ಬೆಂಗಳೂರು: ಹಾಡಹಗಲೇ ಗೃಹಿಣಿಯೋರ್ವಳನ್ನ ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಸಿಲಿಕಾನ್ ವ್ಯಾಲಿ ಖ್ಯಾತಿಯ ಎಲೆಕ್ಟ್ರಾನಿಕ್ ಸಿಟಿಯ ಮಗ್ಗಲಿನಲ್ಲಿಯೇ ನಡೆದಿದೆ. ಇದು ಐಟಿಬಿಟಿ (ITBT) ಸಿಟಿಯ ಜನರನ್ನ ಬೆಚ್ಚಿ ಬೀಳಿಸಿದೆ. https://ainlivenews.com/of-course-ive-seen-kateras-movie-im-currently-shooting-actor-sudeep/ ಮೃತ ಮಹಿಳೆಯನ್ನು ನೀಲಂ(30) ಎಂದು ಗುರುತಿಸಲಾಗಿದೆ. ಮೂಲತಃ ಉತ್ತರ ಪ್ರದೇಶದವರಾಗಿರುವ ಈಕೆ ತನ್ನ ಕುಟುಂಬದ ಜೊತೆ ಕಳೆದ ಕೆಲ ವರ್ಷಗಳ ಹಿಂದೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಬೆಟ್ಟದಾಸನಪುರದ ಸಾಯಿ ಶಕ್ತಿ ಬಡಾವಣೆಯ ಗಂಗಾ ಬ್ಲಾಕ್ ನ ಬಾಡಿಗೆ ಮನೆಯಲ್ಲಿ ವಾಸವಿದ್ರು. ಪತಿ ಹಾರ್ಡ್ ವೇರ್ ಶಾಪ್ ಜೊತೆಗೆ ಪೈಂಟಿಂಗ್ ಕಾಂಟ್ರಾಕ್ಟ್ ಕೆಲಸ ಮಾಡಿಕೊಂಡಿದ್ದ. ಎಂದಿನಂತೆ ಮಕ್ಕಳು ಶಾಲೆಗೆ ಹೋಗಿದ್ರೆ, ಪತಿ ಕೆಲಸಕ್ಕೆ ಹೋಗಿದ್ದ ಎನ್ನಲಾಗಿದೆ. ಮನೆಯಲ್ಲಿ ಮಹಿಳೆ ನೀಲಂ ಮಾತ್ರ ಒಬ್ಬಂಟಿಯಾಗಿದ್ದಾಗ ಯಾರೋ ಅಪರಿಚಿತರು ಮನೆಗೆ ನುಗ್ಗಿ ಮಹಿಳೆಯ ಹತ್ಯೆ ಮಾಡಿದ್ದಾರೆ. ಆದರೆ ದುಷ್ಕರ್ಮಿಗಳು ಯಾವುದೇ ಒಡವೆ, ಹಣವನ್ನು ಕದ್ದಿಲ್ಲ. ಹೀಗಾಗಿ ಈ ಕೊಲೆಯ ಹಿಂದೆ ಅನುಮಾನಗಳು ಹುಟ್ಟಿಕೊಂಡಿವೆ.
Author: AIN Author
ಬೆಂಗಳೂರು: ಚಾಮರಾಜನಗರ ಸಹಕಾರಿ ಬ್ಯಾಂಕ್ (District Co Operative Bank) ಚುನಾವಣೆಯನ್ನು ಎಂಟು ವಾರಗಳಲ್ಲಿ ನಡೆಸಲು ಹೈಕೋರ್ಟ್ ಸೂಚನೆ ನೀಡಿದೆ. ಈ ಮೂಲಕ ಲೋಕಸಭಾ ಚುನಾವಣೆಗೂ ಮುನ್ನ ಜಿ.ಟಿ ದೇವೆಗೌಡ (G.T Devegowda) ಹಾಗೂ ಸಿಎಂ ಸಿದ್ದರಾಮಯ್ಯ (Siddaramaiah) ನಡುವೆ ಮೆಗಾ ಫೈಟ್‍ಗೆ ಮೈಸೂರಿನಲ್ಲಿ (Mysuru) ಅಖಾಡ ಫಿಕ್ಸ್ ಆಗಿದೆ. https://ainlivenews.com/karasevaka-srikanth-pujari-arrested-watch-hdks-first-reaction/ ನ್ಯಾಯಾಲಯದ ಆದೇಶದಿಂದ, ಸಹಕಾರಿ ಬ್ಯಾಂಕ್ ಚುನಾವಣೆ ಹೆಸರಿನಲ್ಲಿ ಇಬ್ಬರ ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟಕ್ಕೆ ತೆರೆ ಬೀಳುವ ಸಮಯ ಬಂದಿದೆ. ಸಹಕಾರ ಕ್ಷೇತ್ರದಲ್ಲಿ ಜಿಟಿಡಿ ಕುಟುಂಬದ ಹಿಡಿತ ತಪ್ಪಿಸಲು ತೆರೆಮರೆಯಲ್ಲೇ ಸಿಎಂ ಪ್ರಯತ್ನ ನಡೆಸುತ್ತಿದ್ದರು. ಅಲ್ಲದೇ ಸಿದ್ದರಾಮಯ್ಯ ತಮ್ಮ ಹಿಡಿತ ಬಿಗಿ ಮಾಡಿಕೊಳ್ಳಲು ಹಲವು ಕಾರ್ಯತಂತ್ರ ಮಾಡಿದ್ದರು ಎಂಬ ಮಾತುಗಳು ಕೇಳಿಬಂದಿದ್ದವು. ಇದೀಗ ನ್ಯಾಯಾಲಯದ ಆದೇಶದಿಂದ ಲೋಕಸಭಾ ಚುನಾವಣೆಗೂ ಮುನ್ನ ಇಬ್ಬರ ನಡುವಿನ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗಿದೆ ಕಳೆದ ನವೆಂಬರ್‍ನಲ್ಲಿ ಚುನಾವಣೆ ನಡೆಸಲು ಮೈಸೂರು ಜಿಲ್ಲಾಧಿಕಾರಿಗಳಿಂದ ಆದೇಶವಾಗಿತ್ತು, ಆದರೆ ಮತದಾರರ ಪಟ್ಟಿ ಪರಿಷ್ಕರಣೆ ಕಾರಣ ಹೇಳಿ ಚುನಾವಣೆಯನ್ನು…
ಬೆಂಗಳೂರು: ಕರಸೇವಕರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ. ಇದು ನಾಚಿಕೆಗೇಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ವಾಗ್ದಾಳಿ ನಡೆಸಿದರು. https://ainlivenews.com/dcm-launched-the-program-of-government-came-to-the-door-let-the-service-be-cooperative/ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇವತ್ತು ಅಯೋಧ್ಯೆ (Ayodhya) ಉದ್ಘಾಟನೆ ಬಗ್ಗೆ ದೇಶದಲ್ಲಿ ಚರ್ಚೆ ಆಗ್ತಿದೆ. ನಮ್ಮ ರಾಜ್ಯದಲ್ಲಿ ಹಲವು ಸಮಸ್ಯೆ ಎದುರಿಸುತ್ತಿದ್ದೇವೆ. ರೈತರು ಆತ್ಮಹತ್ಯೆ ಮಾಡಿಕೊಳ್ತಿದ್ದಾರೆ. ಸರ್ಕಾರಕ್ಕೆ ಇದ್ಯಾವುದರ ಕಾಳಜಿ ಇಲ್ಲ. ಇಂತಹ ವಿಷಯ ಮುನ್ನಲೆಗೆ ತಂದು ವಿಷಯ ಡೈವರ್ಟ್ ಮಾಡ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀಕಾಂತ್ ಪೂಜಾರಿ ಪ್ರಕರಣ ದೊಡ್ಡದು ಮಾಡಿದ್ದಾರೆ. ಎಲ್ಲಾ ಕೇಸ್ ಖುಲಾಸೆ ಆಗಿದೆ. ಮಾಧ್ಯಮಗಳೇ ಇದನ್ನ ತೋರಿಸಿವೆ ಎಂದು ತಿಳಿಸಿದರು ಕರಸೇವಕರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡ್ತಿದೆ. ಈದ್ಗಾ ಮೈದಾನದಲ್ಲಿ ಗಲಾಟೆ ಆಗಿದ್ದಾಗ ದೇವೇಗೌಡರು ಹೇಗೆ ನಿಭಾಯಿಸಿದರು ಅಂತಾ ಗೊತ್ತಿದೆ. ಈ ಸರ್ಕಾರ ವಿರೋಧಿಗಳ ಮೇಲೆ ದಬ್ಬಾಳಿಕೆ ಮಾಡೋ ಕೆಲಸ ಮಾಡ್ತಿದೆ ಎಂದು ಟೀಕಿಸಿದರು. ಪ್ರತಾಪ್ ಸಿಂಹ ಸಹೋದರನ ಮೇಲೆ ಕೇಸ್ ಹಾಕಿ ಜೈಲಿಗೆ ಹಾಕಿದ್ದಾರೆ. ಇದರ ಸತ್ಯಾಸತ್ಯತೆ ಏನಿದೆ. ಕಾಂಗ್ರೆಸ್ ಅವರು…
ಬೆಂಗಳೂರು: ಕಾಟೇರ ಸಿನಿಮಾ ಬಿಡುಗಡೆಯಾದ ಕೇವಲ ಏಳೇ ದಿನಕ್ಕೆ ದಾಖಲೆಯ ಗಳಿಕೆ ಕಂಡು, ಇಡೀ ಸ್ಯಾಂಡಲ್‌ವುಡ್ ಸಿನಿಮಾ ಇಂಡಸ್ಟ್ರಿಯ ತಾಕತ್ತು ಪ್ರದರ್ಶಿಸಿದೆ. ಬಿಡುಗಡೆಗೂ ಮುನ್ನ ದೊಡ್ಡ ಮಟ್ಟದ ಹೈಪ್ ಕ್ರಿಯೆಟ್ ಮಾಡಿದ್ದ ಕಾಟೇರ, ರಿಲೀಸ್ ಬಳಿಕ ಅದನ್ನು ಇನ್ನಷ್ಟು ಎತ್ತರಕ್ಕೆ ಏರಿಸಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಇಡೀ ಸ್ಯಾಂಡಲ್‌ವುಡ್‌ಗೆ ಕಾಟೇರ ಸಿನಿಮಾ ವೀಕ್ಷಣೆಗೆ ಆಮಂತ್ರಣ ನೀಡಿದ್ದರು ರಾಕ್‌ಲೈನ್ ವೆಂಕಟೇಶ್. ಹಿರಿ ಕಿರಿ ಕಲಾವಿದರೂ ಆಗಮಿಸಿ ದರ್ಶನ್ ಸಿನಿಮಾ ಕಣ್ತುಂಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆಮಂತ್ರಣದ ಮೇರೆಗೆ ಬಹುತೇಕ ಎಲ್ಲ ಸೆಲೆಬ್ರಿಟಿಗಳು ಆಗಮಿಸಿ ಕಾಟೇರನನ್ನು ಕಣ್ತುಂಬಿಕೊಂಡಿದ್ದರು. ಅದೇ ರೀತಿ ಕಾಟೇರ ಸಿನಿಮಾ ವೀಕ್ಷಣೆಗೆ ಕಿಚ್ಚ ಸುದೀಪ್ ಅವರಿಗೂ ಇನ್ವಿಟೇಷನ್ ಹೋಗಿದೆ ಎಂದು ಸ್ವತಃ ನಿರ್ದೇಶಕ ತರುಣ್ ಸುಧೀರ್ ಹೇಳಿದ್ದಾರೆ. ಕಿಚ್ಚ ಸುದೀಪ್ ಸದ್ಯ ಮ್ಯಾಕ್ಸ್ ಸಿನಿಮಾದ ಕ್ಲೈಮ್ಯಾಕ್ಸ್ ಶೂಟಿಂಗ್‌ನಲ್ಲಿ ಬಿಜಿಯಾಗಿದ್ದಾರೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಆ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಸುದೀಪ್ ಭಾಗವಹಿಸಿದ್ದಾರೆ. ಅವರಿಗೂ ರಾಕ್‌ಲೈನ್ ವೆಂಕಟೇಶ್ ಅವರ ಕಡೆಯಿಂದ ಆಮಂತ್ರಣ ತಲುಪಿದೆ. ಕಾಟೇರ ಚಿತ್ರಕ್ಕೆ…
ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ನಿವಾಸದಲ್ಲಿ ತಡರಾತ್ರಿ ಸಭೆ ಮಹತ್ವದ ಸಭೆ ನಡೆದಿದ್ದು ರಾಜ್ಯ ಕಾಂಗ್ರೆಸ್‌ನಲ್ಲಿ (Congress) ಮತ್ತೆ ಮುನ್ನಲೆಗೆ ಬರುತ್ತಾ ಹೆಚ್ಚುವರಿ ಡಿಸಿಎಂ (DCM) ಕೂಗು ಎಂಬ ಪ್ರಶ್ನೆ ಬಂದಿದೆ. ಸತೀಶ್ ಜಾರಕಿಹೊಳಿ, ಜಿ.ಪರಮೇಶ್ವರ್, ಹೆಚ್.ಸಿ ಮಹದೇವಪ್ಪ, ಕೆ.ಎನ್. ರಾಜಣ್ಣ, ದಿನೇಶ್ ಗುಂಡೂರಾವ್, ಕೆ.ಹೆಚ್. ಮುನಿಯಪ್ಪ ಅವರು ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಹೊತ್ತು ಚರ್ಚೆ ನಡೆಸಿದ್ದಾರೆ. https://ainlivenews.com/caught-a-cockroach-while-dining-in-a-prestigious-hotel/ ಈ ಆರು ಸಚಿವರ ಸಭೆಯಲ್ಲಿ ಎರಡು ಪ್ರಮುಖ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಚಿವರ ಲೋಕಸಭೆ (Lok Sabha Election) ಸ್ಪರ್ಧೆಮಾಡಿದರೆ ಗೆಲುವು ಅನಿವಾರ್ಯ. ಗೆಲುವು ಅನಿವಾರ್ಯವಾಗಬೇಕಾದರೆ ಸಮುದಾಯಗಳ ವಿಶ್ವಾಸಕ್ಕೆ ಡಿಸಿಎಂ ದಾಳ ಉರುಳಿಸುವ ಬಗ್ಗೆ ಸಭೆಯಲ್ಲಿ ಕೆಲ ಚರ್ಚೆ ನಡೆದಿದೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ದಲಿತ ಡಿಸಿಎಂ ಮಾಡಿದರೆ ಉತ್ತಮ. ಲೋಕಸಭೆಗೆ ಸಚಿವರು ಸ್ಪರ್ಧಿಸುವುದು ಅನಿವಾರ್ಯವೇ? ಲೋಕಸಭೆ ಸ್ಪರ್ಧೆ ಹಾಗೂ ಹೆಚ್ಚುವರಿ ಜಾತಿವಾರು ಕನಿಷ್ಠ 4 ಡಿಸಿಎಂ ಹುದ್ದೆ ಬೇಡಿಕೆ ಬಗ್ಗೆಯೂ ನಾಯಕರು…
ಹುಬ್ಬಳ್ಳಿ: ಲೋಕಸಭೆ ಚುನಾವಣೆ ಗೆಲ್ಲಲು ಮಾಸ್ಟರ್ ಪ್ಲಾನ್ ರೂಪಿಸಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕರ ಸೇವಕರನ್ನು ಬಳಸಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿ.ಪ. ಸದಸ್ಯ ಜಗದೀಶ ಶೆಟ್ಟರ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ೩೦ ವರ್ಷಗಳ ಹಿಂದಿನ ಪ್ರಕರಣ ವಿಥ್ ಡ್ರಾ ಆಗಬೇಕಿತ್ತು. ಈ ಬಗ್ಗೆ ನಾನು ಮುಖ್ಯಮಂತ್ರಿ ಆಗಿದ್ದಾಗಲೂ ಬಹಳ ಪ್ರಯತ್ನಿಸಿದ್ದೇನೆ. ನನ್ನ ಬಳಿಕ ಆಡಳಿತ ನಡೆಸಿದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ ಹಿಂದೂ ಕಾರ್ಯಕರ್ತರ ಮೇಲಿನ ಹಿಂಪಡೆಯುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಈಗ ಪ್ರತಿಭಟನೆಯ ನಾಟಕವಾಡುತ್ತಿರುವ ಆರ್.ಅಶೋಕ ಗೃಹ ಸಚಿವರಾಗಿದ್ದಾಗ ಎಷ್ಟು ಪ್ರಕರಣವನ್ನು ಹಿಂಪಡೆಯಲು ಸೂಚಿಸಿದ್ದರು. ರಾಜಕೀಯ ಲಾಭಕ್ಕಾಗಿ ರಸ್ತೆಗೆ ಇಳಿದು ಹೋರಾಟ ಮಾಡುವ ಬಿಜೆಪಿ ನಾಯಕರು ತುಷಾರ್ ಮೆಹ್ತಾ ಅವರನನು ಕರೆಯಿಸಿ ಕೇಸ್ ಫೈಟ್ ಮಾಡಿಸಲಿ. ಲಾಂಗ್ ಪೆಂಡಿAಗ್ ಕೇಸ್ ಹಿನ್ನೆಲೆಯಲ್ಲಿ ಪೊಲೀಸರು ಶ್ರೀಕಾಂತ ಪೂಜಾರಿಯನ್ನು ಬಂಧಿಸಿದ್ದಾರೆ. ಒಬ್ಬ ವ್ಯಕ್ತಿಯ ಬಂಧನವಾದರೆ ಕೋಟ್ಯಾಂತರ ಹಿಂದೂಗಳಿಗೆ ಅನ್ಯಾಯ…
ಹುಬ್ಬಳ್ಳಿ,: ಮೂವತ್ತು ವರ್ಷಗಳ ಹಿಂದಿನ ಹುಬ್ಬಳ್ಳಿ ಗಲಭೆ ಆರೋಪಿ ಶ್ರೀಕಾಂತ್ ಪೂಜಾರಿ ಬಗ್ಗೆ ಸರ್ಕಾರ ದಿಕ್ಕು ತಪ್ಪಿಸುವ ಹೇಳಿಕೆ ನೀಡಿದೆ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಗಂಭೀರ ಆರೋಪ ಮಾಡಿದ್ದಾರೆ. ಶ್ರೀಕಾಂತ್ ಪೂಜಾರಿ ಮೇಲಿನ 16 ಕೇಸ್ಗಳಲ್ಲಿ, 15 ರಲ್ಲಿ ಅವರು ಖುಲಾಸೆಯಾಗಿದ್ದಾರೆ. ಖುಲಾಸೆಯಾಗಿರುವ ವ್ಯಕ್ತಿಯನ್ನು ಅಪರಾಧಿ ಎಂದು ಹೇಳುವುದು ತಪ್ಪು ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಖುಲಾಸೆಯಾಗಿ ಬಿಡುಗಡೆ ಆಗಿರುವ ವ್ಯಕ್ತಿಯನ್ನು ಅಪರಾಧಿ ಎನ್ನುವುದು ತಪ್ಪು. ಸರ್ಕಾರ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿರುವುದಕ್ಕೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಾಗಿಲ್ವಾ? ಅವರನ್ನು ಅಪರಾಧಿ ಎನ್ನಲು ಆಗುತ್ತದೆಯೇ ಎಂದು ಅವರು ಪ್ರಶ್ನಿಸಿದರು. ಮುಂದಿನ ಹೋರಾಟದ ಬಗ್ಗೆ ಇಂದು ಬೆಂಗಳೂರಿನಲ್ಲಿ ಸಭೆ ನಡೆಯುತ್ತಿದೆ. ಅದರಂತೆ ಮುಂದಿನ ಹೋರಾಟ ನಡೆಯಲಿದೆ ಎಂದು ಅವರು ತಿಳಿಸಿದರು. ಧಾರವಾಡದಲ್ಲಿ ಪ್ರಲ್ಹಾದ್ ಜೋಶಿ ಬದಲು ಶ್ರೀಕಾಂತ್ ಪೂಜಾರಿಗೆ ಬಿಜೆಪಿ ಟಿಕೆಟ್ ನೀಡಲಿ ಎಂಬ ಕಾಂಗ್ರೆಸ್…
ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಹಾಗೂ ಕರವೇ ಅಧ್ಯಕ್ಚ ನಾರಾಯಣ್ ಗೌಡ ಬಿಡುಗಡೆ ಒತ್ತಾಯಿಸಿ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರಿಂದ ಪ್ರತಿಭಟನೆ ನಡೆಸಲಾಯಿತು. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ 124 ನೇ ಪ್ರತಿಭಟನೆ ನಡೆಸಿದ ಹೋರಾಟಗಾರರು, ಪ್ರತಿನಿತ್ಯ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಸತತವಾಗಿ ಕನ್ನಡ ಪರ ಸಂಘಟನೆಗಳ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ವಿರೋಧಿಸಿ ಹಾಗೂ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರನ್ನು ಬಂಧಿಸಿರೋದನ್ನು ವಿರೋಧಿಸಿ ಕೂಡಲೆ ಬಿಡುಗಡೆ ಮಾಡುವಂತೆ ಚಾಮರಾಜನಗರ ಜಿಲ್ಲಾ ಕೇಂದ್ರದ ಭುವನೇಶ್ವರಿ ವೃತ್ತದ ಬಳಿ ಸಮಾವೇಶಗೊಂಡು ಒತ್ತಾಯ ಮಾಡಿದ್ದಾರೆ.
ಬೆಂಗಳೂರು: ಶಾಲಾ ವಾಹನಗಳ ಚಾಲಕರಿಗೆ ಪೊಲೀಸ್ ವೆರಿಫಿಕೇಷನ್ ಕಡ್ಡಾಯಗೊಳಿಸಲಾಗಿದೆ. ಕಡ್ಡಾಯವಾಗಿ ವೆರಿಫಿಕೇಷನ್ ಮಾಡಿಸುವಂತೆ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. https://ainlivenews.com/cm-siddaramaiah-met-cricket-legend-sachin-tendulkar-by-chance/ ಶಾಲಾ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ರಾಜ್ಯ ಶಾಲಾ ಶಿಕ್ಷಣ ಇಲಾಖೆಯು ಈ ನಿಯಮ ಜಾರಿಗೆ ತಂದಿದೆ. ಇದಲ್ಲದೇ ವಾಹನ ಚಾಲಕರು ಮಕ್ಕಳೊಂದಿಗೆ ಅಸಭ್ಯ ವರ್ತನೆ ತೋರಿಸುತ್ತಿರುವ ಬಗ್ಗೆ ಪೋಷಕರಿಂದ ಈಗಾಗಲೇ ಇಲಾಖೆಗೆ ಸಾಲು ಸಾಲು ದೂರುಗಳು ಬಂದಿವೆ. ಈ ಹಿನ್ನೆಲೆ ಶಿಕ್ಷಣ ಇಲಾಖೆಯಿಂದ ಹೊಸ ನಿಯಮವನ್ನ ಜಾರಿಗೆ ತರಲಾಗಿದೆ. ನೇಮಕಕ್ಕೂ ಮೊದಲು ಎಲ್ಲಾ ಚಾಲಕರ ಮತ್ತು ಸಹಾಯಕರ ಹಿನ್ನೆಲೆಯನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ. ಜೊತೆಗೆ ಪ್ರತಿ ಖಾಸಗಿ ಶಾಲಾ ವಾಹನಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಲು ಆದೇಶಿದ್ದು, ನಿಗದಿತ ಸಂಖ್ಯೆಗಿಂತ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗದಂತೆ ಚಾಲಕರಿಗೆ ಸೂಚನೆ ನೀಡಲಾಗಿದೆ.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಕಂಟನಕುಂಟೆ ಗ್ರಾಮ ಪಂಚಾಯಿತಿ ವತಿಯಿಂದ 2023-24ನೇ ಸಾಲಿನ ಮೊದಲನೇ ಹಂತದ ಗ್ರಾಮಸಭೆಯನ್ನು ಕಂಟನಕುಂಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಸಲಾಯಿತು. ಶಾಲಾ ಆವರಣದಲ್ಲಿ ಗ್ರಾಮಸಭೆ ಆಯೋಜನೆ ಮಾಡಿ ದ್ವನಿವರ್ಧಕ ಬಳಸಿದ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಪಾಠ ಪ್ರವಚನಕ್ಕೆ ತೊಂದರೆ ಉಂಟಾಗಿತ್ತು. ಶಾಲಾ ಶಿಕ್ಷಕರ ಬಳಿ ಶಾಲಾ ಆವರಣದಲ್ಲಿ ಗ್ರಾಮ ಸಭೆ ನಡೆಸಲು ಅವಕಾಶ ಕೊಡಲು ಕಾರಣವೇನು ಎಂಬ ಮಾದ್ಯಮಗಳ ಪ್ರಶ್ನೆಗೆ ಬೇಜವಾಬ್ದಾರಿಯಿಂದ ಉತ್ತರಿಸಿದ ಶಿಕ್ಷಕ ಧನಂಜಯ ಅವರು, ಮಾಡಲಿ ಬಿಡಿ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಿಂತಲೂ ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡವರಲ್ಲ, ಏನಾದರೂ ಮಾಡಿಕೊಳ್ಳಲಿ ಎಂದು ಉದ್ಧಟತನದಿಂದ ಉತ್ತರಿಸಿದರು ಎನ್ನಲಾಗಿದೆ. ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ರಂಗಪ್ಪ ಅವರು ಪ್ರತಿಕ್ರಿಯಿಸಿ, ಕೂಸಿನ ಮನೆ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಶಾಲಾ ಆವರಣದಲ್ಲಿ ಗ್ರಾಮಸಭೆ ನಡೆಸಲು ಸಂಬಂಧಪಟ್ಟವರು ಯಾವುದೇ ರೀತಿಯ ಅನುಮತಿಯನ್ನೂ ಪಡೆದುಕೊಂಡಿಲ್ಲ. ಈ ಕುರಿತು ಶಾಲಾ ಮುಖ್ಯೋಪಾಧ್ಯಯರಿಂದ ವರದಿ…