Author: AIN Author

ಬಿಗ್ ಬಾಸ್‌ ಕನ್ನಡ 10’ ಕಾರ್ಯಕ್ರಮದಲ್ಲಿ ಒಂಬತ್ತನೇ ವಾರ ರಾಕ್ಷಸರು ವರ್ಸಸ್‌ ಗಂಧರ್ವರು ಟಾಸ್ಕ್‌ ಚಾಲ್ತಿಯಲ್ಲಿತ್ತು. ಇದರಲ್ಲಿ ಗಂಧರ್ವನಾಗಿಯೂ, ರಾಕ್ಷಸನಾಗಿಯೂ ಕಾರ್ತಿಕ್ ಅವರ ಪರ್ಫಾಮೆನ್ಸ್ ಚೆನ್ನಾಗಿತ್ತು. ಆದರೆ ಚಪ್ಪಲಿ ವಿಷ್ಯವನ್ನಿಟ್ಟುಕೊಂಡು ವಿನಯ್ & ಗ್ಯಾಂಗ್ ಕಾರ್ತಿಕ್‌ನ ಟಾರ್ಗೆಟ್‌ ಮಾಡಿ ‘ಕಳಪೆ’ ಕೊಟ್ಟಿದ್ದಾರೆ. ಕಾರ್ತಿಕ್ ಮೇಲೆ ಚಪಾತಿ ಹಿಟ್ಟಿನಿಂದ ವಿನಯ್‌ ಪದೇ ಪದೇ ಜೋರಾಗಿ ಹೊಡೆದರು. https://ainlivenews.com/good-news-for-tourists-going-to-nandibetta-hill-is-very-easy-from-now-on/ ಶೇವಿಂಗ್‌ ಫೋಮ್‌ ಮಿಕ್ಸ್ ಆಗಿದ್ದ ಚಪಾತಿ ಹಿಟ್ಟನ್ನ ಕಾರ್ತಿಕ್ ಬಾಯಿಗೆ ವಿನಯ್ ತುರುಕಿದರು. ಆನಂತರ ಸಿಟ್ಟಿನಿಂದ ಕಾರ್ತಿಕ್ ತಮ್ಮ ಚಪ್ಪಲಿಯನ್ನ ನೆಲಕ್ಕೆ ಬಿಸಾಕಿದರು. ಅಗ ಚಪ್ಪಲಿ ಬೌನ್ಸ್ ಆಗಿ ವಿನಯ್‌ಗೆ ತಾಕಿತು. ಅದಕ್ಕೆ, ‘’ಕಾರ್ತಿಕ್ ಚಪ್ಪಲಿಯಿಂದ ನನ್ನ ಹೊಡೆದ’’ ಎಂದು ವಿನಯ್ ದೊಡ್ಡ ರಂಪ ಮಾಡಿದರು. ಇದೇ ಕಾರಣವನ್ನ ಇಟ್ಟುಕೊಂಡು ಕಾರ್ತಿಕ್‌ಗೆ ಈಗ ಕಳಪೆ ಪಟ್ಟ ಕೊಡಲಾಗಿದೆ. ಕಳಪೆ ಪಟ್ಟ ಪಡೆದ ಕಾರ್ತಿಕ್ ಜೈಲಿಗೆ ತೆರಳಿದ್ದಾರೆ. ವೀಕ್ಷಕರ ಅಭಿಪ್ರಾಯ ‘’ಕಾರ್ತಿಕ್‌ಗೆ ಕಳಪೆ ಕೊಟ್ಟಿರೋದು ತಪ್ಪು. ಗ್ರೂಪಿಸಂನಿಂದ ಕಳಪೆ ವಿಚಾರದಲ್ಲಿ ಅನ್ಯಾಯವಾಗುತ್ತಿದೆ. ಕಾರ್ತಿಕ್ ಪರ್ಫಾಮೆನ್ಸ್ ಚೆನ್ನಾಗಿತ್ತು.…

Read More

ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಇಂದು ನಿಧನರಾಗಿದ್ದಾರೆ. ಅವರ ಅಂತಿಮ ದರ್ಶನದ ವಿಚಾರವಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ವಿಚಾರವಾಗಿ ನೆಲಮಂಗಲ (Nelamangala) ಡಿವೈಎಸ್ ಪಿ ಪುರುಷೋತ್ತಮ ಅವರು ಮಾಧ್ಯಮಗಳ ಜೊತೆ ಮಾತನಾಡಿ, ನಾಳೆ  ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ. ನಾಳೆ ನೆಲಮಂಗಲದ ಆಂಬೇಡ್ಕರ್ (Ambedakar Ground) ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.  ದಯವಿಟ್ಟು ಸಾರ್ವಜನಿಕರು ಸಹಕರಿಸಿ. ಎಲ್ಲರಿಗೂ ಅವರ ಅಂತಿಮ ದರ್ಶನ ಸಿಗುವಂತೆ ವ್ಯವಸ್ಥೆ ಮಾಡುತ್ತೇವೆ ಎಂದಿದ್ದಾರೆ. ನೆಲಮಂಗಲ ಪೊಲೀಸರು ಹಾಗೂ ತಹಶಿಲ್ದಾರ್  ಅರುಂಧತಿ ನೇತೃತ್ವದಲ್ಲಿ ಮೈದಾನದಲ್ಲಿ ತಯಾರಿ ಮಾಡಲಾಗುತ್ತಿದೆ. ಚಿಕಿತ್ಸೆ ಫಲಕಾರಿ ಆಗಲಿಲ್ಲ ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದರ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಇಂದು ಮಧ್ಯಾಹ್ನ ದಿಢೀರ್ ಅಂತ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು…

Read More

ನಟ ಚೇತನ್ ಅಹಿಂಸಾ (Chethan Ahimsa) ವಿವಾದಾತ್ಮಕ ಹೇಳಿಕೆ ಮೂಲಕ ಸದ್ದು ಮಾಡುತ್ತಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ವಿ.ಡಿ ಸಾವರ್ಕರ್ ಜೊತೆಗೆ ಮಹಾತ್ಮಾ ಗಾಂಧೀಜಿ ಫೋಟೋ ಕೂಡ ತೆರವು ಮಾಡಬೇಕು ಎಂದು ಹೇಳಿಕೆ ನೀಡುವ ಮೂಲಕ ಚೇತನ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ (Priyanka Karge) ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ನಟ ಚೇತನ್, ಸಾವರ್ಕರ್ ಮತ್ತು ಗಾಂಧೀಜಿ ಇಬ್ಬರ ಫೋಟೋ ತೆಗೆಯಬೇಕು ಎಂದು ಹೇಳಿದ್ದರು. ಸುವರ್ಣ ಸೌಧದಿಂದ ಸಾವರ್ಕರ್ ಫೋಟೋ ತೆಗೆದರೆ ಸೂಕ್ತ. ಅದನ್ನು ನನಗೆ ಬಿಟ್ಟರೆ ಇವತ್ತೇ ತೆಗೆಯುತ್ತೇನೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. https://ainlivenews.com/good-news-for-tourists-going-to-nandibetta-hill-is-very-easy-from-now-on/ ಕಾಂಗ್ರೆಸ್ ಮತ್ತು ಖರ್ಗೆಯವರಿಗೆ ಸಾವರ್ಕರ್ ಸೈದ್ಧಾಂತಿಕ ಶತ್ರುವಾಗಿರಬಹುದು. ನಮ್ಮಂತ ಸಮಾನತಾವಾದಿಗಳಿಗೆ, ಸಾವರ್ಕರ್ ಮತ್ತು ಗಾಂಧಿ ಇಬ್ಬರೂ ನಮ್ಮ ಸೈದ್ಧಾಂತಿಕ ಶತ್ರುಗಳು ಎಂದು ಚೇತನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ನೀವು ಸಾವರ್ಕರ್ ಮತ್ತು ಗಾಂಧಿ ಇಬ್ಬರ ಫೋಟೋಗಳನ್ನು ತೆಗೆದುಹಾಕುವುದು ಸೂಕ್ತ ಎಂದು ಚೇತನ್ ಪ್ರತಿಕ್ರಿಯಿಸಿದ್ದಾರೆ. ಇಲ್ಲವಾದರೆ, ಇಬ್ಬರನ್ನೂ ಇಟ್ಟುಕೊಳ್ಳಿ ಮತ್ತು ಸುವರ್ಣ…

Read More

ಮುಂಬೈ: ಅದಾನಿ ಸಮೂಹದ (Adani Group) ವಿರುದ್ಧ ಹಿಂಡೆನ್‌ಬರ್ಗ್‌ ರಿಸರ್ಚ್‌ (Hindenburg Research) ಮಾಡಿದ ಆರೋಪ ಅಪ್ರಸ್ತುತ ಎಂದು ಅಮೆರಿಕದ ಸಂಸ್ಥೆ ತೀರ್ಮಾನಿಸಿದ ಬೆನ್ನಲ್ಲೇ ಅದಾನಿ ಸಮೂಹದ ಕಂಪನಿಗಳ ಷೇರುಗಳ ಮೌಲ್ಯ ಒಂದೇ ದಿನದಲ್ಲಿ ಭಾರೀ ಏರಿಕೆಯಾಗಿದೆ. ನವೆಂಬರ್‌ ಮೊದಲ ವಾರದಲ್ಲಿ ಶ್ರೀಲಂಕಾದ ಕೊಲಂಬೋದಲ್ಲಿ (Colombo) ಬಂದರಿನಲ್ಲಿ ಕಂಟೈನರ್ ಟರ್ಮಿನಲ್‌ ಯೋಜನೆಗೆ (Container Terminal Project) ಅಮೆರಿಕದ ಇಂಟರ್‌ನ್ಯಾಷನಲ್‌ ಡೆವಲಪ್‌ಮೆಂಟ್‌ ಫೈನಾನ್ಸ್‌ ಕಾರ್ಪೋರೇಷನ್‌ (DFC) 553 ಮಿಲಿಯನ್‌ ಡಾಲರ್‌ (ಅಂದಾಜು 4,600 ಕೋಟಿ ರೂ.) ಹಣವನ್ನು ಅದಾನಿ ಪೋರ್ಟ್‌ ಎಸ್‌ಇಝಡ್‌(Adani Port Sez) ಸಾಲವಾಗಿ ನೀಡಿದೆ. ಅದಾನಿ ಕಂಪನಿಗೆ ಭಾರೀ ಮೊತ್ತದ ಸಾಲ ನೀಡುವ ಮುನ್ನ ಡಿಎಫ್‌ಸಿ ಹಿಂಡೆನ್‌ಬರ್ಗ್‌ ಮಾಡಿದ ಎಲ್ಲಾ ಆರೋಪಗಳನ್ನು ಅಧ್ಯಯನ ಮಾಡಿತ್ತು. ಹಿಂಡೆನ್‌ಬರ್ಗ್‌ ಸಂಶೋಧನಾ ವರದಿಯ ಸತ್ಯಾಸತ್ಯತೆಯ ಬಳಿಕ ಈ ಆರೋಪ ಅಪ್ರಸ್ತುತ ಎಂಬ ತೀರ್ಮಾನಕ್ಕೆ ಬಂದಿದೆ ಎಂದು ಡಿಎಫ್‌ಸಿ ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದ್ದಾಗಿ ಬ್ಲೂಮ್‌ಬರ್ಗ್‌ ವರದಿ ಮಾಡಿದೆ.  ಈ ವರದಿ ಪ್ರಕಟವಾದ ಬೆನ್ನಲ್ಲೇ ಮಂಗಳವಾರ ಒಂದೇ ದಿನ…

Read More

ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಬಿಜೆಪಿಯವರಿಗೆ (BJP) ಬಕೆಟ್ ಹಿಡಿಯಲು ಹೋಗಿದ್ದಾರೆ. ಬಿಜೆಪಿ ಮೈತ್ರಿಯಿಂದ ಅಶೋಕ್, ಯಡಿಯೂರಪ್ಪ ಮಗನ ಹಿಂದೆ ನೀವು ಓಡಾಡ್ಬೇಕು ಅಷ್ಟೇ ಎಂದು ಸಿಎಂ ಇಬ್ರಾಹಿಂ (CM Ibrahim) ಕುಮಾರಸ್ವಾಮಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ಕರೆದು ಮಾತನಾಡಿದ ಸಿಎಂ ಇಬ್ರಾಹಿಂ, ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿಯವರೇ ಮೊದಲು ನಿಮ್ಮ ಆರೋಗ್ಯ ನೋಡಿಕೊಳ್ಳಿ. ನೀವು ಕೇಶವ ಕೃಪದಲ್ಲಿ ಬಾಳಲಾರಿರಿ. ನೀವು ಏನು, ನಿಮ್ಮ ಮನಸ್ಥಿತಿ ಏನು ಅನ್ನೋದು ನನಗೆ ಗೊತ್ತಿದೆ. ಮತ್ತೆ ನೀವು ಇಲ್ಲಿಗೇ ಬರಬೇಕು, ಬೇರೆ ವಿಧಿಯಿಲ್ಲ ಎಂದು ಕಾಲೆಳೆದಿದ್ದಾರೆ. https://ainlivenews.com/good-news-for-tourists-going-to-nandibetta-hill-is-very-easy-from-now-on/ ದೇವೇಗೌಡರಿಗೆ ವಯಸ್ಸಾಗಿದೆ, ಸ್ವಯಂ ನಿರ್ಧಾರ ತೆಗೆದುಕೊಳ್ಳಲಾರರು. ಐವರು ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಜನವರಿ ನಂತರ ಒಂದು ಅಂತಿಮ ತೀರ್ಮಾನ ತಿಳಿಸುತ್ತೇವೆ. ದೇವೆಗೌಡರು, ಕುಮಾರಸ್ವಾಮಿಯವರ ಆರೋಗ್ಯದ ದೃಷ್ಠಿಯಿಂದ ನಾನು ಕೆಲಸ ನಿಧಾನಕ್ಕೆ ಮಾಡುತ್ತಿದ್ದೇನೆ. ಅವರಿಗೆ ಟೆನ್ಷನ್ ಕೊಡಬಾರದು ಅಂತ ಕೆಲಸ ನಿಧಾನ ಮಾಡಿದ್ದೇನೆ ಎಂದರು. 

Read More

ಬಿಗ್ ಬಾಸ್ ಮನೆಯಲ್ಲಿ (Bigg Boss Kannada 10) ಈ ವಾರ ಮಹಾಯುದ್ಧವೇ ನಡೆದಿದೆ. ವಿನಯ್ (Vinay Gowda) ಮತ್ತು ಕಾರ್ತಿಕ್ (Karthik Mahesh) ಜಗಳ ಮೀತಿ ಮೀರಿದೆ. ಇದೀಗ ಕಾರ್ತಿಕ್ ತನಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ, ನಾನು ಈ ಮನೆಯಲ್ಲಿ ಇರಬೇಕಾ? ಎಂದು ವಿನಯ್ ಗುಡುಗಿದ್ದಾರೆ. ಕಾರ್ತಿಕ್ ಯಾವ ತಪ್ಪು ಮಾಡಿಲ್ಲ, ಚಪ್ಪಲಿ ಏಟು ಬಿದ್ದಿಲ್ಲ ಎಂದು ಮೈಕಲ್ ಎದುರಾಳಿ ಪರ ವಹಿಸಿದ್ದಾರೆ. ಮೈಕಲ್ ನಡೆ ಇದೀಗ ವಿನಯ್ ಕೆಂಗಣ್ಣಿಗೆ ಗುರಿಯಾಗಿದೆ. ಈ ವಾರ ಬಿಗ್ ಬಾಸ್ ಗಂಧರ್ವರು ಮತ್ತು ರಾಕ್ಷಸರು ಎಂದು ಎರಡು ತಂಡಗಳಾಗಿ ಮಾಡಿದ್ದು, ಕಾರ್ತಿಕ್ ಮತ್ತು ವಿನಯ್ ಬೇರೆ ಬೇರೆ ತಂಡದಲ್ಲಿ ಇದ್ದರು. ರಾಕ್ಷಸ ತಂಡದ ವಿನಯ್, ಗಂಧರ್ವ ತಂಡದ ಕಾರ್ತಿಕ್‌ಗೆ ಟಾಸ್ಕ್ ಕೊಡುವಾಗ ಜಟಾಪಟಿ ಶುರುವಾಗಿದೆ. ವಿನಯ್ & ಟೀಮ್ ಈ ಟಾಸ್ಕ್ನ ಪರ್ಸನಲ್ ದ್ವೇಷಕ್ಕೆ ಬಳಸಿಕೊಂಡು ಕಾರ್ತಿಕ್‌ಗೆ ಟಾರ್ಗೆಟ್ ಮಾಡಿದ್ದಾರೆ. ಮುಖಕ್ಕೆ ನೊರೆ ಹಾಕಿದ್ದು, ಚಪಾತಿ ಹಿಟ್ಟಿನಲ್ಲಿ ಮುಖಕ್ಕೆ ಹೊಡೆದಿರೋದು ಹೀಗೆ ನಾನಾ ರೀತಿಯಲ್ಲಿ…

Read More

ಕನ್ನಡ ಸಿನಿಮಾ ರಂಗದ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟಿದ್ದ ಲೀಲಾವತಿ (Leelavati) ಅವರು, ಆನಂತರ ದಕ್ಷಿಣದ ಅಷ್ಟೂ ಭಾಷೆಗಳಲ್ಲೂ ನಟಿಸಿದವರು. ತಮಿಳು, ತೆಲುಗು, ಕನ್ನಡ, ಮಲೆಯಾಳಂ ಸೇರಿದಂತೆ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಇವರು ನಟಿಸಿದ್ದಾರೆ. 1949ರಲ್ಲಿ ತೆರೆ ಕಂಡ ಶಂಕರ್ ಸಿಂಗ್ ಅವರ ನಾಗಕನ್ನಿಕ ಇವರ ಮೊದಲ ಚಿತ್ರ. ಇದಕ್ಕೂ ಮೊದಲು ಲೀಲಾವತಿ ಅವರು ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಕಯಾದುವಿನ ಸಖಿ, ಭಕ್ತ ಪ್ರಹ್ಲಾದ ಸೇರಿದಂತೆ ಸಾಕಷ್ಟು ನಾಟಕಗಳಲ್ಲಿ ಇವರು ಅಭಿನಯಿಸಿದ್ದಾರೆ. ಸಿನಿಮಾ ರಂಗಕ್ಕೆ ಬಂದ ನಂತರ, ಭಕ್ತ ಕುಂಬಾರ ಮನೆ ಮೆಚ್ಚಿದ ಸೊಸೆ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಿಕ್ಕಚಿಕ್ಕ ಪಾತ್ರಗಳನ್ನೇ ಮಾಡುತ್ತಾ ಬಂದಿದ್ದ ಲೀಲಾವತಿ ಅವರು, ನಾಯಕಿಯಾಗಿ ನಟಿಸಿದ ಮೊದಲ ಸಿನಿಮಾ ಮಾಂಗಲ್ಯ ಯೋಗ. ನಂತರ ಡಾ.ರಾಜ್ ಕುಮಾರ್ ಅವರೊಂದಿಗೆ ಮೊದಲ ಬಾರಿಗೆ ರಣಧೀರ ಕಂಠೀರವ ಸಿನಿಮಾದಲ್ಲಿ ನಟಿಸಿದರು. https://ainlivenews.com/good-news-for-tourists-going-to-nandibetta-hill-is-very-easy-from-now-on/ ಡಾ.ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಆ ಕಾಲದಲ್ಲಿ ಫೇಮಸ್. ಡಾ.ರಾಜ್…

Read More

ಹುಬ್ಬಳ್ಳಿ: ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೈದು ಪತಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಹಳೇಹುಬ್ಬಳ್ಳಿಯ ಇಸ್ಲಾಂಪುರದಲ್ಲಿ ನಡೆದಿದೆ. ಸಾಹಿಕ್ತಾ ಬೇಪಾರಿ (25) ಕೊಲೆಯಾದ ಮಹಿಳೆ, ಪತಿ ಮಲ್ಲಿಕ್ ಬೇಪಾರಿ(28) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ‘ಹಳೇಹುಬ್ಬಳ್ಳಿ ನಿವಾಸಿಯಾಗಿದ್ದ ಸಾಹಿಕ್ತಾ ಅವರನ್ನು ಐದಾರು ವರ್ಷಗಳ ಹಿಂದೆ ಬೈಲಹೊಂಗಲ ವ್ಯಕ್ತಿಯೊಬ್ಬರ ಜೊತೆ ಮದುವೆ ಮಾಡಿಕೊಡಲಾಗಿತ್ತು. ಕೆಲ ತಿಂಗಳ ಹಿಂದೆ ಪತಿ ಮೃತಪಟ್ಟಿದ್ದರು. ಇಬ್ಬರು ಮಕ್ಕಳ ಜೊತೆ ಅವರು ತವರಿಗೆ ಬಂದು ವಾಸಿಸುತ್ತಿದ್ದರು. ಕುಟುಂಬದವರು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಲ್ಲಿಕ್ ಬೇಪಾರಿ ಜೊತೆ ಎರಡನೇ ಮದುವೆ ಮಾಡಿಸಿದ್ದರು. ಪತಿ ಸರಿಯಾಗಿ ಕೆಲಸಕ್ಕೆ ಹೋಗುತ್ತಿಲ್ಲ ಎಂದು ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು. ಶುಕ್ರವಾರ ಬೆಳಿಗ್ಗೆ ಅದೇ ವಿಷಯಕ್ಕೆ ಮತ್ತೆ ಜಗಳವಾಗಿದ್ದು, ಮಲ್ಲಿಕ್ ಕೋಪದಿಂದ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ನಂತರ ಅವರು ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.ಕಸಬಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Read More

ಹುಬ್ಬಳ್ಳಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚೆಳಿಗಾಲ ಅಧಿವೇಶನದಲ್ಲಿ ಭಾಗಿಯಾಗಿ ಬರಗಾಲದ ಕುರಿತು ಮಾತನಾಡಿದ ಕುಂದಗೋಳ ಕ್ಷೇತ್ರದ ಶಾಸಕ ಎಮ್.ಆರ್.ಪಾಟೀಲ್ ರೈತರ ಸಮಸ್ಯೆಗಳನ್ನ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಕಂಡು ಕಾಣದಂತ ಬರಗಾಲ ಈ ವರ್ಷ ಬಂದಿದೆ. ರೈತರು ತಮ್ಮ ಜಾನುವಾರುಗಳನ್ನ ಸಾಕುವುದು ಕಷ್ಟಕರವಾಗಿದೆ. ಇಂತಹ ಸಮಯದಲ್ಲಿ ಸರ್ಕಾರ ಮೇವು ಬ್ಯಾಂಕ್‌ಗಳನ್ನ ಓಪನ್ ಮಾಡಬೇಕಾಗಿತ್ರು. ಇಲ್ಲಿಯವರೆಗೂ ಸರ್ಕಾರ ಮೇವು ಬ್ಯಾಂಕ್ ಓಪನ್ ಮಾಡಿಲ್ಲ. ಇದರಿಂದಾಗಿ ರೈತ ಸಮುದಾಯ ಸಂಕಷ್ಟದಲ್ಲಿ ಸಿಲುಕೊಂಡಿದ್ದಾನೆ. ತಕ್ಷಣ ಮೇವು ಬ್ಯಾಂಕ್‌ಗಳನ್ನ ಓಪನ್ ಮಾಡಿ, ಉಚಿತವಾಗಿ ಮೇವು ಗಳನ್ನ ನೀಡಬೇಕು. ಅಲ್ಲದೇ ಕುಂದಗೋಳ ಮತ ಕ್ಷೇತ್ರದಲ್ಲಿ ಎರಡೂ ತಿಂಗಳ ಅವಧಿಯಲ್ಲಿ ನಾಲ್ಕು ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಮ್ಮ ಕ್ಷೇತ್ರ ಒಣ ಬೇಸಾಯದಿಂದ ಕೂಡಿದೆ. ಮಳೆ ಆಧಾರಿತ ವ್ಯವಸಾಯ ಮಾಡಬೇಕಿದೆ. ಕೆಲವು ಕಡೆ ಬೋರ್‌ವೇಲ್‌ಗಳಿದ್ದರು ಅದಕ್ಕೆ ಸರಿಯಾದ ವಿದ್ಯುತ್ ಕೊಡಲು ಸರ್ಕಾರದಿಂದ ಆಗುತ್ತಿಲ್ಲ. ಇಂತಹ ಸಮಯದಲ್ಲಿ ‌ರಾತ್ರಿ ವೇಳೆ ತ್ರೀಪೇಸ್ ವಿದ್ಯುತ್ ನೀಡಲಾಗುತ್ತಿದೆ. ಇದರಿಂದಾಗಿ ರೈತರಿಗೆ ಹಾವು ಕಡಿದು ಸಾವನ್ನಪ್ಪುವ ಘಟನೆಗಳು ಹೆಚ್ಚುತ್ತಿವೆ.‌…

Read More

ಬಳ್ಳಾರಿ : ಮೈನಿಂಗ್ ಕಂಪನಿ ಅಭಿವೃದ್ಧಿಗಾಗಿ ಜಮೀನು ನೀಡಲಿಲ್ಲವೆಂದು ಬಿತ್ತನೆ ಮಾಡಿದ ಹೊಲದಲ್ಲಿ ರಾತ್ರೋರಾತ್ರಿ ಖಾಸಗಿ ಕಂಪನಿ ಸಿಬ್ಬಂದಿಗಳು ಜೆಸಿಬಿ ತಂದು ಬೆಳೆ ನಾಶ ಮಾಡಿ ಅಟ್ಟಹಾಸ ಮೇರೆದಿರುವಂತಹ ಘಟನೆ ಸಂಡೂರು ತಾಲೂಕಿನ ರಣಜಿತ್ ಪುರ ಗ್ರಾಮದಲ್ಲಿ ನಡೆದಿದೆ.  ಸಾವಿರಾರು ರೂ. ಖರ್ಚು ಮಾಡಿ ಬಿತ್ತನೆ ಮಾಡಿದ ಬೆಳೆ ನಾಶ ಕಂಡು ಅನ್ನದಾತರು ಕಣ್ಣಿರು ಹಾಕಿದ್ದಾರೆ. ಕಾಡಪ್ಪ ಮತ್ತು ಪರಮೇಶ್ವರಪ್ಪ ಸೇರಿದಂತೆ ಇತರೆ ರೈತರ ಬೆಳೆನಾಶ ಮಾಡಲಾಗಿದೆ.ಕಷ್ಟಪಟ್ಟು ಬಿತ್ತಿದ ಈರುಳ್ಳಿ, ಮೆಕ್ಕೆ ಜೋಳ ಸೇರಿದಂತೆ ಕೃಷಿ ಪರಿಕಗಳ ನಾಶ ಮಾಡಿದ್ದಾರೆಂದು ಆರೋಪ ಮಾಡಲಾಗಿದೆ. ಸಂಡೂರಿನ ಖಾಸಗಿ ಕಂಪನಿಯವರು (ಆರ್‌ಐಪಿಎಲ್) ತಮ್ಮ ಮೈನಿಂಗ್ ಕಂಪನಿ ಅಭಿವೃದ್ಧಿಗಾಗಿ ಜಮೀನು ತೆಗೆದುಕೊಳ್ಳಲು ಪಯತ್ನ ನಡೆಸಿದ್ದಾರೆ. ಭೂಮಿ ನೀಡುವುದಿಲ್ಲ ಎಂದು ಹೇಳಿದ್ದರು ಕೆಐಡಿಬಿ ಮೂಲಕ ಖಾಸಗಿ ಕಂಪನಿ ಒತ್ತಡ ಹಾಕುತ್ತಿದೆ. ಆದರೆ ರೈತರು ಮಾತ್ರ ಭೂಮಿ ನೀಡುತ್ತಿಲ್ಲ. ಈ ಬಗ್ಗೆ ಧಾರವಾಡ ಹೈಕೋರ್ಟ್​ನಲ್ಲಿ ವ್ಯಾಜ್ಯ ನಡೆಯುತ್ತಿದೆ. ಈ ಮಧ್ಯೆ ರಾತ್ರೋರಾತ್ರಿ ಕಂಪನಿಯವರು ಜಮೀನಿನಲ್ಲಿ ಬೆಳೆದ ಈರುಳ್ಳಿ, ಮೆಕ್ಕೆ ಜೋಳ ಸೇರಿದಂತೆ…

Read More