ಬೆಂಗಳೂರು:- ಚಿನ್ನ ವಂಚಕಿ ಐಶ್ವರ್ಯಗೌಡ ವಿರುದ್ಧ ಮಂಡ್ಯದಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. https://ainlivenews.com/forest-fire-on-top-of-charmadi-ghat-hill-hundreds-of-acres-of-forest-burnt/ ಭಾಗ್ಯಮ್ಮ ಎಂಬುವವರು ತಮಗೂ ವಂಚನೆ ಮಾಡಿರುವುದಾಗಿ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಮೇರೆಗೆ ಐಶ್ವರ್ಯಗೌಡ ವಿರುದ್ಧ ಐಪಿಸಿ ಸೆಕ್ಷನ್ 406, 420, 417, 120ಬಿ, 540, 34ರ ಅಡಿ ಕೇಸ್ ದಾಖಲಾಗಿದೆ. ನವ್ಯಶ್ರೀ ಅಲಿಯಾಸ್ ಐಶ್ವರ್ಯಗೌಡ, ಪತಿ ಹರೀಶ್, ಸಹೋದರ ಮಂಜುನಾಥ್ ಹಾಗೂ ಯಶವಂತ್ ಎಂಬುವರ ಪ್ರಕರಣ ದಾಖಲಾಗಿದೆ ಮೊದಲು ರಿಯಲ್ ಎಸ್ಟೇಟ್ ಹಾಗೂ ಚೀಟಿ ವ್ಯವಹಾರ ಮಾಡುವುದಾಗಿ ಐಶ್ವರ್ಯ ನಂಬಿಸಿದ್ದಾಳೆ. ಒಟ್ಟು 33 ಲಕ್ಷ ರೂ. ನಗದು ಹಾಗೂ 366 ಗ್ರಾಂ ಚಿನ್ನದ ಒಡವೆಗಳನ್ನ ಪಡೆದುಕೊಂಡಿದ್ದಾಳೆ. ಇದು ತನ್ನ ಮೃತ ಗಂಡನ ನಿವೃತ್ತಿಯ ಹಣ ಅಂತ ಭಾಗ್ಯಮ್ಮ ಹೇಳಿಕೊಂಡಿದ್ದಾಳೆ. 1 ಲಕ್ಷಕ್ಕೆ 10 ಪರ್ಸೆಂಟ್ ಬಡ್ಡಿ ಹಣ ನೀಡುವುದಾಗಿ ಆಮಿಷ ಒಡ್ಡಿ ಹಣ ಪಡೆದ ಐಶ್ವರ್ಯ ವಂಚನೆ ಎಸಗಿದ್ದಾಳೆ ಎಂದು ದೂರಿನಲ್ಲಿ ಭಾಗ್ಯಮ್ಮ ತಿಳಿಸಿದ್ದಾರೆ.
Author: AIN Author
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನ ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ. ಪ್ರಾಣಿ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿದೆ. https://ainlivenews.com/6th-commemoration-of-trividha-dasohi-commemoration-today-at-siddhganga-mutt/ ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಕಾಡ್ಗಿಚ್ಚಿಗೆ ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ. ಇನ್ನು ಬೆಂಕಿ ಹೆಚ್ಚಾಗುತ್ತಿದ್ದಂತೆ ಪ್ರಾಣಿ ಸಂಕುಲ ದಿಕ್ಕೆಟ್ಟು ಓಡಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಹರಸಾಹಸಪಟ್ಟಿದ್ದಾರೆ.
ತುಮಕೂರು:- ಶಿವೈಕ್ಯ ಡಾ.ಶಿವಕುಮಾರ ಶ್ರೀಗಳು ಇಂದಿಗೆ ನಮ್ಮೆನ್ನೆಲ್ಲ ಅಗಲಿ 6 ವರ್ಷಗಳೇ ಕಳೆದಿದ್ದು, ಇದರ ಸ್ಮರಣಾರ್ಥವಾಗಿ ಇಂದು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. https://ainlivenews.com/electrical-accident-7-bulls-in-the-barn-burned-alive/ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ಹಿನ್ನೆಲೆ ಮಠದ ಆವಣರಣದಲ್ಲಿ ಬೃಹತ್ ವೇದಿಕೆ ತಲೆ ಎತ್ತಿದೆ. ಇಂದು ಬೆಳಗ್ಗೆಯಿಂದಲೇ ಸಿದ್ಧಮಠದ ಆವರಣದಲ್ಲಿರುವ ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ ಗದ್ದುಗೆಗೆ ಮಂತ್ರಘೋಷ್ಯಗಳೊಂದಿಗೆ ವಿಶೇಷ ಪೂಜೆ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಗೆ ಮಠದ ಆವರಣದಲ್ಲಿ ಶ್ರೀಗಳ ಪುತ್ಥಳಿಯನ್ನ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಮಾಡಲಾಗುತ್ತದೆ. ಬೆಳಗ್ಗೆ 11 ಗಂಟೆಗೆ ಶ್ರೀಮಠದ ಆವರಣದಲ್ಲಿ ನಿರ್ಮಾಣವಾಗಿರುವ ಬೃಹತ್ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೇಘಾಲಯ ರಾಜ್ಯಪಾಲ ಸಿ.ಹೆಚ್ ವಿಜಯಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇನ್ನು ವೇದಿಕೆಯಲ್ಲಿ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಮಹಾಸ್ವಾಮಿ ಹಾಗೂ ಉತ್ತಾಧಿಕಾರಿ ಶ್ರೀ ಶಿವ ಸಿದ್ಧೇಶ್ವರ ಸ್ವಾಮೀಜಿ, ಮೈಸೂರಿನ ಶ್ರೀ ಸುತ್ತೂರು ವೀರಸಿಂಹಾಸನ ಸಂಸ್ಥಾನ ಮಠದ ಅಧ್ಯಕ್ಷ ಶ್ರೀ ಶಿವರಾತ್ರಿ…
ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇಮಗಾರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂರ್ಟ್‌ನಿಂದ ಕೊಟ್ಟಿಗೆಯಲ್ಲಿದ್ದ 7 ಹೋರಿಗಳ ಸಜೀವ ದಹನವಾದ ಘಟನೆ ಜರುಗಿದೆ. https://ainlivenews.com/current-cut-today-in-these-areas-of-bangalore-where/ ಹೇಮಗಾರದ ಮಹೇಶ್ ಹೆಗಡೆ ಎಂಬವರ ಮನೆಯಲ್ಲಿ ಬಾನುವಾರ ತಡರಾತ್ರಿ ಘಟನೆ ನಡೆದಿದ್ದು, ಸೋಮವಾರ ಸಂಜೆ ವೇಳೆಯಲ್ಲಿ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲಿದ್ದ ವೈರ್‌ಗೆ ಶಾರ್ಟ್ ಸರ್ಕ್ಯೂರ್ಟ್‌ನಿಂದಾಗಿ ಕಿಡಿ ಹೊತ್ತಿದ್ದು, ಕೊಟ್ಟಿಗೆಯ ಅಟ್ಟದ ಮೇಲಿರುವ ಹುಲ್ಲಿಗೆ ಈ ಕಿಡಿ ತಾಗಿ ಬೆಂಕಿ ಹತ್ತಿದೆ. ಹುಲ್ಲಿಗೆ ಬಿದ್ದ ಬೆಂಕಿ ಆವರಿಸಿ ಕೊಟ್ಟಿಗೆಯಲ್ಲಿದ್ದ 7 ಹೋರಿಗಳು ಸಜೀವ ದಹನವಾಗಿದೆ. ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. https://ainlivenews.com/bellary-kmf-office-witchcraft/ ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: ಬ್ರೆಂಟನ್ ರಸ್ತೆ, ಶೋಭಾ ಪರ್ಲ್, ಐಸಿಐಸಿಐ ಬ್ಯಾಂಕ್, ಹರ್ಬನ್ ಲೈಫ್, ಆರ್‌ಎಂಝಡ್, ಅಶೋಕ್ ನಗರ, ಗರುಡಮಾಲ್, ದೊಮ್ಮಲೂರು, ಆಸ್ಟಿನ್ ಟೌನ್, ವಿವೇಕ್ ನಗರ, ಟ್ರಿನಿಟಿ ಚರ್ಚ್, ತಾಜ್ ಹೋಟೆಲ್, ವಿಕ್ಟೋರಿಯಾ ಲೇಔಟ್, ಮ್ಯೂಸಿಯಂ ರಸ್ತೆ, ಆಲ್ಬರ್ಟ್ ಸ್ಟ್ರೀಟ್, ಕಿಂಗ್ ಸ್ಟ್ರೀಟ್, ಮ್ಯೂಸಿಯಂ ಅಡ್ಡ ರಸ್ತೆ, ಲ್ಯಾವೆಲ್ಲೆ ರಸ್ತೆಯಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಸೇಂಟ್ ಮಾರ್ಕ್ ರಸ್ತೆ, ವೈ.ಜಿ.ಪಾಳ್ಯ, ಕೆಎಸ್‌ಆರ್‌ಪಿ, ಐಟಿಸಿ ಹೋಟೆಲ್, ರಿಚ್ಮಂಡ್ ರಸ್ತೆ, ಎಂ.ಜಿ.ರಸ್ತೆ, ಕಾನ್ವೆಂಟ್ ರಸ್ತೆ, ಎಸ್‌ಎಲ್ ಅಪಾರ್ಟ್‌ಮೆಂಟ್, ರಿಚ್ಮಂಡ್ ಟೌನ್, ಸ್ಟೇನ್ ಗಾರ್ಡನ್, ರಿಚ್‌ಮಂಡ್ ಪಾರ್ಕ್, ಲಾಂಗ್‌ಫೋರ್ಡ್ ರಸ್ತೆ, ಬ್ರೈಟ್ ಸ್ಟ್ರೀಟ್, ಫುಡ್‌ವರ್ಲ್ಡ್ ರಸ್ತೆ, ಜಾನ್ಸನ್ ಮಾರುಕಟ್ಟೆ, ಬಿಡಬ್ಲ್ಯೂಎಸ್ಎಸ್‌ಬಿ ನೀರು…
ಬಳ್ಳಾರಿ:- ಸಿಬ್ಬಂದಿ ಸರ್ಪಗಾವಲಿನಲ್ಲೂ ಕಿಡಿಗೇಡಿಗಳು ಬಳ್ಳಾರಿ ಕೆಎಂಎಫ್ ಕಚೇರಿಯಲ್ಲಿ ವಾಮಾಚಾರ ಮಾಡಿದ್ದಾರೆೆ https://ainlivenews.com/shocking-incident-in-bangalore-woman-carried-and-raped-near-kr-market/ ಬಳ್ಳಾರಿ ಕೆಎಂಎಫ್ ಕಚೇರಿ ಬಳಿ ಕಪ್ಪು ಗೊಂಬೆ, ದೊಡ್ಡ ಕುಂಬಳಕಾಯಿ, ತೆಂಗಿನಕಾಯಿ, 8 ನಿಂಬೆ ಹಣ್ಣು, ಕುಂಕುಂಮ ಹಾಕಿ ಮೊಳೆ ಹೊಡೆದು ಭಯಂಕರ ಮಾಟಮಂತ್ರ ಮಾಡಿರುವ ಘಟನೆ ನಡೆದಿದೆ. ಇದು ಬಳ್ಳಾರಿ ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ. ಸಿಸಿ ಕ್ಯಾಮರಾ, ಸಿಬ್ಬಂದಿ ಸರ್ಪಗಾವಲು ಮದ್ಯೆಯೇ ಕೆಎಂಎಫ್ ಆಡಳಿತ ಕಚೇರಿ ಮುಂದೆಯೇ ವಾಮಾಚಾರ ಮಾಡಿರುವುದು ಅಚ್ಚರಿಗೂ ಕಾರಣವಾಗಿದೆ. ಭಯಂಕರ ಮಾಟ ಮಂತ್ರ ನೋಡಿ ಕೆಎಂಎಫ್ ಸಿಬ್ಬಂದಿ ಬೆಚ್ಚಿ ಬಿದ್ದಿದ್ದಾರೆ. ಇಡೀ ಕೆಎಂಎಫ್ ಕಚೇರಿ ಸುತ್ತಲೂ ಅಷ್ಟೆಲ್ಲಾ ಸಿಸಿ ಕ್ಯಾಮರಾಗಳ ಕಣ್ಗಾವಲು, ಭದ್ರತಾ ಸಿಬ್ಬಂದಿ ನಡುವೆ ಈ ವಾಮಾಚಾರ ಹೇಗೆ ನಡೆಯಿತು ಎಂಬುದೇ ಯಕ್ಷಪ್ರಶ್ನೆಯಾಗಿದೆ. ಸಿಸಿಟಿವಿ, ಭದ್ರತಾ ಸಿಬ್ಬಂದಿ ಮಧ್ಯೆ ಯಾರು? ಹೇಗೆ? ವಾಮಾಚಾರ ಮಾಡಿದರು ಎಂಬ ಪ್ರಶ್ನೆಗಳು ಮೂಡಿವೆ ಸದ್ಯ ಚುನಾಯಿತ ಆಡಳಿತ ಮಂಡಳಿ ಇಲ್ಲದೇ, ಹಿಂದಿನ ಆಡಳಿತ ಮಂಡಳಿಯನ್ನೇ ತಾತ್ಕಾಲಿಕವಾಗಿ ಮುಂದುವರೆಸಲಾಗಿದೆ. ಅದಕ್ಕೂ ಸಾಕಷ್ಟು ಅಸಮಾಧಾನ ಇದೆ ಎನ್ನಲಾಗ್ತಿದೆ.…
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಬಾನುವಾರ ರಾತ್ರಿ ಘನಘೋರ ಕೃತ್ಯ ನಡೆದಿದೆ. ಕೆಆರ್ ಮಾರ್ಕೆಟ್ನ ಗೋಡೌನ್ ಸ್ಟ್ರೀಟ್ನಲ್ಲಿ ಇಬ್ಬರು ದುಷ್ಕರ್ಮಿಗಳು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. https://ainlivenews.com/free-health-checkup-for-pregnant-women-on-these-dates-of-the-month-department-of-health/ ಭಾನುವಾರ ರಾತ್ರಿ 11.30 ರ ಸುಮಾರಿಗೆ ಮಹಿಳೆ ಯಲಹಂಕಕ್ಕೆ ತೆರಳಲು ಕೆಆರ್ ಮಾರ್ಕೆಟ್ ಬಳಿ ಬಸ್ಗಾಗಿ ಕಾಯುತ್ತಿದ್ದರು. ಯಲಹಂಕ ಕಡೆಗೆ ಬಸ್ ಬರದ ಕಾರಣ ಬಸ್ ಎಲ್ಲಿ ಬರುತ್ತದೆ ಎಂದು ಸ್ಥಳದಲ್ಲಿದ್ದವರಲ್ಲಿ ವಿಚಾರಿಸುತ್ತಿರುವಾಗ ದುಷ್ಕರ್ಮಿಗಳು ಬಂದಿದ್ದಾರೆ. ಬಸ್ ಬರುವ ಜಾಗ ತೋರಿಸತ್ತೇವೆ ಎಂದು ಸಮೀಪದಲ್ಲೇ ಇರುವ ಗೋಡೌನ್ ಸ್ಟ್ರೀಟ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೆ, ಮಹಿಳೆಯ ಬಳಿ ಇದ್ದ ಚಿನ್ನಾಭರಣ, ಹಣ ದೋಚಿ ಪರಾರಿಯಾಗಿದ್ದಾರೆ 37 ವರ್ಷದ ಮಹಿಳೆ ಒಂದು ವಾರದ ಹಿಂದೆ ಗಂಡನ ಜೊತೆ ಜಗಳ ಮಾಡಿಕೊಂಡು ಊರು ಬಿಟ್ಟಿದ್ದರು. ಹೀಗೆ ಊರು ಬಿಟ್ಟಿದ್ದ ಮಹಿಳೆ ಮಠ, ವಿಕ್ಟೋರಿಯಾ ಆಸ್ಪತ್ರೆ ಆವರಣ ಸೇರಿದಂತೆ ಬಿಬಿಎಂಪಿ ನಮ್ಮ ಮನೆಯಲ್ಲೂ ಉಳಿದುಕೊಂಡಿದ್ದರು. ಆದರೆ ಜನವರಿ19 ರಂದು ರಾತ್ರಿ ಭಾನುವಾರ ರಾತ್ರಿ ಬಸ್ ಸ್ಟಾಪ್ನಲ್ಲಿ ಕುಳಿತಿದ್ದ…
ಹಿಂದೂ ಧರ್ಮದಲ್ಲಿ ಮಂಗಳವಾರವನ್ನು ಹನುಮಂತನಿಗೆ ಅರ್ಪಿಸಿದರೆ, ಜ್ಯೋತಿಷ್ಯ ಶಾಸ್ತ್ರದಲ್ಲಿ ಮಂಗಳವಾರವನ್ನು ಮಂಗಳ ಗ್ರಹದ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನದಂದು ಹನುಮಂತನ ಆರಾಧನೆ ಮಾಡುವುದರಿಂದ ಮನುಷ್ಯನ ಎಲ್ಲಾ ದುಃಖಗಳು ದೂರಾಗುತ್ತದೆ ಎನ್ನುವ ನಂಬಿಕೆಯಿದೆ. ಹನುಮಂತನನ್ನು ಮೆಚ್ಚಿಸಲು ಪೂಜೆ ಮತ್ತು ಮಂತ್ರಗಳ ಪಠಣ, ಮಂಗಳವಾರ ಕೆಂಪು ಬಟ್ಟೆ ಧರಿಸುವುದು, ಪೂಜೆಯ ಸಮಯದಲ್ಲಿ ಸಿಹಿ ತಿಂಡಿಗಳನ್ನು ಅರ್ಪಿಸುವುದು, ಹನುಮಾನ್ ದೇವಾಲಯಗಳಿಗೆ ಭೇಟಿ ನೀಡುವುದು, ಯೋಗ ಅಥವಾ ಧ್ಯಾನದ ಸಮಯದಲ್ಲಿ ‘ಶ್ರೀ ರಾಮ್ ಜೈ ರಾಮ್ ಜೈ ಜೈ ರಾಮ್’ ಎಂದು ಜಪಿಸುವುದು ಮತ್ತು ಶಾಂತಿ, ಸಮೃದ್ಧಿ ಮತ್ತು ಸಂತೋಷಕ್ಕಾಗಿ ಹನುಮಾನ್ ಚಾಲೀಸಾವನ್ನು ಪಠಿಸುವುದು. ಹೀಗೆ ಹನುಮಂತನ ಅನುಗ್ರಹ ಪಡೆಯಲು ಅನೇಕ ಮಾರ್ಗಗಳಿದ್ದು, ಇವುಗಳನ್ನು ಅಳವಡಿಸಿಕೊಂಡಲ್ಲಿ ದೇವರ ಆಶೀರ್ವಾದ ಪಡೆಯಬಹುದು. ಮಂಗಳವಾರದ ದಿನದಂದು ಹನುಮಾನ್ ಚಾಲೀಸಾವನ್ನು ಪಠಿಸುವುದು ಬಜರಂಗ ಬಲಿಯನ್ನು ಮೆಚ್ಚಿಸಲು ಸುಲಭವಾದ ಮಾರ್ಗವಾಗಿದೆ. ಚಾಲೀಸಾವನ್ನು ಪ್ರತಿದಿನ ಅಥವಾ ಪ್ರತಿ ಮಂಗಳವಾರ ಮತ್ತು ಶನಿವಾರ ಪಠಿಸಬೇಕು. ಹನುಮಾನ್ ಚಾಲೀಸಾವನ್ನು ಹೊರತುಪಡಿಸಿ, ನೀವು ಶ್ರೀ ರಾಮಚರಿತ ಮಾನಸದ ಸುಂದರಕಾಂಡವನ್ನು…
ಬೆಂಗಳೂರು:- ಮಾತೃತ್ವ ಸುರಕ್ಷತಾ ಅಭಿಯಾನಕ್ಕೆ ಒತ್ತು ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. https://ainlivenews.com/three-days-of-rain-in-karnataka-from-today-all-are-on-high-alert/ ಪ್ರತಿ ತಿಂಗಳು 9 ಹಾಗೂ 24ನೇ ತಾರಿಖಿನಂದು ಎರಡು ಬಾರಿ ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ ನಡೆಯಲಿದೆ. ಇದೇ ತಿಂಗಳ 22 ರಂದು ರಾಯಚೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿc ಗರ್ಬಿಣಿಯರಿಗಾಗಿಯೇ ಬೃಹತ್ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಂಡಿದ್ದು, ಆರೋಗ್ಯ ಸವಿವ ದಿನೇಶ್ ಗುಂಡೂರಾವ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.. ಈ ಮೂಲಕ ಗರ್ಭಿಣಿಯರ ಸುರಕ್ಷತೆ ದೃಷ್ಟಿಯಿಂದ ಮಾತೃತ್ವ ಸುರಕ್ಷತಾ ಅಭಿಯಾನವನ್ನ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ನಡೆಸಲು ರಾಜ್ಯ ಆರೋಗ್ಯ ಇಲಾಖೆ ಮುಂದಾಗಿದೆ. ಮಾತೃತ್ವ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲು ಮುಂದಾಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಾಯಂದಿರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಗರ್ಭಿಣಿಯರ ಆರೋಗ್ಯ ತಪಾಸಣಾ ಶಿಬಿರಗಳನ್ನ ದೊಡ್ಡಮಟ್ಟದಲ್ಲಿ ರಾಜ್ಯದಾದ್ಯಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಸುವಂತೆ ಸೂಚನೆ ನೀಡಿದ್ದಾರೆ. ಆರೋಗ್ಯ ಇಲಾಖೆ ಹಾಕಿಕೊಂಡಿರುವ ಕ್ರಮಗಳು ಈ ಕೆಳಗಿನಂತಿದೆ. <span;>* ಗುಣಾತ್ಮಕ ಹೆರಿಗೆ…
ಬೆಂಗಳೂರು:- ಇಂದಿನಿಂದ ಕರ್ನಾಟಕದಲ್ಲಿ 3 ದಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainlivenews.com/insult-to-ambedkar-joshi-expressed-displeasure-against-congress/ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇಷ್ಟೇ ಅಲ್ಲ, ಕೋಲಾರ, ಬೆಂಗಳೂರು, ಮೈಸೂರು, ತುಮಕೂರು, ಶಿವಮೊಗ್ಗ, ಧಾರವಾಡ, ದಾವಣಗೆರೆ, ರಾಮನಗರ, ಹಾಸನ, ಮಡಿಕೇರಿ, ಕೊಡಗು, ಮಂಡ್ಯ, ಚಾಮರಾಜನಗರದಲ್ಲೂ ಮಳೆ ಆಗಲಿದೆ. ಮೋಡ ಕವಿದ ವಾತಾವರಣದ ಕಾರಣ ಚಳಿ ಪ್ರಮಾಣ ಕಡಿಮೆಯಾಗಲಿದೆ. ಇಂದು ಬೆಂಗಳೂರಲ್ಲಿ ಹಲವು ಕಡೆ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗಲಿದೆ. ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಮಂಗಳೂರು, ಉಡುಪಿಯಲ್ಲಿ ವರುಣನ ಆರ್ಭಟ ಜೋರಾಗಿ ಇರಲಿದೆ. ಇಂದಿನಿಂದ ಕರಾವಳಿ ಜಿಲ್ಲೆಗಳಲ್ಲಿ ಕೂಡ ಮಳೆ ಮುನ್ಸೂಚನೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಮೇತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.