Author: AIN Author

ಭೋಪಾಲ್: ಕಾರು ಖರೀದಿಸುವಷ್ಟು ಸಾಮರ್ಥ್ಯವಿಲ್ಲ ಎಂದು ನೂತನ ಶಾಸಕರೊಬ್ಬರು ಬೈಕ್‌ನಲ್ಲಿ ಸದನಕ್ಕೆ ತೆರಳುತ್ತಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಹೊಸದಾಗಿ ಆಯ್ಕೆಯಾದ ಭಾರತ್ ಆದಿವಾಸಿ ಪಾರ್ಟಿ (ಬಿಎಪಿ) ಶಾಸಕ ಕಮಲೇಶ್ವರ ದೊಡಿಯಾರ್ ಅವರು ಕಾರು ಖರೀದಿಸುವಷ್ಟು ಅನುಕೂಲಸ್ಥರಲ್ಲ. ಹೀಗಾಗಿ ಬೈಕ್‌ನಲ್ಲಿ ಸದನಕ್ಕೆ ತೆರಳಿದ್ದಾರೆ. ಬಿಎಪಿ ಪಕ್ಷದ ಏಕೈಕ ಶಾಸಕ ದೊಡಿಯಾರ್‌. ಮಧ್ಯಪ್ರದೇಶ ವಿಧಾನಸಭೆಗೆ ನವೆಂಬರ್‌ 17 ರಂದು ನಡೆದ ಚುನಾವಣೆಯಲ್ಲಿ ರತ್ನಂ ಜಿಲ್ಲೆಯ ಸೈಲಾನಾ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದರು. ಶಾಸಕರಾದ ನಂತರ ರಾಜ್ಯ ರಾಜಧಾನಿಗೆ ತಮ್ಮ ಮೊದಲ ಭೇಟಿಗೆ ಕಾರಿನ ವ್ಯವಸ್ಥೆ ಮಾಡಲು ಪ್ರಯತ್ನಿಸಿದರು. ಆದರೆ ಅದು ಸಿಗಲಿಲ್ಲ. ಅಂತಿಮವಾಗಿ ಅವರು ತಮ್ಮ ಸೋದರ ಮಾವನ ಬೈಕನ್ನು ಎರವಲು ಪಡೆದರು. ಅದರ ಮೇಲೆ “ಎಂಎಲ್ಎ” ಎಂಬ ಪದವಿರುವ ಸ್ಟಿಕರ್ ಅನ್ನು ಅಂಟಿಸಿ ಸಹವರ್ತಿಯೊಂದಿಗೆ 330 ಕಿಮೀ ಪ್ರಯಾಣ ಬೆಳೆಸಿ ಭೋಪಾಲ್‌ ತಲುಪಿದ್ದಾರೆ. ಭೋಪಾಲ್ ತಲುಪಿದ ನಂತರ ಎಂಎಲ್‌ಎ ರೆಸ್ಟ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಪ್ರಜಾಪ್ರಭುತ್ವದ ದೇಗುಲಕ್ಕೆ ಪೂಜೆ ಸಲ್ಲಿಸಲು ವಿಧಾನಸಭೆಯ ಪ್ರವೇಶ ದ್ವಾರದ…

Read More

ಬೆಂಗಳೂರು:- ನಗರದಲ್ಲಿ ಬೈಕ್ ಕಳ್ಳರ ಕಾಟ ಹೆಚ್ಚಾಗಿದೆ. ಕಳೆದ ಕೆಲ ದಿನಗಳಿಂದ ಜಯನಗರ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳರು ಆ್ಯಕ್ಟೀವ್ ಆಗಿದ್ದಾರೆ. ಕಳ್ಳರಿಂದ ಜಯನಗರ ಜನ ಬೇಸತ್ತು ಹೋಗಿದ್ದಾರೆ. ಪೊಲೀಸರಿಗೆ ದೂರು ನೀಡಿದ್ರೂ ಪ್ರಯೋಜನೆ ಇಲ್ಲ ಅಂತಾ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಕಳ್ಳರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜಯನಗರ 5ನೇ ಹಂತದಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ. ಕಳೆದ ಎರಡು ಮೂರು ವಾರಗಳಿಂದಲೂ ಜಯನಗರದಲ್ಲಿ ಕಳ್ಳರು ಆ್ಯಕ್ಟೀವ್ ಆಗಿದ್ದಾರೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೋಲಾರ :- ಜಿಲ್ಲೆಯ ಗಡಿ ಗ್ರಾಮಗಳ ಜನರಿಗೆ 60 ಕ್ಕೂ ಹೆಚ್ಚು ಕಾಡಾನೆಗಳ ಆತಂಕ ಹೆಚ್ಚಾಗಿದೆ. ಇದಕ್ಕೆ ಕಾರಣ, ತಮಿಳುನಾಡಿನ ಹೊಸೂರು ಅರಣ್ಯದಿಂದ 60ಕ್ಕೂ ಹೆಚ್ಚು ಕಾಡಾನೆಗಳು ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಅರಣ್ಯ ಪ್ರದೇಶದತ್ತ ಮುಖ ಮಾಡಿವೆ. ಈಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಹೀಗಾಗಿ ಜನರು ಮನೆಯಿಂದ ಹೊರ ಬಾರದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸೂಚನೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಜನರು ಮನೆಯಿಂದ ಹೊರ ಬಾರದಂತೆ ಕಾಮಸಮುದ್ರ ಪೊಲೀಸರು, ಅರಣ್ಯ ಸಿಬ್ಬಂದಿ ಮೈಕ್‌ ಮೂಲಕ ಸೂಚನೆ ನೀಡಿದ್ದಾರೆ

Read More

ಬಾಲಿವುಡ್ (Bollywood) ನ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ಕರಣ್ ಜೋಹಾರ್ (Karan Johar) ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಶಾರುಖ್ ಖಾನ್ (Shah Rukh Khan) ಪುತ್ರಿ ಸುಹಾನಾ ಖಾನ್ (Suhana Khan) ಕುರಿತಾಗಿ ಮಾತನಾಡಿರುವ ಕರಣ್, ‘ಮುಂದೊಂದು ದಿನ ಸುಹಾನಾ ಬಾಲಿವುಡ್ ಅನ್ನೇ ಆಳುತ್ತಾರೆ’ ಎಂದು ಹೇಳಿಕೊಂಡಿದ್ದಾರೆ. ಅದಕ್ಕೆ ಅವರು ತಮ್ಮದೇ ಆದ ಕಾರಣಗಳನ್ನೂ ನೀಡಿದ್ದಾರೆ. ಸ್ಟಾರ್ಸ್ ಕಿಡ್ಸ್ ಕಂಡರೆ ಕರಣ್ ಗೆ ಎಲ್ಲಿಲ್ಲದ ಅಭಿಮಾನ. ಅದರಲ್ಲೂ ತಮ್ಮ ಬ್ಯಾನರ್ ಮೂಲಕ ಸಾಕಷ್ಟು ಕಲಾವಿದರನ್ನು ಇವರು ಪರಿಚಯ ಮಾಡಿಕೊಟ್ಟಿದ್ದಾರೆ. ಸುಹಾನಾಗಾಗಿ ಪ್ರಾಜೆಕ್ಟ್ ವೊಂದನ್ನು ರೆಡಿ ಕೂಡ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸುಹಾನಾ ಬಗ್ಗೆ ಕರಣ್ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ. ಸುಹಾನಾ ಖಾನ್ ಇದೀಗ ತಂದೆಯಂತೆಯೇ ನಟನಾ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಅವರು ವೆಬ್ ಸೀರಿಸ್ ಒಂದಕ್ಕೆ ಬಣ್ಣ ಹಚ್ಚಿದ್ದು,  ಈ ವೆಬ್ ಸೀರಿಸ್ ಶೂಟಿಂಗ್ ಊಟಿಯ ವಿವಿಧ ಸ್ಥಳಗಳಲ್ಲಿ ನಡೆದಿದೆ. ತಮಗೆ ಬೋರು ಆಗಬಾರದು ಎಂದೇ ಫ್ರೆಂಡ್ಸ್ ಅನ್ನೂ…

Read More

ರಾಯಚೂರು: ಹಾಸ್ಟೆಲ್‌ನಲ್ಲಿ ಊಟ ಸೇವಿಸಿದ ಬಳಿಕ 15 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಭಾನುವಾರ ನಡೆದಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಾಹ್ನ ಪಲಾವ್ ಸೇವಿಸಿದ್ದ ವಿದ್ಯಾರ್ಥಿನಿಯರಿಗೆ ಸಂಜೆ ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಹೀಗಾಗಿ ಅಸ್ವಸ್ಥಗೊಂಡ 15 ವಿದ್ಯಾರ್ಥಿಯರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಸ್ಥಿತಿ ಗಂಭೀರವಾಗಿದ್ದ ಒಬ್ಬಳು ವಿದ್ಯಾರ್ಥಿಯನ್ನು ರಾಯಚೂರಿನ ರಿಮ್ಸ್‌ಗೆ ರವಾನಿಸಲಾಗಿದೆ ಘಟನೆ ನಡೆದ ಬಳಿಕ ಹಾಸ್ಟೆಲ್‌ಗೆ ಬಾರದ ವಾರ್ಡನ್ ಪಾರ್ವತಿ ವಿರುದ್ಧ ವಿದ್ಯಾರ್ಥಿನಿಯರು ಹಾಗೂ ಪಾಲಕರು ಆಕ್ರೋಶ ಹೊರಹಾಕಿದ್ದಾರೆ.

Read More

ಹುಬ್ಬಳ್ಳಿ: ಪಾರ್ಟ್ ಟೈಮ್ ಜಾಬ್ ಹೆಸರಿನಲ್ಲಿ ಹುಬ್ಬಳ್ಳಿಯ ವ್ಯಕ್ತಿಯೊಬ್ಬರಿಂದ 6.28 ಲಕ್ಷ ರೂ. ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಲಾಗಿದೆ. ಇನ್‌ಸ್ಟಾಗ್ರಾಂನಲ್ಲಿ ಎಕ್‌ಜೆಡ್ ಎಂಬ ಗ್ರೂಪ್‌ನಿಂದ ನಗರದ ಅಮನ್ ಕೆ. ಎಂಬುವರನ್ನು ಅಪರಿಚಿತರು ಸಂಪರ್ಕಿಸಿದ್ದಾರೆ. ನಂತರ ದಿಶಾ ಎಂಬುವರನ್ನು ಸಂಪರ್ಕಿಸಲು ಸೂಚಿಸಿದ್ದಾರೆ. ಪಾರ್ಟ್ ಟೈಂ ಜಾಬ್ ಕೊಡುವುದಾಗಿ ಹೇಳಿದ ದಿಶಾ, ಮೊದಲು ಕೆಲಸ ಕೊಟ್ಟು 16,600 ರೂ. ಪಡೆದಿದ್ದಾಳೆ. ನಂತರ ವಿವಿಧ ಟಾಸ್ಕ್ ನೀಡುವುದಾಗಿ ನಂಬಿಸಿ ಬ್ಯಾಂಕ್ ಖಾತೆಯ ವಿವರ ಪಡೆದು ಒಟ್ಟು 6,28,470 ರೂ. ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾಳೆ. ಸಿಇಎನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು:- ಗೃಹ ಸಚಿವ ಜಿ. ಪರಮೇಶ್ವರ್ ಅವರು, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಪ್ 2023″ ಕ್ರಿಕೆಟ್ ಪಂದ್ಯ ವೀಕ್ಷಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಪ್ 2023″ ಕ್ರಿಕೆಟ್ ಟೂರ್ನಮೆಂಟ್‌ನ್ನು ಆಯೋಜಿಸಲಾಗಿತ್ತು. ಭಾನುವಾರ ನಡೆದ ಫೈನಲ್​ ಪಂದ್ಯದಲ್ಲಿ ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿಗಳ ಮತ್ತು ಬೆಂಗಳೂರು ನಗರ ಕ್ರೈಂ ನ್ಯೂಸ್​ ವರದಿಗಾರರ ಜ್ಯೂನಿಯರ್ಸ್ ತಂಡ ಮುಖಾಮುಖಿ ಆಗಿತ್ತು. ಇದರಲ್ಲಿ ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿಗಳ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಪ್ ಫೈನಲ್​ ವೀಕ್ಷಣೆಗೆ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಆಗಮಿಸಿದ್ದರು. ವಿಜೇತ ತಂಡಕ್ಕೆ ಟ್ರೋಫಿ ವಿತರಿಸಿ ಶುಭ ಕೋರಿದರು. ದಿನನಿತ್ಯ ಬಿಡುವಿಲ್ಲದೆ ಕರ್ತವ್ಯದಲ್ಲಿ ತೊಡಗಿರುವ ಇಲಾಖೆಯ ಸಿಬ್ಬಂದಿಗಳು ಹಾಗೂ ಮಾಧ್ಯಮಮಿತ್ರರಿಗಾಗಿ ಕ್ರಿಕೆಟ್ ಪಂದ್ಯ ಆಯೋಜಿಸಿರುವ ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಸ್ಟೇಡಿಯಂನ ಗ್ರೌಂಡ್ಸ್ ಮೆನ್‌ ಹಾಗೂ ಆಟದ ತೀರ್ಪುಗಾರರಿಗೆ 20 ಸಾವಿರ ರೂ. ಪ್ರೋತ್ಸಾಹಧನವನ್ನ ಇದೇ…

Read More

ನವದೆಹಲಿ: ಇನ್ಫೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ (Sudha Murthy) ಅವರು ಹಳೆಯ ಮತ್ತು ಹೊಸ ಸಂಸತ್‌ ಭವನಗಳಿಗೆ ಭೇಟಿ ನೀಡಿದರು. ನೂತನ ಭವನ ಕಣ್ತುಂಬಿಕೊಂಡು ‘ಸೋ ಬ್ಯೂಟಿಫುಲ್‌’.. ‘ಕನಸು ನನಸಾಗಿದೆ’ ಎಂದು ಬಣ್ಣಿಸಿದ್ದಾರೆ. ಎರಡೂ ಭವನಗಳನ್ನು ಕಣ್ತುಂಬಿಕೊಂಡು ಖುಷಿಪಟ್ಟಿದ್ದಾರೆ. ಸಂಸತ್ತಿನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಕನಸು ನನಸಾಗಿದೆ. ಇದು ಸುಂದರವಾಗಿದೆ. ಇದು ಕಲೆ, ಸಂಸ್ಕೃತಿ, ಭಾರತೀಯ ಇತಿಹಾಸ. ಎಲ್ಲವೂ ಸುಂದರವಾಗಿದೆ ಎಂದು ಹಾಡಿ ಹೊಗಳಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾದ ಒಂದು ದಿನದ ನಂತರ ಸುಧಾಮೂರ್ತಿಯವರು ಸಂಸತ್ತಿಗೆ ಭೇಟಿ ನೀಡಿದರು. ಅಲ್ಲಿನ ಮಹಿಳಾ ಉದ್ಯಮಿಗಳು, ಶಿಕ್ಷಣತಜ್ಞರು ಮತ್ತು ವಿದ್ಯಾರ್ಥಿಗಳೊಂದಿಗೆ ತಮ್ಮ ಸ್ಪೂರ್ತಿದಾಯಕ ಜೀವನ ಪಯಣವನ್ನು ಹಂಚಿಕೊಂಡರು. ಸುಧಾಮೂರ್ತಿ ಅವರು ಸಾಮಾಜಿಕ ಕಾರ್ಯ ಕ್ಷೇತ್ರಕ್ಕೆ ನೀಡಿದ ಮಹತ್ವದ ಕೊಡುಗೆಗಳಿಗಾಗಿ 2006 ರಲ್ಲಿ ಪದ್ಮಶ್ರೀ ಹಾಗೂ 2023 ರಲ್ಲಿ ಪದ್ಮಭೂಷಣ ನೀಡಿ ಗೌರವಿಸಲಾಗಿದೆ.  ಭೇಟಿ ಕುರಿತು ರಾಷ್ಟ್ರಗಳ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಲಾಗಿದ್ದು, ಇನ್ಫೋಸಿಸ್…

Read More

ಬೆಂಗಳೂರು :- ಅರಮನೆ ಮೈದಾನದಲ್ಲಿ ಈಡಿಗರ ಶಕ್ತಿ ಪ್ರದರ್ಶನ ಜರುಗಿದ್ದು, ಕಾಂಗ್ರೆಸ್‌ಗೆ ಶಕ್ತಿ ತುಂಬಲು ಈಡಿಗರು ಶ್ರಮಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಈಡಿಗ, ಬಿಲ್ಲವ, ನಾಮಧಾರಿ ಸೇರಿ ಎಲ್ಲ 26 ಪಂಗಡಗಳ ಬೃಹತ್‌ ಜಾಗೃತ ಹಾಗೂ ಸ್ವಾಭಿಮಾನಿ ಸಮಾವೇಶ ಸಮುದಾಯದ ಪ್ರಮುಖ ಬೇಡಿಕೆಗಳ ಈಡೇರಿಕೆ ಮತ್ತು ಪರೋಕ್ಷವಾಗಿ ರಾಜಕೀಯ ಸಂದೇಶ ರವಾನೆಗೆ ವೇದಿಕೆಯಾಗಿ ಬದಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಮಧು ಬಂಗಾರಪ್ಪ ಸಹಿತ ಈಡಿಗ ಸಮುದಾಯದ ಬಹುತೇಕ ಶಾಸಕರು, ಮುಖಂಡರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆದರೆ ಸಮುದಾಯದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌ ಗೈರಾಗಿದ್ದರು. ವೇದಿಕೆಯಲ್ಲಿದ್ದ ಸಚಿವ ಮಧು ಬಂಗಾರಪ್ಪ, ಮಾಜಿ ಸಚಿವ ಹರತಾಳು ಹಾಲಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಸಂಘದ ಅಧ್ಯಕ್ಷ ಡಾ| ಎಂ.ತಿಮ್ಮೇಗೌಡ ಸಹಿತ ಈಡಿಗ ಸಮುದಾಯದ ಮುಖಂಡರೆಲ್ಲರೂ ಈಡಿಗರ ಅಭಿವೃದ್ಧಿಗಾಗಿ ಸರಕಾರದ ಮುಂದಿಟ್ಟಿರುವ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟು ಹಿಡಿದರು. ಮುಖ್ಯವಾಗಿ ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ. ಅನುದಾನ…

Read More

ದೇವನಹಳ್ಳಿ:- ಬೆಂ. ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ಮನೆಯಲ್ಲಿದ್ದ ವೃದ್ಧ ದಂಪತಿಯನ್ನು ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಜರುಗಿದೆ ಆಸ್ತಿ ವಿಚಾರಕ್ಕೆ ಮಗನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ರಾಮಕೃಷ್ಣಪ್ಪ (70) ಮತ್ತು ಮುನಿರಾಮಕ್ಕ (65) ಕೊಲೆಯಾದ ದಂಪತಿ. ರಾಡ್‌ನಿಂದ ಹೊಡೆದು ತಂದೆ-ತಾಯಿಯನ್ನು ಕೊಲೆ ಮಾಡಿದ ಆರೋಪ ಕೇಳಿಬಂದಿದ್ದರಿಂದ ಮಗ ನರಸಿಂಹನನ್ನು ಸೂಲಿಬೆಲೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮದುವೆಯಾದ ಬಳಿಕ ತಂದೆ-ತಾಯಿ ಬಿಟ್ಟು ಪ್ರತ್ಯೇಕವಾಗಿ ಮಗ ವಾಸವಾಗಿದ್ದ. ಒಬ್ಬನೇ ಮಗನಾಗಿದ್ದರೂ ತಂದೆ ತಾಯಿಯನ್ನು ಹೊರಗಿಟ್ಟಿದ್ದ. ವೃದ್ಧ ದಂಪತಿ ಹೆಣ್ಣು ಮಕ್ಕಳಿಗೆ ಆಸ್ತಿ ಕೊಡಲು ಮುಂದಾಗಿದ್ದಕ್ಕೆ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

Read More