Author: AIN Author

ಬೆಳಗಾವಿ:- ಕೆಎಫ್ ಡಿ ಸಮಸ್ಯೆಯನ್ನು ಸರ್ಕಾರ ಗಂಭೀರ ಪರಿಗಣಿಸಿದೆ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿ ಮಾತನಾಡಿದ ಅವರು, ಮಂಗನ ಕಾಯಿಲೆ ತಡೆಗೆ ಶೀಘ್ರದಲ್ಲೇ ಹೊಸ ಲಸಿಕೆ ನೀಡುವ ಗುರಿಯನ್ನು ಸರ್ಕಾರ ಹೊಂದಿದೆ. ಮಲೆನಾಡಿಗರನ್ನು ಬಿಟ್ಟು ಬಿಡದೆ ಕಾಡುತ್ತಿರುವ ಕೆಎಫ್ ಡಿ ಸಮಸ್ಯೆಯನ್ನು ಸರ್ಕಾರ ಗಂಭೀರ ಪರಿಗಣಿಸಿದೆ. ಹಾಗಾಗಿ, ಐಸಿಎಂಆರ್ ನೊಂದಿಗೆ ಚರ್ಚೆ ನಡೆಸಿದ್ದು, ಹೊಸ ಲಸಿಕೆ ಸಂಶೋಧನೆ ನಡೆಸಲಾಗುತ್ತಿದೆ ಎಂದರು. ಮಂಗನ ಕಾಯಿಲೆ ತಡೆಗೆ ನೀಡುತ್ತಿದ್ದ ಲಸಿಕೆ ವಿತರಣೆಯನ್ನು ಸ್ಥಗಿತ ಮಾಡಲಾಗಿದೆ. ಏಕೆಂದರೆ ಈ ಲಸಿಕೆ ಯಾವುದೇ ರೀತಿಯ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರಲಿಲ್ಲ. ಹೀಗಾಗಿ, ಖಾಸಗಿ ಕಂಪನಿಯ ಸಹಯೋಗದೊಂದಿಗೆ ಸಂಶೋಧನೆ ನಡೆಸಲಾಗುತ್ತಿದೆ ಎಂದು ಹೇಳಿದರು. ಮಂಗನ ಕಾಯಿಲೆ ಅತೀ ಕಡಿಮೆ ಜನರಿಗೆ ಬಾಸುತ್ತಿರುವ ಕಾರಣದಿಂದಲೇ ಇತರೆ ಕಂಪನಿಗಳು ಈ ಲಸಿಕೆ ಕಂಡು ಹಿಡಿಯಲು ಮುಂದಾಗುತ್ತಿಲ್ಲ.ಆದರೂ, ಸರ್ಕಾರ ಸಂಶೋಧನೆ ಗೆ ಧನ ಸಹಾಯ ನೀಡುವುದಾಗಿಯೂ ತಿಳಿಸಿದ್ದು, ಶೀಘ್ರವಾಗಿ ಹೊಸ ಲಸಿಕೆಯನ್ನು ರೋಗಿಗಳಿಗೆ ನೀಡಲಾಗುವುದು ಎಂದು ಹೇಳಿದ್ದಾರೆ.

Read More

ಬೆಂಗಳೂರು:- ಮಂಗಳಮುಖಿಯರಿಗೂ ರೇಷನ್ ಕಾರ್ಡ್ ಕೊಡಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಇತ್ತೀಚೆಗೆ ಸರ್ಕಾರದ ರೇಷನ್ ಕಾರ್ಡ್ ವಿತರಣೆ ಸೇರಿದಂತೆ ಹಲವು ಯೋಜನೆಗಳಿಗೆ ತೃತೀಯ ಲಿಂಗೀಯರು ಅರ್ಜಿ ಹಾಕಲು ಅರ್ಹತೆ ಇದ್ದರೂ ಸಹ ಸರ್ಕಾರದ ಅಂತರ್ಜಾಲದಲ್ಲಿ ಇದಕ್ಕೆ ಅವಕಾಶ ಇಲ್ಲದೆ ಇರುವುದು ಇವರಿಗೆ ತೀವ್ರ ಹಿನ್ನಡೆಯಾಗಿದೆ ಎಂದರು. ಅಂತರ್ಜಾಲದಲ್ಲಿ ಅರ್ಜಿ ಹಾಕಿದಾಗ: ಗಂಡು/ಹೆಣ್ಣು ಎರಡೇ ಆಯ್ಕೆಗಳಿದ್ದು, ಅವರು ಇವೆರಡಕ್ಕೂ ಸೇರದ ಕಾರಣ ಅರ್ಜಿ ಹಾಕಲು ಸಾಧ್ಯವಾಗುತ್ತಿಲ್ಲ. ಇದಲ್ಲದೆ, ಸರ್ಕಾರದ ಬೇರೆ ಯೋಜನೆಗಳಿಗೂ ಸಹ ಇವರಿಗೆ ಈ ರೀತಿಯಾದ ಸಮಸ್ಯೆ ಉದ್ಭವಿಸುತ್ತಿದೆ. ಸಮಾಜವು ಹಾಗೂ ಸ್ವಂತ ಕುಟುಂಬವು ಇವರನ್ನು ಕೀಳಾಗಿ ಕಾಣುವ ಹಾಗೂ ಬಹಿಷ್ಕಾರ ಮಾಡುವುದರಿಂದ ಬಹುತೇಕ ತೃತೀಯ ಲಿಂಗಿಗಳು ತಮ್ಮ ಕುಟುಂಬವನ್ನು ಬಿಟ್ಟು ಪ್ರತ್ಯೇಕವಾಗಿದ್ದಾರೆ. ಕುಟುಂಬದ ಜೊತೆ ಇಲ್ಲ ಎಂಬ ತಾಂತ್ರಿಕ ನೆಪವನ್ನಿಟ್ಟು, ಇವರಿಗೆ ಪಡಿತರ ಚೀಟಿ ಕೂಡ ನಿರಾಕರಿಸಲಾಗುತ್ತಿದೆ. ಪಡಿತರ ಚೀಟಿಗೆ ಅರ್ಜಿ ಹಾಕುವ ಮಂಗಳಮುಖಿಯರು ತಮ್ಮ ಕುಟುಂಬದ ಜೊತೆಗಿಲ್ಲ ಎಂಬ…

Read More

ಸ್ನೇಹಿತ್ ಗೌಡ ಬಿಗ್ ಬಾಸ್ ಸೀಸನ್ 10ರಲ್ಲಿ ಎರಡನೇ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದರು. ಅಷ್ಟೇ ಅಲ್ಲದೆ, ಸೀಸನ್’ನ ಮೊದಲ ಕ್ಯಾಪ್ಟನ್ ಆಗಿಯೂ ಆಯ್ಕೆಯಾಗಿದ್ರು ಸ್ನೇಹಿತ್. ಆದರೆ ಕೆಲವೊಂದು ಎಡವಟ್ಟು, ಪಕ್ಷಪಾತ ಧೋರಣೆಯಿಂದ ಹಿಗ್ಗಾಮುಗ್ಗಾ ಟ್ರೋಲ್ ಆಗಿದ್ದ ಸ್ನೇಹಿತ್ ಇದೀಗ ದೊಡ್ಮನೆಯಿಂದ ಹೊರಬಂದಿದ್ದಾರೆ. ಸ್ನೇಹಿತ್ ಅಭಿನಯದ ಮೊದಲ ಸಿನಿಮಾ ಚಿರವಾದ ನೆನಪು 2016 ರಲ್ಲಿ ಬಿಡುಗಡೆಯಾಗಿತ್ತು. ಅಂದಹಾಗೆ ಸ್ನೇಹಿತ್ ಹಿನ್ನೆಲೆ ತಿಳಿಯುವುದಾದರೆ, 19 ಆಗಸ್ಟ್ 1995 ರಂದು ಬೆಂಗಳೂರಿನಲ್ಲಿ ಜನಿಸಿದ ಸ್ನೇಹಿತ್, ವಿದ್ಯಾಭ್ಯಾಸವನ್ನೂ ಸಹ ರಾಜ್ಯ ರಾಜಧಾನಿಯಲ್ಲಿ ಪೂರೈಸಿದರು. ಸ್ನೇಹಿತ್ ಗೌಡ ಅವರ ತಂದೆಯ ಹೆಸರು ಮಾಯಾತೆರೆ ಸುರೇಶ್. ಇವರು ಕನ್ನಡ ಚಲನಚಿತ್ರ ನಿರ್ಮಾಪಕರು. ಸ್ನೇಹಿತ್ ಗೌಡ ಅವರ ತಮ್ಮ ಆರಂಭಿಕ ಶಿಕ್ಷಣವನ್ನು ಬೆಂಗಳೂರಿನ ಸೇಂಟ್ ಕ್ಲಾರೆಟ್ ಶಾಲೆಯಲ್ಲಿ ಪೂರ್ಣಗೊಳಿಸಿದರೆ, ಪದವಿ ಶಿಕ್ಷಣವನ್ನು ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಪೂರೈಸಿದರು. ಇನ್ನು ಸ್ನೇಹಿತ್ ಗೌಡ ಅಭಿನಯಿಸಿದ ಮೊದಲ ಟಿವಿ ಶೋ ನಮ್ಮನೆ ಯುವರಾಣಿ. ಇದರಲ್ಲಿ ಅವರು ಪ್ರಣಾಮ್ ರಾಜಗುರು ಆಗಿ ಕಾಣಿಸಿಕೊಂಡಿದ್ದರು. . ಅಂದಹಾಗೆ ಸ್ನೇಹಿತ್…

Read More

ಹವಾಮಾನ ಪರಿಸ್ಥಿತಿಗಳು, ಆಹಾರ ಪದ್ಧತಿ ಮುಂತಾದ ವಿವಿಧ ಕಾರಣಗಳಿಂದಾಗಿ ಕೂದಲು ಉದುರುವ ಸಮಸ್ಯೆ ಉಂಟಾಗುತ್ತದೆ. ತಲೆಹೊಟ್ಟಿನ ಸಮಸ್ಯೆಯೂ ಹೆಚ್ಚಾಗಿದೆ. ಈ ಸಮಸ್ಯೆಗಳನ್ನು ಪರಿಹರಿಸಲು, ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ತೈಲಗಳನ್ನು ಬಳಸಿಕೊಂಡು ನಾವು ಸಾವಿರಾರು ರೂಪಾಯಿಗಳನ್ನು ಖರ್ಚು ಮಾಡುತ್ತೇವೆ. ಇದಲ್ಲದೆ, ನಾವು ನಮ್ಮ ಮನೆಯಲ್ಲಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಎಣ್ಣೆಯನ್ನು ಬಳಸಿದರೆ, ನಾವು ಬಹಳ ಕಡಿಮೆ ಸಮಯದಲ್ಲಿ ಉತ್ತಮ ಫಲಿತಾಂಶವನ್ನು ಪಡೆಯಬಹುದು. ಈ ಎಣ್ಣೆಯನ್ನು ತಯಾರಿಸಿದ ನಂತರ, ಇದನ್ನು ಒಂದು ತಿಂಗಳವರೆಗೆ ಬಳಸಬಹುದು. ಎಣ್ಣೆಯನ್ನು ತಯಾರಿಸುವ ವಿಧಾನ 5 ಕೆಂಪು ದಾಸವಾಳದ ಹೂವುಗಳನ್ನು ತೆಗೆದುಕೊಂಡು ದಳಗಳನ್ನು ಬೇರ್ಪಡಿಸಿ. ಅಲೋವೆರಾ ಪದರವನ್ನು ತೆಗೆದುಕೊಂಡು ಎರಡೂ ಬದಿಗಳಲ್ಲಿ ಅಂಚುಗಳನ್ನು ಕತ್ತರಿಸಿ ಸಣ್ಣ ತುಂಡುಗಳಾಗಿ ಕತ್ತರಿಸಿ. ಒಲೆಯ ಮೇಲೆ ಒಂದು ಬಟ್ಟಲನ್ನು ಇರಿಸಿ ಮತ್ತು ಒಂದು ಕಪ್ ಎಳ್ಳೆಣ್ಣೆ ಅಥವಾ ತೆಂಗಿನ ಎಣ್ಣೆಯನ್ನು ಸೇರಿಸಿ ಮತ್ತು ದಾಸವಾಳದ ದಳಗಳು, ಅಲೋವೆರಾ ತುಂಡುಗಳು, ಎರಡು ಚಮಚ ಮೆಂತ್ಯ ಬೀಜಗಳನ್ನು ಸೇರಿಸಿ ಕುದಿಸಿ. ದಾಸವಾಳ ಹೂವಿನ ದಳಗಳನ್ನು ಅಲೋವೆರಾ ಕಪ್ಪು…

Read More

ನವದೆಹಲಿ: ತಂಬಾಕು (Tobacco) ಕಂಪನಿಗಳನ್ನು ಅನುಮೋದಿಸಿದ್ದಕ್ಕೆ ನಟರಾದ ಶಾರುಖ್ ಖಾನ್ (Shah Rukh Khan), ಅಕ್ಷಯ್ ಕುಮಾರ್ (Akshay Kumar) ಹಾಗೂ ಅಜಯ್ ದೇವಗನ್ (Ajay Devgn) ಅವರಿಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ನೋಟಿಸ್ ನೀಡಿದೆ. ನ್ಯಾಯಾಂಗ ನಿಂದನೆ ಅರ್ಜಿಗೆ ಪ್ರತಿಕ್ರಿಯಿಸಿದ ಡೆಪ್ಯುಟಿ ಸಾಲಿಸಿಟರ್ ಜನರಲ್ ಎಸ್‌ಬಿ ಪಾಂಡೆ ಅಕ್ಟೋಬರ್ 20 ರಂದು ತಂಬಾಕು ಕಂಪನಿಗಳನ್ನು ಅನುಮೋದಿಸಿದ್ದಕ್ಕಾಗಿ ನಟರಾದ ಶಾರುಖ್ ಖಾನ್, ಅಕ್ಷಯ್ ಕುಮಾರ್ ಮತ್ತು ಅಜಯ್ ದೇವಗನ್ ಅವರಿಗೆ ಸಿಸಿಪಿಎ ನೋಟಿಸ್ ನೀಡಿದೆ ಎಂದು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠಕ್ಕೆ ತಿಳಿಸಿದ್ದಾರೆ. https://ainlivenews.com/representative-traveled-330-km-on-a-rented-bike-and-went-to-the-assembly/ ವಕೀಲ ಮೋತಿಲಾಲ್ ಯಾದವ್ ಅವರು ಸಾರ್ವಜನಿಕರ ಆರೋಗ್ಯಕ್ಕೆ ಹಾನಿಕಾರಕವಾದ ಕೆಲವು ಉತ್ಪನ್ನಗಳು, ವಸ್ತುಗಳ ಜಾಹೀರಾತುಗಳು ಅಥವಾ ಅನುಮೋದನೆಗಳಲ್ಲಿ ಸೆಲೆಬ್ರಿಟಿಗಳು, ವಿಶೇಷವಾಗಿ ಪದ್ಮ ಪ್ರಶಸ್ತಿ ಪುರಸ್ಕೃತರು ಭಾಗವಹಿಸುವ ಕುರಿತು ಸಮಸ್ಯೆಗಳನ್ನು ಉಲ್ಲೇಖಿಸಿ ಅರ್ಜಿ ಸಲ್ಲಿಸಿದ್ದರು. ಸೆಪ್ಟೆಂಬರ್ 2022ರ ಆದೇಶವನ್ನು ಪಾಲಿಸದಿದ್ದಕ್ಕಾಗಿ ನ್ಯಾಯಾಂಗ ನಿಂದನೆ ಕ್ರಮವನ್ನು ಕೋರಿ ಸಲ್ಲಿಸಿದ ಮನವಿಯಲ್ಲಿ ನ್ಯಾಯಾಲಯವು ಆಗಸ್ಟ್ 2023 ರಲ್ಲಿ ಕ್ಯಾಬಿನೆಟ್…

Read More

ಕಾಗವಾಡ : ತಾಲೂಕಿನ ಉಗಾರ್ ಶುಗರ್ಸ್ ಕಾರ್ಖಾನೆ ಕಲುಷಿತ ನೀರು ರೈತರ ಹೊಲಗಳಿಗೆ ನುಗ್ಗುತ್ತಿದೆ ಕಾರ್ಖಾನೆಯ ಹೋಗೆ ಹಾಗು ಡಸ್ಟ್ ನಿಂದ ಜನರ ಬದುಕಿಗೆ ಕಂಟಕವಾಗಿದೆ. ಕಬ್ಬು ಹಂಗಾಮಿನ ಅವಧಿಯಲ್ಲಿ ಪ್ರತಿ ದಿನ 15000 ಟನ್ ಕಬ್ಬು ನುರಿಸುವ ಸಾಮರ್ಥ್ಯ ಹೊಂದಿದ ಪ್ರತಿಷ್ಠಿತ ಉಗಾರ್ ಸಕ್ಕರೆ ಖಾರ್ಕಾನೆಯಿಂದ ಕಲುಷಿತ ನೀರಿ ಭೂಮಿಗೆ ಬಿಡುವುದರಿಂದ ಪಕ್ಕದ ಬೋರವೆಲ್ ಬಾವಿಗಳಿಗೆ ಮಿಶ್ರಣವಾಗಿ ನೀರು ಕಲುಷಿತಗೊಳ್ಳುತ್ತಿದೆ ಎಂದು ಸ್ಥಳೀಯರಿಂದ ಗಂಭೀರ ಆರೋಪ ಕೇಳಿಬಂದಿದೆ. ಕಲುಷಿತ ವಿಷನೀರು ಸೇವಿಸಿ, ಹಾಗು ಉಸಿರಾಡಲು ಕೂಡ ಶುದ್ಧ ವಾತಾವರಣವಿಲ್ಲದೆ ಜನಜೀವನ ಅಸ್ತವ್ಯಸ್ತವಾಗಿ ಜನರು ರೋಗಗಳಿಗೆ ತುತ್ತಾಗಿ ಆಸ್ಪತ್ರೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಸಮಸ್ಸೆ ಹೇಳಿಕೊಂಡು ಖಾರ್ಕಾನೆಯ ಅಧಿಕಾರಿಗಳಿಗೆ ಕೇಳಿದರೆ ಉಡಾಫೆ ಉತ್ತರ ನೀಡುತ್ತಾರೆ ಅಂತಾ ಸ್ಥಳೀಯರು ಆರೋಪಿಸುತ್ತಿದ್ದಾರೆ .ಇನ್ನು ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಖಾರ್ಕಾನೆಗೆ ಹೇಗೆ ಅನುಮತಿ ನೀಡಿದ್ದಾರೆ ! ಪರಿಶೀಲಿಸಿ ಕಾರ್ಖಾನೆಗೆ ನೋಟೀಸ್ ಜಾರಿ ಮಾಡಿಲ್ಲ ಅಂತಾ ಅಧಿಕಾರಿಗಳಿಗೆ ಸ್ಥಳೀಯರು ಹಿಡಿಶಾಪ ಹಾಕಿದ್ದಾರೆ. ಕೂಡಲೆ ತಾಲೂಕಡಳಿತ ಹಾಗೂ…

Read More

ಹುಬ್ಬಳ್ಳಿ:-ಪ್ರಧಾನಿ ಮೋದಿಯೇ ಕರ್ನಾಟಕದ ದುಸ್ಥಿತಿಗೆ ಕಾರಣ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. ರಾಜ್ಯದ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಅದರಿಂದಾಗಿ ರಾಜ್ಯಕ್ಕೆ ಪದೇ-ಪದೇ ಅನ್ಯಾಯವಾಗುತ್ತಿದೆ ಎಂದರು. ರಾಜ್ಯದ ದುಸ್ಥಿತಿಗೆ ಪ್ರಧಾನಿ ಮೋದಿಯೇ ಕಾರಣರಾಗಿದ್ದು, ಕೇಂದ್ರ ಸಚಿವರು, ಅಧಿಕಾರಿಗಳನ್ನು ಪ್ರಧಾನಿ ಕಿವಿ ಹಿಂಡುವ ಕೆಲಸ ಮಾಡಬೇಕು. ಕಾಂಗ್ರೆಸ್ ನಾಯಕರು ಮಾಡುವ ಟೀಕೆಯನ್ನು ಅರಗಿಸಿಕೊಳ್ಳಲು ಆಗಲ್ಲಾ ಅಂದರೆ ಅದು ನಿಮ್ಮ ಅಹಂಕಾರವನ್ನು ತೋರಿಸುತ್ತಿದೆ ಎಂದು ಪರೋಕ್ಷವಾಗಿ ಸಚಿವ ಜೋಶಿ ವಿರುದ್ಧ ಕಿಡಿಕಾರಿದರು. ಇತ್ತೀಚಿಗೆ ಮೋದಿಯವರಿಗೆ ಅಧಿಕಾರದ ಮದ ಜಾಸ್ತಿಯಾದಂತೆ ಕಾಣಿಸುತ್ತದೆ ಎಂದು ಶೆಟ್ಟರ್ ಟೀಕಿಸಿದರು. ಹಿಂದಿನ ಸರ್ಕಾರದಲ್ಲಿ ಶೇ. 40ರಷ್ಟು ಭ್ರಷ್ಟಾಚಾರ ನಡೆದಿರುವ ಬಗ್ಗೆ ಕೆಂಪಣ್ಣ ಅವರು ಆರೋಪಿಸಿ, ಕೆಲ ದಾಖಲೆ ನೀಡಿದ್ದಾರೆ. ಆ ಕುರಿತು ನಾಗಮೋಹನದಾಸ್ ಸಮಿತಿ ನಿಷ್ಪಕ್ಷವಾಗಿ ತನಿಖೆ ನಡೆಸುತ್ತಿದೆ. ಬಿಜೆಪಿಯವರು ಕಾಂಗ್ರೆಸ್ ಬಗ್ಗೆ ಭ್ರಷ್ಟಾಚಾರದ ಆರೋಪ ಮಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ತಪ್ಪಿತಸ್ಥರು ಯಾವುದೇ ಪಕ್ಷದವರಿರಲಿ ಅವರಿಗೆ ಶಿಕ್ಷೆಯಾಗಲೇಬೇಕು ಎಂದು ಶೆಟ್ಟರ್ ಆಗ್ರಹಿಸಿದರು.

Read More

ಬೆಂಗಳೂರು: ಬಿಜೆಪಿ ಮುಖಂಡ ಪೃಥ್ವಿಸಿಂಗ್ ದೂರನ್ನು ತಿರುಚುವ ಪ್ರಯತ್ನ ಪೊಲೀಸ್‌ ಮಾಡಿದ್ದಾರೆ. ನಾವು ಕೊಟ್ಟ ದೂರನ್ನು ತಮಗೆಷ್ಟು ಬೇಕು ಅಷ್ಟು ತಗೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆರೋಪಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಏನ್ ಬೇಕಿದೆ ಅಷ್ಟು ಮಾತ್ರ ಗೃಹ ಸಚಿವರು ಓದಿದ್ದಾರೆ. ಈ ವಿಚಾರ ಮುಂದಿಟ್ಟುಕೊಂಡು‌ ಹೋರಾಟ ಮಾಡುತ್ತೇವೆ ಎಂದರು. https://ainlivenews.com/representative-traveled-330-km-on-a-rented-bike-and-went-to-the-assembly/ ಅಶೋಕ ವಿಪಕ್ಷ ನಾಯಕ ಆಯ್ಕೆ ವಿರೋಧ ವಿಚಾರಕ್ಕೆ ಉತ್ತರಿಸಿದ ಅವರು, ರಾಜಕಾರಣದಲ್ಲಿ ಒಬ್ಬರು ನಾಯಕರ ಪರ, ವಿರೋಧ ಇರುತ್ತಾರೆ. ಒಬ್ಬರು ಆಯ್ಕೆಯಾದಾಗ ಹೀಗೆ ಹೇಳುತ್ತಾರೆ. ಹಾಗೇ ಕಾಂಗ್ರೆಸ್‌ನಲ್ಲೂ ಡಿಕೆಶಿ ಸಿದ್ದರಾಮಯ್ಯ, ಪರಮೇಶ್ವರ ಸಿದ್ದರಾಮಯ್ಯ ಪರ ವಿರೋಧ ಇದೆ. ಇವೆಲ್ಲವೂ ರಾಜಕಾರಣದಲ್ಲಿ ಕಾಮನ್ ಎಂದರು. ಸಭಾತ್ಯಾಗ ವಿಚಾರದಲ್ಲಿ ಹೊಂದಾಣಿಕೆ ಇಲ್ಲ ಎಂಬ ಪ್ರಶ್ನೆಗೆ ನಿನ್ನೆ ಯತ್ನಾಳ ಅವರು ನನ್ನ ಹತ್ತಿರ ಬಂದು ಹೇಳಿದರು. 

Read More

ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಸೋಲಾರ್ ತಂತಿ ಬೇಲಿ ಅಳವಡಿಕೆಗೆ ನಿರ್ಧರಿಸಿಲ್ಲ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿಂದು ಕಾಂಗ್ರೆಸ್ ಸದಸ್ಯ ಕೆ.ಹರೀಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವನ್ಯಪ್ರಾಣಿಗಳಿಗಾಗಿ ಅರಣ್ಯ ಪ್ರದೇಶಗಳ ಒಳಗೆ ನೀರಿನ ಲಭ್ಯತೆ ಹೆಚ್ಚಿಸಲು ರಕ್ಷಿತಾರಣ್ಯಗಳಲ್ಲಿ ಕೆರೆಗಳ ನಿರ್ಮಾಣ ಹಾಗೂ ಪುನಶ್ಚೇತನ ಗೊಳಿಸಿ ವನ್ಯಪ್ರಾಣಿಗಳ ಆವಾಸ ಸ್ಥಾನವನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ. ಇದರಿಂದ ಕಾಡಾನೆ ಹಾಗೂ ವನ್ಯಪ್ರಾಣಿಗಳು ಕಾಡಿನಿಂದ ಹೊರಗೆ ಬಾರದಂತೆ ತಡೆಯಲಾಗುತ್ತಿದೆ ಎಂದರು. ಅರಣ್ಯ ಪ್ರದೇಶಗಳಲ್ಲಿ ಹುಲ್ಲುಗಾವಲು ಸಂರಕ್ಷಣೆ ಹಾಗೂ ಅಭಿವೃದ್ಧಿಗೊಳಿಸಲು ಹೆಚ್ಚಿನ ಅರಣ್ಯ ಪ್ರದೇಶಗಳಲ್ಲಿ ದಟ್ಟವಾಗಿ ಬೆಳೆದ ಲಂಟಾನ ಮತ್ತು ಯುಪಟೋರಿಯಂ ಕಳೆಗಳಿಂದಾಗಿ ಹುಲ್ಲಿನ ಬೆಳವಣಿಗೆಗೆ ತೀವು ಅಡಚಣೆಯಾಗಿದೆ. ಅರಣ್ಯದಲ್ಲಿ ಹುಲ್ಲಿನ ಲಭ್ಯತೆ ಗಣನೀಯವಾಗಿ ಕಡಿಮೆಯಾಗಿರುವುದರಿಂದ ಹುಲ್ಲು ಬೆಳೆಯುವ ಪ್ರದೇಶಗಳಲ್ಲಿ ಬೆಳದಿರುವ ಲಂಟಾನ ಮತ್ತು ಯುಪಟೋರಿಯಂ ಕಳೆಗಳನ್ನು ಕಿತ್ತು ಸ್ವಚ್ಛಗೊಳಿಸಿ ಅರಣ್ಯಕ್ಕೆ ಪೂರಕವಾದ ಹುಲ್ಲು ಬೆಳೆಯಲು ಅನುವು ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು. ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಅರಣ್ಯದಂಚಿನಲ್ಲಿ…

Read More

ಬೆಂಗಳೂರು: ಮುಂದಿನ ವರ್ಷದಿಂದಲೇ ಶಾಲಾ ಮಕ್ಕಳಿಗೆ ಸೈಕಲ್ (Cycle) ವಿತರಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಭರವಸೆ ನೀಡಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ (Ravikumar) ಪ್ರಶ್ನೆಗೆ ಅವರು ಉತ್ತರಿಸಿದರು. ಶಾಲಾ ಮಕ್ಕಳಿಗೆ ಯಾಕೆ ಸೈಕಲ್ ಕೊಡ್ತಿಲ್ಲ? ಬಿಜೆಪಿ‌ ಸರ್ಕಾರ (BJP Government) ಸೈಕಲ್ ನಿಲ್ಲಿಸಿತ್ತು ಒಪ್ಪುತ್ತೇನೆ? ಅದಕ್ಕೆ ಜನ ನಮ್ಮನ್ನ ಇಲ್ಲಿಗೆ ಕೂರಿಸಿದ್ದಾರೆ. ಆದ್ರೆ ಈ ಸರ್ಕಾರಕ್ಕೆ ಸೈಕಲ್ ಕೊಡಲು ಹಣದ ಕೊರತೆ ಇದೆಯಾ? ಎಂದು ಪ್ರಶ್ನೆ ಮಾಡಿದರು. ಮಕ್ಕಳಿಗೆ ಶೂ, ಸಾಕ್ಸ್, ಸಮವಸ್ತ್ರಕ್ಕೆ 100 ರೂ. ಕೊಡ್ತಿದ್ದಾರೆ. ಖರ್ಚೀಫ್ ಗೆ ಕೊಡುವಷ್ಟು ಹಣ ಕೊಡ್ತಿದ್ದಾರೆ. ಇಷ್ಟು ಹಣ ಶೂ, ಸಾಕ್ಸ್, ಸಮವಸ್ತ್ರಕ್ಕೆ ಸಾಕಾಗುತ್ತದೆಯೇ? ಶೂ, ಸಾಕ್ಸ್ ಹಣ ಹೆಚ್ಚಳ ಮಾಡಬೇಕು ಅಂತ ಒತ್ತಾಯ ಮಾಡಿದರು.  https://ainlivenews.com/representative-traveled-330-km-on-a-rented-bike-and-went-to-the-assembly/ ಇದಕ್ಕೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, 2023-24ನೇ ಸಾಲಿನಲ್ಲಿ 55,43,828 ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ನೀಡಲಾಗಿದೆ. 45,45,749 ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ, ಸಾಕ್ಸ್ ವಿತರಿಸಲಾಗಿದೆ.…

Read More