಕಿರುತೆರೆಯ ರ‍್ಯಾಪ್ ರಿಯಾಲಿಟಿ ಶೋನಲ್ಲಿ ಸಮಂತಾ ಭಾಗವಹಿಸಿದ್ದಾರೆ. ಗಾಯಕ ಹನಿ ಸಿಂಗ್ ಜೊತೆ ಸಮಂತಾ ಜಡ್ಜ್ ಆಗಿ ಸಮಂತಾ ಸಾಥ್ ನೀಡಿದ್ದಾರೆ. ಕಾರ್ಯಕ್ರಮದ ಕೆಲ ಫೋಟೋಗಳನ್ನ ಹಂಚಿಕೊಂಡಿದ್ದಾರೆ. ಸಮಂತಾ ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ. ಸ್ಟೈಲೀಶ್ ಲುಕ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿರೋದು ಅಭಿಮಾನಿಗಳ ಗಮನ ಸೆಳೆದಿದೆ. ಸಮಂತಾ ನಯಾ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ನಾಗಚೈತನ್ಯ (Nagachaitanya) ಜೊತೆಗಿನ ಡಿವೋರ್ಸ್‌ ನಂತರ ಮತ್ತಷ್ಟು ವೃತ್ತಿರಂಗದಲ್ಲಿ ಗೆದ್ದು ತೋರಿಸಿದ್ದರು. ‘ಪುಷ್ಪ’ (Pushpa) ಸಿನಿಮಾದಲ್ಲಿ ಸಮಂತಾ ಸೊಂಟ ಬಳುಕಿಸಿ ಮನೆಮಾತಾದರು. ಮತ್ತೆ ಸಮಂತಾ ಎಂಟ್ರಿಗೆ ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಸಮಂತಾ (Samantha) ಕೈಯಲ್ಲಿ ಟಾಲಿವುಡ್ ಸಿನಿಮಾ, ಬಾಲಿವುಡ್ ಚಿತ್ರಗಳು ಕೈಯಲ್ಲಿವೆ. ಮತ್ತೆ ಅದ್ಯಾವಾಗ ಕಮ್‌ಬ್ಯಾಕ್ ಬಗ್ಗೆ ನಟಿ ಗುಡ್ ನ್ಯೂಸ್ ಕೊಡುತ್ತಾರೆ ಅಂತ ಕಾಯುತ್ತಿದ್ದಾರೆ.

Read More

ಚಿಕ್ಕಮಗಳೂರು :- ಬಿಜೆಪಿ ಪಕ್ಷದ ಮುಖಂಡರು ಈ ಬಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ನಿಲ್ಲುವಂತೆ ಮಾಜಿ ಸಚಿವ ಸಿ.ಟಿ.ರವಿ ಅವರನ್ನು ಆಗ್ರಹಿಸಿದ್ದಾರೆ. ಸೋಮವಾರ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಈ ಒತ್ತಾಯ ಕೇಳಿಬಂತು. ಮುಖಂಡರು ಸಿ.ಟಿ.ರವಿ ಸಮ್ಮುಖದಲ್ಲೇ ಅವರನ್ನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡ ಹೇರಿದರು. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಜಿಲ್ಲೆಯ 5 ಕ್ಷೇತ್ರಗಳಲ್ಲಿ ಸೋತಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಇದೇ ಫಲಿತಾಂಶ ಬಂದರೆ ಪಕ್ಷಕ್ಕೆ ತುಂಬಾ ಹಾನಿಯಾಗಲಿದೆ. ಅಂಥ ಪರಿಸ್ಥಿತಿ ಬರಬಾರದು, ಪಕ್ಷ ಇನ್ನಷ್ಟು ಸಂಘಟನಾತ್ಮಕವಾಗಿ ಬೆಳೆಯಬೇಕಾದರೆ ತಾವೇ ಸ್ಪರ್ಧೆ ಮಾಡಬೇಕು ಎಂದು ಆಗ್ರಹಿಸಿದರು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಿ.ಟಿ.ರವಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡುವಂತೆ ಕೋರಿ ಪಕ್ಷದ ವರಿಷ್ಠರಿಗೆ ಆಗ್ರಹಿಸಲು ಜಿಲ್ಲೆಯಿಂದ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದ ಮುಖಂಡರು, ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆ ಮಾಡಲಿ, ನೀವು ಇಲ್ಲೇ ಸ್ಪರ್ಧೆ ಮಾಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ…

Read More

ಬೆಂಗಳೂರು:- ರಾಜ್ಯದ ಸರಕಾರಿ ಶಾಲೆಗಳ ಪೈಕಿ ಇನ್ನೂ 69 ಶಾಲೆಗಳಲ್ಲಿ ಶೌಚಾಲಯ ಹಾಗೂ ನೀರಿನ ವ್ಯವಸ್ಥೆ ಇಲ್ಲ ಎಂಬುವುದು ಸಮೀಕ್ಷೆಯಲ್ಲಿ ಬಯಲಾಗಿದೆ. ಶೌಚಾಲಯ ಮತ್ತು ಕುಡಿಯುವ ನೀರು ಲಭ್ಯತೆ ಕೊರತೆ ಎದುರಿಸುತ್ತಿದ್ದ ರಾಜ್ಯದ 551 ಶಾಲೆಗಳಲ್ಲಿ ಸಮೀಕ್ಷೆ ನಡೆಸಲಾಗಿದ್ದು, ಅವುಗಳಲ್ಲಿ 482 ಶಾಲೆಗಳ ಸ್ಥಿತಿ ತೃಪ್ತಿಕರವಾಗಿದೆ ಮತ್ತು 69 ಶಾಲೆಗಳ ಸ್ಥಿತಿ ತೃಪ್ತಿಕರವಾಗಿಲ್ಲ ಎಂಬುದು ಸಮೀಕ್ಷೆಯಿಂದ ಕಂಡು ಬಂದಿದೆ ಎಂದು ಶಾಲಾ ಶಿಕ್ಷಣ ಇಲಾಖೆಯೇ ಹೈಕೋರ್ಟ್‌ಗೆ ಸೋಮವಾರ ತಿಳಿಸಿದೆ. ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತಂತೆ ಮಾಧ್ಯಮಗಳ ವರದಿ ಆಧರಿಸಿ ಹೈಕೋರ್ಟ್‌ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಲೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಆಗ ಸರ್ಕಾರಿ ವಕೀಲರು, ನ್ಯಾಯಾಲಯದ ನಿರ್ದೇಶನದಂತೆ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರದ ಪ್ರತಿನಿಧಿಗಳ ಸಮಕ್ಷಮದಲ್ಲಿ ಶಾಲೆಗಳ ಸಮೀಕ್ಷೆ ನಡೆಸಲಾಗಿದ್ದು, ಅದರ ವರದಿಯನ್ನು ಶಿಕ್ಷಣ ಇಲಾಖೆ ಆಯುಕ್ತೆ ಬಿ. ಬಿ. ಕಾವೇರಿ…

Read More

ಸೈಬರ್ ಕ್ರೈಮ್ಗಳು ಎಂಬುದು ಈಗೀಗ ಸಾಮಾನ್ಯವಾಗಿ ಬಿಟ್ಟಿದೆ. ಈ ಡಿಜಿಟಲ್ ಜಮಾನದಲ್ಲಿ ಸೈಬರ್ ದಾಳಿಕೋರರು ಅಮಾಯಕನ್ನು ಬಲೆಗೆ ಕೆಡವಲು ನಾನಾ ರೀತಿಯಲ್ಲಿ ಹವಣಿಸುತ್ತಿರುತ್ತಾರೆ. ಜೊತೆಗೆ ಹ್ಯಾಕರ್ಗಳು ಸುಲಭವಾಗಿ ಜನರ ಮಾಹಿತಿಗೆ ಕನ್ನ ಹಾಕಿ ಅವುಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಮೋಸದ ಜಾಲದಲ್ಲಿ ಸಿಲುಕಿ ನಲುಗಿದವರು ಅದೆಷ್ಟೋ ಮಂದಿ. ಈ ಸೈಬರ್ ಕ್ರಿಮಿನಲ್ಗಳ ಕಾಟಕ್ಕೆ ಸಾಕಷ್ಟು ಮಂದಿ ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ ಎಂಬುದು ಕೂಡಾ ಸತ್ಯ. ನಿಮ್ಮ ವೈಯಕ್ತಿಕ, ಸಾಮಾಜಿಕ ಮಾಧ್ಯಮ ಅಥವಾ ಕೆಲಸದ ಖಾತೆಗಳನ್ನು ರಕ್ಷಿಸಲು ಸರಿಯಾದ ಮತ್ತು ಸದೃಢ ಪಾಸ್ವರ್ಡ್ ಅನ್ನು ಆಯ್ಕೆ ಮಾಡಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಕಡಿಮೆ ಅವಧಿಯಲ್ಲಿಯೇ ಅಪಾಯಕ್ಕೆ ಗುರಿಯಾಗುವ ಸಾಧ್ಯತೆಗಳನ್ನೂ ಅಲ್ಲಗಳೆಯುವಂತಿಲ್ಲ. ಯಾಕೆಂದರೆ ಸೈಬರ್ ಅಪರಾಧಿಗಳು ಸುಲಭವಾಗಿ ಹ್ಯಾಕ್ ಮಾಡಬಹುದಾದ ಪಾಸ್ವರ್ಡ್ ಅನ್ನು ಆಯ್ಕೆ ಮಾಡುವುದು ಜನರು ಮಾಡುವ ತಪ್ಪುಗಳಲ್ಲಿ ಒಂದಾಗಿದೆ. NordPassನ ವರದಿಯು ಭಾರತೀಯರು ಹೆಚ್ಚು ಬಳಸುವ 20 ಪಾಸ್ವರ್ಡ್ಗಳ ಪಟ್ಟಿಯನ್ನು ಬಹಿರಂಗಪಡಿಸಿದೆ ಮತ್ತು ಹ್ಯಾಕರ್ಗಳು ಅವುಗಳನ್ನು ಭೇದಿಸಲು ಹೆಚ್ಚು…

Read More

ಬೆಳಗಾವಿ:- ಪ್ರತಿಪಕ್ಷದ ನಾಯಕ ಅಶೋಕಗೆ ಬಿಜೆಪಿ ಶಾಸಕರ ಬೆಂಬಲವೇ ಇಲ್ಲ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಪ್ರಕಟಣೆ ಬಿಡುಗಡೆ ಮಾಡಿದ ಅವರು ಪ್ರತಿಪಕ್ಷದ ನಾಯಕ ಅಶೋಕಗೆ ಬಿಜೆಪಿ ಶಾಸಕರ ಬೆಂಬಲವೇ ಇಲ್ಲ. ಅವರದೇ ಪಕ್ಷದ ಶಾಸಕರು ಪ್ರತಿದಿನ ಅವರಿಗೆ ಮಂಗಳಾರತಿ ಮಾಡುತ್ತಿದ್ದಾರೆ. ಯಾವ ಸ್ಥಾನ ಸಿಕ್ಕಿಲ್ಲವೆಂದು ಬಸನಗೌಡ ಪಾಟೀಲ ಯತ್ನಾಳ ಯಡಿಯೂರಪ್ಪರಿಂದ ಹಿಡಿದು ಎಲ್ಲರ ವಿರುದ್ಧ ಹರಿಹಾಯುತ್ತಿದ್ದಾರೆ. ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಈ ರೀತಿ ಮಾಡಲು ಪ್ರಯತ್ನಿಸುತ್ತಿದೆ ಅಷ್ಟೇ ಎಂದು ಜರೆದಿದ್ದಾರೆ. ಬೆಳಗಾವಿಯ ಅಧಿವೇಶನದಲ್ಲಿ ಈ ಭಾಗದ ಸಮಸ್ಯೆಗಳ ಪರಿಹಾರ ಕಂಡುಕೊಳ್ಳಲು ಕರೆಯಲಾಗಿದೆ. ಆದರೆ ಚರ್ಚೆಗೆ ಅವಕಾಶ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ದಮ್ಮು ತಾಕತ್ ಬಗ್ಗೆ ಮಾತನಾಡುವ ಬಿಜೆಪಿಗರು ಕಲಾಪದಲ್ಲಿ ಭಾಗವಹಿಸುವ ಧೈರ್ಯ ತೋರಬೇಕು. ಆದರೆ ಸರ್ಕಾರವೇನಾದರೂ ತಪ್ಪು ಮಾಡಿದ್ದರೆ ಎತ್ತಿ ತೋರಿಸುವ ತಾಕತ್ತು ಪ್ರತಿಪಕ್ಷಕ್ಕೆ ಇಲ್ಲ. ಆಡಳಿತ ಪಕ್ಷವನ್ನು ಎದುರಿಸುವ ಧೈರ್ಯವೇ ಬಿಜೆಪಿಗಿಲ್ಲ. ರಾಜ್ಯದಲ್ಲಿ ಸಮರ್ಥ ಪ್ರತಿಪಕ್ಷ ಇರಬೇಕು. ಬಿಜೆಪಿ ಧರಣಿ ಕೈಬಿಟ್ಟು ಕಲಾಪದಲ್ಲಿ ಭಾಗವಹಿಸಬೇಕೆಂದು ಮನವಿ…

Read More

ಹುಬ್ಬಳ್ಳಿ: ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಸವಿತಾ ಸಮಾಜ ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಹಿಂದುಳಿದಿದೆ. ಸವಿತಾ ಸಮಾಜಕ್ಕೆ ಪ್ರತ್ಯೇಕ ಮೀಸಲಾತಿ ಕಲ್ಪಿಸಬೇಕು. ಸರ್ಕಾರ ಕ್ಷೌರಿಕ ತರಬೇತಿ ಕೇಂದ್ರ ಹಾಗೂ ನಾದಸ್ವರ ಡೋಲು ತರಬೇತಿ ಕೇಂದ್ರ ಸ್ಥಾಪಿಸಬೇಕೆಂದು ಹೀಗೆ ಹಲವಾರು ಬೇಡಿಕೆಗಳಿ ಆಗ್ರಹಿಸಿ ಸವಿತಾ ಸಮಾಜದ ಪೀಠಾಧ್ಯಕ್ಷ ಸವಿತಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ಹುಬ್ಬಳ್ಳಿಯಿಂದ ಬೆಳಗಾವಿ ವರೆಗೆ ಪಾದಯಾತ್ರೆ ಹೊರಟಿದ್ದಾರೆ. ಇನ್ನು ಹಳೇ ಹುಬ್ಬಳ್ಳಿಯಿಂದ ಆರಂಭವಾದ ಪಾದಯಾತ್ರೆ, ಸಾವಿರಾರು ಸವಿತಾ ಸಮಾದವರು ಸೇರಿದ್ದು, ಮುಖ್ಯ ರಸ್ತೆ ಮೂಲಕ ಪಾದಯಾತ್ರೆ ಹೊರಟಿದ್ದಾರೆ. ಇನ್ನು ಬೆಳಗಾವಿಯಲ್ಲಿ ನಡೆಯುತ್ತಿರು ಅಧಿವೇಶನದಲ್ಲಿ ಸವಿತಾ ಸಮಾಜದ ಬೇಡಿಕೆಗಳ ಬಗ್ಗೆ ಚರ್ಚೆ ಮಾಡಬೇಕು. ಮತ್ತು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸುವರ್ಣ ಸೌಧದ ಮುಂದೆ ಧರಣಿ ಸತ್ಯಾಗ್ರಹ ಮಾಡಲಾಗುತ್ತದೆಂದು ತಿಳಿಸಿದರು.

Read More

ಲಕ್ನೋ: ಶಾಲೆಗೆ ಹೋಗಲು ನಿರಾಕರಿಸಿದ್ದಕ್ಕೆ ತಾಯಿ ಹೊಡೆದಳೆಂದು ನೊಂದ ಅಪ್ರಾಪ್ತೆಯೊಬ್ಬಳು ರೈಲಿನಡಿ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರಪ್ರದೇಶದ (Uttarpradesh) ಮಥುರಾದಲ್ಲಿ ನಡೆದಿದೆ. 13 ವರ್ಷದ ಬಾಲಕಿಗೆ ಶಾಲೆಗೆ ಹೋಗಲು ಇಷ್ಟವಿರಲಿಲ್ಲ. ಹೀಗಾಗಿ ಆಕೆ ಅಂದು ಶಾಲೆಗೆ ಹೋಗಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. https://ainlivenews.com/notice-to-shah-rukh-khan-ajay-akshay-kumar-do-you-know-why/ ಇತ್ತ ಶಾಲೆಗೆ ಹೋಗುವಂತೆ ಹೇಳಿ ತಾಯಿ ಮಗಳಿಗೆ ಬೈದು, ಹೊಡೆದಿದ್ದಾರೆ. ಅಂತೆಯೇ ಬಾಲಕಿ ಶಾಲೆಗೆ ತೆರಳಿ ಅಲ್ಲಿಂದ ನೇರವಾಗಿ ರೈಲ್ವೆ ಹಳಿಯತ್ತ ಹೋಗಿದ್ದಾಳೆ. ಬಳಿಕ ರೈಲು ಬರುತ್ತಿದ್ದಂತೆಯೇ ಹಳಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ. ಈ ಸಂಬಂಧ ಅಲ್ಲಿಯ ಎಸ್‍ಪಿ ಪ್ರಕಾಶ್ ಸಿಂಗ್ ಪ್ರತಿಕ್ರಿಯಿಸಿ, ಶಾಲೆಗೆ ಹೋಗಲು ನಿರಾಕರಿಸಿದ್ದಕ್ಕೆ ಬಾಲಕಿಗೆ ಆಕೆಯ ತಾಯಿ ಹೊಡೆದಿದ್ದಾರೆ. ಇದೇ ಕೋಪದಿಂದ ಶಾಲೆಗೆ ಹೋಗಿರುವ ಆಕೆ ರೈಲಿನಡಿ ಹಾರಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

Read More

ಸುವರ್ಣಸೌಧ:- ನಟಿ ಲೀಲಾವತಿ ಪ್ರತಿಮೆ ಅವರ ಆಸ್ಪತ್ರೆ ಮುಂದೆ ನಿರ್ಮಿಸಲು ಚಿಂತನೆ ನಡೆಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆಶಿ ಹೇಳಿದ್ದಾರೆ. ಲೀಲಾವತಿ ನಿಧನಕ್ಕೆ ವಿಧಾನ ಮಂಡಲದ ಉಭಯ ಸದನಗಳಲ್ಲಿ ಸಂತಾಪ ಸೂಚಿಸಿ ನುಡಿನಮನ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಆರ್‌. ಅಶೋಕ್‌ ಹಾಗೂ ಶಾಸಕಿ, ನಟಿ ಉಮಾಶ್ರೀ, ‘ಜಾನುವಾರು ರಕ್ಷಣೆಯಲ್ಲಿ ಲೀಲಾವತಿ ಪಾತ್ರ ಮಹತ್ವದ್ದು. ಅವರು ನಿರ್ಮಿಸಿರುವ ಪಶು ಆಸ್ಪತ್ರೆಯ ಮುಂದೆ ಪ್ರತಿಮೆ ಸ್ಥಾಪಿಸಬೇಕು’ ಎಂದು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಡಿಕೆಶಿ, ‘ಲೀಲಾವತಿ ಅವರ ಬಳಿ ಹಣವಿಲ್ಲದಿದ್ದರೂ ಹೃದಯವಂತಿಯಲ್ಲಿ ಬಹಳ ದೊಡ್ಡ ಶ್ರೀಮಂತರು. ತಮ್ಮ ಬದುಕಿನಲ್ಲಿ ಅನೇಕ ಕಷ್ಟ ಬಂದರೂ ಅವರು ಪರೋಪಕಾರಕ ಜೀವನ ನಡೆಸಿದರು.ಲೀಲಾವತಿ ಅವರ ಬಳಿ ಹಣವಿಲ್ಲದಿದ್ದರೂ ಅವರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ಕೊಟ್ಟು ಹೋಗಿದ್ದಾರೆ. ಹೀಗಾಗಿ ಅವರು ನಿಜಕ್ಕೂ ಧನವಂತರು. ಅವರು ಕಟ್ಟಿರುವ ಪಶುವೈದ್ಯ ಆಸ್ಪತ್ರೆ ಮುಂಭಾಗದಲ್ಲಿ ಅವರ ಪ್ರತಿಮೆ ನಿರ್ಮಾಣ ಮಾಡುವ ಕುರಿತು ಸಿಎಂ ಜತೆ ಚರ್ಚಿಸಲಾಗುವುದು’ ಎಂದರು.

Read More