Author: AIN Author

ಹುಬ್ಬಳ್ಳಿ: ‘ರಾಜ್ಯ ಸರ್ಕಾರದ ‘ಗ್ಯಾರಂಟಿ’ ಯೋಜನೆ ಮೂಲಕ ಮಹಿಳೆಯರು ₹2 ಸಾವಿರ ಪಡೆಯುತ್ತಿದ್ದಾರೆ. ಆದರೆ, ಕೋವಿಡ್‌ ಸಂಕಷ್ಟದ ಕಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಉಚಿತವಾಗಿ ಲಸಿಕೆ ನೀಡಿ ಜೀವದ ಗ್ಯಾರಂಟಿ ನೀಡಿದ್ದರು ಎನ್ನುವುದನ್ನು ಮರೆಯಬಾರದು’ ಎಂದು ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಇಲ್ಲಿನ ಸವಾಯಿ ಗಂಧರ್ವ ಸಭಾಂಗಣದಲ್ಲಿ ನಮೋ ಬ್ರಿಗೇಡ್‌ ವತಿಯಿಂದ ಹಮ್ಮಿಕೊಂಡಿದ್ದ ‘ಇನ್ನೂ ಮಲಗಿದರೆ ಎದ್ದೇಳುವಾಗ ಭಾರತವಿರದು’ ಸರಣಿ ಉಪನ್ಯಾಸ ಕಾರ್ಯಕ್ರಮದ ಕೊನೆಯ ದಿನವಾದ ಅವರು ಮಾತನಾಡಿದರು. ‘ಕೋವಿಡ್‌ನಿಂದ ಇಡೀ ಜಗತ್ತೇ ತತ್ತರಿಸಿ ಹೋಗಿತ್ತು. ಭಾರತದ ಪರಿಸ್ಥಿತಿಯೂ ಭಿನ್ನವಾಗಿರಲಿಲ್ಲ. ಆಗ ಪ್ರಧಾನಿ ಮೋದಿ ಅವರು ಲಸಿಕೆ ತಯಾರಿಸಲು ವಿಜ್ಞಾನಿಗಳಿಗೆ ಕರೆ ನೀಡಿದರು. ಕೋವ್ಯಾಕ್ಸಿನ್‌, ಕೋವಿಶಿಲ್ಡ್‌ ತಯಾರಿಸಲಾಯಿತು. ಕೆಲವರು ಅದರ ಗುಣಮಟ್ಟ ಸರಿಯಿಲ್ಲ ಎಂದು ಆಕ್ಷೇಪಿಸಿ, ಅಮೆರಿಕದ ಕಂಪನಿಯ ಲಸಿಕೆ ಖರೀದಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದ್ದರು. ಅದ್ಯಾವುದಕ್ಕೂ ಒಪ್ಪದ ಮೋದಿ, ಸ್ವದೇಸಿ ಲಸಿಕೆಗೆ ಪ್ರಾಮುಖ್ಯತೆ ನೀಡಿದರು’ ಎಂದರು. ‘20ಕ್ಕೂ ಹೆಚ್ಚು ದೇಶಗಳಿಗೆ…

Read More

ನವದೆಹಲಿ: ಅತ್ಯಾಚಾರ ಆರೋಪಿಯೊಬ್ಬ (Rape Accused) ಜಾಮೀನಿನ (Bail) ಮೇಲೆ ಜೈಲಿನಿಂದ ಹೊರಬಂದು ತನ್ನ ಮೇಲೆ ಆರೋಪ ಹೊರಿಸಿದ್ದ ಮಹಿಳೆಯ ಅಪ್ರಾಪ್ತ ಮಗಳ ಮೇಲೆ ಆ್ಯಸಿಡ್ ದಾಳಿ (Acid Attack) ನಡೆಸಿ ನಂತರ ತಾನು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ (Delhi) ನಡೆದಿದೆ. ಆಘಾತಕಾರಿ ಘಟನೆ ಮಧ್ಯ ದೆಹಲಿಯಲ್ಲಿ ನಡೆದಿದೆ. ಅತ್ಯಾಚಾರ ಆರೋಪಿ ಪ್ರೇಮ್ ಸಿಂಗ್‌ಗೆ ಕುಟುಂಬದವರ ವಿವಾಹದಲ್ಲಿ ಪಾಲ್ಗೊಳ್ಳಲು ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿತ್ತು. https://ainlivenews.com/dengue-outbreak-record-level-cases-detected-in-last-1-month/ ತನ್ನ ಮೇಲೆ ಆರೋಪ ಹೊರಿಸಿದ್ದ ಮಹಿಳೆಯ ಬಳಿಗೆ ತೆರಳಿ ದೂರನ್ನು ಹಿಂಪಡೆಯುವಂತೆ ಕೇಳಿದ್ದಾನೆ. ಅದನ್ನು ನಿರಾಕರಿಸಿದ್ದಕ್ಕೆ ಆತ ಮಹಿಳೆಯ 17 ವರ್ಷದ ಮಗಳ ಮೇಲೆ ಆ್ಯಸಿಡ್ ಎರಚಿದ್ದಾನೆ. ಬಳಿಕ ತಾನೂ ಕುಡಿದಿದ್ದಾನೆ. ಪ್ರೇಮ್ ಸಿಂಗ್ ಹಾಗೂ ಮಹಿಳೆ ದೆಹಲಿಯ ಆನಂದ್ ಪರ್ಬತ್ ಪ್ರದೇಶದಲ್ಲಿ ನೆರೆಹೊರೆಯವರು. ವ್ಯಕ್ತಿ ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಾಗ ಪ್ರಕರಣವನ್ನು ಹಿಂಪಡೆಯುವಂತೆ ಮಹಿಳೆಗೆ ಬೆದರಿಕೆ ಹಾಕಿದ್ದಾನೆ. ಆಕೆ ನಿರಾಕರಿಸಿದಾಗ ಈ ಕೃತ್ಯ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಬೆಂಗಳೂರು:- ಕಳೆದ ವರ್ಷಕ್ಕಿಂತ ಈ ಬಾರಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗಿದೆ. ಅಕ್ಟೋಬರ್‌, ನವೆಂಬರ್‌ನಲ್ಲಿ ತುಸು ಇಳಿಕೆಯಾಗಿದ್ದರೂ ಆ ಬಳಿಕ ಮತ್ತೆ ಏರಿಕೆ ಕಂಡಿರುವುದು ಆತಂಕ ಮೂಡಿಸಿದೆ. ರಾಜ್ಯದಲ್ಲಿ ಒಟ್ಟು 15,089 ಮಂದಿ ಡೆಂಗ್ಯೂಗೆ ತುತ್ತಾಗಿದ್ದಾರೆ. ಇದರಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 4 ಹಾಗೂ ಕೊಡಗು, ಹಾಸನ, ತುಮಕೂರು ವ್ಯಾಪ್ತಿಯಲ್ಲಿ ತಲಾ ಒಬ್ಬರು, ಉಡುಪಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 2021ರಲ್ಲಿ 6,300 ಪ್ರಕರಣ ದಾಖಲಾಗಿದ್ದು, ಐವರು ಮೃತಪಟ್ಟಿದ್ದರು. 2022ರಲ್ಲಿ 8,500 ಪ್ರಕರಣ ಪಾಸಿಟಿವ್‌ ಇದ್ದು, 9 ಮಂದಿ ಸಾವಿಗೀಡಾಗಿದ್ದರು. ಬಿಟ್ಟು ಬಿಟ್ಟು ಮಳೆ, ಹೊಸ ಕಟ್ಟಡ ನಿರ್ಮಾಣ, ರಸ್ತೆಗಳಲ್ಲಿ ಹೊಂಡ ಗುಂಡಿ ಮುಖ್ಯ ಕಾರಣ ಎನ್ನಲಾಗುತ್ತಿದೆ. ಕಟ್ಟಡ ನಿರ್ಮಾಣ ಕಾಮಗಾರಿ ಪ್ರದೇಶದಲ್ಲಿ ನೀರು ನಿಲ್ಲುತ್ತಿದೆ. ಎಲ್ಲೆಂದರಲ್ಲಿ ಕಾಂಕ್ರೀಟ್‌ ರಸ್ತೆಗಳು ನಿರ್ಮಾಣವಾಗುತ್ತಿದ್ದು, ಇದರಿಂದಾಗಿ ನೀರು ಇಂಗಲು ಅವಕಾಶವೇ ಇಲ್ಲವಾಗಿದೆ. ರಸ್ತೆ ಗುಂಡಿಯಲ್ಲಿ ನಿಂತ ನೀರಿನಿಂದಾಗಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದೆ ಎನ್ನುವ ಅಭಿಪ್ರಾಯ ಆರೋಗ್ಯ ತಜ್ಞರದು. ರಾಜ್ಯದ ಪ್ರತಿಯೊಂದು ಸ್ಥಳೀಯಾಡಳಿತದಲ್ಲಿ ಸಾಂಕ್ರಾಮಿಕ ರೋಗಗಳ ತಡೆಗೆ ಸಿವಿಕ್‌ ಬೈಲಾ…

Read More

ಹುಬ್ಬಳ್ಳಿ:- ಬಿಜೆಪಿ ಕಾಂಗ್ರೆಸ್ ಸರ್ಕಾರ ಬೀಳುತ್ತೇ ಎಂಬ ಭ್ರಮೆಯಲ್ಲಿ ಇದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ನೈತಿಕತೆ ಇಲ್ಲ. ಅವರು ಇಂದಿಗೂ ಸರ್ಕಾರ ಬೀಳುತ್ತದೆ ಎಂಬ ಭ್ರಮೆಯಲ್ಲಿದ್ದಾರೆ ಎಂದರು. ಬಿಜೆಪಿ 40 ಪರ್ಸೆಂಟ್‌ ಸರ್ಕಾರ ಎಂಬ ಕಾರಣದಿಂದ ಅಧಿಕಾರ ಕಳೆದುಕೊಂಡಿತು. ನಾವು ಭ್ರಷ್ಟಾಚಾರ ಮಾಡಿಲ್ಲ ಅಂತ ಸಾಬೀತುಪಡಿಸಲು ಅವರಿಗೆ ಆಗಲಿಲ್ಲ. ಚುನಾವಣೆಯಲ್ಲಿ ಬಿಜೆಪಿಯವರು ಕೋಟ್ಯಂತರ ರುಪಾಯಿ ಖರ್ಚು ಮಾಡುತ್ತಾರಲ್ಲ, ಅವರೇನು ಸತ್ಯ ಹರಿಶ್ಚಂದ್ರರಾ? ಆ ದುಡ್ಡು ಎಲ್ಲಿಂದ ಬರುತ್ತೆ ತಿಳಿಸಲಿ ಎಂದರು. ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್‌ ಸರ್ಕಾರ ಇರುವುದಿಲ್ಲವಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ಅಧಿಕಾರ ಕಳೆದುಕೊಂಡ ಮೇಲೆ ಸಹಿಸಿಕೊಳ್ಳಲು ಆಗುತ್ತಿಲ್ಲ. 130 ಸ್ಥಾನಗಳಲ್ಲಿ ಬರುತ್ತೇವೆ ಅಂತ 60 ಸ್ಥಾನಕ್ಕೆ ಇಳಿದರು. ಅವರೀಗ ನೀರಿನಿಂದ ಹೊರ ಬಿದ್ದ ಮೀನಿನಂತಾಗಿದ್ದಾರೆ. ಮೊದಲು ಬಿಜೆಪಿಯವರು ತಮ್ಮ ಮನೆಯನ್ನು ಸರಿಪಡಿಸಿಕೊಳ್ಳಲಿ ಎಂದರು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ‘ಜೈ ಶ್ರೀರಾಮ್’…

Read More

ಬೆಂಗಳೂರು:- ಬಿಜೆಪಿಯವರ ಮನೆಗಳ ಮೇಲೂ ಐಟಿ ದಾಳಿ ನಡೆದರೆ ಬೇನಾಮಿ ಹಣ ದೊರೆಯಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ಸಿಗರನ್ನೇ ಗುರಿಯಾಗಿಸಿ ಯಾಕೆ ಆದಾಯ ತೆರಿಗೆ (ಐಟಿ) ದಾಳಿ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿಗರ ಮೇಲೆ ಐಟಿ ದಾಳಿಯಾದರೂ ಸಾಕಷ್ಟು ಹಣ ಸಿಗುತ್ತದೆ. ಆದರೆ ಮಾಡುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಯಾರ ಬಳಿ ಬೇನಾಮಿ ಹಣ ದೊರೆತರೂ ಅದು ಕಾನೂನು ರೀತಿಯಲ್ಲಿ ತಪ್ಪು. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲೇ ಬೇಕು ಎಂದಿದ್ದಾರೆ ಆದರೆ, ಯಾಕೆ ಕಾಂಗ್ರೆಸ್ ಪಕ್ಷದವರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿಗಳನ್ನು ಮಾಡಲಾಗುತ್ತಿದೆ. ಬಿಜೆಪಿಯವರ ಮೇಲೆ ಐಟಿ ದಾಳಿಗಳು ಆಗುತ್ತಿಲ್ಲ. ಬಿಜೆಪಿಯವರ ಮನೆಗಳ ಮೇಲೂ ಐಟಿ ದಾಳಿ ನಡೆದರೆ ಬೇನಾಮಿ ಹಣ ದೊರೆಯಬಹುದು. ಆದರೆ, ಅವರ ಮೇಲೆ ದಾಳಿ ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ.

Read More

ರಾಯಚೂರು:- ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಎನ್ ಎಸ್ ಬೋಸರಾಜ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್‌ನಲ್ಲಾಗಲಿ, ಕಾಂಗ್ರೆಸ್‌ ನಾಯಕರಲ್ಲಾಗಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ ಎಂದರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಶಾಸಕ ಬಿ.ಕೆ.ಹರಿಪ್ರಸಾದ್‌ ಅಸಮಾಧಾನಗೊಂಡಿಲ್ಲ. ಅವರ ಸಮಾಜದ ಕಾರ್ಯಕ್ರಮಕ್ಕೆ ಸಿಎಂ, ಸಚಿವರು ಹಾಗೂ ಶಾಸಕರನ್ನು ಕರೆಯಲಾಗಿದೆ. ಸಮಾರಂಭಕ್ಕೆ ಹೋಗುವುದಿಲ್ಲವೆಂದು ಹರಿಪ್ರಸಾದ್‌ ನುಡಿದಿರುವುದು ಅವರ ವೈಯಕ್ತಿಕ ವಿಚಾರವಾಗಿದೆ. ಅದನ್ನು ಪಕ್ಷಕ್ಕೆ ತಳಕು ಹಾಕುವ ಅಗತ್ಯವಿಲ್ಲ ಎಂದರು. ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ಕುರಿತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿ, ದೇಶದಲ್ಲಿ ಪ್ರಜಾಸ್ವಾಮ್ಯದ ವ್ಯವಸ್ಥೆಯನ್ನು ಹದಗೆಡಿಸಿದ್ದು ಬಿಜೆಪಿ. ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲಿ ಸಾವಿರಾರು ಕೋಟಿ ಖರ್ಚು ಮಾಡಿ ಶಾಸಕರನ್ನು ಖರೀದಿ ಮಾಡಿ ಆಡಳಿತ ನಡೆಸಿದ್ದಾರೆ. ಅದಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ಮನೆಯಿಂದ ಹಣ ತಂದಿದ್ದಾರಾ?. ಇದನ್ನು ಜೋಶಿಯವರು ಅರ್ಥ ಮಾಡಿಕೊಂಡು ಮಾತನಾಡಬೇಕು ಎಂದು ತಿರುಗೇಟು ನೀಡಿದರು.

Read More

ವಾಷಿಂಗ್ಟನ್‌: ವೆರಿಫೈಡ್‌ ಟ್ವಿಟ್ಟರ್‌ ಖಾತೆಗಳನ್ನು (Verified Account) ಹೊಂದಿರುವ ಕಂಟೆಂಟ್‌ ಕ್ರಿಯೇಟರ್ಸ್‌ಗಳಿಗೆ ಜಾಹೀರಾತು ಆದಾಯದಲ್ಲಿ ಹಣ ನೀಡುವುದಾಗಿ ಟ್ವಿಟ್ಟರ್‌ ಸಂಸ್ಥೆ ಘೋಷಣೆ ಮಾಡಿದೆ. ತಮ್ಮ ರಿಪ್ಲೈಗಳಲ್ಲಿ ಪ್ರದರ್ಶಿಸಲಾದ ಜಾಹೀರಾತು ಆದಾಯದಲ್ಲಿ ಕಟೆಂಟ್‌ ಕ್ರಿಯೇಟರ್ಸ್‌ಗಳು (Content Creators) ಪಾಲನ್ನು ಪಡೆದುಕೊಳ್ಳಲಿದ್ದಾರೆ. ಈ ಸೌಲಭ್ಯಕ್ಕೆ ಅರ್ಹರಾಗಲು ಅವರು ಕಳೆದ 3 ತಿಂಗಳಲ್ಲಿ ತಮ್ಮ ಪೋಸ್ಟ್‌ಗಳಿಗೆ ಕನಿಷ್ಠ 50 ಲಕ್ಷ ಇಂಪ್ರೆಶನ್‌ಗಳನ್ನ ಒಳಗೊಂಡಿರಬೇಕು. ಜೊತೆಗೆ ಸ್ಟ್ರೈಪ್‌ ಪೇಮೆಂಟ್‌ ಅಕೌಂಟ್‌ ಅನ್ನು ಸಹ ಹೊಂದಿರಬೇಕಾಗುತ್ತದೆ ಎಂದು ಟ್ವಿಟ್ಟರ್‌ ಸಂಸ್ಥೆ ತಿಳಿಸಿದೆ. ಮಾರ್ಕ್‌ ಜುಕರ್‌ಬರ್ಗ್‌ ಒಡೆತನದ ಮೆಟಾ ಸಂಸ್ಥೆ ಟ್ವಿಟ್ಟರ್‌ಗೆ ಸೆಡ್ಡು ಹೊಡೆಯಲು ಥ್ರೆಡ್ಸ್‌ ಅಪ್ಲಿಕೇಶನ್‌ ಅನ್ನು ಬಿಡುಗಡೆ ಮಾಡಿದೆ. ಈ ಬೆನ್ನಲ್ಲೇ ಟ್ವಿಟ್ಟರ್‌ ಹೆಚ್ಚು ಕಂಟೆಂಟ್‌ ಕ್ರಿಯೇಟರ್ಸ್‌ಗಳನ್ನ ತನ್ನತ್ತ ಸೆಳೆಯಲು ಪ್ಲ್ಯಾನ್‌ ಮಾಡಿದ್ದು, ಈ ಆಫರ್‌ ನೀಡಿದೆ. ಈ ನಡುವೆ ವಿಶ್ವದ ಶ್ರೀಮಂತ ಉದ್ಯಮಿಯಾಗಿರುವ ಎಲೋನ್ ಮಸ್ಕ್ (Elon Musk) ಹೊಸ ಕೃತಕ ಬುದ್ಧಿಮತ್ತೆಯ ಸ್ಟಾರ್ಟ್ ಅಪ್ ‘ಎಕ್ಸ್ಎಐ’ (xAI) ಅನ್ನು ಪ್ರಾರಂಭಿಸಿದ್ದಾರೆ. ಇತ್ತೀಚೆಗೆ ಎಐ (AI) ಲೋಕದಲ್ಲಿ…

Read More

ಗೋಡಂಬಿಯನ್ನು ಹುರಿದು, ಖಾದ್ಯಗಳಿಗೆ ಬಳಕೆ ಮಾಡಲಾಗುತ್ತದೆ. ಗೋಡಂಬಿ ಹಾಕಿದ ಖಾದ್ಯದ ರುಚಿಯು ಅದ್ಭುತವಾಗಿರುತ್ತದೆ. ಹಬ್ಬಗಳ ಸಂದರ್ಭದಲ್ಲಿ ಹೆಚ್ಚಾಗಿ ಗೋಡಂಬಿಯನ್ನು ಬಳಕೆ ಮಾಡಲಾಗುತ್ತದೆ. ಇದರಿಂದ ಬರ್ಫಿ ಕೂಡ ತಯಾರು ಮಾಡುವರು.  ಗೋಡಂಬಿ ಬೀಜದಂತೆ ಅದರ ಹಣ್ಣು ಕೂಡ ರುಚಿಕರ ಹಾಗೂ ಅದರಲ್ಲೂ ಹಲವಾರು ರೀತಿಯ ಪೋಷಕಾಂಶಗಳು ಇವೆ. ಗೋಡಂಬಿಯನ್ನು ಅತಿಯಾಗಿ ತಿಂದರೆ ಅದು ಕೊಬ್ಬು ಹೆಚ್ಚಿಸುತ್ತದೆ ಎಂದು ಹೇಳುವರು. ಆದರೆ ಗೋಡಂಬಿಯಿಂದ ಸಿಗುವ ಆರೋಗ್ಯ ಲಾಭಗಳ ಬಗ್ಗೆ ತಿಳಿಯಿರಿ. ಹೃದಯದ ಆರೋಗ್ಯ ಗೋಡಂಬಿ ಸೇವನೆ ಮಾಡಿದರೆ ಅದರಿಂದ ಹೃದಯದ ಕೆಲವು ಸಮಸ್ಯೆಗಳು ಸೇರಿದಂತೆ ವಿವಿಧ ರೀತಿಯ ಕಾಯಿಲೆಗಳನ್ನು ದೂರವಿಡುತ್ತದೆ ಎಂದು ಅಧ್ಯಯನಗಳು ಹೇಳಿವೆ. ಇದರಲ್ಲಿ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡುವಂತಹ ಗುಣವಿದ್ದು, ಆರೋಗ್ಯಕಾರಿ ಆಹಾರ ಕ್ರಮಕ್ಕೆ ಪರಿಣಾಮಕಾರಿ ಮತ್ತು ಆಕ್ಸಿಡೇಟಿವ್ ಒತ್ತಡ, ಉರಿಯೂತ ಮತ್ತು ನಾಳೀಯ ಪ್ರತಿಕ್ರಿಯಾತ್ಮಕತೆ ಮೇಲೆ ಪರಿಣಾಮ ಬೀರುವುದು. ಗೋಡಂಬಿಯು ಉತ್ತಮ ಕೊಲೆಸ್ಟ್ರಾಲ್ ನ್ನು ಹೆಚ್ಚಿಸುವುದು ಮತ್ತು ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುವುದು. ರಕ್ತದ ಕಾಯಿಲೆ ತಡೆಯುವುದು ಗೋಡಂಬಿಯನ್ನು ಮಿತ…

Read More

ಸೂರ್ಯೋದಯ: 06.31 AM, ಸೂರ್ಯಾಸ್ತ : 05.54 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಕಾರ್ತೀಕ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ತ್ರಯೋದಶಿ 07:10 AM ತನಕ ನಂತರ ಚತುರ್ದಶಿ ನಕ್ಷತ್ರ: ಇವತ್ತು ವಿಶಾಖ 12:14 PM ತನಕ ನಂತರ ಅನುರಾಧ ಯೋಗ: ಇವತ್ತು ಸುಕರ್ಮಾ08:59 PM ತನಕ ನಂತರ ಧೃತಿ ಕರಣ: ಇವತ್ತು ವಣಿಜ 07:10 AM ತನಕ ನಂತರ ವಿಷ್ಟಿ 06:52 PM ತನಕ ನಂತರ ಶಕುನಿ ರಾಹು ಕಾಲ: 07:30 ನಿಂದ 09:00 ವರೆಗೂ ಯಮಗಂಡ: 10:30 ನಿಂದ 12:00 ವರೆಗೂ ಗುಳಿಕ ಕಾಲ: 12:00 ನಿಂದ 01:30 ವರೆಗೂ ಅಮೃತಕಾಲ: 03.17 AM to 04.54 AM ಅಭಿಜಿತ್ ಮುಹುರ್ತ: ಬೆಳಗ್ಗೆ.11:47 ನಿಂದ ಮ.12:31 ವರೆಗೂ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ,…

Read More

ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಹೊರಹಾಕಲು ಚಳಿಗಾಲದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಾವು ಕೆಳಗೆ ಹೇಳುತ್ತಿರುವ ಉಂಡೆ ಸೇವಿಸುತ್ತಾ ಬಂದ್ರೆ ಪ್ರಯೋಜನಕಾರಿ ಆಗಲಿದೆ. ಅಗಸೆಬೀಜದ ಲಡ್ಡು ಸೇವನೆಯಿಂದ ಚಳಿಗಾಲದ ಹಲವು ರೀತಿಯ ಸಮಸ್ಯೆಗಳು ನಿವಾರಣೆಯಾಗುತ್ತವೆ. ಅಗಸೆಬೀಜವು ಒಮೆಗಾ -3 ಕೊಬ್ಬಿನಾಮ್ಲಗಳು ಮತ್ತು ಅನೇಕ ಅಗತ್ಯ ಜೀವಸತ್ವಗಳನ್ನು ಒಳಗೊಂಡಿರುವ ಬೀಜಗಳಾಗಿವೆ. ಅಗಸೆ ಬೀಜದ ಲಡ್ಡು ಮಾಡುವ ಪಾಕವಿಧಾನ ಅಗತ್ಯ ಪದಾರ್ಥಗಳು ಅಗಸೆಬೀಜ – 500 ಗ್ರಾಂ ಮೆಂತ್ಯ ಬೀಜಗಳು – 50 ಗ್ರಾಂ ಅಕ್ಕಿ ಹಿಟ್ಟು – 1 ಕಪ್ ಬೆಲ್ಲ – 500 ಗ್ರಾಂ ಒಣ ಶುಂಠಿ – 50 ಗ್ರಾಂ ದೇಸಿ ತುಪ್ಪ – 150 ಗ್ರಾಂ ಒಣದ್ರಾಕ್ಷಿ – 50 ಗ್ರಾಂ ಗೋಡಂಬಿ – 50 ಗ್ರಾಂ ಒಣ ತೆಂಗಿನಕಾಯಿ – 50 ಗ್ರಾಂ ತಯಾರಿಸುವ ವಿಧಾನ >> ಅಗಸೆಬೀಜದ ಲಡ್ಡು ತಯಾರಿಸಲು, ಮೊದಲು ಅಗಸೆಬೀಜಗಳನ್ನು ಚೆನ್ನಾಗಿ ಹುರಿಯಿರಿ. >> ಇದರ ನಂತರ, ಅದನ್ನು ತಣ್ಣಗಾಗಿಸಿ ಮತ್ತು ಒರಟಾಗಿ ಪುಡಿಮಾಡಿ. ಈಗ…

Read More