Author: AIN Author

ರಾಯಚೂರು: ಹಾಸ್ಟೆಲ್‌ನಲ್ಲಿ ಊಟ ಸೇವಿಸಿದ ಬಳಿಕ 15 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಭಾನುವಾರ ನಡೆದಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಾಹ್ನ ಪಲಾವ್ ಸೇವಿಸಿದ್ದ ವಿದ್ಯಾರ್ಥಿನಿಯರಿಗೆ ಸಂಜೆ ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಹೀಗಾಗಿ ಅಸ್ವಸ್ಥಗೊಂಡ 15 ವಿದ್ಯಾರ್ಥಿಯರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಸ್ಥಿತಿ ಗಂಭೀರವಾಗಿದ್ದ ಒಬ್ಬಳು ವಿದ್ಯಾರ್ಥಿಯನ್ನು ರಾಯಚೂರಿನ ರಿಮ್ಸ್‌ಗೆ ರವಾನಿಸಲಾಗಿದೆ ಘಟನೆ ನಡೆದ ಬಳಿಕ ಹಾಸ್ಟೆಲ್‌ಗೆ ಬಾರದ ವಾರ್ಡನ್ ಪಾರ್ವತಿ ವಿರುದ್ಧ ವಿದ್ಯಾರ್ಥಿನಿಯರು ಹಾಗೂ ಪಾಲಕರು ಆಕ್ರೋಶ ಹೊರಹಾಕಿದ್ದಾರೆ.

Read More

ಹುಬ್ಬಳ್ಳಿ: ಪಾರ್ಟ್ ಟೈಮ್ ಜಾಬ್ ಹೆಸರಿನಲ್ಲಿ ಹುಬ್ಬಳ್ಳಿಯ ವ್ಯಕ್ತಿಯೊಬ್ಬರಿಂದ 6.28 ಲಕ್ಷ ರೂ. ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಲಾಗಿದೆ. ಇನ್‌ಸ್ಟಾಗ್ರಾಂನಲ್ಲಿ ಎಕ್‌ಜೆಡ್ ಎಂಬ ಗ್ರೂಪ್‌ನಿಂದ ನಗರದ ಅಮನ್ ಕೆ. ಎಂಬುವರನ್ನು ಅಪರಿಚಿತರು ಸಂಪರ್ಕಿಸಿದ್ದಾರೆ. ನಂತರ ದಿಶಾ ಎಂಬುವರನ್ನು ಸಂಪರ್ಕಿಸಲು ಸೂಚಿಸಿದ್ದಾರೆ. ಪಾರ್ಟ್ ಟೈಂ ಜಾಬ್ ಕೊಡುವುದಾಗಿ ಹೇಳಿದ ದಿಶಾ, ಮೊದಲು ಕೆಲಸ ಕೊಟ್ಟು 16,600 ರೂ. ಪಡೆದಿದ್ದಾಳೆ. ನಂತರ ವಿವಿಧ ಟಾಸ್ಕ್ ನೀಡುವುದಾಗಿ ನಂಬಿಸಿ ಬ್ಯಾಂಕ್ ಖಾತೆಯ ವಿವರ ಪಡೆದು ಒಟ್ಟು 6,28,470 ರೂ. ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾಳೆ. ಸಿಇಎನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು:- ಗೃಹ ಸಚಿವ ಜಿ. ಪರಮೇಶ್ವರ್ ಅವರು, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಪ್ 2023″ ಕ್ರಿಕೆಟ್ ಪಂದ್ಯ ವೀಕ್ಷಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಪ್ 2023″ ಕ್ರಿಕೆಟ್ ಟೂರ್ನಮೆಂಟ್‌ನ್ನು ಆಯೋಜಿಸಲಾಗಿತ್ತು. ಭಾನುವಾರ ನಡೆದ ಫೈನಲ್​ ಪಂದ್ಯದಲ್ಲಿ ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿಗಳ ಮತ್ತು ಬೆಂಗಳೂರು ನಗರ ಕ್ರೈಂ ನ್ಯೂಸ್​ ವರದಿಗಾರರ ಜ್ಯೂನಿಯರ್ಸ್ ತಂಡ ಮುಖಾಮುಖಿ ಆಗಿತ್ತು. ಇದರಲ್ಲಿ ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿಗಳ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಪ್ ಫೈನಲ್​ ವೀಕ್ಷಣೆಗೆ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಆಗಮಿಸಿದ್ದರು. ವಿಜೇತ ತಂಡಕ್ಕೆ ಟ್ರೋಫಿ ವಿತರಿಸಿ ಶುಭ ಕೋರಿದರು. ದಿನನಿತ್ಯ ಬಿಡುವಿಲ್ಲದೆ ಕರ್ತವ್ಯದಲ್ಲಿ ತೊಡಗಿರುವ ಇಲಾಖೆಯ ಸಿಬ್ಬಂದಿಗಳು ಹಾಗೂ ಮಾಧ್ಯಮಮಿತ್ರರಿಗಾಗಿ ಕ್ರಿಕೆಟ್ ಪಂದ್ಯ ಆಯೋಜಿಸಿರುವ ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಸ್ಟೇಡಿಯಂನ ಗ್ರೌಂಡ್ಸ್ ಮೆನ್‌ ಹಾಗೂ ಆಟದ ತೀರ್ಪುಗಾರರಿಗೆ 20 ಸಾವಿರ ರೂ. ಪ್ರೋತ್ಸಾಹಧನವನ್ನ ಇದೇ…

Read More

ನವದೆಹಲಿ: ಇನ್ಫೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ (Sudha Murthy) ಅವರು ಹಳೆಯ ಮತ್ತು ಹೊಸ ಸಂಸತ್‌ ಭವನಗಳಿಗೆ ಭೇಟಿ ನೀಡಿದರು. ನೂತನ ಭವನ ಕಣ್ತುಂಬಿಕೊಂಡು ‘ಸೋ ಬ್ಯೂಟಿಫುಲ್‌’.. ‘ಕನಸು ನನಸಾಗಿದೆ’ ಎಂದು ಬಣ್ಣಿಸಿದ್ದಾರೆ. ಎರಡೂ ಭವನಗಳನ್ನು ಕಣ್ತುಂಬಿಕೊಂಡು ಖುಷಿಪಟ್ಟಿದ್ದಾರೆ. ಸಂಸತ್ತಿನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಕನಸು ನನಸಾಗಿದೆ. ಇದು ಸುಂದರವಾಗಿದೆ. ಇದು ಕಲೆ, ಸಂಸ್ಕೃತಿ, ಭಾರತೀಯ ಇತಿಹಾಸ. ಎಲ್ಲವೂ ಸುಂದರವಾಗಿದೆ ಎಂದು ಹಾಡಿ ಹೊಗಳಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾದ ಒಂದು ದಿನದ ನಂತರ ಸುಧಾಮೂರ್ತಿಯವರು ಸಂಸತ್ತಿಗೆ ಭೇಟಿ ನೀಡಿದರು. ಅಲ್ಲಿನ ಮಹಿಳಾ ಉದ್ಯಮಿಗಳು, ಶಿಕ್ಷಣತಜ್ಞರು ಮತ್ತು ವಿದ್ಯಾರ್ಥಿಗಳೊಂದಿಗೆ ತಮ್ಮ ಸ್ಪೂರ್ತಿದಾಯಕ ಜೀವನ ಪಯಣವನ್ನು ಹಂಚಿಕೊಂಡರು. ಸುಧಾಮೂರ್ತಿ ಅವರು ಸಾಮಾಜಿಕ ಕಾರ್ಯ ಕ್ಷೇತ್ರಕ್ಕೆ ನೀಡಿದ ಮಹತ್ವದ ಕೊಡುಗೆಗಳಿಗಾಗಿ 2006 ರಲ್ಲಿ ಪದ್ಮಶ್ರೀ ಹಾಗೂ 2023 ರಲ್ಲಿ ಪದ್ಮಭೂಷಣ ನೀಡಿ ಗೌರವಿಸಲಾಗಿದೆ.  ಭೇಟಿ ಕುರಿತು ರಾಷ್ಟ್ರಗಳ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಲಾಗಿದ್ದು, ಇನ್ಫೋಸಿಸ್…

Read More

ಬೆಂಗಳೂರು :- ಅರಮನೆ ಮೈದಾನದಲ್ಲಿ ಈಡಿಗರ ಶಕ್ತಿ ಪ್ರದರ್ಶನ ಜರುಗಿದ್ದು, ಕಾಂಗ್ರೆಸ್‌ಗೆ ಶಕ್ತಿ ತುಂಬಲು ಈಡಿಗರು ಶ್ರಮಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಈಡಿಗ, ಬಿಲ್ಲವ, ನಾಮಧಾರಿ ಸೇರಿ ಎಲ್ಲ 26 ಪಂಗಡಗಳ ಬೃಹತ್‌ ಜಾಗೃತ ಹಾಗೂ ಸ್ವಾಭಿಮಾನಿ ಸಮಾವೇಶ ಸಮುದಾಯದ ಪ್ರಮುಖ ಬೇಡಿಕೆಗಳ ಈಡೇರಿಕೆ ಮತ್ತು ಪರೋಕ್ಷವಾಗಿ ರಾಜಕೀಯ ಸಂದೇಶ ರವಾನೆಗೆ ವೇದಿಕೆಯಾಗಿ ಬದಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಮಧು ಬಂಗಾರಪ್ಪ ಸಹಿತ ಈಡಿಗ ಸಮುದಾಯದ ಬಹುತೇಕ ಶಾಸಕರು, ಮುಖಂಡರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆದರೆ ಸಮುದಾಯದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌ ಗೈರಾಗಿದ್ದರು. ವೇದಿಕೆಯಲ್ಲಿದ್ದ ಸಚಿವ ಮಧು ಬಂಗಾರಪ್ಪ, ಮಾಜಿ ಸಚಿವ ಹರತಾಳು ಹಾಲಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಸಂಘದ ಅಧ್ಯಕ್ಷ ಡಾ| ಎಂ.ತಿಮ್ಮೇಗೌಡ ಸಹಿತ ಈಡಿಗ ಸಮುದಾಯದ ಮುಖಂಡರೆಲ್ಲರೂ ಈಡಿಗರ ಅಭಿವೃದ್ಧಿಗಾಗಿ ಸರಕಾರದ ಮುಂದಿಟ್ಟಿರುವ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟು ಹಿಡಿದರು. ಮುಖ್ಯವಾಗಿ ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ. ಅನುದಾನ…

Read More

ದೇವನಹಳ್ಳಿ:- ಬೆಂ. ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ಮನೆಯಲ್ಲಿದ್ದ ವೃದ್ಧ ದಂಪತಿಯನ್ನು ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಜರುಗಿದೆ ಆಸ್ತಿ ವಿಚಾರಕ್ಕೆ ಮಗನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ರಾಮಕೃಷ್ಣಪ್ಪ (70) ಮತ್ತು ಮುನಿರಾಮಕ್ಕ (65) ಕೊಲೆಯಾದ ದಂಪತಿ. ರಾಡ್‌ನಿಂದ ಹೊಡೆದು ತಂದೆ-ತಾಯಿಯನ್ನು ಕೊಲೆ ಮಾಡಿದ ಆರೋಪ ಕೇಳಿಬಂದಿದ್ದರಿಂದ ಮಗ ನರಸಿಂಹನನ್ನು ಸೂಲಿಬೆಲೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮದುವೆಯಾದ ಬಳಿಕ ತಂದೆ-ತಾಯಿ ಬಿಟ್ಟು ಪ್ರತ್ಯೇಕವಾಗಿ ಮಗ ವಾಸವಾಗಿದ್ದ. ಒಬ್ಬನೇ ಮಗನಾಗಿದ್ದರೂ ತಂದೆ ತಾಯಿಯನ್ನು ಹೊರಗಿಟ್ಟಿದ್ದ. ವೃದ್ಧ ದಂಪತಿ ಹೆಣ್ಣು ಮಕ್ಕಳಿಗೆ ಆಸ್ತಿ ಕೊಡಲು ಮುಂದಾಗಿದ್ದಕ್ಕೆ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

Read More

ಚಿನ್ನ, ಬೆಳ್ಳಿ ಬೆಲೆ ತುಸು ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 10ಕ್ಕೆ): 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,150 ರೂ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,350 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,150 ರೂ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,350 ರೂ ಬೆಳ್ಳಿ ಬೆಲೆ 10 ಗ್ರಾಂಗೆ:…

Read More

ಬೆಂಗಳೂರು:- ಇಂದು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ದೈನಂದಿನ ವರದಿ ಬಿಡುಗಡೆ ಮಾಡಿದ್ದು ಸೋಮವಾರದಂದು ಈ ಪ್ರಕಾರ ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಬಹುದು. ಅದು ಗುಡುಗು ಸಹಿತ ಮಳೆಯೂ ಬೀಳಬಹುದು. ಆದರೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ ಕಂಡು ಬರಲಿದೆ ಎನ್ನುವ ಮಾಹಿತಿ ನೀಡಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಅಂದರೆ ಮಂಗಳವಾರದಂದು ಕರಾವಳಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನ ಬಹುತೇಕ ಕಡೆ ಮಳೆಯ ವಾತಾರವಣ ಇಲ್ಲ ಎಂದು ತಿಳಿಸಲಾಗಿದೆ. ಸೋಮವಾರದಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆಯಿದೆ. ಆದರೆ ಭಾರೀ ಮಳೆಯ ಮುನ್ನೆಚ್ಚರಿಕೆಯನ್ನೇನೂ ಹವಾಮಾನ ಇಲಾಖೆ ನೀಡಿಲ್ಲ. ಕರ್ನಾಟಕದ ತಾಪಮಾನದಲ್ಲೂ ಅಂತಹ ಬದಲಾವಣೆ ಏನೂ ಕಂಡು ಬರುವುದಿಲ್ಲ.…

Read More

ಹುಬ್ಬಳ್ಳಿ: ‘ರಾಜ್ಯ ಸರ್ಕಾರದ ‘ಗ್ಯಾರಂಟಿ’ ಯೋಜನೆ ಮೂಲಕ ಮಹಿಳೆಯರು ₹2 ಸಾವಿರ ಪಡೆಯುತ್ತಿದ್ದಾರೆ. ಆದರೆ, ಕೋವಿಡ್‌ ಸಂಕಷ್ಟದ ಕಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಉಚಿತವಾಗಿ ಲಸಿಕೆ ನೀಡಿ ಜೀವದ ಗ್ಯಾರಂಟಿ ನೀಡಿದ್ದರು ಎನ್ನುವುದನ್ನು ಮರೆಯಬಾರದು’ ಎಂದು ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಇಲ್ಲಿನ ಸವಾಯಿ ಗಂಧರ್ವ ಸಭಾಂಗಣದಲ್ಲಿ ನಮೋ ಬ್ರಿಗೇಡ್‌ ವತಿಯಿಂದ ಹಮ್ಮಿಕೊಂಡಿದ್ದ ‘ಇನ್ನೂ ಮಲಗಿದರೆ ಎದ್ದೇಳುವಾಗ ಭಾರತವಿರದು’ ಸರಣಿ ಉಪನ್ಯಾಸ ಕಾರ್ಯಕ್ರಮದ ಕೊನೆಯ ದಿನವಾದ ಅವರು ಮಾತನಾಡಿದರು. ‘ಕೋವಿಡ್‌ನಿಂದ ಇಡೀ ಜಗತ್ತೇ ತತ್ತರಿಸಿ ಹೋಗಿತ್ತು. ಭಾರತದ ಪರಿಸ್ಥಿತಿಯೂ ಭಿನ್ನವಾಗಿರಲಿಲ್ಲ. ಆಗ ಪ್ರಧಾನಿ ಮೋದಿ ಅವರು ಲಸಿಕೆ ತಯಾರಿಸಲು ವಿಜ್ಞಾನಿಗಳಿಗೆ ಕರೆ ನೀಡಿದರು. ಕೋವ್ಯಾಕ್ಸಿನ್‌, ಕೋವಿಶಿಲ್ಡ್‌ ತಯಾರಿಸಲಾಯಿತು. ಕೆಲವರು ಅದರ ಗುಣಮಟ್ಟ ಸರಿಯಿಲ್ಲ ಎಂದು ಆಕ್ಷೇಪಿಸಿ, ಅಮೆರಿಕದ ಕಂಪನಿಯ ಲಸಿಕೆ ಖರೀದಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದ್ದರು. ಅದ್ಯಾವುದಕ್ಕೂ ಒಪ್ಪದ ಮೋದಿ, ಸ್ವದೇಸಿ ಲಸಿಕೆಗೆ ಪ್ರಾಮುಖ್ಯತೆ ನೀಡಿದರು’ ಎಂದರು. ‘20ಕ್ಕೂ ಹೆಚ್ಚು ದೇಶಗಳಿಗೆ…

Read More

ನವದೆಹಲಿ: ಅತ್ಯಾಚಾರ ಆರೋಪಿಯೊಬ್ಬ (Rape Accused) ಜಾಮೀನಿನ (Bail) ಮೇಲೆ ಜೈಲಿನಿಂದ ಹೊರಬಂದು ತನ್ನ ಮೇಲೆ ಆರೋಪ ಹೊರಿಸಿದ್ದ ಮಹಿಳೆಯ ಅಪ್ರಾಪ್ತ ಮಗಳ ಮೇಲೆ ಆ್ಯಸಿಡ್ ದಾಳಿ (Acid Attack) ನಡೆಸಿ ನಂತರ ತಾನು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ (Delhi) ನಡೆದಿದೆ. ಆಘಾತಕಾರಿ ಘಟನೆ ಮಧ್ಯ ದೆಹಲಿಯಲ್ಲಿ ನಡೆದಿದೆ. ಅತ್ಯಾಚಾರ ಆರೋಪಿ ಪ್ರೇಮ್ ಸಿಂಗ್‌ಗೆ ಕುಟುಂಬದವರ ವಿವಾಹದಲ್ಲಿ ಪಾಲ್ಗೊಳ್ಳಲು ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿತ್ತು. https://ainlivenews.com/dengue-outbreak-record-level-cases-detected-in-last-1-month/ ತನ್ನ ಮೇಲೆ ಆರೋಪ ಹೊರಿಸಿದ್ದ ಮಹಿಳೆಯ ಬಳಿಗೆ ತೆರಳಿ ದೂರನ್ನು ಹಿಂಪಡೆಯುವಂತೆ ಕೇಳಿದ್ದಾನೆ. ಅದನ್ನು ನಿರಾಕರಿಸಿದ್ದಕ್ಕೆ ಆತ ಮಹಿಳೆಯ 17 ವರ್ಷದ ಮಗಳ ಮೇಲೆ ಆ್ಯಸಿಡ್ ಎರಚಿದ್ದಾನೆ. ಬಳಿಕ ತಾನೂ ಕುಡಿದಿದ್ದಾನೆ. ಪ್ರೇಮ್ ಸಿಂಗ್ ಹಾಗೂ ಮಹಿಳೆ ದೆಹಲಿಯ ಆನಂದ್ ಪರ್ಬತ್ ಪ್ರದೇಶದಲ್ಲಿ ನೆರೆಹೊರೆಯವರು. ವ್ಯಕ್ತಿ ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಾಗ ಪ್ರಕರಣವನ್ನು ಹಿಂಪಡೆಯುವಂತೆ ಮಹಿಳೆಗೆ ಬೆದರಿಕೆ ಹಾಕಿದ್ದಾನೆ. ಆಕೆ ನಿರಾಕರಿಸಿದಾಗ ಈ ಕೃತ್ಯ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Read More