Author: AIN Author

ಮಂಡ್ಯ: ಸಿಎಂ ಕುರ್ಚಿಯ ಚರ್ಚೆಯ ಬೆನ್ನಲ್ಲೇ ಈ ಸ್ವಾಮೀಜೀಯ ಹೇಳಿಕೆ ಭಾರೀ ಕುತೂಹಲ ಹೆಚ್ಚಿಸಿದೆ.  ಡಿ.ಕೆ ಶಿವಕುಮಾರ್‌ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗ್ತಾರೆ, ಅದಕ್ಕೆ ಎಲ್ಲಾ ಅವಕಾಶಗಳಿವೆ ಎಂದು ಶ್ರೀ ಕರಿವೃಷಭ ದೇಶಿಕೇಂದ್ರ ಶಿವ ಯೋಗೇಶ್ವರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಮಂಡ್ಯದ ಮದ್ದೂರು ತಾಲೂಕಿನ ಕದಲೂರು ಗ್ರಾಮದಲ್ಲಿ ನಡೆದ ಶ್ರೀ ಪಟ್ಟಲದಮ್ಮ ದೇವಿಯ ದೀಪೋತ್ಸವ ಕಾರ್ಯಕ್ರಮದಲ್ಲಿ ಸ್ವಾಮೀಜಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್‌ ರಾಜ್ಯದ ಸಿಎಂ ಆಗ್ತಾರೆ ಎಂದು ಹೇಳಿದ್ದಾರೆ. ಸರ್ಕಾರ ಸಿಎಂ ಆಯ್ಕೆ ಮಾಡುವ ವಿಚಾರದಲ್ಲಿ ಮೀಸಲಾತಿ  ಪ್ರಕಟಿಸುವುದು ಉತ್ತಮ ಅದು ಎಲ್ಲರಿಗೂ ಅನುಕೂಲವಾಗಲಿದೆ. ಎಲ್ಲಾ ಸಮುದಾಯಗಳು ಇನ್ನಷ್ಟು ಹೆಚ್ಚಾಗಿ ಸಂಘಟನೆಯಲ್ಲಿ ಬೆಳೆಯುವವರೆಗೆ ರಾಜಕೀಯದಲ್ಲಿಯೂ ಮೀಸಲಾತಿ ಕೊಟ್ಟು ಮುಂದುವರಿಯುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ.  https://ainlivenews.com/allotment-of-charge-of-additional-portfolios-to-four-union-ministers-including-karandlaje/ ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ (Chief Minister) ಆಗುವ ಅವಕಾಶ ಇದೆ. ಶ್ರೀಮಠದ ಪರಮ ಭಕ್ತರಾಗಿದ್ದಾರೆ, ಅವರು ಮುಖ್ಯಮಂತ್ರಿ ಆಗಲಿ ಎಂಬುದು ನಮ್ಮ ಸಂಕಲ್ಪ ಕೂಡ ಆಗಿದೆ ಎಂದು ಹೇಳಿದ್ದಾರೆ.…

Read More

ಧಾರವಾಡ: ಡಿಕೆಶಿ ಸಿಎಂ ಆಗಲಿ ಎಂದು ನೊಣವಿನಕೆರೆ ಸ್ವಾಮೀಜಿ ಹೇಳಿಕೆ ಕೊಟ್ಟ ವಿಚಾರವಾಗಿ ಬೈಲೂರು ನಿಷ್ಕಲಮಂಟಪದ ನಿಜಗುಣಾನಂದ ಸ್ವಾಮೀಜಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ ಅವರು, ಸ್ವಾಮೀಜಿಗಳು ರಾಜಕೀಯದಿಂದ ಹೊರತಾಗಿರಬೇಕು. ನಮ್ಮದೇನಿದ್ದರೂ ಧರ್ಮ, ಸಂಸ್ಕತಿ, ಸಂಸ್ಕಾರದ ವಿಚಾರಧಾರೆಗಳಿರಬೇಕು. ಈಗ ಎಲ್ಲ ಸಮುದಾಯಗಳು ಸಂಕೀರ್ಣದಿಂದ ಹೊರಗೆ ಬಂದಿವೆ. ಮಠಾಧೀಶರು ರಾಜಕಾರಣದಲ್ಲಿದ್ದಾರೆ ಎಂಬ ವಿಚಾರ ಒಂದು ಕಡೆ ಆದರೆ, ಮಾಧ್ಯಮಗಳೂ ಸಹ ರಾಜಕಾರಣದ ವರ್ಗದಲ್ಲಿದೆ. ಅವುಗಳು ಕೂಡ ರಾಜಕಾರಣ ಹೊರತುಪಡಿಸಿ ನಿಂತಿಲ್ಲ ಎಂದರು. ಒಂದೊಂದು ಚಾನೆಲ್‌ಗಳು ಒಬ್ಬೊಬ್ಬ ರಾಜಕಾರಣಿಯನ್ನು ವೈಭವೀಕರಿಸಿದರೆ, ಕೆಲ ಚಾನೆಲ್‌ಗಳು ಕೆಲ ರಾಜಕಾರಣಿಗಳನ್ನು ನಿರಾಕರಿಸುತ್ತವೆ. ಈಗ ಮಾಧ್ಯಮ ಮತ್ತು ಸ್ವಾಮೀಜಿಗಳ ಇಬ್ಬರ ಪಾತ್ರವೂ ಸೋಲುತ್ತಿದೆ. ಸಮಾಜದಲ್ಲಿ ಎಲ್ಲವೂ ಸಮತೋಲನ ತಪ್ಪಿದೆ ಎಂದರು. ಮಠಾಧೀಶರು ರಾಜಕಾರಣದಲ್ಲಿ ಬರಬಾರದು ಎನ್ನುವುದು ಸತ್ಯ. ಧರ್ಮ, https://ainlivenews.com/allotment-of-charge-of-additional-portfolios-to-four-union-ministers-including-karandlaje/ ರಾಜಕಾರಣದಲ್ಲಿ ಪ್ರವೇಶ ಮಾಡಬಾರದು. ಕೇವಲ ಲಿಂಗಾಯತ ಸ್ವಾಮೀಜಿಗಳು ಮಾತ್ರವಲ್ಲ ಮೌಲ್ವಿ, ಪಾದ್ರಿಗಳೂ ಕೂಡ ರಾಜಕಾರಣ ದಲ್ಲಿ ಪ್ರವೇಶ ಆಗಬಾರದು. ಯಾವ ಧರ್ಮದ ನೇತಾರರೂ ರಾಜಕಾರಣ ಪ್ರವೇಶ ಮಾಡಬಾರದು. ರಾಜಕಾರಣಿಗಳಿಗೆ…

Read More

ವಿಜಯಪುರ: ತನ್ವೀರ್ ಪೀರಾ ಅವರು ಯಾವ ಉಗ್ರ ಸಂಘಟನೆಯೊಂದಿಗೂ ಸಂಬಂಧ ಹೊಂದಿಲ್ಲ. ಬೇಕಿದ್ದರೆ ಎನ್‍ಐಎ ತನಿಖೆಗೆ ಕೊಡಲಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಚಿವ ಎಂ.ಬಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.  ನಗರದಲ್ಲಿ ಮಾತನಾಡಿದ ಅವರು, ಯತ್ನಾಳ್ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ.  ಅವರೊಬ್ಬ ಸುಳ್ಳುಗಾರ ಎಂದರು.  ತನ್ವೀರ್ ಪೀರಾ ಅವರು ಯಾವ ಉಗ್ರ ಸಂಘಟನೆಯೊಂದಿಗೂ ಸಂಬಂಧ ಹೊಂದಿಲ್ಲ. ಬೇಕಿದ್ದರೆ ಎನ್‍ಐಎ ತನಿಖೆಗೆ ಕೊಡಲಿ. ಆರೋಪ ಸುಳ್ಳು ಎಂದು ಸಾಬೀತಾದರೆ ಏನು ಮಾಡ್ತಾರೆ? ಎಂಬುದನ್ನು ಅವರು ಹೇಳಲಿ. ನಾವು ಅವರಿಗೆ ದೇಶ ಬಿಟ್ಟು ಹೋಗಿ ಎಂದು ಹೇಳುವುದಿಲ್ಲ. ಈ ಬಗ್ಗೆ ಅವರು ಸ್ಪಷ್ಟನೆ ಕೊಡಲಿ ಎಂದು ಸವಾಲ್ ಹಾಕಿದ್ದಾರೆ. https://ainlivenews.com/allotment-of-charge-of-additional-portfolios-to-four-union-ministers-including-karandlaje/ ಮುಖ್ಯಮಂತ್ರಿ ಅವರನ್ನು ನಾನೇ ತನ್ವೀರ್ ಪೀರಾ ಅವರ ಮನೆಗೆ ಕರೆದುಕೊಂಡು ಹೋಗಿದ್ದೆ. ಅವರೊಂದಿಗೆ ನಮ್ಮ ಒಡನಾಟ ಮೊದಲಿನಿಂದಲೂ ಇದೆ. ಯತ್ನಾಳ್ ಹಾಗೂ ತನ್ವೀರ್ ಪೀರಾ ಕುಟುಂಬಸ್ಥರ ಉದ್ಯಮಗಳು ಇದ್ದವು. ಹೋಟೆಲ್ ಹಾಗೂ ಇನ್ನಿತರೆ ಉದ್ಯಮದಲ್ಲಿ ಇವರೊಟ್ಟಿಗೆ ಅನೇಕರು ಪಾಲುದಾರರಾಗಿದ್ದರು. ಯತ್ನಾಳ್…

Read More

ದಾವಣಗೆರೆ: ಜಾರ್ಖಂಡ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಅವರ ಮನೆಯಲ್ಲಿ ಹಣ ಪತ್ತೆ ಪ್ರಕರಣಕ್ಕೆ ಸಂಭಂಧಿಸಿದಂತೆ ಹೊನ್ನಾಳಿ ತಾಲೂಕು ಬಿಜೆಪಿ ಮಂಡಲದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ನಗರದ ಟಿ.ಬಿ.ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತದ ವರೆಗೆ ಬೃಹತ್ ಪ್ರತಿಭಟನೆ ನಡೆಸಿದರು. ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಧೀರಜ್ ಸಾಹು ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಧೀರಜ್ ಸಾಹು ಅವರನ್ನು ಬಂಧಿಸುವಂತೆ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.

Read More

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹುಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ನಡೆಯಿತು. ಈ ಕಾರ್ಯಕ್ರಮಕ್ಕೆ ಸಂಸದ ಡಾ.ಉಮೇಶ್ ಜಾಧವ್ ಚಾಲನೆ ನೀಡಿದ್ರು.. ವಿಕಸಿತ ಭಾರತ್ ಸಂಕಲ್ಪ ಯಾತ್ರೆ ವಿವಿಧ ಸಾರ್ವಜನಿಕ ಕಲ್ಯಾಣ ಯೋಜನೆಗಳೊಂದಿಗೆ ಸಮಾಜದ ಕೊನೆಯ ವ್ಯಕ್ತಿಯನ್ನು ತಲುಪುವ ಗುರಿಯನ್ನು ಹೊಂದಿದ್ದು ಕೇಂದ್ರ ಸರ್ಕಾರದ ಪ್ರಮುಖ ಯೋಜನೆ ಇದಾಗಿದೆ. ಇಂತಹ ಯೋಜನೆಗಳ ಲಾಭವನ್ನು ಜನಸಾಮಾನ್ಯರಿಗೆ ತಲುಪಿಸಲು ಕೇಂದ್ರ ಸರ್ಕಾರವು ಅವಿರತವಾಗಿ ಶ್ರಮಿಸುತ್ತಿದೆ.ಇಂತಹ ಉದ್ದೇಶಕ್ಕಾಗಿ ರಾಷ್ಟ್ರವ್ಯಾಪಿ ಅಭಿಯಾನ, ವಿಕಸಿತ ಭಾರತ್ ಸಂಕಲ್ಪ ಯಾತ್ರೆಯನ್ನು ಕೈಗೊಳ್ಳಲಾಗಿದೆ.ಈ ಕಾರ್ಯಕ್ರಮದ ಬಗ್ಗೆ ತಿಳಿಸಿದ ಸಂಸದ ಡಾ.ಉಮೇಶ್ ಜಾಧವ್ ವಿವಿಧ ಸಾರ್ವಜನಿಕ ಕಲ್ಯಾಣ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಹಾಯ ಮಾಡುತ್ತದೆ ಎಂದು ಅಭಿಪ್ರಾಯಪಟ್ಟರು..

Read More

ಹಾವೇರಿ: ಇಂದಿನ ಕಾಲದಲ್ಲಿ ಮನುಷ್ಯ ಮನುಷ್ಯನಿಗೆ ರಕ್ತದಾನ ಮಾಡಲು ಹಿಂದೇಟು ಹಾಕುತ್ತಾನೆ ಆದರೆ ಇಲ್ಲೊಂದು ವಿಶೇಷವಾದ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ಗ್ರಾಮದಲ್ಲಿ ಶ್ವಾನ ಶ್ವಾನಕ್ಕೆ ರಕ್ತದಾನ ಮಾಡಿ ಮಾನವೀಯತೆ ಮೆರೆದಿದೆ.ಹಾನಗಲ್ ತಾಲೂಕಿನ ಹುಲ್ಲತ್ತಿ ಗ್ರಾಮದ ನಿವಾಸಿ ನಾಗರಾಜ್ ಗೊಲ್ಲರ ಎಂಬುವರ ಶ್ವಾನವೊಂದು, Acute Leptospairosis ರೋಗದಿಂದ ಬಳಲುತ್ತಿತ್ತು. ಈ ಶ್ವಾನಕ್ಕೆ ರಕ್ತದಾನ ಮಾಡಿ ಸಿರಿ ಎಂಬ ಸಾಕು ನಾಯಿ ಎಲ್ಲರಿಂದ ಭೇಷ್ ಎನಿಸಿಕೊಂಡಿದೆ.ಬಮ್ಮನಹಳ್ಳಿ ಗ್ರಾಮದ ರಂಜಿತ್ ಎಂಬುವರಿಗೆ ಸೇರಿಸ ಸಿರಿ ಎಂಬ ಹೆಸರಿನ ಶ್ವಾನ ಅನಾರೋಗ್ಯದಿಂದ ಬಳಲುತ್ತಿದ್ದ ಶ್ವಾನಕ್ಕೆ ರಸ್ತದಾನ ಮಾಡಿದೆ. ಈ ಚಿಕಿತ್ಸೆಗೆ ಅಕ್ಕಿಆಲೂರನ ಹಿರಿಯ ಪಶುವೈದ್ಯಾಧಿಕಾರಿ ಡಾ ಅಮಿತ್ ಪುಠಾಣಿಕರ್ ಮತ್ತು ಪಶುವೈದ್ಯ ಡಾ ಸಂತೋಷ್ ಮಲಗುಂದ ಮತ್ತು ತಂಡದವರು ಚಿಕಿತ್ಸೆ ಮಾಡಲಾಗಿ. ರಕ್ತದಾನಕ್ಕೆ ಹೆಸರಾಗಿರುವ ಅಕ್ಕಿಆಲೂರು ಪಶು ಆಸ್ಪತ್ರೆ ಮತ್ತೊಂದು ವಿಶೇಷ ಮಾನವೀಯತೆ ಕೆಲಸಕ್ಕೆ ಸಾಕ್ಷಿಯಾಗಿದೆ.

Read More

ಹುಬ್ಬಳ್ಳಿ : ಭಾರತ ದೇಶ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದೆ. ಅಭಿವೃದ್ಧಿ ಹೊಂದಿದ ದೇಶಗಳ ಸಾಲಿನಲ್ಲಿ ಭಾರತ ಸೇರ್ಪಡೆಯಾಗಲಿದೆ. ಈ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂಕಲ್ಪ ಮಾಡಿದ್ದು, ಭಾರತ ಸಹ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ. 2047 ರೊಳಗೆ ಅಭಿವೃದ್ಧಿ ಹೊಂದಿದ ದೇಶವಾಗಿಸಲು ನಾನು ಕೂಡ ಬದ್ಧನಿದ್ದೇನೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ್ ಜೋಶಿ ಹೇಳಿದರು. ಇಂದು ವರೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ದೊರೆಯಬೇಕು. ಜನರಿಗೆ ಖಾಯಿಲೆಗಳು ಬಂದಾಗ ಚಿಕಿತ್ಸೆಗೆ ಹೆಚ್ಚು ಹಣ ಬೇಕಾಗುತ್ತದೆ. ಆಗ ಸರ್ಕಾರದ ಯೋಜನೆಗಳು ಸಹಾಯಕವಾಗಲಿವೆ. ಆಯುಷ್ಮಾನ್ ಭಾರತ ಯೋಜನೆಯಡಿ ಚಿಕಿತ್ಸೆ ಪಡೆಯಬಹುದು. ವ್ಯಾಪಾರ ಆರಂಭಿಸಲು ಮುದ್ರಾ ಯೋಜನೆಯಡಿ ಲೋನ್ ಪಡೆದುಕೊಳ್ಳಲು ಅವಕಾಶವಿದೆ. ರಾಸಾಯನಿಕ ಗೊಬ್ಬರ ಹಾಕಲಾರದೆ ಸಾವಯವ ಗೊಬ್ಬರ ಬಳಸಿ ಬೆಳೆಗಳನ್ನು ಬೆಳೆಯಬೇಕು. ಬ್ಯಾಂಕಿನಿಂದ ಆರ್ಥಿಕ ಸಹಾಯಧನ…

Read More

ನ್ಯಾ. ಎ ಜೆ ಸದಾಶಿವ ಆಯೋಗದ ಒಳ ಮೀಸಲಾತಿ ವರದಿಯನ್ನ ಬೆಳಗಾವಿ ಅಧಿವೇಶನದ ಎರಡು ಸದನಗಳಲ್ಲಿ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ದಲಿತ ಸಂಘಟನೆಗಳ ಮಹಾ ಒಕ್ಕೂಟ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾತು ತಪ್ಪಿದೆ ಎಂದು ಮಹಾ ಒಕ್ಕೂಟದ ಅಧ್ಯಕ್ಷ ಹೆಚ್. ಮಲ್ಲೇಶ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಟಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಎಚ್ .ಮಲ್ಲೇಶ್, ಹಿಂದೆ ಚುನಾವಣೆ ಪ್ರಚಾರದ ವೇಳೆ ಚಿತ್ರದುರ್ಗದಲ್ಲಿ ಪರಿಶಿಷ್ಟರ ಮೀಸಲಾತಿ ಹೆಚ್ಚಳ ಹಾಗೂ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಅಂಗೀಕಾರದ ಬಗ್ಗೆ ಪ್ರಣಾಳಿಕೆ ಯಲ್ಲಿ ಪ್ರಕಟಿಸಿದ್ದರು. ಅಲ್ಲದೆ, ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೊದಲ ಅಧಿವೇಶನದಲ್ಲಿಯೇ ಜಾರಿ ಮಾಡುವ ಭರವಸೆಯನ್ನು ನೀಡಿದ್ದರು. ಆದರೆ, ಸಿದ್ದರಾಮಯ್ಯ ಆ ರೀತಿ ಮಾಡಿಲ್ಲ. ಈಗ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಜಾರಿ ಮಾಡಿರುವ ಭರವಸೆಯನ್ನ ನೀಡಿದ್ದು, ಅದರಂತೆ ಈ ಅಧಿವೇಶನದಲ್ಲಿ ಎರಡು ಸದನಗಳಲ್ಲಿ ಅಂಗೀಕರಿಸಿ…

Read More

ತಮ್ಮ ನೆಚ್ಚಿನ ತೋಟದಲ್ಲೇ ಮಣ್ಣಲ್ಲಿ ಮಣ್ಣಾಗಿ ಮಲಗಿದರು ಹಿರಿಯ ನಟಿ ಲೀಲಾವತಿ (Leelavathi). ನೆಲಮಂಗಲದ ಸೋಲದೇವನಹಳ್ಳಿ (Soladevanahalli) ಬಳಿ ಲೀಲಾವತಿ ಅವರ ಫಾರ್ಮ್ ಹೌಸ್ ಇದೆ. ಅದರ ಸಮೀಪದಲ್ಲೇ ತೋಟ ಕೂಡ ಇದೆ. ಅದೇ  ತೋಟದಲ್ಲೇ ಹಿಂದೂ ಸಂಪ್ರದಾಯದಂತೆ ಲೀಲಾವತಿ ಅವರ ಅಂತ್ಯಕ್ರಿಯೆ ನಡೆಯಿತು. ಅಂತಿಮ ವಿಧಿ ವಿಧಾನ ಕಾರ್ಯವನ್ನು ಪುತ್ರ ವಿನೋದ್ ರಾಜ್ (Vinod Raj) ಹಾಗೂ ಮೊಮ್ಮಗ ಯುವರಾಜ್ ನೆರವೇರಿಸಿದರು. ಬೆಂಗಳೂರಿನಿಂದ ಪಾರ್ಥಿವ ಶರೀರ ಹೊತ್ತು ತಂದ ಅಂಬುಲೆನ್ಸ್ ಅನ್ನು ಅಲ್ಲಲ್ಲಿ ತಡೆದು, ಲೀಲಾವತಿ ಅವರ ಅಂತಿಮ ದರ್ಶನ ಪಡೆದರು ಅಭಿಮಾನಿಗಳು. ಅದರಲ್ಲೂ ಸೋಲದೇವನಹಳ್ಳಿ ಸುತ್ತಲಿನ ಅನೇಕ ಗ್ರಾಮಸ್ಥರು, ಮನವಿ ಮಾಡಿಕೊಂಡು ಅಂಬುಲೆನ್ಸ್ ನಿಲ್ಲಿಸುವಲ್ಲಿ ಯಶಸ್ವಿ ಆದರು. ತಮ್ಮ ನೆಚ್ಚಿನ ನಟಿಯ ಅಂತಿಮ ದರ್ಶನ ಪಡೆದರು. https://ainlivenews.com/allotment-of-charge-of-additional-portfolios-to-four-union-ministers-including-karandlaje/ ಬೆಂಗಳೂರಿನಿಂದ ತಂದೆ ಪಾರ್ಥಿವ ಶರೀರವನ್ನು ನವಿಲಿನಾಕೃತಿಯ ವಿಶೇಷ ಹೂವಿನ ಪಲ್ಲಕ್ಕಿಯಲ್ಲಿ ಕೂರಿಸಲಾಯಿತು. 200 ಮೀಟರ್ ಉದ್ದ ಪಾರ್ಥಿವ ಶರೀರದ ಮೆರವಣಿಗೆ ಕೂಡ ಮಾಡಲಾಯಿತು. ನಂತರ ಪೊಲೀಸ್ ಗೌರವ ಸಲ್ಲಿಸಲಾಯಿತು. ಅನೇಕ…

Read More

ಉಡುಪಿ: ಸ್ಯಾಂಡಲ್ ವುಡ್ ನ ಹಿರಿಯ ನಟಿ ಲೀಲಾವತಿ ಅಗಲಿದ್ದಾರೆ. ಬಣ್ಣದ ಲೋಕವೇ ಹಾಗೆ. ನಮ್ಮ ಜೀವನವೇ ಹಾಗೆ. ಲೀಲಾವತಿ ಕೊನೆಯ ದಿನದವರೆಗೂ ಕಷ್ಟದ ಜೀವನ ಸಾಗಿಸಿದರು. ದುಃಖದಲ್ಲಿ ಎಲ್ಲಾ ಅಪಮಾನಗಳನ್ನು ಸಹಿಸಿಕೊಂಡು ಜೀವಿಸಿದರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೀಲಾವತಿ ದುಃಖವನ್ನು ನುಂಗಿ ಬದುಕಿದ ಕಲಾವಿದೆ. ಸಮಾಜಕ್ಕೆ ಏನಾದರೂ ಮಾಡಬೇಕೆಂದು ಬೆಂಗಳೂರಿನಿಂದ ದೂರ ಹೋಗಿ ನೆಲಮಂಗಲದಲ್ಲಿ ನೆಲೆಸಿದರು. ಸಮಾಜ ಸೇವೆಯ ಮೂಲಕ ಕೊನೆಯ ದಿನಗಳನ್ನು ಖುಷಿಯಾಗಿ ಕಳೆದರು. ಬಣ್ಣದ ಬದುಕು ಕಷ್ಟ. ಲೀಲಾವತಿಯವರ ಬದುಕು ಇನ್ನೂ ಕಷ್ಟ ಎಂದರು. https://ainlivenews.com/ta-sharavana-condoles-death-of-veteran-actress-leelavati/ ಲೀಲಾವತಿ ನಮ್ಮೂರಿನವರು. ನನಗೆ ಸಿಕ್ಕಾಗೆಲ್ಲ ತುಳುವಿನಲ್ಲೇ ಮಾತನಾಡುತ್ತಿದ್ದರು. ಬೆಂಗಳೂರಿನಲ್ಲಿ (Bengaluru) ನೆಲೆಸಿ ಚಲನಚಿತ್ರರಂಗಕ್ಕೆ ಅಪಾರ ಸೇವೆ ನೀಡಿದ್ದಾರೆ. ಸಮಾಜ ಸೇವೆ, ಪ್ರಾಣಿಗಳ ಸೇವೆಯ ಮೂಲಕ ಪೂರ್ಣವಾಗಿ ತೊಡಗಿಸಿಕೊಂಡಿದ್ದರು. ವಿನೋದ್ ರಾಜ್, ಕುಟುಂಬ ಬಂಧು ಬಳಗಕ್ಕೆ ನೋವು ಸಹಿಸುವ ಶಕ್ತಿ ಕೊಡಲಿ ಎಂದು ಸಂತಾಪ ಸೂಚಿಸಿದರು. 

Read More