Author: AIN Author

ಉಡುಪಿ: ಸ್ಯಾಂಡಲ್ ವುಡ್ ನ ಹಿರಿಯ ನಟಿ ಲೀಲಾವತಿ ಅಗಲಿದ್ದಾರೆ. ಬಣ್ಣದ ಲೋಕವೇ ಹಾಗೆ. ನಮ್ಮ ಜೀವನವೇ ಹಾಗೆ. ಲೀಲಾವತಿ ಕೊನೆಯ ದಿನದವರೆಗೂ ಕಷ್ಟದ ಜೀವನ ಸಾಗಿಸಿದರು. ದುಃಖದಲ್ಲಿ ಎಲ್ಲಾ ಅಪಮಾನಗಳನ್ನು ಸಹಿಸಿಕೊಂಡು ಜೀವಿಸಿದರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೀಲಾವತಿ ದುಃಖವನ್ನು ನುಂಗಿ ಬದುಕಿದ ಕಲಾವಿದೆ. ಸಮಾಜಕ್ಕೆ ಏನಾದರೂ ಮಾಡಬೇಕೆಂದು ಬೆಂಗಳೂರಿನಿಂದ ದೂರ ಹೋಗಿ ನೆಲಮಂಗಲದಲ್ಲಿ ನೆಲೆಸಿದರು. ಸಮಾಜ ಸೇವೆಯ ಮೂಲಕ ಕೊನೆಯ ದಿನಗಳನ್ನು ಖುಷಿಯಾಗಿ ಕಳೆದರು. ಬಣ್ಣದ ಬದುಕು ಕಷ್ಟ. ಲೀಲಾವತಿಯವರ ಬದುಕು ಇನ್ನೂ ಕಷ್ಟ ಎಂದರು. https://ainlivenews.com/ta-sharavana-condoles-death-of-veteran-actress-leelavati/ ಲೀಲಾವತಿ ನಮ್ಮೂರಿನವರು. ನನಗೆ ಸಿಕ್ಕಾಗೆಲ್ಲ ತುಳುವಿನಲ್ಲೇ ಮಾತನಾಡುತ್ತಿದ್ದರು. ಬೆಂಗಳೂರಿನಲ್ಲಿ (Bengaluru) ನೆಲೆಸಿ ಚಲನಚಿತ್ರರಂಗಕ್ಕೆ ಅಪಾರ ಸೇವೆ ನೀಡಿದ್ದಾರೆ. ಸಮಾಜ ಸೇವೆ, ಪ್ರಾಣಿಗಳ ಸೇವೆಯ ಮೂಲಕ ಪೂರ್ಣವಾಗಿ ತೊಡಗಿಸಿಕೊಂಡಿದ್ದರು. ವಿನೋದ್ ರಾಜ್, ಕುಟುಂಬ ಬಂಧು ಬಳಗಕ್ಕೆ ನೋವು ಸಹಿಸುವ ಶಕ್ತಿ ಕೊಡಲಿ ಎಂದು ಸಂತಾಪ ಸೂಚಿಸಿದರು. 

Read More

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಹಾಗೂ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಸಿ.ಕೆ.ನಾನು ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ತಿಳಿಸಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಇಬ್ಬರು ನಾಯಕರ ಉಚ್ಛಾಟನೆ ನಿರ್ಧಾರವನ್ನು ಪ್ರಕಟಿಸಿದರು. ಪಕ್ಷದ ಹಿತಕ್ಕಾಗಿ ಅವರ ಸಮ್ಮುಖದಲ್ಲಿಯೇ ಕೈಗೊಂಡ ನಿರ್ಧಾರವನ್ನು ಅವರು ವಿರೋಧಿಸಿ, ಪಕ್ಷ ಹಾಗೂ ಪಕ್ಷದ ನಾಯಕರ ವಿರುದ್ಧ ಅಪಪ್ರಚಾರ ನಡೆಸಿದರು. ಇದರಿಂದ ಪಕ್ಷದ ವರ್ಚಸ್ಸು, ಹಿತಕ್ಕೆ ಧಕ್ಕೆ ಆಗಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಕರೆದು ಉಚ್ಛಾಟನೆಯ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು. ಮಂಡ್ಯ ಜಿಲ್ಲೆಯ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ಅವರು, ಇಬ್ರಾಹಿಂ ಅವರನ್ನು ಹಾಗೂ ಪಶ್ಚಿಮ ಬಂಗಾಳ ಜೆಡಿಎಸ್ ಘಟಕದ ಅಧ್ಯಕ್ಷ ಪುನೀತ್ ಕುಮಾರ ಸಿಂಗ್ ಅವರು ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಕೇರಳದ ಸಿ.ಕೆ.ನಾನು ಅವರನ್ನು…

Read More

ನವದೆಹಲಿ: ಕೇಂದ್ರ ಸಚಿವ ಸಂಪುಟಕ್ಕೆ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ರೇಣುಕಾ ಸಿಂಗ್ ಸಾರುತಾ ಅವರು ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ. ಇದರ ಬೆನ್ನಲ್ಲೇ ಶೋಭಾ ಕರಂದ್ಲಾಜೆ (Shobha Karandlaje) ಸೇರಿ ನಾಲ್ವರು ಕೇಂದ್ರ ಸಚಿವರಿಗೆ ಹೆಚ್ಚುವರಿ ಖಾತೆಗಳ ಉಸ್ತುವಾರಿ ನೀಡಲಾಗಿದೆ. ಈಚೆಗೆ ನಡೆದ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ ಇವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕೇಂದ್ರ ಸಚಿವ ಅರ್ಜುನ್ ಮುಂಡಾ ಅವರಿಗೆ ಈಗ ಇರುವ ಖಾತೆಯ ಜೊತೆಗೆ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. https://ainlivenews.com/night-time-sleep-bartilwa-then-follow-this/ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರೂ ಆಗಿರುವ ಶೋಭಾ ಕರಂದ್ಲಾಜೆ ಅವರಿಗೆ ಹೆಚ್ಚುವರಿಯಾಗಿ ಆಹಾರ ಸಂಸ್ಕರಣಾ ಕೈಗಾರಿಕೆಗಳ ರಾಜ್ಯ ಸಚಿವರ ಜವಾಬ್ದಾರಿಯನ್ನು ನೀಡಲಾಗಿದೆ. ರಾಜೀವ್ ಚಂದ್ರಶೇಖರ್ ಅವರು ತಮ್ಮ ಈಗಿರುವ ಖಾತೆ ಜೊತೆಗೆ ಹೆಚ್ಚುವರಿಯಾಗಿ ಜಲಶಕ್ತಿ ರಾಜ್ಯ ಸಚಿವರಾಗಿ ಕೆಲಸ ನಿರ್ವಹಿಸಲಿದ್ದಾರೆ.

Read More

ಹೈದರಾಬಾದ್:‌ ತೆಲಂಗಾಣ ರಾಜ್ಯ ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾಗಿ ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ (Akbaruddin Owaisi) ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ ಶನಿವಾರ ಆರಂಭವಾಗಿರುವ ರಾಜ್ಯ ವಿಧಾನಸಭೆಯ (Telangana Legislative Assembly) ಮೊದಲ ಅಧಿವೇಶನಕ್ಕೆ ಹಂಗಾಮಿ ಸ್ಪೀಕರ್‌ ಆಗಿ ಅಕ್ಬರುದ್ದೀನ್ ಓವೈಸಿ ಅವರನ್ನು ನೇಮಕ ಮಾಡಲಾಗಿದ್ದು, https://ainlivenews.com/night-time-sleep-bartilwa-then-follow-this/  ರಾಜ್ಯಪಾಲ ತಮಿಳಿಸೈ ಸೌಂದರರಾಜನ್ (Tamilisai Soundararajan) ಪ್ರಮಾಣ ವಚನ ಬೋಧಿಸಿದ್ದಾರೆ. ಭಾರತದ ಸಂವಿಧಾನದ 180ನೇ ವಿಧಿಯ ಷರತ್ತು (1) ರ ಮೂಲಕ ನೀಡಲಾದ ಅಧಿಕಾರಗಳನ್ನು ಚಲಾಯಿಸುವ ಮೂಲಕ, ತೆಲಂಗಾಣ ರಾಜ್ಯಪಾಲರು ಅಕ್ಬರುದ್ದೀನ್ ಓವೈಸಿ ಅವರನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ (Telangana Assembly Speaker), ಆಗಿ ನೇಮಿಸಿದ್ದಾರೆ. ಚುನಾಯಿತ ಸದಸ್ಯರಲ್ಲಿ ಒಬ್ಬರನ್ನು ಸ್ಪೀಕರ್‌ ಆಗಿ‌ ನೇಮಿಸುವವರೆಗೆ ಅಕ್ಬರುದ್ದೀನ್‌ ಸ್ಪೀಕರ್‌ ಆಗಿ ಅಧಿವೇಶನ ನಿರ್ವಹಿಸಲಿದ್ದಾರೆ.

Read More

ಹಿರಿಯ ನಟಿ ಲೀಲಾವತಿ (Leelavati) ಅವರ ಪಾರ್ಥಿವ ಶರೀರ ಬೆಂಗಳೂರಿನ (Bengaluru) ರವೀಂದ್ರ ಕಲಾಕ್ಷೇತ್ರದಿಂದ ನೆಲಮಂಗಲದ ಸೋಲದೇವನಹಳ್ಳಿಗೆ (Soladevanahalli) ಹೊರಟಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಮತ್ತು ಸಿನಿಮಾರಂಗದ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಲೀಲಾವತಿ ಅವರು ಅಂತಿಮ ದರ್ಶನ ಪಡೆದರು. ಲೀಲಾವತಿ ಅವರ ಅಂತ್ಯಸಂಸ್ಕಾರವನ್ನು ಸರ್ಕಾರಿ ಗೌರವದೊಂದಿಗೆ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಸರ್ಕಾರ ಮತ್ತು ಲೀಲಾವತಿ ಅವರ ಕುಟುಂಬದೊಂದಿಗೆ ಚರ್ಚಿಸಿ ಈ  ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ. ಬೆಳಗ್ಗೆಯಿಂದ ನೆಲಮಂಗದಲ್ಲಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು, ಮಧ್ಯಾಹ್ನ 3:30ಕ್ಕೆ ಅಂತ್ಯಸಂಸ್ಕಾರ (Cremation) ನೆರವೇರಿಸಲಾಗುತ್ತಿದೆ. https://ainlivenews.com/night-time-sleep-bartilwa-then-follow-this/ ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆಯಿಂದ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ವ್ಯವಸ‍್ಥೆ ಮಾಡಲಾಗಿತ್ತು. ನೆಲಮಂಗಲ ಸುತ್ತಮುತ್ತಲಿನ ಗ್ರಾಮಸ್ಥರು, ಸಿನಿಮಾ ಅಭಿಮಾನಿಗಳು ಹಾಗೂ ಕಲಾವಿದರು ಮತ್ತು ತಂತ್ರಜ್ಞರು ಮೈದಾನಕ್ಕೆ ಆಗಮಿಸಿ ಅಗಲಿದ ನೆಚ್ಚಿನ ನಟಿಯ ಅಂತಿಮ ದರ್ಶನ ಪಡೆದರು.…

Read More

ನಟಿ ಲೀಲಾವತಿ (Leelavathi) ಅವರ ನಿಧನಕ್ಕೆ ಹಿರಿಯ ನಟ ಅನಂತ್‌ ನಾಗ್ (Ananth Nag) ಸಂತಾಪ ಸೂಚಿಸಿದ್ದಾರೆ. ಲೀಲಾವತಿ ಅವರನ್ನ ನನ್ನ ಎರಡನೇ ತಾಯಿಯ ರೂಪದಲ್ಲಿ ನೋಡಿದ್ದೀನಿ ಎಂದು ಅನಂತ್‌ನಾಗ್ ಅವರು ಲೀಲಾವತಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರೊಂದಿಗಿನ ಒಡನಾಟದ ದಿನಗಳನ್ನ ಅನಂತ್‌ನಾಗ್ ಸ್ಮರಿಸಿದ್ದಾರೆ. ನನ್ನ ಬದುಕಿನಲ್ಲಿ ಲೀಲಾವತಿ ಅವರನ್ನ ನನ್ನ ಎರಡನೇ ತಾಯಿಯ ರೂಪದಲ್ಲಿ ನೋಡಿದ್ದೀನಿ. ಅದೇ ರೀತಿಯ ಪ್ರೀತಿ ಮತ್ತು ಗೌರವವನ್ನು ಕೊಟ್ಟಿದ್ದೀನಿ. ಅವರ ಜೊತೆ ಸುಮಾರು 50 ವರ್ಷಗಳಿಂದ ನಟಿಸಿದ ನೆನಪುಗಳಿವೆ ಎಂದಿದ್ದಾರೆ ಅನಂತ್‌ನಾಗ್. ಕೆಲದಿನಗಳಿಂದ ಅವರಿಗೆ ಅನಾರೋಗ್ಯ ಎಂದು ತಿಳಿದಾಗ,  ನಾನು ಮತ್ತು ನನ್ನ ಪತ್ನಿ ಗಾಯಿತ್ರಿ ಅವರ ಮನೆಗೆ ಲೀಲಾವತಿ ಅಮ್ಮನವರೊಂದಿಗೆ 4-5 ಗಂಟೆಗಳ ಕಾಲ ಕಳೆದಿದ್ದೇನೆ ಎಂದು ಮಾತನಾಡಿದ್ದಾರೆ. ನಿನ್ನೆ ಅವರ ನಿಧನದ ಸುದ್ದಿ ಕೇಳಿದಾಗ ಬೇಜಾರಾಯ್ತು. ನನಗೆ ಮೊದಲು ಅವರು ಸಿಕ್ಕಿದ್ದೆ, ನನ್ನ ಸಿನಿಮಾದ ತಾಯಿಯ ಪಾತ್ರದಲ್ಲಿ ಆಮೇಲೆ ಸಹೋದರಿಯಾಗಿ ನಟಿಸಿದ್ದಾರೆ. ನನ್ನ ಜೊತೆ ಲೀಲಾವತಿ ಅವರು 35ರಿಂದ 40 ಸಿನಿಮಾಗಳನ್ನ…

Read More

ಹಿರಿಯ ನಟಿ ಲೀಲಾವತಿ ಅವರ ಅಂತ್ಯ ಸಂಸ್ಕಾರವನ್ನು (Funeral) ಸರಕಾರಿ ಗೌರವದೊಂದಿಗೆ ಸೋಲದೇವನಹಳ್ಳಿಯಲ್ಲಿರುವ (Soladevanahalli) ಅವರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಸರಕಾರ ಮತ್ತು ಲೀಲಾವತಿ ಅವರ ಕುಟುಂಬದೊಂದಿಗೆ ಚರ್ಚಿಸಿ ಈ  ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು. ಬೆಳಗ್ಗೆಯಿಂದ ನೆಲಮಂಗದಲ್ಲಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 3.30ಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದಿದ್ದಾರೆ. ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆಯಿಂದ ನೆಲಮಂಗಲದ ಅಂಬೇಡ್ಕರ್  ಮೈದಾನದಲ್ಲಿ ವ್ಯವಸ‍್ಥೆ ಮಾಡಲಾಗಿದೆ. ನೆಲಮಂಗಲ ಸುತ್ತಮುತ್ತಲಿನ ಗ್ರಾಮಸ್ಥರು, ಸಿನಿಮಾ ಅಭಿಮಾನಿಗಳು, ಹಾಗೂ ಕಲಾವಿದರು ಮತ್ತು ತಂತ್ರಜ್ಞರು ಮೈದಾನಕ್ಕೆ ಆಗಮಿಸಿ ಅಗಲಿದ ನೆಚ್ಚಿನ ನಟಿಯ ಅಂತಿಮ ದರ್ಶನ ಪಡೆಯುತ್ತಿದ್ದಾರೆ. https://ainlivenews.com/arrangements-for-last-darshan-of-actress-lilavati-at-ambedkar-maidan-nelamangala/ ಬೆಳಗ್ಗೆ 10 ಗಂಟೆವರೆಗೂ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲೇ ಪಾರ್ಥೀವ ಶರೀರ ಇರಿಸಲಾಗುತ್ತಿದ್ದು, ನಂತರ ಬೆಂಗಳೂರಿನತ್ತ ತಗೆದುಕೊಂಡು ಹೋಗಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿರುವ ಸಂಸ ಬಯಲು ರಂಗ ಮಂದಿರದಲ್ಲಿ ಅಂತಿಮ ದರ್ಶನಕ್ಕೆ…

Read More

ಗದಗ: ಮೆಣಸಿನಕಾಯಿ ಬೆಳೆ ಕಾಯುತ್ತಿದ್ದ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಗದಗ ತಾಲೂಕಿನ ತಿಮ್ಮಾಪೂರ ಗ್ರಾಮದ ಜಮೀನೊಂದರಲ್ಲಿ ನಿನ್ನೆ ರಾತ್ರಿ ದುಷ್ಕರ್ಮಿಗಳು ಮೆಣಸಿನಕಾಯಿ ಬೆಳೆ ಕಾಯಲು ಇದ್ದ ವ್ಯಕ್ತಿಯನ್ನ ಮಾರಾಕಾಸ್ತ್ರಗಳಿಂದ ಕತ್ತು ಕತ್ತರಿಸಿ ರುಂಡದೊಂದಿಗೆ ಪರಾರಿಯಾಗಿದ್ದಾರೆ. ಕೊಲೆಗೀಡಾದ ವ್ಯಕ್ತಿಯನ್ನು ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಾಳೆಕೊಪ್ಪ ಗ್ರಾಮದ ನಿವಾಸಿ ಸಣ್ಣ ಹನಮಪ್ಪ ವಜ್ರದ (65) ‌ಎಂದು ತಿಳಿದು ಬಂದಿದೆ. ಗುಡಿಸಲಿನಲ್ಲಿ ದೇಹ ಮಾತ್ರ ಇದ್ದು, ಬೆಳಿಗ್ಗೆ ಜಮೀನು ಮಾಲೀಕರು ಬಂದು ನೋಡಿದಾಗ ಈ ದುಷ್ಕೃತ್ಯ ಬೆಳಕಿಗೆ ಬಂದಿದೆ. ಸುದ್ದಿ ತಿಳಿದು ಗದಗ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಭೀಕರ ಕೊಲೆಯಿಂದಾಗಿ ಸುತ್ತಮುತ್ತಲಿನ ರೈತರು ಬೆಚ್ಚಿ ಬಿದ್ದಿದ್ದಾರೆ. ಗದಗ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Read More

ಶಾರುಖ್ ಖಾನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಡಂಕಿ ಬಿಡುಗಡೆಗೆ ದಿನಗಣನೆಯಷ್ಟೇ ಬಾಕಿ ಇದೆ. ಕ್ರಿಸ್ಮಸ್ ಗೆ ತೆರೆಗೆ ಬರ್ತಿರುವ ಈ ಚಿತ್ರದ ಮೊದಲ ನೋಟ ರಿಲೀಸ್ ಆಗಿದೆ. ಬ್ಯಾಕ್ ಟು ಬ್ಯಾಕ್ ಮಾಸ್ ಸಿನಿಮಾಗಳಲ್ಲಿ ಅಬ್ಬರಿಸಿದ್ದ ಕಿಂಗ್ ಖಾನ್ ಕ್ಲಾಸ್ ಕಥೆ ಮೂಲಕ ಪ್ರೇಕ್ಷಕರ ಎದುರು ಹಾಜರಾಗ್ತಿದ್ದಾರೆ. ಫನ್-ಎಮೋಷನ್ ಪ್ರೀತಿ ಜೊತೆ ದೇಶಭಕ್ತಿ ಕಥೆ ಹೊತ್ತುಬಂದಿರುವ ಡಂಕಿ ಡ್ರಾಪ್-4 ಅಂದರೆ ಟ್ರೇಲರ್ ಸಖತ್ ಇಂಪ್ರೆಸಿವ್ ಆಗಿದೆ. 3 ನಿಮಿಷ 1 ಸೆಕೆಂಡ್ ಇರುವ ಟ್ರೇಲರ್ ನಲ್ಲಿ ಭರಪೂರ ಮನರಂಜನೆ ಜೊತೆಗೆ ಒಂದೊಳ್ಳೆ ಸಂದೇಶವನ್ನು ನಿರ್ದೇಶಕ ರಾಜ್ ಕುಮಾರ್ ಹಿರಾನಿ ಕಟ್ಟಿಕೊಟ್ಟಿದ್ದಾರೆ. ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಾಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಎಳೆಯಲ್ಲಿ ತೆರೆದಿಟ್ಟಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್ ಖಾನ್ , ಮನು ಪಾತ್ರದಲ್ಲಿ ತಾಪ್ಸಿ ಪನ್ನು, ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ನಟ ವಿಕ್ಕಿ ಕೌಶಲ್, ಅನಿಲ್ ಗ್ರೋವರ್…

Read More

ನೋವಿನ ಅಗ್ನಿಕುಂಡದಲ್ಲಿ ಬೆಂದು, ನೊಂದು ತಾವು ಉಳಿದು, ಮಗನನ್ನೂ ಉಳಿಸಿ ಬೆಳೆಸಿ ಇಲ್ಲೀವರೆಗೆ ಸಾಗಿಬಂದಿದ್ದ ಲೀಲಾವತಿಯವರು, ಈಗ ಕಾಲನ ಕರೆಗೆ ಓಗೊಟ್ಟು ಮಗನನ್ನು ಜಗತ್ತಿನ ಕೈಗಿಟ್ಟು ಹೊರಟು ಹೋಗಿದ್ದಾರೆ. ತಾಯಿಯನ್ನು ಕಳೆದುಕೊಂಡ ವಿನೋದ್ ರಾಜ್ ನೋವು ಕೇವಲ ಅವರೊಬ್ಬರದ್ದಲ್ಲ.. ಎಲ್ಲರದ್ದೂ.. ನಾಗಕನ್ನಿಕೆಯಾಗಿ ಚಂದನವಕ್ಕೆ ನಟಿಯ ಪದಾರ್ಪಣೆ ರಂಗಭೂಮಿಯಲ್ಲಿದ್ದ ಲೀಲಾವತಿಯವರು 1949 ರಲ್ಲಿ, ಶಂಕರ್ ನಾಗ್ ಅಭಿನಯದ ನಾಗಕನ್ನಿಕೆ ಸಿನಿಮಾದಲ್ಲಿ ಸಖಿಯ ಪಾತ್ರದ ಮೂಲಕ ಚಂದನವನಕ್ಕೆ ಪ್ರವೇಶ ಮಾಡ್ತಾರೆ. ಬಟ್​​​ ಇದು ಅವರ ನಟನಾ ಮೆರುಗಿನ ಆರಂಭವಷ್ಟೇ. ಅವರ ನಿಜವಾದ ಮೆರುಗು ಹೆಣ್ಣಿನ ಮಾಂಗಲ್ಯದ ಮಹತ್ವ ಸಾರುವುದರಿಂದ ಶುರುವಾಗುತ್ತೆ. ಹೌದು ಲೀಲಾವತಿಯವ್ರು ಮೊದಲು ನಾಯಕಿಯಾಗಿ ಕಾಣಿಸಿಕೊಂಡಿದ್ದ ಅಚ್ಚ ಕನ್ನಡದ ಚಿತ್ರ ‘ಮಾಂಗಲ್ಯ ಯೋಗ’. ಮೇರು ನಟ ಕಿರೀಟ.. ಡಾ.ರಾಜ್ ಕುಮಾರ್ ಲೀಲಾವತಿ ಮ್ಯಾಜಿಕ್​​​ ಅದು ನಟನೆಗೆ ಒಂದು ಭೂಷಣ. ಈ ಇಬ್ಬರ ಜೋಡಿ ಚಂದನವನಕ್ಕೆ ಅಂದ ತಂದವರು. ಡಾ. ರಾಜ್​​ ಮತ್ತು ಲೀಲಾವತಿ ಅವ್ರ ಮೊದಲ ಜೋಡಿ. ರಣಧೀರ ಕಂಠೀರವ. ಈ ಜೋಡಿಯ…

Read More