Author: AIN Author

ಕಲಬುರಗಿ: -ಕಲಬುರಗಿಯಲ್ಲಿ ಇತ್ತೀಚಿಗೆ ಬರ್ಬರವಾಗಿ ಕೊಲೆಯಾಗಿದ್ದ ವಕೀಲ ಈರಣ್ಣಗೌಡನ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ ಪ್ರಮುಖ ಆರೋಪಿಯನ್ನ ಪೋಲೀಸ್ರು ಬಂಧಿಸಿದ್ದಾರೆ. ನೀಲಕಂಠ ಪಾಟೀಲ್ ಬಂಧಿತ ಆರೋಪಿ. ಜಮೀನು ವಿವಾದಕ್ಕೆ ಸಂಭಂಧಿಸಿದಂತೆ ಕೊಲೆ ಮಾಡಲಾಗಿತ್ತು ಅನ್ನೋದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಈಗಾಗಲೇ ಬಂಧಿತ ಮೂವರು ಆರೋಪಿಗಳು ನೀಡಿದ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ವಿವಿ ಪೋಲೀಸ್ರು ಮೇನ್ ಕುಳವನ್ನ ಲಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಡಿಸೆಂಬರ್ 7 ರಂದು ಸಾಯಿನಗರದ ಅಪಾರ್ಟ್‌ಮೆಂಟಿನಲ್ಲಿ ಕೊಲೆಯಾಗಿತ್ತು.ಭೀಕರ ದೃಶ್ಯ CCTV ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿತ್ತು..

Read More

ವಿಜಯಪುರ:- ಬೆಂಗಳೂರು ಉಗ್ರಗಾಮಿಗಳಿಗೆ ಸೇಫ್ ಜಾಗ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಈ ಸಂಬಂಧ X ಮಾಡಿರುವ ಅವರು, ಬೆಂಗಳೂರು ಅಪರಾಧಿಗಳಿಗೆ ಸುರಕ್ಷಿತ ತಾಣವಾಗಿದೆ. ನಗರದಲ್ಲಿ ಸ್ಲೀಪರ್ ಸೆಲ್‌ಗಳು ಸಕ್ರಿಯವಾಗಿವೆ ಎಂಬ ಅಂಶವನ್ನು ಎನ್‌ಐಎ ಅಧಿಕಾರಿಗಳ ಇಂದಿನ ದಾಳಿಯಿಂದ ಸಾಬೀತುಪಡಿಸಲಾಗಿದೆ. ಮುಸ್ಲಿಂ ಉಗ್ರಗಾಮಿಗಳು ರೂಪಿಸಿರುವ ಯಾವುದೇ ಕೆಟ್ಟ ಯೋಜನೆಗಳನ್ನು ವಿಫಲಗೊಳಿಸಲು ಸರ್ಕಾರ ಮತ್ತು ಪೋಲೀಸರು ತಮ್ಮ ಕಣ್ಗಾವಲು ಹೆಚ್ಚಿಸುವುದು ಮತ್ತು ತಮ್ಮ ಗುಪ್ತಚರವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಯತ್ನಾಳ್ ಬರೆದುಕೊಂಡಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇಂದು ಕರ್ನಾಟಕ ಸೇರಿದಂತೆ ದೇಶದ ವಿವಿಧ ಸ್ಥಳಗಳಲ್ಲಿ ದಾಳಿ ಮಾಡಿದ್ದರು. ಬೆಂಗಳೂರಿನಲ್ಲೂ ನಡೆದ ದಾಳಿ ವೇಳೆ ಶಂಕಿತ ಉಗ್ರ ಅಲಿ ಅಬ್ಬಾಸ್ ಎಂಬಾತನನ್ನು ಬಂಧಿಸಲಾಗಿದೆ. ಶಂಕಿತ ಉಗ್ರರನು ಐಸಿಸ್​ ಜೊತೆ ನಂಟು ಹೊಂದಿದ್ದಾನೆ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಎನ್​ಐಎ ದಾಳಿ ನಡೆಸಿ ಬಂಧಿಸಿದೆ.

Read More

ಬೆಂಗಳೂರು:- ನೀರು ಹರಿಯಲು ಅಡ್ಡಿಯಾಗದಂತೆ ರಾಜಕಾಲುವೆ ಮೇಲೆ ಸೇತುವೆ ನಿರ್ಮಿಸಿದರೆ ಒತ್ತುವರಿಯಲ್ಲ ಎಂದು ಹೈಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಸೂರಜ್​ ಗೋವಿಂದರಾಜು ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ರಾಜಕಾಲುವೆಯ ಮೇಲೆ ಒಂದು ದಡದಿಂದ ಮತ್ತೊಂದು ದಡಕ್ಕೆ ಸೇತುವೆ ನಿರ್ಮಾಣ ಮಾಡಿ, ರಾಜಕಾಲುವೆ ಒಳಭಾಗದಲ್ಲಿ ಯಾವುದೇ ರೀತಿಯ ನಿರ್ಮಾಣ ಮಾಡದೆ, ನೀರು ಸರಾಗವಾಗಿ ಹರಿಯುವುದಕ್ಕೆ ಅಡ್ಡಿಯಾಗದಂತಿದ್ದರೆ, ಅದು ಒತ್ತುವರಿ ಮಾಡಿದಂತೆ ಆಗುವುದಿಲ್ಲ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ. ಅಲ್ಲದೆ, ಒತ್ತುವರಿ ಎಂದರೆ ಯಾವುದೇ ಒಬ್ಬ ವ್ಯಕ್ತಿಯೊಬ್ಬರಿಗೆ ಸೇರದ ಆಸ್ತಿಯ ಮೇಲೆ ಒತ್ತಾಯಪೂರ್ವಕ ಹಾಗೂ ಅನಧಿಕೃತವಾಗಿ ಸ್ವಾಧೀನ ಮಾಡಿಕೊಂಡಿರಬೇಕಾಗುತ್ತದೆ. ಜೊತೆಗೆ, ಪ್ರಸ್ತುತ ಅರ್ಜಿಗೆ ಸಂಬಂಧಿಸಿದಂತೆ ಯೋಜನಾ ಪ್ರಾಧಿಕಾರ ಪರಿಶೀಲನೆ ನಡೆಸಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿದೆ ಎಂದಾದರೆ ಒತ್ತುವರಿಯಾಗಿಲ್ಲ ಎಂಬುದಾಗಿ ಅರ್ಥವಾಗಲಿದೆ. ಆದರೆ, ಬಳಿಕ ಖಾಸಗಿ ವ್ಯಕ್ತಿ ನೀಡಿದ ದೂರಿನ ಅನ್ವಯ ಒತ್ತುವರಿ ಆರೋಪದಲ್ಲಿ ಮತ್ತೆ ತಹಶೀಲ್ದಾರರಿಗೆ ಪತ್ರ ಪತ್ರ ಬರೆಯಲು ಪ್ರಾಧಿಕಾರಕ್ಕೆ ಅಧಿಕಾರವಿಲ್ಲ ಎಂದು ತಿಳಿಸಿರುವ…

Read More

ಚಿಕ್ಕಬಳ್ಳಾಪುರ:- ನಗರದ ಬೈಪಾಸ್ ಬಳಿಯ ಅಂಜನೇಯ ಸ್ವಾಮಿ ದೇವಾಲಯದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಗುಂಡಿಗೆ ಬಿದ್ದು ನಾಲ್ವರು ದುರ್ಮರಣ ಹೊಂದಿದ ಘಟನೆ ಜರುಗಿದೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯ ಅಂಡರ್ ಪಾಸ್‌ನಲ್ಲಿ ವೇಗವಾಗಿ ಬಂದು ಗುಂಡಿಯೊಳಗೆ ಬಿದ್ದಿದ್ದರಿಂದ ಕಾರಿನೊಳಗಿದ್ದ ನಾಲ್ವರು ಜಲಸಮಾಧಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಕಾರನ್ನು ಗುಂಡಿಯಿಂದ ಹೊರತೆಗೆಯುವ ಕೆಲಸ ಮಾಡುತ್ತಿದ್ದಾರೆ. ಮೃತರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

Read More

ಬೆಂಗಳೂರು:- ನಾಳೆ ಸೋಮವಾರ ಕಡಲೆಕಾಯಿ ಪರಿಷೆಗೆ ವಿದ್ಯುಕ್ತ ಚಾಲನೆ ದೊರೆಯಲಿದೆ. ಹೀಗಾಗಿ ಮಧುವಣಗಿತ್ತಿಯಂತೆ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನ ಸುತ್ತಮುತ್ತಲಿನ ಆವರಣ, ರಸ್ತೆ ಸಿದ್ಧವಾಗಿದೆ. ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಡಲೆಕಾಯಿ ಪರಿಷೆಗೆ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಪರಿಷೆ ಉದ್ಘಾಟಿಸಲಿದ್ದಾರೆ. ಸುಮಾರು 200 ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದೆ. ದೊಡ್ಡ ಬಸವಣ್ಣ, ದೊಡ್ಡಗಣಪತಿ ದೇವಸ್ಥಾನಗಳಲ್ಲಿ ದೇವರಿಗೆ ವಿಶೇಷ ಅಲಂಕಾರ, ಪೂಜೆ, ಅಭಿಷೇಕ ನಡೆಯಲಿವೆ. ಕಡಲೆಕಾಯಿಗಳಿಂದ ದೊಡ್ಡಗಣಪತಿಗೆ ಅಭಿಷೇಕ ನಡೆಯಲಿದೆ. ರೈತರು ಮತ್ತು ವ್ಯಾಪಾರಿಗಳು ಸೇರಿದಂತೆ ಸಾರ್ವಜನಿಕರು ವಿಶೇಷ ಪೂಜೆ ಸಲ್ಲಿಸುತ್ತಾರೆ. ಸೋಮವಾರ ವಿದ್ಯುಕ್ತವಾಗಿ ಚಾಲನೆಗೊಳ್ಳಲಿರುವ ಬಸವನಗುಡಿಯ ಇಕ್ಕೇಲಗಳಲ್ಲಿ ರೈತರು, ವ್ಯಾಪಾರಿಗಳು ನಾನಾ ಬಗೆಯ ಹಸಿ, ಹುರಿದ ಕಡಲೆಕಾಯಿ ಹಾಕಿಕೊಂಡು ವ್ಯಾಪಾರ ಆರಂಭಿಸಿದ್ದಾರೆ. ಜನ ತಂಡೋಪ ತಂಡವಾಗಿ ಪರಿಷೆಗೆ ಆಗಮಿಸುತ್ತಿದ್ದಾರೆ. ಹಸಿದ ಮತ್ತು ಹುರಿದ ಕಡಲೆ ಕಾಯಿ ಖರೀದಿಸುತ್ತಿದ್ದಾರೆ, ಸವಿಯುತ್ತಿದ್ದಾರೆ.…

Read More

ಬೆಂಗಳೂರು:- ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಬೆಳಗ್ಗೆ ಬಿಸಿಲು ಕಾಣಿಸಿಕೊಂಡಿದ್ದು, ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. ಎಚ್​ಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Read More

ಬೆಂಗಳೂರು:- ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದ ನಗರದಲ್ಲಿ ವೈರಲ್ ಫೀವರ್ ಹೆಚ್ಚಾಗಿದೆ. ಜ್ವರ, ಶೀತ, ಟೈಫಡ್ ಪ್ರಕರಣಗಳ ಜೊತೆ ಡೆಂಗ್ಯೂ ಪ್ರಕರಣಗಳು ಡಬ್ಬಲ್ ಆಗಿವೆ. ಹಿಂದಿನ ವರ್ಷಕ್ಕೆ ಕಂಪೇರ್ ಮಾಡಿದ್ರೆ ಈ ವರ್ಷ ಡೆಂಗ್ಯೂ ಲಕ್ಷಣಗಳು ಚೇಂಜ್ ಆಗಿವೆ. ಜ್ವರ ಬಿಟ್ಟು ಮತ್ತೆ 3 ದಿನಕ್ಕೆ ಜ್ವರ ಕಾಣಿಸಿಕೊಳ್ತಿದೆ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ನಿಗಾ ವಹಿಸಿರುವ ವೈದ್ಯರು, ಜ್ವರ ಎಂದು ಬರುವ ಮಕ್ಕಳಿಗೆ ಡೆಂಗ್ಯೂ ಪರೀಕ್ಷೆ ಮಾಡುತ್ತಿದ್ದಾರೆ. ಬೆಂಗಳೂರಿಗೆ ಡೆಡ್ಲಿ ಡೆಂಗ್ಯೂ ಭೀತಿ ಜೋರಾಗಿದೆ. ರಾಜಧಾನಿಯಲ್ಲಿ ತಗ್ಗದ ಡೆಂಗ್ಯೂ ಆರ್ಭಟದಿಂದ ಜನರು ಹೈರಾಣಾಗಿದ್ದಾರೆ. ಕಳೆದೊಂದು ತಿಂಗಳಲ್ಲಿ ಬೆಂಗಳೂರಿನಲ್ಲಿ ದಾಖಲೆಯ ಕೇಸ್ ಪತ್ತೆಯಾಗಿವೆ. ಕಳೆದ 30 ದಿನಗಳಲ್ಲಿ ರಾಜಧಾನಿಯಲ್ಲಿ ಬರೊಬ್ಬರಿ 2970 ಹೊಸ ಡೆಂಗ್ಯೂ ಕೇಸ್ ಪತ್ತೆಯಾಗಿದೆ. ಕಳೆದ ತಿಂಗಳು ಕೊಂಚ ಇಳಿಕೆಯತ್ತ ಸಾಗಿದ್ದ ಹೆಮ್ಮಾರಿ ಡೆಂಗ್ಯೂ ಈಗ ಮತ್ತೆ ಸೈಲೆಂಟ್ ಆಗಿ ಏರಿಕೆಯತ್ತ ಸಾಗಿದೆ. ರಾಜಧಾನಿಯಲ್ಲಿ ಈ ವರ್ಷ ಜನವರಿಯಿಂದ ಇಲ್ಲಿಯವರೆಗೆ ದಾಖಲೆಯ 7673 ಹೊಸ ಡೆಂಗ್ಯೂ ಕೇಸ್ ಕಾಣಿಸಿಕೊಂಡಿದ್ರೆ ಕಳೆದೊಂದೇ…

Read More

ದಾವಣಗೆರೆ:- ಬಹುಸಂಖ್ಯಾತ ಹಿಂದೂಗಳಿಗೆ ಯಾವುದೇ ಅನುದಾನವನ್ನೂ ಕಾಂಗ್ರೆಸ್ ಸರ್ಕಾರ ನೀಡಿಲ್ಲ. ಮುಸ್ಲಿಮರಿಗೆ ಅನುದಾನ ನೀಡಬೇಕೆಂದರೆ ನಿಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಕೊಡಿ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಾಕೀತು ಮಾಡಿದರು. ದೇವಸ್ಥಾನಗಳ ಹುಂಡಿಗಳಿಗೆ ಹಿಂದೂ ಭಕ್ತರು ನೀಡುವ ಕಾಣಿಕೆ ಹಣವನ್ನು ಮುಸ್ಲಿಮರಿಗೆ ನೀಡುತ್ತೀರಾ? ಇಡೀ ರಾಜ್ಯವೇ ಬರದಿಂದ ತತ್ತರಿಸಿದೆ. ರೈತರಿಗೆ ಬೆಳೆ ಹಾನಿ ಪರಿಹಾರದ ಬಗ್ಗೆ ಚಕಾರ ಎತ್ತದ ಕಾಂಗ್ರೆಸ್ ಸರ್ಕಾರ ಹೇಳಿದಂತೆ ರೈತರ ಖಾತೆಗೆ 2 ಸಾವಿರ ರು. ಪರಿಹಾರ ಹಣ ಬಂದಿಲ್ಲ. ಒಬೊಬ್ಬ ಶಾಸಕರಿಗೂ ಕ್ಷೇತ್ರದ ಅಭಿವೃದ್ಧಿಗೆ 50 ಲಕ್ಷ ರು. ಮಾತ್ರ ಬಿಡುಗಡೆ ಮಾಡಲಾಗಿದೆ. ಬೆಳೆ ಹಾನಿಗೆ ತುತ್ತಾದ ರೈತರಿಗೆ ಈ ವರೆಗೆ ಸರ್ಕಾರ ಬೆಳೆ ಹಾನಿ ಪರಿಹಾರವನ್ನೇ ನೀಡಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು ಕೇಸರಿ ಪೇಟ ಧರಿಸುವುದಿಲ್ಲ, ಹಣೆಗೆ ಕುಂಕುಮ ಹಚ್ಚಲು ವಿರೋಧಿಸುವ ಸಿದ್ದರಾಮಯ್ಯ, ದೇವಸ್ಥಾನದ ಹುಂಡಿ ಹಣ ಅನ್ಯ ಧರ್ಮೀಯರ ಅಭಿವೃದ್ಧಿಗೆ ಬಿಡುಗಡೆ ಮಾಡುತ್ತೀರಾ? ಬೆಳಗಾವಿ ಅಧಿವೇಶನ ನಡೆಯುತ್ತಿದೆ. ಮೊದಲು ಶಾಸಕರ ಕ್ಷೇತ್ರದ…

Read More

ನವದೆಹಲಿ: ಪ್ಯಾಕಿಂಗ್ ಆಹಾರ (Packed Foods) ಉತ್ಪನ್ನಗಳು ಜಠರದಲ್ಲಿರುವ ಪ್ರೋಬಯಾಟಿಕ್ ಬ್ಯಾಕ್ಟೀರಿಯಾವನ್ನು ಹಾನಿಗೊಳಿಸುವುದರಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ. ಇದರಿಂದ ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳು ಬರುವ ಸಾಧ್ಯತೆ ಇದೆ ಎಂದು ದೆಹಲಿ ಏಮ್ಸ್‌ (Delhi AIIMS) ಲ್ಯಾಬ್ ವರದಿ ತಿಳಿಸಿದೆ. ಜಠರದಲ್ಲಿರುವ ಪ್ರೋಬಯಾಟಿಕ್ ಬ್ಯಾಕ್ಟೀರಿಯಾ ಆಹಾರವನ್ನು ಜೀರ್ಣಿಸುವಲ್ಲಿ ದೊಡ್ಡ ಪಾತ್ರವನ್ನು ವಹಿಸತ್ತದೆ. ಅಲ್ಲದೇ ಇದನ್ನು ಉತ್ತಮ ಬ್ಯಾಕ್ಟೀರಿಯಾ ಎಂದು ಪರಿಗಣಿಸಲಾಗುತ್ತದೆ. ನಿರಂತರವಾಗಿ ಪ್ಯಾಕಿಂಗ್ ಆಹಾರಗಳನ್ನು ಸೇವಿಸುವುದರಿಂದ ಈ ಆಹಾರ ಪ್ರೋಬಯಾಟಿಕ್ ಬ್ಯಾಕ್ಟೀರಿಯಾ ದೇಹದಿಂದ ಹೊರ ಹಾಕುತ್ತದೆ ಎಂದು ದೆಹಲಿ ಏಮ್ಸ್ ವೈದ್ಯರು (Doctors) ನಡೆಸಿದ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಆಹಾರವನ್ನು ಜೀರ್ಣಿಸಿಕೊಳ್ಳುವುದು ಮತ್ತು ಅದರಿಂದ ಪೋಷಕಾಂಶಗಳನ್ನು ಹೊರತೆಗೆದು ದೇಹದ ವಿವಿಧ ಭಾಗಗಳಿಗೆ ತಲುಪಿಸುವುದು ಪ್ರೋಬಯಾಟಿಕ್ ಬ್ಯಾಕ್ಟೀರಿಯಾದ ಕೆಲಸವಾಗಿದೆ. ಸಂಸ್ಕರಿಸಿದ ಆಹಾರದಲ್ಲಿ ಇರುವ ಹೆಚ್ಚಿನ ಕೊಬ್ಬು ಮತ್ತು ಹೆಚ್ಚಿನ ಸಕ್ಕರೆ ಈ ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ. ಇದು ಜೀರ್ಣಕ್ರಿಯೆಯ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇಂತಹ ಸಂದರ್ಭಗಳಲ್ಲಿ ಪೌಷ್ಠಿಕ ಆಹಾರ ಸೇವಿಸಿದರೂ…

Read More

ಹುಬ್ಬಳ್ಳಿ:- ಇಂದು ಬೆಂಗಳೂರಿನಲ್ಲಿ ನಡೆಯುವ ಈಡಿಗ ಸಮಾವೇಶ ಕುತಂತ್ರದ್ದಾಗಿದೆ ಎಂದು ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಇಂದು ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಈಡಿಗ ಜಾಗೃತಿ ಸಮಾವೇಶಕ್ಕೆ ಬಿ.ಕೆ.ಹರಿಪ್ರಸಾದ್‌ ಅಪಸ್ವರ ಎತ್ತಿದ್ದಾರೆ. ಈಡಿಗ ಸಮಾವೇಶ ರಾಜಕೀಯ ಪ್ರೇರಿತ ಹಾಗೂ ಕುತಂತ್ರದ್ದಾಗಿದೆ. ಸಮಾವೇಶದಲ್ಲಿ ನಾನು ಪಾಲ್ಗೊಳ್ಳುತ್ತಿಲ್ಲ. ಈಡಿಗ ಸಮಾಜ ಅಂದಾಜು 50 ಲಕ್ಷ ಜನಸಂಖ್ಯೆ ಹೊಂದಿದೆ. ಆದರೆ ಈಡಿಗ ಸಂಘದಲ್ಲಿ ಇರುವುದು ಕೇವಲ 12 ಸಾವಿರ ಸದಸ್ಯತ್ವ ಮಾತ್ರ. ಸಂಘಕ್ಕೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಮೃತ ಮಹೋತ್ಸವ ಮಾಡುವುದಾಗಿ ಹೇಳುತ್ತಾರೆ. ಆದರೆ ಸಂಘದ ರಜತ ಹಾಗೂ ಸುವರ್ಣ ಮಹೋತ್ಸವ ಯಾವಾಗ ಮಾಡಿದರೋ ಗೊತ್ತಿಲ್ಲ. ಈಡಿಗ ಸಮಾಜದಲ್ಲಿ ಆರು ಜನ ಸ್ವಾಮೀಜಿಗಳಿದ್ದಾರೆ. ಈ ಪೈಕಿ ಇಬ್ಬರು ಸ್ವಾಮೀಜಿಗಳನ್ನು ಅಮೃತ ಮಹೋತ್ಸವ ಸಮಾರಂಭಕ್ಕೆ ಆಹ್ವಾನಿಸಿಲ್ಲ. ರಾಜ್ಯದಲ್ಲಿ ಸೇಂದಿ, ಸಾರಾಯಿ ನಿಷೇಧ ಮಾಡಿದಾಗ ಈ ಸಂಘದಲ್ಲಿ ಇದ್ದವರು ಏನೂ ಮಾಡಲಿಲ್ಲ ಎಂದು ಕಿಡಿ ಕಾರಿದರು. ಸಮಾರಂಭದಲ್ಲಿ ಸಂಘದವರು ಸಮಾಜದ ವಿವಿಧ ಬೇಡಿಕೆಗಳನ್ನು ಮಂಡನೆ…

Read More