Author: AIN Author

ಬೆಂಗಳೂರು :- ಅರಮನೆ ಮೈದಾನದಲ್ಲಿ ಈಡಿಗರ ಶಕ್ತಿ ಪ್ರದರ್ಶನ ಜರುಗಿದ್ದು, ಕಾಂಗ್ರೆಸ್‌ಗೆ ಶಕ್ತಿ ತುಂಬಲು ಈಡಿಗರು ಶ್ರಮಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಈಡಿಗ, ಬಿಲ್ಲವ, ನಾಮಧಾರಿ ಸೇರಿ ಎಲ್ಲ 26 ಪಂಗಡಗಳ ಬೃಹತ್‌ ಜಾಗೃತ ಹಾಗೂ ಸ್ವಾಭಿಮಾನಿ ಸಮಾವೇಶ ಸಮುದಾಯದ ಪ್ರಮುಖ ಬೇಡಿಕೆಗಳ ಈಡೇರಿಕೆ ಮತ್ತು ಪರೋಕ್ಷವಾಗಿ ರಾಜಕೀಯ ಸಂದೇಶ ರವಾನೆಗೆ ವೇದಿಕೆಯಾಗಿ ಬದಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಮಧು ಬಂಗಾರಪ್ಪ ಸಹಿತ ಈಡಿಗ ಸಮುದಾಯದ ಬಹುತೇಕ ಶಾಸಕರು, ಮುಖಂಡರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆದರೆ ಸಮುದಾಯದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌ ಗೈರಾಗಿದ್ದರು. ವೇದಿಕೆಯಲ್ಲಿದ್ದ ಸಚಿವ ಮಧು ಬಂಗಾರಪ್ಪ, ಮಾಜಿ ಸಚಿವ ಹರತಾಳು ಹಾಲಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಸಂಘದ ಅಧ್ಯಕ್ಷ ಡಾ| ಎಂ.ತಿಮ್ಮೇಗೌಡ ಸಹಿತ ಈಡಿಗ ಸಮುದಾಯದ ಮುಖಂಡರೆಲ್ಲರೂ ಈಡಿಗರ ಅಭಿವೃದ್ಧಿಗಾಗಿ ಸರಕಾರದ ಮುಂದಿಟ್ಟಿರುವ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟು ಹಿಡಿದರು. ಮುಖ್ಯವಾಗಿ ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ. ಅನುದಾನ…

Read More

ದೇವನಹಳ್ಳಿ:- ಬೆಂ. ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ಮನೆಯಲ್ಲಿದ್ದ ವೃದ್ಧ ದಂಪತಿಯನ್ನು ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಜರುಗಿದೆ ಆಸ್ತಿ ವಿಚಾರಕ್ಕೆ ಮಗನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ರಾಮಕೃಷ್ಣಪ್ಪ (70) ಮತ್ತು ಮುನಿರಾಮಕ್ಕ (65) ಕೊಲೆಯಾದ ದಂಪತಿ. ರಾಡ್‌ನಿಂದ ಹೊಡೆದು ತಂದೆ-ತಾಯಿಯನ್ನು ಕೊಲೆ ಮಾಡಿದ ಆರೋಪ ಕೇಳಿಬಂದಿದ್ದರಿಂದ ಮಗ ನರಸಿಂಹನನ್ನು ಸೂಲಿಬೆಲೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮದುವೆಯಾದ ಬಳಿಕ ತಂದೆ-ತಾಯಿ ಬಿಟ್ಟು ಪ್ರತ್ಯೇಕವಾಗಿ ಮಗ ವಾಸವಾಗಿದ್ದ. ಒಬ್ಬನೇ ಮಗನಾಗಿದ್ದರೂ ತಂದೆ ತಾಯಿಯನ್ನು ಹೊರಗಿಟ್ಟಿದ್ದ. ವೃದ್ಧ ದಂಪತಿ ಹೆಣ್ಣು ಮಕ್ಕಳಿಗೆ ಆಸ್ತಿ ಕೊಡಲು ಮುಂದಾಗಿದ್ದಕ್ಕೆ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

Read More

ಚಿನ್ನ, ಬೆಳ್ಳಿ ಬೆಲೆ ತುಸು ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 10ಕ್ಕೆ): 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,150 ರೂ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,350 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,150 ರೂ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,350 ರೂ ಬೆಳ್ಳಿ ಬೆಲೆ 10 ಗ್ರಾಂಗೆ:…

Read More

ಬೆಂಗಳೂರು:- ಇಂದು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ದೈನಂದಿನ ವರದಿ ಬಿಡುಗಡೆ ಮಾಡಿದ್ದು ಸೋಮವಾರದಂದು ಈ ಪ್ರಕಾರ ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಬಹುದು. ಅದು ಗುಡುಗು ಸಹಿತ ಮಳೆಯೂ ಬೀಳಬಹುದು. ಆದರೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ ಕಂಡು ಬರಲಿದೆ ಎನ್ನುವ ಮಾಹಿತಿ ನೀಡಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಅಂದರೆ ಮಂಗಳವಾರದಂದು ಕರಾವಳಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನ ಬಹುತೇಕ ಕಡೆ ಮಳೆಯ ವಾತಾರವಣ ಇಲ್ಲ ಎಂದು ತಿಳಿಸಲಾಗಿದೆ. ಸೋಮವಾರದಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆಯಿದೆ. ಆದರೆ ಭಾರೀ ಮಳೆಯ ಮುನ್ನೆಚ್ಚರಿಕೆಯನ್ನೇನೂ ಹವಾಮಾನ ಇಲಾಖೆ ನೀಡಿಲ್ಲ. ಕರ್ನಾಟಕದ ತಾಪಮಾನದಲ್ಲೂ ಅಂತಹ ಬದಲಾವಣೆ ಏನೂ ಕಂಡು ಬರುವುದಿಲ್ಲ.…

Read More

ಹುಬ್ಬಳ್ಳಿ: ‘ರಾಜ್ಯ ಸರ್ಕಾರದ ‘ಗ್ಯಾರಂಟಿ’ ಯೋಜನೆ ಮೂಲಕ ಮಹಿಳೆಯರು ₹2 ಸಾವಿರ ಪಡೆಯುತ್ತಿದ್ದಾರೆ. ಆದರೆ, ಕೋವಿಡ್‌ ಸಂಕಷ್ಟದ ಕಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಉಚಿತವಾಗಿ ಲಸಿಕೆ ನೀಡಿ ಜೀವದ ಗ್ಯಾರಂಟಿ ನೀಡಿದ್ದರು ಎನ್ನುವುದನ್ನು ಮರೆಯಬಾರದು’ ಎಂದು ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಇಲ್ಲಿನ ಸವಾಯಿ ಗಂಧರ್ವ ಸಭಾಂಗಣದಲ್ಲಿ ನಮೋ ಬ್ರಿಗೇಡ್‌ ವತಿಯಿಂದ ಹಮ್ಮಿಕೊಂಡಿದ್ದ ‘ಇನ್ನೂ ಮಲಗಿದರೆ ಎದ್ದೇಳುವಾಗ ಭಾರತವಿರದು’ ಸರಣಿ ಉಪನ್ಯಾಸ ಕಾರ್ಯಕ್ರಮದ ಕೊನೆಯ ದಿನವಾದ ಅವರು ಮಾತನಾಡಿದರು. ‘ಕೋವಿಡ್‌ನಿಂದ ಇಡೀ ಜಗತ್ತೇ ತತ್ತರಿಸಿ ಹೋಗಿತ್ತು. ಭಾರತದ ಪರಿಸ್ಥಿತಿಯೂ ಭಿನ್ನವಾಗಿರಲಿಲ್ಲ. ಆಗ ಪ್ರಧಾನಿ ಮೋದಿ ಅವರು ಲಸಿಕೆ ತಯಾರಿಸಲು ವಿಜ್ಞಾನಿಗಳಿಗೆ ಕರೆ ನೀಡಿದರು. ಕೋವ್ಯಾಕ್ಸಿನ್‌, ಕೋವಿಶಿಲ್ಡ್‌ ತಯಾರಿಸಲಾಯಿತು. ಕೆಲವರು ಅದರ ಗುಣಮಟ್ಟ ಸರಿಯಿಲ್ಲ ಎಂದು ಆಕ್ಷೇಪಿಸಿ, ಅಮೆರಿಕದ ಕಂಪನಿಯ ಲಸಿಕೆ ಖರೀದಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದ್ದರು. ಅದ್ಯಾವುದಕ್ಕೂ ಒಪ್ಪದ ಮೋದಿ, ಸ್ವದೇಸಿ ಲಸಿಕೆಗೆ ಪ್ರಾಮುಖ್ಯತೆ ನೀಡಿದರು’ ಎಂದರು. ‘20ಕ್ಕೂ ಹೆಚ್ಚು ದೇಶಗಳಿಗೆ…

Read More

ನವದೆಹಲಿ: ಅತ್ಯಾಚಾರ ಆರೋಪಿಯೊಬ್ಬ (Rape Accused) ಜಾಮೀನಿನ (Bail) ಮೇಲೆ ಜೈಲಿನಿಂದ ಹೊರಬಂದು ತನ್ನ ಮೇಲೆ ಆರೋಪ ಹೊರಿಸಿದ್ದ ಮಹಿಳೆಯ ಅಪ್ರಾಪ್ತ ಮಗಳ ಮೇಲೆ ಆ್ಯಸಿಡ್ ದಾಳಿ (Acid Attack) ನಡೆಸಿ ನಂತರ ತಾನು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ (Delhi) ನಡೆದಿದೆ. ಆಘಾತಕಾರಿ ಘಟನೆ ಮಧ್ಯ ದೆಹಲಿಯಲ್ಲಿ ನಡೆದಿದೆ. ಅತ್ಯಾಚಾರ ಆರೋಪಿ ಪ್ರೇಮ್ ಸಿಂಗ್‌ಗೆ ಕುಟುಂಬದವರ ವಿವಾಹದಲ್ಲಿ ಪಾಲ್ಗೊಳ್ಳಲು ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿತ್ತು. https://ainlivenews.com/dengue-outbreak-record-level-cases-detected-in-last-1-month/ ತನ್ನ ಮೇಲೆ ಆರೋಪ ಹೊರಿಸಿದ್ದ ಮಹಿಳೆಯ ಬಳಿಗೆ ತೆರಳಿ ದೂರನ್ನು ಹಿಂಪಡೆಯುವಂತೆ ಕೇಳಿದ್ದಾನೆ. ಅದನ್ನು ನಿರಾಕರಿಸಿದ್ದಕ್ಕೆ ಆತ ಮಹಿಳೆಯ 17 ವರ್ಷದ ಮಗಳ ಮೇಲೆ ಆ್ಯಸಿಡ್ ಎರಚಿದ್ದಾನೆ. ಬಳಿಕ ತಾನೂ ಕುಡಿದಿದ್ದಾನೆ. ಪ್ರೇಮ್ ಸಿಂಗ್ ಹಾಗೂ ಮಹಿಳೆ ದೆಹಲಿಯ ಆನಂದ್ ಪರ್ಬತ್ ಪ್ರದೇಶದಲ್ಲಿ ನೆರೆಹೊರೆಯವರು. ವ್ಯಕ್ತಿ ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಾಗ ಪ್ರಕರಣವನ್ನು ಹಿಂಪಡೆಯುವಂತೆ ಮಹಿಳೆಗೆ ಬೆದರಿಕೆ ಹಾಕಿದ್ದಾನೆ. ಆಕೆ ನಿರಾಕರಿಸಿದಾಗ ಈ ಕೃತ್ಯ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಬೆಂಗಳೂರು:- ಕಳೆದ ವರ್ಷಕ್ಕಿಂತ ಈ ಬಾರಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗಿದೆ. ಅಕ್ಟೋಬರ್‌, ನವೆಂಬರ್‌ನಲ್ಲಿ ತುಸು ಇಳಿಕೆಯಾಗಿದ್ದರೂ ಆ ಬಳಿಕ ಮತ್ತೆ ಏರಿಕೆ ಕಂಡಿರುವುದು ಆತಂಕ ಮೂಡಿಸಿದೆ. ರಾಜ್ಯದಲ್ಲಿ ಒಟ್ಟು 15,089 ಮಂದಿ ಡೆಂಗ್ಯೂಗೆ ತುತ್ತಾಗಿದ್ದಾರೆ. ಇದರಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 4 ಹಾಗೂ ಕೊಡಗು, ಹಾಸನ, ತುಮಕೂರು ವ್ಯಾಪ್ತಿಯಲ್ಲಿ ತಲಾ ಒಬ್ಬರು, ಉಡುಪಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 2021ರಲ್ಲಿ 6,300 ಪ್ರಕರಣ ದಾಖಲಾಗಿದ್ದು, ಐವರು ಮೃತಪಟ್ಟಿದ್ದರು. 2022ರಲ್ಲಿ 8,500 ಪ್ರಕರಣ ಪಾಸಿಟಿವ್‌ ಇದ್ದು, 9 ಮಂದಿ ಸಾವಿಗೀಡಾಗಿದ್ದರು. ಬಿಟ್ಟು ಬಿಟ್ಟು ಮಳೆ, ಹೊಸ ಕಟ್ಟಡ ನಿರ್ಮಾಣ, ರಸ್ತೆಗಳಲ್ಲಿ ಹೊಂಡ ಗುಂಡಿ ಮುಖ್ಯ ಕಾರಣ ಎನ್ನಲಾಗುತ್ತಿದೆ. ಕಟ್ಟಡ ನಿರ್ಮಾಣ ಕಾಮಗಾರಿ ಪ್ರದೇಶದಲ್ಲಿ ನೀರು ನಿಲ್ಲುತ್ತಿದೆ. ಎಲ್ಲೆಂದರಲ್ಲಿ ಕಾಂಕ್ರೀಟ್‌ ರಸ್ತೆಗಳು ನಿರ್ಮಾಣವಾಗುತ್ತಿದ್ದು, ಇದರಿಂದಾಗಿ ನೀರು ಇಂಗಲು ಅವಕಾಶವೇ ಇಲ್ಲವಾಗಿದೆ. ರಸ್ತೆ ಗುಂಡಿಯಲ್ಲಿ ನಿಂತ ನೀರಿನಿಂದಾಗಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದೆ ಎನ್ನುವ ಅಭಿಪ್ರಾಯ ಆರೋಗ್ಯ ತಜ್ಞರದು. ರಾಜ್ಯದ ಪ್ರತಿಯೊಂದು ಸ್ಥಳೀಯಾಡಳಿತದಲ್ಲಿ ಸಾಂಕ್ರಾಮಿಕ ರೋಗಗಳ ತಡೆಗೆ ಸಿವಿಕ್‌ ಬೈಲಾ…

Read More

ಹುಬ್ಬಳ್ಳಿ:- ಬಿಜೆಪಿ ಕಾಂಗ್ರೆಸ್ ಸರ್ಕಾರ ಬೀಳುತ್ತೇ ಎಂಬ ಭ್ರಮೆಯಲ್ಲಿ ಇದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ನೈತಿಕತೆ ಇಲ್ಲ. ಅವರು ಇಂದಿಗೂ ಸರ್ಕಾರ ಬೀಳುತ್ತದೆ ಎಂಬ ಭ್ರಮೆಯಲ್ಲಿದ್ದಾರೆ ಎಂದರು. ಬಿಜೆಪಿ 40 ಪರ್ಸೆಂಟ್‌ ಸರ್ಕಾರ ಎಂಬ ಕಾರಣದಿಂದ ಅಧಿಕಾರ ಕಳೆದುಕೊಂಡಿತು. ನಾವು ಭ್ರಷ್ಟಾಚಾರ ಮಾಡಿಲ್ಲ ಅಂತ ಸಾಬೀತುಪಡಿಸಲು ಅವರಿಗೆ ಆಗಲಿಲ್ಲ. ಚುನಾವಣೆಯಲ್ಲಿ ಬಿಜೆಪಿಯವರು ಕೋಟ್ಯಂತರ ರುಪಾಯಿ ಖರ್ಚು ಮಾಡುತ್ತಾರಲ್ಲ, ಅವರೇನು ಸತ್ಯ ಹರಿಶ್ಚಂದ್ರರಾ? ಆ ದುಡ್ಡು ಎಲ್ಲಿಂದ ಬರುತ್ತೆ ತಿಳಿಸಲಿ ಎಂದರು. ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್‌ ಸರ್ಕಾರ ಇರುವುದಿಲ್ಲವಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ಅಧಿಕಾರ ಕಳೆದುಕೊಂಡ ಮೇಲೆ ಸಹಿಸಿಕೊಳ್ಳಲು ಆಗುತ್ತಿಲ್ಲ. 130 ಸ್ಥಾನಗಳಲ್ಲಿ ಬರುತ್ತೇವೆ ಅಂತ 60 ಸ್ಥಾನಕ್ಕೆ ಇಳಿದರು. ಅವರೀಗ ನೀರಿನಿಂದ ಹೊರ ಬಿದ್ದ ಮೀನಿನಂತಾಗಿದ್ದಾರೆ. ಮೊದಲು ಬಿಜೆಪಿಯವರು ತಮ್ಮ ಮನೆಯನ್ನು ಸರಿಪಡಿಸಿಕೊಳ್ಳಲಿ ಎಂದರು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ‘ಜೈ ಶ್ರೀರಾಮ್’…

Read More

ಬೆಂಗಳೂರು:- ಬಿಜೆಪಿಯವರ ಮನೆಗಳ ಮೇಲೂ ಐಟಿ ದಾಳಿ ನಡೆದರೆ ಬೇನಾಮಿ ಹಣ ದೊರೆಯಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ಸಿಗರನ್ನೇ ಗುರಿಯಾಗಿಸಿ ಯಾಕೆ ಆದಾಯ ತೆರಿಗೆ (ಐಟಿ) ದಾಳಿ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿಗರ ಮೇಲೆ ಐಟಿ ದಾಳಿಯಾದರೂ ಸಾಕಷ್ಟು ಹಣ ಸಿಗುತ್ತದೆ. ಆದರೆ ಮಾಡುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಯಾರ ಬಳಿ ಬೇನಾಮಿ ಹಣ ದೊರೆತರೂ ಅದು ಕಾನೂನು ರೀತಿಯಲ್ಲಿ ತಪ್ಪು. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲೇ ಬೇಕು ಎಂದಿದ್ದಾರೆ ಆದರೆ, ಯಾಕೆ ಕಾಂಗ್ರೆಸ್ ಪಕ್ಷದವರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿಗಳನ್ನು ಮಾಡಲಾಗುತ್ತಿದೆ. ಬಿಜೆಪಿಯವರ ಮೇಲೆ ಐಟಿ ದಾಳಿಗಳು ಆಗುತ್ತಿಲ್ಲ. ಬಿಜೆಪಿಯವರ ಮನೆಗಳ ಮೇಲೂ ಐಟಿ ದಾಳಿ ನಡೆದರೆ ಬೇನಾಮಿ ಹಣ ದೊರೆಯಬಹುದು. ಆದರೆ, ಅವರ ಮೇಲೆ ದಾಳಿ ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ.

Read More

ರಾಯಚೂರು:- ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಎನ್ ಎಸ್ ಬೋಸರಾಜ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್‌ನಲ್ಲಾಗಲಿ, ಕಾಂಗ್ರೆಸ್‌ ನಾಯಕರಲ್ಲಾಗಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ ಎಂದರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಶಾಸಕ ಬಿ.ಕೆ.ಹರಿಪ್ರಸಾದ್‌ ಅಸಮಾಧಾನಗೊಂಡಿಲ್ಲ. ಅವರ ಸಮಾಜದ ಕಾರ್ಯಕ್ರಮಕ್ಕೆ ಸಿಎಂ, ಸಚಿವರು ಹಾಗೂ ಶಾಸಕರನ್ನು ಕರೆಯಲಾಗಿದೆ. ಸಮಾರಂಭಕ್ಕೆ ಹೋಗುವುದಿಲ್ಲವೆಂದು ಹರಿಪ್ರಸಾದ್‌ ನುಡಿದಿರುವುದು ಅವರ ವೈಯಕ್ತಿಕ ವಿಚಾರವಾಗಿದೆ. ಅದನ್ನು ಪಕ್ಷಕ್ಕೆ ತಳಕು ಹಾಕುವ ಅಗತ್ಯವಿಲ್ಲ ಎಂದರು. ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ಕುರಿತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿ, ದೇಶದಲ್ಲಿ ಪ್ರಜಾಸ್ವಾಮ್ಯದ ವ್ಯವಸ್ಥೆಯನ್ನು ಹದಗೆಡಿಸಿದ್ದು ಬಿಜೆಪಿ. ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲಿ ಸಾವಿರಾರು ಕೋಟಿ ಖರ್ಚು ಮಾಡಿ ಶಾಸಕರನ್ನು ಖರೀದಿ ಮಾಡಿ ಆಡಳಿತ ನಡೆಸಿದ್ದಾರೆ. ಅದಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ಮನೆಯಿಂದ ಹಣ ತಂದಿದ್ದಾರಾ?. ಇದನ್ನು ಜೋಶಿಯವರು ಅರ್ಥ ಮಾಡಿಕೊಂಡು ಮಾತನಾಡಬೇಕು ಎಂದು ತಿರುಗೇಟು ನೀಡಿದರು.

Read More